Subscribe to Updates
Get the latest creative news from FooBar about art, design and business.
Author: kannadanewsnow09
ಕಲಬುರಗಿ : ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ವಿದೇಶಾಂಗ ಸಚಿವರು, ಪಕ್ಷದ ಹಿರಿಯ ನಾಯಕ ಹಾಗೂ ಎಸ್.ಎಂ.ಕೃಷ್ಣ ಅವರ ಅಗಲಿಕೆಗೆ ಮಾಜಿ ಶಾಸಕ ರಾಜಕುಮಾರ ಪಟೀಲ್ ತೇಲ್ಕೂರ ಸಂತಾಪ ವ್ಯಕ್ತಪಡಿಸಿದ್ದರು. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ”ಎಸ್.ಎಂ.ಕೃಷ್ಣ ಅವರು ನಮ್ಮನ್ನ ಅಗಲಿದ ಸುದ್ದಿ ಅತ್ಯಂತ ದುಖಃ ತಂದಿದೆ. ಹಿರಿಯ ಚೇತನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಎಸ್.ಎಂ. ಕೃಷ್ಣ ಅವರು ರಾಷ್ಟ್ರ ಹಾಗೂ ರಾಜ್ಯದ ಅಭಿವೃದ್ಧಿಗೆ ಸಾಕಷ್ಟು ಶ್ರಮಪಟ್ಟಿದ್ದಾರೆ. ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ಪ್ರೀತಿಯಿಂದ ನಮ್ಮ ಪಕ್ಷಕ್ಕೆ ಸಾಕಷ್ಟು ಸಲಹೆಗಳನ್ನ ನೀಡುತ್ತಿದ್ದರು. ಎಸ್.ಎಂ. ಕೃಷ್ಣ ಅವರು ರಾಷ್ಟ್ರ ಹಾಗೂ ರಾಜ್ಯದ ಅಭಿವೃದ್ಧಿಗೆ ಸಾಕಷ್ಟು ಶ್ರಮಪಟ್ಟಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಿ ಅವರು ಜನ ಮಾನಸದಲ್ಲಿ ಉಳಿಯುವಂತಹ ಕೆಲಸವನ್ನು ಮಾಡಿದ್ದಾರೆ. ಬೆಂಗಳೂರನ್ನು ಸಿಂಗಾಪೂರ ಮಾಡಬೇಕೆಂಬ ಕನಸನ್ನು ಕಂಡವರು. ಬೆಂಗಳೂರನ್ನು ಐಟಿ ಬಿಟಿ ಸಿಟಿಯನ್ನಾಗಿ ಮಾಡಿದರು. ಕೇಂದ್ರದಲ್ಲಿ ಅನೇಕ ಹುದ್ದೆಗಳನ್ನು ಅಲಂಕರಿಸಿದ್ದರು. ಅವರು ಸಜ್ಜನ ರಾಜಕಾರಣಿಯಾಗಿದ್ದರು. ಸೌಮ್ಯ ಸ್ವಾಭವದ ರಾಜಕಾರಣಿಯನ್ನು ಕಳೆದುಕೊಂಡು ರಾಜ್ಯ ಬಡವಾಗಿದೆ…
ನವದೆಹಲಿ: ಕ್ಷಮಾದಾನ ಅರ್ಜಿಗಳನ್ನು ತಿರಸ್ಕರಿಸಿದ ನಂತರ ಮರಣದಂಡನೆ ಶಿಕ್ಷೆಗೊಳಗಾದ ಅಪರಾಧಿಗಳನ್ನು ಗಲ್ಲಿಗೇರಿಸುವಲ್ಲಿ ಯಾವುದೇ ಮಿತಿಮೀರಿದ ಮತ್ತು ಅಸಮಂಜಸ ವಿಳಂಬವು ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಮತ್ತು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸುವಲ್ಲಿ ನ್ಯಾಯಾಲಯವು ಸಮರ್ಥನೀಯವಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ, ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಅಗಸ್ಟಿನ್ ಜಾರ್ಜ್ ಮಾಸಿಹ್ ಅವರ ನ್ಯಾಯಪೀಠವು ವಿಳಂಬದ ಉದ್ದಕ್ಕೆ ಸಂಬಂಧಿಸಿದಂತೆ ಯಾವುದೇ ಕಠಿಣ ಮತ್ತು ವೇಗದ ನಿಯಮವನ್ನು ವಿಧಿಸಲಾಗುವುದಿಲ್ಲ, ಇದು ಪ್ರಕರಣದ ವಾಸ್ತವಾಂಶಗಳನ್ನು ಅವಲಂಬಿಸಿರುವುದರಿಂದ ಇದು ಮಿತಿಮೀರಿದ ಎಂದು ಹೇಳಬಹುದು ಎಂದು ಹೇಳಿದರು. ಒಂದು ನಿರ್ದಿಷ್ಟ ಸಂದರ್ಭದಲ್ಲಿ, ಎರಡು ವರ್ಷಗಳ ವಿಳಂಬವು ಮಾರಣಾಂತಿಕವಲ್ಲ. ಮತ್ತೊಂದು ಪ್ರಕರಣದಲ್ಲಿ, ಆರು ತಿಂಗಳ ವಿಳಂಬವು ಶಿಕ್ಷೆಯನ್ನು ಕಡಿಮೆ ಮಾಡಲು ಕಾರಣವಾಗಬಹುದು ಎಂದು ನ್ಯಾಯಾಲಯ ಹೇಳಿದೆ. “ಕ್ಷಮಾದಾನ ಅರ್ಜಿಗಳನ್ನು ತಿರಸ್ಕರಿಸುವ ಆದೇಶವನ್ನು ಅಪರಾಧಿಗೆ ತಿಳಿಸಿದ ನಂತರ, ದಾಮೋಕ್ಲಿಸ್ನ ಖಡ್ಗವನ್ನು ಅವನ ಮೇಲೆ ಮಿತಿಮೀರಿದ ಸಮಯದವರೆಗೆ ತೂಗಾಡಲು ಸಾಧ್ಯವಿಲ್ಲ. ಇದು ಮಾನಸಿಕವಾಗಿ…
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜೊತೆಗೆ ನಾಳೆ ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ. ಇಂದು ತಡರಾತ್ರಿ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದು, ಸಂತಾಪ ಸೂಚಿಸಿದ್ದಾರೆ. ನಾಳೆ ಅವರ ಹುಟ್ಟೂರಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ಸರ್ಕಾರ ಆದೇಶಿಸಿದೆ. ಜೊತೆಗೆ ನಾಳೆ ಒಂದು ದಿನ ರಾಜ್ಯಾಧ್ಯಂತ ಸರ್ಕಾರಿ ರಜೆಯನ್ನು ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ಘೋಷಿಸಲಾಗುತ್ತಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಳಗಾವಿ ಸುವರ್ಣ ಸೌಧ: ರಾಜ್ಯದ ಸಾವಿರಾರು ರೈತರು ಸರ್ಕಾರಿ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದಾರೆ. ಬಗರ್ ಹುಕುಂ ಅಡಿ ಸಾಗುವಳಿ ಚೀಟಿಗೂ ಅರ್ಜಿ ಸಲ್ಲಿಸಿದ್ದಾರೆ. ಆದರೇ ಹೀಗೆ ಸಾಗುವಳಿ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಅರ್ಜಿಗಳನ್ನು ತಿರಸ್ಕೃತಗೊಳಿಸಲಾಗಿದೆ. ಅದ್ಯಾಕೆ ಅಂತ ಮುಂದೆ ಓದಿ. ಸೋಮವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ್ದ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಬಗರ್ ಹುಕುಂ ಯೋಜನೆ ಅಡಿಯಲ್ಲಿ 1999 ರಿಂದ 2004ರ ಅವಧಿಯಲ್ಲಿ ಜಮೀನು ಮಂಜೂರು ಮಾಡಲಾಗಿದ್ದರೂ ಸಾಗುವಳಿ ಚೀಟಿ ನೀಡಿಲ್ಲ, ಕೆಲವರಿಗೆ ಸಾಗುವಳಿ ಚೀಟಿ ನೀಡಿದ್ದರೂ ಖಾತೆ ನೀಡಿಲ್ಲ. ಅಲ್ಲದೆ, ಈ ವರ್ಷ ಬಗರ್ ಹುಕುಂ ಅಡಿಯಲ್ಲಿ ಸಾವಿರಾರು ರೈತರ ಅರ್ಜಿಗಳನ್ನೇ ವಜಾ ಮಾಡಲಾಗಿದೆ. ಪರಿಣಾಮ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ” ಎಂದರು. ಶಾಸಕ ಧೀರಜ್ ಮುನಿರಾಜು ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ಈ ಹಿಂದೆ ನಮೂನೆ 50-53 ರ ಅಡಿ ಭೂ ಮಂಜೂರು ಪಡೆಯದವರೂ ಸಹ ನಕಲಿ ದಾಖಲೆ ಸೃಷ್ಟಿ ಮಾಡಿದ್ದಾರೆ. ಕೆಲವರು…
ಬೆಳಗಾವಿ: ಸದನಕ್ಕೆ ರಾಜ್ಯಾದ್ಯಂತ ಬಗರ್ ಹುಕುಂ ಅರ್ಜಿಗಳ ತಿರಸ್ಕೃತಕ್ಕೆ ಕಾರಣವೇನು? ಎಂಬ ಕುರಿತು ಸದನಕ್ಕೆ ಮಾಹಿತಿ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, ” ಬಗರ್ ಹುಕುಂ ಅಡಿ ಅರ್ಜಿ ಸಲ್ಲಿಸಲು ಕನಿಷ್ಟ 18 ವರ್ಷವಾಗಿರಬೇಕು. ಆದರೆ, 7000 ಅರ್ಜಿದಾರರಿಗೆ 18 ವರ್ಷ ಆಗೇ ಇಲ್ಲ. 3273 ಜನ ಅರ್ಜಿದಾರರು ಕೃಷಿಕರೇ ಅಲ್ಲ. ಸ್ಮಶಾನ, ರಸ್ತೆ, ಕೆರೆ, ಗುಂಡುತೋಪು ಮಂಜೂರಾತಿ ಕೋರಿ 27,452 ಜನ ಅರ್ಜಿ ಸಲ್ಲಿಸಿದ್ದಾರೆ. ನಗರ ವ್ಯಾಪ್ತಿಯಲ್ಲಿ 33,000 ಜನ ಅರ್ಜಿ ಸಲ್ಲಿಸಿದ್ದರೆ, 12,283 ಅರ್ಜಿಗಳು ಸಲ್ಲಿಕೆಯಾಗಿವೆ. ಇನ್ನೂ ಕುಟುಂಬದಲ್ಲಿ 5 ಜಮೀನು ಇದ್ದರೂ ಸಹ ಸಾವಿರಾರು ಜನ ಅರ್ಜಿ ಸಲ್ಲಿಸಿದ್ದಾರೆ. ಇಂತಹ ಅರ್ಜಿಯನ್ನಷ್ಟೇ ತಿರಸ್ಕೃತಗೊಳಿಸಲಾಗಿದೆಯೇ ವಿನಃ ಕಾನೂನು ರೀತ್ಯಾ ಅರ್ಹ ಅರ್ಜಿಗಳನ್ನು ತಿರಸ್ಕೃತಗೊಳಿಸಲಾಗಿಲ್ಲ. ಒಂದು ವೇಳೆ ಕಣ್ತಪ್ಪಿನಿಂದ ಹಾಗೆ ಆದಲ್ಲಿ ಉಪ ವಿಭಾಗಾಧಿಕಾರಿಗಳ ಕೋರ್ಟ್ನಲ್ಲಿ ದಾವೆ ಹೂಡಬಹುದು. ಅಥವಾ ನನ್ನ ಗಮನಕ್ಕೆ ತಂದರೆ ಕೂಡಲೇ ಕ್ರಮವಹಿಸಲಾಗುವುದು” ಎಂದು ಅವರು ಆಶ್ವಾಸನೆ ನೀಡಿದರು. Good News : ‘ಬಿಮಾ ಸಖಿ…
ಬೆಳಗಾವಿ : ರೈತರಿಗಾಗುತ್ತಿರುವ ಶೋಷಣೆಗಳನ್ನು ತಪ್ಪಿಸುವ ಸಲುವಾಗಿ ಜನವರಿ.01 ರಿಂದ ಈವರೆಗಿನ ಎಲ್ ಭೂ-ಮಂಜೂರು ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಲು ಕ್ರಮವಹಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ಮಾಹಿತಿ ನೀಡಿದರು. ಸೋಮವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ್ದ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಬಗರ್ ಹುಕುಂ ಯೋಜನೆ ಅಡಿಯಲ್ಲಿ 1999 ರಿಂದ 2004ರ ಅವಧಿಯಲ್ಲಿ ಜಮೀನು ಮಂಜೂರು ಮಾಡಲಾಗಿದ್ದರೂ ಸಾಗುವಳಿ ಚೀಟಿ ನೀಡಿಲ್ಲ, ಕೆಲವರಿಗೆ ಸಾಗುವಳಿ ಚೀಟಿ ನೀಡಿದ್ದರೂ ಖಾತೆ ನೀಡಿಲ್ಲ. ಅಲ್ಲದೆ, ಈ ವರ್ಷ ಬಗರ್ ಹುಕುಂ ಅಡಿಯಲ್ಲಿ ಸಾವಿರಾರು ರೈತರ ಅರ್ಜಿಗಳನ್ನೇ ವಜಾ ಮಾಡಲಾಗಿದೆ. ಪರಿಣಾಮ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ” ಎಂದರು. ಶಾಸಕ ಧೀರಜ್ ಮುನಿರಾಜು ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ಈ ಹಿಂದೆ ನಮೂನೆ 50-53 ರ ಅಡಿ ಭೂ ಮಂಜೂರು ಪಡೆಯದವರೂ ಸಹ ನಕಲಿ ದಾಖಲೆ ಸೃಷ್ಟಿ ಮಾಡಿದ್ದಾರೆ. ಕೆಲವರು ದಾಖಲೆ ಬಚ್ಚಿಟ್ಟು ರೈತರಿಗೆ ಸಮಸ್ಯೆ ನೀಡುತ್ತಿದ್ದಾರೆ. ಬಗರ್…
ಬೆಂಗಳೂರು: ಇತ್ತೀಚಿಗೆ ಕೆಲವು ಕಂಪನಿಗಳು ತಮ್ಮ ಹೂಡಿಕೆಯ ಶೇ.100ರಷ್ಟು ಮತ್ತು ಅದಕ್ಕಿಂತಲೂ ಹೆಚ್ಚು ಪ್ರಮಾಣದ ಸಬ್ಸಿಡಿ ಕೇಳುತ್ತಿವೆ. ಆದರೆ ಹೀಗೆ ಸಬ್ಸಿಡಿ ಕೊಡುವುದು ಕಾರ್ಯಸಾಧುವಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೋಮವಾರ ಹೇಳಿದ್ದಾರೆ. ರಾಜ್ಯ ಸರಕಾರವು ಖಾಸಗಿ ಹೂಡಿಕೆದಾರರಿಗೆ ಆಗಬಹುದಾದ ಅಪಾಯವನ್ನು ಕಡಿಮೆ ಮಾಡಲೆಂದು ಮತ್ತು ಯೋಜನೆಯ ಆರ್ಥಿಕ ಕಾರ್ಯಸಾಧ್ಯತೆಯನ್ನು ಹೆಚ್ಚಿಸುವ ಉದ್ದೇಶಗಳಿಂದ ಮಾತ್ರ ಸಬ್ಸಿಡಿ ಕೊಡುತ್ತದೆ. ಯೋಜಿತ ಹೂಡಿಕೆಗಿಂತ ಹೆಚ್ಚು ಸಬ್ಸಿಡಿ ಕೊಡುತ್ತ ಹೋದರೆ ಕೈಗಾರಿಕಾ ಯೋಜನೆಗಳ ಆರ್ಥಿಕ ಕಾರ್ಯಸಾಧ್ಯತೆಯ ಬಗ್ಗೆಯೇ ಪ್ರಶ್ನೆಗಳು ಏಳುತ್ತವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ರಾಜ್ಯ ಸರಕಾರವು ಕೈಗಾರಿಕಾಸ್ನೇಹಿ ವಾತಾವರಣ ಸೃಷ್ಟಿಸಲು ಆದ್ಯತೆ ಕೊಟ್ಟಿದ್ದು, ಖಾಸಗಿ ಉದ್ದಿಮೆಗಳನ್ನು ಮುಕ್ತವಾಗಿ ಸ್ವಾಗತಿಸಲಾಗುತ್ತಿದೆ. ಈ ಮೂಲಕ ಕರ್ನಾಟಕವು ನಾವೀನ್ಯತೆ ಮತ್ತು ಅವಕಾಶಗಳ ಆಡುಂಬೊಲವಾಗಿ ಇರುವಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ. ಸರಕಾರ ಎಂದಮೇಲೆ ಎಲ್ಲವೂ ತೆರಿಗೆದಾರರ ಹಣವನ್ನೇ ಅವಲಂಬಿಸಿ ನಡೆಯುತ್ತದೆ. ಅವರ ಸಂಪನ್ಮೂಲಗಳ ಹಿತವನ್ನೂ ಕಾಯಬೇಕಾದ್ದು ನಮ್ಮ ಕೆಲಸವಾಗಿದೆ. ರಾಜ್ಯಕ್ಕೆ ದೀರ್ಘಾವಧಿ…
ಬೆಳಗಾವಿ: ಪರಮಪೂಜ್ಯ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿ ಮಾಡಿದ್ದೇವೆ. ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಸ್ವಾಮೀಜಿಗಳಿಗೆ ತಿಳಿಸಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ಬೆಳಗಾವಿಯಲ್ಲಿ ಇಂದು ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಸ್ವಾಮೀಜಿ ಅವರ ಭೇಟಿ ವೇಳೆ ಪಕ್ಷದ ಹಿರಿಯ ಮುಖಂಡರು ಮತ್ತು ಮಾಜಿ ಸಚಿವ ಸಿ.ಸಿ.ಪಾಟೀಲ್, ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಶೈಲೇಂದ್ರ ಬೆಲ್ದಾಳೆ, ಶರಣು ಸಲಗರ್, ಪಕ್ಷದ ಎಲ್ಲ ಮುಖಂಡರು ಇದ್ದರು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಸ್ವಾಮೀಜಿಗಳಲ್ಲಿ ಮತ್ತೊಂದು ಮನವಿ ಮಾಡಿದ್ದೇನೆ. ಕೆಲವು ವೈಯಕ್ತಿಕ ಕಾರಣಕ್ಕೆ ಪಂಚಮಸಾಲಿ ಹೋರಾಟಕ್ಕೆ ಹಿಂದಿನ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರ ಬೆಂಬಲ ಇಲ್ಲ ಎಂದು ಬಿಂಬಿಸುವ ಪ್ರಯತ್ನ ನಿರಂತರವಾಗಿ ಮಾಡಿಕೊಂಡು ಬಂದಿದ್ದಾರೆ ಎಂದು ವಿವರಿಸಿದರು. ಹಿಂದೆ ಬಿಜೆಪಿ ಸರಕಾರ ಇದ್ದಾಗ ಸನ್ಮಾನ್ಯ ಯಡಿಯೂರಪ್ಪನವರು ಮುಖ್ಯಮಂತ್ರಿಗಳಿದ್ದಾಗ, ಪಂಚಮಸಾಲಿ ಸಮಾಜಕ್ಕೆ 3 ಬಿ ಕೊಡಲಾಗಿತ್ತು. 3 ಬಿ ಕೊಟ್ಟ ಕಾರಣದಿಂದಲೇ…
ರಾಜಸ್ಥಾನ: ಇಲ್ಲಿನ ದೌಸಾ ಜಿಲ್ಲೆಯಿಂದ ಒಂದು ದೊಡ್ಡ ಸುದ್ದಿ ಹೊರಬರುತ್ತಿದೆ. ನಂಗಲ್ ರಾಜ್ವತನ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಲಿಖಡ್ ಗ್ರಾಮದಲ್ಲಿ ಐದು ವರ್ಷದ ಬಾಲಕ 150 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದಾನೆ. ಮಗುವಿನ ರಕ್ಷಣೆಗಾಗಿ ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ ತಂಡಗಳನ್ನು ಸಹ ಕರೆಯಲಾಗಿದೆ. ಉನ್ನತ ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ. ಬೋರ್ವೆಲ್ ಒಳಗೆ ಆಮ್ಲಜನಕ ಪೂರೈಕೆಯನ್ನು ಪ್ರಾರಂಭಿಸಲಾಗಿದೆ. ದೌಸಾ ಜಿಲ್ಲೆಯ ನಂಗಲ್ ರಾಜ್ವತನ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಲಿಖಂಡ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ, ಗ್ರಾಮದಲ್ಲಿ ವಾಸಿಸುವ ಐದು ವರ್ಷದ ಮಗು ಆರ್ಯನ್ ಕೊಳವೆಬಾವಿಗೆ ಬಿದ್ದಿದ್ದಾನೆ. ಮಗು ಕೊಳವೆಬಾವಿಗೆ ಬಿದ್ದ ಸುದ್ದಿ ಗ್ರಾಮದಲ್ಲಿ ಹರಡುತ್ತಿದ್ದಂತೆಯೇ ಗ್ರಾಮದಲ್ಲಿ ಕೋಲಾಹಲ ಉಂಟಾಯಿತು. ಕುಟುಂಬದ ಗೋಳಾಟ ಮುಗಿಲು ಮುಟ್ಟಿದೆ. ಎನ್ಡಿಆರ್ಎಫ್-ಎಸ್ಡಿಆರ್ಎಫ್ ರಕ್ಷಣಾ ಕಾರ್ಯದಲ್ಲಿ ತೊಡಗಿದೆ ಏತನ್ಮಧ್ಯೆ, ಗ್ರಾಮದ ಜನರು ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಮಾಹಿತಿ ಪಡೆದ ಕೂಡಲೇ ಪೊಲೀಸ್ ತಂಡ ಸ್ಥಳಕ್ಕೆ ತಲುಪಿ ಘಟನೆಯ…
ಬೆಂಗಳೂರು: : ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್, ಬೆಂಗಳೂರು ಸಹಕಾರ ತರಬೇತಿ ಸಂಸ್ಥೆ ವತಿಯಿಂದ ದಿನಾಂಕ: 01-01-2025 ರಿಂದ 6 ತಿಂಗಳ ಅವಧಿಯ “ರೆಗ್ಯೂಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ ಮೆಂಟ್ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದ್ದು ತರಬೇತಿ ಪಡೆಯಲು ಬೆಂಗಳೂರು ನಗರ. ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮತ್ತು ರಾಮನಗರ ಜಿಲ್ಲೆಗಳ ಖಾಸಗಿ ಆಭ್ಯರ್ಥಿಗಳಿಂದ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಅಭ್ಯರ್ಥಿಗಳಿಂದ ಮತ್ತು ವಿವಿಧ ಸಹಕಾರ ಸಂಘ/ಬ್ಯಾಂಕ್ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಆಸಕ್ತಿಯುಳ್ಳ ಎಲ್ಲಾ ಅಭ್ಯರ್ಥಿಗಳು ಪ್ರವೇಶ ಪಡೆಯಲು ಅವಕಾಶವಿರುತ್ತದೆ. ವಯೋಮಿತಿ 16 ವರ್ಷ ದಾಟಿದವರಾಗಿರಬೇಕು. ಅರ್ಜಿಗಳನ್ನು ಬೆಂಗಳೂರು ನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಮರ, ತುಮಕೂರು, ಬೆಂಗಳೂರು ಗ್ರಾಮಾಂತರ ಈ ಜಿಲ್ಲೆಯ ಜಿಲ್ಲಾ ಸಹಕಾರ ಯೂನಿಯನ್್, ಗ ಳಲ್ಲಿ ಹಾಗೂ ಸಹಕಾರ ಭವನ, ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಕಟ್ಟಡ, ನಂ 1/3, 2ನೇ…