Author: kannadanewsnow09

ಬೆಂಗಳೂರು: ಇಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆಗೆ ಹಾಜರಾಗಿದ್ದಂತವರಲ್ಲಿ 52,505 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬೆನ್ನಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಜೊತೆಗೆ ಪರೀಕ್ಷೆಗೆ ನೋಂದಾಯಿಸಿಕೊಳ್ಳೋದಕ್ಕೂ ಮಾಹಿತಿ ಬಿಡುಗಡೆ ಮಾಡಲಾಗಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಪರೀಕ್ಷಾ ಶುಲ್ಕ ಪಾವತಿಸಲು ಪುನರಾವರ್ತಿತ ವಿದ್ಯಾರ್ಥಿಗಳು ಮತ್ತು ಫಲಿತಾಂಶ ಉತ್ತಮ ಪಡಿಸಿಕೊಳ್ಳುವ ವಿದ್ಯಾರ್ಥಿಗಳ ಮಾಹಿತಿಯನ್ನು ಪ್ರಾಂಶುಪಾಲರು ಕೆ ಎಸ್ ಇ ಎ ಬಿ ತಂತ್ರಾಂಶದಲ್ಲಿ ಇಂದೀಕರಿಸಲು ದಂಡ ರಹಿತ ಕೊನೆಯ ದಿನಾಂಕ 23-05-2024ರಿಂದ 28-05-2024 ಆಗಿದೆ. ದಂಡ ಸಹಿತವಾಗಿ ದಿನಾಂಕ 29-05-2024ರಿಂದ 30-05-2024 ಕೊನೆಯ ದಿನವಾಗಿದೆ ಎಂದು ತಿಳಿಸಿದೆ. ಪ್ರಾಂಶುಪಾಲರು ಪರೀಕ್ಷಾ ಶುಲ್ಕವನ್ನು ಒಂದೇ ಕಂತಿನಲ್ಲಿ ಖಜಾನೆಗೆ ಸಂದಾಯ ಮಾಡಬೇಕಾದ ಕೊನೆಯ ದಿನಾಂಕ 29-05-2024 ಆಗಿದೆ. ದಂಡ ಸಹಿತ ಶುಲ್ಕ ಪಾವತಿಗೆ ದಿನಾಂಕ 31-05-2024 ಕೊನೆ ದಿನವಾಗಿದ. ಪ್ರಾಂಶುಪಾಲರು ಪರೀಕ್ಷಾ…

Read More

ಬೆಂಗಳೂರು: ಕರ್ನಾಟಕ ದ್ವಿತಿಯ ಪಿಯುಸಿ ಪರೀಕ್ಷೆ-2ರ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ. ಈ ಬೆನ್ನಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ-3ರ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಜೂನ್, ಜುಲೈ 2024ರ ದ್ವಿತೀಯ ಪಿಯುಸಿ ಪರೀಕ್ಷೆ-3ರ ಅಂತಿಮ ವೇಳಾಪಟ್ಟಿ ಈ ಕೆಳಕಂಡಂತೆ ಇದೆ ಅಂತ ಹೇಳಿದೆ. ಹೀಗಿದೆ ದ್ವಿತೀಯ ಪಿಯುಸಿ ಪರೀಕ್ಷೆ-3ರ ಅಂತಿಮ ವೇಳಾಪಟ್ಟಿ ದಿನಾಂಕ 24-06-2024ರ ಸೋಮವಾರ- ಕನ್ನಡ, ಅರೇಬಿಕ್ ದಿನಾಂಕ 25-06-2024ರ ಮಂಗಳವಾರ – ಇಂಗ್ಲೀಷ್ ದಿನಾಂಕ 26-06-2024ರ ಬುಧವಾರ – ಸಮಾಜಶಾಸ್ತ್ರ, ಜೀವ ಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ. ದಿನಾಂಕ 27-06-2024ರ ಗುರುವಾರ – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ ದಿನಾಂಕ 28-06-2024ರ ಶುಕ್ರವಾರ – ಅರ್ಥ ಶಾಸ್ತ್ರ, ರಾಸಾಯನ ಶಾಸ್ತ್ರ ದಿನಾಂಕ 29-06-2024ರ ಶನಿವಾರ – ಇತಿಹಾಸ, ಭೌತಶಾಸ್ತ್ರ ದಿನಾಂಕ 01-07-2024ರ ಸೋಮವಾರ- ಗೃಹ ವಿಜ್ಞಾನ, ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ದಿನಾಂಕ 02-07-2024ರ…

Read More

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಇಂದು ಪ್ರಕಟಗೊಂಡಿದೆ. ಹಾಜರಾದಂತ ವಿದ್ಯಾರ್ಥಿಗಳಲ್ಲಿ 52,505 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ. ದಿನಾಂಕ 29-04-2024ರಿಂದ 16-05-2024ರವರೆಗೆ ಒಟ್ಟು 301 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯಿತು. ಉತ್ತರ ಪತ್ರಿಕೆಗಳ ಮೌಲ್ಯ ಮಾಪನಕಾರ್ಯವು ಒಟ್ಟು 28 ಮೌಲ್ಯಮಾಪನ ಶಿಬಿರಗಳಲ್ಲಿ ದಿನಾಂಕ 15-05-2024ರಿಂದ 18-05-2024ರವರೆಗೆ 7875 ಮೌಲ್ಯ ಮಾಪಕರಿಂದ ನಡೆಸಲಾಯಿತು ಎಂದು ತಿಳಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶವನ್ನು ಈಗ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು https://karresults.nic.in ಜಾಲತಾಣಕ್ಕೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ. ಫಲಿತಾಂಶವನ್ನು ಉತ್ತಮ ಪಡಿಸಿಕೊಳ್ಳಲು ಪರೀಕ್ಷೆ ಬರೆದ ವಿದ್ಯಾರ್ಥಿಗಳು ಪರೀಕ್ಷೆ-1 ಮತ್ತು ಪರೀಕ್ಷೆ-2ರಲ್ಲಿ ವಿಷಯವಾರು ಗಳಿಸಿದ ಅತಿಹೆಚ್ಚು ಅಂಕಗಳನ್ನು ಪರಿಗಣಿಸಿ ಅಂತಿಮ ಫಲಿತಾಂಶವನ್ನು https://kseab.karnataka.gov.in ಅಂತರ್ಜಾಲದಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿದೆ. ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ 1,49,824 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇವರಲ್ಲಿ 1,48,942…

Read More

ಬೆಂಗಳೂರು : ಫೋನ್ ಟ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಅವರೇನು ಭಯೋತ್ಪದಕರೇ? ಫೋನ್ ಟ್ಯಾಪ್ ನಂತಹ ಮುಠ್ಠಾಳತನದ ಕೆಲಸವನ್ನು ನಮ್ಮ ಸರ್ಕಾರ ಮಾಡುವುದಿಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ಫೋನ್ ಟ್ಯಾಪ್ ಬಗ್ಗೆ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಮಾಧ್ಯಮದವರು ಕುಮಾರಪಾರ್ಕ್ ಸರಕಾರಿ ಅತಿಥಿ ಗೃಹದ ಬಳಿ ಗಮನ ಸೆಳೆದಾಗ ಅವರು ಸೋಮವಾರ ಉತ್ತರಿಸಿದ್ದಿಷ್ಟು: ಭಯೋತ್ಪಾದಕರ ಫೋನನ್ನು ಅನುಮತಿ ಪಡೆದು ಟ್ಯಾಪ್ ಮಾಡಲಾಗುತ್ತದೆ. ಇವರು ನಮ್ಮ ರಾಜ್ಯದ ನಾಯಕರು, ಇವರ ಫೋನ್ ಟ್ಯಾಪ್ ಮಾಡುವ ಅವಶ್ಯಕತೆ ನಮ್ಮ ಸರ್ಕಾರಕ್ಕಿಲ್ಲ. ಕೇವಲ ಪ್ರಚಾರಕ್ಕಾಗಿ ಇಂತಹ ಸುಳ್ಳು ಆರೋಪ ಮಾಡುತ್ತಿದ್ದಾರೆ.” ಸರ್ಕಾರ ಒಂದು ವರ್ಷ ಐಸಿಯುನಲ್ಲಿ ಇತ್ತು ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ “ಪಾಪ ಅವರು ಇನ್ನೇನು ಮಾಡಲು, ಇನ್ನೇನು ಹೇಳಲು ಸಾಧ್ಯ. ಅಧಿಕಾರದಲ್ಲಿ ಇದ್ದಾಗ ಏನೂ ಮಾಡಲಿಲ್ಲ. ಸರ್ಕಾರ ಐಸಿಯುನಲ್ಲಿ ಇತ್ತೋ ಇರಲಿಲ್ಲವೋ ಎಂದು ಜನ ಹೇಳಬೇಕು, ನಾಯಕರುಗಳಲ್ಲ”. ಈ ಹಿಂದಿನ ಸರ್ಕಾರದ ಕೆಟ್ಟ ಆಡಳಿತದಿಂದ, ಬೆಲೆ…

Read More

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ಸಂಬಂಧ ಇಇಡಿಎಸ್ ತಂತ್ರಾಂಶದಲ್ಲಿ ಇಂದೀಕರಣ ಮಾಡಲು ಹಾಗೂ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಮೇ.31ರವರೆಗೆ ದಿನಾಂಕ ವಿಸ್ತರಣೆ ಮಾಡಿ ಆದೇಶಿಸಿದ್ದಾರೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯಿಂದ ಜ್ಞಾಪನ ಪತ್ರ ಹೊರಡಿಸಿದ್ದು,  ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢಶಾಲಾ ಶಿಕ್ಷಕರ ಸಾಮಾನ್ಯ ವರ್ಗಾವಣೆ 2023-24 ಸಂಬಂಧ ಉಲ್ಲೇಖ 1ರ ಅಧಿಸೂಚನೆಯಲ್ಲಿ ಪ್ರಸಕ್ತ ಸಾಲಿನಲ್ಲಿ ವಲಯ ಬದಲಾವಣೆ ಸಹಿತ ಶಿಕ್ಷಕರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗಳನ್ನು ಹಮ್ಮಿಕೊಳ್ಳಲು ವೇಳಾಪಟ್ಟಿ ಹೊರಡಿಸಲಾಗಿದ್ದು, ವರ್ಗಾವಣಾ ಕಾಯ್ದೆ ಮತ್ತು ನಿಯಮಗಳನ್ನು ಎಲ್ಲಾ ಹಂತದ ವರ್ಗಾವಣಾ ಪ್ರಾಧಿಕಾರಿಗಳು ಕಡ್ಡಾಯವಾಗಿ ಓದಿಕೊಂಡು ಮಾರ್ಗಸೂಚಿಯಲ್ಲಿ ತಿಳಿಸಿರುವಂತೆ ಹಾಗೂ ಶಿಕ್ಷಕರ ವರ್ಗಾವಣೆ ಕಾಯ್ದೆ /ನಿಯಮಗಳು-2020 ಮತ್ತು ತಿದ್ದುಪಡಿ ಕಾಯ್ದೆ/ ನಿಯಮಗಳು-2022ರ ಪ್ರಕಾರ ಅಗತ್ಯ ಕ್ರಮವಹಿಸಲು ಉಲ್ಲೇಖ-2ರಂತೆ ಕ್ಷೇತ್ರಶಿಕ್ಷಣಾಧಿಕಾರಿಗಳ ಸಭೆಯಲ್ಲಿ ತಿಳಿಸಲಾಗಿರುತ್ತದೆ ಎಂದಿದೆ. ಉಲ್ಲೇಖ-3 ರಂತ ದಿನಾಂಕ: 20.05 2024 ರಂದು ನಡೆಸಿದ ವಿಡಿಯೋ ಕಾನ್ಸರನ್ಯ ನಲ್ಲಿ ತಿಳಿಸಿರುವಂತೆ ಈ ಕೆಳಕಂಡ ಅಂಶಗಳ ಬಗ್ಗೆ ಅಗತ್ಯ…

Read More

ಬೆಂಗಳೂರು: ರಾಜ್ಯದ ಎಲ್ಲ ಶಾಲೆಗಳ 5, 8 ಹಾಗೂ 9ನೇ ತರಗತಿಯ ವಿದ್ಯಾರ್ಥಿಗಳನ್ನು ಮುಂದಿನ ಶೈಕ್ಷಣಿಕ ತರಗತಿಗೆ ತೇರ್ಗಡೆ ಮಾಡಿ, ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಮೂಲಕ ರಾಜ್ಯದ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದಂತ ಬಿ.ಬಿ ಕಾವೇರಿ ಆದೇಶಿಸಿದ್ದು, ಮಕ್ಕಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಶಾಲೆಗಳಲ್ಲಿ ನಡೆದಿರುವ ಪರೀಕ್ಷೆಗಳ ಮೌಲ್ಯಾಂಕನ ಆಧರಿಸಿ ಮುಂದಿನ ತರಗತಿಗೆ ದಾಖಲಾತಿಗೆ ಅನುಕೂಲ ಮಾಡಿಕೊಡುವಂತೆ ಸೂಚಿಸಿದ್ದಾರೆ. ಶಾಲಾ ಶಿಕ್ಷಣ ಇಲಾಖೆ ಆದೇಶದಲ್ಲಿ ಏನಿದೆ..? 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯ ಕ್ರಮದ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿಗೆ ಶೈಕ್ಷಣಿಕ ಮಾರ್ಗಸೂಚಿಯನ್ನು ಹೊರಡಿಸುವ ಮೂಲಕ ದಿನಾಂಕ:11.04.2024 ರಿಂದ 28.05.2024ರವರೆಗೆ ಬೇಸಿಗೆ ರಜೆ ಘೋಷಿಸಲಾಗಿರುತ್ತದೆ ಎಂದಿದ್ದಾರೆ. ಆದರೆ ಉಲ್ಲೇಖ-2ರನ್ನಯ ರಾಜ್ಯದಲ್ಲಿನ ಕೆಲವು ಖಾಸಗಿ ಶಾಲೆಗಳು ಬೇಸಿಗೆ ರಜೆಯನ್ನು ಕಡಿತಗೊಳಿಸಿ ತರಗತಿಗಳನ್ನು ಪ್ರಾರಂಭಿಸಿದ್ದು, ಈ ಕುರಿತಂತೆ ಕರ್ನಾಟಕ ರಾಜ್ಯ…

Read More

ಬೆಂಗಳೂರು: ನನ್ನ ಸುತ್ತಮುತ್ತಲಿನ 40 ಜನರ ಫೋನ್ʼಗಳನ್ನು ರಾಜ್ಯ ಸರಕಾರ ಟ್ಯಾಪ್ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ಪಕ್ಷದ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ರೇವಣ್ಣ ಅವರ ಫೋನ್ ಸೇರಿದಂತೆ ನನ್ನ ಸುತ್ತಮುತ್ತ ಇರುವ ಎಲ್ಲರ ಫೋನ್ ಗಳನ್ನೂ ಸರಕಾರ ಟ್ಯಾಪ್ ಮಾಡಿಸುತ್ತಿದೆ. ನನ್ನ ಫೋನ್ ಕೂಡ ಟ್ಯಾಪ್ ಆಗುತ್ತಿದೆ ಎಂದು ದೂರಿದರು. ರಾಜಕೀಯವಾಗಿ ನಮ್ಮ ಕುಟುಂಬವನ್ನು ಮುಗಿಸಲೇಬೇಕು ಎಂದು ಈ ಸರಕಾರ ತೀರ್ಮಾನಕ್ಕೆ ಬಂದಿದೆ. ಅದು ಆಡಿಯೋ ಟೇಪುಗಳಲ್ಲಿಯೇ ಬಯಲಾಗಿದೆ. ಹೀಗಾಗಿ ನಮ್ಮ ಕುಟುಂಬದ ಎಲ್ಲರ ಮೊಬೈಲ್ ಫೋನ್ ಗಳನ್ನು ಸರಕಾರ ಕದ್ದಾಲಿಕೆ ಮಾಡಿಸುತ್ತಿದೆ. ಯಾರನ್ನೂ ಇವರು ಬಿಟ್ಟಿಲ್ಲ, ಎಲ್ಲರ ಫೋನ್ ಟ್ಯಾಪ್ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು. ಫೋನ್ ಟ್ಯಾಪ್ ಮಾಡುವಂಥ ಮುಟ್ಟಾಳ ಕೆಲಸವನ್ನು ನಮ್ಮ ಸರಕಾರ ಮಾಡುತ್ತಿಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರಲ್ಲ ಎಂದು ಮಾಧ್ಯಮಗಳು ಗಮನ ಸೆಳೆದಾಗ; ಭೂತದ ಬಾಯಲ್ಲಿ ಭಗವದ್ಗೀತೆ ಬಂದ ಹಾಗಿದೆ ಡಿಕೆಶಿ ಹೇಳೋದು ಎಂದರು ಅವರು.…

Read More

ಬೆಂಗಳೂರು: ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರ ಕುಟುಂಬಕ್ಕೆ ಕೆಟ್ಟ ಹೆಸರು ತರಲು ಸಂಚು ರೂಪಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ವಿರುದ್ಧ ಜಾತ್ಯತೀತ ಜನತಾದಳ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ನೇತೃತ್ವದಲ್ಲಿ ನಗರದ ಪ್ರೀಢಂ ಪಾರ್ಕ್ʼನಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಅವರಿಬ್ಬರ ಪ್ರತಿಕೃತಿಯನ್ನು ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ; ಡಿಕೆಶಿ ಮತ್ತು ಶಿವರಾಮೇಗೌಡ ವಿರುದ್ಧ ಕೂಡಲೇ ಎಸ್ ಐಟಿ ಕೇಸ್ ದಾಖಲಿಸಿ ವಿಚಾರಣೆ ನಡೆಸಬೇಕು, ಉಪ ಮುಖ್ಯಮಂತ್ರಿ ಹುದ್ದೆಯಿಂದ ಡಿಕೆಶಿಯನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಗೌಡರು; ಡಿ.ಕೆ.ಶಿವಕುಮಾರ್ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಕನ್ನಡನಾಡಿನ ಏಕೈಕ ಮಾಜಿ ಪ್ರಧಾನಿಗಳಾದ ದೇವೇಗೌಡರ ಕುಟುಂಬದ ವಿರುದ್ಧ ಹಗೆತನ ಸಾಧಿಸುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸೋಲಿನ ಭಯದಿಂದ ಅವರು ಇದನ್ನೆಲ್ಲಾ ಮಾಡುತ್ತಿದ್ದಾರೆ, ತಮ್ಮ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಅವರನ್ನು ಮುಖ್ಯಮಂತ್ರಿಗಳು ತಕ್ಷಣವೇ ಸಂಪುಟದಿಂದ ವಜಾ ಮಾಡಬೇಕು ಎಂದು…

Read More

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ನಂತ್ರ, ದ್ವಿತೀಯ ಪಿಯುಸಿ ಪರೀಕ್ಷೆ-2 ಅನ್ನು ಶಾಲಾ ಪರೀಕ್ಷೆಗಳ ಇಲಾಖೆ ನಡೆಸಿತ್ತು. ಈ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶವನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸುವುದಾಗಿ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಶಾಲಾ ಪರೀಕ್ಷೆಗಳ ಇಲಾಖೆಯು ತಿಳಿಸಿದ್ದು, 2024ರ ದ್ವಿತೀಯ ಪಿಯುಸಿ ಪರೀಕ್ಷೆ-2ನ್ನು ದಿನಾಂಕ: 29-04-2024 ರಿಂದ 16-05-2024 ರವರೆಗೆ ನಡೆಸಲಾಯಿತು ಎಂದು ಹೇಳಿದೆ. ಈ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶವನ್ನು ದಿನಾಂಕ:21-05-2024ರ ಮಧ್ಯಾಹ್ನ: 3.00 ಗಂಟೆಗೆ NIC ವೆಬ್‌ಸೈಟ್ https://karresults.nic.in ನಲ್ಲಿ ರ್ಪಕಟಿಸಲಾಗುವುದು ಎಂದು ಮಾಹಿತಿ ನೀಡಿದೆ. ಇನ್ನೂ ವಿದ್ಯಾರ್ಥಿಗಳು ನಾಳೆ ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಪ್ರಕಟಗೊಂಡ ನಂತ್ರ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧಿಕೃತ ಜಾಲತಾಣ https://karresults.nic.in ಗೆ ಭೇಟಿ ನೀಡಿ ನಿಮ್ಮ ನೋಂದಣಿ ಸಂಖ್ಯೆಯನ್ನು ನೀಡುವ ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ವರದಿ: ವಸಂತ ಬಿ ಈಶ್ವರಗೆರೆ https://kannadanewsnow.com/kannada/school-education-department-issues-order-to-conduct-classes-during-summer-vacation/…

Read More

ಬೆಂಗಳೂರು: ಪ್ರಜ್ವಲ್‌, ನೀನು ಎಲ್ಲೇ ಇದ್ದರೂ ಕೂಡಲೇ ವಾಪಸ್‌ ಬಾ.. ತನಿಖಾ ತಂಡಕ್ಕೆ ಸಹಕಾರ ನೀಡು ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಅವರು ಮಾಧ್ಯಮಗಳ ಮೂಲಕ ಪ್ರಜ್ವಲ್‌ ರೇವಣ್ಣ ಅವರಿಗೆ ಸಂದೇಶ ನೀಡಿದರು.  ಈ ಸರಕಾರಕ್ಕೆ ಪ್ರಜ್ವಲ್ ಕರೆಸುವ ಶಕ್ತಿ ಇದ್ದಂತಿಲ್ಲ. ಅದಕ್ಕೆ ನಾನೇ ಕರೆ ಕೊಡುತ್ತಿದ್ದೇನೆ. ಮಾಧ್ಯಮಗಳ ಮೂಲಕ ಹೇಳುತ್ತಿದ್ದೇನೆ. ಕೂಡಲೇ ವಾಪಸ್‌ ಬಾ.. ದೊಡ್ಡವರು (ದೇವೇಗೌಡರು) ಮತ್ತು ಪಕ್ಷದ ಕಾರ್ಯಕರ್ತರಿಗೆ ಗೌರವ ಕೊಟ್ಟು ತಕ್ಷಣ ವಾಪಸ್‌ ಬಾ.. ತನಿಖಾ ತಂಡಕ್ಕೆ ಸಹಕರಿಸು. ಕಾನೂನು ಪ್ರಕಾರ ಪ್ರಕರಣವನ್ನು ಎದುರಿಸು ಎಂದು ಹೇಳಿದರು ಮಾಜಿ ಮುಖ್ಯಮಂತ್ರಿಗಳು. ನಮ್ಮ ತಂದೆಯವರ ನೋವು ನೋಡಲಾಗದೆ ಈ ಮಾತನ್ನು ಹೇಳುತ್ತಿದ್ದೇನೆ. ಇತರೆ ಯಾರೂ ನಮ್ಮಿಂದ ನೋವಿಗೆ ತುತ್ತಾಗಬಾರದು. ನಾನೇ ಮಾಧ್ಯಮಗಳ ಮೂಲಕ ಮನವಿ ಮಾಡುತ್ತೇನೆ ಎಂದು ತಂದೆಯವರು ಹೇಳಿದರು. ನಾನೇ ವಾಪಸ್‌ ಬರುವಂತೆ ಸಂದೇಶ ಕೊಡುತ್ತೇನೆ ಎಂದು ನಿಮ್ಮಗಳ (ಮಾಧ್ಯಮಗಳು) ಮೂಲಕ ಬಹಿರಂಗವಾಗಿ ಹೇಳುತ್ತದ್ದೇನೆ ಎಂದರು ಕುಮಾರಸ್ವಾಮಿ ಅವರು. ನಾನು ದಿನವೂ ಪದ್ಮನಾಭ ನಗರಕ್ಕೆ ಹೋಗುತ್ತೇನೆ.…

Read More