Subscribe to Updates
Get the latest creative news from FooBar about art, design and business.
Author: kannadanewsnow09
ಉಡುಪಿ: ವಿಶ್ವಕರ್ಮ ಯೋಜನೆಯಡಿ ಬಡವರಿಗೆ ಬ್ಯಾಂಕ್‌ಗಳಿಂದ 1 ಲಕ್ಷ ರೂ. ಸಾಲ ನೀಡುತ್ತಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯವರೇ ಶ್ಯೂರಿಟಿ, ಅವರೇ ಗ್ಯಾರಂಟಿ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಸಿದ್ದಾಪುರದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ದೇಶದ ಚಿತ್ರಣವನ್ನು ಬದಲಿಸಿದ್ದಾರೆ. ಪ್ರತಿ ಬಡವರು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾಗುತ್ತದೆ ಎಂಬುದನ್ನು ಅವರು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿದ್ದಾರೆ. ಹಿಂದೆ ಹಣ ಠೇವಣಿ ಇಟ್ಟು ಬ್ಯಾಂಕ್‌ನಲ್ಲಿ ಖಾತೆ ತೆರೆಯುತ್ತಿದ್ದೆವು. ಆದರೆ ಶೂನ್ಯ ಠೇವಣಿಯಲ್ಲಿ ಖಾತೆ ತೆರೆಯುವ ಕ್ರಮವನ್ನು ಪ್ರಧಾನಿ ಜಾರಿಗೆ ತಂದರು. ಇತ್ತೀಚೆಗೆ ಜಾರಿಯಾದ ವಿಶ್ವಕರ್ಮ ಯೋಜನೆಯಡಿ ಹಲವಾರು ಬಗೆಯ ಉದ್ಯೋಗಗಳಿಗೆ ಒಂದು ಲಕ್ಷ ರೂಪಾಯಿ ಸಾಲ ನೀಡುತ್ತಿದ್ದಾರೆ. ಈ ಸಾಲ ಪಡೆಯಲು ಮನೆ ಪತ್ರ ನೀಡುವಂತಿಲ್ಲ, ಶ್ಯೂರಿಟಿ ಕೊಡಬೇಕಿಲ್ಲ. ಯಾವುದೇ ರೀತಿಯ ಅನಗತ್ಯ ದಾಖಲೆಗಳನ್ನು ಪಡೆಯುವಂತಿಲ್ಲ. ಈ ಸಾಲಕ್ಕೆ ಪ್ರಧಾನಿ ನರೇಂದ್ರ ಮೋದಿಯವರದ್ದೇ ಶ್ಯೂರಿಟಿ, ಅವರದ್ದೇ ಗ್ಯಾರಂಟಿ ಎಂದರು.…
ದಕ್ಷಿಣ ಕನ್ನಡ: ಜಿಲ್ಲೆಯ ಪ್ರಸಿದ್ಧ ಸ್ವ-ಉದ್ಯೋಗ ತರಬೇತಿ ಕೇಂದ್ರದಲ್ಲಿ ಒಂದು ರುಡ್ ಸೆಟ್ ಸಂಸ್ಥೆಯೂ ಒಂದಾಗಿದೆ. ಈ ಸಂಸ್ಥೆಯಿಂದ ಉಚಿತ ಎಸಿ ಮತ್ತು ರೆಫ್ರಿಜರೇಟರ್ ತರಬೇತಿಗೆ ( AC and Refrigerator Repair Training ) ಅರ್ಜಿಯನ್ನು ಸ್ವ-ಉದ್ಯೋಗಾಕಾಂಕ್ಷಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ದಿನಾಂಕ 19-01-2024ರಿಂದ 17-01-2024ರವರೆಗೆ 30 ದಿನಗಳ ಕಾಲ ಉಚಿತ ಎಸಿ ಮತ್ತು ರೆಫ್ರಿಜರೇಟರ್ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿದೆ. ಈ ತರಬೇತಿಗೆ 18 ರಿಂದ 45 ವರ್ಷ ವಯೋಮಾನದವರು ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣ ಉಚಿತವಾಗಿರುತ್ತದೆ. ಜೊತೆಗೆ ಸಂಸ್ಥೆಯ ಸಮವಸ್ತ್ರ ಉಚಿತವಾಗಿ ನೀಡಲಾಗುತ್ತದೆ. ತರಬೇತಿಯ ಬಳಿಕ ಸ್ವ ಉದ್ಯೋಗ ಕೈಗೊಳ್ಳೋದಕ್ಕೆ ಬ್ಯಾಂಕ್ ನಿಂದ ಸಿಗುವ ಸಾಲದ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದಿದೆ. ಅರ್ಹ ಆಸಕ್ತ ಸ್ವ ಉದ್ಯೋಗಾಕಾಂಕ್ಷಿಗಳು ವಾಟ್ಸ್ ಆಪ್ ಮೂಲಕವೂ ತಮ್ಮ…
ಮಡಿಕೇರಿ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 05 ಫಲಾನುಭವಿ ಆಧಾರಿತ ಯೋಜನೆಗಳನ್ನು ಸುವಿಧಾ ಯೋಜನೆಯಡಿ ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಆನ್‍ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿರುತ್ತದೆ. ಆದ್ದರಿಂದ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನೆ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್‍ಕಿಟ್ ಯೋಜನೆ ಈ 05 ಯೋಜನೆಗಳಿಗೆ 2023-24 ನೇ ಸಾಲಿಗೆ ವಿಕಲಚೇತನ ಫಲಾನುಭವಿಗಳು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. (https://sevasindhu.karnataka.gov.in/…/DepartmentService… ಪೋರ್ಟಲ್‍ನಲ್ಲಿ ಅರ್ಜಿಗಳನ್ನು ಸಲ್ಲಿಸಲು ಜನವರಿ, 30 ಕೊನೆಯ ದಿನವಾಗಿದೆ. ಜಿಲ್ಲೆಯ ಅರ್ಹ ವಿಕಲಚೇತನರು ಅರ್ಜಿ ಸಲ್ಲಿಸಲು ಕೋರಿದೆ. ಹೆಚ್ಚಿನ ಮಾಹಿತಿಗೆ 03 ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧೋದ್ಧೇಶ ಪುನರ್ವಸತಿ ಕಾರ್ಯಕರ್ತರಾದ ಮಡಿಕೇರಿ ತಾಲ್ಲೂಕಿನ ರಾಜೇಶ್- 8073192914, ಸೋಮವಾರಪೇಟೆ ತಾಲ್ಲೂಕಿನ ಹರೀಶ್ ಟಿ.ಆರ್– 9008685129 ಹಾಗೂ ವಿರಾಜಪೇಟೆ ತಾಲ್ಲೂಕಿನ ಪ್ರಥನ್ ಕುಮಾರ್…
ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕಿನ ಕಾರಿಗನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 14 ಜನರು ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿರೋ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಾರಿಗನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ನಿನ್ನೆಯಿಂದ ಈವರೆಗೆ 14 ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆಯಿಂದ ಕೆಲವರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಸಪೇಟೆ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರೆಲ್ಲರ ಆರೋಗ್ಯ ಸ್ಥಿರವಾಗಿರೋದಾಗಿ ತಿಳಿದು ಬಂದಿದೆ. ಕುಡಿಯುವ ನೀರಿನ ಟ್ಯಾಂಕರ್ ಸ್ವಚ್ಛಗೊಳಿಸದೇ ಇರೋದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಈ ವಿಷಯ ತಿಳಿದು ಕಾರಿಗನೂರು ಗ್ರಾಮಕ್ಕೆ ಡಿಹೆಚ್ಓ ಶಂಕರ್ ನಾಯಕ್ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ, ಮಾಹಿತಿ ಪಡೆದು, ಜನರ ಆರೋಗ್ಯ ಸುಧಾರಣೆಗೆ ಕ್ರಮ ಕೈಗೊಂಡಿದ್ದಾರೆ. https://kannadanewsnow.com/kannada/beware-1-year-jail-term-fine-imposed-for-encouraging-manual-scavenging/ https://kannadanewsnow.com/kannada/karve-state-president-ta-narayana-gowda-granted-bail/
ಮಡಿಕೇರಿ :ತಲೆಮೇಲೆ ಮಲ ಹೊರುವುದು ಹಾಗೂ ತೆರೆದ ಚರಂಡಿಗೆ ಮಲ-ಮೂತ್ರ ವಿಸರ್ಜನೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಅದರಂತೆ ‘ದಿ ಎಂಪ್ಲಾಯ್‍ಮೆಂಟ್ ಆಫ್ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಆಂಡ್ ಡ್ರೈ ಲ್ಯಾಟ್ರಿನ್ ಆಕ್ಟ್ 2013 ರ ರೀತ್ಯಾ ಯಾವುದೇ ವ್ಯಕ್ತಿಯಿಂದ ಶೌಚಾಲಯದ ಪಿಟ್‍ನ್ನು ಸ್ವಚ್ಛಗೊಳಿಸುವುದನ್ನು ನಿಷೇಧಿಸಲಾಗಿರುವುದರಿಂದ ನಗರಸಭೆಯಲ್ಲಿ 3000 ಲೀಟರ್ ಸಾಮಥ್ರ್ಯದ ಸಕ್ಕಿಂಗ್‍ಯಂತ್ರ ಹೊಂದಿರುವ ವಾಹನವು ಲಭ್ಯವಿದ್ದು, ನಿಗಧಿತ ಶುಲ್ಕವನ್ನು ಪಾವತಿಸಿ, ನಗರಸಭೆ ವಾಹನದಿಂದ ಶೌಚಾಲಯದ ಪಿಟ್‍ಗಳನ್ನು ಸ್ವಚ್ಛಗೊಳಿಸಬೇಕು. ಈ ಕಾಯ್ದೆಯನ್ನು ಉಲ್ಲಂಘಿಸಿ ಯಾವುದೇ ವ್ಯಕ್ತಿಯಿಂದ ಶೌಚಾಲಯದ ಪಿಟ್‍ನ್ನು ಸ್ವಚ್ಛಗೊಳಿಸಿದಲ್ಲಿ ಅಥವಾ ಮಲ ಹೊರುವ ಪದ್ಧತಿಗೆ ಪ್ರೋತ್ಸಾಹಿಸಿದಲ್ಲಿ ಕಾಯ್ದೆ ಅನುಸಾರ ಒಂದು ವರ್ಷದ ವರೆಗೂ ಜೈಲು ವಾಸ ಜೊತೆಗೆ ದಂಡ ಅಥವಾ ಎರಡು ರೀತಿಯಲ್ಲೂ ಕಾನೂನು ರೀತ್ಯಾ ಕ್ರಮಜರುಗಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರಾದ ವಿಜಯ್ ಅವರು ತಿಳಿಸಿದ್ದಾರೆ. ಜ.08 ರಂದು ಬಾಲಕಿಯರ ರಾಷ್ಟ್ರ ಮಟ್ಟದ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭ ಮಡಿಕೇರಿ :-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ…
ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸ್ ಆದ್ರೇ ಮಾತ್ರ ಬಡ್ತಿಗೆ ಅವಕಾಶ. ಅಲ್ಲದೇ ಪರೀಕ್ಷೆ ಪಾಸ್ ಆದವರಿಗೆ ಪ್ರೋತ್ಸಾಹ ಧನ ನೀಡೋದಾಗಿ ತಿಳಿಸಿತ್ತು. ಆದ್ರೇ ಈ ನಿಯಮ ಕರ್ನಾಟಕ ಪೊಲೀಸ್ ಇಲಾಖೆಯ ಸಿಬ್ಬಂದಿಗಳಿಗೆ ಅನ್ವಯಿಸೋದಿಲ್ಲ. ಹೀಗಾಗಿ ಪ್ರೋತ್ಸಾಹಧನವೂ ಇಲ್ಲ, ಮುಂಬಡ್ತಿಗೂ ಅದು ಅನ್ವಯಿಸಲ್ಲ ಅಂತ ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತಂತೆ ಎಐಜಿಪಿ ಆಡಳಿತ ವಿಭಾಗದ ಡಾ.ಸುಮನ್ ಡಿ ಪೆನ್ನೇಕರ್ ಅವರು ಹಿಂಬರದಲ್ಲಿ ಸ್ಪಷ್ಟೀಕರಣ ನೀಡಿದ್ದು, ಪೊಲೀಸ್ ಕಾನ್ಸ್ಟೇಬಲ್ ರವರುಗಳು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸು ಮಾಡುವ, ಪ್ರೋತ್ಸಾಹ ಧನ ಮಂಜೂರು ಮಾಡುವ ಹಾಗೂ ಮುಂಬಡ್ತಿ ನೀಡುವ ಕುರಿತು ಹಲವು ಘಟಕಾಧಿಕಾರಿಗಳು ಸ್ಪಷ್ಟಿಕರಣ ಕೋರುತ್ತಿರುವ ಬಗ್ಗೆ ಪರಿಶೀಲಿಸಿ ಈ ಕೆಳಕಂಡಂತೆ ಸ್ಪಷ್ಟಿಕರಣ ನೀಡಲಾಗಿದೆ ಎಂದಿದ್ದಾರೆ. ಸರ್ಕಾರದ ಅಧಿಸೂಚನೆ ಸಂಖ್ಯೆ: ಸಿಆಸುಇ 43 ಸೇವನೆ 2008, ದಿನಾಂಕ: 07.03.2012 ರಲ್ಲಿನ ನಿಯಮ 1 (3) ರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಕಂಪ್ಯೂಟರ್ ಸಾಕ್ಷರತಾ ನಿಯಮವು ಅನ್ವಯವಾಗತಕ್ಕದ್ದಲ್ಲ ಎಂದು ತಿಳಿಸಿರುವುದರಿಂದ ಕಂಪ್ಯೂಟರ್…
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ (ಎಸಿಬಿ) ಮುಂಬರುವ ಭಾರತ ವಿರುದ್ಧದ ಮೂರು ಪಂದ್ಯಗಳ ಟಿ 20 ಐ ಸರಣಿಗೆ ತನ್ನ ತಂಡವನ್ನು ಪ್ರಕಟಿಸಿದೆ. ಜೂನ್ನಲ್ಲಿ ನಡೆಯಲಿರುವ ಟಿ 20 ವಿಶ್ವಕಪ್ಗೆ ತಂಡಗಳು ಸಜ್ಜಾಗುತ್ತಿರುವುದರಿಂದ ಅಫ್ಘಾನಿಸ್ತಾನವು ಜನವರಿ 11 ರಿಂದ ಪ್ರಾರಂಭವಾಗುವ ಸರಣಿಗಾಗಿ ಭಾರತವನ್ನು ಎದುರಿಸಲಿದೆ. ವಿಶೇಷವೆಂದರೆ, ಮುಜೀಬ್ ಉರ್ ರೆಹಮಾನ್ ತಂಡಕ್ಕೆ ಮರಳಿದ್ದಾರೆ. ಭಾರತ ವಿರುದ್ಧದ ಸರಣಿಗೆ 19 ಸದಸ್ಯರ ತಂಡವನ್ನು ಎಸಿಬಿ ಪ್ರಕಟಿಸಿದೆ. ಎಸಿಬಿ ಜತೆ ಸಂಘರ್ಷದಲ್ಲಿದ್ದ ಮುಜೀಬ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಏತನ್ಮಧ್ಯೆ, ನಿಯಮಿತ ಟಿ 20 ಐ ನಾಯಕ ರಶೀದ್ ಖಾನ್ ಭಾಗವಹಿಸುವಿಕೆಗೆ ಅಪಾಯವಿದೆ. “ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಯ ಆಯ್ಕೆ ಸಮಿತಿಯು ಜನವರಿ 11 ರ ಗುರುವಾರದಿಂದ ಭಾರತದ ಮೊಹಾಲಿಯಲ್ಲಿ ಪ್ರಾರಂಭವಾಗುವ ಭಾರತ ವಿರುದ್ಧದ ಮೂರು ಪಂದ್ಯಗಳ ಟಿ 20 ಐ ಸರಣಿಗೆ 19 ಸದಸ್ಯರ ಅಫ್ಘಾನಿಸ್ತಾನ ರಾಷ್ಟ್ರೀಯ ತಂಡವನ್ನು ಹೆಸರಿಸಿದೆ” ಎಂದು ಎಸಿಬಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. “ಅಫ್ಘಾನಿಸ್ತಾನದ ನಿಯಮಿತ ಟಿ 20…
ದಕ್ಷಿಣ ಕನ್ನಡ: ಜಿಲ್ಲೆಯ ಪ್ರಸಿದ್ಧ ಸ್ವ-ಉದ್ಯೋಗ ತರಬೇತಿ ಕೇಂದ್ರದಲ್ಲಿ ಒಂದು ರುಡ್ ಸೆಟ್ ಸಂಸ್ಥೆಯೂ ಒಂದಾಗಿದೆ. ಈ ಸಂಸ್ಥೆಯಿಂದ ಇದೀಗ ಉಚಿತ ಜೇನು ಸಾಕಾಣಿಕೆ ತರಬೇತಿಗಾಗಿ ಸ್ವ-ಉದ್ಯೋಗಾಕಾಂಕ್ಷಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ದಿನಾಂಕ 08-01-2024ರಿಂದ 17-01-2024ರವರೆಗೆ 10 ದಿನಗಳ ಕಾಲ ಉಚಿತ ಜೇನು ಸಾಕಾಣಿಕೆ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಿರೋದಾಗಿ ತಿಳಇಸಿದೆ. ಈ ತರಬೇತಿಗೆ 18 ರಿಂದ 45 ವರ್ಷ ವಯೋಮಾನದವರು ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣ ಉಚಿತವಾಗಿರುತ್ತದೆ. ಜೊತೆಗೆ ಸಂಸ್ಥೆಯ ಸಮವಸ್ತ್ರ ಉಚಿತವಾಗಿ ನೀಡಲಾಗುತ್ತದೆ. ತರಬೇತಿಯ ಬಳಿಕ ಸ್ವ ಉದ್ಯೋಗ ಕೈಗೊಳ್ಳೋದಕ್ಕೆ ಬ್ಯಾಂಕ್ ನಿಂದ ಸಿಗುವ ಸಾಲದ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದಿದೆ. ಅರ್ಹ ಆಸಕ್ತ ಸ್ವ ಉದ್ಯೋಗಾಕಾಂಕ್ಷಿಗಳು ವಾಟ್ಸ್ ಆಪ್ ಮೂಲಕವೂ ತಮ್ಮ ಅರ್ಜಿಯನ್ನು 6364561982 ಸಂಖ್ಯೆಗೆ ಸಲ್ಲಿಸಬಹುದಾಗಿದೆ. ಅಲ್ಲದೇ ಆನ್ ಲೈನ್ ಮೂಲಕ www.rudsetitraining.org ಗೆ…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿಯಲ್ಲಿರುವಂತ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್, ವಾಣಿಜ್ಯ ಮಳಿಗೆಗಳ ಬೋರ್ಡ್ ಹೊಡೆದು ಹಾಕಿ, ಬಂಧನಕ್ಕೆ ಒಳಗಾಗಿ, ಜೈಲು ಸೇರಿದ್ದಂತ ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಬೆಂಗಳೂರಲ್ಲಿ ವಾಣಿಜ್ಯ ಮಳಿಗೆ, ಕೈಗಾರಿಕೆಗಳ ನಾಮಫಲಕದಲ್ಲಿ ಕನ್ನಡ ಕಡ್ಡಾಯವಾಗಿ ಬರೆಯುವಂತೆ ಆಗ್ರಹಿಸಿ ಕೆಲ ದಿನಗಳ ಹಿಂದೆ ಕರವೇಯಿಂದ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಂತ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಸೇರಿದಂತೆ ಹಲವು ಕಾರ್ಯಕರ್ತರು ಕನ್ನಡದಲ್ಲಿ ಬೋರ್ಡ್ ಹಾಕದ ವಾಣಿಜ್ಯ ಮಳಿಗೆಗಳ ನಾಮಫಲಕವನ್ನು ಹೊಡೆದು ಹಾಕಿದ್ದರು. ಈ ಸಂಬಂಧ ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಸೇರಿದಂತೆ 32 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಂತ ನಾರಾಯಣಗೌಡ ಸೆಂಟ್ರಲ್ ಜೈಲು ಸೇರಿದ್ದರು. ಇವರಲ್ಲದೇ 32 ಕರವೇ ಕಾರ್ಯಕರ್ತರು ಕೂಡ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಈ ಪ್ರಕರಣದಲ್ಲಿ ಜಾಮೀನು ಕೋರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ 5ನೇ ಹೆಚ್ಚುವರಿ…
ಬೆಂಗಳೂರು: ಕಾಂಗ್ರೆಸ್ ಫೇಸ್ ಬುಕ್ ಪೇಜ್ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಪೇಜ್ ನಿಂದ ಬಿಜೆಪಿ ನಾಯಕರ ಪೋಟೋ ದುರ್ಬಳಕೆ ಆರೋಪದ ಹಿನ್ನಲೆಯಲ್ಲಿ, ಬಿಜೆಪಿ ದೂರು ನೀಡಿದೆ. ಇಂದು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ತೆರಳಿದಂತ ಬಿಜೆಪಿ ಕಾನೂನು ಪ್ರಕೋಷ್ಠದ ಮುಖಂಡರು, ಕಾಂಗ್ರೆಸ್ ಪಕ್ಷದ ಫೇಸ್ ಬುಕ್ ಪೇಜ್ ನಲ್ಲಿ ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿಯಾಗಿ ಪೋಟೋ ಎಡಿಟ್ ಮಾಡಿ ಪೋಸ್ಟ್ ಮಾಡಲಾಗುತ್ತಿದೆ. ಸುಳ್ಳು ಸುದ್ದಿಯನ್ನು ಪ್ರಕಟಿಸಲಾಗುತ್ತಿದೆ. ಇಂತಹ ಫೇಸ್ ಬುಕ್ ಹ್ಯಾಂಡಲ್ ಮಾಡೋರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಸಿ.ಟಿ ರವಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್, ಸಂಸದ ಪ್ರತಾಪ್ ಸಿಂಹ ಪೋಟೋ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಫೇಸ್ ಬುಕ್ ಪೇಜ್, ಕರ್ನಾಟಕ ಕಾಂಗ್ರೆಸ್ ಪೇಜ್ ವಿರುದ್ಧ…