Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಚಾಮರಾಜನಗರ: ತಲೆಯಲ್ಲಿ ಕೂದಲಿಲ್ಲ. ಹೊರಗೆ ತಲೆಯಲ್ಲಿ ಕೂದಲಿಲ್ಲದ ಗಂಡನ ಜೊತೆಗೆ ಹೋದ್ರೆ ನಾಚಿಕೆ ಆಗುತ್ತೆ ಎಂಬುದಾಗಿ ಕಿರುಕುಳ ನೀಡುತ್ತಿದ್ದಂತ ಪತ್ನಿಯ ಕಾಟಕ್ಕೆ ಬೇಸತ್ತು, ಪತಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ಚಾಮರಾಜನಗರ ಉಡಿಗಾಲದ ಪರಶಿವಮೂರ್ತಿ(32) ಎಂಬುವರೇ ಪತ್ನಿಯ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವಂತ ವ್ಯಕ್ತಿಯಾಗಿದ್ದಾರೆ. 2 ವರ್ಷಗಳ ಹಿಂದೆ ಪರಶಿವಮೂರ್ತಿ ಅವರು ಕೆಳಕಿಪುರದ ಮಮತಾ ಎಂಬುವರೊಂದಿಗೆ ವಿವಾಹವಾಗಿದ್ದರು. ಪರಶಿವಮೂರ್ತಿಯ ತಲೆ ಕೂದಲು ಮದುವೆ ನಂತ್ರ ಉದುರಿತ್ತು. ಇದರಿಂದಾಗಿ ಪತ್ನಿ ಮಮತಾ ದಿನಾಲೂ ತಲೆಯಲ್ಲಿ ಕೂದಲಿಲ್ಲ ಎಂಬುದಾಗಿ ಕಿರುಕುಳ ನೀಡುತ್ತಿದ್ದಳಂತೆ. ಇನ್ನೂ ತಲೆಯಲ್ಲಿ ಕೂದಲಿಲ್ಲದ ಪರಶಿವಮೂರ್ತಿಯನ್ನು ಗಂಡ ಅನ್ನುವುದಕ್ಕೂ ಅವಮಾನ ಆಗುತ್ತದೆ. ಹೊರಗೆ ಹೋಗೋದಕ್ಕೂ ನನಗೆ ನಾಚಿಕೆ ಆಗುತ್ತದೆ ಎಂಬುದಾಗಿ ಅಪಹಾಸ್ಯ ಮಾಡುತ್ತಿದ್ದಳಂತೆ. ಇದಲ್ಲದೇ ತಾಳಿಯನ್ನು ತೆಗೆದಿಟ್ಟಿರುವಂತ ಪೋಟೋವನ್ನು ವಾಟ್ಸ್ ಆಪ್ ಸ್ಟೇಟಸ್ ಹಾಕಿದ್ದಳಂತೆ. ಈ ವಿಚಾರಕ್ಕಾಗಿ ಪರಶಿವಮೂರ್ತಿ ಹಾಗೂ ಮಮತಾ ನಡುವೆ ಜಗಳ ಕೂಡ ಆಗಿತ್ತಂತೆ. ಇದಷ್ಟೇ ಅಲ್ಲದೇ ಪರಶಿವಮೂರ್ತಿ ವಿರುದ್ಧ ಮಮತಾ…
ರಾಮನಗರ: ಜಿಲ್ಲೆಯ ಬಿಡದಿ ಬಳಿಯಿರುವಂತ ಟೊಯೋಟೋ ಕಂಪನಿಯ ಟಾಯ್ಲೆಟ್ಟಿನಲ್ಲಿ ಪಾಕ್ ಪರ ಬರವನ್ನು, ಕನ್ನಡಿಗರ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿ ಕಿಡಿಗೇಡಿಗಳು ಬರೆದಿರುವ ವಿಚಾರ ತಿಳಿದು ಬಂದಿದೆ. ರಾಮನಗರದ ಬಿಡದಿಯಲ್ಲಿರುವ ಟೊಯೋಟೋ ಕಂಪನಿಯ ಶೌಚಾಲಯದಲ್ಲಿ ಪಾಕಿಸ್ತಾನ ಜೈ, ಕನ್ನಡಿಗರು ಸೂ* ಮಕ್ಕಳು ಎಂಬುದಾಗಿ ಕಿಡಿಗೇಡಿಗಳು ಅವಹೇಳನಕಾರಿ ಬರಹವನ್ನು ಬರೆದಿದ್ದಾರೆ. ಇದು ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೂ ಕಾರಣವಾಗಿ, ಕಂಪನಿಯ ಬಳಿಯಲ್ಲಿ ಪ್ರತಿಭಟನೆಗೂ ಕಾರಣವಾಯ್ತು. ಈ ರೀತಿಯ ಅವಹೇಳನಕಾರಿ ಬರಹ ಬರೆದಂತ ಸಿಬ್ಬಂದಿಗೆ ಟೊಯೋಟೋ ಕಾನೂನು ಕ್ರಮ ಜರುಗಿಸುವುದಾಗಿಯೂ ಸುತ್ತೋಲೆ ಹೊರಡಿಸಿ ಎಚ್ಚರಿಕೆ ನೀಡಿದೆ. ಅಂದಹಾಗೇ ಟೊಯೋಟೋ ಕಂಪನಿಯ ಶೌಚಾಲಯದ ಗೋಡೆಯ ಮೇಲೆ ಪಾಕಿಸ್ತಾನ ಜೈ, ಕನ್ನಡಗಿರು ಸೂ* ಮಕ್ಕಳು ಎಂಬುದಾಗಿ ಬರೆಯಲಾಗಿದೆ. ಈ ರೀತಿಯಾಗಿ ಬರೆದಿದ್ದು ಯಾರು ಎನ್ನುವುದು ಈವರೆಗೆ ತಿಳಿದು ಬಂದಿಲ್ಲ. ಈ ರೀತಿಯಾಗಿ ಬರೆದಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ದೇಶದ್ರೋಹ ಅಪರಾಧದ ಅಡಿಯಲ್ಲಿ ಅವರ ವಿರುದ್ಧ ಕೇಸ್ ದಾಖಲಿಸಬೇಕು ಅಂತ ಕನ್ನಡಪರ ಸಂಘಟನೆಯ ಮುಖಂಡರು ಆಗ್ರಹಿಸಿದ್ದಾರೆ. https://kannadanewsnow.com/kannada/fight-over-water-food-wedding-scheduled-for-today-cancelled/…
ಚಿತ್ರದುರ್ಗ: ಆ ವರ ನಿಗದಿತ ಸಮಯಕ್ಕೆ ಬಾರದೇ ರಾತ್ರಿ 9.30ಕ್ಕೆ ಚೌಟರಿಗೆ ಆಗಮಿಸಿದ್ದರು. ಹೀಗಾಗಿ ರಾತ್ರಿ ನಡೆಯಬೇಕಿದ್ದಂತ ಆರತಕ್ಷತೆಯೇ ನಡೆದಿರಲಿಲ್ಲ. ಈ ಬಳಿಕ ವರನ ಕೊಠಡಿಗೆ ನೀರಿಟ್ಟಿಲ್ಲ. ನೀರು ಕೊಟ್ಟಿಲ್ಲ, ರಾತ್ರಿ ಊಟವೂ ವರನ ಕಡೆಯ ಸಂಬಂಧಿಕರಿಗೆ ಸಿಕ್ಕಿಲ್ಲ ಅಂತ ಜಗಳ ಉಂಟಾಗಿದೆ. ಈ ಜಗಳ ತಾರಕಕ್ಕೇರಿ ಇಂದು ನಡೆಯಬೇಕಿದ್ದಂತ ಮದುವೆಯೇ ಮುರಿದು ಬಿದ್ದಿರುವಂತ ಘಟನೆ ಹಿರಿಯೂರು ಪಟ್ಟಣದಲ್ಲಿ ನಡೆದಿದೆ. ನೀರು, ಊಟದ ವಿಚಾರಕ್ಕೆ ಜಗಳ, ಮದುವೆ ಕ್ಯಾನ್ಸಲ್ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬಲಿಜ ಸಮುದಾಯ ಭವನದಲ್ಲಿ ಜಗಳೂರು ಮೂಲದ ವರ ಹಾಗೂ ಶಿರಾ ಮೂಲದ ವಧುವಿನ ಮದುವೆ ನಿಗದಿಯಾಗಿತ್ತು. ನಿನ್ನೆ ರಾತ್ರಿ ವರ ಆರತಕ್ಷತೆಯ ಸಮಯಕ್ಕೆ ಬಾರದೇ ರಾತ್ರಿ 9.30ಕ್ಕೆ ಆಗಮಿಸಿದ್ದರಿಂದ ರಿಸೆಪ್ಷನ್ ಕೂಡ ನಡೆಯದೇ ರದ್ದುಗೊಂಡಿತ್ತು. ಆ ನಂತ್ರ ಊಟಕ್ಕೆ ತೆರಳಿದಂತ ವರನ ಕಡೆಯ ಕೆಲವರಿಗೆ ಊಟ ಮುಗಿದಿದ್ದರಿಂದ ಖಾಲಿಯಾಗಿದ್ದಕ್ಕೆ ಗಲಾಟೆ ಕೂಡ ಮಾಡಲಾಗಿತ್ತಂತೆ. ಈ ಗಲಾಟೆ ತಾರಕಕ್ಕೇರಿದ್ದರಿಂದ ವರನ ರೂಮಿನಲ್ಲಿ ನೀರು ಇಟ್ಟಿಲ್ಲ ಎಂಬುದಕ್ಕೂ ಕಿರಿಕ್…
ಪಾಕಿಸ್ತಾನ: ಭಾನುವಾರ ಬಲೂಚ್ ಬಂಡುಕೋರರು ಸೈನಿಕರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ಬೆಂಗಾವಲು ಪಡೆಯ ಮೇಲೆ ಬಾಂಬ್ ದಾಳಿ ಮಾಡಿದ ನಂತರ ಒಟ್ಟು 90 ಪಾಕಿಸ್ತಾನಿ ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಬಲೂಚ್ ಲಿಬರೇಶನ್ ಆರ್ಮಿ ತಿಳಿಸಿದೆ. ಆದಾಗ್ಯೂ, ದಾಳಿಯಲ್ಲಿ ಕೇವಲ ಐದು ಅರೆಸೈನಿಕ ಪಡೆಗಳು ಮಾತ್ರ ಸಾವನ್ನಪ್ಪಿವೆ ಎಂದು ಪಾಕಿಸ್ತಾನಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದಾಳಿಯ ಹೊಣೆಯನ್ನು ಹೊತ್ತುಕೊಂಡಿರುವ ಪಾಕಿಸ್ತಾನದ ಬಲೂಚಿಸ್ತಾನದಲ್ಲಿರುವ ಪ್ರತ್ಯೇಕತಾವಾದಿ ಗುಂಪು ಬಿಎಲ್‌ಎ, “ಕೆಲವು ಗಂಟೆಗಳ ಹಿಂದೆ ನೋಶ್ಕಿಯ ಆರ್‌ಸಿಡಿ ಹೆದ್ದಾರಿಯಲ್ಲಿರುವ ರಕ್ಷನ್ ಮಿಲ್ ಬಳಿ ನಡೆದ ವಿಬಿಐಇಡಿ ಫಿದಾಯಿ ದಾಳಿಯಲ್ಲಿ ಆಕ್ರಮಿತ ಪಾಕಿಸ್ತಾನಿ ಮಿಲಿಟರಿಯ ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡಿದೆ” ಎಂದು ಹೇಳಿದೆ. ಬಂಡುಕೋರ ಗುಂಪು ಬೆಂಗಾವಲು ಪಡೆಯು “ಎಂಟು ಬಸ್‌ಗಳನ್ನು ಒಳಗೊಂಡಿತ್ತು, ಅವುಗಳಲ್ಲಿ ಒಂದು ಸ್ಫೋಟದಲ್ಲಿ ಸಂಪೂರ್ಣವಾಗಿ ನಾಶವಾಯಿತು” ಎಂದು ಹೇಳಿಕೊಂಡಿದೆ. https://kannadanewsnow.com/kannada/minister-sharan-prakash-patil-orders-cancellation-of-transfer-of-property-of-children-who-leave-their-parents-in-hospital-in-the-evening/ https://kannadanewsnow.com/kannada/shocking-incident-transgender-stripped-naked-shaved-off-and-assaulted-in-kalaburagi/
ಬೆಂಗಳೂರು : ಇಂದಿನ ಯಾಂತ್ರೀಕೃತ ಹಾಗೂ ತಂತ್ರಜ್ಞಾನ ಜೀವನದಲ್ಲಿ ಭಾವನೆಗಳು ಹಾಗೂ ಸಂಬಂಧಗಳು ಮರೆಯಾಗುತ್ತಿರುವುದು ಬೇಸರದ ಸಂಗತಿ. ಇದು ಯಾವ ಮಟ್ಟಕ್ಕೆ ಹೋಗಿದೆ ಎಂದರೆ ಜನ್ಮ ನೀಡಿದ ತಂದೆ-ತಾಯಂದಿರನ್ನೇ ಅನಾಥರನ್ನಾಗಿ ಮಾಡುತ್ತಿರುವ ಪರಿಪಾಠ ಹೆಚ್ಚಾಗಿದೆ. ಇಂಥ ಅಮಾನವೀಯ ಕೃತ್ಯಗಳಿಗೆ “ಬ್ರೇಕ್” ಹಾಕಲು ವೈದ್ಯಕೀಯ ಶಿಕ್ಷಣ ಇಲಾಖೆ ಮುಂದಾಗಿದೆ. ಕರ್ನಾಟಕದಲ್ಲಿ ಇತ್ತೀಚೆಗೆ ವೃದ್ಧ ಪೋಷಕರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಬಿಟ್ಟು ಹೋಗುತ್ತಿರುವ ಉದಾಹರಣೆಗಳು ಹೆಚ್ಚಾಗಿದೆ. ಅದೂ ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಗೆ ಬಿಟ್ಟು ಮಕ್ಕಳು ನಾಪತ್ತೆಯಾಗುತ್ತಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಐಎಂಎಸ್) ಒಂದರಲ್ಲೇ, 150 ಕ್ಕೂ ಹೆಚ್ಚು ಹಿರಿಯ ನಾಗರಿಕರನ್ನು ಮಕ್ಕಳು ತೊರೆದ ಪ್ರಕರಣಗಳು ವರದಿಯಾಗಿವೆ. ರಾಜ್ಯಾದ್ಯಂತ ಇತರ ವೈದ್ಯಕೀಯ ಸಂಸ್ಥೆಗಳಲ್ಲಿ ಇಂಥ 100 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಈ ವಿಷಯವನ್ನು ಅರಿತ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್,…
ಬಳ್ಳಾರಿ: ಮಾಜಿ ಶಾಸಕ ಬಸವರಾಜ ದಡೇಸೂಗೂರು ನನ್ನ ಗಂಡ ಎಂಬುದಾಗಿ ಹೇಳಿದ್ದಂತ ವಿಜಯನಗರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿಯ ಮೇಲೆ ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ವಿಜಯನಗರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿದ್ದರು. ಈ ವೇಳೆಯಲ್ಲಿ ಮಹಿಳಾ ಅಧಿಕಾರಿ ಶ್ವೇತಾ ಅವರ ಮೊಬೈಲ್ ಪೋನ್ ಚೆಕ್ ಮಾಡಲಾಗಿತ್ತು. ಈ ವೇಳೆ ಹಣ ವಹಿವಾಟಿನ ವಿಚಾರ ಬೆಳಕಿಗೆ ಬಂದಿತ್ತು. ಹಣದ ವಹಿವಾಟಿನ ಬಗ್ಗೆ ವಿಚಾರಿಸಿದಾಗ ನನ್ನ ಗಂಡ ಕಳಿಸಿದ್ದಾರೆ. ನನ್ನ ಗಂಡ ರಾಜಕಾರಣಿ. ನನ್ನ ಪತಿ ಮಾಜಿ ಶಾಸಕ ಬಸವರಾಜ ದಡೇಸೂಗೂರು ಎಂಬುದಾಗಿ ತಿಳಿಸಿದ್ದರು. ಮಹಿಳಾ ಅಧಿಕಾರಿ ಶ್ವೇತಾ ಈ ಉತ್ತರದಿಂದ ಉಪ ಲೋಕಾಯುಕ್ತರಿಗೆ ಸಮಾಧಾನವಾಗಿರಲಿಲ್ಲ. ಜೊತೆಗೆ ಭ್ರಷ್ಟಾಚಾರದ ಅನುಮಾನ ವ್ಯಕ್ತವಾಗಿತ್ತು. ಹೀಗಾಗಿ ಸ್ವಯಂ ಪ್ರೇರಿತ ಕೇಸ್ ದಾಖಲಿಸಿ, ತನಿಖೆಗೆ ಸೂಚಿಸಿದ್ದಾರೆ. https://kannadanewsnow.com/kannada/mandya-residential-school-student-dies-due-to-poisoning-cm-siddaramaiah-announces-compensation/ https://kannadanewsnow.com/kannada/shocking-incident-transgender-stripped-naked-shaved-off-and-assaulted-in-kalaburagi/
ಬೆಂಗಳೂರು: ಮಂಡ್ಯದಲ್ಲಿ ವಸತಿ ಶಾಲೆಯ ವಿದ್ಯಾರ್ಥಿಯೊಬ್ಬ ವಿಷಾಹಾರ ಸೇವಿಸಿ ಸಾವನ್ನಪ್ಪಿದ್ದರ ಬಗ್ಗೆ ಸಿಎಂ ಸಿದ್ಧರಾಮಯ್ಯ ವಿಷಾದ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಪೊಲೀಸರಿಗೆ ಸೂಕ್ತ ತನಿಖೆಗೆ ಸೂಚಿಸಿದ್ದಾರೆ. ಈ ಘಟನೆಯಲ್ಲಿ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಖಾಸಗಿ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಹಲವು ಮಕ್ಕಳು ತೀವ್ರ ಅಸ್ವಸ್ಥಗೊಂಡ ವಿಚಾರ ತಿಳಿದು ನೋವಾಯಿತು ಎಂದಿದ್ದಾರೆ. ಘಟನೆ ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮಕ್ಕಳಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಹಾಗೂ ಘಟನೆಗೆ ಕಾರಣರಾದವರ ಮೇಲೆಯೂ ಕಠಿಣ ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದೆ, ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ ಎಂದು ಹೇಳಿದ್ದಾರೆ. ಈ ದುರ್ಘಟನೆಯಲ್ಲಿ ಮಡಿದ ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಾಗುವುದು. ಬೇರೆಡೆ…
ಉತ್ತರ ಮ್ಯಾಸಿಡೋನಿಯಾದ ನೈಟ್ ಕ್ಲಬ್ ನಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡಿದ್ದು, ಅಲ್ಲಿ ಸಂಗೀತ ಕಚೇರಿಗಾಗಿ 1,000 ಕ್ಕೂ ಹೆಚ್ಚು ಜನರು ಜಮಾಯಿಸಿದ್ದರು, ಕನಿಷ್ಠ 50 ಜನರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸುದ್ದಿ ಸಂಸ್ಥೆ ಎಂಐಎ ತಿಳಿಸಿದೆ. ತಡರಾತ್ರಿ ಈ ದುರಂತ ಸಂಭವಿಸಿದ್ದು, ಬೆಂಕಿಯ ಜ್ವಾಲೆಗಳು ಕಿಕ್ಕಿರಿದ ಸ್ಥಳವನ್ನು ತ್ವರಿತವಾಗಿ ಆವರಿಸಿದ್ದು, ಭಾಗವಹಿಸುವವರಲ್ಲಿ ಭೀತಿ ಮತ್ತು ಗೊಂದಲಕ್ಕೆ ಕಾರಣವಾಯಿತು. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಬೆಂಕಿ ಹೊತ್ತಿಕೊಳ್ಳೋದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ತನಿಖೆ ನಡೆಯುತ್ತಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಸುಟ್ಟ ಗಾಯಗಳಿಂದ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. https://kannadanewsnow.com/kannada/we-will-not-accept-4-reservation-for-muslims-narayanasamy/ https://kannadanewsnow.com/kannada/shocking-incident-transgender-stripped-naked-shaved-off-and-assaulted-in-kalaburagi/
ಬೆಂಗಳೂರು: ಮುಸ್ಲಿಮರಿಗೆ ಶೇ 4 ಮೀಸಲಾತಿಯನ್ನು ನಾವು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ; ಇದನ್ನು ನಾವು ವಿರೋಧಿಸುತ್ತೇವೆ. ಸದನದ ಒಳಗೆ ಮತ್ತು ಹೊರಗೆ ಹೋರಾಟ ಮಾಡಲಿದ್ದೇವೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಕಟಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರ ನೀಡಿದರು. ಈಗಾಗಲೇ ಮುಸ್ಲಿಂ ಬಂಧುಗಳಿಗೆ ಶೇ 4ರಷ್ಟು ಮೀಸಲಾತಿ ಹಿಂದೆ ಇತ್ತು. ಧಾರ್ಮಿಕ ಮೀಸಲಾತಿ ಕೊಡಲು ಸಂವಿಧಾನದಲ್ಲಿ ಅವಕಾಶ ಇಲ್ಲ; ಧಾರ್ಮಿಕ ಮೀಸಲಾತಿ ನೀಡಿದರೆ ಅದು ಸಂವಿಧಾನಕ್ಕೆ ವಿರುದ್ಧವಾದ ನಡೆ ಎಂದು ಪ್ರತಿಪಾದಿಸಿದರು. ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಗಳಾಗಿದ್ದಾಗ ಧಾರ್ಮಿಕ ಮೀಸಲಾತಿಯನ್ನು ಹಿಂದಕ್ಕೆ ಪಡೆಯಲಾಗಿತ್ತು. ಕಾಂಗ್ರೆಸ್ಸಿನವರು ತಾವು ಅಧಿಕಾರಕ್ಕೆ ಬಂದರೆ ಮತ್ತೆ ಧಾರ್ಮಿಕ ಮೀಸಲಾತಿ ನೀಡುವುದಾಗಿ ಘೋಷಿಸಿದ್ದರು. ಈಗ ಗುತ್ತಿಗೆಯಲ್ಲಿ ಶೇ 4 ಮೀಸಲಾತಿಯನ್ನು ಕೊಟ್ಟಿದ್ದಾರೆ. ಇದು ಕಾನೂನುಬಾಹಿರ, ಸಂವಿಧಾನವಿರೋಧಿ ಎಂದು ಆಕ್ಷೇಪಿಸಿದರು. ನಮ್ಮ ರಾಷ್ಟ್ರೀಯ ನಾಯಕರು ಕೂಡ ಇದಕ್ಕೆ ಉತ್ತರ ನೀಡಿದ್ದಾರೆ. ಜೈನರು…
ಅಟ್ಲಾಂಟಿಕ್ ಮಹಾಸಾಗರ ದಾಟಿ ದಾಖಲೆ ನಿರ್ಮಿಸಿದ ರಾಷ್ಟ್ರಕವಿ ಜಿಎಸ್ಎಸ್ ಮೊಮ್ಮಗಳ ಸಾಧನೆಗೆ ಸಿಎಂ ಸಿದ್ಧರಾಮಯ್ಯ ಶ್ಲಾಘನೆ
ಬೆಂಗಳೂರು: ಅಟ್ಲಾಂಟಿಕ್ ಮಹಾಸಾಗರ ದಾಟಿ ದಾಖಲೆ ನಿರ್ಮಿಸಿದ ರಾಷ್ಟ್ರಕವಿ ಜಿಎಸ್ಎಸ್ ಮೊಮ್ಮಗಳಾದಂತ ಅನನ್ನಯ ಪ್ರಸಾದ್ ಸಾಧನೆಗೆ ಸಿಎಂ ಸಿದ್ಧರಾಮಯ್ಯ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಅಟ್ಲಾಂಟಿಕ್ ಮಹಾಸಾಗರವನ್ನು ಸತತ 52 ದಿನಗಳ ಕಾಲ ಏಕಾಂಗಿಯಾಗಿ ರೋವಿಂಗ್ ಮಾಡುತ್ತಾ ದಾಟಿ ಹೊಸದೊಂದು ದಾಖಲೆ ನಿರ್ಮಿಸಿದ ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಅವರ ಮೊಮ್ಮಗಳು ಅನನ್ಯ ಪ್ರಸಾದ್ ಅವರು ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾದರು. ಅನಾಥ ಮಕ್ಕಳಿಗೆ ಶಿಕ್ಷಣ ನೀಡುವ ಚಾಮರಾಜನಗರ – ರಾಮಸಮುದ್ರದ ದೀನಬಂಧು ಶಾಲೆಯ ಮಕ್ಕಳ ಭವಿಷ್ಯಕ್ಕಾಗಿ ಇಂಥದ್ದೊಂದು ಸಾಹಸಕ್ಕೆ ಕೈಹಾಕಿ ಯಶಸ್ವಿಯಾಗಿರುವ ಅನನ್ಯ ಪ್ರಸಾದ್ ಅವರ ಕಾಳಜಿಯನ್ನು ಮೆಚ್ಚಿ ಮುಖ್ಯಮಂತ್ರಿಗಳು ಮನಸ್ಪೂರ್ತಿಯಾಗಿ ಶ್ಲಾಘಿಸಿದರು. https://kannadanewsnow.com/kannada/psi-slaps-bjp-leader-in-the-middle-of-the-road/ https://kannadanewsnow.com/kannada/breaking-shivamogga-woman-dies-of-electrocution-while-starting-motor/














