Author: kannadanewsnow09

ಬೆಂಗಳೂರು: ಸರ್ಕಾರಿ ಸೇವೆಗೆ ಸೇರ್ಪಡೆಗೊಂಡಿರುವ ಎಲ್ಲಾ ಅಧಿಕಾರಿ/ನೌಕರರ ಸೇವಾ ವಹಿಯನ್ನು Electronic Service Register (ESR) ನಲ್ಲಿಯೇ ಅನುಷ್ಠಾನಗೊಳಿಸುವ ಕುರಿತು ಆದೇಶವನ್ನು ಹೊರಡಿಸಿದೆ. 2021-22ನೇ ಸಾಲಿನಿಂದ ಕರ್ನಾಟಕ ರಾಜ್ಯ ಸರ್ಕಾರಿ ಸೇವೆಗೆ ಸೇರ್ಪಡೆಗೊಳ್ಳುವ ಎಲ್ಲಾ ಅಧಿಕಾರಿ/ನೌಕರರುಗಳ ಸೇವಾ ವಹಿಯನ್ನು “ವಿದ್ಯುನ್ಮಾನ ಸೇವಾ ವಹಿ” (Electronic Service Register (ESR) ನಲ್ಲಿಯೇ ಅನುಷ್ಠಾನಗೊಳಿಸಲು ಸಂಬಂಧ ಪಟ್ಟ ಎಲ್ಲಾ ಸಕ್ಷಮ ಪ್ರಾಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳುವಂತೆ ಆದೇಶಿಸಲಾಗಿರುತ್ತದೆ. ಹಾಗೂ ಉಲ್ಲೇಖಿತ ಸರ್ಕಾರದ ಸುತ್ತೋಲೆ (3) & (4) ರಂತೆ, ಎಲ್ಲಾ ಸಿಬ್ಬಂದಿಗಳ ಸೇವಾ ವಹಿಗಳನ್ನು ESR ಗೆ ಬದಲಾಯಿಸಿ ಮುಂದೆ ESR ನಲ್ಲಿಯೇ ಮುಂದುವರೆಸುವಂತೆ ತಿಳಿಸಲಾಗಿದೆ ಹಾಗೂ ಹೆಚ್‌ಆರ್‌ಎಂಎಸ್-1 ತಂತ್ರಾಂಶದ ಸೇವಾವಹಿ ಭಾಗದಲ್ಲಿ ಅಧಿಕಾರಿ/ನೌಕರರ ಮಾಹಿತಿಯು ಲಭ್ಯವಿದ್ದು, ಸದರಿ ಮಾಹಿತಿಯನ್ನು ಹೆಚ್‌ಆರ್‌ಎಂಎಸ್-2 ಯೋಜನೆಯ ಭಾಗವಾಗಿರುವ ವಿದ್ಯುನ್ಮಾನ ಸೇವಾ ವಹಿ (ESR) ಗೆ ವರ್ಗಾಯಿಸಲು ಕ್ರಮ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸದರಿ ಮಾಹಿತಿಯನ್ನು ವರ್ಗಾಯಿಸಿದ ನಂತರ ESR ನಲ್ಲಿ ಯಾವುದೇ ತಿದ್ದುಪಡಿ ಮಾಡುವ ಅವಕಾಶವಿಲ್ಲದಿರುವ ಕಾರಣ ಹೆಚ್‌ಆರ್‌ಎಂಎಸ್-1 ತಂತ್ರಾಂಶದಲ್ಲಿ…

Read More

ಶಿವಮೊಗ್ಗ : ಶಿವಗಂಗಾ ಯೋಗ ಕೇಂದ್ರದಲ್ಲಿ ಭಾರತ ಸರ್ಕಾರ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ,ಪಶು ವೈದ್ಯಕೀಯ ಕಾಲೇಜು, ಕಾಶಿಪುರ, ನೆಹರು ಯುವ ಕೇಂದ್ರ, ಶಿವಮೊಗ್ಗ ಸಹಯೋಗದೊಂದಿಗೆ ದಿನಾಂಕ 19.06.2024 ರಿಂದ 3 ದಿನಗಳ ಕಾಲ ಶಿವಗಂಗಾ ಯೋಗ ಕೇಂದ್ರದಲ್ಲಿ ಯೋಗ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ತರಬೇತುದಾರರಾಗಿ ವೀಣಾ, ಅನುರಾಧ ರವರು ಶಿಬಿರಾರ್ಥಿಗಳಿಗೆ ಯೋಗದಿಂದ ಮನಸ್ಸಿನ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳುವುದು, ಯೋಗದಿಂದ ಆಗುವ ಪ್ರಯೋಜನಗಳೇನು, ಯೋಗಾಸನದಲ್ಲಿ ಎಷ್ಟು ಆಸನಗಳಿವೆ ಯಾವ ಆಸನದಿಂದ ಏನು ಪ್ರಯೋಜನವೆಂದು ತಿಳಿಸಿಕೊಡಲಿದ್ದಾರೆ. ಇಂದು ಶಿಬಿರದಲ್ಲಿ ಸುಮಾರು 80 ಜನ ಶಿಬಿರಾರ್ಥಿಗಳು ಪಾಲ್ಗೊಂಡಿದ್ದಾರೆ. ಶಿಬಿರದಲ್ಲಿ ಪಶು ವೈದ್ಯಕೀಯ ಕಾಲೇಜಿನ ಎನ್. ಎಸ್. ಎಸ್ ಅಧಿಕಾರಿಯಾದ ಡಾ. ರವಿಕುಮಾರ್, ಡಾ. ಯೋಗೇಶ್ , ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಯಾದ ಉಲ್ಲಾಸ್ ಕೆ.ಟಿ.ಕೆ, ಲೆಕ್ಕಾಧಿಕಾರಿಯಾದ ರಮೇಶ್, ಕಾರ್ಯಕರ್ತನಾದ ಶೇಖ್ ಹಸೇನ್ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಯೋಗ ಮಾಡಲು ಆಸಕ್ತಿವುಳ್ಳ ಶಿಬಿರಾರ್ಥಿಗಳು ಈ ಶಿಬಿರದಲ್ಲಿ…

Read More

ಜಮ್ಮು ಮತ್ತು ಕಾಶ್ಮೀರ: ಇಲ್ಲಿನ ಬಾರಾಮುಲ್ಲಾ ಜಿಲ್ಲೆಯಲ್ಲಿ ಬುಧವಾರ ಭುಗಿಲೆದ್ದ ಭೀಕರ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆಗೈದಿರೋದಾಗಿ ತಿಳಿದು ಬಂದಿದೆ. ಅಲ್ಲದೇ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಹಡಿಪೋರಾ-ಬಾರಾಮುಲ್ಲಾ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ತಿಳಿಸಿದೆ. https://twitter.com/ChinarcorpsIA/status/1803385566974579058 ಬಾರಾಮುಲ್ಲಾ ಜಿಲ್ಲೆಯ ವಾಟರ್ಗಾಮ್ ಪ್ರದೇಶದಲ್ಲಿ ಬುಧವಾರ ಮುಂಜಾನೆ ಭಯೋತ್ಪಾದಕರು ಇರುವ ಬಗ್ಗೆ ಗುಪ್ತಚರ ಮಾಹಿತಿಯ ನಂತರ ಕಾರ್ಯಾಚರಣೆ ಪ್ರಾರಂಭವಾಯಿತು. ಭದ್ರತಾ ಪಡೆಗಳು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು, ಭಯೋತ್ಪಾದಕರು ಸೈನಿಕರ ಮೇಲೆ ಗುಂಡು ಹಾರಿಸಿದಾಗ, ಪ್ರತಿದಾಳಿಯನ್ನು ನಡೆಸಲಾಯಿತು. ಈ ದಾಳಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ. “ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಇಂದು ಬೆಳಿಗ್ಗೆ ಬಾರಾಮುಲ್ಲಾ ಜಿಲ್ಲೆಯ ವಾಟರ್ಗಾಮ್ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಭಯೋತ್ಪಾದಕರು ನಮ್ಮ ಪಡೆಗಳ ಮೇಲೆ ಗುಂಡು ಹಾರಿಸಲು…

Read More

ನವದೆಹಲಿ: ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ಸಿಇ) 2024 ರ 10 ಮತ್ತು 12 ನೇ ತರಗತಿ ಸುಧಾರಣಾ ಪರೀಕ್ಷೆಗಳ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ತಮ್ಮ ಹಿಂದಿನ ಪ್ರಯತ್ನದಿಂದ ಒಂದು ಅಥವಾ ಹೆಚ್ಚಿನ ವಿಷಯಗಳಲ್ಲಿ ತಮ್ಮ ಅಂಕಗಳನ್ನು ಸುಧಾರಿಸಲು ಬಯಸುವ ಎಲ್ಲರೂ ಅಧಿಕೃತ ವೆಬ್ಸೈಟ್ – cisce.org ನಲ್ಲಿ ಸಂಪೂರ್ಣ ವೇಳಾಪಟ್ಟಿಯನ್ನು ಪರಿಶೀಲಿಸಬಹುದು. ಅಧಿಸೂಚನೆಯ ಪ್ರಕಾರ, ಐಸಿಎಸ್ಇ ಸುಧಾರಣಾ ಪರೀಕ್ಷೆಯನ್ನು ಜುಲೈ 1 ರಿಂದ 12 ರವರೆಗೆ ನಡೆಸಲಾಗುವುದು ಮತ್ತು ಐಎಸ್ಸಿ ಸುಧಾರಣಾ ಪರೀಕ್ಷೆಯನ್ನು ಜುಲೈ 1 ರಿಂದ 16 ರವರೆಗೆ ನಡೆಸಲಾಗುವುದು. ವಿಷಯವಾರು ಐಸಿಎಸ್ಇ, ಐಎಸ್ಸಿ ಸುಧಾರಣಾ ಪರೀಕ್ಷೆ 2024 ವೇಳಾಪಟ್ಟಿಯನ್ನು ಕೆಳಗೆ ನೀಡಲಾದ ಕೋಷ್ಟಕದಲ್ಲಿ ಪರಿಶೀಲಿಸಬಹುದು. ಹೀಗಿದೆ ಐಸಿಎಸ್ಇ ಸುಧಾರಣಾ ಪರೀಕ್ಷೆ ವೇಳಾಪಟ್ಟಿ 2024 ( ICSE Improvement Exam Schedule 2024 ) ಜುಲೈ 1 ರಂದು ಬೆಳಗ್ಗೆ 11 ಗಂಟೆ: ಇಂಗ್ಲಿಷ್ ಭಾಷೆ – ಇಂಗ್ಲಿಷ್ ಪೇಪರ್ 1 ಜುಲೈ…

Read More

ಚನ್ನಪಟ್ಟಣ : ನನ್ನ ರಾಜಕೀಯ ಜೀವನದಲ್ಲಿ ಮಹತ್ವದ ಬದಲಾವಣೆಯಾಗಿದ್ದು ಚನ್ನಪಟ್ಟಣದಿಂದ. ಈಗ ಇಲ್ಲಿನ ಕೆಂಗಲ್ ಆಂಜನೇಯಸ್ವಾಮಿಯ ದೇವಸ್ಥಾನದಿಂದ ಹೊಸ ರಾಜಕೀಯ ಅಧ್ಯಾಯ ಪ್ರಾರಂಭ ಮಾಡಲು ಬಂದಿದ್ದೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೆಂಗಲ್ ಆಂಜನೇಯ ದೇವಾಸ್ಥಾನದ ಬಳಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು ಹೇಳಿದ್ದಿಷ್ಟು; “ರಾಮನ ಭಂಟ ಆಂಜನೇಯ ಸೇವೆಯ ಪ್ರತೀಕ. ಅದೇ ರೀತಿ ನಾನು ನಿಮ್ಮ ಸೇವೆ ಮಾಡಲು ಮತ್ತೊಮ್ಮೆ ಬಂದಿದ್ದೇನೆ. ಅತಿ ಚಿಕ್ಕ ವಯಸ್ಸಿಗೆ ಬಂಗಾರಪ್ಪ ಅವರ ಸಂಪುಟದಲ್ಲಿ ಮಂತ್ರಿಯಾಗಿದ್ದು ನಿಮ್ಮ ಆಶೀರ್ವಾದದಿಂದ. ಚನ್ನಪಟ್ಡಣದ ಮಹಾಜನತೆಯ ಆಶೀರ್ವಾದ ನಮಗೆ ಬೇಕಾಗಿದೆ. ಜನರು ಪಕ್ಷಬೇಧವನ್ನು ಮರೆತು ಸರ್ಕಾರದ ಸೇವೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕು. ನನ್ನ ಅಧಿಕಾರವನ್ನು ಚನ್ನಪಟ್ಟಣದ ಬದಲಾವಣೆಗೆ ಉಪಯೋಗಿಸಿಕೊಳ್ಳಬೇಕು. ನನಗೆ ಬುದ್ಧಿವಾದ ಹೇಳಲು ಜನರು ಸೋಲಿಸಿದ್ದಾರೆ ನನ್ನ ತಮ್ಮ ಡಿ.ಕೆ.ಸುರೇಶ್ ಗೆ ಸೋಲಾಗಿದೆ ಎಂದರೆ ನನ್ನಲ್ಲೇ ಏನೂ ನ್ಯೂನ್ಯತೆ ಇದೆ ಎಂದು ಕ್ಷೇತ್ರದ ಜನ ಅರ್ಥ ಮಾಡಿಸಿದ್ದಾರೆ. ನನಗೆ ಬುದ್ಧಿವಾದ ಹೇಳಲು ಜನರು ಈ ತೀರ್ಮಾನ ನೀಡಿದ್ದಾರೆ. ಇದನ್ನು ನಾನು…

Read More

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಸಶಸ್ತ್ರ ಸೀಮಾ ಬಲ್ (ಎಸ್ಎಸ್ಎಫ್) ಸೈನಿಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ವಾಸ್ತವವಾಗಿ, ಎಸ್ಎಸ್ಎಫ್ ಜವಾನ್ಗೆ ರಾಮ ಜನ್ಮಭೂಮಿ ಸಂಕೀರ್ಣದಲ್ಲಿ ಗುಂಡು ಹಾರಿಸಲಾಯಿತು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಪೊಲೀಸರು ತಲುಪಿ ಶವವನ್ನು ವಶಪಡಿಸಿಕೊಂಡರು. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮಾಹಿತಿಯ ಪ್ರಕಾರ, ಈ ಪ್ರಕರಣವು ಅಯೋಧ್ಯೆಯಲ್ಲಿ ತಡರಾತ್ರಿ ನಡೆದಿದೆ. ಅಂಬೇಡ್ಕರ್ ನಗರದ ನಿವಾಸಿ ಎಸ್ಎಸ್ಎಫ್ ಜವಾನ್ ಶತ್ರುಘ್ನ ವಿಶ್ವಕರ್ಮ ಅವರನ್ನು ರಾಮ ಜನ್ಮಭೂಮಿಯ ಭದ್ರತೆಗೆ ನಿಯೋಜಿಸಲಾಗಿತ್ತು. ತಡರಾತ್ರಿ ಆಯುಧವನ್ನು ಸರಿಯಾಗಿ ನಿರ್ವಹಿಸದ ಕಾರಣ, ಹೇಗೋ ಹಠಾತ್ ಗುಂಡಿನ ದಾಳಿ ನಡೆಯಿತು, ಅದು ಎಸ್ಎಸ್ಎಫ್ ಜವಾನ್ಗೆ ಅಪ್ಪಳಿಸಿತು ಎಂದು ಅಧಿಕಾರಿಗಳು ಹೇಳುತ್ತಾರೆ. ಗುಂಡಿನ ಶಬ್ದ ಕೇಳಿ ಹತ್ತಿರದಲ್ಲಿದ್ದ ಇತರ ಭದ್ರತಾ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ತಲುಪಿ ಯುವಕ ಶತ್ರುಘ್ನ ವಿಶ್ವಕರ್ಮ ಗಾಯಗೊಂಡಿರುವುದನ್ನು ನೋಡಿದರು. ಗಾಯಗೊಂಡ ಸ್ಥಿತಿಯಲ್ಲಿದ್ದ ಯೋಧನನ್ನು ಭದ್ರತಾ ಸಿಬ್ಬಂದಿ ತಕ್ಷಣ ಆಸ್ಪತ್ರೆಗೆ…

Read More

ಚಿಕ್ಕಮಗಳೂರು : ಇಂಧನ ಸಚಿವರೂ ಆಗಿರುವ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರು ಬುಧವಾರ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಡೆಂಗ್ಯೂ ಜ್ವರದಿಂದ ಚೇತರಿಸಿಕೊಳ್ಳುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿದರಲ್ಲದೆ, ಆಸ್ಪತ್ರೆಯ ವ್ಯವಸ್ಥೆ ಪರಿಶೀಲಿಸಿದರು. ಇದೇ ವೇಳೆ ಸಚಿವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಇತ್ತೀಚೆಗೆ ಹೆಚ್ಚಾಗುತ್ತಿರುವ ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳು, ಆಸ್ಪತ್ರೆಯ ವ್ಯವಸ್ಥೆ ಸುಧಾರಣೆ ಹಾಗೂ ಉತ್ತಮ ಚಿಕಿತ್ಸಾ ಸೌಲಭ್ಯ ಕಲ್ಲಿಸುವ ಕುರಿತು ಜಿಲ್ಲಾ ಆರೋಗ್ಯಾಧಿಕಾರಿಗಳು, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು, ವೈದ್ಯರ ತಂಡದೊಂದಿಗೆ ಸಚಿವರು ಚರ್ಚಿಸಿದರು. ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ರೋಗಿಗಳು ಹಾಗೂ ಸಂಬಂಧಿಕರಿಗೆ ಧೈರ್ಯ ತುಂಬಿದರಲ್ಲದೆ, ಉತ್ತಮ ಚಿಕಿತ್ಸೆ, ಆರೈಕೆಯ ಭರವಸೆ ನೀಡಿದರು. ಡೆಂಗ್ಯೂ ಹಿನ್ನೆಲೆಯಲ್ಲಿ ಸಾರ್ವಜನಿಕ ಜಾಗೃತಿ ಅಭಿಯಾನ ನಡೆಸಿ, ಜನರಲ್ಲಿ ಅರಿವು ಮೂಡಿಸುವಂತೆ ಆರೋಗ್ಯ ಅಧಿಕಾರಿಗಳಿಗೆ ಸಲಹೆ ನೀಡಿದರು. ಬಳಿಕ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್, “ಡೆಂಗ್ಯೂ ಹರಡುವಿಕೆಯನ್ನು ನಿಯಂತ್ರಿಸಲು ತಕ್ಷಣವೇ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ…

Read More

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ( Delhi Chief Minister Arvind Kejriwal ) ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಜುಲೈ 3 ರವರೆಗೆ ವಿಸ್ತರಿಸಿದೆ. ನಿಯಮಿತ ಜಾಮೀನು ಕೋರಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿತ್ತು. ಈಗ ಹಿಂತೆಗೆದುಕೊಂಡ ಮದ್ಯ ನೀತಿ ಪ್ರಕರಣದಲ್ಲಿ ( Dehli  Liquor Policy Case ) ಅರವಿಂದ್ ಕೇಜ್ರಿವಾಲ್ 100 ಕೋಟಿ ರೂ.ಗಳ ಕಿಕ್ಬ್ಯಾಕ್ಗೆ ಬೇಡಿಕೆ ಇಟ್ಟಿರುವುದಕ್ಕೆ ಪುರಾವೆಗಳಿವೆ ಎಂದು ಜಾರಿ ನಿರ್ದೇಶನಾಲಯವು ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ತಿಳಿಸಿದೆ. ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಅವರು, ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಸಲ್ಲಿಸಲಾದ ಚಾರ್ಜ್ಶೀಟ್ ಅನ್ನು ನ್ಯಾಯಾಲಯವು ಪರಿಗಣಿಸಿದೆ ಎಂದು ಹೇಳಿದರು. ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿಯ ಮಾಜಿ ಸಚಿವ ಮನೀಶ್ ಸಿಸೋಡಿಯಾ ಸೇರಿದಂತೆ ಸಹ ಆರೋಪಿಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವುದು ನ್ಯಾಯಾಲಯವು ಮನಿ ಲಾಂಡರಿಂಗ್ ಆರೋಪವನ್ನು ಸ್ವೀಕರಿಸುತ್ತಿದೆ ಎಂಬುದನ್ನು ತೋರಿಸುತ್ತದೆ ಎಂದು ಅವರು…

Read More

ನವದೆಹಲಿ: ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಕೇಂದ್ರದ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವರಾದ HD ಕುಮಾರಸ್ವಾಮಿ ಅವರು ಭೇಟಿಯಾದರು. ಈ ಸಂದರ್ಭದಲ್ಲಿ ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಕೇಂದ್ರ ಸರಕಾರದ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ರೈಲ್ವೆ ಭವನದಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿದರು. ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಹಾಗೂ ಹಾಲಿ ನಡೆಯುತ್ತಿರುವ ರೈಲ್ವೆ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವುದು, ಹೊಸ ರೈಲ್ವೆ ಮಾರ್ಗಗಳಿಗೆ ಅನುಮೋದನೆ ನೀಡಿ ಹಣಕಾಸು ನೆರವು ಒದಗಿಸುವ ಬಗ್ಗೆ ಮಾನ್ಯ ಸಚಿವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಲಾಯಿತು ಎಂದಿದ್ದಾರೆ. ರೈಲ್ವೆ ಸಚಿವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದು ನನಗೆ ಬಹಳ ಸಂತೋಷ ಉಂಟು ಮಾಡಿತು. ಅಲ್ಲದೆ; ಮಾನ್ಯ ಮಾಜಿ ಪ್ರಧಾನಿಗಳಾದ ಶ್ರೀ ಹೆಚ್.ಡಿ.ದೇವೇಗೌಡ ಅವರ ಕಾಲದಲ್ಲಿ ಮಂಜೂರಾಗಿದ್ದ ಬೆಂಗಳೂರು – ಸತ್ಯಮಂಗಲ – ಚಾಮರಾಜನಗರ (ಕನಕಪುರ – ಮಳವಳ್ಳಿ ಮಾರ್ಗವಾಗಿ) ರೈಲ್ವೆ ಯೋಜನೆಯನ್ನು ಕೈಗೆತ್ತಿಕೊಂಡು…

Read More

ಬೆಂಗಳೂರು: ಸಿಲಿಕಾನ್ ಸಿಟಿ ಜನತೆಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ಕೊಡೋದಕ್ಕೆ ಮುಂದಾಗಿದೆ. ಅದೇ ಶೀಘ್ರದಲ್ಲೇ ನೀರಿನ ದರ ಏರಿಕೆಯನ್ನು ಮಾಡುವಂತ ಸುಳಿವನ್ನು ಡಿಸಿಎಂ ಡಿ.ಕೆ ಶಿವಕುಮಾರ್ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಳೆದ ಹತ್ತು ವರ್ಷಗಳಲ್ಲಿ ಬೆಂಗಳೂರಿನಲ್ಲಿ ನೀರಿನ ದರ ಪರಿಷ್ಕರಣೆ ಮಾಡಿಲ್ಲ. ಪರಿಣಾಮ ಜಲ ಮಂಡಳಿ ದೊಡ್ಡ ನಷ್ಟಕ್ಕೆ ಸಿಲುಕಿದೆ. ಬಿಡಬ್ಲ್ಯೂ ಎಸ್ ಎಸ್ ಬಿಗೆ ಆರ್ಥಿಕ ನೆರವು ನೀಡಲು ಯಾವುದೇ ಬ್ಯಾಂಕ್ ಗಳು ಮುಂದೆ ಬರುತ್ತಿಲ್ಲ. ಸಧ್ಯದಲ್ಲೇ ಕಾವೇರಿ ಐದನೇ ಹಂತದ ಯೋಜನೆ ಪೂರ್ಣಗೊಳ್ಳುತ್ತಿದೆ ಎಂದರು. ಪ್ರತಿ ವರ್ಷ ನಷ್ಟ ಎದುರಾಗುತ್ತಿರುವುದರಿಂದ ಪರಿಹಾರದ ಸಾಧ್ಯತೆಗಳನ್ನು ಪರಿಶೀಲಿಸುತ್ತಿದ್ದೇವೆ. ವಿಶ್ವ ಬ್ಯಾಂಕ್ ಸೇರಿದಂತೆ ಎಲ್ಲಾ ಸಂಸ್ಥೆಗಳು ಮಂಡಳಿ ನಷ್ಟದಿಂದ ಮೇಲೆ ಬರುವ ಪರ್ಯಾಯ ವಿಧಾನವನ್ನು ಕೇಳುತ್ತಿವೆ ಎಂದು ಹೇಳಿದರು. ಕಾವೇರಿಯ 6 ಟಿಎಂಸಿ ನೀರನ್ನು ಬೆಂಗಳೂರಿಗೆ ಬಳಸಲು ನಾನು ಆದೇಶ ಹೊರಡಿಸಿದ್ದು, ಮತ್ತೊಂದು ಹಂತದ ಯೋಜನೆ ಅಗತ್ಯವಿದೆ. ಹೀಗಾಗಿ ನೀರಿನ ದರ ಪರಿಷ್ಕರಣೆ ವಿಚಾರವಾಗಿ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ…

Read More