Author: kannadanewsnow09

ಕಲಬುರ್ಗಿ: ಜಿಲ್ಲೆಯಲ್ಲಿ ಕುಖ್ಯಾತ ದರೋಡೆಕೋರನ ಮೇಲೆ ಪೊಲೀಸರು ಫೈರಿಂಗ್ ಮಾಡಿ, ಆರೋಪಿಯನ್ನು ಬಂಧಿಸಿರುವಂತ ಘಟನೆ ಕಲಬುರ್ಗಿ ಉಪನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಲಬುರ್ಗಿ ಉಪನಗರ ಠಾಣೆ ವ್ಯಾಪ್ತಿಯಲ್ಲಿ ಕುಖ್ಯಾತ ದರೋಡೆಕೋರ ಅವತಾರ್ ಸಿಂಗ್ ಎಂಬಾತನನ್ನು ಬಂದಿಸೋದಕ್ಕೆ ಕಲಬುರ್ಗಿ ಸಬ್ ಅರ್ಬನ್ ಠಾಣೆಯ ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿಗಳು ತೆರಳಿದ್ದಾರೆ. ಪೊಲೀಸರು ಬಂಧಿಸೋದಕ್ಕೆ ಬಂದಿರುವಂತ ವಿಷಯ ತಿಳಿದಂತ ದರೋಡೆಕೋರ ಅವತಾರ್ ಸಿಂಗ್ ತಪ್ಪಿಸಿಕೊಳ್ಳೋದಕ್ಕೆ ಪ್ರಯತ್ನಿಸಿದ್ದಾನೆ. ಅಲ್ಲದೇ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಪೊಲೀಸರ ಮೇಲೆ ಹಲ್ಲೆ ಮಾಡಿ, ಪರಾರಿಯಾಗಲು ಯತ್ನಿಸಿದಂತ ಕುಖ್ಯಾತ ದರೋಡೆಕೋರ ಅವತಾರ್ ಸಿಂಗ್ ಕಾಲಿಗೆ ಕಲಬುರ್ಗಿ ಅರ್ಬನ್ ಠಾಣೆಯ ಇನ್ಸ್ ಪೆಕ್ಟರ್ ಸಂತೋಷ್ ತಟ್ಟೆಪಲ್ಲಿ ಅವರು ಆತ್ಮರಕ್ಷಣೆಗಾಗಿ ಕಾಲಿಗೆ ಗುಂಡೇಟು ನೀಡಿ ಬಂಧಿಸಿದ್ದಾರೆ. ಅಂದಹಾಗೇ ದರೋಡೆಕೋರ ಅವತಾರ್ ಸಿಂಗ್ ವಿರುದ್ಧ ಕಲಬುರ್ಗಿಯ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದಾವೆ. ಈ ಪ್ರಕರಣಗಳಲ್ಲಿ ಬೇಕಿದ್ದಂತ ಆರೋಪಿಯನ್ನು ಬಂಧಿಸೋದಕ್ಕೆ ತೆರಳಿದಂತ ವೇಳೆಯಲ್ಲಿ ಪೊಲೀಸರ ಮೇಲೆಗೆ ಹಲ್ಲೆಗೆ ಯತ್ನಿಸಿದ ಕಾರಣ, ಕಾಲಿಗೆ ಗುಂಟೇಡು ನೀಡಿ, ಬಂಧಿಸಲಾಗಿದೆ.…

Read More

ಬೆಂಗಳೂರು: ಇಲ್ಲಿನ ಗ್ರಾಮಾಂತರ ಪ್ರದೇಶದಲ್ಲಿ ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದಂತ ರೌಡಿ ಶೀಟರ್ ಬಂಧಿಸಲು ತೆರಿದ್ದಂತ ವೇಳೆಯಲ್ಲಿ ಹಲ್ಲೆ ನಡೆಸಲು ಪರಾರಿಯಾಗಲು ಯತ್ನಿಸಿದ್ದಕ್ಕೆ ಪೊಲೀಸರು ಕಾಲಿಗೆ ಗುಂಡೇಟು ನೀಡಿ, ಬಂಧಿಸಿರುವುದಾಗಿ ತಿಳಿದು ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ದಬಾಸ್ ಪೇಟೆಯ ಬಳಿಯಲ್ಲಿ ರೌಡಿ ಶೀಟರ್ ಜಯಂತ್ ಎಂಬಾತ ಇದ್ದಂತ ಸ್ಥಳದ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಮಾಹಿತಿ ಆಧರಿಸಿ, ರೌಡಿ ಶೀಟರ್ ಜಯಂತ್ ಬಂಧಿಸೋದಕ್ಕೆ ಪೊಲೀಸರು ತೆರಳಿದ್ದಾರೆ. ಈ ಸಂದರ್ಭದಲ್ಲಿ ಹೆಡ್ ಕಾನ್ ಸ್ಟೇಬಲ್ ಇಮ್ರಾನ್ ಖಾನ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಇನ್ಸ್ ಪೆಕ್ಟರ್ ರಾಜು ಅವರು ರೌಡಿ ಶೀಟರ್ ಜಯಂತ್ ಕಾಲಿಗೆ ಗುಂಡೇಟು ನೀಡಿದ್ದಾರೆ. ಗುಂಡೇಟಿನಿಂದ ಗಾಯಗೊಂಡಿದ್ದಂತ ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಂದಹಾಗೇ ಬಂದಿತ ರೌಡಿ ಶೀಟರ್ ಜಯಂತ್ ಪಲ್ಸರ್ ಬೈಕ್ ನಲ್ಲಿ ಬಂದು ಹೆದ್ದಾರಿಯಲ್ಲಿ ಬೆದರಿಸಿ ಹಲವರನ್ನು ದರೋಡೆ ಮಾಡುತ್ತಿದ್ದನು. ಜಯಂತ್ ವಿರುದ್ಧ ಕೊಲೆ, ಕೊಲೆಯತ್ನ, ದರೋಡೆ ಸೇರಿದಂತೆ…

Read More

ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದಂತ ಕೋವಿಡ್-19 ಸಂದರ್ಭದಲ್ಲಿನ ಹಗರಣಗಳ ಕುರಿತಂತೆ ತನಿಖೆ ನಡೆಸಿದ್ದಂತ ತನಿಖಾ ಆಯೋಗವು, ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ತನ್ನ ತನಿಖಾ ವರದಿಯನ್ನು ಸಲ್ಲಿಸಿದೆ. ಇಂದು ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ಹಾ ಇವರ ನೇತೃತ್ವದ ತಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಯಿತು. ಅವರಿಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಕೋವಿಡ್ ಹಗರಣಗಳಿಗೆ ಸಂಬಂಧಿಸಿದಂತೆ ತಯಾರಿಸಿದ್ದಂತ ವರದಿಯನ್ನು ಸಲ್ಲಿಸಿತು. ಮುಖ್ಯಮಂತ್ರಿಗ‌ಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. https://kannadanewsnow.com/kannada/sagar-range-forest-officer-seizes-illegal-beet-nata-stock/ https://kannadanewsnow.com/kannada/police-personnel-on-duty-die-of-heart-attack-in-gadag/ https://kannadanewsnow.com/kannada/man-attempts-suicide-by-consuming-poison-in-court-fearing-jail-term-in-davangere/

Read More

ಶಿವಮೊಗ್ಗ: ಜಿಲ್ಲೆಯ ಸಾಗರ ವಲಯ ವ್ಯಾಪ್ತಿಯ ಅರಣ್ಯಾಧಿಕಾರಿಗಳಿಂದ ಭರ್ಜರಿ ಬೇಟೆಯಾಡಲಾಗಿದೆ. ಅಕ್ರಮವಾಗಿ ಬೀಟೆ ದಾಸ್ತಾನು ಮಾಡಿದ್ದಂತ ಸ್ಥಳದ ಮೇಲೆ ದಾಳಿ ನಡೆಸಿ, 2 ಲಕ್ಷಕ್ಕೂ ಹೆಚ್ಚು ಮೌಲ್ಯದ ಅಕ್ರಮ ನಾಟಾವನ್ನು ಸೀಜ್ ಮಾಡಿದ್ದಾರೆ. ಈ ಕುರಿತಂತೆ ಸಾಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸಾಗರ ವಲಯ ವ್ಯಾಪ್ತಿಯ ಕೆಳದಿ ಶಾಖೆಯ ಮರಸ ಗ್ರಾಮದ ಸರ್ವೆ ನಂ.37ರಲ್ಲಿ ಸರ್ಕಾರಿ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ, ಸಾಗುವಾನಿ, ಹೊನ್ನೆ, ಬರಣಿಗೆ, ಕಾಡು ಜಾತಿಯ ನಾಟವನ್ನು ದಾಸ್ತಾನು ಮಾಡಿದ್ದಂತ ಮಾಹಿತಿ ಇಲಾಖೆಗೆ ತಿಳಿದು ಬಂದಿತ್ತು. ಹೀಗಾಗಿ ಅರಣ್ಯ ಸಂರಕ್ಷಣಾಧಿಕಾರಿ ರವಿ ಅವರಿಗೆ ಮಾಹಿತಿ ನೀಡಲಾಗಿತ್ತು ಎಂದಿದ್ದಾರೆ. ಇಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವಿ ಮಾರ್ಗದರ್ಶನದಲ್ಲಿ ಸಾಗರ ವಲಯದ ಅರಣ್ಯಾಧಿಕಾರಿಗಳಾದಂತ ಅಣ್ಣಪ್ಪ ಬಿ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ 1.569 ಘನ ಮೀಟರ್ ನಾಜಾ ತುಂಡುಗಳನ್ನು ಹಾಗೂ ಸೈಜುಗಳನ್ನು ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ ಅಂದಾಜು 2 ಲಕ್ಷಕ್ಕೂ…

Read More

ಗದಗ: ಜಿಲ್ಲೆಯಲ್ಲಿ ಹೃದಯಾಘಾತದಿಂದ ಕರ್ತವ್ಯ ನಿರತನಾಗಿದ್ದಂತ ಪೊಲೀಸ್ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಅವರ ನಿಧನಕ್ಕೆ ಗದಗ ಜಿಲ್ಲಾ ಪೊಲೀಸ್ ಇಲಾಖೆ ಸಂತಾಪ ಸೂಚಿಸಿದೆ. ಧಾರವಾಡದ ಕೋರ್ಟ್ ಗೆ ಗದಗದ ಸಶಸ್ತ್ರ ಮೀಸಲು ಪಡೆಯ ವಾಹನ ಚಾಲಕ ಬಸವರಾಜ ವಿಠ್ಠಲಾಪುರ ಅವರು ಕೈದಿ ಬಿಡಲು ತೆರಳುತ್ತಿದ್ದರು. ಈ ಸಂದರ್ಭದಲ್ಲಿ ವಾಹನ ಚಾಲನೆ ವೇಳೆಯಲ್ಲಿ ಎದೆನೋವು ಕಾಣಿಸಿಕೊಂಡಿದೆ. ವಾಹನ ಚಾಲನೆ ವೇಳೆಯಲ್ಲಿ ಎದೆನೋವು ಕಾಣಿಸಿಕೊಂಡ ಪರಿಣಾಮ ರಸ್ತೆ ಬದಿಗೆ ವಾಹನವನ್ನು ಬಸವರಾಜ ನಿಲ್ಲಿಸುತ್ತಿದ್ದಂತೆ, ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಬಸವರಾಜ ಅಕಾಲಿಕ ನಿಧನಕ್ಕೆ ಗದಗ ಜಿಲ್ಲಾ ಪೊಲೀಸ್ ಇಲಾಖೆಯಿಂದ ಸಂತಾಪ ಸೂಚಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/bescom-new-rules-to-come-into-effect-from-tomorrow-rs-100-bill-pending-power-supply-cut-off/ https://kannadanewsnow.com/kannada/man-attempts-suicide-by-consuming-poison-in-court-fearing-jail-term-in-davangere/

Read More

ಬೆಂಗಳೂರು: ಬೆಸ್ಕಾಂ ಗ್ರಾಹಕರಿಗೆ ಬಿಗ್ ಶಾಕ್ ಎನ್ನುವಂತೆ ನಾಳೆಯಿಂದ ಹೊಸ ನಿಯಮ ಜಾರಿಗೊಳ್ಳುತ್ತಿದೆ. ಈ ನಿಯಮದ ಅನುಸಾರ ರೂ.100 ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡರೂ ಸಂಪರ್ಕ ಕಡಿತಗೊಳ್ಳಲಿದೆ. ಬಿಲ್‌ ಬಂದ 30 ದಿನದೊಳಗೆ ವಿದ್ಯುತ್‌ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು. ಸೆಪ್ಟೆಂಬರ್‌ 1ರಿಂದ ಕಟ್ಟುನಿಟ್ಟಾಗಿ ಈ ನಿಯಮವನ್ನು ಪಾಲಿಸಲು ನಿರ್ಧರಿಸಿರುವ ಬೆಸ್ಕಾಂ- ಗೃಹ ಮತ್ತು ವಾಣಿಜ್ಯ ಬಳಕೆದಾರರು, ಅಪಾರ್ಟ್‌ಮೆಂಟ್‌ಗಳು ಹಾಗೂ ತಾತ್ಕಲಿಕ ವಿದ್ಯುತ್‌ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್‌ ಪಾವತಿಸದಿದ್ದಲ್ಲಿ ಮೀಟರ್‌ ರೀಡಿಂಗ್‌ಗೆ ಬರುವ ದಿನ ಅಂದರೆ ಪ್ರತಿ ತಿಂಗಳ ಮೊದಲ 15 ದಿನದಲ್ಲೇ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು. ಹಾಗಾಗಿ, ಗ್ರಾಹಕರು ಸಕಾಲದಲ್ಲಿ ಶುಲ್ಕ ಪಾವತಿಸುವಂತೆ ಎಂದು ಬೆಸ್ಕಾಂ ಪ್ರಕಟಣೆ ಕೋರಿದೆ. ಈವರೆಗೆ, ಪ್ರತಿ ತಿಂಗಳ ಮೊದಲ 15 ದಿನದಲ್ಲಿ ಮೀಟರ್‌ ಮಾಪನ ಮಾಡಿದ ಬಳಿಕ, ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರ…

Read More

ಬೆಂಗಳೂರು: ಶಾಪಿಂಗ್ ಗೆ ತೆರಳಿದ್ದಂತ ಸಂದರ್ಭದಲ್ಲಿ ಮಾಜಿ ಕೇಂದ್ರ ಸಚಿವ ಸದಾನಂದಗೌಡ ಅವರ ಪತ್ನಿ ಡಾಟಿ ಕುಸಿದು ಬಿದ್ದು, ಅಸ್ವಸ್ಥಗೊಂಡಿರುವುದಾಗಿ ತಿಳಿದು ಬಂದಿದೆ. ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಕಾರು ಚಾಲಕ ದಾಖಲಿಸಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಇರುವಂತ ಐಕಿಯಾ ಮಾಲ್ ಗೆ ಶಾಪಿಂಗ್ ಗೆ ತೆರಳಿದ್ದಂತ ವೇಳೆಯಲ್ಲಿ ಮಾಜಿ ಕೇಂದ್ರ ಸಚಿವ ಸದಾನಂದಗೌಡ ಅವರ ಪತ್ನಿ ಡಾಟಿ ಅವರು ಕುಸಿದು ಬಿದ್ದಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಕುಸಿದು ಬಿದ್ದಂತ ಅವರನ್ನು ಸಮೀಪದ ಆಸ್ಪತ್ರೆಗೆ ಕಾರು ಚಾಲಕ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಪತ್ನಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದಂತ ವಿಷಯ ತಿಳಿದಂತ ಸದಾನಂದಗೌಡ ಅವರು ಕೂಡಲೇ ಆಸ್ಪತ್ರೆಗೆ ಧಾವಿಸಿದ್ದಾರೆ. ಅವರೊಂದಿಗೆ ದಾಸಹಳ್ಳಿಯ ಶಾಸಕ ಮುನಿರಾಜು ಕೂಡ ಆಗಮಿಸಿದ್ದಾರೆ. https://kannadanewsnow.com/kannada/haryana-assembly-elections-to-be-held-on-october-5-results-of-jammu-and-kashmir-and-haryana-to-be-declared-on-october-8/ https://kannadanewsnow.com/kannada/man-attempts-suicide-by-consuming-poison-in-court-fearing-jail-term-in-davangere/

Read More

ಶಿವಮೊಗ್ಗ: ನಾಳೆ ಸಾಗರ ತಾಲ್ಲೂಕಿನಲ್ಲಿ ತುರ್ತಾಗಿ ಮೆಸ್ಕಾಂ ( MESCOM ) ಇಲಾಖೆಯಿಂದ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ದಿನಾಂಕ 01-09-2024ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ. ಈ ಕುರಿತಂತೆ ಮೆಸ್ಕಾಂ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ: 01.09.2024 ರ ಭಾನುವಾರದಂದು 110/33/11 ಕೆ.ವಿ ಸಾಗರ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತುರ್ತಾಗಿ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ಸಾಗರ ತಾಲ್ಲೂಕಿನ ಈ ಕೆಳಗಿನ ಪ್ರದೇಶಗಳಲ್ಲಿ ಬೆಳಗ್ಗೆ: 10:00 ಘಂಟೆಯಿಂದ ಸಂಜೆ: 5:00 ಘಂಟೆಯವರೆಗೆ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ದಿನಾಂಕ 01.09.2024ರ ನಾಳೆ ಸಾಗರ ಪಟ್ಟಣ ವ್ಯಾಪ್ತಿಯ ಎಫ್-1 ಸಾಗರ ಟೆರ್, ಎಫ್-7 ಮಂಗಳಬೀಸು ಇಂಡಸ್ಟ್ರಿಯಲ್ ಏರಿಯ, ಎಫ್-8 ಮಾರಿಕಾಂಬ, ಎಫ್- 15 ಆರ್.ಎಂ.ಸಿ, ಎಚ್-17 ಎಸ್.ಎನ್.ನಗರ ಮತ್ತು ಗ್ರಾಮೀಣ ವ್ಯಾಪ್ತಿಯ ಎಫ್-2 ಮಾಧ್ಯೆ ಎಫ್-3 ಹೆಗ್ಗೋಡು, ಎಫ್-4 ಆವಿನಹಳ್ಳಿ, ಎಫ್-5 ಎರದಹಳ್ಳಿ, ಎಫ್- ಬೊಮ್ಮತ್ತಿ ಎಫ್-೧…

Read More

ಬೆಂಗಳೂರು: ಗ್ರಾಮ ಪಂಚಾಯಿತಿ ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳನ್ನು ಅಕ್ಷರಸ್ಥನ್ನಾಗಿಸುವ ʼಸಾಕ್ಷರ ಸನ್ಮಾನʼ ಕಾರ್ಯಕ್ರಮ ಸೆಪ್ಟೆಂಬರ್‌ 1ರಿಂದ ರಾಜ್ಯದಾದ್ಯಂತ ಆರಂಭವಾಗಲಿದ್ದು 6,346 ಮಂದಿ ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳು ಅಕ್ಷರ ಕಲಿಯುವ ಕಾರ್ಯಕ್ರಮದಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ 94775 ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳಿದ್ದು, ಇವರಲ್ಲಿ ಸುಮಾರು ಶೇ.10 ರಷ್ಟು ಅನಕ್ಷರಸ್ಥರಿದ್ದಾರೆ ಎಂದು ಹೇಳಿರುವ ಸಚಿವರು ರಾಜ್ಯದಲ್ಲಿ 9357 ಅನಕ್ಷರಸ್ಥ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳಿದ್ದು, ಇವರಲ್ಲಿ 7277 ಮಂದಿ ಮಹಿಳೆಯರಾಗಿದ್ದಾರೆ, ಕಳೆದ ವರ್ಷ 2403 ಮಹಿಳೆಯರು ಸೇರಿದಂತೆ 3011 ಮಂದಿಯನ್ನು ಸಾಕ್ಷರರನ್ನಾಗಿಸುವ ಕಾರ್ಯಕ್ರಮ ಆರಂಭವಾಗಿದೆ, ಸೋಮವಾರದಿಂದ ಆರಂಭವಾಗಲಿರುವ ಕಾರ್ಯಕ್ರಮದಲ್ಲಿ 5234 ಮಂದಿ ಮಹಿಳಾ ಅನಕ್ಷರಸ್ಥರು ಹಾಗೂ 1112 ಪುರುಷ ಅಕ್ಷರ ಬಾರದವರು ಅಕ್ಷರ ಕಲಿಯಲಿದ್ದಾರೆ ಎಂದು ತಿಳಿಸಿದ್ದಾರೆ. ಅನಕ್ಷರಸ್ಥ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳಲ್ಲಿ ಓದು, ಬರಹ ಕಲಿಸಿ, ಲೆಕ್ಕಾಚಾರದಲ್ಲಿ ಸ್ವಾವಲಂಬಿಗಳಾಗುವಂತೆ ಮಾಡುವುದು ಕಾರ್ಯಕ್ರಮದ ಮುಖ್ಯ…

Read More

ಲವಂಗದಿಂದ ಈ ಪರಿಹಾರವನ್ನು ಮಾಡಿಕೊಳ್ಳಿ ಮೂರು ಶುಕ್ರ ವಾರ ಗಳ ಕಾಲ ಈ ಪರಿಹಾರವನ್ನು ನೀವು ಪಾಲಿಸಿಕೊಂಡು ಬಂದಿದೆ ಅದರೆ ನಿಮ್ಮ ಜೀವನದಲ್ಲಿ ಎದುರಾಗುತ್ತ ಇರುವಂತಹ ಹಣಕಾಸಿಗೆ ಸಂಬಂಧಪಟ್ಟ ವಿಚಾರಗಳು ಬೇಗ ಪರಿಹರವಾಗುತ್ತದೆ. ಪಂಡಿತ್  ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ 9686268564 ಅದು ಹೇಗೆ ಅಂತೀರಾ ಈ ಲವಂಗಕ್ಕೆ ಬಹಳ ವಿಶೇಷವಾದ ಶಕ್ತಿ ಇದೆ ಹಾಗೂ ದುಷ್ಟಶಕ್ತಿಯನ್ನು ದೂರ ಮಾಡುವಂತಹ…

Read More