Author: kannadanewsnow09

ಮಂಡ್ಯ : ಜಿಲ್ಲೆಯ ರೈತರಿಗೆ ಕಂಬೈಂಡ್ ಹಾರ್ವೆಸ್ಟರ್ ಯಂತ್ರಗಳ ಮೂಲಕ ಭತ್ತ ಹಾಗೂ ರಾಗಿ ಬೆಳೆಗಳ ಕಟಾವಿನ ಬಾಡಿಗೆ ದರ ನಿಗಧಿಯ ಬಗ್ಗೆ ಪತ್ರಿಕೆ ಹಾಗೂ ನಾಮಫಲಕಗಳಲ್ಲಿ ಹೆಚ್ಚು ಪ್ರಚಾರವಾಗಬೇಕು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಕೃಷಿ ಇಲಾಖೆಗೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಸಭೆ ನಡೆಸಿ ಮಾತನಾಡಿದರು. 2024 -25 ನೇ ಸಾಲಿನಲ್ಲಿ ಮಂಡ್ಯ ಜಿಲ್ಲೆಯ ನೆರೆಯ ಜಿಲ್ಲೆಗಳ ವ್ಯಾಪ್ತಿಯಲ್ಲಿ ಭತ್ತ ಕಂಬೈಂಡ್ ಹಾರ್ವೆಸ್ಟರ್ಗಳ ಬಾಡಿಗೆ ದರಗಳನ್ನು ನಿಗದಿಪಡಿಸಿದರು. ಚೈನ್ ಮಾದರಿ ಭತ್ತದ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ 2,500 ರೂಗಳು, ಟೈರ್ (ಗ್ರೀಪ್) ಮಾದರಿ ಭತ್ತದ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ 2000 ರೂ, ಟೈರ್ (ಸಾಮಾನ್ಯ) ಮಾದರಿ ಭತ್ತದ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ 1,800 ರೂ ಹಾಗೂ ರಾಗಿ ಯಂತ್ರಕ್ಕೆ ಪ್ರತಿ ಗಂಟೆಗೆ 2,900 ರೂ ಗಳನ್ನು ನಿಗಧಿ ಪಡಿಸಿದರು. ಜಿಲ್ಲೆಯಲ್ಲಿ 2024-25…

Read More

ಪುಣೆ: ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಬೇಕು. ಬೆಳಗಾವಿಯಲ್ಲಿನ ಮರಾಠಿಗರನ್ನು ತುಳಿಯುವ ಕೆಲಸ ಆಗುತ್ತಿದೆ. ಅಲ್ಲಿನ ಜನರ ಸ್ಥಿತಿ ಚಿಂತಾಜನಕವಾಗಿದೆ ಎಂಬುದಾಗಿ ಮಹಾರಾಷ್ಟ್ರ ಮಾಜಿ ಸಚಿವ ಆದಿತ್ಯ ಠಾಕ್ರೆ ಆರೋಪಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಈ ಹಿಂದೆ ಬೆಳಗಾವಿಯಲ್ಲಿನ ಮರಾಠಿಗರ ಅಭಿವೃದ್ಧಿಗಾಗಿ ಹೆಚ್ಚುವರಿ ಅನುದಾನ ನೀಡುವುದಾಗಿ ಅಸಾಂವಿಧಾನಿಕ ಸಿಎಂ ಭರವಸೆ ನೀಡಿದ್ದರು. ಆದರೇ ಅದು ಆಗಲೇ ಇಲ್ಲ ಎಂಬುದಾಗಿ ಕಿಡಿಕಾರಿದರು. ಬೆಳಗಾವಿಯಲ್ಲಿ ಮರಾಠಿಗರ ಸ್ಥಿತಿ ಚಿಂತಾಜನಕವಾಗಿದೆ. ಕರ್ನಾಟಕ ಸರ್ಕಾರ ಬೆಳಗಾವಿಗೆ ಮಹಾರಾಷ್ಟ್ರ ನಾಯಕರ ಪ್ರವೇಶವನ್ನು ನಿರ್ಬಂಧಿಸಿದೆ. ಇದು ಸರಿಯಲ್ಲ ಎಂಬುದಾಗಿ ಹೇಳಿದರು. ಬೆಳಗಾವಿಯಲ್ಲಿನ ಮರಾಠಿಗರ ಅಭಿವೃದ್ಧಿಯಾಗಬೇಕು ಅಂದ್ರೆ ಕೇಂದ್ರಾಡಳಿತ ಪ್ರದೇಶ ಆಗಬೇಕು ಎಂಬುದಾಗಿ ಒತ್ತಾಯಿಸಿದರು. Good News : ‘ಬಿಮಾ ಸಖಿ ಯೋಜನೆ’ಗೆ ಮೋದಿ ಚಾಲನೆ ; ಮಹಿಳೆಯರಿಗೆ ತಿಂಗಳಿಗೆ 7,000 ರೂ. ಲಭ್ಯ, ನೀವೂ ಅರ್ಜಿ ಸಲ್ಲಿಸಿ! – Kannada News | India News | Breaking news | Live news | Kannada | Kannada News…

Read More

ಬೆಳಗಾವಿ ಸುವರ್ಣಸೌಧ : ರಾಜ್ಯದಲ್ಲಿ ಈವರೆಗೂ 1,81,699 ಪದವೀಧರರು ಯುವನಿಧಿ ಯೋಜನೆ ಅಡಿ ನೋಂದಣಿ ಮಾಡಿಕೊಂಡಿದ್ದು, ನೋಂದಣಿ ಮಾಡಿಕೊಂಡವರಲ್ಲಿ ಈವರೆವಿಗೂ 1,45,978 ಪದವೀಧರರಿಗೆ ನೇರ ನಗದು ವರ್ಗಾವಣೆ ಮೂಲಕ ನಿರುದ್ಯೋಗ ಭತ್ಯೆ ಪಾವತಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯ ಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ ನಲ್ಲಿ ಸದಸ್ಯ ಕೆ.ಎಸ್.ನವೀನ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಯುವನಿಧಿ ಯೋಜನೆ ಅಡಿ ನೋಂದಾಯಿಸಿದ ಅರ್ಹ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ಈ ಯೋಜನೆ ತಲುಪುತ್ತಿದೆ ಎಂದರು. ಯುವನಿಧಿ ಯೋಜನೆ ಅಡಿಯಲ್ಲಿ ನೋಂದಾಯಿಸಿದ ಅಭ್ಯರ್ಥಿಗಳು ಪ್ರತಿ ತಿಂಗಳು ಡಿಕ್ಲರೇಶನ್ ನೀಡುವುದು ಕಡ್ಡಾಯವಾಗಿದ್ದು, ಇದನ್ನು ನೀಡದೆ ಇದ್ದಲ್ಲಿ ಭತ್ಯೆ ಸ್ಥಗಿತಗೊಳ್ಳಲಿದೆ ಎಂದರು. Good News : ‘ಬಿಮಾ ಸಖಿ ಯೋಜನೆ’ಗೆ ಮೋದಿ ಚಾಲನೆ ; ಮಹಿಳೆಯರಿಗೆ ತಿಂಗಳಿಗೆ 7,000 ರೂ. ಲಭ್ಯ, ನೀವೂ ಅರ್ಜಿ ಸಲ್ಲಿಸಿ! -…

Read More

ಬೆಳಗಾವಿ ಸುವರ್ಣಸೌಧ : ರಾಜ್ಯದಲ್ಲಿ ಔಷಧ ಪರವಾನಗಿ ಇಲ್ಲದೆ ಅನಧಿಕೃತವಾಗಿ ಔಷಧ ಅಂಗಡಿಗಳನ್ನು ನಡೆಸುತ್ತಿರುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಔಷಧ ಮತ್ತು ಕಾಂತಿವರ್ಧಕ ಅಧಿನಿಯಮ ಮತ್ತು ನಿಯಮಾವಳಿಗಳನ್ವಯ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ವಿಧಾನ ಪರಿಷತ್‌ನಲ್ಲಿ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಪ್ರಸ್ತುತ 37,130 ಖಾಸಗಿ ಔಷಧ ಮಳಿಗೆಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರಿ ಆಸ್ಪತ್ರೆ ಆವರಣದಲ್ಲಿ 07 ಜತನಾ ಬಜಾರ್‌ಗಳು, 23 ಜನ ಸಂಜೀವಿನಿ ಕೇಂದ್ರಗಳು ಹಾಗೂ 178 ಜನೌಷಧಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದರು. 2023-24 ರಲ್ಲಿ ದೈನಂದಿನ ಪರಿವೀಕ್ಷಣೆಯಲ್ಲಿ ಇಲಾಖೆಯ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘಿಸಿದ 1245 ಪರವಾನಿಗೆಗಳನ್ನು ಅಮಾನತ್ತುಗೊಳಿಸಿದ್ದು, 292 ಪರವಾನಿಗೆಗಳನ್ನು ರದ್ದುಗೊಳಿಸಲಾಗಿದೆ. ಇಲಾಖೆಯ ಅಧಿಕಾರಿಗಳು ಮಾದಕ ಔಷಧಿಗಳ ದಾಸ್ತಾನು ಮತ್ತು ಮಾರಾಟಗಳ ಬಗ್ಗೆ ನಿಗಾವಹಿಸುತ್ತಿದ್ದು ಮತ್ತು ಖಾಸಗಿ ಔಷಧ ಇದು ಮಳಿಗೆಗಳಲ್ಲಿ ಮಾದಕ ವಸ್ತುಗಳು ನಿಯಾಮಬಾಹಿರ ಮಾರಾಟಗಳ ಬಗ್ಗೆ ಪರಿವೀಕ್ಷಣೆಗಳನ್ನು ಕೈಗೊಂಡು…

Read More

ಬೆಳಗಾವಿ ಸುವರ್ಣಸೌಧ : ಅನರ್ಹರು ಬಿಪಿಎಲ್ ಕಾರ್ಡಗಳನ್ನು ಬಳಸುತ್ತಾರೆ ಎನ್ನುವ ದೂರನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಗ್ರಾಮ ಪಂಚಾಯತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್ ಪಡಿತರ ಕಾರ್ಡ್ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಹೇಳಿದರು. ವಿಧಾನ ಪರಿಷತ್‌ನಲ್ಲಿ ಡಿಸೆಂಬರ್ 09 ರಂದು ಪರಿಷತ್ ಸದಸ್ಯರಾದ ಕೆ ಎ ತಿಪ್ಪೇಸ್ವಾಮಿ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಹಾಗೂ ವಿರೋದ ಪಕ್ಷದ ಕೆಲ ಸದಸ್ಯರು ಬಿಪಿಎಲ್ ಪಡಿತರ ಕಾರ್ಡ್ ರದ್ದು ಕುರಿತು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು. ರಾಜ್ಯದಲ್ಲಿ ಸುಮಾರು ಶೇಕಡ 65 ರಿಂದ 75ರಷ್ಟು ಜನಸಂಖ್ಯೆ ಬಡತನ ರೇಖೆಗಿಂತ ಕೆಳಗಿದ್ದಾರೆ ಎನ್ನುವ ಮಾಹಿತಿ ಇದೆ. ಬಡತನದಲ್ಲಿ ಇರುವ ಜನತೆಗೆ ಅನ್ಯಾಯ ಮಾಡಲು ಬಿಡುವುದಿಲ್ಲ ಎಂದು ಭರವಸೆ ನೀಡಿದ ಸಚಿವರು ಇನ್ನಷ್ಟು ಸಮಯ ಪಡೆದುಕೊಂಡು ಬಿಪಿಎಲ್ ಪಡಿತರದಾರರಿಗೆ ತೊಂದರೆಯಾಗದ ಹಾಗೆ ಎಪಿಎಲ್ ಕಾರ್ಡ್ಗೆ ಅರ್ಹ ಇರುವವರನ್ನು ಬಿಪಿಎಲ್‌ನಿಂದ ಬೇರ್ಪಡಿಸಲಾಗುವುದು ಎಂದು ತಿಳಿಸಿದರು. ಪ್ರಸ್ತುತ ಈಗಿರುವ ಬಿಪಿಎಲ್ ಕಾರ್ಡ್…

Read More

ಬೆಳಗಾವಿ ಸುವರ್ಣ ವಿಧಾನಸೌಧ: ತೊಗರಿಗೆ ಹೆಚ್ಚಿನ ಬೆಂಬಲ ಬೆಲೆ ನಿಗದಿಪಡಿಸುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಮತ್ತೊಂದು ಪತ್ರ ಬರೆಯಲಾಗುವುದು ಮತ್ತು ಕಲಬುರಗಿ ಜಿಲ್ಲೆಯ ತೊಗರಿಗೆ ಹೆಚ್ಚಿನ ರೀತಿಯಲ್ಲಿ ಬೆಂಬಲ ಬೆಲೆ ಘೋಷಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಪ್ರತಿಕ್ರಿಯಿಸಿದರು. ಕಲಬುರಗಿ ಜಿಲ್ಲೆಯಲ್ಲಿ 30 ಲಕ್ಷ ರೈತರು ಬೆಳೆಯುತ್ತಿರುವ ತೊಗರಿ ಜಿ1-ಟ್ಯಾಗ್ ಕ್ಲಾಸ್-31 ಪ್ರಮಾಣ ಪತ್ರ 2017 ರಿಂದ 2019ರಲ್ಲಿ ದೊರೆತಿದ್ದರೂ ಅದರ ಗುಣಧರ್ಮಕ್ಕೆ ಅನುಗುಣವಾಗಿ ವೈಜ್ಞಾನಿಕ ಬೆಂಬಲ ಬೆಲೆ ಘೋಷಿಸದಿರುವುದರಿಂದ ರೈತರಿಗೆ ನಷ್ಟ ಉಂಟಾಗುತ್ತಿದೆ ಎಂದು ಪರಿಷತನಲ್ಲಿ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ ಅವರು ಮಂಡಿಸಿದ ಗಮನ ಸೆಳೆಯುವ ಸೂಚನೆಗೆ ಸಚಿವರು ಪ್ರತಿಕ್ರಿಯಿಸಿದರು. ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರವು ಘೋಷಣೆ ಮಾಡುತ್ತದೆ. ಕೇಂದ್ರದ ಕೃಷಿ ವೆಚ್ಚ ಮತ್ತು ಬೆಲೆ ಆಯೋಗವು (Commission on Agriculture Costs and Prices-CACP) ಪ್ರತಿ ವರ್ಷ ಮುಂಗಾರು ಮತ್ತು ಹಿಂಗಾರು ಹಂಗಾಮಿನ ಬೆಳೆಗಳಿಗೆ ವಿವಿಧ ರಾಜ್ಯಗಳಲ್ಲಿ ಉತ್ಪಾದನಾ ವೆಚ್ಚ ವಿವರಗಳನ್ನು…

Read More

ಕೆಎನ್ಎನ್ ಸ್ಪೋಟ್ಸ್ ಡೆಸ್ಕ್: ಅಡಿಲೇಡ್ ಟೆಸ್ಟ್ ಪಂದ್ಯದ ವೇಳೆ ಮೈದಾನದಲ್ಲಿ ನಡೆದ ವಾಗ್ವಾದಕ್ಕೆ ಸಂಬಂಧಿಸಿದಂತೆ ಭಾರತದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಮತ್ತು ಆಸ್ಟ್ರೇಲಿಯಾದ ಬ್ಯಾಟ್ಸ್ ಮನ್ ಟ್ರಾವಿಸ್ ಹೆಡ್ ಅವರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಶಿಕ್ಷೆ ವಿಧಿಸಿದೆ. ಹೆಡ್ ಅವರನ್ನು ಔಟ್ ಮಾಡಿದ ನಂತರ ಸಿರಾಜ್ ಆಸ್ಟ್ರೇಲಿಯಾದ ಆಟಗಾರನಿಗೆ ಪಿಂಕ್ ಬಾಲ್ ಟೆಸ್ಟ್ ನ 2 ನೇ ದಿನದಂದು ಡ್ರೆಸ್ಸಿಂಗ್ ರೂಮ್ ಗೆ ಮರಳುವಂತೆ ಸನ್ನೆ ಮಾಡಿದರು. ಆಸ್ಟ್ರೇಲಿಯಾ 10 ವಿಕೆಟ್ಗಳಿಂದ ಟೆಸ್ಟ್ ಗೆಲ್ಲಲು ಮತ್ತು ಐದು ಪಂದ್ಯಗಳ ಸರಣಿಯಲ್ಲಿ ಭಾರತದೊಂದಿಗೆ ಸಮಬಲ ಸಾಧಿಸಲು ಪ್ರಮುಖ ಪಾತ್ರ ವಹಿಸಿದ್ದ ಅದ್ಭುತ ಶತಕದ ನಂತರ ಮೈದಾನದಿಂದ ಹೊರನಡೆಯುವ ಮೊದಲು ಹೆಡ್ ಸಿರಾಜ್ಗೆ ಕೆಲವು ಮಾತುಗಳನ್ನು ಹೇಳಿದ್ದರು. ಸಿರಾಜ್ ಅವರ ಬೌಲಿಂಗ್ಗಾಗಿ ಅವರನ್ನು ಅಭಿನಂದಿಸುತ್ತಿದ್ದೇನೆ ಎಂದು ಹೆಡ್ ನಂತರ ಹೇಳಿಕೊಂಡರು, ಇದನ್ನು ಭಾರತೀಯ ತಾರೆ ತಪ್ಪಾಗಿ ಅರ್ಥೈಸಿಕೊಂಡರು. ಈ ಆರೋಪವನ್ನು ಸಿರಾಜ್ ತಳ್ಳಿಹಾಕಿದ್ದಾರೆ. “ಆಟಗಾರರು ಮತ್ತು ಆಟಗಾರರ ಬೆಂಬಲ ಸಿಬ್ಬಂದಿಗಾಗಿ ಐಸಿಸಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಬಳ್ಳಾರಿ ಜಿಲ್ಲೆಯಲ್ಲಿ ಬಾಣಂತಿಯರ ಸಾವು ಪ್ರಕರಣ ಸಂಬಂಧ ಔಷಧಗಳ ಖರೀದಿಯಲ್ಲಿ ಆಗಿರುವ ಲೋಪಗಳ ಕುರಿತು ತನಿಖೆಗೆ ತಂಡವನ್ನು ರಚಿಸಿ ಆದೇಶಿಸಿದೆ. ಟೆಂಡರ್‌ ಮೂಲಕ ಔಷಧಗಳ ಖರೀದಿ ಮತ್ತು ಎಂಪ್ಯಾನಲ್ಡ್‌ ಪ್ರಯೋಗಾಲಯಗಳಲ್ಲಿ ಔಷಧಗಳ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸುವಾಗ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಲ್ಲಿ ಆಗಿರುವ ಲೋಪಗಳ ಕುರಿತು ಪರಿಶೀಲಿಸಿ ವರದಿ ನೀಡಲು ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಎಂ. ಕನಗವಲ್ಲಿ ನೇತೃತ್ವದ ಪರಿಶೀಲನಾ ತಂಡ ರಚಿಸಲಾಗಿದೆ. https://twitter.com/KarnatakaVarthe/status/1866092191531311344 https://kannadanewsnow.com/kannada/sanjay-malhotra-named-rbi-governor/ https://kannadanewsnow.com/kannada/good-news-for-high-school-co-teachers-in-the-state-minister-madhu-bangarappa/

Read More

ನವದೆಹಲಿ: ಕಂದಾಯ ಕಾರ್ಯದರ್ಶಿ ಸಂಜಯ್ ಮಲ್ಹೋತ್ರಾ ಅವರು ಮುಂದಿನ ಮೂರು ವರ್ಷಗಳ ಅವಧಿಗೆ ಆರ್ಬಿಐ ಗವರ್ನರ್ ಆಗಿ ಮುಂದುವರಿಯಲಿದ್ದಾರೆ. ಪ್ರಸ್ತುತ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರಿಂದ ಸಂಜಯ್ ಮಲ್ಹೋತ್ರಾ ಡಿಸೆಂಬರ್ 11 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಸಂಜಯ್ ಮಲ್ಹೋತ್ರಾ ಅವರು ಕಂದಾಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು ಮತ್ತು ರಾಜಸ್ಥಾನ ಕೇಡರ್ನ 1990 ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿದ್ದಾರೆ. ಈ ಹಿಂದೆ ಸರ್ಕಾರಿ ಸ್ವಾಮ್ಯದ ಆರ್ಇಸಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಕೆಲಸ ಮಾಡಿದ ಮಲ್ಹೋತ್ರಾ, ತೆರಿಗೆ ಸಂಗ್ರಹದಲ್ಲಿ ಇತ್ತೀಚಿನ ಏರಿಕೆಯನ್ನು ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರು ಬಜೆಟ್ ಗಾಗಿ ತೆರಿಗೆ ಸಂಬಂಧಿತ ಪ್ರಸ್ತಾಪಗಳನ್ನು ಪರಿಶೀಲಿಸಲಿದ್ದಾರೆ. ಅವರು ಜಿಎಸ್ಟಿ ಮಂಡಳಿಯ ಪದನಿಮಿತ್ತ ಕಾರ್ಯದರ್ಶಿಯಾಗಿದ್ದಾರೆ ಮತ್ತು ಸರಕು ಮತ್ತು ಸೇವಾ ತೆರಿಗೆಯ ಬಗ್ಗೆ ರಾಜ್ಯಗಳ ನಿರೀಕ್ಷೆಗಳ ವಿಷಯಕ್ಕೆ ಬಂದಾಗ ಕ್ಲಿಷ್ಟಕರ ಭೂಪ್ರದೇಶದಲ್ಲಿ ನಡೆಯುತ್ತಾರೆ. https://twitter.com/ShereenBhan/status/1866088864328073453 https://kannadanewsnow.com/kannada/good-news-for-high-school-co-teachers-in-the-state-minister-madhu-bangarappa/ https://kannadanewsnow.com/kannada/people-of-bengaluru-note-there-will-be-no-electricity-in-these-areas-tomorrow/

Read More

ಬೆಳಗಾವಿ : ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಧಿಸಿರುವ ಶುಲ್ಕವನ್ನು ಹಿಂಪಡೆಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ವಿಧಾನಪರಿಷತ್ ನಲ್ಲಿ ಸ್ಪಷ್ಟಪಡಿಸಿದರು. ಚಳಿಗಾಳ ಅಧಿವೇಶನದ ಮೊದಲ ದಿನದ ವಿಧಾನ ಪರಿಷತ್ ಕಲಾಪದಲ್ಲಿ ಜೆಡಿಎಸ್ ಪಕ್ಷದ ಟಿ.ಎ. ಶರವಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ. ಅಲ್ಲದೇ ಕಡು ಬಡ ರೋಗಿಗಳಿಗೂ ಉಚಿತವಾಗಿ ಚಿಕಿತ್ಸೆ ನೀಡುವ ವ್ಯವಸ್ಥೆ ಇರುತ್ತದೆ. ಹೀಗಾಗಿ ಹೆಚ್ಚಳ ಮಾಡಿರುವ ಶುಲ್ಕವನ್ನು ಪರಿಷ್ಕರಣೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದರು. ಬೆಂಗಳೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಇದರ ವ್ಯಾಪ್ತಿಗೊಳಪಡುವ ಬೌರಿಂಗ್, ವಿಕ್ಟೋರಿಯಾ, ಮಿಂಟೋ, ವಾಣಿವಿಲಾಸ ಮತ್ತು ಪಿಎಂಎಸ್ ಎಸ್ ವೈ ಆಸ್ಪತ್ರೆಗಳಲ್ಲಿ ಆರು ವರ್ಷಗಳ ನಂತರ ದರ ಪರಿಷ್ಕರಣೆ ಮಾಡಲಾಗಿದೆ. ಮೂರು ವರ್ಷಗಳಿಗೊಮ್ಮೆ ದರ ಪರಿಷ್ಕರಣೆ ಮಾಡಬೇಕೆಂಬ…

Read More