Author: kannadanewsnow09

ಬೆಂಗಳೂರು: ರಾಜ್ಯದ ನಿರುದ್ಯೋಗಿ ಪದವೀಧರರು, ಡಿಪ್ಲೋಮಾದಾರರಿಗೆ ನಿರುದ್ಯೋಗ ಭತ್ಯೆಯನ್ನು ನೀಡುವಂತ ಯುವನಿಧಿ ಯೋಜನೆಯನ್ನು ( Yuvanidhi Scheme ) ಸರ್ಕಾರ ಜಾರಿಗೊಳಿಸಿದೆ. ಈ ಯೋಜನೆಯ ಅಡಿಯಲ್ಲಿ ಪದವೀಧರರಿಗೆ 3000, ಡಿಪ್ಲೋಮಾದಾರರಿಗೆ 1500 ನೀಡಲಾಗುತ್ತಿದೆ. ಇಂತಹ ಯುವನಿಧಿಗೆ ಅರ್ಜಿ ಸಲ್ಲಿಸಿದ್ದವರು ಫೆಬ್ರವರಿ.29ರೊಳಗೆ ಸ್ವಯಂ ಘೋಷಣೆ ಪತ್ರ ಸಲ್ಲಿಕೆ ಕಡ್ಡಾಯವಾಗಿದೆ. ಈ ಕುರಿತಂತೆ ಕೈಗಾರಿಕಾ ತರಬೇತಿ ಹಾಗೂ ಉದ್ಯೋಗ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು ಯುವನಿಧಿ ಸ್ವಯಂ ಘೋಷಣೆ ಕಡ್ಡಾಯವಾಗಿದೆ. ಫೆಬ್ರವರಿ.29ರೊಳಗೆ ಅಪ್ ಲೋಡ್ ಮಾಡಬೇಕು ಎಂದಿದ್ದಾರೆ. ಯೋಜನೆಯ ಫಲಾನುಭವಿಗಳು ಪ್ರತಿ ತಿಂಗಳು ನಾನು ನಿರುದ್ಯೋಗಿ, ವ್ಯಾಸಂಗ ಮುಂದುವರೆಸುತ್ತಿಲ್ಲ ಹಾಗೂ ಸ್ವಯಂ ಉದ್ಯೋಗಿಯಲ್ಲ ಎಂದು ಘೋಷಣೆ ಮಾಡಬೇಕಾಗಿದೆ ಎನ್ನುವ ಷರತ್ತು ವಿಧಿಸಲಾಗಿದೆ. ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುವುದಿಲ್ಲ ಎಂಬುದಾಗಿ ಎಚ್ಚರಿಸಿದ್ದಾರೆ. ಮುಂದಿನ ತಿಂಗಳು ಪ್ರಯೋಜನ ಪಡೆದುಕೊಳ್ಳಲು ಸ್ವಯಂ ಘೋಷಣೆ ಮಾಡಬೇಕಾಗಿರುವ ಕುರಿತು ಅಭ್ಯರ್ಥಿಗಳಿಗೆ ಎಸ್ಎಂಎಸ್ ರವಾನಿಸಲಾಗಿದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಸೀಡೆಡ್…

Read More

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ಪಿಯುಸಿ-ಸಿಇಟಿ/ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 30 ದಿನಗಳ ತರಬೇತಿಯನ್ನು ಆಯೋಜಿಸಿದೆ. ಮೈಸೂರಿನ ವಿಜಯ ವಿಠಲ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ಕರ್ನಾಟಕ ಸರ್ಕಾರ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆ-ಸಿಇಟಿ ಮತ್ತು ನೀಟ್) ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಆಸಕ್ತರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ ದ ಕಛೇರಿಯಲ್ಲಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.00 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದೆಂದು ಕರಾಮುವಿ ಮಹಿಳಾ ಕೇಂದ್ರದ ಪ್ರಾದೇಶಿಕ ನಿರ್ದೇಶಕರಾದ ಶಶಿಕಲಾ ಜೆ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ 0821-2515944 ಈ ದೂರವಾಣಿ ಸಂಖ್ಯೆಯನ್ನು ಅಥವಾ ಹತ್ತಿರದ ಪ್ರಾದೇಶಿಕ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ.

Read More

ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿ (National Education Policy -NEP) 2020 ಮತ್ತು ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು (Compulsory Education -RTE) ಕಾಯ್ದೆ, 2009 ಕ್ಕೆ ಅನುಗುಣವಾಗಿ 1 ನೇ ತರಗತಿಗೆ ಪ್ರವೇಶ ಪಡೆಯಲು ಕನಿಷ್ಠ ವಯಸ್ಸನ್ನು ಆರು ವರ್ಷಗಳಾಗಿ ನಿಗದಿಪಡಿಸುವಂತೆ ಕೇಂದ್ರವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ನೀಡಿದೆ. ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಳಿಗೆ ಬರೆದ ಪತ್ರದಲ್ಲಿ, ಶಿಕ್ಷಣ ಸಚಿವಾಲಯದ (ಎಂಒಇ) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ 2020 ರಲ್ಲಿ ಎನ್ಇಪಿ ಪ್ರಾರಂಭವಾದಾಗಿನಿಂದ ಹಲವಾರು ಬಾರಿ ಹೊರಡಿಸಿದ ನಿರ್ದೇಶನಗಳನ್ನು ಪುನರುಚ್ಚರಿಸಿದೆ. ಕಳೆದ ವರ್ಷವೂ ಇದೇ ರೀತಿಯ ನೋಟಿಸ್ ನೀಡಲಾಗಿತ್ತು. https://twitter.com/EduMinOfIndia/status/1761648754124280032 “2024-25ರ ಅಧಿವೇಶನವು ಶೀಘ್ರದಲ್ಲೇ ಪ್ರಾರಂಭವಾಗಲಿದ್ದು, ಹೊಸ ಪ್ರವೇಶಗಳು ನಡೆಯಲಿವೆ. ಕ್ಲಾಸ್ -1 ಗೆ ಪ್ರವೇಶ ಪಡೆಯಲು ನಿಮ್ಮ ರಾಜ್ಯ / ಕೇಂದ್ರಾಡಳಿತ ಪ್ರದೇಶದಲ್ಲಿ ವಯಸ್ಸನ್ನು ಈಗ 6+ ಗೆ ನಿಗದಿಪಡಿಸಲಾಗಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಸಚಿವಾಲಯ ಫೆಬ್ರವರಿ…

Read More

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲಾ ಹಿಂದಿ ಸಹ ಶಿಕ್ಷಕರಿಗೆ ಬಿಗ್ ಶಾಕ್ ನೀಡಲಾಗಿದೆ. ಅದೇ ಶಾಲಾ ಶಿಕ್ಷಣ ಇಲಾಖೆಯಿಂದ ಬಡ್ತಿ ಹಿಂಪಡೆದು ಆದೇಶ ಮಾಡಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು,  ವೃಂದ ಮತ್ತು ನೇಮಕಾತಿ ನಿಯಮಗಳಂತೆ 2015ರ ಮಾರ್ಚ್.23ರಿಂದ ಅನ್ವಯವಾಗುವ ಹಿಂದಿ ತತ್ಸಮಾನ ಪದವಿ ಮತ್ತು ಬಿ.ಇಡಿ ತತ್ಸಮಾನ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರು, ಪ್ರೌಢಶಾಲಾ ಹಿಂದಿ ಸಹಶಿಕ್ಷಕರಾಗಿ ಪಡೆದಿದ್ದ ಬಡ್ತಿ ಹಿಂಪಡೆಯಲು ನಿರ್ಧರಿಸಿದೆ ಎಂದಿದೆ. ನ್ಯಾಯಾಲಯದ ಆದೇಶದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಬಡ್ತಿ ಹಿಂಪಡೆದ ಶಿಕ್ಷಕರಿಗೆ ಆಯಾ ಜಿಲ್ಲೆಗಳಲ್ಲಿ ಖಾಲಿ ಇರುವ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳಿಗೆ ಕೌನ್ಸೆಲಿಂಗ್ ಮೂಲಕ ನಿಯಮಾನುಸಾರ ಸ್ಥಳ ನಿಯುಕ್ತಿಗೊಳಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.

Read More

ನವದೆಹಲಿ: ನಾಳೆ ರಾಜ್ಯಸಭೆಗೆ ಚುನಾವಣೆ ನಡೆಯಲಿದೆ. ಆದ್ರೇ ರಾಜ್ಯಸಭಾ ಚುನಾವಣೆಗೆ ಸ್ಪರ್ಧೆ ಮಾಡಿರುವ ಅಭ್ಯರ್ಥಿಗಳ ಪೈಕಿ ಶೇ.36 ಮಂದಿ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮ್ಮೆ ಇದೆ ಎಂದು ಘೋಷಿಸಿಕೊಂಡಿದ್ದಾರೆ. ಅಭ್ಯರ್ಥಿಗಳ ಸರಾಸರಿ ಆಸ್ತಿ 127.81 ಕೋಟಿ ರೂ ಎಂದು ಚುನಾವಣಾ ಹಕ್ಕುಗಳ ಸಂಸ್ಥೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ (ADR) ವಿಶ್ಲೇಷಣೆ ಮಾಡಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಎಡಿಆರ್, 15 ರಾಜ್ಯಗಳಲ್ಲಿ 56 ಸ್ಥಾನಗಳಿಗೆ ಕಣದಲ್ಲಿರುವ 59 ಅಭ್ಯರ್ಥಿಗಳ ಅಫಿಡವಿಟ್ ಗಳನ್ನು ವಿಶ್ಲೇಷಣೆ ಮಾಡಲಾಗಿದೆ. ಕಳಪೆ ಸ್ಕ್ಯಾನ್ ಮಾಡಿದ ದಾಖಲೆಗಳ ಕಾರಣದಿಂದ ಕರ್ನಾಟಕ ಕಾಂಗ್ರೆಸ್ ಅಭ್ಯರ್ಥಿ ಜಿ.ಸಿ ಚಂದ್ರಶೇಖರ್ ಅವರನ್ನು ವಿಶ್ಲೇಷಣೆಯಿಂದ ಕೈಬಿಡಲಾಗಿದೆ. ಇನ್ನು ರಾಜ್ಯಸಭಾ ಚುನಾವಣೆಯ ಕಣದಲ್ಲಿರುವಂತ ಅಭ್ಯರ್ಥಿಗಳ ಪೈಕಿ ಶೇ.17 ವ್ಯಕ್ತಿಗಳು ಗಂಭೀರ ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ. ಒಬ್ಬ ಅಭ್ಯರ್ಥಿಯ ವಿರುದ್ಧ ಕೊಲೆ ಯತ್ನಕ್ಕೆ ಸಂಬಂಧಿಸಿದ ಪ್ರಕರಣ ದಾಖಲಾಗಿದೆ. 30 ಬಿಜೆಪಿ ಅಭ್ಯರ್ಥಿಗಳಲ್ಲಿ 8, ಒಂಭತ್ತು ಕಾಂಗ್ರೆಸ್ ಅಭ್ಯರ್ಥಿಗಳಲ್ಲಿ 6, ನಾಲ್ಕು ಟಿಎಂಸಿ ಅಭ್ಯರ್ಥಿಗಳಲ್ಲಿ ಒಬ್ಬರು,…

Read More

ಬೆಂಗಳೂರು: ಯಾವುದೇ ಕಾರಣಕ್ಕೂ ಲೋಕಸಭಾ ಕ್ಷೇತ್ರ ವ್ಯಾಪ್ತಿ, ನೆರೆಹೊರೆ ಜಿಲ್ಲೆಗೆ ಅಧಿಕಾರಿಗಳನ್ನು ನಿಯೋಜಿಸುವಂತಿಲ್ಲ ಎಂಬುದಾಗಿ ರಾಜ್ಯಗಳಿಗೆ ಕೇಂದ್ರ ಚುನಾವಣಾ ಆಯೋಗವು ಖಡಕ್ ಆದೇಶದಲ್ಲಿ ಸೂಚಿಸಿದೆ. ಈ ಕುರಿತಂತೆ ಕೇಂದ್ರ ಚುನಾವಣಾ ಆಯೋಗವು ರಾಜ್ಯಗಳಿಗೆ ಆದೇಶ ಹೊರಡಿಸಿದ್ದು, ಮೂರು ವರ್ಷ ಪೂರೈಸಿದ ನಂತ್ರ ಜಿಲ್ಲೆಯಿಂದ ಹೊರಗೆ ವರ್ಗಾವಣೆಗೊಂಡ ಅಧಿಕಾರಿಗಳನ್ನು ಅದೇ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೇರೆ ಜಿಲ್ಲೆಗೆ ನಿಯೋಜಿಸದಂತೆ ಸೂಚಿಸಿದೆ. ಸಂಸದೀಯ ಕ್ಷೇತ್ರದ ವ್ಯಾಪ್ತಿಯ ಅಕ್ಕಪಕ್ಕದ ಜಿಲ್ಲೆಗಳಿಗೆ ಅಧಿಕಾರಿಗಳನ್ನು ವರ್ಗಾವಣೆ ಹಾಗೂ ಪೋಸ್ಟಿಂಗ್ ನೀಡುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಈ ಸೂಚನೆ ನೀಡಿದೆ. ಎರಡು ಸಂಸದೀಯ ಕ್ಷೇತ್ರಗಳನ್ನು ಒಳಗೊಂಡಿರುವ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳನ್ನು ಹೊರತುಪಡಿಸಿ, ಎಲ್ಲಾ ರಾಜ್ಯಗಳು ಜಿಲ್ಲೆಯಿಂದ ಹೊರಗೆ ವರ್ಗಾವಣೆಗೊಂಡ ಅಧಿಕಾರಿಗಳನ್ನು ಅದೇ ಸಂಸದೀಯ ಕ್ಷೇತ್ರದೊಳಗೆ ನಿಯುಕ್ತಿ ಮಾಡದಂತೆ ನೋಡಿಕೊಳ್ಳಬೇಕು ಎಂದು ಆಯೋಗವು ಆದೇಶದಲ್ಲಿ ತಿಳಿಸಿದೆ. ಕೇಂದ್ರ ಚುನಾವಣಾ ಆಯೋಗದ ವರ್ಗಾವಣೆ ನೀತಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆಯೋಗದ ಹಿಂದಿನ ಸೂಚನೆಗಳಿಗೆ ಅನುಸಾರವಾಗಿ ಈಗಾಗಲೇ ಜಾರಿಗೊಳಿಸಲಾದ ವರ್ಗಾವಣೆಗಳು ಮತ್ತು ಪೋಸ್ಟಿಂಗ್ ಗಳಿಗೆ ಈ…

Read More

ಜಕಾರ್ತಾ : ಇಂಡೋನೇಷ್ಯಾದ ಪ್ರಮುಖ ದ್ವೀಪವಾದ ಜಾವಾ ಮತ್ತು ದೇಶದ ರಾಜಧಾನಿಯ ಕೆಲವು ಭಾಗಗಳಲ್ಲಿ ಭಾನುವಾರ ತಡರಾತ್ರಿ ಲಘು ಭೂಕಂಪ ಸಂಭವಿಸಿದೆ. ಯಾವುದೇ ಹಾನಿ ಅಥವಾ ಗಾಯಗಳ ಬಗ್ಗೆ ತಕ್ಷಣದ ವರದಿಗಳಿಲ್ಲ. ಭೂಕಂಪದ ತೀವ್ರತೆ 5.6ರಷ್ಟಿದ್ದು, ಮೇಲ್ಮೈಯಿಂದ 37.2 ಕಿಲೋಮೀಟರ್ (23.11 ಮೈಲಿ) ಆಳದಲ್ಲಿ ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಭೂಕಂಪದ ಕೇಂದ್ರಬಿಂದುವು ಪಶ್ಚಿಮ ಜಾವಾ ಪ್ರಾಂತ್ಯದ ಕರಾವಳಿ ಪಟ್ಟಣವಾದ ಪೆಲಬುಹನ್ರಾಟುವಿನ ಪಶ್ಚಿಮ-ನೈಋತ್ಯಕ್ಕೆ 80 ಕಿಲೋಮೀಟರ್ (29 ಮೈಲಿ) ದೂರದಲ್ಲಿತ್ತು. ಇಂಡೋನೇಷ್ಯಾದ ಪವನಶಾಸ್ತ್ರ, ಹವಾಮಾನಶಾಸ್ತ್ರ ಮತ್ತು ಭೂಭೌತಿಕ ಸಂಸ್ಥೆ ಅದರ ಪ್ರಾಥಮಿಕ ಪರಿಮಾಣವನ್ನು 5.7 ಮತ್ತು 10 ಕಿಲೋಮೀಟರ್ (6.2 ಮೈಲಿ) ಆಳದಲ್ಲಿ ಅಳೆಯಿತು. ಭೂಕಂಪಗಳ ಆರಂಭಿಕ ಅಳತೆಗಳಲ್ಲಿ ವ್ಯತ್ಯಾಸಗಳು ಸಾಮಾನ್ಯವಾಗಿದೆ. ಹಲವಾರು ನಗರಗಳು ಮತ್ತು ಹಳ್ಳಿಗಳಲ್ಲಿ ಭೂಕಂಪನದ ಅನುಭವವಾಗಿದ್ದು, ಕೆಲವರು ಭಯಭೀತರಾಗಿದ್ದಾರೆ ಎಂದು ಏಜೆನ್ಸಿಯ ಭೂಕಂಪ ಮತ್ತು ಸುನಾಮಿ ಕೇಂದ್ರದ ಮುಖ್ಯಸ್ಥ ಡಾರಿಯೋನೊ ಹೇಳಿದ್ದಾರೆ.

Read More

ಬೆಂಗಳೂರು: ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಇಂದು ಹೃದಯಾಘಾತದಿಂದ ನಿಧನರಾಗಿದ್ದರು. ಈ ಹಿನ್ನಲೆಯಲ್ಲಿ ನಾಳೆಯ ವಿಧಾನಮಂಡಲದ ಕಲಾಪವನ್ನು ಬುಧವಾರಕ್ಕೆ ಮುಂದೂಡುವುದಾಗಿ ಸಿಎಂ ಸಿದ್ಧರಾಮಯ್ಯ ಹೇಳಿದ್ದರು. ಆದರೇ ಇದೀಗ ಸ್ಪೀಕರ್ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ನಾಳೆ ನಿಗದಿಯಂತೆ ವಿಧಾನಮಂಡಲದ ಅಧಿವೇಶನ ನಡೆಯಲಿದೆ ಎಂಬುದಾಗಿ ಮಾಹಿತಿ ನೀಡಿದೆ. ಇಂದು ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನರಾದ ಕಾರಣ, ನಾಳೆಯ ವಿಧಾನಮಂಡಲದ ಕಲಾಪ ಮುಂದೂಡುವ ನಿರ್ಧಾರವನ್ನು ಸಿಎಂ ಸಿದ್ಧರಾಮಯ್ಯ ಪ್ರಕಟಿಸಿದ್ದರು. ಮಂಗಳವಾರದಂದು ರಾಜ್ಯಸಭಾ ಚುನಾವಣೆಯ ಕಾರಣ ಬುಧವಾರಕ್ಕೆ ವಿಧಾನಮಂಡಲದ ಕಲಾಪ ಮುಂದೂಡಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದರು. ಆದರೇ ಈಗ ಸ್ಪೀಕರ್ ಕಚೇರಿಯಿಂದ ಶಾಸಕರಿಗೆ ಮೆಸೇಜ್ ರವಾನೆ ಮಾಡಲಾಗಿದ್ದು, ನಾಳೆ ನಿಗದಿಯಂತೆ ವಿಧಾನಮಂಡಲದ ಅಧಿವೇಶನ ನಡೆಯಲಿದೆ ಎಂಬುದಾಗಿ ಕಳುಹಿಸಲಾಗಿರೋದಾಗಿ ತಿಳಿದು ಬಂದಿದೆ. ಹೀಗಾಗಿ ನಾಳೆ ನಿಗದಿಯಂತೆ ವಿಧಾನಮಂಡಲದ ಕಲಾಪ ನಡೆಯೋದಾಗಿ ಸ್ಪೀಕರ್ ಕಚೇರಿಯಿಂದ ಮಾಹಿತಿ ನೀಡಲಾಗಿದೆ. ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಕಾರ್ಯಕಲಾಪಗಳ ಪಟ್ಟಿಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಾಳೆ ಬೆಳಿಗ್ಗೆ 9.30ಕ್ಕೆ…

Read More

ನವದೆಹಲಿ: ಭಾರತೀಯ ರಾಷ್ಟ್ರೀಯ ಲೋಕದಳದ ಹರಿಯಾಣ ರಾಜ್ಯ ಘಟಕದ ಮುಖ್ಯಸ್ಥ ನಫೆ ಸಿಂಗ್ ರಾಠಿ ಮತ್ತು ಪಕ್ಷದ ಕಾರ್ಯಕರ್ತನನ್ನು ರಾಜ್ಯದ ಝಜ್ಜರ್ ಜಿಲ್ಲೆಯಲ್ಲಿ ಕೆಲವು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ಭಾನುವಾರ ತಿಳಿಸಿದ್ದಾರೆ. ಮಾಜಿ ಶಾಸಕ ರಾಠಿ ಪ್ರಯಾಣಿಸುತ್ತಿದ್ದಾಗ ಝಜ್ಜರ್ನ ಬಹದ್ದೂರ್ಗಢ ಪಟ್ಟಣದಲ್ಲಿ ದಾಳಿಕೋರರು ಅವರ ಎಸ್ಯುವಿ ಮೇಲೆ ಗುಂಡುಗಳನ್ನು ಹಾರಿಸಿದರು. ಭದ್ರತೆಗಾಗಿ ರಾಠಿ ನೇಮಿಸಿಕೊಂಡ ಮೂವರು ಖಾಸಗಿ ಬಂದೂಕುಧಾರಿಗಳು ಸಹ ದಾಳಿಯಲ್ಲಿ ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ರಾಠಿ ಅವರ ಜೀವಕ್ಕೆ ಬೆದರಿಕೆ ಇದ್ದರೂ ಅವರಿಗೆ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಐಎನ್ಎಲ್ಡಿ ನಾಯಕ ಅಭಯ್ ಚೌಟಾಲಾ ಆರೋಪಿಸಿದ್ದಾರೆ. ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮತ್ತು ರಾಜ್ಯ ಗೃಹ ಸಚಿವ ಅನಿಲ್ ವಿಜ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ನಮ್ಮ ರಾಜ್ಯ ಘಟಕದ ಮುಖ್ಯಸ್ಥರಾಗಿರುವ ಎರಡು ಬಾರಿ ಶಾಸಕರಾಗಿರುವ ಅವರಿಗೆ ಭದ್ರತೆ ಒದಗಿಸಲಾಗಿಲ್ಲ. ಅವರು ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ.…

Read More

ಬೆಂಗಳೂರು: ಇಂದು ಚನ್ನಪಟ್ಟಣದ ಬಿಜೆಪಿ ಮುಖಂಡರಾದ ಮಲವೇಗೌಡ ಅವರು ಕಮಲ ತೊರೆದು, ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಮಾತನಾಡಿದಂತ ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ಚನ್ನಪಟ್ಟಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕಾಂಗ್ರೆಸ್ ಸೇರಿ ಪಕ್ಷದ ಶಾಲು ಹಾಕಿಸಿಕೊಳ್ಳಲು ಎಷ್ಟು ಉತ್ಸಾಹ, ಪ್ರೀತಿ, ಅಭಿಮಾನ ತೋರುತ್ತಿದ್ದಾರೆ ಎಂಬುದಕ್ಕೆ ಈ ವೇದಿಕೆ ಸಾಕ್ಷಿ ಎಂದರು. ಎರಡೂ ಪಕ್ಷದ ಕಾರ್ಯಕರ್ತರ ಜತೆ ಚರ್ಚೆ ಮಾಡದೆ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಯೋಗೇಶ್ವರ್ ಹಾಗೂ ಕುಮಾರಸ್ವಾಮಿ ಅವರು ನೆಂಟಸ್ಥನ ಬೆಳೆಸಿದ್ದಾರೆ. ಇದರಿಂದ ಉಭಯ ಪಕ್ಷಗಳ ಕಾರ್ಯಕರ್ತರು ವಿರೋಧ ವ್ಯಕ್ತ ಪಡಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆ ಮಾತ್ರವಲ್ಲದೆ ಇಡೀ ರಾಜ್ಯಾದ್ಯಂತ ಈ ಮೈತ್ರಿಯಿಂದ ಬೇಸತ್ತಿರುವ ಎಲ್ಲಾ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಬರಲು ನಾನು ಮುಕ್ತ ಆಹ್ವಾನ ನೀಡುತ್ತಿದ್ದೇನೆ ಎಂದರು. ಈ ಕಾರ್ಯಕ್ರಮ ಕೇವಲ ಆರಂಭ. ನೀವೆಲ್ಲರೂ ಸ್ಥಳೀಯ ಮಟ್ಟದಲ್ಲಿ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೇರೆ ಪಕ್ಷದವರನ್ನು ಸೇರಿಸಿಕೊಳ್ಳಬೇಕು. ಚನ್ನಪಟ್ಟಣದ…

Read More