Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಅಂಗನವಾಡಿಗಳಲ್ಲಿ LKG, UKG ಆರಂಭಗೊಂಡ ನಂತ್ರ ಅಲ್ಲಿನ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯುತ್ತೇವೆ ಎಂಬುದು ಸತ್ಯಕ್ಕೆ ದೂರವಾದಂತ ಮಾತಾಗಿದೆ. ಯಾರನ್ನೂ ಕೆಲಸದಿಂದ ತೆಗೆಯುವುದಿಲ್ಲ ಎಂಬುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಇಂದು ಸಿಎಂ ಸಿದ್ಧರಾಮಯ್ಯ ಅವರೊಂದಿಗೆ ಸಭೆಯಲ್ಲಿ ಭಾಗಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲೆ ದೊರೆಯಬೇಕೆಂಬ ಕಳಕಳಿಯಿಂದ ಶಿಕ್ಷಣ ಇಲಾಖೆಯೂ ಸರ್ಕಾರಿ ಮಾಂಟೆಸರಿ ಆರಂಭಿಸಲು ಮುಂದಾಗಿದ್ದು, ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಂದ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಗೊಳಿಸಿ, ಕನ್ನಡ ಹಾಗೂ ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕಲಿಸುವ ಚಿಂತನೆ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಪೂರ್ವಪ್ರಾಥಮಿಕ ಶಿಕ್ಷಣ ಆರಂಭಿಸುವ ಸಂಬಂಧ ಈಗಾಗಲೇ ಅಂಗನವಾಡಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಾಗಿದೆ. ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಶಿಕ್ಷಕಿಯರ ಪೈಕಿ 9 ಸಾವಿರ ಮಂದಿ ಪದವಿ ಪಡೆದವರಾಗಿದ್ದರೆ, ಒಂದೂವರೆ ಸಾವಿರಕ್ಕಿಂತಲೂ ಹೆಚ್ಚು ಮಂದಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಹೀಗಾಗಿ, ಗುಣಮಟ್ಟದ ಶಿಕ್ಷಣ ನೀಡಿಕೆಗೆ…
ಬೆಂಗಳೂರು : ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ (LKG, UKG) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿಯನ್ನು ರಚಿಸಲು ಸಿಎಂ ಸೂಚಿಸಿದ್ದಾರೆ ಎಂದು ಸಚಿವರು ಹೇಳಿದರು. ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನಿಸಲಾಗಿದ್ದು, ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಠಿಕ ಆಹಾರ ನೀಡುವುದೇ ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಯವರು ಸಹಮತ ವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ಇಲಾಖೆಯ ಮೂಲಕವೇ ಸಮವಸ್ತ್ರ, ಪುಸ್ತಕ, ಬ್ಯಾಗ್ ನೀಡಲು ತೀರ್ಮಾನಿಸಲಾಗಿದೆ. ಜೊತೆಗೆ ಶಾಲೆಗಳ ಮಾದರಿಯಲ್ಲೆ ವರ್ಗಾವಣೆ ಪತ್ರ (ಟಿಸಿ) ನೀಡಲು ಕ್ರಮವಹಿಸಲಾಗುವುದು. ಮುಖ್ಯಮಂತ್ರಿಗಳೊಂದಿಗೆ ನಡೆದ ಸಭೆಯಲ್ಲಿ ಶಾಲಾ ಮತ್ತು ಪ್ರಾಥಮಿಕ ಶಿಕ್ಷಣದ…
ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರನ್ನು ರಾಜ್ಯಸಭೆಯಲ್ಲಿ ಸದನದ ನಾಯಕರನ್ನಾಗಿ ಮಾಡಲಾಗಿದೆ. ಈ ಮೂಲಕ ರಾಜ್ಯಸಭೆಯ ನಾಯಕರಾಗಿ ಜೆ.ಪಿ ನಡ್ಡಾ ಆಯ್ಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ಸೇರಿದಂತೆ ಅವರ ಮಂತ್ರಿಮಂಡಲದ ಸದಸ್ಯರು 18 ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಿಜೆಪಿಯ ಭರ್ತೃಹರಿ ಮಹತಾಬ್ ಅವರು ಸದನದ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಬಾರಿ ಎನ್ಡಿಎ 293 ಸ್ಥಾನಗಳೊಂದಿಗೆ ಬಹುಮತವನ್ನು ಹೊಂದಿದ್ದರೆ, ಬಿಜೆಪಿ 240 ಸ್ಥಾನಗಳನ್ನು ಹೊಂದಿದೆ. ಪ್ರತಿಪಕ್ಷ ಬಿಜೆಪಿ 234 ಸ್ಥಾನಗಳನ್ನು ಹೊಂದಿದೆ. ಪ್ರಧಾನಿಯವರ ಪ್ರಮಾಣ ವಚನ ಸ್ವೀಕಾರದ ಸಂದರ್ಭದಲ್ಲಿ ವಿರೋಧ ಪಕ್ಷದ ಸದಸ್ಯರು ಸಂವಿಧಾನದ ಪ್ರತಿಗಳನ್ನು ಹಿಡಿದುಕೊಂಡು ಎದ್ದು ನಿಂತರು. ಗೃಹ ಸಚಿವ ಅಮಿತ್ ಶಾ ಪ್ರಮಾಣ ವಚನ ಸ್ವೀಕರಿಸುವಾಗ ಅವರು ಮತ್ತೆ ಸಂವಿಧಾನದ ಪ್ರತಿಗಳನ್ನು ಎತ್ತಿ ಹಿಡಿದರು. ಉತ್ತರದಾಯಿತ್ವವಿಲ್ಲದೆ ಪ್ರಧಾನಿ ತಪ್ಪಿಸಿಕೊಳ್ಳಲು ಬಿಡುವುದಿಲ್ಲ ಎಂದು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು…
ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ, ಜಿಎಸ್ ಮಂಜುನಾಥ್ ಅವರನ್ನು ನಾಮ ನಿರ್ದೇಶನ ಮಾಡಿ ಆದೇಶಿಸಿದೆ. ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಎಂ.ಸುಮಿತ್ರ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಜಿಎಸ್ ಮಂಜುನಾಥ್, ಮುನಿಸಿಪಲ್ ಕಾಲೋನಿ, ಕೆಳಗೋಟೆ, ಚಿತ್ರದುರ್ಗ ಇವರನ್ನು ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಕಂಪನಿ ಆಕ್ಟ್ 2013ರ ಆರ್ಟಿಕಲ್ಸ್ ಆಫ್ ಅಸೋಷಿಯೇಷನ್ ಆಫ್ ದಿ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಕಲಂ 29(i)ರ ಅನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಿ ಆದೇಶಿಸಿದ್ದಾರೆ. ಅಂದಹಾಗೇ ಜಿ.ಎಸ್ ಮಂಜುನಾಥ್ ಅವರು ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಹಿರಿಯೂರು ನಗರದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು. ಆಗ ಪ್ರಧಾನಿ ನರೇಂದ್ರ ಮೋದಿ ನನ್ನ ಕೈಗೆ ಸಿಕ್ಕರೆ ಚಪ್ಪಲಿಯಲ್ಲಿ ಹೊಡೆಯುವುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಭಾಷಣ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿತ್ತು. ಆ ಬಳಿಕ…
ಬೆಂಗಳೂರು: ಲೈಂಗಿಕ ದೌರ್ಜನ್ಯ, ಅಶ್ಲೀಲ ವೀಡಿಯೋ ಕೇಸ್, ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಎಸ್ಐಟಿ ಕಸ್ಟಡಿಗೆ ಕೋರ್ಟ್ ನೀಡಿತ್ತು. ಇಂದು ಎಸ್ಐಟಿ ಕಸ್ಟಡಿ ಅಂತ್ಯಗೊಂಡ ಕಾರಣ, ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಅವರಿಗೆ ನ್ಯಾಯಾಲಯವು ಜುಲೈ.8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್ಐಟಿ ಕಸ್ಟಡಿಯಲ್ಲಿದ್ದಂತ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅವಧಿ ಅಂತ್ಯಗೊಂಡ ಹಿನ್ನಲೆಯಲ್ಲಿ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತೆ ನ್ಯಾಯಪೀಠವು, ಜುಲೈ.8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಮತ್ತೊಂದೆಡೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಸಹೋದರ ಸೂರಜ್ ರೇವಣ್ಣ ಕೂಡ ಬಂಧನವಾಗಿದೆ. ಅವರನ್ನು ಜುಲೈ.1ರವರೆಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಸಿಐಡಿ ಕಸ್ಟಡಿಗೆ ನೀಡಿ ಆದೇಶಿಸಿದೆ. ಹೀಗಾಗಿ ಅಣ್ಣ ಪರಪ್ಪನ ಅಗ್ರಹಾರ ಜೈಲು ಪಾಲಾದ್ರೇ, ತಮ್ಮ ಸೂರಜ್ ರೇವಣ್ಣ ಸಿಐಡಿ ಕಸ್ಟಡಿಯಾಗಿದೆ. https://kannadanewsnow.com/kannada/unnatural-sexual-assault-case-court-sends-suraj-revanna-to-cid-custody-till-july-1/ https://kannadanewsnow.com/kannada/big-news-nissin-invites-to-set-up-food-parks-in-vijayapura-dharwad-districts/
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್ಐಟಿ ವಶದಲ್ಲಿದ್ದಂತ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಜುಲೈ.8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳು ತಮ್ಮ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನಲೆಯಲ್ಲಿ ಹಾಜರುಪಡಿಸಿದರು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಪ್ರಕರಣದ ವಿಚಾರಣೆ ನಡೆಸಿ, ಜುಲೈ.8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದರು. ಹೀಗಾಗಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮತ್ತೆ ಜೈಲುಪಾಲಾಗಿದ್ದಾರೆ. https://kannadanewsnow.com/kannada/unnatural-sexual-assault-case-court-sends-suraj-revanna-to-cid-custody-till-july-1/ https://kannadanewsnow.com/kannada/big-news-nissin-invites-to-set-up-food-parks-in-vijayapura-dharwad-districts/
BIG NEWS: ‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್: ಬೇಡಿಕೆ ಈಡೇರಿಕೆಗೆ ‘ಸಿಎಂ ಸಿದ್ಧರಾಮಯ್ಯ’ ಗ್ರೀನ್ ಸಿಗ್ನಲ್
ಬೆಂಗಳೂರು: ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಫ್ರೀಡಂ ಪಾರ್ಕ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಇವರಿಗೆ ಗುಡ್ ನ್ಯೂಸ್ ಎನ್ನುವಂತೆ ಸಿಎಂ ಸಿದ್ಧರಾಮಯ್ಯ ಅವರು ಕೆಲ ಬೇಡಿಕೆ ಈಡೇರಿಸೋದಕ್ಕೆ ಅಸ್ತು ಎಂದಿರುವುದಾಗಿ ತಿಳಿದು ಬಂದಿದೆ. ಕಳೆದ ಗುರುವಾರದಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರತಿಭಟನಾನಿರತರೊಂದಿಗೆ ಮಾತುಕತೆ ನಡೆಸಿದರು. ಆ ಬಳಿಕ ಮಾತನಾಡಿದ್ದಂತ ಅವರು, ಅಂಗನವಾಡಿ ಕೇಂದ್ರಗಳಿಗೆ ಮತ್ತು ಕಾರ್ಯಕರ್ತೆಯರ ಅಸ್ತಿತ್ವಕ್ಕೆ ತೊಂದರೆಯಾಗಲು ಬಿಡುವುದಿಲ್ಲ. ಈಗಾಗಲೇ ಮುಖ್ಯಮಂತ್ರಿಯವರು ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಮುಖ್ಯಮಂತ್ರಿಯವರು ಕೂಡ ಅಂಗನವಾಡಿ ಕೇಂದ್ರಗಳ ಅಸ್ವಿತ್ವಕ್ಕೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಬರುವ ಸೋಮವಾರ ಕೂಡ ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಮತ್ತೊಂದು ಸಭೆ ನಡೆಸಿ ಚರ್ಚಿಸಲಾಗುವುದು. ಮುಖ್ಯವಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ಯಾವುದೇ ರೀತಿಯಿಂದಲೂ ತೊಂದರೆ ಆಗದಂತೆ ಕ್ರಮ ವಹಿಸಲಾಗುವುದು. ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಹೋರಾಟಕ್ಕೆ ಫಲ ಸಿಗಲಿದೆ ಎಂದು ಸಚಿವರು ಹೇಳಿದರು. ಇಂದು…
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಪೊಲೀಸರು ಬಂಧಿಸಿದ್ದರು. ಇಂತಹ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜುಲೈ.1ರವರೆಗೆ ಸಿಐಡಿ ಕಸ್ಟಡಿಗೆ ನೀಡಿ ಆದೇಶಿಸಿದೆ.
ತಿರುವನಂತಪುರಂ: ರಾಜ್ಯದ ಹೆಸರನ್ನು ‘ಕೇರಳಂ’ ನಿಂದ ‘ಕೇರಳಂ’ ಎಂದು ಬದಲಾಯಿಸಲು ಸಾಂವಿಧಾನಿಕ ತಿದ್ದುಪಡಿ ತರುವಂತೆ ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನು ರಾಜ್ಯ ವಿಧಾನಸಭೆ ಸರ್ವಾನುಮತದಿಂದ ಅಂಗೀಕರಿಸಿದ ಸುಮಾರು ಒಂದು ವರ್ಷದ ನಂತರ, ವಿಧಾನಸಭೆ ಸೋಮವಾರ ಸಣ್ಣ ತಿದ್ದುಪಡಿಗಳೊಂದಿಗೆ ಮತ್ತೆ ನಿರ್ಣಯವನ್ನು ಅಂಗೀಕರಿಸಿತು. ತಿದ್ದುಪಡಿಗಳನ್ನು ಸೂಚಿಸಿ ಕೇಂದ್ರವು ಹಿಂದಿನದನ್ನು ಹಿಂದಿರುಗಿಸಿದ ನಂತರ ಸದನವು ಹೊಸ ನಿರ್ಣಯವನ್ನು ಅಂಗೀಕರಿಸಿತು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಡಿಸಿದ ನಿರ್ಣಯದಲ್ಲಿ, ಸಂವಿಧಾನದ ಮೊದಲ ಅನುಸೂಚಿಯಲ್ಲಿ ರಾಜ್ಯದ ಹೆಸರನ್ನು ಅಧಿಕೃತವಾಗಿ ‘ಕೇರಳಂ’ ಎಂದು ಬದಲಾಯಿಸಲು ಸಂವಿಧಾನದ 3 ನೇ ವಿಧಿಯ ಅಡಿಯಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಐಯುಎಂಎಲ್ ಶಾಸಕ ಎನ್ ಶಂಸುದ್ದೀನ್ ನಿರ್ಣಯಕ್ಕೆ ತಿದ್ದುಪಡಿಯನ್ನು ಮಂಡಿಸಿದರು, ಹೆಚ್ಚಿನ ಸ್ಪಷ್ಟತೆಯನ್ನು ತರಲು ಪದಗಳನ್ನು ಪುನರ್ರಚಿಸಲು ಸಲಹೆ ನೀಡಿದರು. ಆದಾಗ್ಯೂ, ಸದನವು ತಿದ್ದುಪಡಿಯನ್ನು ತಿರಸ್ಕರಿಸಿತು. ರಾಜ್ಯದ ಹೆಸರನ್ನು ಅಧಿಕೃತವಾಗಿ ಬದಲಾಯಿಸುವ ನಿರ್ಣಯವನ್ನು ಕಳೆದ ವರ್ಷ ಆಗಸ್ಟ್ 9 ರಂದು ಸರ್ವಾನುಮತದಿಂದ ಅಂಗೀಕರಿಸಲಾಯಿತು. ಸಂವಿಧಾನದ ಮೊದಲ ಅನುಸೂಚಿಯಲ್ಲಿ ರಾಜ್ಯದ ಹೆಸರನ್ನು ‘ಕೇರಳಂ’ ಎಂದು…
ಲಕ್ನೋ: ಈ ವರ್ಷದ ಆರಂಭದಲ್ಲಿ ಪರಿಶೀಲನಾ ಅಧಿಕಾರಿಗಳು ಮತ್ತು ಸಹಾಯಕ ಪರಿಶೀಲನಾ ಅಧಿಕಾರಿಗಳ ಹುದ್ದೆಗಳಿಗೆ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಆರೋಪದ ಮೇಲೆ ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ (ಎಸ್ಟಿಎಫ್) ಭಾನುವಾರ ಆರು ಜನರನ್ನು ಬಂಧಿಸಿದೆ. ಉತ್ತರ ಪ್ರದೇಶ ಲೋಕಸೇವಾ ಆಯೋಗ (ಯುಪಿಪಿಎಸ್ಸಿ) ಫೆಬ್ರವರಿ 11 ರಂದು ರಾಜ್ಯಾದ್ಯಂತ ಪರೀಕ್ಷೆ ನಡೆಸಿತ್ತು. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪಗಳು ಕೇಳಿಬಂದ ನಂತರ ರಾಜ್ಯ ಸರ್ಕಾರ ಮಾರ್ಚ್ 2 ರಂದು ಅದನ್ನು ರದ್ದುಗೊಳಿಸಿತು. ಬಂಧಿತರನ್ನು ಮಧ್ಯಪ್ರದೇಶದ ಭೋಪಾಲ್ ನಿವಾಸಿ ಸುನಿಲ್ ರಘುವಂಶಿ, ಬಿಹಾರದ ಮಧುಬನಿ ನಿವಾಸಿ ಸುಭಾಷ್ ಪ್ರಕಾಶ್, ಪ್ರಯಾಗ್ರಾಜ್ ನಿವಾಸಿಗಳಾದ ವಿಶಾಲ್ ದುಬೆ ಮತ್ತು ಸಂದೀಪ್ ಪಾಂಡೆ, ಬಿಹಾರದ ಗಯಾ ನಿವಾಸಿ ಅಮರ್ಜೀತ್ ಶರ್ಮಾ ಮತ್ತು ಬಲ್ಲಿಯಾ ನಿವಾಸಿ ವಿವೇಕ್ ಉಪಾಧ್ಯಾಯ ಎಂದು ಗುರುತಿಸಲಾಗಿದೆ. ಪ್ರಯಾಗ್ ರಾಜ್ ನಲ್ಲಿ ಈ ಬಂಧನಗಳನ್ನು ಮಾಡಲಾಗಿದೆ ಎಂದು ಎಸ್ ಟಿಎಫ್ ತಿಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯ ಮಾಸ್ಟರ್ ಮೈಂಡ್ ರಾಜೀವ್ ನಯನ್ ಮಿಶ್ರಾ…