Subscribe to Updates
Get the latest creative news from FooBar about art, design and business.
Author: kannadanewsnow09
ಧಾರವಾಡ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 23 ನೇ ಅವಧಿಯ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳಿಗೆ ಸದಸ್ಯರ ಆಯ್ಕೆಗೆ ಚುನಾವಣೆಯನ್ನು ಆಯೋಜಿಸಲಾಗಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಿವಿಧ ನಾಲ್ಕು ಸ್ಥಾಯಿ ಸಮಿತಿಗೆ ಸ್ಪರ್ಧಿಸುವವರು ಅಕ್ಟೋಬರ್ 3, 2024 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು. ಪಾಲಿಕೆಯ ಚುನಾವಣೆಯನ್ನು ಅಕ್ಟೋಬರ್ 3, 2024 ರಂದು ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿ ಮಹಾನಗರ ಪಾಲಿಕೆಯ ಸಭಾಭವನದಲ್ಲಿ ನಡೆಸಲಾಗುವುದು ಎಂದು ಬೆಳಗಾವಿ ಪ್ರಾದೇಶಿಕ ಆಯುಕ್ತರು ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿಯ ಚುನಾವಣೆಯ ಅಧ್ಯಕ್ಷಾಧಿಕಾರಿ ಎಸ್.ಬಿ.ಶೆಟ್ಟೆಣ್ಣವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/nipah-scare-rises-in-bengaluru-one-person-diagnosed-with-symptoms-41-under-home-quarantine/ https://kannadanewsnow.com/kannada/air-marshal-ap-singh-appointed-as-next-chief-of-air-staff-air-marshal-a-p-singh/
ಬೆಂಗಳೂರು: ಭಾರತದ ಅತ್ಯಂತ ದೊಡ್ಡ ಖಾಸಗಿ ವಲಯದ ಬ್ಯಾಂಕ್ ಎಚ್.ಡಿ.ಎಫ್.ಸಿ. ಬ್ಯಾಂಕ್ ಇಂದು ಗಿಗ್ ಕೆಲಸಗಾರರು/ಫ್ರೀಲಾನ್ಸರ್ ಗಳಿಗೆ ವಿಶೇಷವಾಗಿ ವಿನ್ಯಾಸಗೊಳಿಸಲಾದ ಸಂಪೂರ್ಣ ಹಣಕಾಸು ಉತ್ಪನ್ನಗಳು ಮತ್ತು ಸೇವೆಗಳ ಸೂಟ್-ಗಿಗಾ(GIGA) ಪ್ರಾರಂಭಿಸಿದೆ. ಪ್ರಾರಂಭಿಕ ಅಂಶವಾಗಿ ಬ್ಯಾಂಕ್ ಆಳವಾದ ಗ್ರಾಹಕ ಸಂಶೋಧನಾ ಅಧ್ಯಯನವನ್ನು ಫ್ರೀಲಾನ್ಸರ್ ಗಳ ಅಗತ್ಯವನ್ನು ಅರ್ಥ ಮಾಡಿಕೊಳ್ಳಲು ನಡೆಸಿದ್ದು ಅದರ ಆಧಾರದಲ್ಲಿ ಡಿಜಿಟಲ್ ಪ್ರಥಮ ಕಾರ್ಯಕ್ರಮ ಗಿಗಾ ಪ್ರಾರಂಭಿಸಿದ್ದು ಇದು ಫ್ರೀಲಾನ್ಸರ್ ಗಳ ಅಗತ್ಯಗಳನ್ನು ಪೂರೈಸಲು ವಿಶೇಷವಾಗಿ ರೂಪಿಸಿದ ಉತ್ಪನ್ನಗಳು ಮತ್ತು ಸೇವೆಗಳನ್ನು ಒದಗಿಸುತ್ತಿದೆ. ಗಿಗ್ ಅರ್ಥವ್ಯವಸ್ಥೆಯು ಮ್ಯಾನೇಜ್ ಮೆಂಟ್ ಕನ್ಸಲ್ಟೆಂಟ್ ಗಳು, ಸಾಫ್ಟ್ ವೇರ್ ಪ್ರೋಗ್ರಾಮರ್ ಗಳು ಮತ್ತು ವಿನ್ಯಾಸಕರು, ವಾಸ್ತುಶಿಲ್ಪಿಗಳು, ಹೂಡಿಕೆಯ ಸಲಹೆಗಾರರಂತಹ ಬಿಳಿ ಪಟ್ಟಿಯ ಉದ್ಯೋಗಿಗಳಿಂದ ನೀಲಿ ಪಟ್ಟಿಯ ಮತ್ತು ಡೆಲಿವರಿ ಪಾಲುದಾರರು ಮತ್ತು ಆರೈಕೆ ನೀಡುವ ಗುಲಾಬಿ ಪಟ್ಟಿಯ ಉದ್ಯೋಗಿಗಳವರೆಗೆ ನಿರ್ದಿಷ್ಟ ವೃತ್ತಿಯ/ತಾಂತ್ರಿಕ ಪರಿಣಿತಿಯನ್ನು ಹೊಂದಿದವರಿಗೆ ವಿಸ್ತರಿಸಿದೆ. ಎಚ್.ಡಿ.ಎಫ್.ಸಿ. ಬ್ಯಾಂಕ್ ಗಿಗ್ ಬ್ಯಾಂಕಿಂಗ್, ಸ್ಟಾರ್ಟಪ್ಸ್ ಅಂಡ್ ಗೌರ್ನಮೆಂಟ್ ಅಂಡ್ ಇನ್ಸ್ ಟಿಟ್ಯೂಷನಲ್ ಬಿಸಿನೆಸ್ ಮುಖ್ಯಸ್ಥೆ ಸುನಾಲಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ 2019ರಿಂದ 2023ನೇ ಸಾಲಿನವರೆಗಿನ ಟಿಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ ಮತ್ತು ಮೊಹರೆ ಹಮಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಇಂದು ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ನಡವಳಿಯನ್ನು ಹೊರಡಿಸಿದ್ದು, 2019 ರಿಂದ 2023ನೇ ಕ್ಯಾಲೆಂಡರ್ ವರ್ಷಗಳ ಟಿಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ ಮತ್ತು ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರನ್ನು ಆಯ್ಕೆ ಮಾಡುವ ಸಲುವಾಗಿ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ಗೌರವಾನ್ವಿತ ವಿಶ್ರಾಂತ ನ್ಯಾಯಾಧೀಶರಾದ ನ್ಯಾಯಮೂರ್ತಿ ಶ್ರೀ ಪಿ.ಎನ್.ದೇಸಾಯಿ ಇವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿದೆ ಎಂದಿದ್ದಾರೆ. ಆಯ್ಕೆ ಸಮಿತಿಯು ಈ ಸಂಬಂಧ ಸ್ವೀಕೃತವಾಗಿದ್ದ ಅರ್ಜಿಗಳು ಮತ್ತು ನಾಮನಿರ್ದೇಶನಗಳ ಸಮಗ್ರ ಪರಿಶೀಲನ ಮತ್ತು ಸುದೀರ್ಘ ಪರಾಮರ್ಶೆಯ ತರುವಾಯ ದಿನಾಂಕ:04/09/2024ರ ಸಭೆಯಲ್ಲಿ ಈ ಎರಡೂ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರನ್ನು ಆಯ್ಕೆ ಮಾಡಿ ವರದಿ ನೀಡಿರುವ ಹಿನ್ನೆಲೆಯಲ್ಲಿ, 2019 ರಿಂದ 2023ನೇ ಸಾಲಿನವರೆಗೆ ಟಿಯಸ್ಕಾ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಮೊಹರೆ ಹಣಮಂತರಾಯ…
ನವದೆಹಲಿ: 26 ವರ್ಷದ ಚಾರ್ಟರ್ಡ್ ಅಕೌಂಟೆಂಟ್ ಅನ್ನಾ ಸೆಬಾಸ್ಟಿಯನ್ ಪೆರಾಯಿಲ್ ಅವರ ದುರಂತ ಸಾವು ಕೆಲಸಕ್ಕೆ ಸಂಬಂಧಿಸಿದ ಒತ್ತಡದ ತೀವ್ರ ಪರಿಣಾಮಗಳನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ. ನಾಲ್ವರು ಭಾರತೀಯರಲ್ಲಿ ಒಬ್ಬರು ಕೆಲಸ ಸಂಬಂಧಿತ ಒತ್ತಡದಿಂದ ಬಳಲುತ್ತಿದ್ದಾರೆ ಎಂಬುದಾಗಿ ಅಧ್ಯಯನವೊಂದು ತಿಳಿಸಿದೆ. ಅರ್ನ್ಸ್ಟ್ & ಯಂಗ್ (ಇ & ವೈ) ಇಂಡಿಯಾದ ಉದ್ಯೋಗಿಯಾಗಿದ್ದ ಅನ್ನಾ, ಅತಿಯಾದ ಕೆಲಸದ ಹೊರೆಯಿಂದಾಗಿ ಅವರ ಕುಟುಂಬ ಹೇಳಿಕೊಂಡಿದೆ. ಅವರ ಹಠಾತ್ ಸಾವು ಅತಿಯಾದ ಕೆಲಸದ ಒತ್ತಡದ ಪರಿಣಾಮದ ಬಗ್ಗೆ ರಾಷ್ಟ್ರೀಯ ಸಂಭಾಷಣೆಯನ್ನು ಹುಟ್ಟುಹಾಕಿದೆ, ವಿಶೇಷವಾಗಿ ಯುವ ವೃತ್ತಿಪರರ ಮೇಲೆ. ತೀವ್ರ ಆಯಾಸ ಮತ್ತು ಆಯಾಸದಿಂದ ಬಳಲುತ್ತಿದ್ದ ಅನ್ನಾ ಅವರನ್ನು ಜುಲೈ 19 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯಕೀಯ ಚಿಕಿತ್ಸೆ ಪಡೆದರೂ, ಅವರು ಜುಲೈ 20 ರಂದು ನಿಧನರಾದರು, ಇದು ಅವರ ಕುಟುಂಬ, ಸ್ನೇಹಿತರು ಮತ್ತು ವ್ಯಾಪಕ ವೃತ್ತಿಪರ ಸಮುದಾಯದಲ್ಲಿ ಆಘಾತವನ್ನುಂಟು ಮಾಡಿತು. ಮಗಳ ಸಾವಿಗೆ ಕಾರಣವಾದ ಸಂದರ್ಭಗಳ ಬಗ್ಗೆ ಗಮನ ಸೆಳೆಯಲು ಆಕೆಯ ತಾಯಿ ಅನಿತಾ ಅಗಸ್ಟಿನ್…
ಬೆಂಗಳೂರು: ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ನಿರೀಕ್ಷಿತ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸುವ ಸಲುವಾಗಿ, ನೈಋತ್ಯ ರೈಲ್ವೆಯು 34 ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಿಸಲು ನಿರ್ಧರಿಸಲಾಗಿದೆ. ಅವುಗಳ ಮಾಹಿತಿ ಈ ಕೆಳಗಿನಂತಿವೆ: ಅಕ್ಟೋಬರ್ 4 ರಿಂದ 15 ರವರೆಗೆ ರೈಲು ಸಂಖ್ಯೆ 17301 ಮೈಸೂರು-ಬೆಳಗಾವಿ ಎಕ್ಸ್ಪ್ರೆಸ್, ಅಕ್ಟೋಬರ್ 1 ರಿಂದ 12 ರವರೆಗೆ ಬೆಳಗಾವಿ-ಮೈಸೂರು ಎಕ್ಸ್ಪ್ರೆಸ್ (17302), ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಚಾಮರಾಜನಗರ-ಮೈಸೂರು ಎಕ್ಸ್ಪ್ರೆಸ್ (06233/06234), ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಬಾಗಲಕೋಟ ಬಸವ ಎಕ್ಸ್ಪ್ರೆಸ್ (17307) ಮತ್ತು ಅಕ್ಟೋಬರ್ 3 ರಿಂದ 14 ರವರೆಗೆ ಬಾಗಲಕೋಟ-ಮೈಸೂರು ಬಸವ ಎಕ್ಸ್ಪ್ರೆಸ್ (17308), ಅಕ್ಟೋಬರ್ 1 ರಿಂದ 12 ರವರೆಗೆ ಎಸ್ಎಸ್ಎಸ್ ಹುಬ್ಬಳ್ಳಿ-ಮೈಸೂರು ಹಂಪಿ ಎಕ್ಸ್ಪ್ರೆಸ್ (16591), ಅಕ್ಟೋಬರ್ 4 ರಿಂದ 15 ರವರೆಗೆ ಮೈಸೂರು-ಎಸ್ಎಸ್ಎಸ್ ಹುಬ್ಬಳ್ಳಿ ಹಂಪಿ ಎಕ್ಸ್ಪ್ರೆಸ್ (16592), ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಪಂಢರಪುರ ಗೋಲಗುಂಬಜ್ ಎಕ್ಸ್ಪ್ರೆಸ್ (16535) ಮತ್ತು ಅಕ್ಟೋಬರ್ 3…
ಚನ್ನಪಟ್ಟಣ : 2,069 ಅರ್ಜಿದಾರರಿಗೆ ನಿವೇಶನ, 2,300 ವಸತಿ ವಿತರಣೆ ಹಾಗೂ 200 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಮೂಲಕ ಚನ್ನಪಟ್ಟಣವನ್ನು ಚಿನ್ನದ ಪಟ್ಟಣ ಮಾಡುವ ಸಂಕಲ್ಪಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಚಾಲನೆ ನೀಡಿದರು. ಯುವ ಜನ ಸೇವೆ ಮತ್ತು ಕ್ರೀಡಾ ಇಲಾಖೆ ವತಿಯಿಂದ ತಟ್ಟೆಕೆರೆಯ ಕುಡಿಯುವ ನೀರಿನ ಕಟ್ಟೆ ಬಳಿ ಸುಮಾರು ₹9 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿ ಗುದ್ದಲಿ ಪೂಜೆ ಮೂಲಕ ಡಿಸಿಎಂ ತಮ್ಮ ಅಭಿವೃದ್ಧಿಯ ಅಭಿಯಾನ ಪ್ರಾರಂಭ ಮಾಡಿದರು. ನಂತರ ಸಚಿವರಾದ ಜಮೀರ್ ಅಹ್ಮದ್ ಖಾನ್ ಹಾಗೂ ರಹೀಮ್ ಖಾನ್ ಅವರೊಡಗೂಡಿ ಹಜರತ್ ಸೈಯದ್ ಮೊಹಮ್ಮದ್ ಆಖೀಲ್ ಶಾ ಖಾದ್ರಿ ಅಲ್- ಬಾಗ್ದಾದಿ ದರ್ಗಾಕ್ಕೆ ಭೇಟಿ ನೀಡಿ ಚಾದರ ಹೊದಿಸಿ ಪ್ರಾರ್ಥನೆ ಮಾಡಿದರು. ಜನ ಪ್ರತಿನಿಧಿಯೇ ಇಲ್ಲದೇ ಅನಾಥವಾಗಿದ್ದ ಚನ್ನಪಟ್ಟಣ ಕ್ಷೇತ್ರಕ್ಕೆ ಭಗೀರಥನಂತೆ ಬಂದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು. ಅಭಿವೃದ್ಧಿಯನ್ನೇ ಕಾಣದ ಕ್ಷೇತ್ರದಲ್ಲಿ ಸಂಚಾರ ಮಾಡಿ “ಮನೆಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಶಾಸಕ ಮುನಿರತ್ನ ವಿರುದ್ಧದ ಪ್ರಕರಣವನ್ನು ಸಿಐಡಿಯ ವಿಶೇಷ ತನಿಖಾ ತಂಡವನ್ನು ರಚಿಸಿ, ಆ ತಂಡದ ಮೂಲಕ ತನಿಖೆಗೆ ವಹಿಸಿ ಆದೇಶಿಸಿದೆ. ಈ ಸಂಬಂಧ ಇಂದು ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಲಾಗಿದ್ದು, ದೂರುದಾರರು ತಮಗೆ ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ಮಾಡಿ ಹಾಗೂ ಲಂಚಕ್ಕಾಗಿ ಬೇಡಿಕೆ ಇಟ್ಟಿರುವ ಕುರಿತು ಶ್ರೀ ಮುನಿರತ್ನ, ಶಾಸಕರು, ಹಾಗೂ ಇತರರ ವಿರುದ್ಧ ಬೆಂಗಳೂರು ನಗರ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ: 121/2024, ಕಲಂ 506, 504, 385, 420, 323 ರೆ/ವಿ 34 ಐಪಿಸಿ ಹಾಗೂ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ: 122/2024, ಕಲಂ 153(ಎ)(1)(ಎ)(ಬಿ), 509, 504, 153 ಐಪಿಸಿ ಹಾಗೂ ಕಲಂ 3(1)(ಆರ್)(ಎಸ್) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ ರಡಿ ದಿನಾಂಕ:13.09.2024 ರಂದು ಪ್ರಕರಣಗಳು ದಾಖಲಾಗಿರುತ್ತದೆ ಎಂದಿದೆ. ಮಹಿಳೆಯೊಬ್ಬರ ದೂರಿನ ಮೇರೆಗೆ ಶ್ರೀ ಮುನಿರತ್ನ, ಶಾಸಕರು, ಹಾಗೂ ಇತರರ…
ಬೆಂಗಳೂರು: ಇನ್ಮುಂದೆ ಸಾರ್ವಜನಿಕರನ್ನು ಭೇಟಿ ಮಾಡಲು, ಅವರ ಕುಂದುಕೊರತೆಯನ್ನು ನಿವಾರಿಸುವುದು ಕಡ್ಡಾಯವಾಗಿದೆ. ಈ ಸಮಯಲ್ಲಿ ಯಾವುದೇ ಸಭೆಗಳನ್ನು ನಡೆಸದಂತೆ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಖಡಕ್ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಸುತ್ತೋಲೆ ಹೊರಡಿಸಿರುವಂತ ಅವರು,ಜನಸ್ಪಂದನ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ನಾಗರೀಕರು ಅವರ ಅಹವಾಲುಗಳೊಂದಿಗೆ ಬರುತ್ತಿರುವುದರಿಂದ ಹಿರಿಯ ಅಧಿಕಾರಿಗಳು ಎಲ್ಲಾ ಹಂತಗಳಲ್ಲಿ ಅರ್ಜಿದಾರರಿಗೆ ನಿಯಮಿತವಾಗಿ ಆಲಿಸಿದರ ಮಾತ್ರ ಕುಂದುಕೊರತೆಗಳನ್ನು ಗಣನೀಯವಾಗಿ ಕಡಿಮೆ ಮಾಡಲು ಸಾಧ್ಯವಾಗುವುದು ಎಂದಿದ್ದಾರೆ. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು / ಪ್ರಧಾನ ಕಾರ್ಯದರ್ಶಿಗಳು / ಕಾರ್ಯದರ್ಶಿಗಳು ಹಾಗೂ ಇತರ ಕ್ಷೇತ್ರ ಅಧಿಕಾರಿಗಳು ಮಧ್ಯಾಹ್ನ 3.30 ಘಂಟೆಯಿಂದ 5.30 ಘಂಟೆಯವರೆಗೆ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳನ್ನು ಭೇಟಿ ಮಾಡಲು ಸಮಯವನ್ನು ಕಲ್ಪಿಸುವ ಬಗ್ಗೆ ನಿರ್ದೇಶನ ನೀಡಲಾಗಿದೆ. ಆದಾಗ್ಯೂ, ಈ ಸಮಯದಲ್ಲಿ ಸಾರ್ವಜನಿಕರಿಗೆ ಸಮಯಾವಕಾಶ ಕಲ್ಪಿಸದ ಇಲಾಖೆಗಳ ಸಭೆಗಳನ್ನು/ಕಛೇರಿಯ ಹೊರಗೆ ಹೋಗುವ ಪ್ರಕರಣಗಳನ್ನು ಗಮನಿಸಲಾಗಿದೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ, ಇನ್ನು ಮುಂದ ಎಲ್ಲಾ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು…
ವಾಸ್ತು, ಇತ್ತೀಚೆಗೆ ನಾವು ಈ ವಾಸ್ತು ಬಗ್ಗೆ ಹೆಚ್ಚು ಮಾತನಾಡುತ್ತಿದ್ದೇವೆ. ಆದರೆ ವಾಸ್ತು ಇಂದು ನಿನ್ನೆಯದಲ್ಲ. ವಾಸ್ತು ರಾಜರ ಕಾಲದಿಂದಲೂ ಇದೆ. ವಾಸ್ತುವನ್ನು ನಂಬುವವರು ಈ ಪರಿಹಾರವನ್ನು ಅನುಸರಿಸಬಹುದು. ಅನೇಕರ ಮನೆಯಲ್ಲಿ ವಾಸ್ತು ಸರಿಯಾಗಿ ಹೊಂದಿಸದೇ ಇರುವುದರಿಂದ ಕುಟುಂಬದಲ್ಲಿ ಕೆಲವು ಸಮಸ್ಯೆಗಳು ಉದ್ಭವಿಸುತ್ತವೆ. ಕೆಲವರಿಗೆ ಮನೆಯಲ್ಲಿ ನೆಮ್ಮದಿ ಕಳೆದುಕೊಳ್ಳಬಹುದು, ವ್ಯಾಪಾರದಲ್ಲಿ ನಷ್ಟ ಉಂಟಾಗಬಹುದು, ಕೆಲವರಿಗೆ ಮನೆಯಲ್ಲಿ ಜಗಳಗಳು ಕೂಡ ಬರಬಹುದು. ಕೆಲವು ಮನೆಗಳಲ್ಲಿ ವಾಸ್ತು ಸರಿಯಿಲ್ಲದ ಕಾರಣ ಕುಟುಂಬ ಎರಡು ಹೋಳಾಗುತ್ತದೆ. ಸಣ್ಣಪುಟ್ಟ ವಾಸ್ತು ಸಮಸ್ಯೆಯಾಗಿದ್ದರೆ ಅದನ್ನು ಸುಲಭವಾಗಿ ಸರಿಪಡಿಸಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ,…
ಶಿವಮೊಗ್ಗ : ಜಿಲ್ಲೆಯಲ್ಲಿ ಮೆಸ್ಕಾಂನಿಂದ ( MESCOM ) ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಸೆ.24ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ. ಶಿವಮೊಗ್ಗ ಎಂ.ಆರ್.ಎಸ್.220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಸೆ. 24 ರಂದು ಬೆಳಗ್ಗೆ 9.30 ರಿಂದ ಸಂಜೆ 6.00ರವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ಪವರ್ ಕಟ್ ಆಗಲಿದೆ. ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು ಕರೆಂಟ್ ಇರೋದಿಲ್ಲ. ಚಿನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ…












