Author: kannadanewsnow09

ಶಿವಮೊಗ್ಗ: ಜಿಲ್ಲೆಯ ಸೊರಬ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಗಾಂಜಾ ಮಾರುತ್ತಿದ್ದಂತ ಯುವಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನವೆಂಬರ್.6, 2024ರಂದು ಸೊರಬ ಪಟ್ಟಣದ ಹಿರೇಶಕುನದ ಇಂಡಸ್ಟ್ರೀಯಲ್ ಪ್ರದೇಶದಲ್ಲಿ ಯುವಕನೊಬ್ಬ ಗಾಂಜಾ ಮಾರುತ್ತಿದ್ದಂತ ಖಚಿತ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಈ ಖಚಿತ ಮಾಹಿತಿಯ ಮೇರೆಗೆ ಶಿಕಾರಿಪುರ ಹಾಗೂ ಸೊರಬ ಡಿವೈಎಸ್ಪಿ ಕೇಶವ್ ಸೂಚನೆ ಮೇರೆಗೆ ಸೊರಬ ಸರ್ಕಲ್ ಇನ್ಸ್ ಪೆಕ್ಟರ್ ರಾಜಶೇಖರ್ ಮಾರ್ಗದರ್ಶನದಲ್ಲಿ ಎಸ್ಐ ಚಂದನ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ದಾಳಿಯ ವೇಳೆಯಲ್ಲಿ ಸಾಗರ ನಿವಾಸಿ ಮನೀಶ್ ಖಾರ್ವಿ(24) ಎಂಬಾತನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯಿಂದ 10 ಸಾವಿರ ಮೌಲ್ಯದ 100 ಗ್ರಾಂ ತೂಕದ ಒಣ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಇದಲ್ಲದೇ ರೂ.600 ನಗದು ಹಾಗೂ ಕೃತ್ಯಕ್ಕೆ ಬಳಸಿದ್ದಂತ ಒಂದು ದ್ವಿಚಕ್ರವಾಹನವನ್ನು ಸೀಜ್ ಮಾಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಹೆಚ್ ಸಿ ರಾಜುನಾಯಕ್, ಪಿಸಿ ವಿನಯ್, ರಾಘವೇಂದ್ರ ಹಾಗೂ ಲೋಕೇಶ್, ಚಾಲಕ ಜಗದೀಶ್ ಭಾಗಿಯಾಗಿದ್ದರು. ಇಂತಹ ಕಾರ್ಯಾಚರಣೆ ನಡೆಸಿದಂತ ಸೊರಬ ಠಾಣೆಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳಿಗೆ…

Read More

ಬೆಂಗಳೂರು: IIT/IIM/IISC /NIT ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ SC/ST ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1 ರಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಿ ಸರ್ಕಾರವು ಆದೇಶ ಹೊರಡಿಸಿದ್ದು ಇದು ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳ ಹೆಚ್ಚಿನ ಶೈಕ್ಷಣಿಕ ಸಾಧನೆಗೆ ಕಾರಣವಾಗಲಿದೆ ಎಂದು ಮಾನ್ಯ ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇನ್ನು ಪಿಯುಸಿ ಪರೀಕ್ಷೆಯಲ್ಲಿ 95 ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು, ನೀಟ್ ಪ್ರವೇಶ ಪರೀಕ್ಷೆಯ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೇ ಮ್ಯಾನೇಜ್ ಮೆಂಟ್ ಕೋಟಾದಡಿ ಎಂಬಿಬಿಎಸ್ ಕೋರ್ಸ್ ಗೆ ಸೀಟು ಪಡೆದುಕೊಂಡ ಪರಿಶಿಷ್ಟ ಜಾತಿಯ ಮಕ್ಕಳಿಗೆ 25 ಲಕ್ಷ ರೂಪಾಯಿಗಳ ಶುಲ್ಕ ಧನವನ್ನು ಒದಗಿಸಲು ಸರ್ಕಾರ ತೀರ್ಮಾನಿಸಿದೆ. ಎಂಬಿಬಿಎಸ್ ಪದವಿಯನ್ನು ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಮೊದಲ ವರ್ಷ 60% ಗೂ ಹೆಚ್ಚಿನ ಅಂಕಗಗಳನ್ನು ಪಡೆದು ಉತ್ತೀರ್ಣ ರಾದರೆ ಅವರಿಗೆ ಅವರಿಗೆ ಮತ್ತೆ 25 ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನವನ್ನು ನೀಡಲಾಗುವುದು. ಶಿಕ್ಷಣವೇ ಸಮಾಜವನ್ನು…

Read More

ಬೆಂಗಳೂರು: ನಗರದ ಮತ್ತೊಂದು ಪ್ರತಿಷ್ಠಿತ ಶಾಲೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಕೂಡಲೇ ಪೊಲೀಸರು ಪರಿಶೀಲಿಸಲಾಗಿ, ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯ ಬಿಷಪ್ ಕಾಟನ್ ಶಾಲೆಗೆ ವೆಬ್ ಸೈಟ್ ಗೆ ಬಾಂಬ್ ಬೆದರಿಕೆ ಇ-ಮೇಲ್ ಮೂಲಕ ಕಳಉಹಸಲಾಗಿದೆ. ಬೆಳಿಗ್ಗೆ ಬಂದಿದ್ದಂತ ಬೆದರಿಕೆ ಸಂದೇಶವನ್ನು ಮಧ್ಯಾಹ್ನ ಶಾಲಾ ಸಿಬ್ಬಂದಿಗಳು ಗಮನಿಸಿದ್ದಾರೆ. ಈ ಬೆದರಿಕೆಯ ಸಂದೇಶದ ನಂತ್ರ ಕೂಡಲೇ ಕಬ್ಬನ್ ಪಾರ್ಕ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದಂತ ಶ್ವಾನ ದಳ, ಬಾಂಬ್ ನಿಷ್ಕ್ರೀಯ ದಳದ ಸಿಬ್ಬಂದಿಗಳು ಬಿಷಪ್ ಕಾಟನ್ ಶಾಲೆಯನ್ನು ಪರಿಶೀಲಿಸಿದ್ದಾರೆ. ಪೊಲೀಸರು ಪರಿಶೀಲನೆಯ ನಂತ್ರ ಯಾವುದೇ ಬಾಂಬ್ ಶಾಲೆಯಲ್ಲಿ ಪತ್ತೆಯಾಗಿಲ್ಲ. ಹೀಗಾಗಿ ಇದೊಂದು ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಎಂಬುದಾಗಿ ತಿಳಿಸಿದ್ದಾರೆ. ಈ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. https://kannadanewsnow.com/kannada/siddaramaiah-demands-pm-modis-apology-for-false-advertisement-on-grihalakshmi-scheme/ https://kannadanewsnow.com/kannada/save-your-life-from-heart-attack-keep-this-7-rupees-ram-kit/

Read More

ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಸುಳ್ಳು ಜಾಹೀರಾತು ನೀಡಿದ್ದಾರೆ. ಕೂಡಲೇ ಕ್ಷಮೆಯಾಚನೆ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆಗ್ರಹಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ‘‘ಸುಳ್ಳೇ ಬಿಜೆಪಿಯ ಮನೆ ದೇವರು’’ ಎಂದು ನಾವು ಹೇಳುತ್ತಿರುವುದು ಸುಳ್ಳಲ್ಲ. ಮಹಾರಾಷ್ಟ್ರದ ಬಿಜೆಪಿ ನಮ್ಮ ಯಶಸ್ವಿ ಗ್ಯಾರಂಟಿ ಯೋಜನೆಯಾಗಿರುವ ‘’ಗೃಹಲಕ್ಷ್ಮಿ’’ ಬಗ್ಗೆ ಒಂದು ಅಪ್ಪಟ ಸುಳ್ಳನ್ನು ಮಾಧ್ಯಮಗಳಲ್ಲಿ ಜಾಹೀರಾತು ಮೂಲಕ ಪ್ರಕಟಿಸಿ ಸಿಕ್ಕಿ ಹಾಕಿಕೊಂಡಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಭರವಸೆ ನೀಡಿದಂತೆ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರದೆ ಮೋಸ ಮಾಡಿದೆ ಎನ್ನುವುದು ಬಿಜೆಪಿ ಆರೋಪ ಎಂದಿದ್ದಾರೆ. ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರೇ, ಇದೇನು ನಮಗೆ ಆಶ್ಚರ್ಯ ಉಂಟುಮಾಡಿಲ್ಲ. ಮನೆ ಒಡೆಯನ ಬುದ್ದಿ ಮನೆಯವರಿಗೆಲ್ಲ ಬಂದಿದೆ. ಹೋದಲ್ಲಿ ಬಂದಲ್ಲಿ ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಸುಳ್ಳುಗಳನ್ನು ಉದುರಿಸುವ ನಿಮ್ಮಿಂದಲೇ ಪ್ರೇರಣೆ ಪಡೆದು ಮಹಾರಾಷ್ಟ್ರ ಬಿಜೆಪಿ ಇಷ್ಟೊಂದು ನಿರ್ಲಜ್ಜತನದಿಂದ ಈ ಹಸಿಸುಳ್ಳನ್ನು ಪ್ರಕಟಿಸಿದೆ ಎನ್ನುವುದು ನಿಸ್ಸಂಶಯ ಎಂದು ತಿಳಿಸಿದ್ದಾರೆ.…

Read More

ತುಮಕೂರು: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿನ  ಶೌಚದಗುಂಡಿ ತುಂಬಿ ಹರಿಯುತ್ತಿದ್ದ ಮಲವನ್ನ ದಲಿತರಿಂದ ಸ್ವಚ್ಚಗೊಳಿಸಿರುವ ಅಮಾನವೀಯ ಘಟನೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಸ್ವಕ್ಷೇತ್ರ ಕೊರಟಗೆರೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದ ಹೃದಭಾಗದಲ್ಲಿರುವ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು ನಾಗರೀಕ ‌ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ನಿಲ್ದಾಣದ ಒಳಗಿರುವ ಸಾರ್ವಜನಿಕ ಶೌಚಾಲಯದ ಪಿಟ್ ತುಂಬಿ ಹರಿಯುತ್ತಿದನ್ನ ದಲಿತರಿಂದ ಸ್ವಚ್ಚಗೊಳಿಸುವ ಕೆಲಸ ಮಾಡಿಸಲಾಗಿದೆ. ತುಮಕೂರು ಮೂಲದ ಪರಿಶಿಷ್ಟ ಜಾತಿಗೆ ಸೇರಿದ 10 ವರ್ಷದ ಬಾಲಕಾರ್ಮಿಕ ಹಾಗೂ ಓರ್ವ ವ್ಯಕ್ತಿ ನಿಲ್ದಾಣದಲ್ಲಿ ಮಲವನ್ನ ಸ್ವಚ್ಚಗೊಳಿಸುತ್ತಿದ್ದ ದೃಷ್ಯ ಮಾಧ್ಯಮದ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದಲಿತರಿಂದ ಮಲ ಸ್ವಚ್ಚಗೊಳಿಸುವ ಕೆಲಸ ಮಾಡಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಸಿಬ್ಬಂದಿ ಮಾಧ್ಯಮದವರನ್ನ ಕಂಡ ಕೂಡಲೇ ಅಲ್ಲಿಂದ ಪರಾರಿಯಾಗಿದ್ದಾನೆ. ಮಾಧ್ಯಮ ದವರು ಬಾಲಕನನ್ನ ಮಾತನಾಡಿಸಿದ ವೇಳೆ ಶೌಚಾಲಯದ ನಿರ್ವಹಣೆ ಮಾಡುತ್ತಿದ್ದ ಕುಮಾರಣ್ಣ ಎಂಬುವರು ನಮಗೆ ಈ ಕೆಲಸ ಮಾಡುವಂತೆ ಹೇಳಿದ್ದಾರೆ,…

Read More

ಚಿಕ್ಕಬಳ್ಳಾಪುರ: ಮಿನಿ ವಿಧಾನಸೌಧ ವಕ್ಫ್ ಆಸ್ತಿ ಎಂಬುದಾಗಿ ನಮೂದಿಸಿದ ವಿವಾದದ ಬೆನ್ನಲ್ಲೇ ಸರ್ ಎಂ ವಿಶ್ವೇಶ್ವರಯ್ಯ ಅವರು ಓದಿದಂತ ಸರ್ಕಾರಿ ಶಾಲೆಯ ಭೂಮಿ ಕೂಡ ವಕ್ಫ್ ಗೆ ಸೇರಿದ್ದು ಎಂಬುದಾಗಿ ಪಹಣಿಯಲ್ಲಿ ನಮೂದಿಸಲಾಗಿದೆ. ಇದರ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಕಂದವಾರ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಅವರು ಹೋದಿದ್ದು. ಈ ಸರ್ಕಾರಿ ಶಾಲೆಯ ಹೆಸರಿನಲ್ಲಿದ್ದಂತ ಸರ್ವೆ ನಂಬರ್ 1ರಲ್ಲಿನ 19 ಗುಂಟೆ ಜಾಗ ಕೂಡ ದಾವೂದ್ ಷಾ ವಾಲೀ ದರ್ಗಾ ಸುನ್ನಿ ವಕ್ಫ್ ಸ್ವತ್ತು ಎಂಬುದಾಗಿ ಪಹಣಿಯಲ್ಲಿ ಉಲ್ಲೇಖಿಸಲಾಗಿದೆ. 2015-16ರಲ್ಲಿ ಪಹಣಿಯಲ್ಲಿ ಸ್ಕೂಲ್ ಬದಲು ವಕ್ಫ್ ಸ್ವತ್ತು ಎಂಬುದಾಗಿ ನಮೂದಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರಿ ಶಾಲೆಯ ಜಾಗದ ಉಳಿವಿಗಾಗಿ ಕಂದವಾರ ಗ್ರಾಮದ ಗ್ರಾಮಸ್ಥರು ಹೋರಾಟಕ್ಕೆ ಸಿದ್ಧರಾಗಿದ್ದಾರೆ. ಅಲ್ಲದೇ ಈ ತಪ್ಪು ಸರಿಪಡಿಸುವಂತೆಯೂ ಆಗ್ರಹಿಸಿದ್ದಾರೆ. ಇನ್ನೂ ಕೆಲ ವರ್ಷಗಳ ಹಿಂದೆ ಶಾಲೆಯ ಆವರಣದಲ್ಲೇ ದರ್ಗಾ ಕೂಡ ತೆಲೆ ಎತ್ತಿದ್ದೂ, ಗ್ರಾಮಸ್ಥರು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವಂತ ಮೆಟ್ರಿಕ್ ಪೂರ್ ಮತ್ತು ಮೆಟ್ರಿಕ್ ನಂತ್ರದ ವಿದ್ಯಾರ್ಥಿನಿಲಯಗಳ ನಿಲಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಇಂದು ರಾತ್ರಿ ವಿಶೇಷ ಭೋಜನಾ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಈ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು, ರಾಜ್ಯದ ಎಲ್ಲಾ ಜಿಲ್ಲೆಗಳ ಉಪ ನಿರ್ದೇಶಕರು, ಜಿಲ್ಲಾ ಅಧಿಕಾರಿಗಳಿಗೆ ಪತ್ರವನ್ನು ಬರೆದಿದ್ದಾರೆ. ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರ್ಣಗೊಂಡು 51ನೇ ವರ್ಷಕ್ಕೆ ಪಾದಾರ್ಪಣೆಯಾಗುತ್ತಿರುವ ಪ್ರಯುಕ್ತ, ದಿನಾಂಕ 07-11-2024ರ ಇಂದು ರಾತ್ರಿ ಊಟಕ್ಕೆ ವಿಶೇಷ ಭೋಜನದ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದ್ದಾರೆ. ಇಂದು ರಾತ್ರಿ ವಿಶೇಷ ಭೋಜನದಲ್ಲಿ ಏನಿರಲಿದೆ.? ಇಂದು ರಾತ್ರಿ ಊಟದ ವೇಳೆಯಲ್ಲಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತ್ರದ ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳಿಗೆ ವಿಶೇಷ ಭೋಜನಾ ವ್ಯವಸ್ಥೆಯಡಿ ಮೈಸೂರು ಪಾಕ್, ಹೋಳಿಗೆ, ಫಲಾವು, ವಾಂಗಿಬಾತ್, ಚಪಾತಿ, ಬೀನ್ಸ್ ಪಲ್ಯ, ಕೋಸಂಬರಿ, ಹೋಳಿಗೆ ಸಾಂಬಾರ್, ಅನ್ನ, ಮಜ್ಜಿಗೆ, ಬಾಳೇಹಣ್ಣು ನೀಡಲಾಗುತ್ತಿದೆ. ಇನ್ನೂ…

Read More

ಮೈಸೂರು: ಮುಡಾದಿಂದ 50:50 ಅನುಪಾತದಲ್ಲಿ ಸೈಟ್ ಪಡೆದವರಿಗೆ ಬಿಗ್ ಶಾಕ್ ಎನ್ನುವಂತೆ ಇಂದಿನ ಸಭೆಯಲ್ಲಿ ಸರ್ವ ಸದಸ್ಯರು ಜಪ್ತಿಗೆ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಒಪ್ಪಿಗೆಯನ್ನು ಸೂಚಿಸಲಾಗಿದೆ. ಇಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಮಹತ್ವದ ಮುಡಾ ಸದಸ್ಯರ ಸಭೆ ನಡೆಯಿತು. ಈ ಸಭೆಯಲ್ಲಿ ನ್ಯಾಯಮೂರ್ತಿ ಪಿಎನ್ ದೇಸಾಯಿ ವರದಿಯ ನಂತ್ರ 50:50 ಅನುಪಾತದಲ್ಲಿ ಸೈಟ್ ಪಡೆದವರಿಂದ ಜಪ್ತಿ ಮಾಡುವಂತ ನಿರ್ಧಾರಕ್ಕೆ ಸದಸ್ಯರು ಒಮ್ಮತದ ಒಪ್ಪಿಗೆಯನ್ನು ಸೂಚಿಸಿದರು. ಈ ಹಿನ್ನಲೆಯಲ್ಲಿ ಮುಡಾದಿಂದ 50:50ರ ಅನುಪಾತದಲ್ಲಿ ಸೈಟ್ ಪಡೆವರಿಗೆ ಬಿಗ್ ಶಾಕ್ ಎನ್ನುವಂತೆ ಜಪ್ತಿಯ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಮೂಲಕ ಇಂದಿನ ಮುಡಾ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ಸದಸ್ಯರು ಒಮ್ಮತದ ಅಭಿಪ್ರಾಯದೊಂದಿಗೆ ವ್ಯಕ್ತ ಪಡಿಸಿ, ಕೈಗೊಂಡಿದ್ದಾರೆ. https://kannadanewsnow.com/kannada/govind-karjol-submits-report-to-jpc-chairman-jagdambika-pal-on-waqf-injustice/ https://kannadanewsnow.com/kannada/save-your-life-from-heart-attack-keep-this-7-rupees-ram-kit/

Read More

ಹುಬ್ಬಳ್ಳಿ : “ವಕ್ಫ್ ವಿವಾದ ಬಿಜೆಪಿ ಸೃಷ್ಟಿ. ನಮ್ಮ ಸರ್ಕಾರ ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ವಕ್ಫ್ ತಿದ್ದುಪಡಿ ಮಸೂದೆ ಸಂಬಂಧ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಧ್ಯಕ್ಷರ ಭೇಟಿ ಬಗ್ಗೆ ಕೇಳಿದಾಗ, “ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಈ ವಿವಾದ ಸೃಷ್ಟಿಸಿದೆ. ರಾಜ್ಯದ ಆಸ್ತಿ ರಾಜ್ಯಕ್ಕೆ ಸಂಬಂಧಿಸಿದ ವಿಚಾರ. ವಕ್ಫ್ ಆಸ್ತಿ ವಿಚಾರವಾಗಿ ಧಾರವಾಡ ಸೇರಿದಂತೆ ಬೇರೆ ಜಿಲ್ಲೆಗಳಲ್ಲಿ 2019ರಿಂದ ಮೊದಲು ನೋಟೀಸ್ ಕೊಟ್ಟಿದ್ದು ಬಿಜೆಪಿ. ಬೊಮ್ಮಾಯಿ ಅವರ ಸರ್ಕಾರವೇ ನೋಟೀಸ್ ನೀಡಿದೆ. ಈಗ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಅವರಿಗೆ ಜನ ಶಾಂತಿಯುತವಾಗಿರುವುದು ಬೇಕಾಗಿಲ್ಲ. “ಮಹಾರಾಷ್ಟ್ರ ಹಾಗೂ ರಾಜ್ಯದ ಉಪಚುನಾವಣೆ ಸಮಯದಲ್ಲಿ ಅನಗತ್ಯ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಜನ ಬಹಳ ಬುದ್ಧಿವಂತರು ಅವರಿಗೆ ಜನ ತಕ್ಕ ರೀತಿ ಪಾಠ ಕಲಿಸಲಿದ್ದಾರೆ. ನಾವು ದಾಖಲೆಗಳಲ್ಲಿ ಆಗಿರುವ ತಪ್ಪುಗಳನ್ನು ಸರಿಪಡಿಸಿ ರೈತರನ್ನು ರಕ್ಷಣೆ ಮಾಡುತ್ತೇವೆ.…

Read More

ಬೆಂಗಳೂರು: ವಕ್ಫ್ (ತಿದ್ದುಪಡಿ) ವಿಧೇಯಕದ ಕುರಿತ ಕೇಂದ್ರ ಸರಕಾರದ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ಅಧ್ಯಕ್ಷ ಜಗದಾಂಬಿಕಾ ಪಾಲ್ ಮತ್ತು ಸದಸ್ಯ- ಸಂಸದ ತೇಜಸ್ವಿ ಸೂರ್ಯ ಅವರನ್ನು ಕರ್ನಾಟಕ ವಕ್ಫ್ ಸತ್ಯಶೋಧನಾ ಸಮಿತಿ ಇಂದು ಭೇಟಿ ಮಾಡಿತು. ಸಮಿತಿಯ ನೇತೃತ್ವ ವಹಿಸಿದ ಮಾಜಿ-ಉಪಮುಖ್ಯಮಂತ್ರಿ, ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಅವರ ನೇತೃತ್ವದಲ್ಲಿ ಜಗದಾಂಬಿಕಾ ಪಾಲ್ ಅವರನ್ನು ಭೇಟಿ ಮಾಡಿ ವಕ್ಫ್ ಅನ್ಯಾಯದ ಕುರಿತು ವರದಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರು ಮತ್ತು ಶಾಸಕರಾದ ಹರೀಶ್ ಪೂಂಜ, ಮಹೇಶ್ ಟೆಂಗಿನಕಾಯಿ, ಮಾಜಿ ಶಾಸಕ ಅರುಣ ಶಹಾಪುರ, ನ್ಯಾಯವಾದಿ ಎಂ.ಬಿ.ಜಿರಲಿ, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಲ್ಮುರುಡಪ್ಪ ಅವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಅವರು ಇದ್ದರು. https://kannadanewsnow.com/kannada/breaking-liquor-sale-to-be-closed-across-the-state-on-november-20-president-guruswamy/ https://kannadanewsnow.com/kannada/save-your-life-from-heart-attack-keep-this-7-rupees-ram-kit/

Read More