Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿರುವುದಾಗಿ ತಿಳಿದು ಬಂದಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತೀವ್ರ ತರದ ವೈರಲ್ ಫೀವರ್ ನಿಂದ ಬಳಲುತ್ತಿರುವುದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲೇ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಥಾವರ್ ಚಂದ್ ಗೆಹ್ಲೋಟ್ ಅವರನ್ನು ಪರೀಕ್ಷೆಗೆ ಒಳಪಡಿಸಿದಂತ ವೈದ್ಯರು, ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/veerashaiva-lingayat-mahasabha-decides-not-to-accept-caste-census-report-rajkumar-patil-telkur/ https://kannadanewsnow.com/kannada/good-news-for-police-aspirants-state-govt-gives-green-signal-for-4115-recruitment/
ಕಲಬುರಗಿ :ಕಾಂತರಾಜು ಅವರ ನೇತೃತ್ವದ ಸಮಿತಿ ನಡೆಸಿರುವ ಜಾತಿ ಜನಗಣತಿಯನ್ನು ರಾಜ್ಯಕಾಂಗ್ರೆಸ್ ಸರ್ಕಾರ ಜಾರಿಗೆ ತರಲು ಮುಂದಾಗಿದ್ದು, ಈ ಬಗ್ಗೆ ವೀರಶೈವ-ಲಿಂಗಾಯತ ಮಹಾಸಭಾ ಆಕ್ಷೇಪ ವ್ಯಕ್ತಪಡಿಸಿದೆ. ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ, ಶಾಸಕ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜಾತಿ ಗಣತಿ ಕುರಿತಾಗಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು, ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಲಾಗಿದೆ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಬೆಂಗಳೂರಿನಲ್ಲಿ ನಡೆದ ಸಭೆಯ ಪ್ರಮುಖ ನಿರ್ಣಯಗಳಾದ ಅಖಿಲ ಭಾರತ ವೀರಶೈವ/ಲಿಂಗಾಯತ ಯ/ಲಿಂಗಾಯತ ಮಹಾಸಭೆಯು ಬಸವಾದಿ ತತ್ವಗಳನ್ನು ಪ್ರತಿಪಾದಿಸುತ್ತಿದ್ದು, ಸರ್ವರಿಗೂ ಲೇಸನ್ನೆ ಬಯಸುವ ಸಮಸಮಾಜವನ್ನು ನಿರ್ಮಾಣ ಮಾಡಬೇಕೆಂಬ ಶರಣರ ತತ್ವದ ಆಧಾರದ ಮೇಲೆ ನಡೆಯುತ್ತಿರುವ ಸಂಸ್ಥೆಯಾಗಿದೆ. ನಾವು ಜಾತಿಗಣತಿಯ ವಿರೋಧಿಗಳಲ್ಲ ಎಂಬುದನ್ನು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಲು ಇಚ್ಛಿಸುತ್ತೇವೆ. ಕಳೆದ 10 ವರ್ಷಗಳ ಹಿಂದೆ ನಡೆಸಲಾದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯು ಹಲವು ವೈರುದ್ಧ ಮತ್ತು ಲೋಪಗಳಿಂದ ಕೂಡಿದ್ದು,…
ಬೆಂಗಳೂರು : ಎಚ್ಎಂಟಿ ವಶದಲ್ಲಿರುವ ಪೀಣ್ಯ ಪ್ಲಾಂಟೇಷನ್ ನ 599 ಎಕರೆ ಅರಣ್ಯದ ಪೈಕಿ ಅರಣ್ಯ ಸ್ವರೂಪದ ಮತ್ತು 5 ಎಕರೆ ಖಾಲಿ ಜಮೀನು ವಶಕ್ಕೆ ಪಡೆದು ಬೃಹತ್ ಉದ್ಯಾನ ನಿರ್ಮಿಸುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರ ಆಶಯಕ್ಕೆ ಅಧಿಕಾರಿಗಳು ಇಂದು ಬಲ ನೀಡಿದ್ದಾರೆ. ಎಚ್ಎಂಟಿ ವಶದಲ್ಲಿದ್ದ ಪೀಣ್ಯ- ಜಾಲಹಳ್ಳಿ ಸರ್ವೆ ನಂ. 1ರಲ್ಲಿ ಇಂದು ಜೆಸಿಬಿಯೊಂದಿಗೆ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ ಬೆಂಗಳೂರು ನಗರ ವಲಯದ ಅಧಿಕಾರಿಗಳು 5 ಎಕರೆ ಖಾಲಿ ಜಮೀನನ್ನು ಮರುವಶಕ್ಕೆ ಪಡೆದಿದ್ದು ಅಲ್ಲಿ ಕರ್ನಾಟಕ ಅರಣ್ಯ ಇಲಾಖೆ ಫಲಕವನ್ನು ನೆಟ್ಟು ತಮ್ಮ ಹಕ್ಕು ಪ್ರತಿಪಾದಿಸಿದ್ದಾರೆ. 1896 ಮೇ 29ರ ಸರ್ಕಾರದ ಅಧಿಸೂಚನೆ ಸಂಖ್ಯೆ 10407, ಎಫ್.ಟಿ.ಎಫ್. 153-95 ಮತ್ತು 1901ರ ಜನವರಿ 7ರ ಅಧಿಸೂಚನೆ ಸಂಖ್ಯೆ 422-ಎಫ್.ಟಿ.ಎಫ್.-15-1900ರ ರೀತ್ಯ ಪೀಣ್ಯ, ಜಾಲಹಳ್ಳಿ ಪ್ಲಾಂಟೇಷನ್ ನಲ್ಲಿರುವ 599 ಎಕರೆ ಜಮೀನು ಅರಣ್ಯವಾಗಿರುತ್ತದೆ. ಅರಣ್ಯೇತರ ಉದ್ದೇಶಕ್ಕೆ ಭೂಪರಿವರ್ತನೆ ಆಗದ ಈ ಜಮೀನು once…
ಬೆಂಗಳೂರು: ನಗರದಲ್ಲಿ ಡ್ರೋನ್ ಮೂಲಕ ನಿರ್ಮಾಣ ಹಂತದ ಕಟ್ಟಡಗಳನ್ನು ಸಮೀಕ್ಷೆ ಮಾಡಲಾಗುತ್ತದೆ. ಒಂದು ವೇಳೆ ನಿಯಮ ಮೀರಿ ಕಟ್ಟಡ ಕಟ್ಟುತ್ತಿರುವುದು ಗಮನಕ್ಕೆ ಬಂದ್ರೇ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಸಿದ್ದಾರೆ. ಬೆಂಗಳೂರು ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಬಗ್ಗೆ ಖಾಸಗಿ ಹಾಗೂ ಬಿಬಿಎಂಪಿಯಿಂದ ಸಮೀಕ್ಷೆ ನಡೆಸಲಾಗುವುದು. ಕಾನೂನುಬಾಹಿರ ನಿರ್ಮಾಣಗಳನ್ನು ಪತ್ತೆ ಹಚ್ಚಿ, ಪ್ರತಿ ಕಟ್ಟಡದ ಚಿತ್ರ ಹಾಗೂ ವಿಡಿಯೋಗಳನ್ನು ಸಂಗ್ರಹಿಸಲಾಗುವುದು. ಜಂಟಿ ಆಯುಕ್ತರ ನೇತೃತ್ವದಲ್ಲಿ ಡ್ರೋನ್ ಕ್ಯಾಮೆರಾಗಳಿಂದ ಮೇಲ್ವಿಚಾರಣೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. https://twitter.com/KarnatakaVarthe/status/1849787874587312278 ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಬಗ್ಗೆ ಸೋಮವಾರದಿಂದ ಸಮೀಕ್ಷೆ ನಡೆಸಲಾಗುವುದು. ಖಾಸಗಿ ಹಾಗೂ ಪಾಲಿಕೆಯಿಂದ ಈ ಸಮೀಕ್ಷೆ ನಡೆಸಲಾಗುವುದು. ಯಾವುದಾದರೂ ಕಟ್ಟಡ ಕಾನೂನುಬಾಹಿರವಾಗಿ ನಿರ್ಮಾಣವಾಗುತ್ತಿದೆಯೇ ಎಂದು ಪತ್ತೆಹಚ್ಚಲಾಗುವುದು. ಅಕ್ರಮ ಕಟ್ಟಡ ನಿರ್ಮಾಣ ತಡೆಯಲಾಗುವುದು. ಪ್ರತಿ ಕಟ್ಟಡದ ಫೋಟೋ ಹಾಗೂ ವಿಡಿಯೋಗಳನ್ನು ಸಂಗ್ರಹಿಸಲಾಗುವುದು. ಜಂಟಿ ಆಯುಕ್ತರ ನೇತೃತ್ವದಲ್ಲಿ ಡ್ರೋನ್ ಮೂಲಕ ಇದರ ಮೇಲ್ವಿಚಾರಣೆ ಮಾಡಲಾಗುವುದು. ಬಿಎಂಆರ್ ಡಿಎ ಹಾಗೂ…
108 ಗೃಹೋಪಯೋಗಿ ವಸ್ತುಗಳಲ್ಲಿ ಮಹಾಲಕ್ಷ್ಮಿ ನೆಲೆಸಿದ್ದಾಳೆ ಎಂಬ ಐತಿಹ್ಯವಿದೆ. ಹೀಗಾಗಿ ಸ್ವಚ್ಛತಾ ಪೊರಕೆಯಲ್ಲಿ ಮಹಾಲಕ್ಷ್ಮಿ ನೆಲೆಸಿದ್ದಾಳೆ. ಆದ್ದರಿಂದಲೇ ನಮ್ಮ ಪೂರ್ವಜರು ಯಾರ ಕಾಲಿಗೂ ಬೀಳದಂತೆ ಪೊರಕೆಗಳ ಸಂಖ್ಯೆಯನ್ನು ಹೆಚ್ಚಿಸಬೇಕೆಂದು ಒತ್ತಾಯಿಸುತ್ತಿದ್ದರು. ಈ ಪೊರಕೆಯನ್ನು ಯಾವ ದಿನ ಖರೀದಿಸಿದರೆ ದುರಾದೃಷ್ಟ ದೂರವಾಗುತ್ತದೆ ಮತ್ತು ಅದೃಷ್ಟ ಬರುತ್ತದೆ? ಅದನ್ನೇ ನಾವು ಈ ಆಧ್ಯಾತ್ಮಿಕ ದಾಖಲೆಯ ಮೂಲಕ ತಿಳಿದುಕೊಳ್ಳಲು ಹೊರಟಿದ್ದೇವೆ . ನಾವು ಅದೃಷ್ಟವಂತರೇ? ಅಲ್ಲವೇ? ನಾವು ಕೆಲವು ವಿಷಯಗಳನ್ನು ಕಂಡುಹಿಡಿಯಬಹುದು. ಉದಾಹರಣೆಗೆ ನಾವು ಲಕ್ಕಿ ಡ್ರಾ ಆಡುತ್ತಿದ್ದೇವೆ ಎಂದಿಟ್ಟುಕೊಳ್ಳೋಣ. ಮನೆಯಲ್ಲಿರುವ ಮೂರ್ನಾಲ್ಕು ಜನರಲ್ಲಿ ಒಬ್ಬರಿಗೆ ಮಾತ್ರ ಅದೃಷ್ಟ ಬರುತ್ತದೆ. ಇತರರು ಅವರು ನಿರೀಕ್ಷಿಸಿದ್ದನ್ನು ಎಂದಿಗೂ ಪಡೆಯುವುದಿಲ್ಲ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು…
ಕಲಬುರ್ಗಿ: ಜಿಲ್ಲೆಯಲ್ಲಿ ಶಾಕಿಂಗ್ ಘಟನೆ ಎನ್ನುವಂತೆ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಲಬುರ್ಗಿ ನಗರದ ಬಿದ್ದಾಪುರ್ ಕಾಲೋನಿ ರೈಲ್ವೆ ಗೇಟ್ ಬಳಿ ಈ ದುರ್ಘಟನೆ ನಡೆದಿದೆ. ರೈಲಿಗೆ ತಲೆ ಕೊಟ್ಟು SSLC ವಿದ್ಯಾರ್ಥಿ ವೀರೇಶ ಸ್ವಾಮಿ (16) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಂದು ಬೆಳಿಗ್ಗೆ ಮನೆಯಿಂದ ಟ್ಯೂಷನ್ ಗೆ ಹೋಗಿ ಬರುತ್ತೇನೆ ಎಂದು ಹೇಳಿ ವೀರೇಶ್ ಸ್ವಾಮಿ ಮನೆ ಬಿಟ್ಟಿದ್ದ. ಬಳಿಕ ವಾಂತಿ ಬರುತ್ತಿದೆ ಎಂದು ಹೇಳಿ ಟ್ಯೂಷನ್ ಕ್ಲಾಸ್ನಿಂದ ವೀರೇಶ್ ಸ್ವಾಮಿ ಹೊರಗಡೆ ಬಂದಿದ್ದಾನೆ. ಆದರೆ ಟ್ಯೂಷನ್ ನಿಂದ ಹೊರಬಂದವನು ರೈಲ್ವೆ ಹಳಿಯ ಮೇಲೆ ಶವವಾಗಿ ಪತ್ತೆಯಾಗಿದ್ದಾನೆ. ವಿದ್ಯಾರ್ಥಿ ವೀರೇಶ್ ಸ್ವಾಮಿ ಆತ್ಮಹತ್ಯೆಗೆ ನಿಖರವಾದಂತಹ ಕಾರಣ ತಿಳಿದು ಬಂದಿಲ್ಲ. ಈ ಕುರಿತಂತೆ ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/bjp-releases-first-list-of-campaigners-for-jharkhand-assembly-elections/ https://kannadanewsnow.com/kannada/chennai-three-students-hospitalised-after-gas-leak-at-school/
ನವದೆಹಲಿ: ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮೊದಲ ಹಂತದ ಪ್ರಚಾರಕರ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. 40 ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಮೋದಿ ಮೊದಲ ಸ್ಥಾನ ಪಡೆದಿದ್ದಾರೆ. ಇಂದು ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯಿಂದ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಜೆ.ಪಿ.ನಡ್ಡಾ, ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಶಿವರಾಜ್ ಸಿಂಗ್ ಚೌಹಾಣ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಇತರ ನಾಯಕರ ಹೆಸರುಗಳಿವೆ. https://twitter.com/ANI/status/1849775434029990198 https://kannadanewsnow.com/kannada/chennai-three-students-hospitalised-after-gas-leak-at-school/ https://kannadanewsnow.com/kannada/bbmp-chief-commissioner-instructs-officials-to-remove-encroached-building/
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಮಳೆ ನೀರುಗಾಲುವೆಗಳ ಹಾಗೂ ಕೆರೆಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಎಲ್ಲಾ ವಲಯದ ತಹಶಿಲ್ದಾರ್ ಹಾಗೂ ಪಾಲಿಕೆಯ ಹಿರಿಯ ಅಧಿಕಾರಿಗಳ ಜೊತೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು ಮೊದಲಿಗೆ ಇಂದಿನಿಂದ ವಲಯವಾರು ಬೃಹತ್ ನೀರು ಗಾಲುವೆ ಹಾಗೂ ರಸ್ತೆಗಳ ನಿರ್ವಹಣೆಯ ಎಲ್ಲಾ ಜವಾಬ್ದಾರಿಯನ್ನು ಆಯಾ ವಲಯ ಆಯುಕ್ತರಿಗೆ ನೀಡಲು ಆದೇಶಿಸಿದರು. ಬೃಹತ್ ನೀರುಗಾಲುವೆಗಳ ಒತ್ತುವರಿ ಸಂಬಂಧಿಸಿದಂತೆ ಮಾತನಾಡಿ. ಮೊದಲಿಗೆ ವಲಯವಾರು ಸಂಬಂಧಪಟ್ಟ ತಹಶಿಲ್ದಾರ್ ರವರು ಬಂದಿರುವ ಎಲ್ಲಾ ಪ್ರಸ್ತಾವನೆಯನ್ನು ಪರಿಮರ್ಶಿಸಿ ಒತ್ತುವರಿಯಾಗಿರುವ ಬಗ್ಗೆ ಆದೇಶಿಸಲಾದ ಸ್ಥಳವನ್ನು ನವೆಂಬರ್ 15ರೊಳಗೆ ತೆರವುಗೊಳಿಸಲು ಎಲ್ಲಾ ವಲಯ ಆಯುಕ್ತರಿಗೆ ನಿರ್ದೇಶಿಸಿದರು. ಬೃಹತ್ ನೀರುಗಾಲುವೆ ಒತ್ತುವರಿ ತೆರವು ಮಾಡದಿದ್ದರೆ ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರು. ಮುಂದುವರೆದು ಕೆರೆ ಒತ್ತುವರಿ ಸಂಬಂಧಿಸಿದಂತೆ ಮಾತನಾಡಿ ತಕ್ಷಣವೇ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೆರೆಗಳ ಸರ್ವೆ ನಡೆಸಬೇಕು. ಸರ್ವೆ…
ಚೆನ್ನೈ: ನಗರದ ಶಾಲೆಯೊಂದರಲ್ಲಿ ಅನಿಲ ಸೋರಿಕೆಯಾದ ಪರಿಣಾಮ, ಶಾಲೆಯಲ್ಲಿನ ಮೂವರು ವಿದ್ಯಾರ್ಥಿಗಳು ದಿಢೀರ್ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಶಂಕಿತ ಅನಿಲ ಸೋರಿಕೆಯಿಂದಾಗಿ ಚೆನ್ನೈ ಶಾಲೆಯಲ್ಲಿ ಹಠಾತ್ ಭೀತಿಯ ಪರಿಸ್ಥಿತಿ ಭುಗಿಲೆದ್ದಿದೆ. ಮೂಲಗಳ ಪ್ರಕಾರ, ವಿದ್ಯಾರ್ಥಿಗಳನ್ನು ಆವರಣದಿಂದ ಸ್ಥಳಾಂತರಿಸಲಾಗಿದೆ. ಚೆನ್ನೈನ ತಿರುವೊಟ್ಟಿಯೂರ್ ಪ್ರದೇಶದ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಗಳನ್ನು ತುರ್ತಾಗಿ ಸ್ಥಳಾಂತರಿಸಬೇಕಾಯಿತು ಮತ್ತು ಮೂವರು ಬಾಲಕಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. https://kannadanewsnow.com/kannada/first-look-of-vande-bharat-sleeper-trains-interiors-luxury-design-released/ https://kannadanewsnow.com/kannada/will-fulfill-my-fathers-dream-of-development-bharat-bommai/
ಹಾವೇರಿ: ನಮ್ಮ ಪಕ್ಷದ ನಾಯಕರ ಆಸೆಯಂತೆ ತಂದೆಯ ಅಭಿವೃದ್ಧಿ ಕನಸು ನನಸು ಮಾಡುತ್ತೇನೆ ಎಂದು ಶಿಗ್ಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹೇಳಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮೊದಲು ಶಿಗ್ಗಾವಿಯಲ್ಲಿ ಪಟ್ಟಣದಲ್ಲಿ ನಡೆದ ಬೃಹತ್ ರೋಡ್ ಶೋ ನಲ್ಲಿ ಪಾಲ್ಗೊಂಡು ಜನರನ್ನು ಉದ್ದೇಶಿಸಿ ಮಾತನಾಡಿದರು. ಇಷ್ಟು ದೊಡ್ಡ ಸಂಖ್ಯೆಯಲ್ಕಿ ಬಂದಿದ್ದೀರಿ ನಿಮ್ಮ ಪ್ರೀತಿ ವಿಶ್ವಾಸ ಎಂದಿಗೂ ಮರೆಯಲ್ಲ. ಶಿಗ್ಗಾವಿ ಕ್ಷೇತ್ರದಲ್ಲಿ ನಮ್ಮ ತಂದೆಯವರು ಬಹಳಷ್ಟು ಅಭಿವೃದ್ಧಿ ಮಾಡಿದ್ದಾರೆ. ಕೆರೆ ತುಂಬಿಸಿದ್ದಾರೆ, ಆಸ್ಪತ್ರೆ ತಂದಿದ್ದಾರೆ. ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ನಮ್ಮ ನಾಯಕರ ಮಾರ್ಗದರ್ಶನದಲ್ಲಿ ದೀನ ದಲಿತರು, ಎಸ್ಸಿ ಎಸ್ಟಿ, ರೈತರು, ಮಹಿಳೆಯರು, ಯುವಕರ ಪರವಾಗಿ ಕೆಲಸ ಮಾಡುತ್ತೇನೆ. ನಿಮ್ಮ ತಮ್ಮನಾಗಿ ನಿಮ್ಮೆಲ್ಲರ ರಕ್ಷಣೆ ಮಾಡುತ್ತೇನೆ. ಇಷ್ಟೆಲ್ಲ ದೊಡ್ಡ ಸಂಖ್ಯೆಯಲ್ಲಿ ಆಗಮಿರುವುದಕ್ಕೆ ನಿಮಗೆ ಕೋಟಿ ಕೋಟಿ ನಮನ ಸಲ್ಲಿಸುತ್ತೇನೆ ಎಂದು ಹೇಳಿದರು. https://kannadanewsnow.com/kannada/first-look-of-vande-bharat-sleeper-trains-interiors-luxury-design-released/ https://kannadanewsnow.com/kannada/good-news-for-small-entrepreneurs-in-the-country-pm-mudra-yojana-loan-limit-raised-to-rs-20-lakh/














