Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕಾಂಗ್ರೆಸ್ ಸರ್ಕಾರ ನಮ್ಮ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಸರ್ಕಾರದ ಗೊಡ್ಡು ಬೆದರಿಕೆಗೆ ನಾವು ಹೆದರಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಗಮಂಗಲದ ಕೋಮುಗಲಭೆ ವಿಚಾರದಲ್ಲಿ ಸರಿಯಾಗಿ ತನಿಖೆ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದೆ. ಜನರು ಹೇಳಿದ್ದನ್ನು ಕೇಳಿಯೇ ಹಾಗೆ ಟ್ವೀಟ್ ಮಾಡಿದ್ದೆ. ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದನ್ನು ಸುಳ್ಳು ಎಂದು ಸಚಿವರೇ ಹೇಳಿದ್ದರು. ಬಳಿಕ ಅದು ನಿಜ ಎಂದು ಸಾಬೀತಾಯಿತು. ಹಾಗಾದರೆ ಸಚಿವರ ವಿರುದ್ಧ ಎಫ್‌ಐಆರ್ ದಾಖಲಿಸಬೇಡವೇ ಎಂದು ಪ್ರಶ್ನೆ ಮಾಡಿದರು. ವಿರೋಧ ಪಕ್ಷದ ನಾಯಕನಾಗಿ ತನಿಖೆ ಮಾಡಿ ಎಂದು ಸರ್ಕಾರಕ್ಕೆ ಆಗ್ರಹಿಸಿದ್ದೇನೆ. ಸರ್ಕಾರದಿಂದ ನನ್ನ ಬಾಯಿ ಮುಚ್ಚಿಸುವ ಕೆಲಸ ಮಾಡಲಾಗುತ್ತಿದೆ. ಎಲ್ಲ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ ವಿರೋಧ ಪಕ್ಷವನ್ನು ಬಗ್ಗುಬಡಿಯಬೇಕೆಂದು ಸರ್ಕಾರ ನಿರ್ಧಾರ ಮಾಡಿದೆ. ಪಾಕ್ ಜಿಂದಾಬಾದ್ ಕುರಿತು ಸುಳ್ಳು ಸುದ್ದಿ ಹಬ್ಬಿಸಿದ ಸಚಿವರು ರಾಜೀನಾಮೆ ನೀಡಬೇಕಿತ್ತು. ಹಾಗಾದರೆ ವಿರೋಧ ಪಕ್ಷವಾಗಿ ನಾವು ಏನು ಮಾಡಬೇಕು? ಎಂದು ಪ್ರಶ್ನಿಸಿದರು.…
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಮೇಲೆ ಹಿಟ್ಲರ್ ಆಗಿದ್ದಾರೆ. ಬಿಜೆಪಿ ಸಂಸದರು ಮತ್ತು ಶಾಸಕರ ಮೇಲೆ ನಿರಂತರವಾಗಿ ಎಫ್‍ಐಆರ್‍ಗಳು ದಾಖಲಾಗುತ್ತಿವೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ; ಕೇಂದ್ರದ ಸಚಿವರ ಮೇಲೆ ಎಫ್‍ಐಆರ್ ದಾಖಲಿಸಿದ್ದಾರೆ ಎಂದು ಟೀಕಿಸಿದರು. ಬೆಂಗಳೂರಿನ ಸಂಸದ ತೇಜಸ್ವಿ ಸೂರ್ಯರ ಮೇಲೆ ಎಫ್‍ಐಆರ್ ದಾಖಲು ಮಾಡಿದ್ದಾರೆ. ಶಾಸಕರಾದ ಹರೀಶ್ ಪೂಂಜಾ, ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ಭರತ್ ಶೆಟ್ಟಿ- ಹೀಗೆ ನಿರಂತರವಾಗಿ ಬಿಜೆಪಿ ನಾಯಕರು, ಕಾರ್ಯಕರ್ತರನ್ನು ಹತ್ತಿಕ್ಕುವ, ಅವರ ಧ್ವನಿ ಅಡಗಿಸುವ ಕೆಲಸವನ್ನು ಕಾಂಗ್ರೆಸ್ ಸರಕಾರದ ನೇತೃತ್ವದಲ್ಲಿ ಮಾಡಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಬಾಂಗ್ಲಾ ಮಾದರಿಯಲ್ಲಿ ರಾಜ್ಯಪಾಲರನ್ನು ಓಡಿಸುತ್ತೇವೆ ಎಂದು ಐವನ್ ಡಿಸೋಜ ಅವರು ಹೇಳಿಕೆ ಕೊಟ್ಟಿದ್ದರು.…
ಕಲಬುರಗಿ :ವಖ್ಫ್ ಅದಾಲತ್ ಕಾಟಾಚಾರಕ್ಕೆ ಮಾಡುತ್ತಿಲ್ಲ. ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ ವಖ್ಫ್ ಅದಾಲತ್ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಮುಖ್ಯಮಂತ್ರಿ ಯವರ ಸೂಚನೆ ಮೇರೆಗೆ ಪ್ರತಿ ಜಿಲ್ಲೆಯಲ್ಲಿ ವಖ್ಫ್ ಅದಾಲತ್ ನಡೆಸುತ್ತಿದ್ದು ಸಮಸ್ಯೆ ಬಗೆಹರಿಸಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ನಡೆಸಬೇಕು. ಉಡಾಫೆ ಧೋರಣೆ ತೋರಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಖಾತೆ, ಒತ್ತುವರಿ ತೆರವು, ಖಾಬರಸ್ಥಾನ ವಿಚಾರಗಳಿಗೆ ಸಂಬಂಧಿಸಿದ ಮನವಿ ಗಳ ಬಗ್ಗೆ ಇನ್ನೊಂದು ತಿಂಗಳಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಗಡುವು ನೀಡಿದರು. ಜಿಲ್ಲಾ ವಖ್ಫ್ ಅಧಿಕಾರಿಗಳು ಆಸ್ತಿ ಸಂರಕ್ಷಣೆ ಹಾಗೂ ಒತ್ತುವರಿ ತೆರವು ವಿಷಯದಲ್ಲಿ ಅಸಡ್ಡೆ ತೋರುತ್ತಿದ್ದು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಹೇಳಿದರು. ಜಿಲ್ಲಾ ವಖ್ಫ್ ಅಧಿಕಾರಿಗಳು ನಿರಂತರವಾಗಿ ಜಿಲ್ಲಾಡಳಿತ ಜತೆ ಸಂಪರ್ಕದಲ್ಲಿದ್ದು ಸಮಸ್ಯೆ ಗಳಿಗೆ ಪರಿಹಾರ ಕಂಡುಕೊಳ್ಳಬೇಕು. ವಖ್ಫ್ ಆಸ್ತಿ ದೇವರ ಆಸ್ತಿ. ಇದನ್ನು ರಕ್ಷಣೆ ಮಾಡುವುದು…
ದಾವಣಗೆರೆ: ಸ್ಟ್ಯಾನ್ ಪೋರ್ಟ್ ವಿಶ್ವ ವಿಜ್ಞಾನಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲಿ ದಾವಣಗೆರೆ ವಿಶ್ವ ವಿದ್ಯಾಲಯದಲ್ಲಿ ಗಣಿತ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಬಿಸಿ ಪ್ರಸನ್ನಕುಮಾರ್ ಅವರ ಮಾರ್ಗದರ್ಶನದಲ್ಲಿ ಸಂಶೋಧನಾರ್ಥಿಯಾಗಿರುವ ಡಾ.ಆರ್.ಎಸ್ ವರುಣ್ ಕುಮಾರ್ ಅವರು ಸತತ 2ನೇ ಬಾರಿಗೆ ಸ್ಥಾನ ಪಡೆದಿದ್ದಾರೆ. ವಿಶ್ವದ ಉನ್ನತ ವಿಜ್ಞಾನಿಗಳ ಕುರಿತು ಅಮೇರಿಕಾದ ಪ್ರತಿಷ್ಠಿತ ಸ್ಟಾನ್ ಫೋರ್ಡ್ ವಿಶ್ವವಿದ್ಯಾನಿಲಯವು ಹೊರತಂದಿರುವ ವಿಶ್ವದ ಟಾಪ್ ಶೇ.2ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯ ಗಣಿತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಬಿ.ಸಿ.ಪ್ರಸನ್ನಕುಮಾರ್ (ಕ್ಯಾಲೆಂಡರ್ ವರ್ಷ 2023- 10866) ಸ್ಥಾನ ಪಡೆದಿದ್ದು, ಇದರ ಜತೆಗೆ ಅವರ ಮಾರ್ಗದರ್ಶನದಲ್ಲಿನ ನಾಲ್ಕು ಸಂಶೋಧನಾರ್ಥಿಗಳಾದ ಡಾ. ಆರ್ .ಜೆ.ಪುನೀತ್ ಗೌಡ (36192), ಡಾ.ಆರ್.ನವೀನ್ ಕುಮಾರ್ (52478), ಡಾ. ಜೆ.ಕೆ.ಮಧುಕೇಶ್ (151615) ಮತ್ತು ಡಾ. ಆರ್.ಎಸ್.ವರುಣ್ ಕುಮಾರ್ (197048) ಇವರುಗಳು ಕೂಡ ಸೇರ್ಪಡೆಯಾಗಿದ್ದಾರೆ. ಸ್ಟ್ಯಾನ್ ಫೋರ್ಡ್ ವಿವಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಸಂಶೋಧನೆ, ಸಂಶೋಧನಾ ವರದಿ, ಸಂಶೋಧನಾ ಉಲ್ಲೇಖಗಳು, ಲೇಖನಗಳನ್ನು ಒಳಗೊಂಡ ಹೆಚ್-ಇಂಡೆಕ್ಸ್, ಐಟೆನ್ ಇಂಡೆಕ್ಸ್ ಸೇರಿದಂತೆ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ಉಪ ವಿಭಾಗದ ವ್ಯಾಪ್ತಿಯ 220 ಕೆವಿ ಎಸ್ ಆರ್ ಎಸ್ ಹಿರಿಯೂರು ನ ವಿದ್ಯುತ್ ವಿತರಣಾ ಕೇಂದ್ರದಲ್ಲಿ ದಿನಾಂಕ:20.09.2024 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ (BESCOM) ಮಾಹಿತಿ ನೀಡಲಾಗಿದ್ದು, ದಿನಾಂಕ:-20.09.2024 ರಂದು 220 ಕೆವಿ ಎಸ್ ಆರ್ ಎಸ್ ಹಿರಿಯೂರು ನ ವಿದ್ಯುತ್ ವಿತರಣಾ ಕೇಂದ್ರದಲ್ಲಿ 2ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಿಸುವ ಪ್ರಯುಕ್ತ ಸದರಿ ದಿನಾಂಕ ದಂದು ಬೆಳಿಗ್ಗೆ:10.00 ರಿಂದ ಸಂಜೆ :04.00 ರವರೆಗೆ ಐಮಂಗಲ & ಮಲ್ಲಪ್ಪನಹಳ್ಳಿ, ವಿ. ವಿಕೇಂದ್ರ ಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ತಿಳಿಸಿರುತ್ತಾರೆ. ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಚಿನ್ನಯ್ಯನಹಟ್ಟಿ ಹೊಸಹಟ್ಟಿ ಮಾಕರಹಳ್ಳಿ, ಬರದಕಟ್ಟೆ ಮಾಯಸಂದ್ರ ಕೆರೆ ಬೇರೇನಹಳ್ಳಿ, ಎ ಬಿ ಕೊಟ್ಟಿಗೆ ಶಿವಪುರ ಹುಚ್ಚಪ್ಪನಹಳ್ಳಿ, ಜೀವದಳ ಜಡಗೊಂಡನಹಳ್ಳಿ ದಿಬ್ಬದಾರಹಳ್ಳಿ ಬಾಲೇನಹಳ್ಳಿ, ಬಟ್ಟೂರುಖಾರಂ ಕೆ ಆರ್ ಪುರ ಮಕ್ಕಳ ಮಲ್ಲೇ ದುಸ್ಕಲ್ ಮುಟ್ಟಿ…
ಬೆಂಗಳೂರು: ನಗರದ ಮತ್ತಿಕೆರೆ ರಸ್ತೆಯಲ್ಲಿರುವಂತ ಎಂ ಎಸ್ ರಾಮಯ್ಯ ಆಸ್ಪತ್ರೆಯ 3ನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆಯಲ್ಲಿ ಐಸಿಯುನಲ್ಲಿದ್ದಂತ ನರ್ಸ್ ಗಳ ಸಮಯ ಪ್ರಜ್ಞೆಯಿಂದ ಪ್ರಾಣಹಾನಿಯ ದುರಂತ ತಪ್ಪಿದಂತೆ ಆಗಿದೆ. ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಬೆಂಕಿ ಅವಘಡ ಉಂಟಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಎಸಿ ಸ್ಪೋಟಗೊಂಡು ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಂ ಎಸ್ ರಾಮಯ್ಯ ಆಸ್ಪತ್ರೆಯ ಮೂರನೇ ಮಹಡಿಯಲ್ಲಿನ ಐಸಿಯುನಲ್ಲಿ ಇದ್ದಂತ ರೋಗಿಗಳನ್ನು ಕೂಡಲೇ ನರ್ಸ್ ಗಳು ಸಮಯ ಪ್ರಜ್ಞೆಯ ಮೂಲಕ ಬೇರೆಡೆ ಶಿಫ್ಟ್ ಮಾಡಿದ್ದಾರೆ. ಹೀಗಾಗಿ ಐಸಿಯುನಲ್ಲಿದ್ದಂತ 7 ರೋಗಿಗಳು ಪ್ರಾಣಾಪಾಯದಿಂದ ಪಾರಾದಂತೆ ಆಗಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದು, ಬೆಂಕಿ ನಂದಿಸುವಂತ ಕಾರ್ಯದಲ್ಲಿ ತೊಡಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/us-court-issues-summons-to-indian-govt-over-attempt-ed-murder-of-khalistani-terrorist-pannuni/ https://kannadanewsnow.com/kannada/cisco-cuts-thousands-of-jobs-in-second-biggest-layoff-of-2024-report/
ಬೆಂಗಳೂರು: ನಗರದಲ್ಲಿ ದಿನಾಂಕ 21-09-2024ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತುರ್ತು ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ( BESCOM ) ಮಾಹಿತಿ ಹಂಚಿಕೊಂಡಿದ್ದು, 66/11 ಕೆವಿಎ ಸಹಕಾರನಗರ ಕೇಂದ್ರದಲ್ಲಿ , ಟ್ರಾನ್ಸ್ ಫಾರ್ಮರ್ 1, 2 & 3 ಮತ್ತು ಬೇಸ್ ಮತ್ತು 66ಕೆವಿ ಬಸ್ ನಿರ್ವಹಣೆ ಕೆಲಸಗಳಿಂದಾಗಿ ದಿನಾಂಕ 21.09.2024 ರಂದು ಬೆಳಿಗ್ಗೆ 10:00 ರಿಂದ ಸಂಜೆ 16:00 ಗಂಟೆಗಳವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಸೆ.21ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಜಿ ಬ್ಲಾಕ್, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯ ನಗರ ಬ್ಲಾಕ್, ಶಬರಿ ನಗರ, ಬೈತರಾಯನಪುರ ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ ನಗರಾಮೃತಹಳ್ಳಿ,…
ನವದೆಹಲಿ: ದೆಹಲಿಯ ನಿಯೋಜಿತ ಮುಖ್ಯಮಂತ್ರಿ ಅತಿಶಿ ಮತ್ತು ಅವರ ಐವರು ಕ್ಯಾಬಿನೆಟ್ ಮಂತ್ರಿಗಳು ಸೆಪ್ಟೆಂಬರ್ 21 ರಂದು ಪ್ರಮಾಣವಚನ ಸ್ವೀಕರಿಸಲಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಇಂದು ತಿಳಿಸಿದೆ. ಎಎಪಿ ನಾಯಕ ಮುಖೇಶ್ ಅಹ್ಲಾವತ್ ದೆಹಲಿ ಕ್ಯಾಬಿನೆಟ್ನಲ್ಲಿ ಹೊಸ ಮುಖವಾಗಲಿದ್ದು, ಗೋಪಾಲ್ ರಾಯ್, ಕೈಲಾಶ್ ಗೆಹ್ಲೋಟ್, ಸೌರಭ್ ಭಾರದ್ವಾಜ್ ಮತ್ತು ಇಮ್ರಾನ್ ಹುಸೇನ್ ಅವರನ್ನು ಕ್ಯಾಬಿನೆಟ್ ಸಚಿವರಾಗಿ ಉಳಿಸಿಕೊಳ್ಳಲಾಗಿದೆ. ನಿಯೋಜಿತ ಮುಖ್ಯಮಂತ್ರಿ ಅತಿಶಿ ಸೆಪ್ಟೆಂಬರ್ 21ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅರವಿಂದ್ ಕೇಜ್ರಿವಾಲ್ ಮಂಗಳವಾರ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು, ನಂತರ ಅತಿಶಿ ರಾಷ್ಟ್ರ ರಾಜಧಾನಿಯಲ್ಲಿ ಹೊಸ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು. https://kannadanewsnow.com/kannada/wall-painting-competition-for-college-students-to-be-held-at-bengaluru-railway-station-on-september-29/ https://kannadanewsnow.com/kannada/us-court-issues-summons-to-indian-govt-over-attempt-ed-murder-of-khalistani-terrorist-pannuni/
ಬೆಂಗಳೂರು: ಬೆಂಗಳೂರು ರೈಲ್ವೆ ವಿಭಾಗದಿಂದ ಕಾಲೇಜು ವಿದ್ಯಾರ್ಥಿಗಳಿಗೆ ಎಸ್.ಎಂ.ವಿ.ಟಿ. ಬೆಂಗಳೂರು ನಿಲ್ದಾಣದಲ್ಲಿ ವಾಲ್ ಪೇಂಟಿಂಗ್ ಸ್ಪರ್ಧೆಯ ಆಯೋಜನೆಯನ್ನು ಸೆ.29ರಂದು ಮಾಡಲಾಗಿದೆ. ಈ ಕುರಿತಂತೆ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ʼಸ್ವಚ್ಛತೆಯೇ ಸೇವೆʼ ಅಭಿಯಾನದ ಅಂಗವಾಗಿ ಸ್ವಚ್ಛತೆಯ ಕುರಿತು ಜನರಲ್ಲಿ ಜಾಗೃತಿಯನ್ನು ಮೂಡಿಸಲು ಬೆಂಗಳೂರು ವಿಭಾಗವು ದಿನಾಂಕ 29.09.2024, ಭಾನುವಾರದಂದು ಎಸ್.ಎಂ.ವಿ.ಟಿ. ಬೆಂಗಳೂರು ರೈಲು ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಸ್ವಚ್ಛತಾ ವಿಷಯದ ಕುರಿತು ವಾಲ್ ಪೇಂಟಿಂಗ್ ಸ್ಪರ್ಧೆಯನ್ನು ಆಯೋಜಿಸಲಿದೆ ಎಂದಿದೆ. ಕಾಲೇಜು ವಿದ್ಯಾರ್ಥಿಗಳಿಗೆ ತಮ್ಮ ಕಲಾ ಪ್ರತಿಭೆಯನ್ನು ತೋರಿಸಲು ಮತ್ತು ಸ್ವಚ್ಛತೆಯ ಕುರಿತು ಜಾಗೃತಿಯನ್ನು ಮೂಡಿಸುವಲ್ಲಿ ತಮ್ಮ ಕೊಡುಗೆಯನ್ನು ನೀಡಲು ಈ ಸ್ಪರ್ಧೆಯು ಒಂದು ಅತ್ಯುತ್ತಮ ಅವಕಾಶವಾಗಿದೆ ಎಂದು ತಿಳಿಸಿದೆ. ವಾಲ್ ಪೇಂಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳ ಕಾಲೇಜು ವಿದ್ಯಾರ್ಥಿಗಳು ತಮ್ಮ ಹೆಸರನ್ನು 24.09.2024ರೊಳಗೆ ನೋಂದಾಯಿಸಿಕೊಳ್ಳಬೇಕು. ವಿವರ ಮತ್ತು ನೋಂದಣಿಗಾಗಿ ಮೊಬೈಲ್ ಸಂಖ್ಯೆ 9164871716 ಅನ್ನು ಅಥವಾ denhmsbc2024@gmail.com ಇಮೇಲ್ ಐ.ಡಿ.ಯನ್ನು ಸಂಪರ್ಕಿಸಬಹುದು. https://kannadanewsnow.com/kannada/two-arrested-for-threatening-salman-khans-father/ https://kannadanewsnow.com/kannada/cisco-cuts-thousands-of-jobs-in-second-biggest-layoff-of-2024-report/
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ತಂದೆ ಸಲೀಂ ಖಾನ್ ಅವರಿಗೆ ಜೀವ ಬೆದರಿಕೆ ಬಂದಿದೆ. ಅವರು ಬೆಳಿಗ್ಗೆ ವಾಕಿಂಗ್ ಮಾಡುತ್ತಿದ್ದಾಗ ಸ್ಕೂಟಿ ಸವಾರಿ ಮಾಡುತ್ತಿದ್ದ ವ್ಯಕ್ತಿ ಮತ್ತು ಬುರ್ಖಾ ಧರಿಸಿದ ಮಹಿಳೆ ಅವರ ಬಳಿಗೆ ಬಂದು “ನಾನು ಲಾರೆನ್ಸ್ ಬಿಷ್ಣೋಯ್ ಅವರನ್ನು ಕಳುಹಿಸಬೇಕೇ?” ಎಂದು ಬೆದರಿಕೆ ಹಾಕಿದರು. ಸಲ್ಮಾನ್ ಖಾನ್ ಅವರ ತಂದೆ ಸಲೀಂ ಖಾನ್ ಅವರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಬಾಂದ್ರಾ ಪೊಲೀಸರು ಪ್ರಕರಣ ದಾಖಲಿಸಿದ್ದು, ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದಾರೆ. ಸೆಕ್ಷನ್ 352 (2), 292, 3 (5) ಬಿಎನ್ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಹೊರಗೆ ಇಬ್ಬರು ದುಷ್ಕರ್ಮಿಗಳು ಐದು ಗುಂಡುಗಳನ್ನು ಹಾರಿಸಿದ ಕೆಲವು ತಿಂಗಳ ನಂತರ ಪೊಲೀಸರು ನಟನ ಮನೆಗೆ ಧಾವಿಸಿದರು. ಪೊಲೀಸರ ತ್ವರಿತ ಕ್ರಮವು ಬಿಹಾರದ ಚಂಪಾರಣ್ ಮೂಲದ ವಿಕ್ಕಿ ಗುಪ್ತಾ (24) ಮತ್ತು ಸಾಗರ್ ಪಾಲ್ (21) ಎಂಬ ಇಬ್ಬರು ವ್ಯಕ್ತಿಗಳನ್ನು ಬಂಧಿಸಲು ಕಾರಣವಾಯಿತು.…














