Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ನಾನು ನೈರುತ್ಯ ಪದವೀಧರ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಜಿಲ್ಲೆಗಳಲ್ಲಿ ಮತಯಾಚನೆ ಮಾಡಿದ್ದೇನೆ. ಬಹುತೇಕ ಮತದಾರರು ಸಕಾರಾತ್ಮಕವಾಗೇ ಪ್ರತಿಸ್ಪಂದಿಸಿದ್ದಾರೆ. ನಾನು ಮೊದಲ ಹಂತದಲ್ಲೇ ಗೆಲುವು ಸಾಧಿಸಲಿದ್ದೇನೆ ಎಂಬುದಾಗಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ್ ಸರ್ಜಿ ವಿಶ್ವಾಸ ವ್ಯಕ್ತ ಪಡಿಸಿದರು. ಅಲ್ಲದೇ ನಿಮ್ಮ ಧ್ವನಿಯಾಗಿ ಕೆಲಸ ಮಾಡಲು ಅವಕಾಶ ನೀಡುವಂತೆ ಮನವಿ ಮಾಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ವಾಸವಿ ಕಲ್ಯಾಣ ಮಂಟಪದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ವೈದ್ಯಕೀಯ ಸೇವೆ ಸಲ್ಲಿಸುತ್ತಾ, 65 ಬಾರಿ ರಕ್ತದಾನ ಮಾಡಿದ್ದೇನೆ. ಈಗ ಪದವೀಧರ ಕ್ಷೇತ್ರದಲ್ಲಿ ಸೇವೆ ಸಲ್ಲಿಸೋದಕ್ಕೆ ಬಂದಿದ್ದೇನೆ ಎಂದರು. ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ತುರ್ತು ಚಿಕಿತ್ಸಾ ವಿಭಾಗದಲ್ಲಿ ಬೆಂಕಿ ಅವಘಡ ಸಂಭವಿಸಿದಂತ ವೇಳೆ, 33 ಮಕ್ಕಳನ್ನು ಆಸ್ಪತ್ರೆಯಿಂದ ಸರ್ಜಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. 13 ದಿನಗಳ ಕಾಲ ಆ ಎಲ್ಲಾ ಮಕ್ಕಳಿಗೆ ಉಚಿತವಾಗಿ ಚಿಕಿತ್ಸೆ ನೀಡಿದ್ದೇನೆ ಎಂಬುದಾಗಿ ತಮ್ಮ ಸಾಮಾಜಿಕ ಸೇವೆಯನ್ನು ವಿವರಿಸಿದರು. ಒಳ್ಳೆಯ ಸೇವೆ ಮಾಡೋದಕ್ಕೆ ಬಂದಿದ್ದೇನೆ.…
ಎಲ್ಲರ ಮನೆಯೇ ದೇವಸ್ಥಾನ. ಸಂಸಾರದಲ್ಲಿ ಸುಖ-ಸಂತೋಷವಿದ್ದರೆ ತೊಂದರೆಯಿಲ್ಲ. ನಿಮ್ಮ ಬಳಿ ಸ್ವಲ್ಪ ಹಣವಿದ್ದರೂ, ನೀವು ಸಂತೋಷದ ಜೀವನವನ್ನು ನಡೆಸಬಹುದು. ಆದರೆ ಯಾವುದೇ ದಿನವೂ ಕೆಟ್ಟ ಜನರ ಹೊಟ್ಟೆ ಕಿಚ್ಚು ದೃಷ್ಟಿ, ಜನರ ವಕ್ರದೃಷ್ಟಿ ಕಣ್ಣಿನ ಮಾಂತ್ರಿಕ ಶಕ್ತಿ ಯಿಂದ ಕುಟುಂಬದ ನೆಮ್ಮದಿಗೆ ಭಂಗ ಬರಬಾರದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ…
ದಾವಣಗೆರೆ: ಜಿಲ್ಲೆಯ ಚೆನ್ನಗಿರಿ ಪೊಲೀಸ್ ಠಾಣೆಯಲ್ಲೇ ಆದಿಲ್ ಎಂಬಾತನ ಲಾಕಪ್ ಡೆತ್ ಆಗಿತ್ತು. ಇದು ಪೊಲೀಸರೇ ನಡೆಸಿದಂತ ಕೃತ್ಯ ಎಂಬುದಾಗಿ ಸಿಡಿದೆದ್ದಿದ್ದಂತ ಜನರು ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಆದ್ರೇ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಚೆನ್ನಗಿರಿ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಸಂಬಂಧ ಮೃತ ಆದಿಲ್ ನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದರ ವರದಿ ಪೊಲೀಸರ ಕೈಸೇರಿದೆ. ಅದರಲ್ಲಿ ಆದಿಲ್ ಲೋಬಿಪಿಯಾಗಿ ಹೃದಯಾಘಾತದಿಂದ ಸಾವನ್ನಪ್ಪಿರೋದಾಗಿ ಉಲ್ಲೇಖಿಸಲಾಗಿದೆ. ವರದಿಯಲ್ಲಿ ಕಾರ್ಡಿಯಾ ಫಲ್ಮನರಿ ಎಂದು ಉಲ್ಲೇಖಿಸಲಾಗಿದೆ. ಈ ವರದಿಯನ್ನು ಸಿಐಡಿ ಅಧಿಕಾರಿಗಳಿಗೆ ಪೊಲೀಸರು ಸಲ್ಲಿಸಿದ್ದಾರೆ. ಅಂದಹಾಗೇ ಮೇ.24ರಂದು ಪೊಲೀಸರ ಕಸ್ಟಡಿಯಲ್ಲಿ ಇದ್ದಾಗಲೇ ಆದಿಲ್ ಮೃತಪಟ್ಟಿದ್ದನು. ಚೆನ್ನಗಿರಿ ಪೊಲೀಸ್ ಠಾಣೆಯಲ್ಲಿ ನಡೆದಂತ ಲಾಕಪ್ ಡೆತ್ ಎಂಬುದಾಗೇ ಹೇಳಲಾಗುತ್ತಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. https://kannadanewsnow.com/kannada/in-a-shocking-incident-a-woman-was-raped-after-being-taken-for-treatment-in-the-state/ https://kannadanewsnow.com/kannada/link-pan-with-aadhaar-card-by-may-31-income-tax-department-to-taxpayers/
ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ರಾಜ್ಯದಲ್ಲೇ ಬೆಚ್ಚಿ ಬೀಳಿಸೋ ಘಟನೆ ಎಂಬಂತೆ ಚಿಕಿತ್ಸೆಗೆ ಎಂದು ಕರೆದುಕೊಂಡು ಬಂದ ಮಹಿಳೆಯ ಮೇಲೆ ಕೀಚಕನೊಬ್ಬ ಅತ್ಯಾಚಾರ ಎಸಗಿರೋದಾಗಿ ತಿಳಿದು ಬಂದಿದೆ. ಅಲ್ಲದೇ ಪ್ರಕರಣದಲ್ಲಿ ಪೊಲೀಸರು ಆರೋಪಿಯನ್ನು ಎಡೆಮುರಿ ಕಟ್ಟಿ ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂತಹ ಘಟನೆ ನಡೆದಿದೆ. ಚಿಕಿತ್ಸೆಗೆಂದು ಮಹಿಳೆಯನ್ನು ಕರೆದುಕೊಂಡು ಬಂದಿದ್ದಂತ ಆರೋಪಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಕೃತ್ಯವೆಸಗಿ ಮಹಿಳೆಯ ಬೆತ್ತಲೆ ಪೋಟೋಗಳನ್ನು ತೆಗೆದುಕೊಂಡು ಬ್ಲಾಕ್ ಮೇಲ್ ಮಾಡಿದ್ದಾನೆ. ಇಲ್ಲಿಗೆ ಸುಮ್ಮನಾಗದಂತ ಕೀಚಕ, ಈ ಪೋಟೋಗಳನ್ನು ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿ, ಬಳಿಕವೂ ಮಹಿಳೆಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ. ಇದರಿಂದ ಬೇಸತ್ತಂತ ಮಹಿಳೆಯು, ಕದ್ರಿ ಠಾಣೆಗೆ ದೂರು ನೀಡಿದ್ದಳು. ಈ ದೂರಿನ ಬೆನ್ನಲ್ಲೇ ಅಲರ್ಟ್ ಆದಂತ ಕದ್ರಿ ಠಾಣೆಯ ಪೊಲೀಸರು, ಕೇರಳ ಮೂಲದ ಆರೋಪಿ ಸಜಿತ್ ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಬಂಧಿತ ಆರೋಪಿ ಸಜಿತ್ ಖಾಸಗಿ ಆಸ್ಪತ್ರೆ ಹಾಗೂ ಹೋಟೆಲ್ ನಲ್ಲಿ ಮಹಿಳೆಯ ಮೇಲೆ ನಿರಂತರವಾಗಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಭಾರಿ ಎಂಡಿಯಾಗಿ ಡಾ.ಕೆಆರ್ ರಾಜ್ ಕುಮಾರ್ ನೇಮಕ ಮಾಡಿ ಆದೇಶಿಸಿದೆ. ಈ ಮೊದಲು ಇದ್ದಂತ ಎಂಡಿ ಜೆ.ಜಿ ಪದ್ಮನಾಭ ಅವರನ್ನು ಅಮಾನತುಗೊಳಿಸಿತ್ತು. ಈ ಬೆನ್ನಲ್ಲೇ ಆ ಖಾಲಿ ಸ್ಥಾನಕ್ಕೆ ಪ್ರಭಾರಿ ಎಂಡಿಯಾಗಿ ಡಾ.ಕೆ ಆರ್ ರಾಜ್ ಕುಮಾರ್ ನೇಮಕ ಮಾಡಿ ಆದೇಶಿಸಿದೆ. ಈ ಕುರಿತಂತೆ ಇಂದು ಪರಿಶಿಷ್ಯ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಭವ್ಯ ಎಂ.ಜೆ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಡಾ|| ಕೆ.ಆರ್ ರಾಜ್‌ಕುಮಾರ್, ಜಂಟಿ ನಿರ್ದೇಶಕರು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಬೆಂಗಳೂರು ಇಲ್ಲಿ ಖಾಲಿ ಇರುವ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ಹೆಚ್ಚುವರಿ ಪ್ರಭಾರದಲ್ಲಿರಿಸಿ ಆದೇಶಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಕೇಸ್: ರಾಜ್ಯ ಸರ್ಕಾರದಿಂದ ‘MD, ಅಕೌಂಟ್ ಆಫೀಸರ್’ ಅಮಾನತು…
ಬೀದರ್: ಕಾಲೇಜಿನಲ್ಲಿ ಜೈ ಶ್ರೀರಾಮ್ ಎಂಬಂತ ಹಾಡು ಹಾಕಿದ್ದಕ್ಕೆ ಹಿಂದೂ ಮುಸ್ಲೀಂ ವಿದ್ಯಾರ್ಥಿಗಳ ನಡುವೆ ಕಿರಿಕ್ ಆಗಿದೆ. ಈ ಗಲಾಟೆ ತಾರಕ್ಕೇರಿ, ಪರಸ್ಪರ ಹೊಡೆದಾಡಿಕೊಂಡ ಘಟನೆ ಬೀದರ್ ನ ಜಿಎನ್ ಡಿ ಕಾಲೇಜಿನಲ್ಲಿ ನಡೆದಿದೆ. ಬೀದರ್ ನಗರದ ಜಿಎನ್ ಡಿ ಕಾಲೇಜಿನಲ್ಲಿ ಜೈ ಶ್ರೀರಾಮ್ ಹಾಡು ಹಾಕಿದ್ದಕ್ಕೆ ಮುಸ್ಲೀಂ ವಿದ್ಯಾರ್ಥಿಗಳು ತಕರಾರು ತೆಗೆದಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಪರಸ್ಪರ ವಿದ್ಯಾರ್ಥಿಗಳು ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಜಿಎನ್ ಡಿ ಕಾಲೇಜಿನ ಕ್ಯಾಂಪಸ್ ಒಳಗಡೆ ಇರುವಂತ ಕಾಲೇಜು ಸಭಾಂಗಣದಲ್ಲಿ ನಡೆದಂತ ಗಲಾಟೆಯ ವೀಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಬೀದರ್ ನ ಜಿಎನ್ ಡಿ ಕಾಲೇಜಿನ ಘಟನಾ ಸ್ಥಳಕ್ಕೆ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಲ್ಲದೇ ಶಾಂತ ರೀತಿಯಿಂದ ವರ್ತಿಸುವಂತೆ ಮನವಿ ಮಾಡಿದರು. ಈ ಬಗ್ಗೆ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/link-pan-with-aadhaar-card-by-may-31-income-tax-department-to-taxpayers/
ಬೆಂಗಳೂರು: ವಾಲ್ಮೀಕ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದ ನಂತ್ರ, ರಾಜ್ಯ ಸರ್ಕಾರದ ಹಾಲಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಅಕೌಂಟ್ ಆಫೀಸರ್ ಅಮಾನತುಗೊಳಿಸಿ ಆದೇಶಿಸಿದೆ. ಈ ಸಂಬಂಧ ಪರಿಶಿಷ್ಟ ಪಂಗಡಗಡ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದಾರೆ. ಅದರಲ್ಲಿ ಜೆ.ಜಿ ಪದ್ಮನಾಭ, ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಮಹರ್ಷಿ ವಾಲ್ಮೀಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಬೆಂಗಳೂರು ಇವರ ವಿರುದ್ಧದ ಆರೋಪಗಳ ಹಿನ್ನಲೆಯಲ್ಲಿ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ, ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ನಿಯಮ 10(1)(ಡಿ) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಇನ್ನೂ ಅಕೌಂಟ್ ಆಫೀಸರ್ ಆಗಿದ್ದಂತ ಪರಶುರಾಮ್ ಜಿ ದುರ್ಗಣ್ಣನವರ್ ಎಂಬುವರನ್ನು ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಈ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದ್ದಾರೆ. ಅಮಾನತ್ತಿನ ಅವಧಿಯಲ್ಲಿ ಕರ್ನಾಟಕ ನಾಗರೀಕ ಸೇವಾ ನಿಯಮಗಳ ನಿಯಮ-98ರನ್ವಯ ಜೀವನಾಧಾರ ಭತ್ಯೆಯನ್ನು ಪಡೆಯಲು ಅರ್ಹರಿರುತ್ತಾರೆ. ಈ ಅಧಿಕಾರಿಯು ಅಮಾನತ್ತಿನ…
ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯನ್ನು ಈಗಾಗಲೇ ಈಡೇರಿಸೋದಾಗಿ ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲೇ ಕಾಂಗ್ರೆಸ್ ಪಕ್ಷದಿಂದ ಘೋಷಣೆ ಮಾಡಲಾಗಿದೆ. NPS ರದ್ದುಗೊಳಿಸಿ OPS ಜಾರಿಗೊಳಿಸೋದು ಖಚಿತ. ಇದು ನಮ್ಮ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯಾಗಿದೆ ಅಂತ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ನುಡಿದಂತೆ ನಡೆದ ಸರ್ಕಾರ ನಮ್ಮದಾಗಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಘೋಷಿಸಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದರು. ರಾಜ್ಯ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯಾದ NPS ರದ್ದುಗೊಳಿಸಿ, OPS ಜಾರಿಗೆ ಸಿಎಂ ಸಿದ್ಧರಾಮಯ್ಯ ಅವರು ಕ್ರಮ ವಹಿಸಲಿದ್ದಾರೆ. NPS ರದ್ದುಗೊಳಿಸಿ OPS ಜಾರಿಗೊಳಿಸೋದು ಖಚಿತವಾಗಿದೆ. ಇದು ನಮ್ಮ 6ನೇ ಗ್ಯಾರಂಟಿಯಾಗಿದೆ. ನೈರುತ್ಯ ಶಿಕ್ಷಕರ ಕ್ಷೇತ್ರದ ಮತದಾರರು ತಮಗೆ ಮತನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು. ಕಾಂಗ್ರೆಸ್ ಸರ್ಕಾರಕ್ಕೆ ಶಿಕ್ಷಕರ ಕಳಕಳಿಯಿದೆ. ಅನುದಾನಿತ ಶಾಲಾ ಶಿಕ್ಷಕರಿಗೆ ಪಿಂಚಣಿ ವ್ಯವಸ್ಥೆಯನ್ನು…
ನವದೆಹಲಿ: ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ಮಾಹಿತಿಯ ಪ್ರಕಾರ, ದೆಹಲಿಯಲ್ಲಿ 52.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. “ತೀವ್ರ ಶಾಖ-ತರಂಗ ಪರಿಸ್ಥಿತಿಗಳನ್ನು” ವರದಿ ಮಾಡಿದ (ಐಎಂಡಿ) ಬುಧವಾರ ಮಧ್ಯಾಹ್ನ ದೆಹಲಿ ಉಪನಗರ ಮುಂಗೇಶ್ಪುರದಲ್ಲಿ ತಾಪಮಾನವನ್ನು ದಾಖಲಿಸಿದೆ. 2016ರ ಮೇ 19ರಂದು ರಾಜಸ್ಥಾನದ ಫಲೋಡಿ ನಗರದಲ್ಲಿ 51 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. “ತೀವ್ರ ಶಾಖ-ತರಂಗ ಪರಿಸ್ಥಿತಿಗಳನ್ನು” ವರದಿ ಮಾಡಿದ ಐಎಂಡಿ, ದೆಹಲಿ ಉಪನಗರ ಮುಂಗೇಶ್ಪುರದಲ್ಲಿ ತಾಪಮಾನವನ್ನು ದಾಖಲಿಸಿದೆ, ರಾಷ್ಟ್ರ ರಾಜಧಾನಿಯಲ್ಲಿ ಮೊದಲ ಬಾರಿಗೆ ಹೆಗ್ಗುರುತನ್ನು 50 ಡಿಗ್ರಿ ಸೆಲ್ಸಿಯಸ್ ದಾಟಿದೆ. ಮೇ 17 ರಿಂದ ದೆಹಲಿಯಲ್ಲಿ ತೀವ್ರ ಶಾಖದ ಅಲೆಗಳು ಚಾಲ್ತಿಯಲ್ಲಿವೆ. ಆದಾಗ್ಯೂ, ದೆಹಲಿಯ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆ ಅಥವಾ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಸಂಸ್ಥೆ ಮುನ್ಸೂಚನೆ ನೀಡಿದೆ. ರಾಷ್ಟ್ರ ರಾಜಧಾನಿಯಲ್ಲಿ ಭಾಗಶಃ ಮೋಡ ಕವಿದ ಆಕಾಶ ಮತ್ತು ಹಗಲಿನಲ್ಲಿ 35-45 ಕಿ.ಮೀ ವೇಗದಲ್ಲಿ ಬಲವಾದ ಮೇಲ್ಮೈ ಗಾಳಿಯೊಂದಿಗೆ ಧೂಳು ಬಿರುಗಾಳಿ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮೇ 30 ರಿಂದ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮೀ ಯೋಜನೆ ಹಣ ಬಾರದೇ ಇದ್ದವರಿಗೆ ಮತ್ತೊಂದು ಅಪ್ ಡೇಟ್ ನೀಡಲಾಗಿದೆ. ಅದೇ ಯಜಮಾನಿಯರಿಗೆ ಹಣ ಬಾರದೇ ಇದ್ರೆ, ಈ ಸಮಸ್ಯೆ ನಿವಾರಿಸಿಕೊಳ್ಳುವಂತೆ ಸೂಚಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಗೃಹ ಲಕ್ಷ್ಮೀ ಯೋಜನೆಗೆ ನೋಂದಾಯಿಸಿಕೊಂಡು, ಕೆಲ ಯಜಮಾನಿ ಮಹಿಳೆಯರಿಗೆ ಹಣ ಬಾರದೇ ಇರುವ ಬಗ್ಗೆ ದೂರುಗಳು ಬರುತ್ತಿವೆ. ಈ ಸಮಸ್ಯೆ ನಿವಾರಣೆಗಾಗಿ ಯಜಮಾನಿಯರು ಕೆಲ ತಾಂತ್ರಿಕ ಸಮಸ್ಯೆ ನಿವಾರಿಸಿಕೊಳ್ಳುವಂತೆ ತಿಳಿಸಿದೆ. ಸರ್ಕಾರದ ಗೃಹ ಲಕ್ಷ್ಮೀ ಯೋಜನೆ ರೂ.2000 ಹಣ ಬಾರದಂತ ಯಜಮಾನಿ ಮಹಿಳೆಯರು, ತಪ್ಪದೇ ಕೆವೈಸಿ ಮಾಡಿಸುವಂತೆ ತಿಳಿಸಿದೆ. ಅಲ್ಲದೇ ಬ್ಯಾಂಗ್ ಖಾತೆಗೆ ಆಧಾರ್ ಸಂಖ್ಯೆ ಲಿಂಕ್ ಮಾಡಬೇಕು. ರೇಷನ್ ಕಾರ್ಡ್ ನಲ್ಲಿರೋ ಪ್ರತಿಯೊಬ್ಬ ಸದಸ್ಯರ ಕೆವೈಸಿ ಅಪ್ ಡೇಟ್ ಆಗಿರಬೇಕು ಅಂತ ಹೇಳಿದೆ. ಇನ್ನೂ ರೇಷನ್ ಕಾರ್ಡ್ ಸದಸ್ಯರು ಬ್ಯಾಂಕ್ ಗಳಿಗೆ ತೆರಳಿ ತಮ್ಮ ಆಧಾರ್ ಸಂಖ್ಯೆ ನೀಡಿ, ಕೈವೈಸಿ ಅಪ್ ಡೇಟ್ ಮಾಡಿಸಬೇಕು. ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳು…