Author: kannadanewsnow09

ಬೆಂಗಳೂರು : ಈ ಬಾರಿಯ ಲೋಕಸಭಾ ಚುನಾವಣೆಯ ವೇಳೆ ದೇಶದಾದ್ಯಂತ ಬಿಜೆಪಿ ವಿರೋಧಿ ಅಲೆ ಕಾಣಿಸುತ್ತಿದ್ದು, ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಸರ್ಕಾರ ರಚಿಸಲಿದೆ ಎಂಬ ವಿಶ್ವಾಸವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ. ಬಸವ ಜಯಂತಿ ಅಂಗವಾಗಿ ವಿಧಾನಸೌಧದ ಮುಂದಿರುವ ವಿಶ್ವಗುರು ಬಸವಣ್ಣನವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎರಡೂ ಹಂತದ ಮತದಾನ ಮಕ್ತಾಯವಾಗಿದ್ದು, ರಾಜ್ಯದಾದ್ಯಂತದಿಂದ ಬಂದಿರುವ ವರದಿಗಳ ರೀತ್ಯ ಕಾಂಗ್ರೆಸ್ ಪಕ್ಷ ಕನಿಷ್ಠ 20 ಸ್ಥಾನಗಳಲ್ಲಿ ಜಯ ಸಾಧಿಸಲಿದೆ ಎಂದು ತಿಳಿಸಿದರು. ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಪಕ್ಷ ನೀಡಿದ್ದ ಎಲ್ಲ ಐದು ಗ್ಯಾರಂಟಿಗಳನ್ನೂ ನಮ್ಮ ಸರ್ಕಾರ ಈಡೇರಿಸಿದ್ದು, ಜನರಿಗೆ ಕಾಂಗ್ರೆಸ್ ಪಕ್ಷದ ಬಗ್ಗೆ ವಿಶ್ವಾಸ ಇಮ್ಮಡಿಯಾಗಿದೆ. ಈಗ ಕೇಂದ್ರದಲ್ಲಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಪಂಚ ನ್ಯಾಯ ಹಾಗೂ 25 ಗ್ಯಾರಂಟಿ ಜಾರಿ ಮಾಡುವುದಾಗಿ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯನ್ನು ಪಕ್ಷ ಈಡೇರಿಸುತ್ತದೆ ಎಂಬ ಪೂರ್ಣ…

Read More

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಕೇಸ್ ನಿಂದಾಗಿ ಬಿಜೆಪಿ ಹಾಗೂ ಜೆಡಿಎಸ್ ನಡುವಿನ ಮೈತ್ರಿಗೆ ಯಾವುದೇ ಧಕ್ಕೆ ಉಂಟಾಗೋದಿಲ್ಲ. ಈ ಪ್ರಕರಣ ವೈಯಕ್ತಿಕ ಜಗಳವಾಗಿದೆ ಎಂಬುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಾಂಗ್ರೆಸ್ ಪಕ್ಷದವರು ರಾಜ್ಯದಲ್ಲಿನ ಅಭಿವೃದ್ಧಿಯ ಬಗ್ಗೆ ಮಾತನಾಡುವುದನ್ನು ಬಿಟ್ಟು ಬರೀ ಪೆನ್ ಡ್ರೈವ್ ಕೇಸ್ ಬಗ್ಗೆ ಚರ್ಚೆ ಮಾಡ್ತಿದ್ದಾರೆ. ಯಾರೇ ಆಗಲೀ ಈ ಕೃತ್ಯದಲ್ಲಿ ಭಾಗಿಯಾಗಿದ್ರೂ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಲಿ ಎಂದರು. ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಭವಿಷ್ಯವಿಲ್ಲ. ಶಾಸಕರು ಅಸಮಾಧಾನಗೊಂಡಿದ್ದಾರೆ. ಅದು ಅಭಿವೃದ್ಧಿಗೆ ಅನುದಾನ ನೀಡದೇ ಇರೋ ಕಾರಣದಿಂದ ಆಗಿದೆ. ಹೀಗಾಗಿ ರಾಜ್ಯ ಸರ್ಕಾರದ ಬುಡ ಅಲುಗಾಡುತ್ತಿದೆ. ಚುನಾವಣೆ ಬಳಿಕ ಈ ಸರ್ಕಾರ ಪತನ ಗ್ಯಾರಂಟಿ ಎಂದರು. https://kannadanewsnow.com/kannada/every-inch-of-pakistan-occupied-kashmir-belongs-to-india-amit-shah/ https://kannadanewsnow.com/kannada/sc-grants-interim-bail-to-delhi-cm-arvind-kejriwal-till-june-1-in-excise-policy-case/

Read More

ಜಾರ್ಖಂಡ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರ (Pakistan-occupied Kashmir -PoK) ಬಗ್ಗೆ ಕಾಂಗ್ರೆಸ್ ಪ್ರಶ್ನಾರ್ಥಕ ಚಿಹ್ನೆಯನ್ನು ಎತ್ತುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ವಾಗ್ದಾಳಿ ನಡೆಸಿದರು.  ಪಿಒಕೆ ಅದರ ಪ್ರತಿ ಇಂಚು ಭಾರತಕ್ಕೆ ಸೇರಿದೆ. ಯಾವುದೇ ಶಕ್ತಿ ಅದನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದರು. ಪರಮಾಣು ಬಾಂಬ್ ಹೊಂದಿರುವ ಪಾಕಿಸ್ತಾನವನ್ನು ಗೌರವಿಸುವಂತೆ ಮಣಿಶಂಕರ್ ಅಯ್ಯರ್ ನಮಗೆ ಹೇಳುತ್ತಿದ್ದಾರೆ. ಕೆಲವು ದಿನಗಳ ಹಿಂದೆ, ಪಾಕಿಸ್ತಾನದ ಬಳಿ ಪರಮಾಣು ಬಾಂಬ್ ಇರುವುದರಿಂದ ಪಿಒಕೆ ಬಗ್ಗೆ ಮಾತನಾಡಬೇಡಿ ಎಂದು ಎನ್ಡಿಎ ನಾಯಕ ಫಾರೂಕ್ ಅಬ್ದುಲ್ಲಾ ಹೇಳಿದ್ದರು. ಪಿಒಕೆ ಭಾರತಕ್ಕೆ ಸೇರಿದ್ದು ಮತ್ತು ಯಾವುದೇ ಶಕ್ತಿ ಅದನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ನಾನು ಕಾಂಗ್ರೆಸ್ ಮತ್ತು ಭಾರತ ಮೈತ್ರಿಕೂಟಕ್ಕೆ ಹೇಳಲು ಬಯಸುತ್ತೇನೆ” ಎಂದು ಅಮಿತ್ ಶಾ ಜಾರ್ಖಂಡ್ನ ಖುಂಟಿಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಹೇಳಿದರು. ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಕಾಂಗ್ರೆಸ್ಗೆ ಏನಾಗಿದೆ ಎಂದು ನನಗೆ ತಿಳಿದಿಲ್ಲ. ಪಿಒಕೆ ಭಾರತದ ಭಾಗ ಎಂದು…

Read More

ಮೈಸೂರು: ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಪೆನ್‌ಡ್ರೈವ್ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರದಾಗಲಿ ಅಥವಾ ನನ್ನದಾಗಲಿ ಪಾತ್ರವಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಪಡಿಸಿದ್ದಾರೆ. ಮೈಸೂರಿನ ವಿಮಾನನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಶುಕ್ರವಾರ ಮಾತನಾಡಿದ ಅವರು, ನಮಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು ಕಾನೂನು ರೀತಿಯಲ್ಲಿ ತನಿಖೆ ಮಾಡಿ ವರದಿ ನೀಡಲಿದ್ದಾರೆ. ಹಿಂದೆ ಎಲ್ಲ ಸಿಬಿಐಗೆ ಕೊಟ್ಟಿದ್ದೇವೆ. ಬಿಜೆಪಿಯವರು ಯಾವತ್ತೂ ಒಂದೇ ಒಂದು ಕೇಸ್ ಸಿಬಿಐಗೆ ನೀಡಿರಲಿಲ್ಲ ಎಂದರು. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ನಮ್ಮ ಪಾತ್ರವಿಲ್ಲ. ಎಸ್ಐಟಿಯವರು ತನಿಖೆ ಮಾಡ್ತಿದ್ದಾರೆ. ನನಗೆ ನಂಬಿಕೆಯಿದೆ ಅವರು ಸರಿಯಾದ ದಾರಿಯಲ್ಲಿ ಮಾಡ್ತಾರೆ ಅಂತ. ನಾನು ಯಾವತ್ತೂ ಕೂಡ ಪೊಲೀಸರಿಗೆ ಕಾನೂನು ಬಿಟ್ಟು ಮಾಡಿ ಅಂತ ಹೇಳಿಲ್ಲ. ಕಾನೂನು ವಿರುದ್ಧವಾಗಿ ಮಾಡಿ ಅಂತನೂ ಹೇಳಿಲ್ಲ. ಕಾನೂನು ರೀತಿಯಲ್ಲೇ ಮಾಡ್ತಿದ್ದಾರೆ ಎಂದರು. ಸಿಬಿಐ ತನಿಖೆಗೆ ವಹಿಸಲಿ ಅಂತ ಪೆನ್ ಡ್ರೈವ್ ಗಳನ್ನು ಆಸ್ಟ್ರೇಲಿಯಾದಲ್ಲಿ ಅಪ್ ಲೋಡ್ ಮಾಡಲಾಗಿದೆ ಅಂತ ಹೇಳ್ತಿದ್ದಾರೆ. ನಮ್ಮ ಪೊಲೀಸರ ಬಗ್ಗೆ ನಮಗೆ ನಂಬಿಕೆಯಿದೆ. ನಾವು…

Read More

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಬೆಳಕಿಗೆ ಬಂದು ಕೆಲ ದಿನಗಳೇ ಕಳೆದಿದೆ. ಪ್ರಜ್ವಲ್ ರೇವಣ್ಣ ಮಾತ್ರ ವಿದೇಶದಲ್ಲಿ ಇದ್ದಾರೆಯೇ ಹೊರತು, ಬೆಂಗಳೂರಿಗೆ ಮರಳಿಲ್ಲ. ಈ ನಡುವೆ ಅವರ ವಿರುದ್ಧ 3ನೇ ಎಫ್ಐಆರ್ ದಾಖಲಾಗಿದ್ದು,  ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಕಾನೂನಿನ ಕುಣಿಕೆ ಬಿಗಿಯಾದಂತೆ ಆಗಿದೆ. ಅತ್ಯಾಚಾರಕ್ಕೆ ಒಳಗಾದಂತ ಸಂತ್ರಸ್ತ ಮಹಿಳೆಯೊಬ್ಬರು ಮೇ.8ರಂದು ಪೊಲೀಸರಿಗೆ ದೂರೊಂದನ್ನು ನೀಡಿದ್ದಾರೆ. ಈ ದೂರನ್ನು ಅಧರಿಸಿ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ವಿರುದ್ಧ ಕಠಿಣ ಸೆಕ್ಷನ್ ಗಳನ್ನು ಹಾಕಿ, ಕಾನೂನಿನ ಕುಣಿಕೆಯನ್ನು ಬಿಗಿಗೊಳಿಸಿದ್ದಾರೆ. ಸಂತ್ರಸ್ತ ಮಹಿಳೆಯೊಬ್ಬರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ಐಟಿಯಿಂದ ಮೂರನೇ ರೇಪ್ ಕೇಸಲ್ಲಿ ಐಪಿಸಿ ಸೆಕ್ಷನ್ 354(ಸಿ)ರಡಿಯಲ್ಲಿ ಖಾಸಗಿ ಚಿತ್ರಗಳು ಸೆರೆಹಿಡಿದು ವೀಕ್ಷಿಸುವುದು. 354(ಎ)ರಡಿ ಲೈಂಗಿಕ ಅನುಕೂಲಕ್ಕಾಗಿ ಒತ್ತಾಯ, 376(2)ರಡಿ  ಜನಪ್ರತಿನಿಧಿಗಳ ಸ್ಥಾನದಲ್ಲಿದ್ದೂ ಅತ್ಯಾಚಾರ. 354(ಬಿ) ಬಟ್ಟೆ ಹಿಡಿದು ಎಳೆದಾಡಿದ ಆರೋಪ ಸೇರಿದಂತೆ ವಿವಿಧ ಸೆಕ್ಷನ್ ಗಳನ್ನು ಹಾಕಿದ್ದಾರೆ. ಹೀಗಾಗಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ…

Read More

ಕಲಬುರ್ಗಿ: ಲೋಕಸಭಾ ಚುನಾವಣೆ ಬೆನ್ನಲ್ಲೇ ಕಲಬುರ್ಗಿಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವಂತ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ರಾಜಕೀಯ ವೈಷಮ್ಯಕ್ಕಾಗಿ ಜಾವೀದ್ ಚಿನ್ನಮಳ್ಳಿ(27) ಎಂಬಾತನನ್ನ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದು, ಬಾವಿಗೆ ಎಸೆದಿರುವಂತ ಘಟನೆ ನಡೆದಿದೆ. ಕಳೆದ ಅಮವಾಸ್ಯೆ ದಿನದಂದು ದುಷ್ಕರ್ಮಿಗಳು ಪಾರ್ಟಿ ಮಾಡೋದಕ್ಕೆ ಕರೆದೊಯ್ದು, ಜಮೀನಿನಲ್ಲಿ ಪಾರ್ಟಿ ಮಾಡಿಸಿ, ನಂತ್ರ ಬರ್ಬರವಾಗಿ ಹತ್ಯೆ ಮಾಡಿ ಬಾವಿಗೆ ಎಸೆದಿದ್ದಾರೆ ಎನ್ನಲಾಗಿದೆ. ಈ ಹತ್ಯೆಯ ಹಿಂದಿನ ಕಾರಣ ಕಾಂಗ್ರೆಸ್ ಪರ ಮತ ಹಾಕಿದ್ದಕ್ಕೆ, ಪ್ರಚಾರ ಮಾಡಿದ್ದಕ್ಕೆ ಎಂಬುದಾಗಿ ಹೇಳಲಾಗುತ್ತಿದೆ. https://kannadanewsnow.com/kannada/congress-conspiring-to-give-job-reservation-to-muslims-pm-modi/ https://kannadanewsnow.com/kannada/sc-grants-interim-bail-to-delhi-cm-arvind-kejriwal-till-june-1-in-excise-policy-case/

Read More

ಹಾಸನ: ಜಿಲ್ಲೆಯಲ್ಲಿ ಸದ್ದು ಮಾಡಿ, ದೇಶದಲ್ಲೇ ವ್ಯಾಪಕ ಸುದ್ದಿಗೆ ಕಾರಣವಾಗಿದ್ದಂ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಸಂಬಂಧ ವಕೀಲ ದೇವರಾಜೇಗೌಡ ಹಾಗೂ ಮಾಜಿ ಕಾರು ಚಾಲಕ ಕಾರ್ತಿಕ್ ಗೆ ಎಸ್ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಹಾಸನ ಪೆನ್ ಡ್ರೈವ್ ಕೇಸ್ ಸಂಬಂಧ ಹಾಸನ ಸೈಬರ್ ಪೊಲೀಸ್ ಠಾಣೆ ಏಪ್ರಿಲ್.23ರಂದು ಚುನಾವಣಾ ಏಜೆಂಟ್ ಪೂರ್ಣಚಂದ್ರ ತೇಜಸ್ವಿ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಇದೀಗ ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ ಹಾಗೂ ವಕೀಲ ದೇವರಾಜೇಗೌಡ ಅವರಿಗೆ ನೋಟಿಸ್ ನೀಡಲಾಗಿದೆ. ಅಂದಹಾಗೇ ಇವರಿಬ್ಬರು ಅಲ್ಲದೇ ಕ್ವಾಲಿಟಿ ಬಾರ್ ಶರತ್, ನವೀನ್ ಗೌಡ ಹಾಗೂ ಚೇತನ್ ಗೌಡ ವಿರುದ್ಧವೂ ಹಾಸನದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈಗ ಈ ಪ್ರಕರಣ ಸಂಬಂಧವೂ ಎಸ್ಐಟಿ ಅಧಿಕಾರಿಗಳು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. https://kannadanewsnow.com/kannada/sc-grants-interim-bail-to-delhi-cm-arvind-kejriwal-till-june-1-in-excise-policy-case/ https://kannadanewsnow.com/kannada/congress-conspiring-to-give-job-reservation-to-muslims-pm-modi/

Read More

ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿದೆ. ಕೇಜ್ರಿವಾಲ್ ಅವರಿಗೆ ಯಾವುದೇ ವಿಶೇಷ ರಿಯಾಯಿತಿ ನೀಡುವುದು ಕಾನೂನಿನ ನಿಯಮ ಮತ್ತು ಸಮಾನತೆಗೆ ಅಸಹ್ಯವಾಗುತ್ತದೆ ಎಂದು ಜಾರಿ ನಿರ್ದೇಶನಾಲಯ ಗುರುವಾರ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡುವ ಕ್ರಮವನ್ನು ವಿರೋಧಿಸಿತ್ತು. ಆ ಮೂಲಕ ದೇಶದಲ್ಲಿ ಎರಡು ಪ್ರತ್ಯೇಕ ವರ್ಗಗಳನ್ನು ಸೃಷ್ಟಿಸುತ್ತದೆ. ಅಂದರೆ ಕಾನೂನಿನ ನಿಯಮ ಮತ್ತು ದೇಶದ ಕಾನೂನುಗಳಿಗೆ ಬದ್ಧರಾಗಿರುವ ಸಾಮಾನ್ಯ ಜನರು ಮತ್ತು ಕಾನೂನುಗಳಿಂದ ವಿನಾಯಿತಿ ಪಡೆಯಬಹುದಾದ ರಾಜಕಾರಣಿಗಳು”. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು.

Read More

ವೈಶಾಖ ಮಾಸದ ಶುಕ್ಲಪಕ್ಷದ ತೃತೀಯ ದಿನವನ್ನು”ಅಕ್ಷಯತದಿಗೆ” ಎಂದು ಆಚರಿಸಲಾಗುತ್ತಿದೆ. ಅಕ್ಷಯ ಎಂದರೆ ಕ್ಷಯಿಸದೆ, ವೃದ್ಧಿಯಾಗುವುದು ಎಂದು ಅರ್ಥ. ‘ಅಕ್ಷಯ ತೃತೀಯ’.ಸನಾತನ ಧರ್ಮದಲ್ಲಿ ಈ ದಿನಕ್ಕೆ ವಿಶೇಷ ಮಹತ್ವವಿದೆ. ಅವುಗಳೆಂದರೆ: – 1) ನಾಲ್ಕು ಯುಗಗಳಾದ ಸತ್ಯ, ತ್ರೇತಾ, ದ್ವಾಪರ ಮತ್ತು ಕಲಿಯುಗಗಳಲ್ಲಿ, ಸತ್ಯ ಅಥವಾ ಕೃತಯುಗ ಪ್ರಾರಂಭವಾಗಿದ್ದು ‘ಅಕ್ಷಯ ತೃತೀಯ’ ದಿನದಂದು. 2) ವೇದವ್ಯಾಸರು ಮಹಾಭಾರತವನ್ನು ರಚಿಸುವ ಸಂದರ್ಭದಲ್ಲಿ ಅವರಿಗೆ ಸಹಾಯಕನಾಗಿ ಗಣೇಶನು ನೆರವಾಗಿದ್ದು ‘ಅಕ್ಷಯ ತೃತೀಯ’ ದಿನದಂದು. 3) ಭಗೀರಥನ ಪ್ರಯತ್ನದಿಂದ ಗಂಗಾವತರಣವಾಗಿದ್ದು (ಶಿವನ ಜಟೆಯಿಂದ ಗಂಗೆ ಭೂಮಿಗೆ ಇಳಿದದ್ದು) ‘ಅಕ್ಷಯ ತೃತೀಯ’ ದಿನದಂದು. 4) ದಶಾವತಾರಗಳಲ್ಲಿ ಒಂದಾದ ‘ಪರಶುರಾಮಾವತಾರ’ ಪ್ರಾರಂಭವಾಗಿದ್ದು (ಹುಟ್ಟಿದ ದಿನ) ‘ಅಕ್ಷಯ ತೃತೀಯ’ ದಿನದಂದು. 5) ಸಂಪತ್ತಿನ ಒಡೆಯ ಮತ್ತು ಯಕ್ಷರ ರಾಜ ‘ಕುಬೇರ’ನಿಗೆ ನಿಧಿ/ಸಂಪತ್ತು ದೊರೆತದ್ದು ‘ಅಕ್ಷಯ ತೃತೀಯ’ ದಿನದಂದು. 6) ಕುಚೇಲನಿಗೆ ಗೆಳೆಯ ಶ್ರೀಕೃಷ್ಣನಿಂದ ಅನುಗ್ರಹ ಪ್ರಾಪ್ತಿಯಾಗಿದ್ದು ‘ಅಕ್ಷಯ ತೃತೀಯ’ ದಿನದಂದು. 7) ಅಮೃತ ಪ್ರಾಪ್ತಿಗಾಗಿ ದೇವತೆಗಳು ಮತ್ತು ರಾಕ್ಷಸರು ಸಮುದ್ರ ಮಂಥನ…

Read More

1)ಗಣೇಶ ಮಂತ್ರ: ಓಂ ಗಣಪತಯೇ ನಮಃ ಗಣಪತಿಯನ್ನು ವಿಘ್ನಗಳ ನಿವಾರಣೆಗಾಗಿ ಪೂಜಿಸಲಾಗುತ್ತದೆ. ಅದಕ್ಕಾಗಿಯೇ ಯಾವುದೇ ಪೂಜೆ ಮಾಡುವ ಮುನ್ನ ಗಣೇಶನಿಗೆ ಮೊದಲ ಪೂಜೆ ಸಲ್ಲಿಸಲಾಗುತ್ತದೆ. ಗಣೇಶನ ಪೂಜೆ ಮತ್ತು ಗಣೇಶ ಮಂತ್ರವನ್ನು ಪಠಿಸುವುದರಿಂದ, ನಿಮ್ಮ ಅಭಿವೃದ್ಧಿ, ಸುಖ ಸಂತೋಷಕ್ಕೆ ಅಡ್ಡಿ ಬರುವ ಯಾವುದೇ ಅಡೆತಡೆಗಳು ನಿವಾರಣೆಯಾಗುತ್ತವೆ. ಎಲ್ಲಾ ಪ್ರಯತ್ನಗಳಲ್ಲಿ ಯಶಸ್ಸು, ಅದೃಷ್ಟ ಒಲಿಯುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ,…

Read More