Author: kannadanewsnow09

ಬೆಂಗಳೂರು: ಅಕ್ರಮ ನೋಂದಣಿ ಹಾಗೂ ತೆರಿಗೆ ವಂಚನೆಯನ್ನು ತಡೆಯುವ ಸಲುವಾಗಿ ನೋಂದಣಿ ಸಮಯದಲ್ಲಿ ಡಿಜಿಟಲ್ ಇಂಟಗ್ರೇಷನ್ ಖಾತಾ ನಿಯಮವನ್ನು ಜಾರಿಗೊಳಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಈ ಬಗೆಯೂ ಮಾಹಿತಿ ನೀಡಿದ ಅವರು, “ನಿಜವಾದ ಸ್ವತ್ತಿಗೆ ಖಾತೆ ಇಲ್ಲದಿದ್ದರೂ ಕೆಲವರು ಕೇವಲ ಪೇಪರ್ನಲ್ಲಿ ಖಾತೆ ಪ್ರಿಂಟ್ ಮಾಡಿಸಿ ಅದರ ಮೂಲಕ ನೋಂದಣಿ ಮಾಡಿಸಿಕೊಳ್ಳುತ್ತಿದ್ದಾರೆ. ಗ್ರಾಮ ಪಂಚಾಯತ್-ಬಿಬಿಎಂಪಿ ನಗರಸಭೆ ಖಾತೆ ಮಾಡಿಸದಿದ್ದರೂ ಇಂತಹ ಬೋಗಸ್ ಖಾತೆ ಮೂಲಕ ಅಕ್ರಮ ನೋಂದಣಿ ಮಾಡಲಾಗುತ್ತಿದೆ. ಇದರಿಂದ ಹಲವು ಅಮಾಯಕರು ಸಮಸ್ಯೆಗೆ ಸಿಲುಕುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು. ಅಲ್ಲದೆ, ”ನೋಂದಣಿ ಮಾಡಿಸುವಾಗ ಇತರೆ ಎಂಬ ಒಂದು ಕ್ಯಾಟಗರಿ ಇದೆ. ಆಶ್ರಯ ನಿವೇಶನಗಳನ್ನು ನೋಂದಾಯಿಸುವಾಗ ಮಾತ್ರ ಈ ಕ್ಯಾಟಗರಿಯನ್ನು ಬಳಸಲಾಗುತ್ತದೆ. ಇದರಲ್ಲಿ ಮಾರುಕಟ್ಟೆ ಬೆಲೆ (ಗೈಡನ್ಸ್ ವ್ಯಾಲ್ಯೂ) ಕಡಿಮೆ ಇರತ್ತೆ. ನೋಂದಣಿ ಶುಲ್ಕವೂ ಕಡಿಮೆ ಇರುತ್ತದೆ. ಹೀಗಾಗಿ ಹಲವರು ತಮ್ಮದು ಖಾಸಗಿ ಸ್ವತ್ತಾಗಿದ್ರೂ ಇತರೆ ಎಂದು ತೋರಿಸಿ ದೊಡ್ಡ ಪ್ರಮಾಣದಲ್ಲಿ ಕಟ್ಟಬೇಕಿರುವ ವೆಚ್ಚವನ್ನು ಮೋಸ…

Read More

ಬೆಂಗಳೂರು: ಪಕ್ಷ ವಿರೋಧಿ ನಡೆಯನ್ನು ತೋರಿದಂತ ಕಾಂಗ್ರೆಸ್ ಮುಖಂಡೆ ಕವಿತಾ ರೆಡ್ಡಿ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟಿಸಿ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಆದೇಶಿಸಿದೆ. ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಶಿಸ್ತು ಪಾಲನಾ ಸಮಿತಿಯ ಅಧ್ಯಕ್ಷರಾದಂತ ಕೆ ರೆಹಮಾನ್ ಖಾನ್ ಅವರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಕವಿತಾ ರೆಡ್ಡಿ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಕ್ಕಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ ಎಂದಿದ್ದಾರೆ. https://kannadanewsnow.com/kannada/bengaluru-boy-dies-after-bbmp-gate-collapses-ae-srinivasa-raju-suspended/ https://kannadanewsnow.com/kannada/minister-krishna-byre-gowda-challenges-union-minister-hd-kumaraswamy/

Read More

ಬೆಂಗಳೂರು: ನಗರದ ಮಲ್ಲೇಶ್ವರಂನಲ್ಲಿರುವಂತ ಬಿಬಿಎಂಪಿ ಗೇಟ್ ಬಿದ್ದು ಬಾಲಕ ಸಾವನ್ನಪ್ಪಿದ್ದನು. ಈ ಘಟನೆಯ ಸಂಬಂಧ ಕರ್ತವ್ಯ ನಿರ್ಲಕ್ಷ್ಯದ ಹಿನ್ನಲೆಯಲ್ಲಿ ಬಿಬಿಎಂಪಿಯ ಸಹಾಯಕ ಅಭಿಯಂತರ ಟಿ.ಶ್ರೀನಿವಾಸ ರಾಜು ಎಂಬುವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಈ ಸಂಬಂಧ ಬಿಬಿಎಂಪಿ ಆಡಳಿತ ವಿಭಾಗದ ಉಪ ಆಯುಕ್ತರಿಂದ ಆದೇಶ ಹೊರಡಿಸಿದ್ದು, ಕರ್ತು ನಿರ್ವತ್ ಆರೋಪಡಿದ ಎಇ ಟಿ.ಶ್ರೀನಿವಾಸ ರಾಜು ಎಂಬುವರನ್ನು ಕರ್ತವ್ಯ ನಿರ್ಲಕ್ಷ್ಯದ ಆರೋಪದಡಿ ಅಮಾನತುಗೊಳಿಸಲಾಗಿದೆ. ಗೇಟ್ ನ ಕೀಲುಗಳನ್ನು ಸಾಮರ್ಥ್ಯಕ್ಕೆ ತಕ್ಕಂತೆ ಅಳವಡಿಸದೇ ನಿರ್ಲಕ್ಷ್ಯ ವಹಿಸಿರುವುದಾಗಿ ತಿಳಿಸಲಾಗಿದೆ. ಸರಿಯಾದ ಸಮಯಕ್ಕೆ ಬಿಬಿಎಂಪಿಯ ಮಲ್ಲೇಶ್ವರಂನ ಆಟದ ಮೈದಾನದ ಗೇಟ್ ನಿರ್ವಹಣೆ ಮಾಡದ ಕಾರಣ, ಬಾಲಕ ಸಾವನ್ನಪ್ಪುವಂತೆ ಆಗಿದೆ. ಈ ಘಟನೆಯ ನಿರ್ಲಕ್ಷ್ಯದ ಆರೋಪದಡಿ ಟಿ.ಶ್ರೀನಿವಾಸ ರಾಜು ಅವರನ್ನು ಅಮಾನತುಗೊಳಿಸಿರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ. ಅಂದಹಾಗೇ 2022ರಲ್ಲಿ ಟಿ.ಶ್ರೀನಿವಾಸ ರಾಜು ಅವರು ದತ್ತಾತ್ರೆಯ ವಾರ್ಡ್ ನ ಎಇ ಆಗಿ ಕರ್ತವ್ಯ ನಿರ್ವಹಿಸಿದ್ದರು. ಈ ವೇಳೆಯಲ್ಲಿ ಗೇಟ್ ನಿರ್ಮಾಣ ಮಾಡಲಾಗಿತ್ತು. ಪ್ರಸ್ತುತ ರಾಜಾಜಿನಗರ ವಾರ್ಡ್ ನ ಎಇ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇನ್ನೂ…

Read More

ಬೆಂಗಳೂರು : ಭಾರತದ ಮುಂಚೂಣಿಯ ಟ್ರೇಡಿಂಗ್ ಮತ್ತು ಹೂಡಿಕೆಯ ಪ್ಲಾಟ್ ಫಾರಂ ಫೈಯರ್ಸ್ (FYERS) ಬೆಂಗಳೂರಿನ ಟ್ರಾಫಿಕ್ ಪೊಲೀಸ್ ಪಡೆಗೆ ಬೆಂಬಲಿಸುವ ಸಾಮಾಜಿಕ ಉಪಕ್ರಮ ಪ್ರಾರಂಭಿಸಿದೆ. ಈ ಉಪಕ್ರಮದ ಭಾಗವಾಗಿ ಫೈಯರ್ಸ್ ಸಿ.ಎಸ್.ಆರ್. ಅಂಗ ಫೈಯರ್ಸ್ ಫೌಂಡೇಷನ್ ಉನ್ನತ ಗುಣಮಟ್ಟದ ರೈನ್ ಕೋಟ್ ಗಳನ್ನು ನಗರದ ಪ್ರಮುಖ ವೃತ್ತಗಳಲ್ಲಿರುವ 1,400ಕ್ಕೂ ಹೆಚ್ಚು ಟ್ರಾಫಿಕ್ ಸಿಬ್ಬಂದಿಗೆ ವಿತರಣೆ ಮಾಡಿತು. ಈ ರೈನ್ ಕೋಟ್ ಗಳನ್ನು ಅಧಿಕೃತವಾಗಿ ನಾರ್ಥ್ ಬೆಂಗಳೂರಿನ ಡಿಸಿಪಿ ಸಿರಿ ಗೌರಿ ಡಿ,ಆರ್., ಐಪಿಎಸ್ ಅವರಿಗೆ ಫೈಯರ್ಸ್ ಸಹ-ಸಂಸ್ಥಾಪಕ ಮತ್ತು ಸಿಇಒ ತೇಜಸ್ ಖೋಡೇ ಅವರ ನೇತೃತ್ವದ ಸಂಸ್ಥಾಪಕರು ಹಸ್ತಾಂತರಿಸಿದರು. ಬೆಂಗಳೂರಿನಲ್ಲಿ ಮಳೆಗಾಲದ ತಿಂಗಳುಗಳು ಟ್ರಾಫಿಕ್ ಅಧಿಕಾರಿಗಳಿಗೆ ಗಮನಾರ್ಹ ಸವಾಲುಗಳನ್ನು ಉಂಟು ಮಾಡುತ್ತವೆ, ಅವರು ಅತಿಯಾದ ಮಳೆಯಲ್ಲಿ ಸರಾಗವಾಗಿ ಟ್ರಾಫಿಕ್ ಸಂಚಾರಕ್ಕೆ ಮತ್ತು ಸಾರ್ವಜನಿಕರ ಸುರಕ್ಷತೆಗೆ ಶ್ರಮಿಸುತ್ತಾರೆ. ಈ ಉಪಕ್ರಮದ ಮೂಲಕ ಫೈಯರ್ಸ್ ಪ್ರತಿಕೂಲ ಪರಿಸ್ಥಿತಿಗಳಲ್ಲಿ ಟ್ರಾಫಿಕ್ ನಿರ್ವಹಣೆಯ ಅಸೌಖ್ಯ ಮತ್ತು ರಿಸ್ಕ್ ಅನ್ನು ನಿವಾರಿಸುವ ಗುರಿ ಹೊಂದಿದೆ. ಈ ಉಪಕ್ರಮದ…

Read More

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರಂತೆ ವ್ಯಯಕ್ತಿಕ ದಾಳಿ ನಡೆಸುವುದು, ನಿಂದಿಸುವುದು ನಮ್ಮ ಸಂಸ್ಕೃತಿಯಲ್ಲ. ಯಾರು ಯಾರನ್ನೇ ನಿಂದಿಸಿದರೂ ಸತ್ಯ ಏನು ಎಂಬುದು ಜನರಿಗೆ ತಿಳಿದಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಸೋಮವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಗಂಗೇನಹಳ್ಳಿ ಗ್ರಾಮದ ಸರ್ವೇ ನಂಬರ್ 7/1ಬಿ, 7/1 ಸಿ ಮತ್ತು 7/1 ಡಿ ರಲ್ಲಿನ 1 ಎಕರೆ 11 ಗುಂಟೆ ಜಮೀನನ್ನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಎಚ್ಡಿ ಕುಮಾರಸ್ವಾಮಿ ಅವರು ಡಿ ನೋಟಿಫಿಕೇಷನ್ ಮಾಡಲು ಮುಂದಾಗಿದ್ದರು. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಅದೇ ಜಮೀನನ್ನು ಸತ್ತವರ ಹೆಸರಿಗೆ ಡಿನೋಟಿಫೈ ಮಾಡಲಾಗಿತ್ತು. ಕೊನೆಗೆ ಈ ಜಮೀನು ಕುಮಾರಸ್ವಾಮಿ ಅವರ ಬಾಮೈದನ ಹೆಸರಿಗೆ ನೋಂದಣಿಯಾಗಿತ್ತು. ಈ ಪ್ರಕರಣವನ್ನು ಉಲ್ಲೇಖಿಸಿ ಸಚಿವ ಕೃಷ್ಣ ಬೈರೇಗೌಡ ಅವರು ಸತ್ತವರ ಹೆಸರಿಗೆ ಡಿನೋಟಿಫೈ ಮಾಡುವುದು ಅಪರಾಧ ಅಲ್ಲವೇ? ಎಂದು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಕುಮಾರಸ್ವಾಮಿಯವರು ಕೃಷ್ಣ ಬೈರೇಗೌಡ ಅವರನ್ನು ಹೆಬ್ಬೆಟ್ಟು ಎಂದು…

Read More

ಬೆಂಗಳೂರು: ರಾಜ್ಯಾದ್ಯಂತ ʼಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆʼಯನ್ನು ವಿಸ್ತರಿಸಲು ಬೇಕಾಗುವ ಅನುದಾನವನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಮೂಲಕ ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಅನ್ನು ನೀಡಿದ್ದಾರೆ. ಅವರು ಇಂದು ವಿಧಾನಸೌಧದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿರು. ಇಂದು ಆಪತ್ಕಾಲ ಯಾನ ಸೇವೆ ಯೋಜನೆಯಡಿ ಲೋಕಾರ್ಪಣೆಯಾಗಿರುವ 65 ಅತ್ಯಾಧುನಿಕ ಆಂಬ್ಯುಲೆನ್ಸ್ ಗಳ ಸೇವೆಗಳು ಅಪಘಾತಕ್ಕೊಳಗಾದವರ ಜೀವ ಉಳಿಸುವಲ್ಲಿ ಆಪತ್ಕಾಲ ಯಾನ ಸೇವೆ ಸಹಕಾರಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 26 ಸುಧಾರಿತ ಹಾಗೂ 39 ಬೇಸಿಕ್ ಲೈಫ್ ಸಪೋರ್ಟ್ ಅಂಬ್ಯುಲೆನ್ಸ್ ಗಳನ್ನು ಇಂದು ಜನರ ಸೇವೆಗೆ ಮುಕ್ತಗೊಳಿಸಲಾಗಿದ್ದು, ಇವುಗಳನ್ನು ರಾಜ್ಯದ ವಿವಿದ ಜಿಲ್ಲೆಗಳಿಗೆ ಕಳಿಸಲಾಗುವುದು ಎಂದು ತಿಳಿಸಿದರು. https://kannadanewsnow.com/kannada/badlapur-sexual-assault-case-accused-shot-dead-by-police/ https://kannadanewsnow.com/kannada/breaking-bengaluru-couple-arrested-with-drugs-worth-over-rs-1-crore/ https://kannadanewsnow.com/kannada/breaking-mahalakshmis-killer-lived-in-bengaluru-will-be-arrested-soon-commissioner-b-dayanand/

Read More

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರ ಪಟ್ಟಣದ ಶಾಲೆಯೊಂದರಲ್ಲಿ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಅಕ್ಷಯ್ ಶಿಂಧೆ ಅವರನ್ನು ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ. ಥಾಣೆ ಅಪರಾಧ ವಿಭಾಗವು ಆರೋಪಿ ಅಕ್ಷಯ್ ಶಿಂಧೆ ಅವರ ಪತ್ನಿ ಸಲ್ಲಿಸಿದ ಹೊಸ ಪ್ರಕರಣದಲ್ಲಿ ಪ್ರೊಡಕ್ಷನ್ ವಾರಂಟ್ ಆಧಾರದ ಮೇಲೆ ಸಂಜೆ 5: 30 ಕ್ಕೆ ತಲೋಜಾ ಜೈಲಿನಿಂದ ವಶಕ್ಕೆ ತೆಗೆದುಕೊಂಡಿದೆ. ಆತನನ್ನು ತನಿಖೆಗಾಗಿ ಥಾಣೆಗೆ ಕರೆದೊಯ್ಯಲಾಗುತ್ತಿತ್ತು. ವಾಹನವು ಮುಂಬ್ರಾ ಬೈಪಾಸ್ ಬಳಿ ತಲುಪಿದಾಗ, ಶಿಂಧೆ ವಾಹನದಲ್ಲಿದ್ದ ಅಧಿಕಾರಿಯೊಬ್ಬರ ರಿವಾಲ್ವರ್ ಅನ್ನು ಕಸಿದುಕೊಂಡು ಎರಡು ಮೂರು ಸುತ್ತು ಗುಂಡು ಹಾರಿಸಿ ಅಧಿಕಾರಿಯನ್ನು ಗಾಯಗೊಳಿಸಿದರು. ಇದಕ್ಕೆ ಪ್ರತಿಕ್ರಿಯೆಯಾಗಿ, ಇನ್ನೊಬ್ಬ ಅಧಿಕಾರಿ ಶಿಂಧೆ ಅವರ ಮೇಲೆ ಗುಂಡು ಹಾರಿಸಿದರು, ಅವರು ಮಾರಣಾಂತಿಕವಾಗಿ ಗಾಯಗೊಂಡರು. ಬದ್ಲಾಪುರ ಲೈಂಗಿಕ ದೌರ್ಜನ್ಯ ಭಯಾನಕ ಕಳೆದ ತಿಂಗಳು ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರ ಪಟ್ಟಣದ ಶಾಲೆಯ ಶೌಚಾಲಯದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಶಿಂಧೆ ಲೈಂಗಿಕ ದೌರ್ಜನ್ಯ ಎಸಗಿದ ನಂತರ ಬೀದಿಗಳಲ್ಲಿ…

Read More

ಬೆಂಗಳೂರು: ವಿಧಾನಸಭೆ ಸದಸ್ಯತ್ವದಿಂದ ಕೆ.ಮುನಿರತ್ನ ರವರನ್ನು ಅಮಾನತುಗೊಳಿಸಬೇಕೆಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಶ್ರೀ ಎಚ್.ಕೆ ಪಾಟೀಲ ರವರು ವಿಧಾನಸಭಾಧ್ಯಕ್ಷರಾದ ಸನ್ಮಾನ್ಯ ಯು.ಟಿ.ಖಾದರ ಅವರಿಗೆ ಪತ್ರ ಬರೆದಿದ್ದಾರೆ. ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ನೈತಿಕ ಅಧ:ಪತನಕ್ಕೆ ಕಾರಣವಾದ ಅತ್ಯಂತ ಹೇಯವಾದ, ಅಸಭ್ಯವಾದ ಭಾಷೆ ಬಳಸಿ ಕೀಳು ಅಭಿರುಚಿ ಪ್ರದರ್ಶಿಸಿದ ಈ ಘಟನೆ ಕ್ಷಮಾರ್ಹವಲ್ಲ ಎಂದು ಕಾನೂನು ಸಚಿವರು ಅಭಿಪ್ರಾಯಪಟ್ಟಿದ್ದಾರೆ. ವಿಧಾನಸಭೆಯ ಸದಸ್ಯರಿಗೆ ನೈತಿಕ ಮೌಲ್ಯಗಳ ನಿಯಂತ್ರಣ ಹೇರುವ “ನೀತಿ-ನಿರೂಪಣಾ ಸಮಿತಿ” (Ethics Committee of State Legislature) ಎಂದೆಂದಿಗಿಂತಲೂ ಇಂದು ರಚಿಸಬೇಕಾದ ಅತೀ ಅವಶ್ಯಕತೆ ಇದೆ. ಸದನದ ಒಳಗೆ ಹಾಗೂ ಹೊರಗೆ ಅಸಭ್ಯವಾಗಿ ವರ್ತಿಸುವ ಸದಸ್ಯರ ವರ್ತನೆಯನ್ನು ಮೌಲ್ಯಗಳನ್ನು ಗಾಳಿಗೆ ತೂರುವ ನಡತೆಗಳನ್ನು ನಿಯಂತ್ರಿಸುವ ನಿಯಮಗಳನ್ನು ತಕ್ಷಣ ರಚಿಸಬೇಕು. ಸಂವಿಧಾನದತ್ತವಾಗಿ ಸಭಾಧ್ಯಕ್ಷರಿಗೆ ಪ್ರದತ್ತವಾಗಿರುವ ಪರಾಮಾಧಿಕಾರವನ್ನು ಚಲಾಯಿಸಿ ವಿಶೇಷ ಅಪರೂಪದ ಕ್ರಮ ಕೈಗೊಳ್ಳುವ ಮೂಲಕ ವಿಧಾನಸಭೆ ಸದಸ್ಯರಾದ ಶ್ರೀ ಕೆ.ಮುನಿರತ್ನ ಅವರನ್ನು ವಿಧಾನಸಭೆಯಿಂದ ಅಮಾನತುಗೊಳಿಸಬೇಕು ಮತ್ತು…

Read More

ಬೆಂಗಳೂರು: ಈ ಬಾರಿ 21 ದಿನಗಳ ಕಾಲ ದಸರಾ ವಿದ್ಯುತ್ ದೀಪಾಲಂಕಾರ ಆಯೋಜನೆ ಮಾಡಲಾಗುತ್ತಿದೆ. ದಸರಾ ಮುಗಿದ ಬಳಿಕವೂ ಹತ್ತು ದಿನ ವಿದ್ಯುತ್ ದೀಪಾಲಂಕಾರ ವಿಸ್ತರಣೆ ಮಾಡಲಾಗಿದೆ. ಇಂದು ಮೈಸೂರಿನಲ್ಲಿ ಪೋಸ್ಟರ್ ಬಿಡುಗಡೆ ಬಳಿಕ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹಾದೇವಪ್ಪ ಮಾಹಿತಿ ನೀಡಿದಂತ ಅವರು, ಮೈಸೂರು ನಗರದ ಸುತ್ತಮುತ್ತ 130 ಕಿ ಮೀ ವಿದ್ಯುತ್ ದೀಪಾಲಂಕಾರಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿದೆ. ಜಂಬೂಸವಾರಿ ಮೆರವಣಿಗೆಯಲ್ಲಿ ವಿದ್ಯುತ್ ರಥ ಸ್ಥಬ್ದಚಿತ್ರ ಸಾಗಲಿದೆ ಎಂದರು. ಅಕ್ಟೊಬರ್ 6, 7, 11, 12 ರಂದು ಡ್ರೋನ್ ಶೋ ಅಯೋಜನೆ ಮಾಡಲಾಗಿದೆ. ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ 4 ದಿನಗಳ ಕಾಲ ಡ್ರೋನ್ ಶೋ ಆಯೋಜಿಸಲಾಗಿದೆ ಎಂದರು. ಮೈಸೂರಿನ ಹಲವು ವೃತ್ತಗಳಲ್ಲಿ ಪ್ರಜಾಪ್ರಭುತ್ವ ಸಾಗಿ ಬಂದ ಹಾದಿ, ತಾಯಿ ಭುವನೇಶ್ವರಿ, ಸೋಮನಾಥೆಶ್ವರ ದೇವಾಲಯ, ಸಂವಿಧಾನ ಪ್ರಸ್ತಾವನೆ, ಮೈಸೂರಿನ ಅರಸರಾದ ಮುಮ್ಮಡಿ ಕೃಷ್ಣರಾಜ ಒಡೆಯರ್, ನಾಲ್ವಡಿ ಕೃಷ್ಣರಾಜ ಒಡೆಯರ್, ರಾಣಿ ಕೆಂಪನಂಜಮ್ಮಣಿ, ಜಯಚಾಮರಾಜೇಂದ್ರ ಒಡೆಯರ್, ಶ್ರೀಕಂಠದತ್ತ ನರಸಿಂಹ…

Read More

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಸಂದರ್ಭದಲ್ಲಿ ಈ ಬಾರಿ ಎಂಟು ದಿನಗಳ ಕಾಲ ಯುವ ಸಂಭ್ರಮ ಆಯೋಜನೆಗೆ ತೀರ್ಮಾನಿಸಲಾಗಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹಾದೇವಪ್ಪ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಮಾನಸಗಂಗೋತ್ರಿಯ ಬಯಲು ರಂಗಂಮದಿರದಲ್ಲಿ ಈ ಬಾರಿ ಎಂಟು ದಿನಗಳ ಕಾಲ ಯುವ ಸಂಭ್ರಮ ಅನಾವರಣಗೊಳಿಸಲಾಗುತ್ತಿದೆ. ಸೆಪ್ಟೆಂಬರ್ 24 ರಿಂದ ಅಕ್ಟೋಬರ್ 1 ರವರೆಗೆ ನಡೆಯುವ ಯುವ ಸಂಭ್ರಮ ನಡೆಯಲಿದೆ ಎಂದರು. ಸೆಪ್ಟೆಂಬರ್ 24 ರಂದು ಸ್ಯಾಂಡಲ್ ಹುಡ್ ನ ಖ್ಯಾತ ನಟ ನಟಿಯರಾದ ಶ್ರೀಮುರುಳಿ ಮತ್ತು ರುಕ್ಮಿಣಿ ವಸಂತ್ ಯುವ ಸಂಭ್ರಮದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಯುವ ಸಂಭ್ರಮದಲ್ಲಿ ಭಾಗಿಯಾಗಲು 470 ಕಾಲೇಜುಗಳ ವಿದ್ಯಾರ್ಥಿಗಳು ಮುಂದೆ ಬಂದಿದ್ದಾರೆ ಎಂದು ತಿಳಿಸಿದರು. ಈ ಮೊದಲು ಏಳು ದಿನಗಳ ಕಾಲ ಯುವ ಸಂಭ್ರಮ ಆಯೋಜಿಸಲು ಚಿಂತಿಸಲಾಗಿತ್ತು. 7 ದಿನಗಳ ಕಾಲ ನಡೆದರೆ 350 ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಸಿಗಲಿದೆ. ಹಾಗಾಗಿ ಎಲ್ಲಾ ಕಾಲೇಜುಗಳಿಗೂ ಅವಕಾಶ ಸಿಗಲೆಂದು ಒಂದು…

Read More