Author: kannadanewsnow09

ಬೆಂಗಳೂರು: 2024-25ನೇ ಸಾಲಿನ ಸ್ನಾತಕೋತ್ತರ ಕೋರ್ಸುಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಪಿಜಿ – ಸಿಇಟಿ) ಮುಂದೂಡಲಾಗಿದೆ. ವಿವಿಧ ವಿಶ್ವವಿದ್ಯಾಲಯಗಳ ಪದವಿ ತರಗತಿಗಳ ಅಂತಿಮ ಸೆಮಿಸ್ಟರ್‌ ಪರೀಕ್ಷೆಗಳು ಜುಲೈ 5 ಮತ್ತು ಜುಲೈ 10ರಿಂದ ಪ್ರಾರಂಭವಾಗುತ್ತಿವೆ. ಹಾಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹೊಸ ದಿನಾಂಕವನ್ನು ಶೀಘ್ರವೇ ಪ್ರಕಟಿಸಲಾಗುವುದು” ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌. ಪ್ರಸನ್ನ ತಿಳಿಸಿದ್ದಾರೆ. ಕೆಲವು ವಿಶ್ವವಿದ್ಯಾಲಯಗಳು 2024 ರ ಜುಲೈ 5 ಮತ್ತು 10 ರಿಂದ ಅಂತಿಮ ಸೆಮಿಸ್ಟರ್ ಪರೀಕ್ಷೆಗಳನ್ನು ಪ್ರಾರಂಭಿಸುತ್ತಿರುವುದರಿಂದ 2024 ರ ಜುಲೈ 13 ಮತ್ತು 14 ರಂದು ನಡೆಯಬೇಕಿದ್ದ ಪಿಜಿಸಿಇಟಿ -2024 ಪರೀಕ್ಷೆಯನ್ನು ಮುಂದೂಡುವಂತೆ ಅನೇಕ ವಿದ್ಯಾರ್ಥಿಗಳು ಕೆಇಎಗೆ ವಿನಂತಿಗಳನ್ನು ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಇಎ 2024ರ ಜುಲೈ 13 ಮತ್ತು 14ರಂದು ನಡೆಯಬೇಕಿದ್ದ ಪಿಜಿಸಿಇಟಿ-2024 ಪರೀಕ್ಷೆಯನ್ನು ಮುಂದೂಡಿದ್ದು, ಪರಿಷ್ಕೃತ ದಿನಾಂಕಗಳನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು ಅಂತ ತಿಳಿಸಿದೆ. ಇದಲ್ಲದೆ, ಎಂಬಿಎ, ಎಂಸಿಎ, ಎಂಇ / M.Tech/M.Tech, M.ಆರ್ಕಿಟೆಕ್ಚರ್ ಕೋರ್ಸ್ಗಳ…

Read More

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ದಾಖಲಾಗಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಈ ಬೆನ್ನಲ್ಲೇ ದಾಖಲಾಗಿದ್ದಂತ 2ನೇ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಆದೇಶಿಸಿದೆ. ಜೂನ್.22ರಂದು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಜೂನ್.23ರಂದು ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿ ಆದೇಶಿಸಿತ್ತು. ನಿನ್ನೆ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2ನೇ ಅಸಹಜ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಅಂದಹಾಗೇ ಮೊದಲ ಪ್ರಕರಣದಲ್ಲಿ ಅರಕಲಗೂಡು ಮೂಲದ ಯುವಕನೊಬ್ಬ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದರೇ, ನಿನ್ನೆ ಎರಡನೇ ಪ್ರಕರಣವನ್ನು ಹೊಳೆನರಸೀಪುರ ಮೂಲದ ಯುವಕ ಎಂಎಲ್ಸಿ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ದಾಖಲಿಸಿದ್ದನು. ಈ…

Read More

ಮುಂಬೈ : ವಿಶ್ವ ಮಟ್ಟದಲ್ಲಿ ಪ್ರಮುಖ ಕ್ರೀಡಾಕೂಟವಾದ ಒಲಿಂಪಿಕ್ಸ್ ಆರಂಭಕ್ಕೆ ಇನ್ನು ಕೇವಲ ಒಂದು ತಿಂಗಳಷ್ಟೇ ಬಾಕಿ ಇದೆ. ಪ್ಯಾರಿಸ್ ಒಲಿಂಪಿಕ್ಸ್- 2024ರ ಕಡೆಗೆ ವಿಶ್ವಾದ್ಯಂತದ ಕ್ರೀಡಾಸಕ್ತರು ಕಣ್ಣು ನೆಟ್ಟಿದ್ದಾರೆ. ಅಂದಹಾಗೆ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ “ಇಂಡಿಯಾ ಹೌಸ್” ಕಾಣಬಹುದಾಗಿದೆ. ಭಾರತೀಯ ಒಲಿಂಪಿಕ್ಸ್ ಒಕ್ಕೂಟದ (ಐಒಎ) ಸಹಭಾಗಿತ್ವ ವಹಿಸಿರುವಂಥ ರಿಲಯನ್ಸ್ ಫೌಂಡೇಷನ್ ನಿಂದ ಈ “ಇಂಡಿಯಾ ಹೌಸ್” ಪರಿಕಲ್ಪನೆ ಮೂಡಿದೆ. ಈ ಇಂಡಿಯಾ ಹೌಸ್ ನಲ್ಲಿ ಭಾರತದ ಕ್ರೀಡಾ ಸಂಸ್ಕೃತಿ- ಪರಂಪರೆಯನ್ನು ಪ್ರದರ್ಶಿಸಲಾಗುತ್ತದೆ. ಅದರಲ್ಲಿ ಕ್ರೀಡೆಗೆ ಸಂಬಂಧಿಸಿ ಭಾರತದ ಭೂತ- ಭವಿಷ್ಯತ್ ಹಾಗೂ ವರ್ತಮಾನದ ಸಾಧನೆ, ಕನಸುಗಳನ್ನು ಸಹ ತೋರಿಸಲಾಗುತ್ತದೆ. ತಂತ್ರಜ್ಞಾನ ಮತ್ತು ಡಿಜಿಟಲೈಸೇಷನ್ ನಲ್ಲಿ ಭಾರತದ ಸಾಧನೆಯನ್ನು ಜಗತ್ತಿನೆದುರು ತೆರೆದಿಡಲಾಗುತ್ತದೆ. ವಿಶ್ವದ ವಿವಿಧ ಅಥ್ಲೀಟ್ ಗಳು, ಗಣ್ಯರು, ಕ್ರೀಡಾ ಉತ್ಸಾಹಿಗಳು ಈ ಇಂಡಿಯಾ ಹೌಸ್ ಗೆ ಭೇಟಿ ನೀಡುವ ನಿರೀಕ್ಷೆ ಇದೆ. ಇನ್ನು ಭಾರತದ ನೀತಿಯನ್ನು ವ್ಯಾಖ್ಯಾನಿಸುವ ಏಕತೆ, ವೈವಿಧ್ಯತೆ ಮತ್ತು ಶ್ರೇಷ್ಠತೆಯನ್ನು ಸಾರುವುದಕ್ಕೂ ಇದು…

Read More

ನವದೆಹಲಿ: ಚನ್ನಪಟ್ಟಣದ ಶಾಸಕರಾಗಿದ್ದಂತ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, ಗೆದ್ದು ಕೇಂದ್ರ ಸಚಿವರಾಗಿದ್ದಾರೆ. ಈಗ ಆ ಕ್ಷೇತ್ರದ ಉಪ ಚುನಾವಣೆ ಗರಿಗೆದರಿದೆ. ಇದೇ ಸಂದರ್ಭದಲ್ಲಿ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಯಾರು ಅಭ್ಯರ್ಥಿ ಅನ್ನುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಆ ಬಗ್ಗೆ ಮುಂದೆ ಓದಿ. ನವದೆಹಲಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮಾಜಿ ಪ್ರಧಾನಿಗಳಾದ ದೇವೇಗೌಡರು ಹಾಗೂ ನನ್ನ ಹೆಸರು ಹಾಕಿಲ್ಲ ಎನ್ನುವ ಬಗ್ಗೆ ಬೇಸರ ಇಲ್ಲ. ನಾನು ಇದ್ದಲ್ಲಿಯೇ ನಾಡಪ್ರಭುಗಳನ್ನು ಸ್ಮರಿಸಿ ಗೌರವಿಸುತ್ತೇನೆ ಎಂದರು. ಚನ್ನಪಟ್ಟಣಕ್ಕೆ ಎನ್ ಡಿಎ ಅಭ್ಯರ್ಥಿ ನಿಲ್ಲುತ್ತಾರೆ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಬಿಜೆಪಿ ಅಭ್ಯರ್ಥಿ ಅಂತಲ್ಲ, ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಒಮ್ಮತವಾಗಿ ಸ್ಪರ್ಧೆ ಮಾಡಲಿದ್ದಾರೆ ಎಂದು ಕೇಂದ್ರ ಸಚಿವರು ಹೇಳಿದರು. ಇನ್ನೂ ಸಾಕಷ್ಟು ಸಮಯ ಇದೆ. ನಾವು ನಿರ್ಧಾರ ಮಾಡುತ್ತೇವೆ.…

Read More

ಚಿತ್ರದುರ್ಗ: ಜಿಲ್ಲೆಯಲ್ಲಿ ಮನೆಯ ಮೇಲ್ಛಾವಣಿ ಸರಿ ಮಾಡೋ ಸಂದರ್ಭದಲ್ಲಿ ಕುಸಿದು ಬಿದ್ದ ಪರಿಣಾಮ, ಓರ್ವ ವ್ಯಕ್ತಿ ಸಾವನ್ನಪ್ಪಿರೋ ಘಟನೆ ಚಳ್ಳಕೆರೆಯ ರಾಮಜೋಗಿಹಳ್ಳಿಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿಯಲ್ಲಿ ಮುರುಳೀಧರ್ (45) ಎಂಬುವರು ತಮ್ಮ ಮನೆಯ ಮೇಲ್ಛಾವಣಿ ಸರಿ ಮಾಡೋದಕ್ಕೆ ಮನೆ ಮೇಲೆ ಹತ್ತಿದ್ದರು. ಮನೆಯ ಮೇಲ್ಛಾವಣಿ ದುರಸ್ಥಿ ವೇಳೆಯಲ್ಲಿ ಕುಸಿದ ಪರಿಣಾಮ, ಅದರಡಿಯಲ್ಲಿ ಸಿಲುಕಿ ಮುರಳೀಧರ್ ದುರ್ಮರಣ ಹೊಂದಿರೋದಾಗಿ ತಿಳಿದು ಬಂದಿದೆ. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/nadaprabhu-kempegowda-is-the-property-of-kannada-identity-of-kannadigas-union-minister-hd-kumaraswamy/ https://kannadanewsnow.com/kannada/we-have-information-about-who-shared-prajwals-obscene-video-g-parameshwara/

Read More

ನವದೆಹಲಿ: ನಾಡಪ್ರಭು ಕೆಂಪೇಗೌಡರು ಯಾರ ಸ್ವತ್ತು ಅಲ್ಲ, ಅವರು ಕನ್ನಡದ ಸ್ವತ್ತು. ಕನ್ನಡಿಗರ ಅಸ್ಮಿತೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಆ ಮಹಾಪುರುಷರ ಬಗ್ಗೆ ಕಾಂಗ್ರೆಸ್ ಸರಕಾರಕ್ಕೆ ಹೃದಯದಲ್ಲಿ ಗೌರವ ಎನ್ನುವುದು ಇದ್ದರೆ ಮೊದಲು ಅವರು ಕಟ್ಟಿಸಿರುವ ಕೆರೆಗಳನ್ನು ರಕ್ಷಣೆ ಮಾಡಲಿ ಎಂದು ಅವರು ಒತ್ತಾಯಿಸಿದರು. ನವದೆಹಲಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮಾಜಿ ಪ್ರಧಾನಿಗಳಾದ ದೇವೇಗೌಡರು ಹಾಗೂ ನನ್ನ ಹೆಸರು ಹಾಕಿಲ್ಲ ಎನ್ನುವ ಬಗ್ಗೆ ಬೇಸರ ಇಲ್ಲ. ನಾನು ಇದ್ದಲ್ಲಿಯೇ ನಾಡಪ್ರಭುಗಳನ್ನು ಸ್ಮರಿಸಿ ಗೌರವಿಸುತ್ತೇನೆ ಎಂದರು. ಕೆಂಪೇಗೌಡರ ಜಯಂತಿಗೆ ನನಗೆ ಆಹ್ವಾನ ಇಲ್ಲ, ಆಹ್ವಾನ ಪತ್ರಿಕೆಯಲ್ಲಿ ಹೆಸರೂ ಹಾಕಿಲ್ಲ ಎಂದು ನೀವು ಕೇಳಿದಿರಿ ಎನ್ನುವ ಕಾರಣಕ್ಕೆ ನಾನು ಮತ್ನಡಬೇಕಾಯಿತು. ನನ್ನ ಹೃದಯದಲ್ಲಿ ನಾಡಪ್ರಭುಗಳು ಇದ್ದಾರೆ. ಅವರು ಕಾರ್ಯಕ್ರಮಕ್ಕೆ ಕರೆಯದಿರುವುದಕ್ಕೆ ನನಗೆ ಬೇಸರವಿಲ್ಲ, ನಾನು ಈ ವಿಚಾರಕ್ಕೆ ಮಹತ್ವ ಕೊಡುವುದಿಲ್ಲ ಎಂದರು…

Read More

ಬೆಂಗಳೂರು : ಯಲಹಂಕ ಸಮೀಪ ಸ್ಥಾಪನೆಯಾಗಿರುವ ರಾಜ್ಯದಲ್ಲಿಯೇ ಪ್ರಪ್ರಥಮ ಅನಿಲ ಆಧಾರಿತ 370 ಮೆಗಾ ವಾಟ್‌ ಸಾಮರ್ಥ್ಯದ ‘ಯಲಹಂಕ ಸಂಯೋಜಿತ ಆವರ್ತ ವಿದ್ಯುತ್ ಸ್ಥಾವರ’ (ಸಿಸಿಪಿಪಿ) ಜುಲೈ ಎರಡನೇ ವಾರದಲ್ಲಿ ಲೋಕಾರ್ಪಣೆಗೊಳ್ಳಲಿದೆ ಎಂಬುದಾಗಿ ಇಂಧನ ಸಚಿವ ಕೆ.ಜೆ ಜಾರ್ಜ್ ಮಾಹಿತಿ ಹಂಚಿಕೊಂಡಿದ್ದಾರೆ. ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ವತಿಯಿಂದ ಸ್ಥಾಪಿಸಲಾಗುತ್ತಿರುವ ಅನಿಲ ಆಧಾರಿತ ವಿದ್ಯುತ್ ಉತ್ಪಾದನಾ ಯೋಜನೆ ಕುರಿತಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಬೆಳಕು ಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಘಟಕವನ್ನು ಉದ್ಘಾಟಿಸಲು ತೀರ್ಮಾನಿಸಲಾಗಿದೆ. ಒಟ್ಟು 370.05 ಮೆಗಾ ವ್ಯಾಟ್ ಸಾಮರ್ಥ್ಯದ ಈ ಘಟಕದಲ್ಲಿ ಗ್ಯಾಸ್ ಟರ್ಬೈನ್ ಜನರೇಟರ್ ಔಟ್ ಪುಟ್ ಮೂಲಕ 236.825 ಮೆಗಾವ್ಯಾಟ್ ಮತ್ತು ಸ್ಟೀಮ್ ಟರ್ಬೈನ್ ಜನರೇಟರ್ ಔಟ್ ಪುಟ್ ಮೂಲಕ 133.225 ಮೆಗ್ಯಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಈಗಾಗಲೇ ಸಂಯೋಜಿತ ಆವರ್ತದದಲ್ಲಿ ಪ್ರಾಯೋಗಿಕ ಉತ್ಪಾದನಾ ಪ್ರಕ್ರಿಯೆ ಯಶಸ್ವಿಯಾಗಿ ನಡೆದಿದೆ.…

Read More

ಬೆಂಗಳೂರು: ನನ್ನ ಪರಿಚಿತರಿಗೆ ಹನಿಟ್ರ್ಯಾಪ್ ಮಾಡಿ, ಬ್ಲಾಕ್ ಮೇಲ್ ಮಾಡಲಾಗುತ್ತಿತ್ತು. ಈ ಬಗ್ಗೆ ಸಿಸಿಬಿ ಪೊಲೀಸರಿಗೆ ದೂರು ನೀಡಲಾಗಿತ್ತು. ಅದರ ಹೊರತಾಗಿ ನನ್ನನ್ನು ಯಾರು ಹನಿಟ್ರ್ಯಾಪ್ ಮಾಡಿಲ್ಲ ಅಂತ ಶಾಸಕ ಹರೀಶ್ ಗೌಡ ಸ್ಪಷ್ಟ ಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಹನಿಟ್ರ್ಯಾಪ್ ಪ್ರಕರಣ ನನಗೆ ಮಾಡಿಲ್ಲ. ನನ್ನ ಪರಿಚಿತರಿಗೆ ಮಾಡಿದ್ದರಿಂದ ದೂರು ನೀಡಲಾಗಿತ್ತು. ಈ ಸಂಬಂಧ ತನಿಖೆ ನಡೆಸಿದಂತ ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದರು. ಸಿಸಿಬಿ ಪೊಲೀಸರು ಹನಿಟ್ರ್ಯಾಪ್, ಬ್ಲಾಕ್ ಮೇಲ್ ಸಂಬಂಧ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ. ಈ ಜಾಲದ ಹಿಂದೆ ಯಾರಿದ್ದಾರೆ ಅನ್ನೋದನ್ನು ನೋಡಬೇಕು. ನನಗೆ ಯಾವುದೇ ಬ್ಲಾಕ್ ಮೇಲ್, ಹನಿಟ್ರ್ಯಾಪ್ ಮಾಡಿಲ್ಲ. ನನ್ನ ಕ್ಷೇತ್ರದ ಕೆಲವರಿಗೆ ಮಾಡಿದ್ದರು ಎಂಬುದಾಗಿ ತಿಳಿಸಿದರು. ಅಂದಹಾಗೇ ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡ ಅವರಿಗೆ ಹನಿಟ್ರ್ಯಾಪ್ ಮಾಡಿದ್ದಾರೆ ಎನ್ನಲಾಗುತ್ತಿತ್ತು. ಈ ಸಂಬಂಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಪೊಲೀಸರು…

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೈಲುಪಾಲಾಗಿದೆ. ಈ ಬೆನ್ನಲ್ಲೇ ಡಿ ಗ್ಯಾಂಗ್ ಸಿನಿಮಾ ಮಾಡೋದಕ್ಕಾಗಿ ನಿರ್ಮಾಪಕರು ಟೈಟಲ್ ನೋಂದಣಿಗೆ ಮುಗಿ ಬಿದ್ದಿದ್ದರು. ಆದ್ರೇ ಆ ಟೈಟಲ್ ನೀಡಲಾಗಿರಲಿಲ್ಲ. ಈಗ ಖೈದಿ ನಂ.6106 ಟೈಟಲ್ ಗೆ ಪುಲ್ ಡಿಮ್ಯಾಂಡ್ ಹೆಚ್ಚಾಗಿದೆ. ಈ ಸಂಬಂಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಡಿ ಗ್ಯಾಂಗ್ ಟೈಟಲ್ ನೀಡುವಂತೆ ನಿರ್ದೇಶಕ ರಾಕಿ ಸೋಮ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ದರ್ಶನ್ ಪ್ರಕರಣ ಕೋರ್ಟ್ ನಲ್ಲಿರುವ ಕಾರಣ, ಪೆಂಡಿಂಗ್ ನಲ್ಲಿ ಇರಿಸಲಾಗಿದೆ. ಈ ಮೂಲಕ ಡಿ ಗ್ಯಾಂಗ್ ಟೈಟಲ್ ನೀಡಿಲ್ಲ. ಇದೀಗ ಡಿ ಗ್ಯಾಂಗ್ ಟೈಟಲ್ ಬಳಿಕ ಖೈದಿ ನಂ.6106 ಗೆ ನಿರ್ಮಾಪಕ ಭದ್ರಾವತಿಯ ಕುಮಾರ್ ಎಂಬುವರು ಅರ್ಜಿಯನ್ನು ಸಲ್ಲಿಸಿದ್ದಾರೆ. ಆದ್ರೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾತ್ರ ಈ ಟೈಟಲ್ ಗೂ ಅನುಮತಿ ನೀಡಿಲ್ಲ. ಹೀಗಾಗಿ ಡಿ ಗ್ಯಾಂಗ್, ಹಾಗೂ ಖೈದಿ ನಂ.6106 ಟೈಟಲ್ ಗೆ ಪುಲ್ ಡಿಮ್ಯಾಂಡ್…

Read More

ಬೆಂಗಳೂರು: ಅಶ್ಲೀಲ ಪ್ರಕರಣ, ಅತ್ಯಾಚಾರ ಕೇಸ್, ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲುಪಾಲಾಗಿದ್ದಾರೆ. ಅವರು ಇಂದು ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಮೊದಲ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಅತ್ಯಾಚಾರ ಆರೋಪಿಗೆ ಬಿಗ್ ಶಾಕ್ ನೀಡಿದೆ. ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದ ದಾಖಲಾಗಿತ್ತು. ಈ ಪ್ರಕರಣದಲ್ಲಿ ಜೈಲು ಪಾಲಾಗಿದ್ದಂತ ಅವರನ್ನು, ಹೆಚ್ಚಿನ ವಿಚಾರಣೆಗಾಗಿ ಎಸ್ಐಟಿ ವಶಕ್ಕೆ ಪಡೆದು ತನಿಖೆ ನಡೆಸುತ್ತಿದೆ. ಅಲ್ಲದೇ ಪ್ರಕರಣ ಸಂಬಂಧ ಸ್ಥಳಮಹಜರ್ ಕೂಡ ನಡೆಸಲಾಗುತ್ತಿದೆ. ಹಾಸನದ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಮೊದಲ ಪ್ರಕರಣದಲ್ಲಿ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ವಿಚಾರಣೆಯ ಬಳಿಕ ವಜಾಗೊಳಿಸಿದ್ದಾರೆ. ಹೀಗಾಗಿ ಎಸ್ಐಟಿ ವಶದಲ್ಲಿರುವಂತ ಪ್ರಜ್ವಲ್ ರೇವಣ್ಣಗೆ…

Read More