Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕರ್ನಾಟಕ ಸಹಕಾರ ಸಂಘಗಳ ವಿಧೇಯಕವನ್ನು ಇಂದು ವಿಧಾನಪರಿಷತ್ತಿನಲ್ಲಿ ರಾಜ್ಯ ಸರ್ಕಾರದಿಂದ ಮಂಡಿಸಲಾಗಿತ್ತು. ಆದರೇ ರಾಜ್ಯ ಸರ್ಕಾರಕ್ಕೆ ಹಿನ್ನಡೆ ಎನ್ನುವಂತೆ ಸಭಾಪತಿಗಳು ವಿಧೇಯಕವನ್ನು ಸೆಲೆಕ್ಟ್ ಕಮಿಟಿಗೆ ಹಾಕಿದ್ದಾರೆ. ಈ ಮೂಲಕ ವಿಧಾನ ಪರಿಷತ್ತಿನಲ್ಲಿ ಸರ್ಕಾರಕ್ಕೆ ಭಾರೀ ಹಿನ್ನಲೆಯುಂಟಾದಂತೆ ಆಗಿದೆ. ವಿಧಾನಸಭೆಯಲ್ಲಿ ಮಂಡನೆಯಾಗಿ, ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕವನ್ನು ರಾಜ್ಯ ಸರ್ಕಾರ ಮಂಡಿಸಿ ಅಂಗೀಕಾರವನ್ನು ಪಡೆದಿತ್ತು. ಆ ಬಳಿಕ ಇಂದು ವಿಧಾನಪರಿಷತ್ತಿನಲ್ಲಿ ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕವನ್ನು ಮಂಡಿಸಲಾಗಿತ್ತು. ವಿಧಾನಸೌಧದದಲ್ಲಿ ಪಾಕಿಸ್ತಾನ್ ಜಿಂದಾಬಾಂದ್ ಘೋಷಣೆಯ ವಿಚಾರವಾಗಿ ಸನದಲ್ಲಿ ಆಡಳಿತ, ವಿಪಕ್ಷಗಳ ನಡುವೆ ವಾಕ್ ಸಮರವೇ ನಡೆಯಿತು. ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕರು ಹೀಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡು, ಸದನದ ಭಾವಿಗೆ ಇಳಿದು ಪ್ರತಿಭಟನೆಯನ್ನು ನಡೆಸಲಾಯಿತು. ಈ ಪ್ರತಿಭಟನೆಯ ನಡುವೆಯೂ ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕವನ್ನು ಮಂಡಿಸಲಾಯಿತ್ತು. ಆದ್ರೇ ಈ ವಿಧೇಯಕವನ್ನು ಸಭಾಪತಿ ಬಸವರಾಜ ಹೊರಟ್ಟಿಯವರು ಮತಕ್ಕೆ ಹಾಕದೇ ಸೆಲೆಕ್ಟ್ ಕಮಿಟಿಗೆ ಹಾಕಿದ ಕಾರಣ, ರಾಜ್ಯ ಸರ್ಕಾರಕ್ಕೆ ಹಿನ್ನಡೆ ಆದಂತೆ…
ಬೆಂಗಳೂರು: ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಗೊಳಿಸಿದಂತ ನಿಯಮವನ್ನು ಪಾಲನೆ ಮಾಡುವುದು ಕಡ್ಡಾಯ. ನಾಳೆಯೊಳಗೆ ಬೆಂಗಳೂರಲ್ಲಿ ಅಂಗಡಿ, ಮುಂಗಟ್ಟುಗಳು ಕನ್ನಡ ನಾಮಫಲಕ ಅಳವಡಿಸದೇ ಇದ್ದರೇ ಬಂದ್ ಮಾಡೋದಾಗಿ ಬಿಬಿಎಂಪಿ ಖಡಕ್ ಎಚ್ಚರಿಕೆ ನೀಡಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ಮಳಿಗೆಯಲ್ಲಿ ಕನ್ನಡ ನಾಮಫಲಕ ಹಾಕೋದಕ್ಕೆ ಮತ್ತೊಂದು ದಿನದ ಅವಕಾಶ ನೀಡಲಾಗಿದೆ. ನಾಳೆಯವರೆಗೆ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಅಳವಡಿಕೆಗೆ ಡೆಡ್ ಲೈನ್ ನೀಡಲಾಗಿದೆ ಎಂದರು. ನಾಳೆ ಸಂಜೆಯ ವೇಳೆಗೆ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಇರುವಂತ ಬೋರ್ಡ್ ಹಾಕದೇ ಇದ್ದರೇ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಕನ್ನಡ ನಾಮಫಲಕ ಹಾಕದಂತ ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಲಾಗುತ್ತದೆ ಎಂಬುದಾಗಿ ಎಚ್ಚರಿಕೆ ನೀಡಿದರು. ಈಗಾಗಲೇ ಬೆಂಗಳೂರಲ್ಲಿ ಶೇ.90ರಷ್ಟು ಕನ್ನಡ ನಾಮಫಲಕಗಳನ್ನು ಅಂಗಡಿ, ಮುಂಗಟ್ಟುಗಳ ಮಾಲೀಕರು ಅಳವಡಿಸಿದ್ದಾರೆ. ಇನ್ನೂ ಉಳಿದಿರೋದು ಕೆಲವೇ ಕೆಲವಷ್ಟು ಮಾತ್ರ. ಇವುಗಳಿಗೆ ನಾಳೆ ಸಂಜೆಯವರೆಗೆ ಅವಕಾಶ ನೀಡುತ್ತಿರೋದಾಗಿ ತಿಳಿಸಿದರು. ಕೆಲ ಅಂತರರಾಷ್ಟ್ರೀಯ ಕಂಪನಿಗಳು, ಎಸ್ ಬಿಐ, ಕೆನರಾ ಬ್ಯಾಂಕ್…
ಬೆಂಗಳೂರು: ಉಪ ವಲಯ ಅರಣ್ಯಾಧಿಕಾರಿ (ಡಿ.ಆರ್.ಎಫ್.ಓ) ಹುದ್ದೆಗಳನ್ನು ಸಂಪೂರ್ಣವಾಗಿ ಬಡ್ತಿಯ ಮೂಲಕವೇ ತುಂಬಬೇಕು ಎಂಬ ಆಡಳಿತ ಸುಧಾರಣಾ ಇಲಾಖೆಯ ಟಿ.ಎಂ. ವಿಜಯಭಾಸ್ಕರ್ ಸಮಿತಿ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಅರಣ್ಯ ಇಲಾಖೆಯ ನೇಮಕಾತಿಗೆ ಸಂಬಂಧಿಸಿದಂತೆ ವಿವಿಧ ಬೇಡಿಕೆ ಮುಂದಿಟ್ಟು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿರುವ ಅರಣ್ಯಶಾಸ್ತ್ರ ಪದವೀಧರರು ಮತ್ತು ವಿದ್ಯಾರ್ಥಿಗಳನ್ನು ಇಂದು ಭೇಟಿ ಮಾಡಿ, ಅವರ ಅಹವಾಲು ಆಲಿಸಿ ಮಾತನಾಡಿದ ಸಚಿವರು, ಪದವೀಧರ ಯುವಕರಿಗೆ ಅವಕಾಶ ಇಲ್ಲದಂತೆ ಶೇ.100ರಷ್ಟು ಹುದ್ದೆಗಳನ್ನು ಬಡ್ತಿಯ ಮೂಲಕ ತುಂಬುವುದು ಸರಿಯಲ್ಲ, ಅದೇ ರೀತಿ ಜೀವಶಾಸ್ತ್ರ, ಪ್ರಾಣಿಶಾಸ್ತ್ರ ಅಧ್ಯಯನ ಮಾಡಿದ ಇತರ ವಿಜ್ಞಾನ ಪದವೀಧರರು ಉದ್ಯೋಗ ವಂಚಿತರಾಗುವಂತೆ ಮಾಡುವುದೂ ಸಾಧುವಲ್ಲ. ಈ ಹಿನ್ನೆಲೆಯಲ್ಲಿ ಒಂದು ವಾರದೊಳಗೆ ತಜ್ಞರ ಸಮಿತಿ ರಚಿಸಿ, ವರದಿ ಬಂದ ಬಳಿಕ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಈಶ್ವರ ಖಂಡ್ರೆ ಭರವಸೆ ನೀಡಿದರು. ಪ್ರಕೃತಿ ಪರಿಸರ ಉಳಿಸುವುದು ಅಗತ್ಯ…
ದಾವಣಗೆರೆ : ಹರಿಹರದ ಹರಿಹರೇಶ್ವರಸ್ವಾಮಿ ದೇವಸ್ಥಾನ ಆವರಣದಲ್ಲಿನ ಶ್ರೀ ಲಕ್ಷ್ಮಿದೇವಿ ದೇವಸ್ಥಾನದಲ್ಲಿ ಖಾಲಿ ಇರುವ ಅರ್ಚಕರ ಹುದ್ದೆಗೆ ಶೈವಾಗಮ ಪ್ರಸಿದ್ದ ಪರೀಕ್ಷೆಯಲ್ಲಿ ಹಾಗೂ ಪ್ರವರ ಪರೀಕ್ಷೆಯಲ್ಲಿ ತೇರ್ಗಡೆಯಾಗಿ 18 ರಿಂದ 40 ವರ್ಷ ವಯೋಮಿತಿಯುಳ್ಳವರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ತಾಲ್ಲೂಕು ಕಚೇರಿಯಿಂದ ಪಡೆದು ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ 08192-272959 ದೂರವಾಣಿಗೆ ಸಂಪರ್ಕಿಸಲು ತಹಶೀಲ್ದಾರ್ ತಿಳಿಸಿದ್ದಾರೆ. https://kannadanewsnow.com/kannada/use-kannada-compulsorily-on-signboards-otherwise-licence-will-be-cancelled/ https://kannadanewsnow.com/kannada/dysp-attacked-during-protest-by-bjp-workers-in-tumkur-over-alleged-pro-pakistan-slogans/
ಬಳ್ಳಾರಿ : ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಉದ್ದಿಮೆದಾರರು ತಮ್ಮ ಉದ್ದಿಮೆಯ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡವನ್ನು ಬಳಸಬೇಕು. ತಪ್ಪಿದಲ್ಲಿ ಉದ್ದಿಮೆಗಳ ಪರವಾನಿಗೆಗಳನ್ನು ರದ್ದುಪಡಿಸಿ ಉದ್ದಿಮೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಎಸ್.ಖಲೀಲ್ಸಾಬ್ ಅವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಕನ್ನಡವು ಆಡಳಿತ ಭಾಷೆಯಾಗಿದ್ದು, ಎಲ್ಲಾ ಉದ್ದಿಮೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸುವಂತೆ ಸರ್ಕಾರದಿಂದ ಕಾಯ್ದೆ ಜಾರಿಯಾಗಿದೆ. ಸರ್ಕಾರದ ಆದೇಶದನ್ವಯ ಯಾವುದೇ ಉದ್ದಿಮೆಯ ನಾಮಫಲಕವು ಪ್ರಧಾನವಾಗಿ ಶೇ.60 ರಷ್ಟು ಸ್ಥಳ ಮೀಸಲಿರಿಸಿ ಕನ್ನಡದಲ್ಲಿರಬೇಕು. ನಾಮಫಲಕದಲ್ಲಿ ಕನ್ನಡ ಭಾಷೆ ಮೇಲ್ಭಾಗದಲ್ಲಿ ಪ್ರದರ್ಶಿತವಾಗುವಂತೆ ಹಾಗೂ ಅನ್ಯಭಾಷೆಯ ನಾಮಫಲಕಕ್ಕಿಂತ ಕನ್ನಡ ನಾಮಫಲಕ ಮೇಲ್ಭಾಗದಲ್ಲಿರುವಂತೆ ಮತ್ತು ದೊಡ್ಡದಾಗಿರುವಂತೆ ಅಳವಡಿಸಬೇಕು. ಮಾರ್ಚ್ 03 ರೊಳಗಾಗಿ ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಉದ್ದಿಮೆ, ಅಂಗಡಿಗಳ ನಾಮಫಲಕಗಳು ಪ್ರಧಾನವಾಗಿ ಕನ್ನಡದಲ್ಲಿರಬೇಕು. ತಪ್ಪಿದಲ್ಲಿ ಅಂತಹ ಯಾವುದೇ ನಾಮಫಲಕಗಳು ಕಂಡುಬಂದಲ್ಲಿ ನಿಯಮಾನುಸಾರ ದಂಡವಿಧಿಸಿ ತೆರವುಗೊಳಿಸಲು ಕ್ರಮ ವಹಿಸಲಾಗುವುದು ಹಾಗೂ ಉದ್ದಿಮೆಗಳ ಉದ್ದಿಮೆ ಪರವಾನಿಗೆಗಳನ್ನು ರದ್ದುಪಡಿಸಲಾಗುವುದು ಎಂದು ಅವರು ಪ್ರಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/bjp-will-fight-till-traitors-are-arrested-opposition-leader-r-ashoka/…
ಬೆಂಗಳೂರು: ಪಾಕಿಸ್ತಾನಕ್ಕೆ ಜೈಕಾರ ಹಾಕಿದ ದೇಶದ್ರೋಹಿಗಳನ್ನು ಬಂಧಿಸುವವರೆಗೂ ಬಿಜೆಪಿಯ ಹೋರಾಟ ಮುಂದುವರಿಯಲಿದೆ. ಇದು ಕಾಂಗ್ರೆಸ್ ಗೆ ನಾಚಿಕೆಗೇಡಿನ ವಿಚಾರವಾಗಿದ್ದು, ಇದರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ಖಂಡನೀಯ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದ ಒಳಗೆ ದೇಶದ್ರೋಹದ ಚಟುವಟಿಕೆ ನಡೆದಿದೆ. ಪಾಕಿಸ್ತಾನ ಜಿಂದಾಬಾದ್ ಎಂದು ಜೈಕಾರ ಹಾಕಲಾಗಿದೆ. ಗೃಹ ಸಚಿವರಿಗೆ ಬೇರೆ ದೇಶಗಳಿಂದಲೂ ಜನರು ಕರೆ ಮಾಡಿ ಈ ಬಗ್ಗೆ ವಿಚಾರಿಸುತ್ತಿದ್ದಾರೆ. ಇಂದು ಅಂತಾರಾಷ್ಟ್ರೀಯ ಸುದ್ದಿಯಾದರೂ ಕಾಂಗ್ರೆಸ್ ಮಾತ್ರ ಇದನ್ನು ನಂಬುತ್ತಿಲ್ಲ. ಇದು ಮಾಧ್ಯಮಗಳ ಸೃಷ್ಟಿ ಎಂದು ಹೇಳಲಾಗುತ್ತಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರಂತೂ ಮಾಧ್ಯಮಗಳಿಗೆ ಬೆದರಿಕೆ ಹಾಕಿದ್ದಾರೆ ಎಂದರು. ಈ ಘಟನೆ ನಡೆದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತು ಸಚಿವ ಸಂಪುಟ ಸಭೆ ನಡೆಸಿ ಖಂಡಿಸಿ, ಪಾತಕಿಗಳನ್ನು ಹೆಡೆಮುರಿ ಕಟ್ಟಿ ತರುತ್ತೇವೆ ಎಂದು ಪ್ರಕಟಿಸಬೇಕಿತ್ತು. ಆದರೆ ಸಂಪುಟ ಸಭೆ ನಡೆಸಿಲ್ಲ, ಒಬ್ಬ ಸಚಿವರು ಕೂಡ ಘಟನಾ ಸ್ಥಳಕ್ಕೆ ಬಂದಿಲ್ಲ. ರಾಜ್ಯಸಭಾ ಸದಸ್ಯ ನಾಸಿರ್…
ಬೆಂಗಳೂರು: ರಾಜ್ಯ ಸರ್ಕಾರದಿಂದ ಪಿಎಫ್ ಖಾತೆದಾರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿನ ಬಡ್ಡಿದರಗಳನ್ನು ಶೇ.7.1ಕ್ಕೆ ನಿಗದಿ ಪಡಿಸಲಾಗಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಲಾಗಿದ್ದು, ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ವಂತಿಕೆದಾರರ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿ ಜಮೆಯಾಗಿರುವ ಶಿಲ್ಕಿನ ಮೇಲಿನ ಬಡ್ಡಿ ದರವನ್ನು ದಿನಾಂಕ 01-01-2024ರಿಂದ ದಿನಾಂಕ 31-03-2024ರವರೆಗಿನ ಅವಧಿಗೆ ವಾರ್ಷಿಕ ಶೇ.7.1ಕ್ಕೆ ನಿಗದಿಪಡಿಸಲಾಗಿದೆ ಎಂದಿದ್ದಾರೆ. https://kannadanewsnow.com/kannada/dysp-attacked-during-protest-by-bjp-workers-in-tumkur-over-alleged-pro-pakistan-slogans/ https://kannadanewsnow.com/kannada/national-indian-military-college-dehradun-invites-applications-for-entrance-test-for-class-8-admissions/
ಬೆಂಗಳೂರು: ಮಾಜಿ ಐಎಎಸ್ ಅಧಿಕಾರಿ ಹಾಗೂ ನಟ ಕೆ.ಶಿವರಾಮ್ ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿದು ಬಂದಿದೆ. ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂಬುದಾಗಿ ಹೇಳಲಾಗುತ್ತಿದೆ. ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಂತ ಮಾಜಿ ಐಎಎಸ್ ಅಧಿಕಾರಿ ಹಾಗೂ ನಟ ಕೆ.ಶಿವರಾಮ್ ಅವರ ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿದು ಬಂದಿದೆ. ನಟ ಕೆ. ಶಿವರಾಮ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಐಸಿಯುನಲ್ಲಿ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎನ್ನಲಾಗುತ್ತಿದೆ. ಆಸ್ಪತ್ರೆಯ ವೈದ್ಯರ ಮಾಹಿತಿಯಂತೆ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂಬುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. https://kannadanewsnow.com/kannada/no-one-shouted-pakistan-zindabad-in-vidhana-soudha-dk-shivakumar/ https://kannadanewsnow.com/kannada/dysp-attacked-during-protest-by-bjp-workers-in-tumkur-over-alleged-pro-pakistan-slogans/
ಬೆಂಗಳೂರು : ವಿಧಾನಸೌಧದಲ್ಲಿ ಯಾರೂ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿಲ್ಲ. ಒಂದು ವೇಳೆ ಕೂಗಿದ್ದರೆ ಪೊಲೀಸರು ಅವರನ್ನು ಒದ್ದು ಒಳಗೆ ಹಾಕುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ನಿನ್ನೆ ವಿಧಾನಸೌಧದಲ್ಲಿ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ ಅವರು ಪ್ರತಿಕ್ರಿಯಿಸಿದ ಅವರು, ಪೊಲೀಸರು ಕಾನೂನು ರೀತಿಯ ಕ್ರಮ ಕೈಗೊಳ್ಳಲಿದ್ದಾರೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಿಜೆಪಿಯವರು ಇದನ್ನು ತಿರುಚುತ್ತಿದ್ದಾರೆ. ಚುನಾವಣೆಯಲ್ಲಿ ಸೋಲಿನ ಹತಾಶೆಯಿಂದ ಈ ರೀತಿ ಮಾಡುತ್ತಿದ್ದಾರೆ ಎಂದರು. ಈ ವಿಚಾರವಾಗಿ ತನಿಖೆ ಮಾಡುವಂತೆ ನಾವು ಸೂಚಿಸಿದ್ದೇವೆ. ತನಿಖೆ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಒಂದು ವೇಳೆ ಸುಳ್ಳು ಹಬ್ಬಿಸಿದ್ದರೆ, ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ಹಿಮಾಚಲ ಪ್ರದೇಶಕ್ಕೆ ವೀಕ್ಷರಾಗಿ ತೆರಳುತ್ತಿರುವ ಬಗ್ಗೆ ಕೇಳಿದಾಗ, ನಾನು ಅಲ್ಲಿಗೆ ಹೋಗುವ ಬಗ್ಗೆ ಕಾಂಗ್ರೆಸ್ ಪಕ್ಷ ನನಗೆ ಸೂಚನೆ ನೀಡಿದ್ದು, ಅದರಂತೆ ತೆರಳುತ್ತಿದ್ದೇನೆ. ಎರಡು ಮೂರು ರಾಜ್ಯಗಳಲ್ಲಿ…
ಬೆಂಗಳೂರು: ಬೆಲೆ ಏರಿಕೆಯಿಂದ ತತ್ತರಿಸಿರುವಂತ ರಾಜ್ಯದ ಜನತೆಗೆ ಈಗ ಕರೆಂಟ್ ಶಾಕ್ ಕೊಡೋದಕ್ಕೆ ಕೆಇಆರ್ ಸಿ ಮುಂದಾಗಿದೆ. ಇಂದು ಸಂಜೆಯಿಂದಲೇ ವಿದ್ಯುತ್ ದರ ಪರಿಷ್ಕರಣೆಯನ್ನು ಮಾಡಿ ಅಧಿಕೃತ ಆದೇಶವನ್ನು ಹೊರಡಿಸೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಬಾರಿ ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಯಂತ್ರಣ ಆಯೋಗದಿಂದ ಲೋಕಸಭಾ ಚುನಾವಣೆ (LokSabha Elections)ಗೂ ಮುನ್ನವೇ ವಿದ್ಯುತ್ ದರ ಪರಿಷ್ಕರಣೆ ಮಾಡಲು ಮುಂದಾಗಿದೆ. ಇಂದು ಸಂಜೆಯೇ ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಯಂತ್ರಣ ಆಯೋಗ(KERC) ವಿದ್ಯುತ್ ದರ ಪರಿಷ್ಕರಣೆ ಮಾಡಿ, ಅಧಿಕೃತವಾಗಿ ಸ್ಲ್ಯಾಬ್ ಕೂಡ ತನ್ನ ಜಾಲತಾಣದಲ್ಲಿ ಪ್ರಕಟಿಸಲಾಗುತ್ತದೆ ಎಂಬುದಾಗಿ ತಿಳಿದು ಬಂದಿದೆ. ಅಂದಹಾಗೇ ಪ್ರತಿ ವರ್ಷ ಏಪ್ರಿಲ್ ತಿಂಗಳಿನಲ್ಲಿ ವಿದ್ಯುತ್ ದರವನ್ನು ಪರಿಷ್ಕರಣೆ ಮಾಡಲಾಗುತ್ತಿತ್ತು. ಆದರೇ ಈಗ ಲೋಕಸಭಾ ಚುನಾವಣೆಯ ನೀತಿಸಂಹಿತೆ ಜಾರಿಗೊಂಡರೇ ಪರಿಷ್ಕರಣೆ ಮಾಡೋದಕ್ಕೆ ಸಾಧ್ಯವಾಗೋದಿಲ್ಲ ಎನ್ನುವ ಕಾರಣಕ್ಕೆ, ಇಂದು ಸಂಜೆಯೇ ಪರಿಷ್ಕೃತ ದರಪಟ್ಟಿಯನ್ನು ಕೆಇಆರ್ ಸಿ ಪ್ರಕಟಿಸಲಿದೆ. ಕಳೆದ ವರ್ಷ ಆಗಸ್ಟ್ 5ರಂದು ಗೃಹಜ್ಯೋತಿ ಯೋಜನೆಗೆ ಕಾಂಗ್ರೆಸ್ ಸರ್ಕಾರ ಚಾಲನೆ ನೀಡಲಾಗಿತ್ತು. ಈ…