Subscribe to Updates
Get the latest creative news from FooBar about art, design and business.
Author: kannadanewsnow09
ರಾಯಚೂರು: ಜಿಲ್ಲೆಯಲ್ಲಿ ಧಾರುಣ ಘಟನೆಯೊಂದು ಜರುಗಿದೆ. ಹೊಲದ ಬದುವಿನಲ್ಲಿ ಹಾಕಿದ್ದಂತ ಕಲ್ಲಿನ ಬಂಡೆಯೊಂದು ಉಳುರಿ ಬಿದ್ದು ಇಬ್ಬರು ಮಕ್ಕಳು ದುರ್ಮರಣಹೊಂದಿದ್ದರೇ, ಓರ್ವ ಮಗುವಿನ ಕಾಲು ಮುರಿದಿರುವಂತ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಲಿಂಗಸೂರು ತಾಲ್ಲೂಕಿನ ಗೌಡಹಳ್ಳಿಯ ತಾಂಡಾದಲ್ಲಿ ಇಂದು ಈ ದುರ್ಘಟನೆ ನಡೆದಿದೆ. ಶಾಲೆಗಳಿಗೆ ರಜೆಯಿದ್ದ ಕಾರಣ, ಮಕ್ಕಳನ್ನು ತಮ್ಮ ಹೊಲಕ್ಕೆ ಲಚ್ಚಪ್ಪ ಎಂಬುವರು ಕರೆದೊಯ್ದಿದ್ದರು. ಜಮೀನಿನಲ್ಲಿದ್ದಂತ ಕಲ್ಲುಗಳನ್ನು ಕೀಳಿಸಿ ಬದುವಿನ ಮೇಲೆ ಹಾಕಲಾಗಿತ್ತು. ಇಂತಹ ಕಲ್ಲುಗಳನ್ನು ಸುತ್ತುವರೆಯುವಂತ ಆಟ ಆಡುತ್ತಿದ್ದಂತ ವೇಳೆಯಲ್ಲಿ ಕಲ್ಲು ಬಂಡೆ ಉರುಳಿ ಸ್ಥಳದಲ್ಲೇ ಮಂಜುನಾಥ್(9) ಹಾಗೂ ವೈಶಾಲಿ(8) ಎಂಬ ಮಕ್ಕಳು ಸಾವನ್ನಪ್ಪಿದ್ದಾವೆ. ಮತ್ತೊಂದು ಮಗು 7 ವರ್ಷದ ರಘು ಕಾಲು ಮುರಿದಿದೆ. ಈ ಸಂಬಂಧ ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/those-who-set-bombs-and-fires-in-the-state-are-patriots-chalavadi-narayanasamy/ https://kannadanewsnow.com/kannada/bjp-mla-munirathna-granted-bail-in-rape-case/
ದಕ್ಷಿಣ ಕನ್ನಡ: ರಾಜ್ಯದಲ್ಲಿ ಯಾರು ಬಾಂಬ್, ಬೆಂಕಿ ಹಾಕ್ತಾರೋ ದೇಶಪ್ರೇಮಿಗಳು. ಪಾಕಿಸ್ತಾನ್ ಜಿಂದಾಬಾದ್ ಅಂದವರು ದೇಶಪ್ರೇಮಿಗಳು, ಭಾರತ್ ಮಾತಕೀ ಜೈ ಎಂದವರು ದೇಶದ್ರೋಹಿಗಳು ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾಧಿ ನಾರಾಯಣಸ್ವಾಮಿ ಕಿಡಿ ಕಾರಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಇಂದು ವಿಧಾನಪರಿಷತ್ ಉಪ ಚುನಾವಣೆ ಸಂಬಂಧ ನಡೆದ ಬಿಜೆಪಿ ಜನಪ್ರತಿನಿಧಿಗಳ ಸಮಾವೇಶದ ಸಂದರ್ಭದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಪಾಕಿಸ್ತಾನ ಜಿಂದಾಬಾದ್ ಎನ್ನುವವರು ದೇಶಪ್ರೇಮಿಗಳು; ಭಾರತ್ ಮಾತಾಕಿ ಜೈ ಎನ್ನುವವರು ದೇಶದ್ರೋಹಿಗಳು ಎಂಬ ಸ್ಥಿತಿ ಇದೆ. ಯಾರು ಬಾಂಬ್ ಹಾಕುತ್ತಾರೋ, ಬೆಂಕಿ ಹಾಕುತ್ತಾರೋ, ಕಾನೂನು ಕೈಗೆ ತೆಗೆದುಕೊಳ್ಳುವವರು ದೇಶಪ್ರೇಮಿಗಳು ಎಂಬಂತಾಗಿದೆ ಎಂದು ಟೀಕಿಸಿದರು. ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಅವರು ಮಾತನಾಡಿ, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ತುಷ್ಟೀಕರಣ ನೀತಿ ತುತ್ತತುದಿಗೆ ಮುಟ್ಟಿದೆ. ಭ್ರಷ್ಟಾಚಾರ ಮಿತಿ ಮೀರಿದೆ. ಇಂಥ ಆಡಳಿತದ ವಿರುದ್ಧ ಸೆಟೆದು ನಿಲ್ಲಬೇಕಿದೆ ಎಂದು ತಿಳಿಸಿದರು. ಸಂಸದ ಬ್ರಿಜೇಶ್ ಚೌಟ ಅವರು ಮಾತನಾಡಿ, ಇದು ಕಾರ್ಯಕರ್ತರಿಗೆ ಹುಮ್ಮಸ್ಸು…
ಬೆಂಗಳೂರು: ಹುಬ್ಬಳ್ಳಿಯ ಗಲಭೆ ಪ್ರಕರಣಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂಪಡೆದಿದೆ. ರಾಜ್ಯ ಸರ್ಕಾರದ ನಿರ್ಧಾರದಿಂದ ಬಿಜೆಪಿ ಸಿಡಿದೆದ್ದಿತ್ತು. ಈ ಪ್ರಕರಣದ ಬಗ್ಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಕೇಂದ್ರ ಸಚಿವರಿಗೆ ಪತ್ರವನ್ನು ಬರೆದಿದ್ದಾರೆ. ಹೌದು ರಾಜ್ಯ ಸರ್ಕಾರವು ಹಳೇ ಹುಬ್ಬಳ್ಳಿ ಕಲಭೆ ಪ್ರಕರಣಗಳನ್ನು ಹಿಂಪಡೆದ ನಿರ್ಧಾರವನ್ನು ಪ್ರಶ್ನಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ಪತ್ರ ಬರೆದಿದ್ದಾರೆ. ಅವರು ಬರೆದಿರುವಂತ ಪತ್ರದಲ್ಲಿ ಹಳೇ ಹುಬ್ಬಳ್ಳಿ ಗಲಭೆ ಸಂಬಂಧ ಕೇಸ್ ಹಿಂಪಡೆದ ಬಗ್ಗೆ ರಾಜ್ಯ ಸರ್ಕಾರಕ್ಕೆ ಮರು ಪರಿಶೀಲನೆಗೆ ನಿರ್ದೇಶಿಸುವಂತೆ ಮನವಿ ಮಾಡಿದ್ದಾರೆ. ಇದರ ನಡುವೆ ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಸರ್ಕಾರಕ್ಕೆ ಕೇಸ್ ಹಿಂಪಡೆಯುವ…
ಬೆಂಗಳೂರು: ನಗರದಲ್ಲಿ ಸೋಮವಾರ ರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಬುಧವಾರ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಜಿ, ‘ಸದ್ಯಕ್ಕೆ ಶಾಲಾ-ಕಾಲೇಜುಗಳಿಗೆ ಅಕ್ಟೋಬರ್.16ರ ನಾಳೆ ರಜೆ ಘೋಷಿಸಲಾಗಿದೆ. ಕೆಲವು ವಿಶ್ವವಿದ್ಯಾಲಯಗಳಲ್ಲಿ ಪರೀಕ್ಷೆಗಳು ನಡೆಯುತ್ತಿವೆ. ಕಾಲೇಜುಗಳಿಗೆ ರಜೆ ಘೋಷಿಸುವ ಬಗ್ಗೆ ನಿರ್ಧರಿಸಲು ನಾವು ವಿವರಗಳನ್ನು ಪರಿಶೀಲಿಸುತ್ತಿದ್ದೇವೆ ಎಂದರು. ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ಗುರುವಾರ ಸಾರ್ವಜನಿಕ ರಜೆ ಇರುವುದರಿಂದ ಬುಧವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ನಾಳೆ ವಿವಿಗಳಿಗೆ ರಜೆ ನೀಡುವ ಸಂಬಂಧ ಚರ್ಚಿಸಲಾಗುತ್ತದೆ. ಕೆಲ ವಿವಿಗಳ ಪರೀಕ್ಷೆ ನಡೆಯುತ್ತಿದೆ. ಮರು ಪರೀಕ್ಷೆಗೆ ದಿನಾಂಕ ನಿಗದಿ ಪಡಿಸುವುದು ಕಷ್ಟಕರವಾಗಿದೆ. ಹೀಗಾಗಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು. https://kannadanewsnow.com/kannada/jio-launches-new-4g-feature-phone-jiobharat-v3-v4-just-rs-1099/ https://kannadanewsnow.com/kannada/bjp-mla-munirathna-granted-bail-in-rape-case/
ನವದೆಹಲಿ : ನವದೆಹಲಿಯಲ್ಲಿ ನಡೆಯುತ್ತಿರುವ ಇಂಡಿಯಾ ಮೊಬೈಲ್ ಕಾಂಗ್ರೆಸ್- 2024ರಲ್ಲಿ ರಿಲಯನ್ಸ್ ಜಿಯೋದಿಂದ ಎರಡು ಹೊಸ 4ಜಿ ಫೀಚರ್ ಫೋನ್ಗಳನ್ನು ಬಿಡುಗಡೆ ಮಾಡಿದೆ. V3 ಮತ್ತು V4 ಎರಡೂ ಜಿಯೋಭಾರತ್ (JioBharat) ಸರಣಿ ಅಡಿಯಲ್ಲಿ ಬಿಡುಗಡೆಯಾದ 4ಜಿ ವೈಶಿಷ್ಟ್ಯದ ಫೋನ್ ಗಳಾಗಿವೆ. ಹೊಸ ಮಾಡೆಲ್ಗಳು 1099 ರೂಪಾಯಿಗೆ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಲಿದೆ. ಜಿಯೋಭಾರತ್ V2 ಮಾದರಿಯನ್ನು ಕಳೆದ ವರ್ಷ ಬಿಡುಗಡೆ ಮಾಡಲಾಗಿತ್ತು. ಇದು ಭಾರತೀಯ ಫೀಚರ್ ಫೋನ್ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿದ್ದು, ಕಂಪನಿಯ ಪ್ರಕಾರ, ಲಕ್ಷಾಂತರ 2ಜಿ ಗ್ರಾಹಕರು ಜಿಯೋಭಾರತ್ ಫೀಚರ್ ಫೋನ್ಗಳ ಮೂಲಕ 4ಜಿಗೆ ಬದಲಾಗಿದ್ದಾರೆ. ಮುಂದಿನ ಪೀಳಿಗೆಯ ಈ ಹೊಸ 4ಜಿ ಫೀಚರ್ ಫೋನ್ಗಳು ಆಧುನಿಕ ವಿನ್ಯಾಸ, ಶಕ್ತಿಯುತ 1000 mAh ಬ್ಯಾಟರಿ, 128 ಜಿಬಿವರೆಗೆ ವಿಸ್ತರಿಸಬಹುದಾದ ಸಂಗ್ರಹ ಹಾಗೂ 23 ಭಾರತೀಯ ಭಾಷೆಗಳಿಗೆ ಬೆಂಬಲದೊಂದಿಗೆ ಬರುತ್ತವೆ. ಜಿಯೋಭಾರತ್ ಫೋನ್ ಅನ್ನು ಕೇವಲ 123 ರೂಪಾಯಿಗಳಲ್ಲಿ ಮಾಸಿಕ ರೀಚಾರ್ಜ್ ಮಾಡಬಹುದು. ಇದರಲ್ಲಿ ಅನಿಯಮಿತ ಧ್ವನಿ ಕರೆಗಳು ಮತ್ತು 14…
ಬೆಂಗಳೂರು: ನಟ ದರ್ಶನ್ ಅವರಿಗೆ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ 57ನೇ ಸಿಸಿಹೆಚ್ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಹೀಗಾಗಿ ಮತ್ತೆ ಜಾಮೀನು ಕೋರಿ ನಟ ದರ್ಶನ್ ಹೈಕೋರ್ಟ್ ಗೆ ವಕೀಲರ ಮೂಲಕ ಅರ್ಜಿಯನ್ನು ಸಲ್ಲಿಸಿದ್ದಾರೆ. ನಿನ್ನೆ ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದಂತ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯವು ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಎ2 ಆರೋಪಿಯಾಗಿದ್ದಂತ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಈ ಹಿನ್ನಲೆಯಲ್ಲಿ ಇಂದು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇಂದು ತಮ್ಮ ಪರ ವಕೀಲ ಸುನೀಲ್ ಮೂಲಕ ನಟ ದರ್ಶನ್ ಹೈಕೋರ್ಟ್ ಗೆ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ. ನಟ ದರ್ಶನ್ ಗೆ ಹೈಕೋರ್ಟ್ ನಿಂದಲಾದರೂ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ದೊರೆಯುತ್ತಾ ಎಂಬುದನ್ನು ಕಾದು ನೋಡಬೇಕಿದೆ. https://kannadanewsnow.com/kannada/by-elections-to-3-assembly-constituencies-in-karnataka-to-be-held-on-november-13/ https://kannadanewsnow.com/kannada/bjp-mla-munirathna-granted-bail-in-rape-case/
ನವದೆಹಲಿ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಿಸಲಾಗಿದೆ. ಚೆನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್.13ರಂದು ಮತದಾನ ನಡೆಯಲಿದೆ. ನವೆಂಬರ್ 23ರಂದು ಫಲಿತಾಂಶ ಘೋಷಣೆಯಾಗಲಿದೆ. ಹೆಚ್ ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಆಯ್ಕೆಯಾದ ಬಳಿಕ ತೆರವಾದಂತ ಚೆನ್ನಪಟ್ಟಣ, ಸಂಸದರಾದ ಬಳಿಕ ಬೊಮ್ಮಾಯಿ ಅವರ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಿಂದ ತೆರವಾದ ಸ್ಥಾನಕ್ಕೆ ಹಾಗೂ ಈ.ತುಕಾರಾಂ ಅವರ ಸಂಡೂರು ಕ್ಷೇತ್ರಕ್ಕೆ ಉಪ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ನವೆಂಬರ್.13ರಂದು ಕರ್ನಾಟಕದ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಿಸಲಾಗಿದೆ. ನವೆಂಬರ್.23ಕ್ಕೆ ಫಲಿತಾಂಶ ಘೋಷಣೆಯಾಗಲಿದೆ. ಹೀಗಿವೆ ಚುನಾವಣೆಯ ಪ್ರಮುಖ ದಿನಾಂಕಗಳು ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಸಂಬಂಧ ದಿನಾಂಕ 18-10-2024ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ದಿನಾಂಕ 25-10-2024ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ದಿನಾಂಕ 28-10-2024ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ದಿನಾಂಕ 30-10-2024 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ದಿನಾಂಕ 13-11-2024ರಂದು ಮತದಾನ ನಡೆಯಲಿದೆ. ದಿನಾಂಕ 23-11-2024ರಂದು ಮತಏಣಿಕೆ…
ನವದೆಹಲಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗದಿಂದ ದಿನಾಂಕ ಘೋಷಿಸಲಾಗಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಇಂದು ನವದೆಹಲಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ರಾಜೀವ್ ಕುಮಾರ್ ಅವರು, ಒಂದೇ ಹಂತದಲ್ಲಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಚುನಾವಣೆ ನಡೆಸಲಾಗುವುದಾಗಿ ತಿಳಿಸಿದರು. ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ನವೆಂಬರ್.20ರಂದು ಮತದಾನ ನಡೆಯಲಿದೆ. ನವೆಂಬರ್ 23ಕ್ಕೆ ಮತಏಣಿಕೆ ನಡೆದು, ಫಲಿತಾಂಶ ಘೋಷಿಸಲಾಗುತ್ತದೆ ಎಂದರು. ಹೀಗಿದೆ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಪ್ರಮುಖ ದಿನಾಂಕಗಳು ಮಹಾರಾಷ್ಟ್ರ 288 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಸಂಬಂಧ ದಿನಾಂಕ 22-10-2024ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ದಿನಾಂಕ 29-10-2024ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ದಿನಾಂಕ 30-10-2024ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ದಿನಾಂಕ 04-11-2024 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ದಿನಾಂಕ 20-11-2024ರಂದು ಮತದಾನ ನಡೆಯಲಿದೆ. ದಿನಾಂಕ 23-11-2024ರಂದು ಮತಏಣಿಕೆ ನಡೆದು, ಫಲಿತಾಂಶ ಘೋಷಣೆಯಾಗಲಿದೆ. ದಿನಾಂಕ 25-11-2024ರಂದು ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ. https://kannadanewsnow.com/kannada/bjp-mla-munirathna-granted-bail-in-rape-case/ https://kannadanewsnow.com/kannada/breaking-schools-and-colleges-to-remain-closed-due-to-incessant-rains-in-bengaluru/
ಬೆಂಗಳೂರು: ಮಹಿಳೆಯೊಬ್ಬರು ನೀಡಿದ್ದಂತ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಂತ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ನೀಡಿದೆ. ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ಕೋರಿ ಶಾಸಕ ಮುನಿರತ್ನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿದ್ದರು. ಇಂದು ಬಿಜೆಪಿ ಶಾಸಕ ಮುನಿರತ್ನ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು, ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುನಿರತ್ನಗೆ ಬಿಗ್ ರಿಲೀಫ್ ನೀಡಿದೆ.
ಬೆಂಗಳೂರು: ನಗರದಲ್ಲಿ ಎಡೆಬಿಡದೇ ಮಳೆಯಾಗುತ್ತಿದೆ. ಮಳೆಯ ಪರಿಣಾಮವಾಗಿ ಹಲವು ರಸ್ತೆಗಳು ಜಲಾವೃತಗೊಂಡು, ಮುಳುಗಡೆಯಾಗಿದ್ದಾವೆ. ಹೀಗಾಗಿ ಜನ ಜೀವನ ಅಸ್ತವ್ಯವಸ್ಥಗೊಂಡಿದ್ದು, ವಾಹನ ಸವಾರರು ಟ್ರಾಫಿಕ್ ಜಾಮ್ ನಲ್ಲಿ ಹೈರಾಣಾಗಿದ್ದಾರೆ. ಬೆಂಗಳೂರಲ್ಲಿ ತಮಿಳುನಾಡಿನಲ್ಲಿ ಉಂಟಾದಂತ ಸೈಕ್ಲೋನ್ ಪರಿಣಾಮವಾಗಿ ಭಾರಿ ಮಳೆಯಾಗುತ್ತಿದೆ. ಮೆಜೆಸ್ಟಿಕ್, ಕೆ ಆರ್ ಮಾರ್ಕೆಟ್, ಕಲಾಸಿಪಾಳ್ಯ, ಲುಂಬಿನಿ ಗಾರ್ಡನ್, ಶಾಂತಿನಗರ ಸೇರಿದಂತೆ ನಗರದಾಧ್ಯಂತ ಮಳೆ ಸುರಿಯುತ್ತಿದೆ. ಭಾರೀ ಮಳೆಯಿಂದಾಗಿ ಕೆ ಆರ್ ಸರ್ಕಲ್ ನಲ್ಲಿ ಕಿಲೋ ಮೀಟರ್ ಗಟ್ಟಲೆ ಸಂಚಾರ ದಟ್ಟಣೆ ಉಂಟಾಗಿದೆ. ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡ ಪರಿಣಾಮ, ವಾಹನ ಸವಾರರು ಪರದಾಡುವಂತೆ ಆಗಿದೆ. ಚರಂಡಿ ನೀರು ರಸ್ತೆಗೆ ನುಗ್ಗಿದ ಪರಿಣಾಮ, ರಸ್ತೆಗಳು ಜಲಾವೃತಗೊಂಡಿವೆ. ಸರಿಯಾಗಿ ಚರಂಡಿ ನಿರ್ವಹಣೆ ಮಾಡದಿದ್ದಕ್ಕೆ ವಾಹನ ಸವಾರರು, ಜನರು ಆಕ್ರೋಶವನ್ನು ಹೊರ ಹಾಕಿದ್ದಾರೆ. https://kannadanewsnow.com/kannada/job-fair-to-be-held-in-bengaluru-on-oct-20/ https://kannadanewsnow.com/kannada/state-cabinet-meeting-scheduled-to-present-caste-census-report-postponed-by-a-week/














