Subscribe to Updates
Get the latest creative news from FooBar about art, design and business.
Author: kannadanewsnow09
ತುಮಕೂರು: ಜಿಲ್ಲೆಯಲ್ಲಿ ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ನಾಳೆ ತುಮಕೂರು ಜಿಲ್ಲೆ ಬಂದ್ ಗೆ ಕರೆ ನೀಡಲಾಗಿದೆ. ನಾಳಿನ ತುಮಕೂರು ಬಂದ್ ಗೆ ಹೋರಾಟ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದಾವೆ. ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಹೋರಾಟ ಸಮಿತಿಯಿಂದ ಬಂದ್ ಗೆ ಕರೆ ನೀಡಲಾಗಿದೆ. ಇದಕ್ಕೆ ರೈತಪರ, ಕನ್ನಡಪರ ಸಂಘಟನೆಗಳು, ವಕೀಲರ ಸಂಘ, ಹೋಟೆಲ್ ಅಸೋಷಿಯೇಷನ್ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ನೀಡಿದ್ದಾವೆ. ನಾಳೆ ಬೆಳಿಗ್ಗೆ 10 ಗಂಟೆಗೆ ಟೌನ್ ಹಾಲ್ ನಿಂದ ಪ್ರತಿಭಟನೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿಭಟನಾ ಕಾರರು ತೆರಳಲಿದ್ದಾರೆ. ತುಮಕೂರು ಜಿಲ್ಲೆಯ 10 ತಾಲ್ಲೂಕುಗಳಲ್ಲೂ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗೋ ಸಾಧ್ಯತೆ ಇದೆ. ಅದರಲ್ಲೂ ಹೇಮಾವತಿ ಲಿಂಕ್ ನಾಲಾ ವ್ಯಾಪ್ತಿಯ ಗುಬ್ಬಿ, ತುರುವೇಕೆರೆ ತಾಲೂಕು ಹಾಗೂ ತುಮಕೂರು ನಗರದಲ್ಲಿ ನಾಳೆಯ ಬಂದ್ ಗೆ ಅತಿಹೆಚ್ಚು ಬೆಂಬಲ ವ್ಯಕ್ತವಾಗೋ ಸಾಧ್ಯತೆ ಇದೆ. ನಾಳೆ ತುಮಕೂರು ನಗರ ಸೇರಿದಂತೆ 10 ತಾಲ್ಲೂಕಿನಲ್ಲಿ ಹೇಮಾವತಿ ಲಿಂಕ್ ವಿರೋಧಿಸಿ ಬಂದ್…
ಬೆಂಗಳೂರು: ನಟಿ ಸಂಜನಾ ಗಲ್ರಾನಿ ವಿರುದ್ಧ ದಾಖಲಾಗಿದ್ದಂತ ಡ್ರಗ್ಸ್ ಪ್ರಕರಣದಲ್ಲಿ ಈಗ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅದೇ ಅವರ ವಿರುದ್ಧ ದಾಖಲಾಗಿದ್ದಂತ ಎಫ್ಐಆರ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ. ನಟಿ ಸಂಜನಾ ಗಲ್ರಾನಿ ಅವರು ತಮ್ಮ ವಿರುದ್ಧ ದಾಖಲಾಗಿದ್ದಂತ ಡ್ರಗ್ಸ್ ಪ್ರಕರಣವನ್ನು ರದ್ದುಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ ಏಕ ಸದಸ್ಯ ನ್ಯಾಯಪೀಠವು, ಅವರ ವಿರುದ್ಧದ ಎಫ್ಐಆರ್ ರದ್ದುಗೊಳಿಸಿ ಆದೇಶಿಸಿದೆ. ಅಂದಹಾಗೇ 2020ರ ಸೆಪ್ಟೆಂಬರ್ ನಲ್ಲಿ ನಟಿ ಸಂಜನಾ ಗಲ್ರಾಣಿ ವಿರುದ್ಧ ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ದಾಳಿ ನಡೆಸಿ, ಬಂಧಿಸಿತ್ತು. ಆ ಬಳಿಕ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಇಂತಹ ಎಫ್ಐಆರ್ ಅನ್ನು ಹೈಕೋರ್ಟ್ ಇಂದು ರದ್ದುಗೊಳಿಸಿ, ಬಿಗ್ ರಿಲೀಫ್ ನೀಡಿದೆ. https://kannadanewsnow.com/kannada/here-are-the-highlights-of-todays-revenue-minister-krishna-byre-gowdas-progress-review-meeting/ https://kannadanewsnow.com/kannada/state-government-appoints-gram-panchayat-secretaries-as-deputy-registrars-of-births-and-deaths/ https://kannadanewsnow.com/kannada/i-will-not-run-away-from-channapatna-for-power-dk-shivakumar/
ಕಲಬುರಗಿ : ಈ ವರ್ಷದ ಮಾನ್ಸೂನ್ನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದ್ದು, ಕೆಲವು ತಾಲೂಕುಗಳಲ್ಲಿ ಅವಘಡಗಳು ಸಂಭವಿಸುವ ಸಾಧ್ಯತೆಗಳಿವೆ. ಪ್ರತಿಯೊಂದು ಜೀವವೂ ಮುಖ್ಯವಾಗಿದ್ದು, ಪಂಚಾಯತ್ ಮಟ್ಟದಿಂದಲೂ ಎಲ್ಲಾ ಅಧಿಕಾರಿಗಳೂ ಮುಂಜಾಗ್ರತಾ ಕ್ರಮವಹಿಸಬೇಕು. ಯಾರ ಮೇಲೂ ಬೊಟ್ಟು ತೋರಿಸದೆ ವ್ಯಯಕ್ತಿಕ ಜವಾಬ್ದಾರಿ ಅರಿತು ಕೆಲಸ ನಿರ್ವಹಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು. ಕಲಬುರಗಿ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ಕಲಬುರಗಿ ವಿಭಾಗದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, “ಕಲಬುರಗಿ ಸೇರಿದಂತೆ ಈ ಕಂದಾಯ ವಿಭಾಗದ ಹಲವು ತಾಲೂಕುಗಳಲ್ಲಿ ಈಗಾಗಲೇ ಉತ್ತಮ ಮಳೆಯಾಗಿದೆ. ಮುಂದಿನ ದಿನಗಳಲ್ಲೂ ಹೆಚ್ಚಿನ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ವರದಿ ನೀಡಿದೆ. ಹೀಗಾಗಿ ನದಿಪಾತ್ರದ ಕೆಲ ಗ್ರಾಮಗಳಲ್ಲಿ ಅವಘಡಗಳು ಸಂಭವಿಸುವ ಸಾಧ್ಯತೆ ಇದ್ದು, ಅಧಿಕಾರಿಗಳು ಅವಘಡ ಸಂಭವಿಸುವ ಮುನ್ನ ಮುಜಾಗ್ರತೆ ವಹಿಸಬೇಕು. ಮಳೆ ಬೀಳುವ ಪ್ರದೇಶಗಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕು. ಪ್ರತಿಯೊಂದು ಜೀವವೂ ಮುಖ್ಯವಾಗಿದ್ದು, ಎಲ್ಲಾ ಜೀವಗಳನ್ನೂ ಉಳಿಸುವ ನಿಟ್ಟಿನಲ್ಲಿ ಶ್ರಮವಹಿಸಬೇಕು” ಎಂದರು.…
ಬೆಂಗಳೂರು: ಕಂದಾಯ ಇಲಾಖೆಯು ಎಲ್ಲಾ ಆಯಾಮದಿಂದ ಡಿಜಿಟಲಿಕರಣಕ್ಕೆ ಮುಂದಾಗಿದೆ. ಈಗಾಗಲೆ ಇ-ಕಚೇರಿ ಅನುಷ್ಠಾನದಲ್ಲಿ ಶೇ.80ರಷ್ಟು ಪ್ರಗತಿ ಸಾಧಿಸಿದೆ. ಭೂಸುರಕ್ಷಾ ಯೋಜನೆಯಡಿ ಕಳೆದ ಫೆಬ್ರವರಿಯಲ್ಲಿ ರಾಜ್ಯದ 31 ತಾಲೂಕಾ ಕಚೇರಿಯಲ್ಲಿ ಪ್ರಾಯೋಗಿಕವಾಗಿ ರೆಕಾರ್ಡ್ ರೂಂ ದಾಖಲೀಕರಣ ಕಾರ್ಯ ಪ್ರಾರಂಭಿಸಿದ್ದು, ಇದೂವರೆಗೆ 3 ಕೋಟಿ ದಾಖಲೆ ಸ್ಕ್ಯಾನಿಂಗ್ ಮಾಡಲಾಗಿದೆ. ಮುಂದಿನ ಒಂದು ತಿಂಗಳಿನಲ್ಲಿ ರಾಜ್ಯದ ಉಳಿದ ತಾಲೂಕಿನಲ್ಲೂ ಇದಕ್ಕೆ ಚಾಲನೆ ನೀಡಲಾಗುವುದು ಎಂದು ಸಚಿವ ಕೃಷ್ಣಬೈರೇಗೌಡ ಅವರು ಮಾಹಿತಿ ನೀಡಿದರು. ಕಲಬುರಗಿ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ಕಲಬುರಗಿ ವಿಭಾಗದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ದಾಖಲೆಗಳ ಡಿಜಿಟಲೀಕರಣಕ್ಕಾಗಿ ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಗ್ರಾಮ ನಿರೀಕ್ಷಕರಿಗೆ ಲ್ಯಾಪಟಾಪ್ ವಿತರಿಸಲಾಗುತ್ತಿದ್ದು, ಅವರು ಹಳ್ಳಿಯಲ್ಲಿಯೆ ಕುಳಿತು ಕೆಲಸ ಮಾಡಬಹುದು. ಕಂದಾಯ ಕೋರ್ಟ್ ಪ್ರಕರಣಗಳ ಸ್ಥಿತಿಗತಿ ಅರಿಯಲು ಆರ್.ಸಿ.ಸಿ.ಎಂ.ಎಸ್.(ರೆವೆನ್ಯೂ ಕೋರ್ಟ್ ಕೇಸ್ ಮ್ಯಾನೇಜಮೆಂಟ್ ಸಿಸ್ಟಮ್) ತಂತ್ರಾಂಶ ಅಭಿವೃದ್ಧಿಪಡಿಸಿದೆ. ಒಟ್ಟಾರೆ 2025ರ ಅಂತ್ಯಕ್ಕೆ ಕಂದಾಯ ಇಲಾಖೆಯನ್ನು ಸಂಪೂರ್ಣವಾಗಿ ಡಿಜಿಟಲೀಕರಣ ಮಾಡಲಾಗುವುದು. ಆ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳೂ ಸಹಕರಿಸಬೇಕು ಎಂದು …
ಬೆಂಗಳೂರು: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಛತ್ರಪತಿ ಶಿವಾಜಿ ಮಹಾರಾಜರ ರಾಜಹಂಸಗಡ ಕೋಟೆಯ ಅಭಿವೃದ್ಧಿಗೆ 50 ಲಕ್ಷ ರೂಪಾಯಿ ಅನುದಾನ ನೀಡಲು ಪ್ರವಾಸೋದ್ಯಮ ಸಚಿವರಾದ ಎಚ್ ಕೆ ಪಾಟೀಲ್ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್ ಅವರನ್ನು ಭೇಟಿ ಮಾಡಿ, ರಾಜಹಂಸಗಡ ಕೋಟೆಯ ಅಭಿವೃದ್ಧಿಗೆ ಪ್ರತಿ ವರ್ಷ ಒಂದು ಕೋಟಿ ರೂಪಾಯಿ ಅನುದಾನ ನೀಡುವಂತೆ ಸಚಿವರು ಮನವಿ ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಪ್ರವಾಸೋದ್ಯಮ ಸಚಿವರಾದ ಎಚ್.ಕೆ. ಪಾಟೀಲ್ ಅವರು ಛತ್ರಪತಿ ಶಿವಾಜಿ ಮಹಾರಾಜರ ರಾಜಹಂಸಗಡ ಕೋಟೆಯ ಅಭಿವೃದ್ಧಿಗೆ 50 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲು ಒಪ್ಪಿಗೆ ನೀಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. https://kannadanewsnow.com/kannada/on-the-spot-solution-to-peoples-difficulties-dks-issues-stern-warning-to-officials-taking-bribes/ https://kannadanewsnow.com/kannada/i-will-not-run-away-from-channapatna-for-power-dk-shivakumar/
ಚನ್ನಪಟ್ಟಣ : “ವಿವಿಧ ಸಮಸ್ಯೆ ಹೊತ್ತು ಬಂದವರಿಗೆ ಸ್ಥಳದಲ್ಲೇ ಪರಿಹಾರ. ರೈತರ ಜಮೀನುಗಳಿಗೆ ಖಾತೆ ಮಾಡಿಕೊಡಲು ಒಂದು ರೂಪಾಯಿ ಲಂಚ ಮುಟ್ಟುವಂತಿಲ್ಲ ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ” – ಇದು ಚನ್ನಪಟ್ಟಣದ ಜಿಲ್ಲಾ ಪಂಚಾಯ್ತಿ ಮಟ್ಟದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ “ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದ ಒಟ್ಟು ಚಿತ್ರಣ. ಕೋಡಂಬಳ್ಳಿ ಹಾಗೂ ಅಕ್ಕೂರು ಜಿಲ್ಲಾ ಪಂಚಾಯ್ತಿ ಮಟ್ಟದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಕ್ಷೇತ್ರದ ಜನರ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ವ್ಯಕ್ತವಾದ ಪ್ರಮುಖ ಸಮಸ್ಯೆಗಳಿಗೆ ಶಿವಕುಮಾರ್ ಅವರು ಸ್ಪಂದಿಸಿದ ರೀತಿ ಹೀಗಿತ್ತು: ಜೆ. ಬ್ಯಾಡರಹಳ್ಳಿ ಪಂಚಾಯತಿ ವ್ಯಾಪ್ತಿಯಲ್ಲಿ ಖಾತೆ ಮಾಡಿಕೊಡಲು 15- 20 ಸಾವಿರ ಲಂಚ ತೆಗೆದುಕೊಳ್ಳುತ್ತಿದ್ದಾರೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷೆ ಪೂರ್ಣಿಮಾ ಅವರು ದೂರು ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು “ಲಂಚ ಪಡೆಯುವ ಪಿಡಿಓ, ಗ್ರಾಮ ಲೆಕ್ಕಿಗರು ಬೇರೆ ಜಾಗ ಹುಡುಕಿಕೊಳ್ಳಿ. ನನ್ನ ಕ್ಷೇತ್ರದ ಜನರಿಗೆ ತೊಂದರೆ ಆಗಬಾರದು”…
ಮಂಗಳವಾರದ ಸಂಕಷ್ಟಹರ ಚತುರ್ಥಿ ದಿನದಂದು ಈ 3 ಗಣಪತಿ ತಾಂತ್ರಿಕ ಮಂತ್ರ ಪಠಿಸಿದರೆ ಗಣಪತಿ ಒಲಿಯುದು ಇಷ್ಟಾರ್ಥ ಪೂರ್ಣ..! ಅದೃಷ್ಟದ ಮಂತ್ರಗಳಾವುವು..? ಗಣಪತಿ ಅಥರ್ವಶೀರ್ಷ ಮಂತ್ರವನ್ನು ಪಠಿಸಿ ಅದೃಷ್ಟವು ಒಲಿಯುದು ಇಷ್ಟಾರ್ಥ ಕಾರ್ಯ ಪೂರ್ಣ ಸಿದ್ದಿಯಾಗಲಿದೆ..! ಬುಧವಾರ ಗಣೇಶನನ್ನು ಅಥವಾ ಗಣಪತಿ ದೇವರನ್ನು ಸಂಪೂರ್ಣ ವಿಧಿ – ವಿಧಾನಗಳ ಮೂಲಕ ಪೂಜಿಸಲಾಗುತ್ತದೆ. ಶುಕ್ರವಾರ ಈ ಮಂತ್ರಗಳನ್ನು ಜಪಿಸುವುದರಿಂದ ವ್ಯಕ್ತಿಯು ತನ್ನ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ಪಡೆಯುತ್ತಾನೆ ಮತ್ತು ಅವನ ಎಲ್ಲಾ ದುಃಖಗಳನ್ನು ತೆಗೆದುಹಾಕಲಾಗುತ್ತದೆ. ಆ 3 ಮಂತ್ರಗಳು ಯಾವುವು..? ಬುಧವಾರ ಈ 3 ಗಣಪತಿ ಮಂತ್ರ ಪಠಿಸಿದರೆ ಗಣಪತಿ ಒಲಿಯುವನು..! ಮಂತ್ರಗಳಾವುವು..? ಗಣೇಶನನ್ನು ಯಾರು ಸಂತೋಷಗೊಳಿಸುತ್ತಾರೋ ಅವರ ನೋವುಗಳನ್ನು ಗಣೇಶನು ದೂರಾಗಿಸುತ್ತಾನೆ ಮತ್ತು ಅವರ ಆಸೆಗಳು ಪರಿಪೂರ್ಣಗೊಳ್ಳುವಂತೆ ಮಾಡುತ್ತಾನೆ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ…
ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರನ್ನು ಉಪ ಲೋಕಾಯುಕ್ತರನ್ನಾಗಿ ರಾಜ್ಯ ಸರ್ಕಾರ ನೇಮಿಸಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ.ವೀರಪ್ಪ ಅವರನ್ನು ನೇಮಕ ಮಾಡಲಾಗಿದೆ ಅಂತ ತಿಳಿಸಿದೆ. https://kannadanewsnow.com/kannada/another-important-announcement-by-jiomart-to-promote-local-artisans-weavers/ https://kannadanewsnow.com/kannada/state-government-appoints-gram-panchayat-secretaries-as-deputy-registrars-of-births-and-deaths/
ಮುಂಬೈ : ರಿಲಯನ್ಸ್ ರೀಟೇಲ್ ನ ಇ-ಮಾರ್ಕೆಟ್ ಪ್ಲೇಸ್ ಅಂಗವಾದ ಜಿಯೋಮಾರ್ಟ್ ನಿಂದ ಸೋಮವಾರ (ಜೂನ್ 24) ಮಹತ್ತರವಾದ ಸಹಭಾಗಿತ್ವವನ್ನು ಘೋಷಣೆ ಮಾಡಲಾಗಿದೆ. ಸಣ್ಣ- ಪ್ರಮಾಣದ ಮಾರಾಟಗಾರರು, ಕುಶಲಕರ್ಮಿಗಳು ಹಾಗೂ ಸಾಂಪ್ರದಾಯಿಕರರು ಒಳಗೊಂಡಂತೆ ಅವರ ಬೆಳವಣಿಗೆಗೆ ಸಹಕರಿಸಬೇಕು ಹಾಗೂ ಅವರನ್ನು ಸಬಲಗೊಳಿಸಬೇಕು ಎಂಬ ದೃಷ್ಟಿಕೋನದ ಹಿನ್ನೆಲೆಯಲ್ಲಿ JASCOLAMPF ಹಾಗೂ JHARCRAFT ಜೊತೆಗೆ ಸಹಭಾಗಿತ್ವ ವಹಿಸಲಾಗಿದೆ. ಅಂದ ಹಾಗೆ ಮೊದಲನೆಯದು ಜಾರ್ಖಂಡ್ ನ ರಾಜ್ಯ ಸರ್ಕಾರಿ ಎಂಪೋರಿಯಂ ಹಾಗೂ ಎರಡನೆಯದು ಜಾರ್ಖಂಡ್ ರಾಜ್ಯ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುವಂಥದ್ದು. ಜಾರ್ಖಂಡ್ ನಲ್ಲಿನ ಕುಶಲಕರ್ಮಿಗಳ ಬದುಕಿನಲ್ಲಿ ಬಹುದೊಡ್ಡ ಬದಲಾವಣೆಯನ್ನು ತರುವ ನಿಟ್ಟಿನಲ್ಲಿ ಈ ಜಂಟಿ ಉಪಕ್ರಮವು ಬಹಳ ದೊಡ್ಡ ಮೈಲುಗಲ್ಲಾಗಿದೆ. ಮತ್ತು ಇದರೊಂದಿಗೆ ಜಿಯೋಮಾರ್ಟ್ ಮೂಲಕ ದೇಶದಾದ್ಯಂತ ತಲುಪುವುದಕ್ಕೆ ಅನುಕೂಲ ಆಗುತ್ತದೆ. ಜಾರ್ಖಂಡ್ ನ ಪಟ್ಟಣ ಮತ್ತು ನಗರಗಳಾದ ಗುಮ್ಲಾ, ಸರೈಕೆಲಾ ಹಾಗೂ ಪಲಮೌ ಸೇರಿದಂತೆ ಇತರೆಡೆಗಳಿಂದ ಅಪಾರ ಸಂಖ್ಯೆಯ ಕುಶಲಕರ್ಮಿಗಳನ್ನು ಜಿಯೋಮಾರ್ಟ್ ವೇದಿಕೆಗೆ ಕರೆತರುವಲ್ಲಿ ಈ ಸಹಯೋಗ ನೆರವಾಗಿದೆ. ಇದೀಗ ಈ ಕುಶಲಕರ್ಮಿಗಳು…
ಚನ್ನಪಟ್ಟಣ : “ಯಾರು ಏನೇ ಟೀಕೆ ಮಾಡಲಿ. ನಾನು ಚನ್ನಪಟ್ಟಣ ಕ್ಷೇತ್ರದ ಜನರ ಋಣ ತೀರಿಸುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೋಡಂಬಳ್ಳಿ ಹಾಗೂ ಅಕ್ಕೂರು ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿ ಸರ್ಕಾರದ ವತಿಯಿಂದ ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಲ್ಲಿ ಸೋಮವಾರ ಜನರ ಅಹವಾಲು ಸ್ವೀಕರಿಸಿ ಮಾತನಾಡಿದರು. “ಇಲ್ಲಿ ಬಂದಿರುವ ಸಾವಿರಾರು ಜನ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅರ್ಜಿ ಸಲ್ಲಿಸಲು ಮುಗಿ ಬೀಳುತ್ತಿರುವುದನ್ನು ನೋಡಿದರೆ, ಅವರ ಪರಿಸ್ಥಿತಿ ಅರ್ಥವಾಗುತ್ತದೆ. ನನ್ನ ಬಗ್ಗೆ ಯಾರು ಏನೇ ಟೀಕೆ ಮಾಡಲಿ, ನನಗೆ ಈ ಜನರ ಸಮಸ್ಯೆಗೆ ಪರಿಹಾರ ನೀಡುವುದಷ್ಟೇ ಮುಖ್ಯ ಎಂದರು. ಈ ಹಿಂದೆ ನಾನು ಈ ಭಾಗದ ಶಾಸಕನಾಗಿದ್ದಾಗಲೂ ಅಧಿಕಾರಿಗಳನ್ನು ಹಳ್ಳಿಗಳಿಗೆ ಕರೆದುಕೊಂಡು ಹೋಗಿ ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡುವ ಕೆಲಸ ಮಾಡುತ್ತಿದ್ದೆ. ಈಗಲೂ ಅದೇ ಕೆಲಸ ಮುಂದುವರಿಸುತ್ತಿದ್ದೇನೆ. ಈ ಹಿಂದೆ ಇದ್ದ ಜನಪ್ರತಿನಿಧಿಗಳು ಈ ಕೆಲಸ ಮಾಡಬಹುದಾಗಿತ್ತು. ಆದರೆ ಮಾಡಲಿಲ್ಲ. ಯಾಕೆ ಮಾಡಲಿಲ್ಲ ಎಂದು ನಾನು…