Author: kannadanewsnow09

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಅಧಿಕಾರದಲ್ಲಿ ಮುಂದುವರಿದರೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಪ್ರಚಾರ ಮಾಡುವುದಿಲ್ಲ ಎಂದು ಮಾಜಿ ಸಚಿವ ಮತ್ತು ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಪ್ರಸ್ತುತ ಉಪಚುನಾವಣೆಗಳು ಪ್ರಗತಿಯಲ್ಲಿವೆ ಮತ್ತು ನವೆಂಬರ್ 13 ರಂದು ಮತದಾನದ ನಂತರ ನಾನು ಮಾತನಾಡುತ್ತೇನೆ ಎಂದು ಅವರು ಹೇಳಿದರು. ಬಿಜೆಪಿ ಎಲ್ಲಾ ಮೂರು ಸ್ಥಾನಗಳನ್ನು ಗೆಲ್ಲಬೇಕೆಂದು ನಾವು ಬಯಸುತ್ತೇವೆ. ಆದರೆ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರಾಗಿ ಸ್ವೀಕರಿಸಬೇಡಿ ಮತ್ತು ಇದನ್ನು ಹೈಕಮಾಂಡ್ಗೆ ತಿಳಿಸಲಾಗಿದೆ. ಅದರ ಹೊರತಾಗಿಯೂ, ಹೈಕಮಾಂಡ್ ಬಯಸಿದರೆ ನಾನು ಪ್ರಚಾರ ಮಾಡುತ್ತೇನೆ ಎಂದು ಜಾರಕಿಹೊಳಿ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಸಿ.ಪಿ.ಯೋಗೇಶ್ವರ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಚಿವ ಸಂಪುಟ ಖಾತೆ ಘೋಷಣೆಗೂ ಮುನ್ನವೇ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಯೋಗೇಶ್ವರ್, ಎನ್.ಆರ್.ಸಂತೋಷ್ ಮತ್ತು ಪಾಟೀಲ್ ಮುಂಚೂಣಿಯಲ್ಲಿದ್ದರು. ಶಂಕರ್…

Read More

ಬೆಂಗಳೂರು: ಸಚಿವ ಜಮೀರ್ ಅಹ್ಮದ್‌, ಆಧುನಿಕ ಟಿಪ್ಪು ಸುಲ್ತಾನ್ ಆಗಲು ಹೊರಟಿದ್ದಾರೆ. ಈ ರೀತಿಯಾದರೂ ಭೂಮಿ ಕಸಿದು, ಸಿಎಂ‌ ಆಗುವ ಯೋಜನೆ ರೂಪಿಸಲಾಗಿದೆ. ಒಂದು ಕಡೆ ಸಿಎಂ ಸಿದ್ದರಾಮಯ್ಯ ಮುಡಾ ನಿವೇಶನ ಲೂಟಿ ಮಾಡುತ್ತಾರೆ ಎಂಬುದಾಗಿ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮಲ್ಲಿಕಾರ್ಜುನ ಖರ್ಗೆ ಕುಟುಂಬ ಸಿಎ ನಿವೇಶನ ಲೂಟಿ ಮಾಡುತ್ತದೆ. ಈಗ ಜಮೀರ್ ಅಹಮದ್ ಕೂಡ ಈ ಪಟ್ಟಿಗೆ ಸೇರಿ ಭೂಮಿ ಕೊಳ್ಳೆ ಹೊಡೆದು ವಕ್ಫ್‌ಗೆ ಸೇರಿಸಲು ತಂತ್ರ ಮಾಡಿದ್ದಾರೆ. ವಕ್ಫ್ ಆಸ್ತಿ ಹೆಸರಿನಲ್ಲಿ ಲ್ಯಾಂಡ್ ಜಿಹಾದ್ ಮಾಡಲು ಹೊರಟಿರುವ ಕಾಂಗ್ರೆಸ್‌ ಸರ್ಕಾರದ ದೌರ್ಜನ್ಯ ವಿರೋಧಿಸಿ ವಿಜಯಪುರದ ರೈತರು ಈ ವರ್ಷ ದೀಪಾವಳಿ ಆಚರಿಸದಿರಲು ನಿರ್ಧರಿಸಿದ್ದಾರೆ. ಅನ್ನ ನೀಡುವ ರೈತರ ಭೂಮಿಗೆ ಕನ್ನ ಹಾಕಿ, ರೈತರ ಮನೆ ದೀಪ ಕಸಿದುಕೊಂಡ ಕಾಂಗ್ರೆಸ್ ಸರ್ಕಾರಕ್ಕೆ ಅನ್ನದಾತರ ಶಾಪ ತಟ್ಟದೇ ಇರದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. https://kannadanewsnow.com/kannada/congress-govt-started-land-jihad-cm-siddaramaiah-should-clarify-immediately-r-ashoka/ https://kannadanewsnow.com/kannada/another-inhuman-incident-in-the-state-dalit-huts-set-on-fire-in-belagavi-for-grazing-land/

Read More

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಹಾಗೂ ವಕ್ಫ್‌ ಬೋರ್ಡ್‌ನಿಂದ ಲ್ಯಾಂಡ್ ಜಿಹಾದ್ ಆರಂಭವಾಗಿದ್ದು, ಬಡ ರೈತರ ಜಮೀನನ್ನು ಕಬಳಿಸಲು ಎಲ್ಲ ಬಗೆಯ ಪ್ರಯತ್ನ ಮಾಡಲಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಕೂಡಲೇ ಸ್ಪಷ್ಟೀಕರಣ ನೀಡಬೇಕೆಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದ ನಂತರ ಇಡೀ ಕರ್ನಾಟಕ ಒಂದೇ ಸಮುದಾಯಕ್ಕೆ ಸೇರಿದ್ದು ಎಂಬಂತೆ ಆಡುತ್ತಿದೆ. ಕಾಂಗ್ರೆಸ್‌ನ ತುಷ್ಟೀಕರಣದಿಂದಾಗಿ ಹಿಂದೂಗಳ ಮೇಲೆ ಹಲ್ಲೆಯಾಗಿದೆ. ಗಣೇಶ ವಿಸರ್ಜನೆ ಮಾಡಲು ಅವಕಾಶವಿಲ್ಲ. ಹಿಂದೂಗಳು ಜೈ ಶ್ರೀರಾಮ್ ಎನ್ನುವಂತಿಲ್ಲ. ಹಿಂದೂಗಳಿಗೆ ಭದ್ರತೆ ಇಲ್ಲ. ಈಗ ವಿಜಯಪುರ ಜಿಲ್ಲೆಯ ಹೊನವಾಡ ಗ್ರಾಮದಲ್ಲಿ ಸುಮಾರು 12 ಸಾವಿರ ಹಾಗೂ ಇಡೀ ಜಿಲ್ಲೆಯಲ್ಲಿ ಒಟ್ಟಾರೆಯಾಗಿ 15 ಸಾವಿರ ಎಕರೆ ಭೂಮಿ ಕಬಳಿಸಲು ವಕ್ಫ್ ಬೋರ್ಡ್ ಯೋಜನೆ ರೂಪಿಸಿದೆ. ಇದಕ್ಕಾಗಿ ಕಂದಾಯ ಇಲಾಖೆಯಿಂದ 139 ರೈತರಿಗೆ ತಿಳಿವಳಿಕೆ ನೋಟಿಸ್ ನೀಡಲಾಗಿದೆ. ಇದು ಸ್ಪಷ್ಟವಾಗಿ ಸರ್ಕಾರದಿಂದಲೇ ನಡೆಯುತ್ತಿರುವ ಲ್ಯಾಂಡ್ ಜಿಹಾದ್ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಬಾಂಬ್ ಸ್ಪೋಟವಾಗಿದೆ. ಪಾಕಿಸ್ತಾನಕ್ಕೆ ಜೈಕಾರ ಹಾಕಲಾಗಿದೆ. ಲವ್…

Read More

ಬೆಂಗಳೂರು: ಭಾರತೀಯ ಜನತಾ ಪಕ್ಷ ದೇಶಾದ್ಯಂತ ಕೈಗೊಂಡಿರುವ ಸದಸ್ಯತ್ವ ಅಭಿಯಾನದಲ್ಲಿ ಬೆಂಗಳೂರಿನ ಯಲಹಂಕ ವಿಧಾನಸಭಾ ಕ್ಷೇತ್ರ ಇಡೀ ದೇಶಕ್ಕೆ ಪ್ರಥಮ ಸ್ಥಾನದಲ್ಲಿದೆ. ಕ್ಷೇತ್ರದಲ್ಲಿ 2 ಲಕ್ಷದ 13 ಸಾವಿರಕ್ಕೂ ಅಧಿಕ ನೂತನ ಸದಸ್ಯರು ಬಿಜೆಪಿಗೆ ನೋಂದಣಿ ಮಾಡಿಕೊಳ್ಳುವ ಮೂಲಕ ಈ ಸಾಧನೆ ಮಾಡಿದೆ. ಕಳೆದ ಹಲವಾರು ದಿನಗಳಿಂದ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಅವರ ನೇತೃತ್ವದಲ್ಲಿ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಈ ಅಭಿಯಾನದಲ್ಲಿ ಪಾಲ್ಗೊಂಡು 2 ಲಕ್ಷಕ್ಕೂ ಅಧಿಕ ನೂತನ ಸದಸ್ಯರನ್ನು ನೋಂದಣಿ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ವಿಶ್ವನಾಥ್ ಅವರಿಗೆ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡರ ನೇತೃತ್ವದಲ್ಲಿ ಪಕ್ಷದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ವಿಶ್ವನಾಥ್, ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಮಾರ್ಗದರ್ಶನದಲ್ಲಿ ಕೈಗೊಂಡ ಅಭಿಯಾನ ಅಭೂತಪೂರ್ವವಾಗಿ ನಡೆದಿದೆ. 2 ಲಕ್ಷದ 13 ಸಾವಿರಕ್ಕೂ ಅಧಿಕ ಜನರನ್ನು…

Read More

ಶಿವಮೊಗ್ಗ: ನಾಳೆ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಮತದಾನ ನಡೆಯಲಿದೆ. ಈ ಚುನಾವಣೆಯಲ್ಲಿ ಸಾಗರ ತಾಲ್ಲೂಕು ಅರಣ್ಯ ಇಲಾಖೆಯ ನಿರ್ದೇಶಕರ ಸ್ಥಾನಕ್ಕೆ ತಾಳಗುಪ್ಪದ ಉಪ ವಲಯ ಅರಣ್ಯಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವಂತ ಸಂತೋಷ್ ಕುಮಾರ್.ಎನ್ ಸ್ಪರ್ಧಿಸಿದ್ದಾರೆ. ನಾಳೆ ನಡೆಯಲಿರುವಂತ ಸಂಘದ ಚುನಾವಣೆಯಲ್ಲಿ ಇಲಾಖೆಯ ಅಧಿಕಾರಿ, ನೌಕರರು ಮತ ನೀಡಿ, ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಸಾಗರ ತಾಲ್ಲೂಕು ಅರಣ್ಯ ಇಲಾಖೆಯ ಎಲ್ಲಾ ಅಧಿಕಾರಿಗಳು ಮತ್ತು ಹಿರಿಯ, ಕಿರಿಯ ನೌಕರ ಮಿತ್ರರೇ ಕರ್ನಾಟಕ ರಾಜ್ಯದ ಅತ್ಯಂತ ಪ್ರತಿಷ್ಠಿತ ಸಂಘಟನೆಯಾದ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ 2024-29 ನೇ ಅವಧಿಗೆ ಸಾರ್ವತ್ರಿಕ ಚುನಾವಣೆ ದಿನಾಂಕ 28.10.2024ರ ನಾಳೆ ನಡೆಯಲಿದೆ ಎಂದಿದ್ದಾರೆ. ಚುನಾವಣಾ ಅಧಿಸೂಚನೆಯಂತೆ ಸಾಗರ ತಾಲೂಕು ಶಾಖೆಗೂ ಚುನಾವಣೆ ನಡೆಯಲಿದ್ದು, ಅರಣ್ಯ ಇಲಾಖೆ ನಿರ್ದೇಶಕರ ಸ್ಥಾನಕ್ಕೆ ತಾಳಗುಪ್ಪ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಕುಮಾರ್ ಎನ್ ಆದ ನಾನು ಸ್ಪರ್ಧಿಸಿದ್ದೇನೆ ಎಂದು ತಿಳಿಸಿದ್ದಾರೆ. ಈ…

Read More

ದಕ್ಷಿಣ ಕನ್ನಡ: ಸ್ವಉದ್ಯೋಗ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಜಿರಿಯಲ್ಲಿರುವಂತ ರುಡ್ ಸೆಟ್ ಸಂಸ್ಥೆಯಿಂದ ಮಾಹಿತಿ ನೀಡಿದ್ದು, ತಮ್ಮ ಸಂಸ್ಥೆಯಿಂದ 30 ದಿನಗಳ ಉಚಿತ ಕಂಪ್ಯೂಟರ್ ಟ್ಯಾಲಿ ಅಕೌಂಟಿಂಗ್ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ. ದಿನಾಂಕ 05-11-2024ರಿಂದ 04-12-2024ರವರೆಗೆ ಉಚಿತ ತರಬೇತಿಯನ್ನು ಆಯೋಜಿಸಲಾಗಿದೆ. 18 ರಿಂದ 45 ವರ್ಷದೊಳಗಿನವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ತರಬೇತಿ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಜೊತೆಗೆ ಸಂಸ್ಥೆಯ ಸಮವಸ್ತ್ರ ಉಚಿತವಾಗಿ ಕೊಡಲಾಗುವುದು. ಅಲ್ಲದೇ ಬ್ಯಾಂಕಿನಿಂದ ಸಿಗುವಂತ ಸಾಲ ಸೌಲಭ್ಯದ ಬಗ್ಗೆ ಮಾಹಿತಿಯನ್ನು ಒದಗಿಸಲಾಗುತ್ತದೆ ಎಂದಿದೆ. ಆಸಕ್ತರು 6364561982 ಗೆ ವಾಟ್ಸ್ ಆಪ್ ಮೂಲಕವೂ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 30 ದಿನಗಳ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿಗೆ ಸಂಬಂಧಿಸಿದಂತ ಹೆಚ್ಚಿನ ಮಾಹಿತಿಗೆ 9591044014, 9448348569, 9980885900, 9902594791 ಗೆ ಕರೆ ಮಾಡಿ ಪಡೆಯಬಹುದಾಗಿ ಎಂದು ತಿಳಿಸಿದೆ.

Read More

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯವಿಭಾಗದ ಎನ್-7ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 28.10.2024ರ ನಾಳೆ ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್‌ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್0, ಬಿ-ನಗರ, ಲಕ್ಷ್ಮೀ ನಗರ, ಹೆಚ್.ವಿ.ಕೆ.ಲೌಟ್. , ಕರ್ನಾಟಕ ಲೇಔಟ್, ಕಮಲಾ ನಗರ, ವಿ.ಜೆ.ಎಸ್.ಎಸ್.ಲೇಔಟ್, ವಾರ್ಡ್ ಕಛೇರಿ ಸುತ್ತಮುತ್ತ ಪವರ್ ಕಟ್ ಆಗಲಿದೆ. ನಾಗಾಪುರ, ಮಹಾಲಕ್ಷ್ಮಿ ಪುರಂ, ಮೋಡಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಕಾ ಹೋಮ್ ಸುತ್ತಮುತ್ತ, ಶಂಕರಮಾತಾ, ಪೈಪ್ ಲೈನ್ ರಸ್ತೆ, ಜೆ.ಸಿ.ನಗರ, ಕುರಬರಳ್ಳಿ, ರಾಜಾಜಿ ನಗರ 2ನೇ ಬ್ಲಾಕ್, ಇ.ಎಸ್.ಐ.ಹೋಸ್ಪಿಟ್. ಕಮಲಾ ನಗರ ಮುಖ್ಯರಸ್ತೆ, ಗೃಹಲಕ್ಷ್ಮಿ ಲೇಔಟ್ 2ನೇ…

Read More

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟಂತ ರಾಜ್ಯದ ಜನರಿಗೆ ಗುಡ್ ನ್ಯೂಸ್ ಅನ್ನು ಕೆ ಎಸ್ ಆರ್ ಟಿಸಿ ನೀಡಿದೆ. ಅದೇ ದೀಪಾವಳಿ ಹಬ್ಬದ ಪ್ರಯುಕ್ತ ಹೆಚ್ಚುವರಿಯಾಗಿ 2000 ಕೆ ಎಸ್ ಆರ್ ಟಿ ಸಿ ಬಸ್ ( KSRTC Bus ) ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 31.10.2024 ರಂದು ನರಕ ಚತುರ್ದಶಿ ಹಾಗೂ ದಿನಾಂಕ:01.11.2024 ರಂದು ಕನ್ನಡ ರಾಜ್ಯೋತ್ಸವ ದಿನಾಂಕ 02.11.2024ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಕರಾರಸಾ ನಿಗಮ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 30.10.2024 ರಿಂದ 01.11.2024 ರವರೆಗೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 2000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದಿದೆ. ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ: 03.11.2024 ಹಾಗೂ 04.11.2024 ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ಹೇಳಿದೆ. • ಕೆಂಪೇಗೌಡ…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ಎನ್ನುವಂತೆ, ಕರ್ನಾಟಕ ನಾಗರೀಕ ಸೇವಾ (ಪರಿಷ್ಕೃತ ವೇತನ) ನಿಯಮಗಳು 2022 ರನ್ವಯ ಕರ್ನಾಟಕ ಸರ್ಕಾರಿ ನೌಕರರು ಪಾವತಿಸಬೇಕಾದ ಕನಿಷ್ಠ ಮಾಸಿಕ ವಿಮಾ ಕಂತಿನ ದರದ ನಿಗದಿ ಪಡಿಸಲಾಗಿದೆ. ಹಾಗಾದ್ರೇ ಎಷ್ಟು ವೇತನ ತೆಗೆದುಕೊಳ್ಳುವವರಿಗೆ ಎಷ್ಟು ವಿಮಾ ಕಂತಿನ ದರ ಕಡಿತವಾಗಲಿದೆ ಎನ್ನುವ ಬಗ್ಗೆ ಮುಂದೆ ಓದಿ. ಈ ಕುರಿತು ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿನಿಯಮ, 1978 ರ (1990 ರ ಕರ್ನಾಟಕ ಅಧಿನಿಯಮ 14) ರ 3 ನೇ ಪ್ರಕರಣದ (2) ನೇ ಉಪ ಪ್ರಕರಣದ ಪರಂತುಕದೊಡನೆ ಓದಿಕೊಂಡು ಅದೇ 3 ನೇ ಪ್ರಕರಣದ (1) ನೇ ಉಪ ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಮೂಲಕ ಕರ್ನಾಟಕ ಸರ್ಕಾರಿ ನೌಕರರ (ಕಡ್ಡಾಯ ಜೀವ ವಿಮಾ) ನಿಯಮಗಳು, 1958 ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು ಈ ಕೆಳಕಂಡ ನಿಯಮಗಳನ್ನು…

Read More

ಬೆಂಗಳೂರು: ರಾಜ್ಯದ ಮಳೆಹಾನಿಯಿಂದಾಗಿ ರೈತರ ಬೆಳೆ ನಷ್ಟವಾಗಿದೆ. ಹಲವೆಡೆ ಮನೆಗಳು ಕುಸಿದು ಹೋಗಿದ್ದಾವೆ. ಇಂತಹ ಮಳೆಹಾನಿ ಸಂತ್ರಸ್ತರಿಗೆ ಗುಡ್ ನ್ಯೂಸ್ ಎನ್ನುವಂತೆ ಸಿಎಂ ಸಿದ್ಧರಾಮಯ್ಯ ಅವರು 48 ಗಂಟೆಗಳಲ್ಲಿ ಪರಿಹಾರವನ್ನು ನೀಡುವಂತೆ ಖಡಕ್ ಆದೇಶವನ್ನು ಮಾಡಿದ್ದಾರೆ. ರಾಜ್ಯದಲ್ಲಿನ ಮಳೆಹಾನಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಹತ್ವದ ಸಭೆಯನ್ನು ನಡೆಸಿದರು. ಈ ಬಾರಿ ಹಿಂಗಾರು ಹಂಗಾಮಿನಲ್ಲಿ ಅಕ್ಟೋಬರ್‌ 1ರಿಂದ 25ರ ವರೆಗೆ ರಾಜ್ಯದಲ್ಲಿ ಸರಾಸರಿ 181 ಮಿ.ಮೀ ಮಳೆಯಾಗಿದೆ. ಈ ಅವಧಿಯ ವಾಸ್ತವಿಕ ಸರಾಸರಿ ಮಳೆ ಪ್ರಮಾಣ 114 ಮಿ.ಮೀ ಆಗಿದ್ದು, ಶೇ.58 ರಷ್ಟು ಹೆಚ್ಚುವರಿ ಮಳೆ ದಾಖಲಾಗಿದೆ ಎಂದರು. ಹಿಂಗಾರು ಅವಧಿಯಲ್ಲಿ ಅತಿವೃಷ್ಟಿಯಿಂದಾಗಿ ಒಟ್ಟು 25 ಸಾವು ಸಂಭವಿಸಿದ್ದು, ತುರ್ತು ಪರಿಹಾರ ಪಾವತಿಸಲಾಗಿದೆ ಎಂದು ಹೇಳಿದರು. ಈ ಅವಧಿಯಲ್ಲಿ ಅಧಿಕ ಮಳೆಯಿಂದಾಗಿ 84ಮನೆಗಳು ಸಂಪೂರ್ಣ ಹಾನಿಗೀಡಾಗಿದ್ದು, 2077ಮನೆಗಳು ಭಾಗಶಃ ಹಾನಿಗೀಡಾಗಿವೆ. ಪೂರ್ತಿ ಮನೆಗೆ 1.20ಲಕ್ಷ ರೂ ಪರಿಹಾರ ಹಾಗೂ ಮನೆ ನಿರ್ಮಿಸಿ ಕೊಡಲು ಈಗಾಗಲೇ ಆದೇಶಿಸಲಾಗಿದೆ. ಭಾಗಶಃ ಹಾನಿಗೀಡಾದ ಮನೆಗಳಿಗೆ…

Read More