Author: kannadanewsnow09

ವಿಜಯನಗರ: ಜಿಲ್ಲೆಯ ಪ್ರಸಿದ್ಧ ಸುಕ್ಷೇತ್ರ ಶ್ರೀಮೈಲಾರ ಲಿಂಗೇಶ್ವರ ಕಾರ್ಣಿಕ ನುಡಿ ಹೊರ ಬಿದ್ದಿದೆ. ಸಂಪಾದಿತಲೇ ಪರಾಕ್ ಎಂಬುದಾಗಿ ಗೊರವಯ್ಯ ರಾಮಣ್ಣ ಕಾರ್ಣಿಕ ನುಡಿಯನ್ನು ನುಡಿದ್ದಾರೆ. ಇಂದು ವಿಜಯನಗರ ಜಿಲ್ಲೆಯ ಹೂವಿನಹಡಗಲಿಯಲ್ಲಿನ ಸುಕ್ಷೇತ್ರ ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ ನಡೆಯಿತು. ಇಂತಹ ಸಂದರ್ಭದಲ್ಲಿ ಗೊರವಯ್ಯ ರಾಮಣ್ಣ ಅವರು ಕಾರ್ಣಿಕ ನುಡಿಯನ್ನು ನುಡಿದಿದ್ದಾರೆ. ಅದೇ ಸಂಪಾದಿತಲೇ ಪರಾಕ್ ಎಂಬುದಾಗಿದೆ. ಗೊರವಯ್ಯನ ಕಾರ್ಣಿಕ ನುಡಿ ಸಂಪಾದಿತಲೇ ಪರಾಕ್ ಎಂಬುದನ್ನು ವಿಶ್ಲೇಷಿಸಿ ಹೇಳಿರುವಂತ ಜನರು ಈ ಸಲ ಭಾರೀ ಮಳೆ, ಬೆಳೆ ಚೆನ್ನಾಗಿ ಆಗಿ, ರೈತರ ಬಾಳು ಹಸನಾಗಲಿದೆ ಎಂಬುದಾಗಿ ತಿಳಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಈ ಬಾರಿಯಂತೆ ಬರಗಾಲ ಕಡಿಮೆಯಾಗಲಿದೆ. ಮಳೆ ಬೆಳೆ ಚೆನ್ನಾಗಿ ಆಗಲಿದೆ. ಸುಭಿಕ್ಷೆಯಿಂದ ರೈತರು ಸಂತಸ ಪಡಲಿದ್ದಾರೆ ಎಂಬುದಾಗಿ ಕಾರ್ಣಿಕ ನುಡಿಯ ಅರ್ಥವಾಗಿದೆ. https://kannadanewsnow.com/kannada/shivamogga-power-outages-in-these-areas-of-the-district-on-february-28/ https://kannadanewsnow.com/kannada/prohibitory-orders-imposed-in-and-around-vidhana-soudha-from-today-till-february-28-ahead-of-rajya-sabha-elections-tomorrow/

Read More

ಬೆಂಗಳೂರು: ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಇಂಜಿನಿಯರಿಂಗ್, ಐಟಿಐ ಸೇರಿದಂತೆ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗ ಮೇಳದಲ್ಲಿ ಒಂದು ಲಕ್ಷ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ ಎಂದು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಸೋಮವಾರದಿಂದ ಆರಂಭವಾಗಿರುವ ಯುವ ಸಮೃದ್ಧಿ ಬೃಹತ್ ಉದ್ಯೋಗ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯುವಕರಿಗೆ ಸ್ಥಳದಲ್ಲೇ ಉದ್ಯೋಗ ಕೊಡಬೇಕೆಂಬುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಲ್ಲೊಂದಾಗಿತ್ತು. ಹೀಗಾಗಿಯೇ ಉದ್ಯೋಗದ ನಿರೀಕ್ಷೆಯಲ್ಲಿದ್ದ ಯುವಕರು ಮತ್ತು ಯುವತಿಯರಿಗೆ ಸ್ಥಳದಲ್ಲಿಯೇ ಉದ್ಯೋಗ ನೀಡುವ ಯುವ ಜನ ಸಮೃದ್ಧಿ ಸಮ್ಮೇಳನ ಕರ್ನಾಟಕದ ಮಟ್ಟಿಗೆ ಒಂಚು ಚಾರಿತ್ರಿಕ ದಾಖಲೆಯಾಗಲಿದೆ ಎಂಬ ಆಶಾಭಾವನೆಯನ್ನು ವ್ಯಕ್ತಪಡಿಸಿದರು. 75 ಸಾವಿರ ಮಂದಿ ನೋಂದಾಣಿಯಾಗಿರುವುದು ದೇಶದಲ್ಲೇ ಐತಿಹಾಸಿಕ ದಾಖಲೆ. ಎಸ್ಸೆಸ್ಸೆಲ್ಸಿಯಿಂದ ಸ್ನಾತಕೋತ್ತರದವರೆಗೂ ವಿವಿಧ ವಿದ್ಯಾರ್ಹತೆಗಳನ್ನು ಹೊಂದಿರುವವರು ಮೇಳದಲ್ಲಿ ಭಾಗವಹಿಸಿದ್ದಾರೆ. ಒಂದು ಲಕ್ಷ ಉದ್ಯೋಗಗಳ ನೇಮಕಾತಿಗೆ ಖಾಸಗಿ ಕಂಪನಿಗಳು ಮುಂದೆ ಬಂದಿವೆ. ಇದು ದಾಖಲೆಯೇ ಸರಿ ಎಂದು ಪಾಟೀಲ್…

Read More

ಶಿವಮೊಗ್ಗ: ವಿದ್ಯುತ್ ನಿರ್ವಹಣ ಕಾಮಗಾರಿಯ ಹಿನ್ನಲೆಯಲ್ಲಿ ಫೆಬ್ರವರಿ.28ರಂದು ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಪವರ್ ಕಟ್ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ತಿಳಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು,  ಎಂ.ಆರ್.ಎಸ್. 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 110 ಕೆವಿ ಭದ್ರಾವತಿ ವಿವಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಫೆ. 28 ರಂದು ಬೆಳಗ್ಗೆ 9.30 ರಿಂದ ಸಂ. 3.30ರವರೆಗೆ ಮಾಚೇನಹಳ್ಳಿ ವಿವಿ ಕೇಂದ್ರದ ವ್ಯಾಪ್ತಿಯ ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್ ಕರೆಂಟ್ ಇರೋದಿಲ್ಲ ಅಂತ ತಿಳಿಸಿದೆ. ಇನ್ನೂ ದುಮ್ಮಳ್ಳಿ, ಶುಗರ್‍ಕಾಲೋನಿ ಮತ್ತು ಜಯಂತಿಗ್ರಾಮ, ಹೊನ್ನವಿಲೆ, ಮೇ||ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐ.ಟಿ.ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ.ಕಾಲೋನಿ, ನವುಲೆಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀಭದ್ರಕಾಲೋನಿ, ಸದಾಶಿವಪುರ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ, ಹಾರೋಬೆನವಳ್ಳಿ, ತಾಂಡ, ಗೌಡನಾಯಕನಹಳ್ಳಿ, ಬಿ.ಬೀರನಹಳ್ಳಿ, ತರಗನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್…

Read More

ಬೆಂಗಳೂರು: ಕಳೆದ ವರ್ಷ ಧಾರ್ಮಿಕ ದತ್ತಿ ಇಲಾಖೆಗೆ ನಮ್ಮ ಸರಕಾರ 250 ಕೋಟಿ ರೂ. ನೀಡಿದೆ ಎಂದು ವಿವರಿಸಿದರು. ಆದರೆ, ಕಾಂಗ್ರೆಸ್ ಸರಕಾರವು ಹಿಂದೂ ಧಾರ್ಮಿಕ ದತ್ತಿ ಇಲಾಖೆಯನ್ನು ಕಡೆಗಣಿಸಿದ್ದು, 50 ಕೋಟಿಯನ್ನೂ ಕೊಟ್ಟಿಲ್ಲ ಎಂದು ವಿಧಾನಪರಿಷತ್ತಿನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ನೋವಿನಿಂದ ನುಡಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಅರ್ಚಕರಿಗೆ ತಪ್ಪು ಮಾಹಿತಿ ಕೊಡಲಾಗಿದೆ. ಅವರು ಪತ್ರಿಕಾಗೋಷ್ಠಿ ಮಾಡುವಂತಾಗಿದೆ. ಅರ್ಚಕರಿಗೆ ಮನೆ ಕೊಟ್ಟದ್ದು ನಮ್ಮ ಸರಕಾರ. ತಸ್ತೀಕ್ ತಂದದ್ದು ನಮ್ಮ ಸರಕಾರ. ಅದನ್ನು 48 ಸಾವಿರಕ್ಕೆ ಏರಿಸಿದ್ದು ನಮ್ಮ ಸರಕಾರ ಎಂದು ವಿವರ ನೀಡಿದರು. ಇದೆಲ್ಲವನ್ನು ಜನರು ಅರ್ಥ ಮಾಡಿಕೊಳ್ಳಬೇಕು. ದೇವಸ್ಥಾನದ ಒಟ್ಟು ಆದಾಯದಿಂದ ಶೇ 10 ಪಡೆಯುವ ಮಸೂದೆ ಜಾರಿಗೆ ಮುಂದಾದುದರಿಂದ ದೇವಸ್ಥಾನದ ಒಟ್ಟು ಆರ್ಥಿಕ ವ್ಯವಸ್ಥೆ ಕುಸಿಯಬಾರದೆಂಬ ಕಾರಣಕ್ಕೆ ವಿರೋಧಿಸಿದ್ದೇವೆ. ಆದರೆ, ಬಿಜೆಪಿಯವರ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು. ತುಂಬ…

Read More

ನವದೆಹಲಿ: ಜೆರೋಧಾ ಸಹ-ಸಂಸ್ಥಾಪಕ ಮತ್ತು ಸಿಇಒ ನಿತಿನ್ ಕಾಮತ್ ಅವರು ಸುಮಾರು ಆರು ವಾರಗಳ ಹಿಂದೆ ಲಘು ಪಾರ್ಶ್ವವಾಯುವಿಗೆ ಒಳಗಾಗಿದ್ದರು ಎಂದು ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ ಬಹಿರಂಗಪಡಿಸಿದರು. ಭಾರತದ ಪ್ರಮುಖ ಸ್ಟಾಕ್ ಬ್ರೋಕರೇಜ್ನ ಸ್ಥಾಪಕರು ತಮ್ಮ ಆರೋಗ್ಯದ ವಿವರಗಳನ್ನು ಹಂಚಿಕೊಂಡರು. ಸ್ವಯಂ-ಆರೈಕೆಯ ಮಹತ್ವವನ್ನು ಒತ್ತಿಹೇಳಿದರು. ಒತ್ತಡ ಮತ್ತು ಅತಿಯಾದ ಕೆಲಸವು ಫಿಟ್ ವ್ಯಕ್ತಿಗಳ ಮೇಲೂ ಪರಿಣಾಮ ಬೀರುವ ಅನಿರೀಕ್ಷಿತ ಹಾನಿಯನ್ನು ಒತ್ತಿಹೇಳಿದರು. ಕಾಮತ್ ಅವರು ತಮ್ಮ ತಂದೆಯ ಇತ್ತೀಚಿನ ನಿಧನ, ಅಸಮರ್ಪಕ ನಿದ್ರೆ, ಬಳಲಿಕೆ, ನಿರ್ಜಲೀಕರಣ ಮತ್ತು ಕಠಿಣ ವ್ಯಾಯಾಮದ ದಿನಚರಿ ಸೇರಿದಂತೆ ಹಲವಾರು ಅಂಶಗಳ ಸಂಯೋಜನೆಯಿಂದಾಗಿ ಪಾರ್ಶ್ವವಾಯುವಿಗೆ ಸಂಭಾವ್ಯ ಕಾರಣಗಳನ್ನು ಬಹಿರಂಗಪಡಿಸಿದರು. ತನ್ನ ವ್ಯವಹಾರಕ್ಕೆ ನೇರ ವಿಧಾನಕ್ಕೆ ಹೆಸರುವಾಸಿಯಾದ ಉದ್ಯಮಿ, ತನ್ನ ಚೇತರಿಕೆಯ ಸಮಯದಲ್ಲಿ ಎದುರಿಸಿದ ಸವಾಲುಗಳ ಬಗ್ಗೆ ಪ್ರತಿಬಿಂಬಿಸಿದರು. ಸುಮಾರು 6 ವಾರಗಳ ಹಿಂದೆ, ನನಗೆ ನೀಲಿ ಬಣ್ಣದಿಂದ ಲಘು ಪಾರ್ಶ್ವವಾಯು ಕಾಣಿಸಿಕೊಂಡಿತು. ತಂದೆಯ ನಿಧನ, ಕಳಪೆ ನಿದ್ರೆ, ಬಳಲಿಕೆ, ನಿರ್ಜಲೀಕರಣ ಮತ್ತು ಅತಿಯಾದ ಕೆಲಸ – ಇವುಗಳಲ್ಲಿ…

Read More

ತುಮಕೂರು: ಜಿಲ್ಲೆಯ ಪಾವಗಡ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವಿವಿಧ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಂತ ಮೂವರು ಮಹಿಳೆಯರು ಸಾವನ್ನಪ್ಪಿರೋ ಧಾರುಣ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕು ಆಸ್ಪತ್ರೆಯಲ್ಲಿ ಫೆಬ್ರವರಿ.22ರಂದು ಸಂತಾನಹರಣ, ಗರ್ಭಕೋಶ ಶಸ್ತ್ರಚಿಕಿತ್ಸೆ, ಸಿಸೇರಿಯನ್ ಚಿಕಿತ್ಸೆಗೆ ಮೂರು ಮಹಿಳೆಯರು ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಫೆಬ್ರವರಿ.22ರಂದು 7 ಮಹಿಳೆಯರು ಹೆರಿಗೆ ಸೇರಿದಂತೆ ವಿವಿಧ ಶಸ್ತ್ರ ಚಿಕಿತ್ಸೆಯನ್ನು ವೈದ್ಯರು ಮಾಡಿದ್ದರು. ಇವರಲ್ಲಿ ಮೂವರು ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ವಿವಿಧ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಂತ ಮೂವರು ಮಹಿಳೆಯರು ಸಾವನ್ನಪ್ಪಿದ್ದು ಹೇಗೆ ಎಂಬುದೇ ಹಲವು ಅನುಮಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆಯಿಂದ ಸ್ಪಷ್ಟ ಮಾಹಿತಿ ಬಿಡುಗಡೆ ಮಾಡಿದ ನಂತ್ರ ತಿಳಿದು ಬರಬೇಕಿದೆ. https://kannadanewsnow.com/kannada/japans-slim-moon-lander-alive-again-after-2-week-lunar-night-scientists-surprise/ https://kannadanewsnow.com/kannada/student-writes-to-cm-asks-him-to-give-bus-and-not-theertha-prasadam/

Read More

ಗಾಜಾ: ಫೆಲೆಸ್ತೀನ್ ಪಶ್ಚಿಮ ದಂಡೆಯ ಕೆಲವು ಭಾಗಗಳನ್ನು ಆಳುತ್ತಿರುವ ತಮ್ಮ ಸರ್ಕಾರ ರಾಜೀನಾಮೆ ನೀಡುತ್ತಿದೆ ಮತ್ತು ರಾಜೀನಾಮೆಯನ್ನು ಪ್ಯಾಲೆಸ್ತೀನ್ ಅಧ್ಯಕ್ಷ ಮತ್ತು ಪ್ಯಾಲೆಸ್ತೀನ್ ರಾಷ್ಟ್ರೀಯ ಪ್ರಾಧಿಕಾರದ (ಪಿಎನ್ಎ) ಮುಖ್ಯಸ್ಥ ಮಹಮೂದ್ ಅಬ್ಬಾಸ್ ಅವರಿಗೆ ಸಲ್ಲಿಸಿದೆ ಎಂದು ಫೆಲೆಸ್ತೀನ್ ಪ್ರಧಾನಿ ಮೊಹಮ್ಮದ್ ಶ್ತಾಯೆಹ್ ಹೇಳಿದ್ದಾರೆ. ಈ ಕ್ರಮವು ಯುಎಸ್ ಬೆಂಬಲಿತ ಸುಧಾರಣೆಗಳಿಗೆ ಬಾಗಿಲು ತೆರೆಯುತ್ತದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ನಾನು ಸರ್ಕಾರದ ರಾಜೀನಾಮೆಯನ್ನು ಶ್ರೀ ಅಧ್ಯಕ್ಷ (ಮಹಮೂದ್ ಅಬ್ಬಾಸ್) ಅವರಿಗೆ ಸಲ್ಲಿಸುತ್ತೇನೆ” ಎಂದು ಶ್ತಾಯೆಹ್ ಹೇಳಿದರು. ಗಾಜಾ ಪಟ್ಟಿಯ ವಿರುದ್ಧದ ಆಕ್ರಮಣ ಮತ್ತು ಪಶ್ಚಿಮ ದಂಡೆ ಮತ್ತು ಜೆರುಸಲೇಂನಲ್ಲಿನ ಉಲ್ಬಣಕ್ಕೆ ಸಂಬಂಧಿಸಿದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿರೋದಾಗಿ ಶ್ತಾಯೆಹ್ ಹೇಳಿದರು. ಮುಂದಿನ ಹಂತ ಮತ್ತು ಅದರ ಸವಾಲುಗಳಿಗೆ ಗಾಝಾ ಪಟ್ಟಿಯಲ್ಲಿನ ಹೊಸ ವಾಸ್ತವತೆಯನ್ನು ಗಣನೆಗೆ ತೆಗೆದುಕೊಳ್ಳುವ ಹೊಸ ಸರ್ಕಾರಿ ಮತ್ತು ರಾಜಕೀಯ ಕ್ರಮಗಳ ಅಗತ್ಯವಿದೆ ಎಂದು ಅವರು ಹೇಳಿದರು. ಅಂತರ-ಫೆಲೆಸ್ತೀನ್ ಒಮ್ಮತ ಮತ್ತು ಪ್ಯಾಲೆಸ್ಟೈನ್ ನ ಇಡೀ ಭೂಮಿಯ…

Read More

ಬೆಂಗಳೂರು: ರಾಜ್ಯದಲ್ಲಿ ನಡೆದಾಡುವ ಕಾಡಿನ ನಿಘಂಟು ಎಂಬುದಾಗಿಯೇ ಹೆಸರಾಗಿದ್ದಂತ ಕೊಡಗಿನ ಕೆ.ಎಂ ಚಿಣ್ಳಪ್ಪ(84) ಅವರು ಇಂದು ನಿಧನರಾಗಿದ್ದಾರೆ. ಈ ಮೂಲಕ ಇನ್ನಿಲ್ಲವಾಗಿದ್ದಾರೆ. ಅವರ ನಿಧಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಸಂತಾಪ ಸೂಚಿಸಿದ್ದಾರೆ. ಈ ಕುರಿತಂತೆ ಎಕ್ಸ್ ಮಾಡಿರುವಂತ ಅವರು, ನಡೆದಾಡುವ ಕಾಡಿನ ನಿಘಂಟು ಎಂದೇ ಹೆಸರಾಗಿದ್ದ ಕೊಡಗಿನ ಕೆ.ಎಂ.ಚಿಣ್ಣಪ್ಪ (84) ಅವರು ನಿಧನರಾಗಿದ್ದಾರೆ ಎಂಬ ಸುದ್ದಿ ತಿಳಿದು ಆಘಾತವಾಯಿತು ಎಂದಿದ್ದಾರೆ. ಬಂಡೀಪುರ ಮತ್ತು ನಾಗರಹೊಳೆ ರಾಷ್ಟ್ರೀಯ ಅಭಯಾರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆಗೆ ತಮ್ಮದೇ ಆದ ಕೊಡುಗೆ ನೀಡಿದ್ದ ಚಿಣ್ಣಪ್ಪ ಅವರ ಕಾರ್ಯವೈಖರಿ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮಾದರಿ ಎಂದು ತಿಳಿಸಿದ್ದಾರೆ. https://twitter.com/RAshokaBJP/status/1762034612514046056 ಅನೇಕ ಸಲ ತಮ್ಮ ಪ್ರಾಣವನ್ನು ಒತ್ತೆಯಿಟ್ಟು ಕಾಡು ಮತ್ತು ವನ್ಯಜೀವಿಗಳ ರಕ್ಷಣೆಯಲ್ಲಿ ತೊಡಗಿಸಿಕೊಂಡ ಚಿಣ್ಣಪ್ಪ ಅವರ ಹೆಸರು ಗಂಧದನಾಡಿನಲ್ಲಿ ಆದರ್ಶ ಪ್ರಾಯವಾಗಿರುತ್ತದೆ ಎಂದಿದ್ದಾರೆ. ಅವರ ನಿಧನದಿಂದ ಅವರ ಕುಟುಂಬಕ್ಕೆ, ಪ್ರಕೃತಿ ಪ್ರಿಯರಿಗೆ ಹಾಗೂ ಅಭಿಮಾನಿಗಳಿಗೆ ಆಗಿರುವ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ…

Read More

ಬೆಂಗಳೂರು : ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯಲ್ಲಿ ಪದವಿ | ಸ್ನಾತಕೊತ್ತರ ಪದವಿ ಮತ್ತು ಡಿಪ್ಲೊಮಾಗಳನ್ನು 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ 2024 ರಂದು ನೇರ ನಗದು ವರ್ಗಾವಣೆ ಮಾಡಲಾಗಿರುತ್ತದೆ. ಅಭ್ಯರ್ಥಿಗಳು ಈ ಪ್ರಯೋಜನವನ್ನು ಪ್ರತಿ ತಿಂಗಳು ಪಡೆಯಬೇಕಿದ್ದರೆ, ಪ್ರತಿ ಮಾಹೆಯಲ್ಲಿ ತಾನು ನಿರುದ್ಯೋಗಿಯೆಂದು, ವ್ಯಾಸಂಗ ಮುಂದುವರೆಸುತ್ತಿಲ್ಲವೆಂದು ಹಾಗೂ ಸ್ವಯಂ ಉದ್ಯೋಗಿಯಲ್ಲವೆಂದು ಸ್ವಯಂ ಘೋಷಣೆಯನ್ನು ಮಾಡಬೇಕಾಗಿರುತ್ತದೆ. ಪ್ರಸ್ತಕ ಫೆಬ್ರವರಿ ಮಾಹೆಯಲ್ಲಿ ದಿನಾಂಕ: 29-02-2024 ರವರೆಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಸ್ವಯಂ ಘೋಷಣೆ ಪ್ರಮಾಣ ಪತ್ರವನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಪ್ರಯೋಜನೆ ಪಡೆಯುತ್ತಿರುವ ಅರ್ಹ ಅಭ್ಯರ್ಥಿಗಳು ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆಯನ್ನು ಮಾಡಲಾಗುವುದಿಲ್ಲ ಎಂಬುದಾಗಿ ತಿಳಿಯಪಡಿಸಲಾಗಿದೆ. ಈಗಾಗಲೇ ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ಜನವರಿ 2024ರಲ್ಲಿ ನೇರ…

Read More

ನವದೆಹಲಿ: ಐಸಿಎಸ್ಇ 12 ನೇ ತರಗತಿ ರಸಾಯನಶಾಸ್ತ್ರ ಪರೀಕ್ಷೆಯನ್ನು ಮಾರ್ಚ್ 21 ರಂದು ನಡೆಸಲಿದೆ. ಪರೀಕ್ಷೆಯನ್ನು ಮೂಲತಃ ಫೆಬ್ರವರಿ 26 ರಂದು ನಡೆಸಲು ನಿರ್ಧರಿಸಲಾಗಿತ್ತು. ಈ ಕುರಿತಂತೆ ಸಿಬಿಎಸ್ಸಿ ಬೋರ್ಡ್ ನಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಫೆಬ್ರವರಿ.26ರ ಇಂದು ನಡೆಯಬೇಕಿದ್ದಂತ ಐಸಿಎಸ್ಇ 12ನೇ ತರಗತಿಯ ರಾಸಾಯನ ಶಾಸ್ತ್ರದ ಪರೀಕ್ಷೆಯನ್ನು ಮಾರ್ಚ್.21ರಂದು ಮರು ನಿಗದಿ ಪಡಿಸಲಾಗಿದೆ ಎಂದು ತಿಳಿಸಿದೆ. https://kannadanewsnow.com/kannada/japans-slim-moon-lander-alive-again-after-2-week-lunar-night-scientists-surprise/ https://kannadanewsnow.com/kannada/we-will-transform-india-into-a-global-export-hub-pm-modi-at-bharattex-2024-event/

Read More