Author: kannadanewsnow09

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಾಡಬಾಂಬ್ ತಯಾರಿಸುವಂತ ವೇಳೆಯಲ್ಲಿ ಸ್ಪೋಟಗೊಂಡ ಪರಿಣಾಮ, ಮಗ ಸಾವನ್ನಪ್ಪಿ ತಂದೆ ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ದೊಡ್ಡನಲ್ಲಾಳ ಗ್ರಾಮದಲ್ಲಿ ನಾಡಬಾಂಬ್ ಸುತ್ತುವಾಗ ಸ್ಪೋಟಗೊಂಡಿದೆ. ನಾಡಬಾಂಬ್ ಸ್ಪೋಟಗೊಂಡ ಪರಿಣಾಮ ಪವನ್(19) ಎಂಬುವರು ಸಾವನ್ನಪ್ಪಿದ್ದರೇ, ಅವರ ತಂದೆ ಗಂಭೀರವಾಗಿ ಗಾಯಗೊಂಡಿದ್ದಾರೆ. ನಾಡಬಾಂಬ್ ಸ್ಪೋಟಗೊಂಡ ಪರಿಣಾಮ ಮನೆ ಛಿದ್ರ ಛಿದ್ರಗೊಂಡಿದೆ. ಕಾಡು ಪ್ರಾಣಿಗಳ ಬೇಟೆಗಾಗಿ ತಯಾರಿಸುತ್ತಿದ್ದಂತ ನಾಡ ಬಾಂಬ್ ಇದಾಗಿದೆ ಎನ್ನಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ಹೊಸಕೋಟೆ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. https://kannadanewsnow.com/kannada/are-you-the-one-who-is-looting-the-site-narayanaswamys-question-to-m-b-patil/ https://kannadanewsnow.com/kannada/bank-holidays-here-is-the-complete-list-of-bank-holidays-for-the-month-of-september/

Read More

ನವದೆಹಲಿ: ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ ಪ್ರಧಾನಿ ನರೇಂದ್ರ ಮೋದಿಯವರ ರಾಜತಾಂತ್ರಿಕ ತಂತ್ರಗಾರಿಕೆಯು ಭಾರತವನ್ನು ಜಾಗತಿಕ ವೇದಿಕೆಯಲ್ಲಿ ಮಹತ್ವದ ಜಾಣ್ಮೆಯ ನಡೆಯನ್ನು ತೋರಿದ್ದಾರೆ. ಮೂರು ದಶಕಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಮೊದಲ ಬಾರಿಗೆ ಉಕ್ರೇನ್ ಗೆ ಭೇಟಿ ನೀಡಿದ್ದು, ಇದು ಭಾರತದಲ್ಲಿ ಚರ್ಚೆಗಳನ್ನು ಹುಟ್ಟು ಹಾಕಿದ್ದಲ್ಲದೇ, ಸಂಘರ್ಷಾತ್ಮಕ ಜಾಗತಿಕ ಶಕ್ತಿಗಳ ನಡುವೆ ಸೂಕ್ಷ್ಮ ಸಮತೋಲನವನ್ನು ಕಾಪಾಡಿಕೊಳ್ಳುವ  ಸಾಮರ್ಥ್ಯವನ್ನು ಅವರು ಪ್ರದರ್ಶಿಸಿದ್ದು ಹೇಗೆ.? ಪಾಪಾ ನೇ ವಾರ್ ರುಕ್ವಾ ದಿಯಿಂದ ಜಾಗತಿಕ ಶಾಂತಿಯವರೆಗೆ ಮೋದಿ ನಡೆಯ ಬಗ್ಗೆ ಮುಂದಿದೆ ಓದಿ. ರಷ್ಯಾ ಮತ್ತು ಉಕ್ರೇನ್ ಎರಡರೊಂದಿಗಿನ ಭಾರತದ ಐತಿಹಾಸಿಕ ಸಂಬಂಧಗಳೊಂದಿಗೆ, ಈ ಪ್ರಕ್ಷುಬ್ಧ ಸಮಯದಲ್ಲಿ ಶಾಂತಿ ಧೂತರಾದ ಪ್ರಧಾನಿ ಮೋದಿಯವರ ಸಾಮರ್ಥ್ಯದ ಬಗ್ಗೆ ಭರವಸೆಗಳನ್ನು ಹುಟ್ಟುಹಾಕಿದೆ. ಅವರು ಪಗಡೆಯನ್ನು ಸರಿಯಾಗಿ ಆಡುತ್ತಿದ್ದಾರೆ. ಅದು ಭಾರತ ಆತಿಥ್ಯ ವಹಿಸಿರುವ ಜಿ 20 ಶೃಂಗಸಭೆಯಾಗಿರಬಹುದು ಅಥವಾ ಆರು ವಾರಗಳ ಅಂತರದಲ್ಲಿ ರಷ್ಯಾ ಮತ್ತು ಉಕ್ರೇನ್ ಎರಡಕ್ಕೂ ಬ್ಯಾಕ್ ಟು ಬ್ಯಾಕ್ ಭೇಟಿಯಾಗಿರಬಹುದು. ಮೋದಿ…

Read More

ದೇವರಗುಡ್ಡ : ನನ್ನ ವಿರುದ್ಧ ನಡೆಯುತ್ತಿರುವ BJP-JDS ನ ಸೇಡು, ಹೊಟ್ಟೆಕಿಚ್ಚಿನ ಪಿತೂರಿ ಸಹಿಸಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ರಾಣೆಬೆನ್ನೂರು ತಾಲ್ಲೂಕು ದೇವರಗುಡ್ಡದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಕಂಚಿನ ಪುತ್ಥಳಿ ಲೋಕಾರ್ಪಣೆಗೊಳಿಸಿದ ಬಳಿಕ ಕನಕಭವನವನ್ನು ಉದ್ಘಾಟಿಸಿ ಮಾತನಾಡಿದರು. ನನ್ನ ವಿರುದ್ಧ ನಡೆಯುತ್ತಿರುವ ಷಡ್ಯಂತ್ರವನ್ನು ಸಹಿಸುತ್ತೀರಾ ಎಂದು ಕಾರ್ಯಕ್ರಮದಲ್ಲಿ ನೆರೆದಿದ್ದ ಜನಸ್ತೋಮಕ್ಕೆ ಸಿಎಂ ಪ್ರಶ್ನಿಸಿದರು. “ನಾವು ಸಹಿಸಲ್ಲ. ರೊಚ್ಚೆಗೇಳ್ತೇವೆ” ಎಂದು ಜನಸ್ತೋಮ ಪ್ರತಿಕ್ರಿಯಿಸಿತು. ಮಾಲತೇಶ ದೇವರ ಆಶೀರ್ವಾದ-ನಿಮ್ಮ ಪ್ರೀತಿ ನನ್ನ ಮೇಲಿರಲಿ, ದೇವರಗುಡ್ಡದಲ್ಲಿ ಪೂಜೆ ಸಲ್ಲಿಸಿದ ಬಳಿಕ ಬಹಿರಂಗ ಸಭೆಯಲ್ಲಿ ಸಿಎಂ‌ ಮನವಿ ಮಾಡಿದರು. ನಾನು ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ ಜನರಿಗೆ ಕೊಟ್ಟ ಮಾತನ್ನು ಈಡೇರಿಸುತ್ತಿದ್ದೇವೆ. ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೂ ಹಲವು ಭಾಗ್ಯಗಳನ್ನು ಜನರ ಮಡಿಲಿಗೆ ಹಾಕುವ ಮೂಲಕ ನುಡಿದಂತೆ ನಡೆದಿದ್ದೇನೆ. ಎರಡನೇ ಬಾರಿ ಸಿಎಂ ಆಗಿ ಒಂದೇ ವರ್ಷದಲ್ಲಿ ಐದಕ್ಕೆ ಐದೂ ಗ್ಯಾರಂಟಿಗಳನ್ನೂ ಜಾರಿ ಮಾಡಿದ್ದೇನೆ ಎಂದರು. ನಾನು ಅಸೂಯೆ ಮಾಡುವವರಿಂದ ದ್ವೇಷದ ರಾಜಕಾರಣ ಮಾಡುವವರಿಂದ ಅಧಿಕಾರಕ್ಕೆ…

Read More

ಬೆಂಗಳೂರು: ತುಂಗಭದ್ರಾ ಜಲನಯನ ಪ್ರದೇಶದ ಅನ್ನದಾತರಿಗೆ ಸಂತಸದ ಸುದ್ದಿ ಎನ್ನುವಂತೆ, ತುಂಗಭದ್ರಾ ಡ್ಯಾಂನಲ್ಲಿ 90 ಟಿಎಂಸಿಗೂ ಹೆಚ್ಚು ನೀರು ಸಂಗ್ರಹವಾಗಿದೆ ಎಂಬುದಾಗಿ ಸರ್ಕಾರ ತಿಳಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, ತುಂಗಭದ್ರಾ ಜಲಾಶಯದಲ್ಲಿ 90 ಟಿಎಂಸಿಗೂ ಹೆಚ್ಚು ನೀರು ಸಂಗ್ರಹವಾಗಿದೆ. ಜಲಾಶಯದ ಮುರಿದ 19ನೇ ಕ್ರಸ್ಟಗೇಟ್‌ ದುರಸ್ತಿ ಕಾರ್ಯ ನಡೆಯುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನಃ ಜಲಾಶಯ ಭರ್ತಿಯಾಗುವ ವಿಶ್ವಾಸ ವ್ಯಕ್ತಪಡಿಸಿದ್ದರು. ಸರ್ಕಾರದ ನಿರೀಕ್ಷೆಯಂತೆ ಮಳೆಯಾಗುತ್ತಿದೆ. ಜಲಾಶಯ ತುಂಬುತ್ತಿದೆ. ರೈತರ ಮೊಗದಲ್ಲಿ ಸಂತಸ ಮೂಡಿದೆ ಎಂದು ಹೇಳಿದೆ. https://kannadanewsnow.com/kannada/are-you-the-one-who-is-looting-the-site-narayanaswamys-question-to-m-b-patil/ https://kannadanewsnow.com/kannada/bank-holidays-here-is-the-complete-list-of-bank-holidays-for-the-month-of-september/

Read More

ಬೆಂಗಳೂರು: ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದೈನಿಕ, ಸಾಪ್ತಾಹಿಕ(ವಾರ) ಹಾಗೂ ಮಾಸಿಕ ಪಾಸುಗಳನ್ನು ಪೂರ್ವ ಮುದ್ರಿತ ಮಾದರಿಯಲ್ಲಿ ಮತ್ತು ಡಿಜಿಟಲ್ ಮಾದರಿಯಲ್ಲಿ ವಿತರಣೆ ಮಾಡಲಾಗುತ್ತಿದೆ. ಈ ಕುರಿತಂತೆ ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಪ್ರಸ್ತುತ  ಸಂಸ್ಥೆಯು ದೈನಿಕ, ಸಾಪ್ತಾಹಿಕ ಹಾಗೂ ಮಾಸಿಕ ಪಾಸುಗಳು ಸಾರ್ವಜನಿಕ ಪ್ರಯಾಣಿಕರಿಗೆ ಸುಲಭವಾಗಿ ದೊರೆಯಲು ಹಾಗೂ ನಗದು ರಹಿತ, ಕಾಗದ ರಹಿತ ಮತ್ತು ಸಂಪರ್ಕ ರಹಿತ ವಹಿವಾಟಿಗಾಗಿ, ಪಾಸುಗಳನ್ನು ಪೂರ್ಣ ಪ್ರಮಾಣದಲ್ಲಿ ದಿನಾಂಕ 15.09.2024 ರಿಂದ ಅನ್ವಯವಾಗುವಂತೆ ಡಿಜಿಟಲ್ ವ್ಯವಸ್ಥೆಯಲ್ಲಿ ಮೊಬೈಲ್ ಆåಪ್ (Mobile app) ಮುಖಾಂತರ ವಿತರಿಸಲು ಕ್ರಮ ಕೈಗೊಂಡಿರುತ್ತದೆ ಎಂದು ತಿಳಿಸಿದೆ. ಸಾರ್ವಜನಿಕ ಪ್ರಯಾಣಿಕರು ತಮ್ಮ ಮೊಬೈಲ್ನಲ್ಲಿ ಡಿಜಿಟಲ್ ಪಾಸು ಪಡೆಯುವ ವಿಧಾನ      ಪ್ಲೇ ಸ್ಟೋರ್ ನಲ್ಲಿ ಟುಮ್ಯಾಕ್ ಆ್ಯಪ್ (Tummoc app) ಡೌನ್ ಲೋಡ್ ಮಾಡಿಕೊಂಡು ನೋಂದಣಿಯಾಗುವುದು. ದೈನಿಕ / ಸಾಪ್ತಾಹಿಕ / ಮಾಸಿಕ ಪಾಸನ್ನು ಆಯ್ಕೆ ಮಾಡಿಕೊಂಡು ವಿವರಗಳನ್ನು ಭರ್ತಿ ಮಾಡಿ, ಭಾವಚಿತ್ರವನ್ನು ಕ್ಲಿಕ್ಕಿಸುವುದು.…

Read More

ಬೆಂಗಳೂರು: ವಿರೋಧ ಪಕ್ಷದ ನಾಯಕನಾಗಿ ನನ್ನ ಸ್ಥಾನದ ಗೌರವ ಉಳಿಸುವ ಕೆಲಸ ಮಾಡುತ್ತೇನೆ. ನೀವು ನಿಮ್ಮ ಸಚಿವ ಸ್ಥಾನಕ್ಕೆ ಅನುಗುಣವಾಗಿ ಮಾತನಾಡಬೇಕಿತ್ತು ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಎಂ.ಬಿ.ಪಾಟೀಲರಿಗೆ ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪರಿಶಿಷ್ಟ ಜಾತಿಯವ; ನನಗ್ಯಾರೂ ಕೇಳೋರಿಲ್ಲವೆಂದು ಲಜ್ಜೆಗೆಟ್ಟವ ಎಂದಿದ್ದೀರಲ್ಲವೇ ಎಂದು ಕೇಳಿದರು. ನೀವು ಹರಿಶ್ಚಂದ್ರರೇ? ಎಂದರಲ್ಲದೆ, ಈ ಪ್ರಪಂಚದಲ್ಲಿ ಯಾರೂ ಹರಿಶ್ಚಂದ್ರರಲ್ಲ ಎಂದು ನುಡಿದರು. 302, ಡೆಫೊಡಿಲ್ ಅಪಾರ್ಟ್‍ಮೆಂಟ್ ಯಾರದ್ದು? ನಿಮ್ಮದೇ ಅಲ್ಲವೇ? ಎಂದು ಎಂ.ಬಿ.ಪಾಟೀಲರನ್ನು ಕೇಳಿದ ಅವರು, ನಿಮ್ಮದಕ್ಕೇ ನೀವು 2 ಸೈಟ್ ಬರೆದುಕೊಂಡಿದ್ದೀರಿ. ಇನ್ನು ಮೂರು ವಿಜಾಪುರದಲ್ಲಿ ಬರೆದುಕೊಂಡಿದ್ದೀರಿ. ಸೋಲಾಪುರ ರಸ್ತೆ, ಕೆಎಚ್‍ಬಿ ಕಾಲೊನಿಯಲ್ಲಿ ಅವು ಇವೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಲೂಟಿ ಮಾಡುತ್ತಿರುವುದು ನಾನಾ ನೀವಾ? ಎಂದು ಕೇಳಿದರು. ಪತ್ರಕರ್ತರನ್ನು ಕುಳಿತುಕೊಳ್ಳಿಸಿ 2 ಗಂಟೆ ಅವರ ತಲೆ ತಿನ್ನಲು ನನ್ನ ಅಪರಾಧವಾದರೂ ಏನು…

Read More

ಶಿವಮೊಗ್ಗ: ಸಾಗರ ತಾಲ್ಲೂಕಿನಲ್ಲಿ ಗಣೇಶೋತ್ಸವ ಹಾಗೂ ಈದ್ ಮಿಲಾದ್ ಆಚರಣೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಪುಲ್ ಅಲರ್ಟ್ ಆಗಿದೆ. ಶಾಂತಿಯುತವಾಗಿ ಹಬ್ಬಗಳನ್ನು ಆಚರಿಸುವುದಕ್ಕೆ ಅವಕಾಶವಿದೆ. ಏನಾದರೂ ಬಾಲ ಬಿಟ್ಟಿದ್ರೆ ಅಂತವರ ವಿರುದ್ಧ ಕಾನೂನು ಕ್ರಮ, ಎಫ್ಐಆರ್ ಹಾಕುವುದಾಗಿ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯಕ್ ಖಡಕ್ ವಾರ್ನಿಂಗ್ ನೀಡಿದ್ದಾರೆ. ಇಂದು ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಳೆದ ಬಾರಿ ಸಣ್ಣ-ಪುಟ್ಟ ಅಹಿತಕರ ಘಟನೆಗಳ ಹೊರತಾಗಿ ಶಾಂತಿಯುತವಾಗೇ ತಾಲ್ಲೂಕಿನಾಧ್ಯಂತ ಗಣೇಶ, ಈದ್ ಮಿಲಾದ್ ಹಬ್ಬ ನಡೆದಿದೆ. ಈ ಬಾರಿ ಅದಕ್ಕೂ ಅವಕಾಶ ನೀಡದಂತೆ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದರು. 10 ಗಂಟೆಗೆ ಧ್ವನಿ ವರ್ಧಕ ಬಂದ್ ಮಾಡಬೇಕು ಗಣೇಶ ಹಬ್ಬದ ಸಂದರ್ಭದಲ್ಲಿ ಆಯೋಜಕರು 10 ಗಂಟೆಗೆ ಧ್ವನಿ ವರ್ಧಕಗಳನ್ನು ಬಂದ್ ಮಾಡಬೇಕು. ನಂತ್ರ ಬಳಕೆ ಮಾಡುವಂತಿಲ್ಲ. ಮೈಕ್ ಗಳನ್ನು 10 ಗಂಟೆಯ ನಂತ್ರ ಹಾಕಿದ್ರೇ, ಅದರ ಬಗ್ಗೆ ದೂರುಗಳು ಬಂದ್ರೇ ಆಯೋಜಕರ ವಿರುದ್ಧ ಎಫ್ಐಆರ್ ದಾಖಲಿಸಿ, ಕಾನೂನು ಕ್ರಮ…

Read More

ಮಂಡ್ಯ : ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಶುಕ್ರವಾರ ದಿಢೀರ್ ಭೇಟಿ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಕ್ಕಳೊಂದಿಗೆ ಸಂವಾದ ನಡೆಸಿದರು. ಕಾರ್ಯಕ್ರಮ ನಿಮಿತ್ತ ಮಂಡ್ಯಗೆ ತೆರಳುತ್ತಿದ್ದ ಸಚಿವರನ್ನು ಮದ್ದೂರು ಶಾಸಕ ಕೆ.ಎಂ.ಉದಯ್ ಅವರ ಕೋರಿಕೆ ಮೇರೆಗೆ ನಿಡಘಟ್ಟ ಗ್ರಾಮದ ಸರ್ಕಾರಿ ಪ್ರಾಥಮಿಕ ಪಾಠಶಾಲೆ ಹಾಗೂ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಕೊಠಡಿಗಳ ಅವ್ಯವಸ್ಥೆ ಹಾಗೂ ಸಮಸ್ಯೆ ಕುರಿತಂತೆ ಶಾಲಾ ಮಕ್ಕಳೊಂದಿಗೆ ಚರ್ಚಿಸಿದರು. ನಂತರ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರೊಂದಿಗೆ ಮಾತುಕತೆ ನಡೆಸಿದ ಸಚಿವರು ಶಾಲೆಯ ಸಮಸ್ಯೆಗಳ ಬಗ್ಗೆ ಅಹವಾಲು ಆಲಿಸಿದರು. ಬಳಿಕ ಮಕ್ಕಳೊಂದಿಗೆ ದಿನನಿತ್ಯ ನೀಡುವ ಬಿಸಿಯೂಟದ ಬಗ್ಗೆ ಮಾಹಿತಿ ಪಡೆದರು. ಮತ್ತೆ ವಾರಕ್ಕೆರಡು ಬಾರಿ ಕಡ್ಡಾಯವಾಗಿ ಶಾಲೆಯಲ್ಲಿ ಊಟದ ಜೊತೆ ಮೊಟ್ಟೆ ಹಾಗೂ ಬಾಳೆಹಣ್ಣು ನೀಡಲಾಗುತ್ತಿದೆ ಎಂಬ ಬಗ್ಗೆ ಸಚಿವರು ಮಕ್ಕಳಿಂದಲೇ ಮಾಹಿತಿ ಪಡೆದುಕೊಂಡರು. ಬಳಿಕ ಶಾಲಾ ಆವರಣದಲ್ಲಿಯೇ ವಿದ್ಯಾರ್ಥಿಗಳೊಂದಿಗೆ ನೆಲದ ಮೇಲೆ ಕುಳಿತು ಸಹಪಂಕ್ತಿ ಭೋಜನ ಮಾಡಿದರು. ಸಚಿವರ ಆಗಮನದ…

Read More

ರಾಂಚಿ: ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಮತ್ತು ಜೆಎಂಎಂ ಮಾಜಿ ನಾಯಕ ಚಂಪೈ ಸೊರೆನ್ ಅವರು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಜಾರ್ಖಂಡ್ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದರು. ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಜೆಎಂಎಂ ನಾಯಕ ಚಂಪೈ ಸೊರೆನ್ ಶುಕ್ರವಾರ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಜಾರ್ಖಂಡ್ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದರು. https://twitter.com/ANI/status/1829468033607160117 https://kannadanewsnow.com/kannada/honeytrap-for-karwar-seabird-naval-base-personnel-information-leak-suspected-nia/ https://kannadanewsnow.com/kannada/bengaluru-police-issues-guidelines-for-gowri-ganesha-festival-mandatory-to-follow-them/

Read More

ಕಾರವಾರ: ಇಲ್ಲಿನ ಸೀಬರ್ಡ್ ನೌಕಾನೆಲೆಯ ಸಿಬ್ಬಂದಿಗಳಿಗೆ ಹನಿಟ್ರ್ಯಾಪ್ ಮಾಡಿರುವಂತ ಯುವತಿಯೊಬ್ಬಳು ಮಾಡಿರುವುದಾಗಿ ತಿಳಿದು ಬಂದಿದೆ. ಅಲ್ಲದೇ ಪಾಕಿಸ್ತಾನಕ್ಕೆ ನೌಕಾನೆಲೆಯ ಮಾಹಿತಿ ಸೋರಿಕೆಯ ಶಂಕೆ ವ್ಯಕ್ತವಾಗಿರುವ ಕಾರಣ, ಎನ್ಐಎಯಿಂದ ತನಿಖೆಯನ್ನು ನಡೆಸಲಾಗುತ್ತಿದೆ. ಕಾರವಾರದ ಸೀಬರ್ಡ್ ನೌಕಾನೆಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವಂತ ಮೂವರು ಸಿಬ್ಬಂದಿಗಳಿಗೆ ಫೇಸ್ ಬುಕ್ ಮೂಲಕ ತಾನು ಮರೈನ್ ಅಧಿಕಾರಿ ಎಂಬುದಾಗಿ ಯುವತಿಯೊಬ್ಬಳು ಪರಿಚಯ ಮಾಡಿಕೊಂಡು, ಹನಿಟ್ರ್ಯಾಪ್ ಮಾಡಿರುವುದಾಗಿ ತಿಳಿದು ಬಂದಿತ್ತು. ಮುದಗಾದ ವೇತನ್ ತಾಂಡೇಲ್, ತೋಡೂರಿನ ಸುನೀಲ್ ಸೇರಿದಂತೆ ಮೂವರು ಯುವಕರಿಗೆ ಯುವತಿಯೊಬ್ಬಳು ಹನಿಟ್ರ್ಯಾಪ್ ಮಾಡಿ, ಕಾರವಾರದ ಸೀಬರ್ಡ್ ನೌಕಾನೆಲೆಯ ಗುಪ್ತ ಮಾಹಿತಿಯನ್ನು ಪಡೆದಿರುವುದಾಗಿ ಹೇಳಲಾಗುತ್ತಿತ್ತು. ಈ ಮಾಹಿತಿಯ ಎನ್ಐಎಗೆ ತಿಳಿಯುತ್ತಿದ್ದಂತೇ ಅಲರ್ಟ್ ಆದಂತ ಅಧಿಕಾರಿಗಳು, ಇಂದು ನೌಕಾನೆಲೆಗೆ ಭೇಟಿ ನೀಡಿ, ಸಿಬ್ಬಂದಿಗಳನ್ನು ವಿಚಾರಣೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/good-news-for-fire-station-officers-staff-state-govt-to-implement-7th-state-revised-pay/ https://kannadanewsnow.com/kannada/bengaluru-police-issues-guidelines-for-gowri-ganesha-festival-mandatory-to-follow-them/

Read More