Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಟ ಚೇತನ್ ಚಂದ್ರ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಕಗ್ಗಲಿಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ನಟ ಚೇತನ್ ಚಂದ್ರ ಮೇಲೆ ಹಲ್ಲೆ ಮಾಡಿದ್ದ ಸಂಬಂಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಿರಣ್ ಮತ್ತು ಹರೀಶ್ ಎಂಬುದಾಗಿ ತಿಳಿದು ಬಂದಿದೆ. ಮತ್ತೊಂದೆಡೆ ನಟ ಚೇತನ್ ಚಂದ್ರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ಐಶ್ವರ್ಯಾ ಹಾಗೂ ಪತಿ ಕಿರಣ್ ಮೇಲೆ ಹಲ್ಲೆ ಆರೋಪದಡಿ ಕಗ್ಗಲೀಪುರ ಪೊಲೀಸ್ ಠಾಣೆಗೆ ಐಶ್ವರ್ಯ ದೂರು ನೀಡಿದ್ದರು. ಈ ದೂರು ಆಧರಿಸಿ ನಟ ಚೇತನ್ ಚಂದ್ರ ಹಾಗೂ ಮತ್ತಿಬ್ಬರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ನಟ ಚೇತನ್ ಚಂದ್ರ ವಿರುದ್ಧ ಐಪಿಸಿ ಸೆಕ್ಷನ್ 323, 354 ಹಾಗೂ 34ರಡಿ ಕಗ್ಗಲಿಪುರ ಠಾಣೆಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಹಲ್ಲೆಗೊಳಗಾಗಿದ್ದಂತ ನಟ ಚೇತನ್ ಚಂದ್ರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. https://kannadanewsnow.com/kannada/i-have-not-done-anything-wrong-former-minister-hd-revanna/ https://kannadanewsnow.com/kannada/pornographic-video-case-sit-plans-to-issue-red-corner-notice-to-prajwal-revanna/
ಬೆಂಗಳೂರು: ಯಾವ ಕಾರಣಕ್ಕೂ ನಮ್ಮ ಸರ್ಕಾರವನ್ನು ಆಪರೇಷನ್ ಕಮಲ ಮಾಡಲು ಸಾಧ್ಯವಿಲ್ಲ. ಏಕೆಂದರೆ ಅವರು ಎನ್.ಡಿ. ಎ ಈ ಬಾರಿ ಸೋಲಲಿದೆ. ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ, ಮಹಾರಾಷ್ಟ್ರದಲ್ಲಿ ಆದಂತೆ ಆಪರೇಶನ್ ಕಮಲ ನಡೆಯಲಿದೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿದ ಅವರು ಅವರು, ಈಗಾಗಲೇ ಕಳೆದ ಒಂದು ವರ್ಷದಿಂದ ಇಂಥ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ ಇನ್ನೊಂದು ಬಾರಿ ಏಕೆ ಪ್ರಯತ್ನಿಸುತ್ತಾರೆ. ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ. ಮಹಾರಾಷ್ಟ್ರದಲ್ಲಿ ಆದಂತೆ ಆಗಲೂ ಸಾಧ್ಯವಿಲ್ಲ ಎಂದರು. ರಾಜಕೀಯ ಧೃವೀ ಕಾರಣವಾಗಬಹುದೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಗೆಲ್ಲಲಿದ್ದು ನಮ್ಮವರೇ ಪ್ರಧಾನಮಂತ್ರಿಯಾಗಲಿದ್ದಾರೆ ಎಂದರು. ನಮ್ಮ ಅಭ್ಯರ್ಥಿಗಳು ಗೆಲ್ಲಲ್ಲಿದ್ದಾರೆ ಪದವೀಧರರ ಕ್ಷೇತ್ರದಿಂದ ರಾಮೋಜಿ ಗೌಡ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಬಿ. ಟಿ.ಶ್ರೀನಿವಾಸ್…
ಬೆಂಗಳೂರು: ನಾನು ತಪ್ಪು ಮಾಡಿಲ್ಲ. ತಪ್ಪು ಮಾಡದೇ ಇದ್ರೂ ನನ್ನ ಜೈಲಿಗೆ ಕಳುಹಿಸಲಾಗಿದೆ ಅಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹತ್ತು ನಿಮಿಷ ಕಣ್ಣೀರಿಟ್ಟಿದ್ದಾರೆ. ಇಂದು ಪರಪ್ಪನ ಅಗ್ರಹಾರದಲ್ಲಿ ಶಾಸಕ ಜಿ.ಟಿ ದೇವೇಗೌಡ ಅವರು, ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರನ್ನು ಭೇಟಿಯಾಗಿ, ಚರ್ಚಿಸಿದರು. ಆ ಬಳಿಕ ಜೈಲಿನಿಂದ ಹೊರಬಂದಾಗ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಭೇಟಿಯಾಗಿ ಹೆಚ್.ಡಿ ರೇವಣ್ಣ ಅವರ ಕುಶಲೋಪರಿ ಚರ್ಚೆ ಮಾಡಿದೆ. ಈ ವೇಳೆಯಲ್ಲಿ ನಾನು ತಪ್ಪು ಮಾಡದಿರುವ ವಿಚಾರಕ್ಕೆ ಸಿಲುಕಿಸಿದ್ರು ಅಂತ 10 ನಿಮಿಷ ಕಣ್ಣೀರಿಟ್ಟರು ಎಂದರು. ತಪ್ಪು ಮಾಡಿದ್ರೆ ಜೈಲಿಗೆ ಹಾಕಲಿ. ಮಾಡದೇ ಇರೋ ತಪ್ಪಿಗೆ ಜೈಲಿಗೆ ಹಾಕಿದ್ದಾರೆ. ಹಳೇ ವಿಚಾರ ಮೆಲುಕು ಹಾಕಿದ್ರು. ಅವರಿಗೆ ಹಾಸನ ಅಭಿವೃದ್ಧಿಯದ್ದೇ ಚಿಂತೆ ಎಂದರು. ತಪ್ಪು ಮಾಡದಿದ್ರೂ ಜೈಲಿಗೆ ಹಾಕಿದ್ದಾರಲ್ಲ ಅಂತ ಕೊರಗಿದೆ. ನನಗೆ ಈಗಲೂ ಅಭಿವೃದ್ಧಿ ಕಾರ್ಯಗಳ ಬಗ್ಗೆಯೇ ಚಿಂತೆ. ನಾನು ಮಹಿಳೆಯ ಜೊತೆಗೆ ಮಾತನಾಡಿಯೇ 6 ವರ್ಷಗಳಾಗಿವೆ ಎಂದು…
ಬೆಂಗಳೂರು: ಶಾಸಕರಲ್ಲಿ ಅಭಿವೃದ್ಧಿ ವಿಚಾರವಾಗಿ ಅಸಮಾಧಾನ ಇರೋದು ನಿಜ. ಆದ್ರೇ ಅದೇ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ ಬೀಳುತ್ತೆ ಅನ್ನೋದು ಸುಳ್ಳಿ. 4 ವರ್ಷ ಕಾಂಗ್ರೆಸ್ ಸರ್ಕಾರ ಇರುತ್ತೆ. ಬೀಳೋ, ಬೀಳಿಸೋ ಮಾತೇ ಇಲ್ಲ ಎಂಬುದಾಗಿ ಪಿ ಡಬ್ಲ್ಯೂ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮುಖ್ಯಮಂತ್ರಿ ಕುರಿತಾಗಿ ನಮ್ಮ ನಮ್ಮಲ್ಲೇ ಜಗಳ ಇದೆ. ಅದು ಪಾರ್ಟಿಯಲ್ಲಿ ಇದೆ. ಮಹಾರಾಷ್ಟ್ರಕ್ಕೆ ಕರ್ನಾಟಕವನ್ನು ಹೋಲಿಕೆ ಮಾಡುವುದು ಬೇಡ. ಏಕನಾಥ ಶಿಂಧೆಗೆ ಮಾತನಾಡುವ ಸ್ವಾತಂತ್ರ್ಯವಿದೆ. ಮಾತನಾಡುತ್ತಾರೆ ಎಂಬುದಾಗಿ ತಿಳಿಸಿದರು. ಭಿನ್ನಮತ ಇದೆ ಅಂತ ಸರ್ಕಾರ ಬೀಳಿಸೋದಕ್ಕೆ ಆಗುತ್ತಾ ಎಂದು ಪ್ರಶ್ನಿಸಿದಂತ ಅವರು, ಶಾಸಕರ ಅಸಮಾಧಾನ ಇದೆ. ಅದಕ್ಕಾಗಿ ಸರ್ಕಾರ ಬೀಳುವುದಿಲ್ಲ. ಅಭಿವೃದ್ಧಿ, ವರ್ಗಾವಣೆ ಬಗ್ಗೆ ಸಮಸ್ಯೆ ಇದೆ. ಅದಕ್ಕೆ ಸರ್ಕಾರ ಬೀಳಲ್ಲ. ಅದು ಎಲ್ಲಾ ಸರ್ಕಾರದಲ್ಲೂ ಇದ್ದೇ ಇರೋದು. ಯಾವುದೇ ಕಾರಣಕ್ಕೂ 4 ವರ್ಷ ಕಾಂಗ್ರೆಸ್ ಸರ್ಕಾರ ಬೀಳುವುದಿಲ್ಲ. ಬೀಳಿಸೋದಕ್ಕೆ ಪ್ರಯತ್ನ ಪಟ್ರೆ ಅದು ಸಾಧ್ಯನೂ ಆಗಲ್ಲ ಅಂತ ಹೇಳಿದರು. https://kannadanewsnow.com/kannada/operation-nath-not-possible-in-karnataka-our-mlas-not-for-sale-siddaramaiah/…
ಬೆಂಗಳೂರು: ಮಹಾರಾಷ್ಟ್ರದಲ್ಲಿ ಆದಂತೆ ಕರ್ನಾಟಕಲ್ಲೂ ಆಪರೇಷನ್ ಆಗಲಿದೆ. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ ಎಂಬುದಾಗಿ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೇಳಿದ್ದರು. ಆದ್ರೇ ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಆಪರೇಷನ್ ನಾಥ ಸಾಧ್ಯವಿಲ್ಲ. ನಮ್ಮ ಶಾಸಕರು ಯಾರು ಮಾರಾಟಕ್ಕೆ ಇಲ್ಲ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮಹಾರಾಷ್ಟ್ರ ಸಿಎಂ ಭ್ರಮೆಯಲ್ಲಿ ಇದ್ದಾರೆ. ಈಗಾಗಲೇ ಆಪರೇಷನ್ ಮಾಡೋದಕ್ಕೆ ಪ್ರಯತ್ನ ಪಟ್ಟು ವಿಫಲವಾಗಿದೆ. ಈಗ ಮತ್ತೆ ಪ್ರಯತ್ನ ಮಾಡ್ತಾರೆ. ಆದರೇ ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಆಪರೇಷನ್ ಮಾಡೋಕೆ ಸಾಧ್ಯವಿಲ್ಲ ಎಂದರು. ಲೋಕಸಭಾ ಚುನಾವಣೆಯಲ್ಲಿ ನಾವು ಕರ್ನಾಟಕದಲ್ಲಿ 20 ಸೀಟು ಗೆಲ್ಲುತ್ತೇವೆ. ಅವರು ಸೋಲಲಿದ್ದಾರೆ. ಅದಕ್ಕೆ ಹೀಗೆ ಹತಾಶರಾಗಿ ಕಾಂಗ್ರೆಸ್ ಸರ್ಕಾರವನ್ನು ಬೀಳಿಸೋ ಹೇಳಿಕೆ ನೀಡುತ್ತಿದ್ದಾರೆ ಎಂಬುದಾಗಿ ಮಹಾರಾಷ್ಟ್ರ ಸಿಎಂ ಶಿಂಧೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿರುಗೇಟು ನೀಡಿದರು. https://kannadanewsnow.com/kannada/big-trouble-for-congress-government-in-karnataka-will-it-fall-after-lok-sabha-elections-maha-cms-hint/ https://kannadanewsnow.com/kannada/pornographic-video-case-sit-plans-to-issue-red-corner-notice-to-prajwal-revanna/
ಬೆಂಗಳೂರು: ಲೋಕಸಭಾ ಚುನಾವಣೆಯ ಬಳಿಕ ಕರ್ನಾಟಕ ಕಾಂಗ್ರೆಸ್ ಸರ್ಕಾರ ಇರಲ್ಲ. ಪತನವಾಗಲಿದೆ ಅಂತ ಅನೇಕ ರಾಜಕೀಯ ನಾಯಕರು ಈಗಾಗಲೇ ಹೇಳಿದ್ದಾರೆ. ಮತ್ತೆ ಈ ವಿಷಯ ಮುನ್ನೆಲೆಗೆ ಬಂದಿದ್ದು, ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಬಿಗ್ ಆಪತ್ತು ಎದುರಾಗಿದೆ. ಲೋಕಸಭಾ ಚುನಾವಣೆ ಬಳಿಕ ಪತನವಾಗಲಿದೆ ಅಂತ ಮಹಾರಾಷ್ಟ್ರ ಸಿಎಂ ಏನಾಂಥ ಶಿಂಧೆ ಸುಳಿವು ನೀಡಿದ್ದಾರೆ. ಹೌದು ಲೋಕಸಭಾ ಚುನಾವಣೆಯ ಬಳಿಕ ಕರ್ನಾಟಕ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ನಡೆಯೋ ಸಾಧ್ಯತೆ ಇದೆ. ಬಿಜೆಪಿ-ಜೆಡಿಎಸ್ ನಾಯಕರು ಜೂನ್ ಬಳಿಕ ರಾಜ್ಯ ಸರ್ಕಾರ ಪತನವಾಗಲಿದೆ ಅಂತ ಈಗಾಗಲೇ ಹೇಳಿಕೆ ನೀಡಿದ್ದಾರೆ. ಈ ನಡುವೆ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಅವರು ನೀಡಿರುವಂತ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಮಹಾರಾಷ್ಟ್ರ ಮಾದರಿಯಲ್ಲೇ ಕರ್ನಾಟಕದಲ್ಲೂ ಆಪರೇಷನ್ ನಡೆಯುವ ಸುಳಿವನ್ನು ಮಹಾ ಸಿಎಂ ಏಕನಾಥ ಶಿಂಧೆ ನೀಡಿದ್ದಾರೆ. ಸತಾರದಲ್ಲಿ ಮಾತನಾಡಿರುವಂತ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಪತನಕ್ಕೆ ತೆರೆಮರೆಯಲ್ಲಿ ಸರ್ಕಸ್ ನಡೆಯುತ್ತಿದೆ ಎಂಬುದಾಗಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ನಾನು ಇತ್ತೀಚೆಗೆ ಕರ್ನಾಟಕದ ಒಂದು ಸಭೆಗೆ…
ಜಾರ್ಖಂಡ್: ಜಾರ್ಖಂಡ್ ನ ಪಲಮು ಎಂಬಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜ್ಯ ರಾಜಧಾನಿ ರಾಂಚಿಯಿಂದ 190 ಕಿ.ಮೀ ದೂರದಲ್ಲಿರುವ ಮನತು ಪೊಲೀಸ್ ಠಾಣೆ ಪ್ರದೇಶದ ಸ್ಕ್ರ್ಯಾಪ್ ಡೀಲರ್ ಸ್ಥಳದಲ್ಲಿ ಸ್ಫೋಟ ಸಂಭವಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಲಮು ಸೇರಿದಂತೆ ನಾಲ್ಕು ಸ್ಥಾನಗಳಿಗೆ ಲೋಕಸಭಾ ಚುನಾವಣೆಯ ಮುನ್ನಾದಿನದಂದು ಈ ಘಟನೆ ನಡೆದಿದೆ. ಘಟನೆಯಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪಲಮು ಪೊಲೀಸ್ ವರಿಷ್ಠಾಧಿಕಾರಿ ರೀಷ್ಮಾ ರಮೇಸನ್ ಪಿಟಿಐಗೆ ತಿಳಿಸಿದ್ದಾರೆ. “ಬಾಂಬ್ ಸ್ಫೋಟದ ಸಾಧ್ಯತೆ ಸೇರಿದಂತೆ ಎಲ್ಲಾ ಕೋನಗಳಿಂದ ನಾವು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದೇವೆ” ಎಂದು ಅವರು ಹೇಳಿದರು.
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗೋ ವಿಶ್ವಾಸ ಹೊಂದಿದ್ದಾರೆ. ಇದೇ ಕಾರಣಕ್ಕಾಗಿ ತಮ್ಮ ಮುಂದಿನ ಸರ್ಕಾರದ 100 ದಿನಗಳ ಕಾರ್ಯಸೂಚಿಯನ್ನು ರಚಿಸಲು 10 ಸಮಿತಿಗಳನ್ನು ನಮೋ ರಚಿಸಿದ್ದಾರೆ. ದೇಶದಲ್ಲಿ ಇದೀಗ ಲೋಕಸಭಾ ಚುನಾವಣೆ ನಡೆಯುತ್ತಿದೆ. ಏತನ್ಮಧ್ಯೆ, ನಾಲ್ಕನೇ ಹಂತದ ಮತದಾನವು ಮೇ 13 ರ ಸೋಮವಾರ ನಡೆಯಲಿದೆ. ಲೋಕಸಭಾ ಚುನಾವಣೆಯ ಫಲಿತಾಂಶಕ್ಕೂ ಮುನ್ನವೇ ಪ್ರಧಾನಿ ಮೋದಿ ಮೂರನೇ ಅವಧಿಗೆ ತಯಾರಿ ಆರಂಭಿಸಿದ್ದಾರೆ. ಮುಂದಿನ 100 ದಿನಗಳ ಸರ್ಕಾರದ ಕಾರ್ಯಸೂಚಿಯನ್ನು ಜೂನ್ 4 ರಂದು ಫಲಿತಾಂಶಗಳು ಹೊರಬಂದ ಕೂಡಲೇ ಮಂತ್ರಿಮಂಡಲದ ಮೊದಲ ಸಭೆಯಲ್ಲಿ ಜಾರಿಗೆ ತರಲಾಗುವುದು. ಮೋದಿ ಪ್ರಸ್ತುತ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ. ಆದರೆ ಅವರು ತಮ್ಮ ಸರ್ಕಾರದ 100 ದಿನಗಳ ಕಾರ್ಯಸೂಚಿಯನ್ನು ಕಾರ್ಯಗತಗೊಳಿಸಲು ತಮ್ಮ ಉನ್ನತ ಕಾರ್ಯದರ್ಶಿಗಳ 10 ಸಮಿತಿಗಳನ್ನು ನೇಮಿಸಿದ್ದಾರೆ. ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಕೆಲಸದ ಕಾರ್ಯಸೂಚಿಯನ್ನು ಅಂತಿಮಗೊಳಿಸಲು ಕಾರ್ಯದರ್ಶಿಗಳ 10 ಗುಂಪುಗಳನ್ನು ರಚಿಸಲಾಗಿದೆ ಎಂದು ಸರ್ಕಾರಿ ಮೂಲಗಳು ಇಂಡಿಯಾ ಟುಡೇಗೆ ತಿಳಿಸಿವೆ. ಪ್ರಧಾನಿ…
ಪ್ರತಿಯೊಬ್ಬರ ಜೀವನದಲ್ಲಿ ಪ್ರಗತಿ ಬಹಳ ಮುಖ್ಯ. ಹೀಗಾಗಿ, ನಾವು ನಮ್ಮ ವ್ಯಾಪಾರ, ಕೆಲಸ ಅಥವಾ ಕುಟುಂಬದ ಆರ್ಥಿಕತೆಯಲ್ಲಿ ಪ್ರಗತಿಯನ್ನು ಸಾಧಿಸಿದಾಗ, ನಮಗೆ ತಿಳಿಯದೆ ಶತ್ರುಗಳು ಮತ್ತು ದೇಶದ್ರೋಹಿಗಳು ಸೃಷ್ಟಿಯಾಗುತ್ತಾರೆ. ಕನಿಷ್ಠ ನಾವು ನಮ್ಮ ಶತ್ರುಗಳನ್ನು ಒಂದು ರೀತಿಯಲ್ಲಿ ನಂಬಬಹುದು. ಆದರೆ ದೇಶದ್ರೋಹಿಗಳನ್ನು ಹುಡುಕುವುದು ತುಂಬಾ ಕಷ್ಟ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ…
ಬೆಂಗಳೂರು: ಅರವಿಂದ ಕೇಜ್ರಿವಾಲ್ ಬಹಳ ದಿನ ಜೈಲಲ್ಲಿದ್ದಿದ್ದರಿಂದ ಹುಚ್ಚರಂತೆ ವರ್ತಿಸುತ್ತಿದ್ದಾರೆ. ವಯಸ್ಸಿನ ಆಧಾರದ ಮೇಲೆ ಟಿಕೆಟ್ ನೀಡುವ ಕುರಿತು ಬಿಜೆಪಿಯಲ್ಲಿ ತೀರ್ಮಾನ ಕೈಗೊಂಡಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಡಿಯಾ ಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಅವರಿಗೆ ಗೊತ್ತಿಲ್ಲ. ಈಗಾಗಲೇ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿಯಾಗುವುದು ನಿಶ್ಚಿತವಾಗಿದೆ. 75 ವರ್ಷ ಕಳೆದವರಿಗೆ ಟಿಕೆಟ್ ನೀಡಲಾಗುತ್ತಿದೆ. ಟಿಕೆಟ್ ನೀಡುವುದಿಲ್ಲ ಎಂಬ ನಿರ್ಧಾರ ಪಕ್ಷದಲ್ಲಿ ಆಗಿಲ್ಲ. ಇದನ್ನು ಕಾಂಗ್ರೆಸ್ನವರೇ ಸೃಷ್ಟಿ ಮಾಡಿಕೊಂಡಿದ್ದಾರೆ. ಕೇಜ್ರಿವಾಲ್ ಅವರು ಮರಳಿ ಜೈಲಿಗೆ ಹೋಗಬೇಕಿದೆ. ಅವರು ಮತ್ತೆ ಬಿಡುಗಡೆಯಾಗುವುದಿಲ್ಲ ಎಂದರು. ಅವರು ತಪ್ಪು ಮಾಡಿಲ್ಲವಾದರೆ ನ್ಯಾಯಾಲಯ ಕೂಡಲೇ ಜಾಮೀನು ನೀಡುತ್ತದೆ. ಲಾಲೂ ಪ್ರಸಾದ್ ಕೂಡ ಜೈಲಿಗೆ ಹೋಗಿದ್ದಾರೆ. ಜಾಮೀನು ಸಿಕ್ಕಿಲ್ಲ ಎಂದಾದರೆ ಅದಕ್ಕೆ ಸೂಕ್ತವಾದ ಪುರಾವೆ ಇದೆ ಎಂದರ್ಥ. ಅನೇಕ ವಿರೋಧ ಪಕ್ಷಗಳಿದ್ದರೂ ತಪ್ಪು ಮಾಡಿದವರು ಮಾತ್ರ ಜೈಲಿಗೆ ಹೋಗಿದ್ದಾರೆ ಎಂದರು. ವಿಧಾನಪರಿಷತ್ ಚುನಾವಣೆಯಲ್ಲಿ ಹೊಂದಾಣಿಕೆ ದೃಷ್ಟಿಯಿಂದ ಪಕ್ಷದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಅಭ್ಯರ್ಥಿಗಳ…