Author: kannadanewsnow09

ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡ ಇದೆ. ಇದನ್ನು ಬಿಜೆಪಿ ಮೇಲೆ ಹೊರಿಸುವ ಪ್ರಯತ್ನವನ್ನು ಕಾಂಗ್ರೆಸ್‌ನ ಹಿರಿಯ ನಾಯಕರು ಮಾಡುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ರೇವಣ್ಣ ಅವರನ್ನು ಕೂಡಲೇ ಬಂಧಿಸಿದ್ದರೂ, ಚಾಲಕನನ್ನು ಮಾತ್ರ ಬಂಧಿಸಿಲ್ಲ. ಎಸ್ಐಟಿ ಅಧಿಕಾರಿಗಳು ಪಕ್ಷಪಾತ ಧೋರಣೆಯಿಂದ ಕೆಲಸ ಮಾಡುತ್ತಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದಂತೆ ಇಲ್ಲಿ ತಿಮಿಂಗಿಲವೇ ಇದೆ.‌ ಅದನ್ನು ಬಡಿದು ತಿನ್ನಬೇಕಾ ಬೇಡವಾ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬ ತೀರ್ಮಾನಿಸಲಿದೆ. ಆದರೆ ಮಾಜಿ ಪ್ರಧಾನಿ ದೇವೇಗೌಡರ ಮೂಲಕ ಇಡೀ ಒಕ್ಕಲಿಗ ಸಮುದಾಯವನ್ನು ಅಪಮಾನಿಸಬೇಕಿತ್ತೇ ಎಂದು ಜನರು ಮಾತಾಡುತ್ತಿದ್ದಾರೆ. ಆದ್ದರಿಂದ ಬಿಜೆಪಿಯ ಮೇಲೆ ಆರೋಪ ತರುವ ಪ್ರಯತ್ನ ನಡೆದಿದೆ ಎಂದರು. ತನಿಖೆಯ ಪ್ರತಿ ಮಾಹಿತಿ ಮೊದಲು ಕಾಂಗ್ರೆಸ್ ‌ನಾಯಕರಿಗೆ ತಲುಪುತ್ತಿದೆ.‌ ಎಸ್‌ಐಟಿ ಅಧಿಕಾರಿಗಳು ಕಾಂಗ್ರೆಸ್‌ ನಾಯಕರು ಹೇಳಿದಂತೆ ಕೇಳುತ್ತಿದ್ದಾರೆ. ಆದ್ದರಿಂದ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಆ‌ ನಂತರ ಯಾರೆಲ್ಲ ಬಂಧನಕ್ಕೊಳಗಾಗುತ್ತಾರೆ ಎಂದು‌ ನೋಡಲಿ…

Read More

ಬೆಂಗಳೂರು: ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್-ಬಿಜೆಪಿ ಅಭ್ಯರ್ಥಿಯನ್ನಾಗಿ ದಿನಾಂಕ 11-05-2024ರಂದು ಇ.ಸಿ ನಿಂಗರಾಜುಗೆ ಟಿಕೆಟ್ ಘೋಷಣೆ ಮಾಡಲಾಗಿತ್ತು. ಆದರೇ ಇದೀಗ ದಿಢೀರ್ ಅಭ್ಯರ್ಥಿ ಬದಲಾವಣೆ ಮಾಡಲಾಗಿದ್ದು, ವಿವೇಕಾನಂದ ಕೆ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಜೆಡಿಎಸ್ ರಾಜ್ಯಾಧ್ಯಕ್ಷರಾದಂತ ಹೆಚ್.ಡಿ ಕುಮಾರಸ್ವಾಮಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಅದರಲ್ಲಿ ವಿವೇಕಾನಂದ ಕೆ ಇವರನ್ನು ದಿನಾಂಕ 03-06-2024ರಂದು ನಡೆಯಲಿರುವ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಮತ್ತು ಜನತಾದಳ ಪಕ್ಷದ ಮೈತ್ರಿ ಅಭ್ಯರ್ಥಿಯೆಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಸಭಾ ಸದಸ್ಯರು ಹಾಗೂ ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್.ಡಿ ದೇವೇಗೌಡ ಅವರು ಘೋಷಿಸಿದ್ದಾರೆ ಎಂದಿದ್ದಾರೆ. ಅಂದಹಾಗೇ ದಿನಾಂಕ 11-05-2024ರಂದು 6 ವಿಧಾನಪರಿಷತ್ ಚುನಾವಣಾ ಕ್ಷೇತ್ರಗಳಿಗೆ ಬಿಜೆಪಿಯಿಂದ ಟಿಕೆಟ್ ಘೋಷಣೆ ಮಾಡಲಾಗಿತ್ತು. ಮೂರು ಪದವೀಧರರ ಕ್ಷೇತ್ರಗಳು ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿತ್ತು. ಆ ವೇಳೆಯಲ್ಲಿ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಇ.ಸಿ ನಿಂಗರಾಜುಗೆ ಟಿಕೆಟ್ ಘೋಷಣೆ ಮಾಡಲಾಗಿತ್ತು. ಈಗ ಅವರನ್ನು…

Read More

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವೀಡಿಯೋ ಪ್ರಕರಣ ಬೆಳಕಿಗೆ ಬಂದ ನಂತ್ರ ವಿದೇಶಕ್ಕೆ ಹಾರಿದ್ದರು. ಬೆಂಗಳೂರಿಗೆ ಇಂದು, ನಾಳೆ, ನಾಡಿದ್ದು ಬರ್ತಾರೆ ಅಂತ ಕೆಲ ದಿನಗಳೇ ಕಳೆದಿವೆ. ಹೀಗೆ ಇರುವಾಗ ಇಂದು ತಡರಾತ್ರಿ ಅಥವಾ ನಾಳೆ ಬೆಂಗಳೂರಿಗೆ ಸಂಸದ ಪ್ರಜ್ವಲ್ ರೇವಣ್ಣ ವಾಪಾಸ್ ಆಗೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮಹಿಳೆ ಅಪಹರಣ ಪ್ರಕರಣದಲ್ಲಿ ಜೈಲು ಪಾಲಾಗಿದ್ದಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ನಿನ್ನೆ ಜಾಮೀನಿನ ಬಳಿಕ ಬಿಡುಗಡೆಯಾಗಿದ್ದರು. ಆ ನಂತ್ರ ಟೆಂಪಲ್ ರನ್ನ ನಡೆಸಿದ್ದಂತ ಅವರು, ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಅದರಲ್ಲೂ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಪ್ರಜ್ವಲ್ ಹೆಸರಿನಲ್ಲಿಯೂ ಅರ್ಚನೆ ಮಾಡಿಸಿದ್ದರು. ಇಂದು ತಮ್ಮ ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚಿಸೋದಕ್ಕೆ ಹಿರಿಯ ವಕೀಲ ಸಿ.ವಿ ನಾಗೇಶ್ ಅವರನ್ನು ಹೆಚ್.ಡಿ ರೇವಣ್ಣ ಭೇಟಿಯಾದರು. ಅವರೊಂದಿಗೆ ಪ್ರಜ್ವಲ್ ರೇವಣ್ಣ ಕರೆಸೋ ಬಗ್ಗೆ ಚರ್ಚೆ ನಡೆಸಿದರು ಎನ್ನಲಾಗುತ್ತಿದೆ. ಈಗಾಗಲೇ ಪ್ರಜ್ವಲ್ ಜೊತೆಗೆ ನಿರಂತರ ಸಂಪರ್ಕದಲ್ಲಿರುವಂತ…

Read More

ಕೋಲಾರ: ರಾಜ್ಯದಲ್ಲಿ ನೀಚ ಕೃತ್ಯ ಎನ್ನುವಂತೆ ಗ್ರಾಮ ಪಂಚಾಯ್ತಿ ಬಿಲ್ ಕಲೆಕ್ಟರ್ ಒಬ್ಬ ಕೆಲಸದ ಅವಧಿಯಲ್ಲೇ ಮಹಿಳಾ ಸಿಬ್ಬಂದಿಯೊಬ್ಬರೊಂದಿಗೆ ರೋಮ್ಯಾನ್ ಮಾಡಿರೋ ಘಟನೆ ಬೆಳಕಿಗೆ ಬಂದಿದೆ. ಅಲ್ಲದೇ ಸಂತ್ರಸ್ತೆಗೆ ವೀಡಿಯೋ ರೆಕಾರ್ಡ್ ಸಾಮಾಜಿಕ ಜಾಲತಾಣದಲ್ಲಿ ಹಂಚೋದಾಗಿಯೂ ಬ್ಲಾಕ್ ಮೇಲ್ ಮಾಡಿದ್ದಾನೆ. ಕೋಲಾರ ಜಿಲ್ಲೆಯ ಕೆಜಿಎಫ್ ನ ರಾಮಸಾಗರ ಗ್ರಾಮ ಪಂಚಾಯ್ತಿ ಕಚೇರಿಯಲ್ಲೇ ಬಿಲ್ ಕಲೆಕ್ಟರ್ ಅರ್ಜುನ್ ಹರಿಕೃಷ್ಣ ಎಂಬಾತ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರೋದು ಬೆಳಕಿಗೆ ಬಂದಿದೆ. ಗ್ರಾಮ ಪಂಚಾಯ್ತಿಯಲ್ಲೇ ಕೆಲಸದ ವೇಳೆ ಬಲವಂತವಾಗಿ ಮಹಿಳಾ ಸಿಬ್ಬಂದಿಯೊಂದಿಗೆ ರೊಮ್ಯಾನ್ಸ್ ಮಾಡಿರುವಂತ ಬಿಲ್ ಕಲೆಕ್ಟರ್ ಅರ್ಜುನ್ ಹರಿಕೃಷ್ಣ, ಅದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿದ್ದಾನೆ. ಈ ಖಾಸಗಿ ವೀಡಿಯೋವನ್ನು ಇಟ್ಕೊಂಡಿದ್ದಂತ ಅರ್ಜುನ್, ಮಹಿಳಾ ಸಿಬ್ಬಂದಿಗೆ ಖಾಸಗಿ ಪೋಟೋ, ವೀಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೆ ಮಾಡೋದಾಗಿಯೂ ಬೆದರಿಕೆ ವೊಡ್ಡಿದ್ದಾನೆ. ಬಿಲ್ ಕಲೆಕ್ಟರ್ ಬೆದರಿಕೆಗೆ ಬೆಚ್ಚಿದಂತ ಮಹಿಳಾ ಸಿಬ್ಬಂದಿ, ಬೇತಮಂಗಲ ಪೊಲೀಸ್ ಠಾಣೆಗೆ ತೆರಳಿ, ಬಿಲ್ ಕಲೆಕ್ಟರ್ ಅರ್ಜುನ್ ಹರಿಕೃಷ್ಣ ವಿರುದ್ಧ ದೂರು ನೀಡಿದ್ದಾರೆ. ಈ…

Read More

ಬೆಂಗಳೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಮಹಿಳೆ ಅಪರಹಣ ಪ್ರಕರಣದಲ್ಲಿ ಬಂಧಿಸಿದ್ದರು. ಆ ಬಳಿಕ ಜೈಲಿಗೂ ಕಳುಹಿಸಲಾಗಿತ್ತು. ನಿನ್ನೆ ಜಾಮೀನು ಸಿಕ್ಕ ಬೆನ್ನಲ್ಲೇ ಜೈಲಿನಿಂದ ಬಿಡುಗಡೆಯಾಗಿದ್ದರು. ಈಗ ಅವರು ಹಿರಿಯ ವಕೀಲರನ್ನು ಭೇಟಿಯಾಗಿ, ಕಾನೂನು ಹೋರಾಟದ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಮಹಿಳೆ ಅಪಹರಣ ಕೇಸಲ್ಲಿ ಜಾಮೀನಿನ ಬಳಿಕ ನಿನ್ನೆ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು. ಆ ನಂತ್ರ ಬೆಂಗಳೂರಿನ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದರು. ಇಂದು ಕೂಡ ಟೆಂಪಲ್ ರನ್ ಅನ್ನು ಮಾಜಿ ಸಚಿವ ಹೆಚ್.ಡಿ ರೇವಣ್ಣ ಮುಂದುವರೆಸಿದ್ದಾರೆ. ಈ ನಡುವೆ ಬೆಂಗಳೂರಿನ ಬನಶಂಕರಿಯಲ್ಲಿರುವಂತ ಹಿರಿಯ ವಕೀಲರೊಬ್ಬರ ನಿವಾಸಕ್ಕೆ ಭೇಟಿ ನೀಡಿದಂತ ಹೆಚ್.ಡಿ ರೇವಣ್ಣ ಅವರು, ಅವರೊಂದಿಗೆ ಅರ್ಧಗಂಟೆಗಳ ಕಾಲ ಚರ್ಚೆ ನಡೆಸಿದರು ಎನ್ನಲಾಗಿದೆ. ಮಹಿಳೆ ಅಪಹರಣ ಪ್ರಕರಣದಲ್ಲಿ ಮುಂದಿನ ಕಾನೂನು ಹೋರಾಟ ಹೇಗೆ ಮಾಡಬೇಕು.? ಈ ಪ್ರಕರಣದಲ್ಲಿ ಮುಂದಿನ ನಡೆ ಹೇಗೆ ಎನ್ನುವ ಬಗ್ಗೆಯೂ ಚರ್ಚೆ…

Read More

ಹುಣಸೂರು: ಕಾಡಿನಂಚಿನಲ್ಲಿರುವ ಗ್ರಾಮಗಳಿಗೆ ಪದೇ ಪದೇ ಆನೆಗಳು ಬಾರದಂತೆ ತಡೆಯಲು ಅರಣ್ಯ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಅರಣ್ಯ,ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಹುಣಸೂರು ತಾಲೂಕು ಹನಗೋಡು ಹೋಬಳಿ ವೀರನ ಹೊಸಹಳ್ಳಿ ಸಮೀಪದ ರೇಸಾರ್ಟ್ ನಲ್ಲಿ ತಮ್ಮನ್ನು ಭೇಟಿ ಮಾಡಿದ ಗ್ರಾಮಸ್ಥರಿಂದ ಮನವಿ ಸ್ವೀಕರಿಸಿ ಮಾತನಾಡಿದ ಅವರು, ಅರಣ್ಯ ಇಲಾಖೆ ಕಾಡಾನೆಗಳು ನಾಡಿಗೆ ಬರುವುದನ್ನು ನಿಯಂತ್ರಿಸಲು ಸೌರ ತಂತಿ ಬೇಲಿ, ತೂಗಾಡುವ ವಿದ್ಯುತ್ ತಂತಿ, ಆನೆ ಕಂದಕ ಹಾಗೂ ರೈಲ್ವೆ ಬ್ಯಾರಿಕೇಡ್ ಅಳವಡಿಸುವ ಕಾರ್ಯ ಮಾಡುತ್ತಿದೆ. ರಾಜ್ಯದ ಯಾವ ಭಾಗದಲ್ಲಿ ಹೆಚ್ಚಿನ ಸಮಸ್ಯೆ ಇದೆಯೋ ಅಲ್ಲಿ ತ್ವರಿತವಾಗಿ ತಡೆಗೋಡೆ ನಿರ್ಮಿಸಲು ಕ್ರಮ ವಹಿಸಲಾಗುವುದು ಎಂದರು. ವನ್ಯಜೀವಿಗಳ ಹಾವಳಿಯಿಂದ ಮೈಸೂರು ಮತ್ತು ಕೊಡಗು ಭಾಗದಲ್ಲಿ ಬೆಳೆ ನಾಶ ಆಗುತ್ತಿದೆ. ಅಮೂಲ್ಯ ಜೀವಹಾನಿ ಆಗುತ್ತಿದೆ ಎಂಬುದು ಸರ್ಕಾರದ ಗಮನಕ್ಕೆ ಬಂದಿದ್ದು, ಇದರ ನಿಯಂತ್ರಣಕ್ಕೆ ಈಗಾಗಲೇ ಅಗತ್ಯ ಕ್ರಮ ವಹಿಸಲಾಗಿದೆ. ಬಜೆಟ್ ನಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಹೆಚ್ಚನ…

Read More

ಬೆಂಗಳೂರು: ಬೆಂಗಳೂರಿನ ಡಬಲ್ ರೋಡ್ನಲ್ಲಿ ಇರುವ ಎಚ್‌ಸಿಜಿ ಕ್ಯಾನ್ಸರ್ ಸೆಂಟರ್ ಇತ್ತೀಚೆಗೆ ಮ್ಯೂಸಿನಸ್‌ನಿಂದ ಬಳಲುತ್ತಿರುವ 40 ವರ್ಷದ ವ್ಯಕ್ತಿಗೆ ಹೈಪರ್‌ಥರ್ಮಿಕ್ ಇಂಟ್ರಾ ಪೆರಿಟೋನಿಯಲ್ ಕಿಮೋಥೆರಪಿ (ಎಚ್‌ಐಪಿಇಸಿ) ವಿಧಾನದೊಂದಿಗೆ ವಿಶಿಷ್ಟವಾದ ಸೈಟೋರೆಡಕ್ಟಿವ್ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಈ ರೀತಿಯ ಕ್ಯಾನ್ಸರ್ ಒಳಪದರವನ್ನು ರೂಪಿಸುವ ಜೀವಕೋಶಗಳಿಂದ ಬೆಳೆಯುತ್ತದೆ. ಸೈಟೋರೆಡಕ್ಟಿವ್ ಶಸ್ತ್ರಚಿಕಿತ್ಸೆಯು ಹೊಟ್ಟೆಯಲ್ಲಿನ ಅಂಗಗಳಲ್ಲಿ ಬೆಳೆಯುವ ಕ್ಯಾನ್ಸರ್ ಕೋಶಗಳನ್ನು ತೆಗೆದುಹಾಕುವ ವಿಧಾನವಾಗಿದೆ, HIPEC ಸಾಮಾನ್ಯವಾಗಿ ಉದರದ ಕ್ಯಾನ್ಸರ್‌ಗಳಿಗೆ ಚಿಕಿತ್ಸೆ ನೀಡಲು ಬಳಸುವ ಒಂದು ವಿಧಾನವಾಗಿದೆ, ಅದು ಮೂಲ ಅಂಗವನ್ನು ಮೀರಿ ಹರಡಿ, ಪೆರಿಟೋನಿಯಲ್ ಮೇಲ್ಮೈ ಹೊಟ್ಟೆಯನ್ನು ಆವರಿಸುತ್ತದೆ. ಎರಡೂ ಕಾರ್ಯವಿಧಾನಗಳ ಸಂಯೋಜನೆಯನ್ನು ಬೆಂಗಳೂರಿನ ಡಬಲ್ ರೋಡ್ನಲ್ಲಿ ಇರುವ ಎಚ್‌ಸಿಜಿ ಕ್ಯಾನ್ಸರ್ ಸೆಂಟರ್ ಹಿರಿಯ ಸರ್ಜಿಕಲ್‌ ಆಂಕೋಲಾಜಿಸ್ಟ್‌ ಡಾ. ಪಂಪನಗೌಡ ಎಸ್.ಕೆ.ಎಂ. ಅವರು ಅದ್ಭುತವಾಗಿ ಬಳಸಿಕೊಂಡಿದ್ದಾರೆ. ನಗರದಲ್ಲಿ 40 ವರ್ಷದ ಪೊಲೀಸ್ ಇಲಾಖೆ ಉದ್ಯೋಗಿ ತೇಜಸ್ ಎಸ್ (ಹೆಸರು ಬದಲಾಯಿಸಲಾಗಿದೆ) ಕಳೆದ ಎರಡು ತಿಂಗಳಿನಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಅವರು ತಿಂದ ಕೂಡಲೇ ಹೊಟ್ಟೆ ತುಂಬಿದಂತಾಯಿತು ಅಥವಾ ಉಬ್ಬಿದ…

Read More

ಬೆಂಗಳೂರು: ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರದ ಒಂದು ವರ್ಷದ ಅವಧಿಯನ್ನು ಅಸಮರ್ಥ ಸಂಪುಟ, ಅಭಿವೃದ್ಧಿಶೂನ್ಯ ಸರಕಾರ ಎಂದು ವಿಶ್ಲೇಷಿಸಬಹುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನೀಲ್ ಕುಮಾರ್ ಅವರು ತಿಳಿಸಿದರು. ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರ ಹೋಟೆಲ್ ಜಿ.ಎಂ. ರಿಜಾಯ್ಸ್ ನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆ ಮುಗಿದು ಸರಕಾರ ರಚನೆಯಾಗಿ ಒಂದು ವರ್ಷ ಮುಗಿಯುತ್ತಿದೆ. ಗೊತ್ತುಗುರಿ ಇಲ್ಲದ ಆಡಳಿತವನ್ನು ಕರ್ನಾಟಕದ ಜನತೆ ಕಳೆದ ಒಂದು ವರ್ಷದಲ್ಲಿ ನೋಡಿದ್ದಾರೆ. ಅಭಿವೃದ್ಧಿ ಶೂನ್ಯ ಸರಕಾರ ಇದು ಎಂದು ಟೀಕಿಸಿದರು. ಈ ಒಂದು ವರ್ಷದ ಅವಧಿಯಲ್ಲಿ ಯಾವ ಯೋಜನೆಗೆ ಅನುದಾನ ಕೊಟ್ಟಿದ್ದಾರೆ ಎಂಬ ಮಾಹಿತಿಯನ್ನು ಸರಕಾರ ಬಿಡುಗಡೆ ಮಾಡಬೇಕು. ಸ್ಥಳೀಯ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಯಾವ ಯೋಜನೆಗಳಿಗೆ, ಎಷ್ಟು ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನ ಕೊಟ್ಟಿದ್ದಾರೆ ಎಂದು ಸರಕಾರ ಬಹಿರಂಗಪಡಿಸಿದರೆ ಸಾಕು ಎಂದು ವ್ಯಂಗ್ಯವಾಗಿ ನುಡಿದರು. ಇಂಥ ಅಭಿವೃದ್ಧಿಶೂನ್ಯ ಆಡಳಿತ, ಸರಕಾರವನ್ನು ಕರ್ನಾಟಕದ ಜನತೆ ಯಾವತ್ತೂ ನೋಡಿರಲಿಲ್ಲ.…

Read More

ಬೆಂಗಳೂರು: ವಿಮಾನ ನಿಲ್ದಾಣ ರಸ್ತೆಯಲ್ಲಿ ಗಂಟೆಗೆ 80 ಕಿ.ಮೀ ವೇಗದ ಮಿತಿಯನ್ನು ಮೀರುವ ಚಾಲಕರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಪ್ರಕರಣ ದಾಖಲಿಸಲಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ಗಮನದಲ್ಲಿಟ್ಟುಕೊಂಡು, ವಿಶೇಷವಾಗಿ ಚಾಲಕರು/ ಸವಾರರ ಅತಿಯಾದ ವೇಗದಿಂದಾಗಿ ಮತ್ತು ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು, ಅತಿ ವೇಗದ ಸಂಚಾರ ಉಲ್ಲಂಘನೆಗಳನ್ನು ಸ್ವಯಂಚಾಲಿತವಾಗಿ ಪತ್ತೆಹಚ್ಚಲು ಮತ್ತು ದಂಡ ವಿಧಿಸಲು ವಿಮಾನ ನಿಲ್ದಾಣ ರಸ್ತೆಯ ಉದ್ದಕ್ಕೂ ಸ್ಪೀಡ್ ಟ್ರ್ಯಾಪ್ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ (ಬೆಂಗಳೂರು ಸಂಚಾರ) ಎಂ.ಎನ್.ಅನುಚೇತ್ ತಿಳಿಸಿದ್ದಾರೆ. ವಿಮಾನ ನಿಲ್ದಾಣ ರಸ್ತೆಯಲ್ಲಿ ವೇಗದ ಮಿತಿ ಗಂಟೆಗೆ 80 ಕಿ.ಮೀ. ಮಿತಿಯನ್ನು ಮೀರುವವರಿಗೆ ಅತಿಯಾದ ಸಂಚಾರ ಉಲ್ಲಂಘನೆಗಾಗಿ ದಂಡ ವಿಧಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶೇ.9ರಷ್ಟು ಅಪಘಾತಗಳು ವಿಮಾನ ನಿಲ್ದಾಣ ರಸ್ತೆಯಿಂದ ಸಂಭವಿಸುತ್ತಿವೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎಲಿವೇಟೆಡ್ ಎಕ್ಸ್ ಪ್ರೆಸ್ ವೇ (ಬಳ್ಳಾರಿ ರಸ್ತೆ) ನಗರದ ಅತ್ಯಂತ ಅಪಘಾತ ಪೀಡಿತ ರಸ್ತೆಗಳಲ್ಲಿ…

Read More

ಪ್ರತಿಯೊಬ್ಬರು ತಮ್ಮ ಆಸೆಗಳನ್ನು ಈಡೇರಿಸಿಕೊಳ್ಳಲು ತುಂಬಾ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಕೃಷಿಯನ್ನು ಮಾಡುತ್ತಾ ಕೆಲವು ಜನರು ಅದರ ಫಲ ಸರಿಯಾಗಿ ಹೊಂದದೆ ಬಳಲುತ್ತಿದ್ದಾರೆ. ಈ ಸಮಯದಲ್ಲಿ ಜನರು ದಿಕ್ಕು ತೋಚದೆ ದೇವರಲ್ಲಿ ಮೊರೆ ಹೋಗುತ್ತಾರೆ. ಭಗವಂತನು ಯಾವುದಾದರೂ ಒಂದು ದಾರಿಯನ್ನು ತೋರಿಸುತ್ತಾನೆ ಎಂಬ ಬಲವಾದ ನಂಬಿಕೆ ಹಲವಾರು ಜನರಲ್ಲಿ ಇರುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ,…

Read More