Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಗೆದ್ದು, ಕೇಂದ್ರ ಸಚಿವರಾದ ಮಾತ್ರಕ್ಕೆ ಹೆಚ್.ಡಿ ಕುಮಾರಸ್ವಾಮಿ ಏನು ಮಂಡ್ಯದ ಒಡೆಯರಾಗುವುದಕ್ಕೆ ಆಗುವುದಿಲ್ಲ ಅಂತ ಶಾಸಕ ಕದಲೂರು ಉದಯ್ ವಾಗ್ಧಾಳಿ ನಡೆಸಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಶನಿವಾರ ಲೋಕಸಭಾ ಚುನಾವಣೆಯ ಆತ್ಮಾವಲೋಕನ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದ ಅವರು, ಹೆಚ್. ಡಿ ಕುಮಾರಸ್ವಾಮಿ ರವರು ಲೋಕಸಭಾ ಸದಸ್ಯರು ಹಾಗೂ ಕೇಂದ್ರದಲ್ಲಿ ಮಂತ್ರಿಯಾದ ಮಾತ್ರಕ್ಕೆ ಮಂಡ್ಯದ ಒಡೆಯರಾಗುವುದಕ್ಕೆ ಆಗುವುದಿಲ್ಲ ಎಂದು ತಿಳಿಸಿದರು. ಚುನಾವಣೆ ಎಂದ ಮೇಲೆ ಸೋಲು ಗೆಲುವು ಇದ್ದೇ ಇರುತ್ತದೆ ಎಂದ ಅವರು,ಇನ್ನೂ ನಾಲ್ಕು ವರ್ಷ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರುಗಳು ಇರುತ್ತಾರೆ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಇರುತ್ತದೆ ಎಂದ ಅವರು ಈ ಸೋಲಿಗೆ ಮುಂದಿನ ಚುನಾವಣೆಗಳಲ್ಲೇ ಉತ್ತರ ನೀಡಬೇಕಿದೆ ಎಂದರು. ಮಂಡ್ಯ ಜಿಲ್ಲೆಯಲ್ಲಿ ಶಂಕರೇಗೌಡ, ಎಸ್. ಎಂ ಕೃಷ್ಣ, ಅಂಬರೀಷ್ ಸೇರಿದಂತೆ ಹಲವಾರು ದೊಡ್ಡ ವ್ಯಕ್ತಿಗಳು ಗೆಲುವು ಹಾಗೂ ಸೋಲನ್ನು ಕಂಡಿದ್ದಾರೆಯ್ಯಾದ್ದರಿಂದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯು…
ಬೆಂಗಳೂರು : “ವೈದ್ಯಕೀಯ ಶಿಕ್ಷಣದ ಪ್ರವೇಶ ಪರೀಕ್ಷೆಯನ್ನು ರಾಜ್ಯಗಳೇ ನಡೆಸಲು ಅವಕಾಶ ಮಾಡಿಕೊಡುವುದು ಉತ್ತಮ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಇದು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಯಾಗಿದ್ದು, ನೀಟ್ ಅಕ್ರಮ ಗಂಭೀರ ಅಪರಾಧವಾಗಿದೆ. ಹೀಗಾಗಿ ರಾಜ್ಯಗಳೇ ಪ್ರವೇಶ ಪರೀಕ್ಷೆ ನಡೆಸಲು ಅವಕಾಶ ನೀಡಲಿ ಎಂದು ಕೇಂದ್ರವನ್ನು ಮನವಿ ಮಾಡುತ್ತೇನೆ. ರಾಜ್ಯಗಳು ನಡೆಸುವ ಪರೀಕ್ಷೆಯಲ್ಲಿ ದೇಶದ ಎಲ್ಲಾ ರಾಜ್ಯಗಳ ವಿದ್ಯಾರ್ಥಿಗಳು ಭಾಗವಹಿಸಲಿ. ಅವರಿಗಾಗಿ ಮೀಸಲಾತಿಯನ್ನೂ ನೀಡಬಹುದು ಎಂದರು. ಈ ಪರೀಕ್ಷೆಯಿಂದ ನಮ್ಮ ರಾಜ್ಯದ ಮಕ್ಕಳಿಗೆ ದೊಡ್ಡ ಅನ್ಯಾಯವಾಗುತ್ತಿವೆ. ನಾವು ಕಾಲೇಜುಗಳನ್ನು ಕಟ್ಟಿದ್ದೇವೆ. ನೀಟ್ ಪರೀಕ್ಷೆಯಿಂದ ಉತ್ತರ ಭಾರತದ ರಾಜ್ಯಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತಿದೆ. ಹೀಗಾಗಿ ನಮ್ಮ ಮಕ್ಕಳಿಗೆ ತಾರತಮ್ಯವಾಗುತ್ತಿದೆ. ನಮ್ಮ ಮಕ್ಕಳಿಗೆ ನ್ಯಾಯ ಒದಗಿಸಲು ಒಗ್ಗಟ್ಟಿನಿಂದ ಹೋರಾಟ ಮಾಡಬೇಕು. ಇನ್ನು ನೀಟ್ ಅಕ್ರಮದ ಬಗ್ಗೆ ನಾನು ವೈದ್ಯಕೀಯ ಶಿಕ್ಷಣ ಸಚಿವರ ಜತೆ ಚರ್ಚೆ ಮಾಡಿದ್ದೇನೆ. ಈ ವಿಚಾರವಾಗಿ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಈ…
ನವದೆಹಲಿ: ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಶನಿವಾರ (ಜೂನ್ 15) ಹೊಸ ಭಾರತೀಯ ಜನತಾ ಪಕ್ಷದ ಸರ್ಕಾರದಲ್ಲಿ ಜೂನ್ 12 ರಂದು ಪ್ರಮಾಣವಚನ ಸ್ವೀಕರಿಸಿದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಗೃಹ, ಸಾಮಾನ್ಯ ಆಡಳಿತ ಮತ್ತು ಸಾರ್ವಜನಿಕ ಕುಂದುಕೊರತೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಮತ್ತು ಜಲಸಂಪನ್ಮೂಲ ಸಚಿವಾಲಯಗಳನ್ನು ಅವರು ತಮ್ಮ ಬಳಿ ಇಟ್ಟುಕೊಂಡಿದ್ದರು. ಉಪಮುಖ್ಯಮಂತ್ರಿ ಕನಕ್ ವರ್ಧನ್ ಸಿಂಗ್ ಅವರಿಗೆ ಕೃಷಿ ಮತ್ತು ರೈತರ ಸಬಲೀಕರಣ, ಇಂಧನ ಸಚಿವಾಲಯಗಳನ್ನು ವಹಿಸಲಾಗಿದೆ. ಮತ್ತೊಬ್ಬ ಉಪ ಮುಖ್ಯಮಂತ್ರಿ ಪಾರ್ವತಿ ಪರಿದಾ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಮಿಷನ್ ಶಕ್ತಿ, ಪ್ರವಾಸೋದ್ಯಮ ಖಾತೆಗಳನ್ನು ನೀಡಲಾಗಿದೆ. ಉಪಮುಖ್ಯಮಂತ್ರಿ ಕನಕ್ ವರ್ಧನ್ ಸಿಂಗ್ ಅವರಿಗೆ ಕೃಷಿ ಮತ್ತು ರೈತರ ಸಬಲೀಕರಣ ಮತ್ತು ಇಂಧನ ಖಾತೆಗಳನ್ನು ನೀಡಲಾಗಿದೆ. ಉಪ ಮುಖ್ಯಮಂತ್ರಿ ಪಾರ್ವತಿ ಪರಿದಾ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಮಿಷನ್ ಶಕ್ತಿ ಮತ್ತು ಪ್ರವಾಸೋದ್ಯಮ ಖಾತೆಗಳನ್ನು ನೀಡಲಾಗಿದೆ. ಖಾತೆಗಳನ್ನು ಗುರುವಾರ ಘೋಷಿಸುವ ನಿರೀಕ್ಷೆಯಿತ್ತು. ಶುಕ್ರವಾರ, ಕ್ಯಾಬಿನೆಟ್…
BREAKING: ಮಣಿಪುರ ಸಿಎಂ ಬಿರೇನ್ ಸಿಂಗ್ ಬಂಗಲೆ ಸಮೀಪದ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ | Manipur CM N Biren Singh
ನವದೆಹಲಿ: ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಅಧಿಕೃತ ಬಂಗಲೆ ಬಳಿಯ ಕಟ್ಟಡ ಸಂಕೀರ್ಣದ ಕಟ್ಟಡದಲ್ಲಿ ಶನಿವಾರ ಸಂಜೆ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ. https://twitter.com/PTI_News/status/1801984300964810840 ಬೆಂಕಿಯನ್ನು ನಂದಿಸಲು ಕನಿಷ್ಠ ಮೂರು ಅಗ್ನಿಶಾಮಕ ಟೆಂಡರ್ ಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಗಿದೆ. ಬೆಂಕಿಯ ಕಾರಣವನ್ನು ಇನ್ನೂ ನಿರ್ಧರಿಸಲಾಗಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/good-news-for-bagar-hukum-cultivators-applications-to-be-disposed-of-soon-minister-krishna-byre-gowda/ https://kannadanewsnow.com/kannada/petrol-diesel-price-hike-a-betrayal-of-the-people-of-the-state-bommai/
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಅವೈಜ್ಞಾನಿಕ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಿ ರಾಜ್ಯದ ಆರ್ಥಿಕತೆಯನ್ನು ದಿವಾಳಿ ಮಾಡಿದ್ದು, ಈಗ ಪೆಟ್ರೋಲ್, ಡಿಸೆಲ್ ದರ ಏರಿಕೆ ಮಾಡಿ ರಾಜ್ಯದ ಜನತೆಗೆ ದ್ರೋಹ ಮಾಡಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಎಕ್ಸ್ ಮಾಡಿರುವ ಅವರು, ರಾಜ್ಯ ಸರ್ಕಾರ ನಡೆಸಲು ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡಿದೆ. ನಾವಿದ್ಸಾಗ ಡಿಸೆಲ್ ಬೆಲೆ 7 ರೂ ಕಡಿಮೆ ಮಾಡಿದ್ದೇವು, ಇವರು ನಾಲ್ಕು ರೂಪಾಯಿ ಹೆಚ್ಚಳ ಮಾಡಿದ್ದಾರೆ. ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದು ಇದರಿಂದ ಸ್ಪಷ್ಟವಾಗಿದೆ. ಈಗಾಗಲೇ ವಿದ್ಯುತ್ ದರ, ಮೊಟಲ್ ವೆಹಿಕಲ್ ದರ ಏರಿಕೆ ಸಾಮಾನ್ಯ ಜನರಿಗೆ ನೇರ ಬರೆ ಎಳೆದಿದ್ದಾರೆ. ಬಜೆಟ್ ನಲ್ಲಿ ಘೊಷಣೆ ಮಾಡದೇ, ಈಗ ಈ ರೀತಿ ಪೆಟ್ರೋಲ್ ಡಿಸೆಲ್ ದರ ಏರಿಸಿರುವುದು ಒಂದು ರೀತಿಯಲ್ಲಿ ಜನತೆಗೆ ದ್ರೋಹ ಮಾಡಿದಂತೆ. ನಾವು ಇದನ್ನು ಉಗ್ರವಾಗಿ ಖಂಡಿಸುತ್ತೇವೆ. ಕೂಡಲೆ ಸರ್ಕಾರ ಆದೇಶ ವಾಪಸ್ ಪಡೆಯಬೇಕು…
ಬೆಂಗಳೂರು: ನಗರದಲ್ಲಿ ಪ್ರತಿದಿನ ಕುಡಿಯುವ ನೀರಿನ ಪರೀಕ್ಷೆ ಮಾಡುವುದು ಕಡ್ಡಾಯವಾಗಿದೆ. ನಗರದ ಜನತೆಗೆ ಸ್ವಚ್ಛ ನೀರು ಸರಬರಾಜು ಮಾಡುವು ಕೆಲಸ ಮಾಡಬೇಕು ಅಂತ ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ಹಂಚಿಕೊಂಡ ಅವರು, ಕಲುಷಿತ ನೀರಿನ ಬಗ್ಗೆ ಕೇಳಿದಾಗ “ಪ್ರತಿದಿನ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಪರೀಕ್ಷೆ ನಡೆಸಿ ಜನರಿಗೆ ನೀಡಲಾಗುತ್ತಿದೆ. ಕಾವೇರಿ, ಬೋರ್ ವೆಲ್ ನೀರನ್ನು ಸಹ ಪರೀಕ್ಷೆಗೆ ಒಳಪಡಿಸುತ್ತಿದ್ದು. ದಿನದ ವರದಿ ನನಗೂ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದು. ಪ್ರತಿದಿನವೂ ವರದಿ ನೀಡುತ್ತಿದ್ದಾರೆ ಎಂದರು. ಬಿಬಿಎಂಪಿ ವಿಭಾಗಿಸುವ ಬಗ್ಗೆ ಬಿಜೆಪಿ ವಿರೋಧಿಸುತ್ತಿರುವ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಸಮಿತಿಯ ವರದಿ ಇದೆ. ಸಧ್ಯಕ್ಕೆ 225 ವಾರ್ಡ್ ಗಳನ್ನು ಮಾಡಲಾಗಿದ್ದು, ಚುನಾವಣೆ ನಂತರವೂ ಬಿಬಿಎಂಪಿ ವಿಭಜನೆ ಮಾಡಬಹುದು. ಈಗಲೇ ಮಾಡಬೇಕೆಂದೇನಿಲ್ಲ” ಎಂದು ತಿಳಿಸಿದರು. ಬಿಟ್ ಕಾಯಿನ್ ಹಗರಣ ಸಂಬಂಧ ನಲಪಾಡ್ ಅವರನ್ನು ವಿಚಾರಣೆಗೆ ಒಳಪಡಿಸಿರುವ ಬಗ್ಗೆ ಕೇಳಿದಾಗ, “ಆ ವಿಚಾರವಾಗಿ ನನಗೆ ಮಾಹಿತಿ ಇಲ್ಲ”…
ಬೆಂಗಳೂರು: ಬಿಬಿಎಂಪಿ ಚುನಾವಣೆ ಯಾವಾಗ ಎನ್ನುವುದೇ ಅನೇಕರ ಕುತೂಹಲವಾಗಿದೆ. ಈ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬಿಗ್ ಅಪ್ ಡೇಟ್ ಒಂದನ್ನು ಕೊಟ್ಟಿದ್ದಾರೆ. ಅದೇನು ಅಂತ ಮುಂದೆ ಓದಿ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪಕ್ಷದ ಬೆಂಗಳೂರು ನಗರದ ಬ್ಲಾಕ್ ನಾಯಕರ ಜತೆ ಪಾಲಿಕೆ ಚುನಾವಣೆ ಸಿದ್ಧತೆ ಬಗ್ಗೆ ಸಭೆ ಮಾಡಿದ್ದೇವೆ. ಖಾಲಿ ಇರುವ ಪದಾಧಿಕಾರಿಗಳ ಹುದ್ದೆ ತುಂಬಲು, ನಿಷ್ಕ್ರಿಯರಾಗಿರುವ ಪದಾಧಿಕಾರಿಗಳ ಜಾಗಕ್ಕೆ ಬೇರೆಯವರನ್ನು ನೇಮಿಸುವಂತೆ ಸೂಚನೆ ನೀಡಿದ್ದು ಒಂದು ತಿಂಗಳ ಕಾಲಾವಕಾಶ ನೀಡಿದ್ದೇವೆ. ಪಾಲಿಕೆ ಚುನಾವಣೆ ಶೀಘ್ರವೇ ಪ್ರಕಟವಾಗಲಿದ್ದು, ಅಷ್ಟರ ಹೊತ್ತಿಗೆ ಪಕ್ಷವನ್ನು ಸಜ್ಜುಗೊಳಿಸಬೇಕು. ಬೆಂಗಳೂರು ನಗರದಲ್ಲಿ ನಾಲ್ಕು ಲೋಕಸಭಾ ಕ್ಷೇತ್ರಗಳನ್ನು ನಾವು ಸೋತಿರಬಹುದು, ಆದರೆ ಪಾಲಿಕೆ ಚುನಾವಣೆಯಲ್ಲಿ ನಾವು ಚೇತರಿಸಿಕೊಳ್ಳುವ ವಿಶ್ವಾಸ ನನಗಿದೆ ಎಂದರು. ಯಡಿಯೂರಪ್ಪ ಅವರ ಪ್ರಕರಣದಲ್ಲಿ ದ್ವೇಷ ರಾಜಕಾರಣ ನಡೆಯುತ್ತಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ಇದು ಕಾನೂನಿನ ಪ್ರಕ್ರಿಯೆ. ಬಿಜೆಪಿ ನಾಯಕರು ನಮ್ಮ ಹೆಸರು ಯಾಕೆ ತೆಗೆದುಕೊಳ್ಳುತ್ತಿದ್ದಾರೆ ಎಂದು ತಿಳಿದಿಲ್ಲ.…
ಮಂಡ್ಯ: ಜಿಲ್ಲೆಯ ಜನರಿಗೆ ಕಾವೇರಿ ನೀರು ಬೇಕಿದೆ. ಅನ್ಯಾಯ ಆಗಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜೊತೆ ಚರ್ಚಿಸಿ ಸರಿಪಡಿಸುವ ಕೆಲಸ ಮಾಡ್ತೇನೆ ಎಂಬುದಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಇಂದು ಮಂಡ್ಯ ಜಿಲ್ಲೆಗೆ ಕೇಂದ್ರ ಸಚಿವರಾದ ಬಳಿಕ ಆಗಮಿಸಿದಂತ ಅವರನ್ನು, ಅದ್ಧೂರಿಯಾಗಿ ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿದರು. ಈ ಬಳಿಕ ಮದ್ದೂರಿನಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮಾತನಾಡಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ಅತ್ಯಂತ ಬಹುಮತದಿಂದ ಗೆಲ್ಲಿಸಿದ್ದಿರಿ. ಮಂಡ್ಯ ಜಿಲ್ಲೆಗು, ನನಗೂ, ದೇವೇಗೌಡ್ರುಗು ಅನುಬಂಧ ಇದೆ. ಕಳೆದ ಚುನಾವಣೆಯಲ್ಲಿ ನಾನು ನಿಲ್ಲಲು ಒತ್ತಡ ಹಾಕಿದ್ರಿ. ನರೇಂದ್ರ ಮೋದಿ ನಾಯಕತ್ವದಲ್ಲಿ ಕೇಂದ್ರದಲ್ಲಿ ಎರಡೂ ಇಲಾಖೆ ಕೊಟ್ಟಿದ್ದಾರೆ. ಉಕ್ಕು ಹಾಗೂ ಬೃಹತ್ ಕೈಗಾರಿಕಾ ಸಚಿವ ಸ್ಥಾನ ಕೊಟ್ಟಿದ್ದಾರೆ. ರೈತರ ಸಮಸ್ಯೆಗಳನ್ನು ಬಗೆಹರಿಸುವ ಆಸೆ ನನ್ನದು ಎಂದರು. ಯುವಕರಿಗೆ ಉದ್ಯೋಗಗಳನ್ನು ಕೊಡಿಸುವ ಜವಾಬ್ದಾರಿ ಇದೆ. ನನ್ನ ಇಲಾಖೆ ಮಂತ್ರಿ ಅಲ್ಲ ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿ ಮಾಡ್ತೇನೆ. ಜಿಲ್ಲೆಯ ಅಭಿವೃದ್ಧಿ ಕಂಡಿಲ್ಲ. 50 ವರ್ಷದಿಂದ ಹಾಗೇ…
ಬೆಂಗಳೂರು: ಗ್ಯಾರಂಟಿಗಳನ್ನು ಈಡೇರಿಸಲು ಆಗದೆ ಸಂದಿಗ್ಧ ಪರಿಸ್ಥಿತಿಯಲ್ಲಿರುವ ರಾಜ್ಯದ ಕಾಂಗ್ರೆಸ್ ಸರಕಾರವು, ಇವತ್ತು ಪೆಟ್ರೋಲ್ ದರವನ್ನು ಪ್ರತಿ ಲೀಟರ್ಗೆ 3 ರೂ., ಡೀಸೆಲ್ ದರವನ್ನು 3.50 ರೂ. ಏರಿಸಿದೆ. ಈ ಮೂಲಕ ರಾಜ್ಯದ ಜನರ ಮೇಲೆ ಬರೆ ಹಾಕಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪ ವ್ಯಕ್ತಪಡಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬರಗಾಲದಂಥ ಸಂಕಷ್ಟದ ಸಂದರ್ಭದಲ್ಲಿ ರಾಜ್ಯದ ಜನರ ಮೇಲೆ ಹೊರೆ ಹಾಕಿರುವುದು ಅಕ್ಷಮ್ಯ ಅಪರಾಧ. ಮುಖ್ಯಮಂತ್ರಿಗಳು ತಮ್ಮ ಭಂಡತನವನ್ನು ಬಿಟ್ಟು ಪೆಟ್ರೋಲ್, ಡೀಸೆಲ್ ದರ ಏರಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಇಲ್ಲವಾದಲ್ಲಿ ಮುಂದಿನ ಸೋಮವಾರ ಬಿಜೆಪಿ, ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ, ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು. ಒಂದೆಡೆ ಸೋಲಿನ ಹತಾಶೆ ಇದ್ದರೆ, ಇನ್ನೊಂದೆಡೆ ರಾಜ್ಯದ ಹಣಕಾಸು ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ಭಂಡ ಸರಕಾರ ಮತ್ತು ಮುಖ್ಯಮಂತ್ರಿಗಳು ಇದನ್ನು ಒಪ್ಪಿಕೊಳ್ಳುವುದಿಲ್ಲ. ಆರ್ಥಿಕ…
ಬೆಳಗಾವಿ : ಪ್ರಸಕ್ತ ಮಾನ್ಸೂನ್ ಋತುವಿನಲ್ಲಿ ರಾಜ್ಯಕ್ಕೆ ಉತ್ತಮ ಮಳೆಯಾಗಲಿದೆ. ಹಲವೆಡೆ ಪ್ರವಾಹ ಸ್ಥಿತಿ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಅಧಿಕಾರಿಗಳು ಪ್ರವಾಹ ಪೀಡಿತ ಪ್ರದೇಶಗಳನ್ನು ಮೊದಲೇ ಗುರುತಿಸಿ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಾಕೀತು ಮಾಡಿದರು. ಬೆಳಗಾವಿಯ ಸುವರ್ಣಸೌಧ ಭವನದಲ್ಲಿ ಶನಿವಾರ ಬೆಳಗಾವಿ ವಿಭಾಗದ ಜಿಲ್ಲೆಗಳ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ಹಾಗೂ ಮಳೆ, ಪ್ರವಾಹ ವಿಷಯದ ಬಗ್ಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನಾ ಸಭೆ ನಡೆಸಿದರು. ಮೊದಲಿಗೆ ಕಳೆದ ಒಂದು ವರ್ಷದಲ್ಲಿ ಬೆಳಗಾವಿ ವಿಭಾಗದಲ್ಲಿ ಸಾಕಷ್ಟು ಪ್ರಗತಿ ಕೆಲಸಗಳಾಗಿರುವುದನ್ನು ತಿಳಿಸಿ ಅಧಿಕಾರಿಗಳಿಗೆ ಅಭಿನಂದಿಸಿದರು. ಆದರೂ, ಕೆಲವು ಅಧಿಕಾರಿಗಳು ನಿರೀಕ್ಷಿತ ಮಟ್ಟದಲ್ಲಿ ಕೆಲಸ ನಿರ್ವಹಿಸದಿರುವುದರಿಂದ ಮುಂದಿನ ದಿನಗಳಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸಲು ಸೂಚಿಸಿದರು. ಮಳೆಗಾಲ ನಿರ್ವಹಣೆ ಬಗ್ಗೆ ಗಮನ ಸೆಳೆದ ಅವರು, “ಈ ವರ್ಷದ ಮಳೆಗಾಲದಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿದೆ. ಹೀಗಾಗಿ ಹಲವಾರು ಪ್ರದೇಶಗಳು ಪ್ರವಾಹಕ್ಕೆ ತುತ್ತಾಗುವ ಸಾಧ್ಯತೆಗಳಿವೆ. ಜನ ಪ್ರವಾಹಕ್ಕೆ ತುತ್ತಾಗಿ ಅವಘಡಗಳು ಸಂಭವಿಸಿದ…