Author: kannadanewsnow09

ಶಿವಮೊಗ್ಗ: ಜಿಲ್ಲೆಯಲ್ಲಿ ಸಂಕಷ್ಟಕ್ಕೊಳಪಟ್ಟ ಮಹಿಳೆಯರ ರಕ್ಷಣೆಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಉಚಿತ ವಾಹನ ಸೌಲಭ್ಯವನ್ನು ಒದಗಿಸಲಾಗುತ್ತಿದ್ದು ನ.01 ರಂದು ಸದರಿ ವಾಹನಕ್ಕೆ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಚಾಲನೆ ನೀಡಿದರು. ಶಾಸಕರು, ಸಖಿ ಒನ್ ಸ್ಟಾಪ್ ಸೆಂಟರ್, ಮಹಿಳಾ ತ್ತ ಮಕ್ಕಳ ಅಭಿವೃದ್ದಿ ಇಲಾಖೆಗಳ ಸಂಕೀರ್ಣ ಆವರಣ, 100 ಅಡಿ ರಸ್ತೆ, ಆಲ್ಕೊಳ, ಶಿವಮೊಗ್ಗ ಇಲ್ಲಿ ನ.01 ರಂದು ವಾಹನಕ್ಕೆ ಚಾಲನೆ ನೀಡಿದರು. ಈ ವೇಳೆ ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ, ಜಿ.ಪಂ ಸಿಇಓ ಹೇಮಂತ್ ಎನ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಕೃಷ್ಣಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಶಶಿರೇಖಾ, ಇತರೆ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು. ಕುಟುಂಬ, ಸಮುದಾಯ ಕೆಲಸದ ಸ್ಥಳಗಳು ಖಾಸಗಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ದೌರ್ಜನ್ಯಕ್ಕೆ ಒಳಗಾಗಿ ಹಿಂಸೆಯನ್ನು ಅನುಭವಿಸುತ್ತಿರುವ ಮಹಿಳೆಯರಿಗೆ ಸಕಾಲಿಕ ನೆರವನ್ನು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರದ ನಿರ್ಭಯ ಯೋಜನೆಯಡಿ…

Read More

ಬೆಂಗಳೂರು: ಬಿಜೆಪಿ  ನಾಯಕರು ರಾಜಕಾರಣಕ್ಕಾಗಿ ವಕ್ಫ್ ನೋಟಿಸ್ ವಿಚಾರವನ್ನು ಇಟ್ಟುಕೊಂಡು ಹೋರಾಡುತ್ತಿದ್ದಾರೆ. ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ. ಬಿಜೆಪಿ ಸರ್ಕಾರದ ಕಾಲದಲ್ಲೂ ನೋಟಿಸ್ ಕೊಟ್ಟಿದ್ದಾರೆ, ಎಲ್ಲಾ ಕಾಲದಲ್ಲಿಯೂ ನೋಟಿಸ್ ನೀಡಲಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ಇಂದು ಎಕ್ಸ್ ನಲ್ಲಿ ಸರಣಿ ಪೋಸ್ಟ್ ಮಾಡಿರುವಂತ ಅವರು, ಸಂಸದ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು, ಈಗ ವಿರುದ್ಧವಾಗಿ ಮಾತನಾಡುತ್ತಿದ್ದಾರೆ. ಅವರೇ ಹೇಳಿದ್ದ ಮಾತುಗಳಿಗೆ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ ಎಂಬುದಾಗಿ ಹೇಳಿದ್ದಾರೆ. https://twitter.com/siddaramaiah/status/1853353032974528771 ಸಚಿವರಾದ ಹೆಚ್.ಕೆ ಪಾಟೀಲ್, ಕೃಷ್ಣ ಬೈರೇಗೌಡ ಅವರೊಂದಿಗೆ ಸಭೆ ನಡೆಸಿ ಯಾವುದೇ ನೋಟೀಸು ನೀಡಿದ್ದಲ್ಲಿ ಅದನ್ನು ವಾಪಸ್ಸು ಪಡೆಯಬೇಕು ಅಥವಾ ವಿಚಾರಣೆ ಇಲ್ಲದೆಯೇ ಯಾವುದಾದರೂ ಪಹಣಿ ದಾಖಲೆ ಬದಲಾವಣೆಯಾಗಿದ್ದರೆ ಅದನ್ನು ರದ್ದು ಮಾಡಬೇಕು ಹಾಗೂ ಯಾವುದೇ ಕಾರಣಕ್ಕೂ ರೈತರನ್ನು ಒಕ್ಕಲೆಬ್ಬಿಸಬಾರದು ಎಂದು ಸ್ಪಷ್ಟ ನಿರ್ದೇಶನ ನೀಡಿದ್ದೇನೆ. ಮುಸ್ಲಿಂ, ಹಿಂದೂ, ಕ್ರಿಶ್ಚಿಯನ್ ಯಾರೇ ಆಗಿರಲಿ ಒಕ್ಕಲೆಬ್ಬಿಸಬಾರದು ಎಂದು ಬಹಳ ಸ್ಪಷ್ಟವಾಗಿ…

Read More

ಹಾವೇರಿ: ನನ್ನ ಜೀವನ ಒಂದು ತೆರೆದಿಟ್ಟ ಪುಸ್ತಕವಿದ್ದಂತೆ. ಆದರೇ ಬಿಜೆಪಿಯವರು ಮಸಿ ಬಳಿಯಲು ಹೊರಟಿದ್ದಾರೆ. ಅವರ ಮಾತನ್ನು ನೀವು ನಂಬುತ್ತೀರಾ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. ಶಿಗ್ಗಾವಿಯ ಹುಲಗೂರ ಗ್ರಾಮದಲ್ಲಿ ನೆರೆದಿದ್ದ ಬೃಹತ್ ಜನಸ್ತೋಮದಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಚುನಾವಣಾ ಪ್ರಚಾರ ಮಾಡಿ ಮಾತನಾಡಿದರು. ಅಜ್ಜನೂ ಮುಖ್ಯಮಂತ್ರಿಯಾಗಿ, ಅಪ್ಪನೂ ಮುಖ್ಯಮಂತ್ರಿ ಆಗಿದ್ದವರ ಮಗನ ವಿರುದ್ಧ ಸಾಮಾನ್ಯ ಕುಟುಂಬದ ಪೈಲ್ವಾನ್ ಪಠಾಣ್ ಕಣದಲ್ಲಿದ್ದಾರೆ. ಇವರನ್ನು ಗೆಲ್ಲಿಸಿ, ವಿಧಾನಸೌಧಕ್ಕೆ ಕಳುಹಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು. ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಮೊಮ್ಮಗ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ವಿರುದ್ಧ ಸಾಮಾನ್ಯ ಕುಟುಂಬದ ಪಠಾಣ್ ಅವರನ್ನು ಗೆಲ್ಲಿಸಿ ಎಂದರು. ಕೊರೋನಾ ಸಂದರ್ಭದಲ್ಲಿ ಸತ್ತ ಹೆಣಗಳ ಲೆಕ್ಕದಲ್ಲೂ ಲಂಚ ಪಡೆದು ದಾಖಲೆ ಮಾಡಿದವರು ಬಸವರಾಜ ಬೊಮ್ಮಾಯಿ. ಸತ್ತ ಹೆಣಗಳ‌ ಲೆಕ್ಕದಲ್ಲೂ ಲಂಚ ಪಡೆದ ಏಕೈಕ ಸರ್ಕಾರ ಬೊಮ್ಮಾಯಿ ಅವರದ್ದಾಗಿತ್ತು. ಕೋವಿಡ್ ಸಂದರ್ಭದಲ್ಲೂ, ಸಂಕಷ್ಟದಲ್ಲಿ ನರಳುವಾಗಲೂ ಲಂಚ ಪಡೆದವರ ಪುತ್ರನನ್ನು…

Read More

ಹಾವೇರಿ : ರೈತರ ಜಮೀನು ಮುಟ್ಟಿದವರು ಯಾರೂ ಕುರ್ಚಿ ಮೇಲೆ ಕೂಡಲು ಆಗುವುದಿಲ್ಲ. ರಾಜ್ಯದಲ್ಲಿ ಮತ್ತೊಮ್ಮೆ ನರಗುಂದ ಮಾದರಿ ರೈತ ಬಂಡಾಯ ಆಗಲಿದೆ‌. ಸಿಎಂ ಸಿದ್ದರಾಮಯ್ಯ ಅವರು ತಕ್ಷಣ ವಕ್ಪ್ ನೊಟಿಫಿಕಿಷನ್ ರದ್ದು ಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌. ರಾಜ್ಯ ಸರ್ಕಾರ ವಕ್ಪ್ ಬೋರ್ಡ್ ಮೂಲಕ ರೈತರಿಗೆ ನೊಟೀಸ್ ನೀಡಿರುವುದನ್ನು ಖಂಡಿಸಿ ಶಿಗ್ಗಾವಿ ಮಂಡಲ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಬೃಹತ್ ಪ್ರತಿಭಟನಾ ರ‌್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ನಮ್ಮ ಶಿಗ್ಗಾವಿ ತಾಲೂಕಿನ ಸರ್ವೆ ನಂಬರ್ 417 ರಲ್ಲಿ ನೂರಾರು ಜನ ಬಡವರಿಗೆ ಸ್ಲಮ್ ಬೋರ್ಡ್ ನಿಂದ ಮನೆ ಕಟ್ಟಲು ಅನುಮತಿ ನೀಡಿದ್ದೇವೆ. ಅದು ವಕ್ಪ್ ಆಸ್ತಿ ಅಂತ ದಾವೆ ಹೂಡಿದ್ದಾರೆ. ಶಿಗ್ಗಾವಿ ಬಡವರಿಗೆ ತಲೆ ಮೇಲೆ ಸೂರು ಇಲ್ಲದಂತ ವ್ಯವಸ್ಥೆ ಈ ವಕ್ಪ್ ಬೋರ್ಡ್ ನಿಂದ ಆಗಿದೆ ಎಂದು ಆರೋಪಿಸಿದರು. ಶಿಗ್ಗಾವಿಯಲ್ಲಿ 220 ಕೆವಿ ವಿದ್ಯುತ್ ಸ್ಟೇಷನ್ ಮಾಡಲು ಹೋದಾಗ ಅದು ವಕ್ಪ್ ಆಸ್ತಿ ಎಂದು…

Read More

ಬೆಂಗಳೂರು: ಛತ್ ಪೂಜಾ ಆಚರಣೆಗಾಗಿ ಮನೆಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆಯು ಯಶವಂತಪುರ-ದಾನಾಪುರ-ಎಸ್ಎಂವಿಟಿ ಬೆಂಗಳೂರು ನಿಲ್ದಾಣಗಳ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ. ರೈಲು ಸಂಖ್ಯೆ 06261 ಯಶವಂತಪುರ-ದಾನಾಪುರ ವಿಶೇಷ ಎಕ್ಸ್ ಪ್ರೆಸ್ ರೈಲು ನವೆಂಬರ್ 5, 2024 ರಂದು ಯಶವಂತಪುರದಿಂದ ಬೆಳಿಗ್ಗೆ 7:30 ಕ್ಕೆ ಹೊರಟು, ನವೆಂಬರ್ 7 ರಂದು ದಾನಾಪುರ ನಿಲ್ದಾಣವನ್ನು ಬೆಳಿಗ್ಗೆ 5:30 ಕ್ಕೆ ತಲುಪಲಿದೆ. ರೈಲು ಸಂಖ್ಯೆ 06262 ದಾನಾಪುರ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು ನವೆಂಬರ್ 9, 2024 ರಂದು ದಾನಾಪುರದಿಂದ ಸಂಜೆ 6:10 ಕ್ಕೆ ಹೊರಟು, ನವೆಂಬರ್ 11 ರಂದು ಎಸ್ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ಮಧ್ಯಾಹ್ನ 1:30 ಗಂಟೆಗೆ ಆಗಮಿಸಲಿದೆ. ಈ ರೈಲು ಯಲಹಂಕ ಜಂ, ಧರ್ಮಾವರಂ ಜಂ, ಡೋನ್ ಜಂ, ಕಾಚಿಗುಡ, ಕಾಜಿಪೇಟ್ ಜಂ, ಬಲ್ಹಾರ್ಷಾ, ನಾಗ್ಪುರ ಜಂ, ಇಟಾರ್ಸಿ ಜಂ, ಜಬಲ್ಪುರ್, ಕಟ್ನಿ ಜಂ, ಸತ್ನಾ ಜಂ, ಪ್ರಯಾಗರಾಜ್ ಛೋಕಿ ಜಂಕ್ಷನ್, ಪಂಡಿತ್…

Read More

ನವದೆಹಲಿ: ವರ್ಷಾಂತ್ಯದ ರಜಾದಿನಗಳಿಗಾಗಿ ಭಾರತದಿಂದ ಭೇಟಿ ನೀಡಲು ನೀವು ಕೈಗೆಟುಕುವ ದೇಶವನ್ನು ಹುಡುಕುತ್ತಿದ್ದರೆ, ಮಲೇಷ್ಯಾವನ್ನು ಅನ್ವೇಷಿಸಲು ಡಿಸೆಂಬರ್ ಅದ್ಭುತ ಸಮಯ. ಹಾಗಾದ್ರೆ ನೀವು ಡಿಸೆಂಬರ್ ನಲ್ಲಿ ಟ್ರಿಪ್ ಹೋಗುವ ಪ್ಲಾನ್ ಮಾಡಿದ್ರೇ, ವೀಸಾ ಮುಕ್ತವಾಗಿ ತೆರಳಬಹುದಾದಂತ ಈ ದೇಶಕ್ಕೆ ಭೇಟಿ ನೀಡಿ. ಆ ಬಗ್ಗೆ ಮುಂದೆ ಓದಿ. ಚಳಿಗಾಲದ ತಿಂಗಳುಗಳು ದೇಶದ ಸಾಮಾನ್ಯ ಉಷ್ಣವಲಯದ ಶಾಖದಿಂದ ಸ್ವಾಗತಾರ್ಹ ವಿರಾಮವನ್ನು ತರುತ್ತವೆ, ತಂಪಾದ ಹವಾಮಾನವು ದೃಶ್ಯವೀಕ್ಷಣೆಯನ್ನು ಹೆಚ್ಚು ಆರಾಮದಾಯಕವಾಗಿಸುತ್ತದೆ. ನೀವು ಸಾಂದರ್ಭಿಕ ಮಳೆ ಮಳೆಯನ್ನು ಎದುರಿಸಬಹುದಾದರೂ, ಇವು ಸಂಕ್ಷಿಪ್ತವಾಗಿರುತ್ತವೆ ಮತ್ತು ಹೊರಾಂಗಣ ಚಟುವಟಿಕೆಗಳಿಗೆ ಅಡ್ಡಿಯಾಗುವ ಸಾಧ್ಯತೆಯಿಲ್ಲ. ಎಕಾನಮಿ ವಿಮಾನಗಳು 5,000 ರೂ.ಗಳಿಂದ ಪ್ರಾರಂಭವಾಗುತ್ತವೆ, ಇದು ಮಲೇಷ್ಯಾವನ್ನು ಕರಾವಳಿ ಸ್ಥಳಗಳಿಗೆ ಪ್ರವೇಶಿಸಬಹುದಾದ ಆಯ್ಕೆಯನ್ನಾಗಿ ಮಾಡುತ್ತದೆ. ಕೌಲಾಲಂಪುರದಲ್ಲಿ, ನಗರದ ಸ್ಕೇಪ್ 451 ಮೀಟರ್ ಎತ್ತರದ ಅಪ್ರತಿಮ ಪೆಟ್ರೋನಾಸ್ ಅವಳಿ ಗೋಪುರಗಳಿಂದ ಪ್ರಾಬಲ್ಯ ಹೊಂದಿದೆ. ಆಧ್ಯಾತ್ಮಿಕ ನಿಲುಗಡೆಗಾಗಿ, ಪ್ರಸಿದ್ಧ ಹಿಂದೂ ದೇವಾಲಯವಾದ ಬಟು ಗುಹೆಗಳು ಭೇಟಿ ನೀಡಲೇಬೇಕಾದ ಸ್ಥಳವಾಗಿದೆ. ಪೆಟಲಿಂಗ್ ಸ್ಟ್ರೀಟ್ ನ ಫ್ಲೀ ಮಾರ್ಕೆಟ್ ಮತ್ತು…

Read More

ನವದೆಹಲಿ: ಕೇಂದ್ರ ಚುನಾವಣಾ ಆಯೋಗದಿಂದ ಕೇರಳ, ಪಂಜಾಬ್, ಉತ್ತರಪ್ರದೇಶದ ವಿಧಾನಸಭಾ ಉಪ ಚುನಾವಣೆ ಮತದಾನದ ದಿನಾಂಕ ಬದಲಾವಣೆ ಮಾಡಿ ಆದೇಶಿಸಿದೆ. ಕೇರಳ, ಪಂಜಾಬ್ ಮತ್ತು ಉತ್ತರ ಪ್ರದೇಶದ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ವಿವಿಧ ಹಬ್ಬಗಳ ಕಾರಣ ನವೆಂಬರ್ 13ರ ಬದಲಾಗಿ ನವೆಂಬರ್ 20 ಕ್ಕೆ ಮರು ನಿಗದಿಪಡಿಸಲಾಗಿದೆ. ರಾಷ್ಟ್ರೀಯ ಮತ್ತು ರಾಜ್ಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ, ಬಿಎಸ್ಪಿ, ಆರ್ಎಲ್ಡಿ ಮತ್ತು ಇತರರ ಮನವಿಯ ಮೇರೆಗೆ ಮತ್ತು ಕಡಿಮೆ ಮತದಾನದ ಸಾಧ್ಯತೆಯನ್ನು ತಳ್ಳಿಹಾಕಲು, ಚುನಾವಣಾ ಆಯೋಗವು ಕೇರಳ, ಪಂಜಾಬ್ ಮತ್ತು ಉತ್ತರ ಪ್ರದೇಶದ ಮೂರು ರಾಜ್ಯಗಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ನವೆಂಬರ್ 13ರ ಬದಲು ನವೆಂಬರ್ 20 ರವರೆಗೆ ಮರು ನಿಗದಿಪಡಿಸಿದೆ. https://kannadanewsnow.com/kannada/karnataka-has-followed-guarantee-model-in-bjps-manifesto-for-jharkhand-polls-priyank-kharge/ https://kannadanewsnow.com/kannada/application-invite-ex-militory-service-man-children/

Read More

ಬೆಂಗಳೂರು: ಗ್ಯಾರಂಟಿ ಯೋಜನೆಗಳನ್ನು “ದಿವಾಳಿಯ ರೇವಡಿ“ ಎಂದು ಲೇವಡಿ ಮಾಡಿದ್ದರು. ನಂತರ ತಾವೇ ”ಮೋದಿ ಕಿ ಗ್ಯಾರಂಟಿ“ ಎನ್ನುತ್ತಾ ಗ್ಯಾರಂಟಿ ಪದವನ್ನು ಕದ್ದರು. ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಬೊಬ್ಬೆ ಹೊಡೆದರು, ಝಾರ್ಖಂಡ್ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಕರ್ನಾಟಕ ಮಾದರಿಯನ್ನು ಅನುಸರಿಸಿದ್ದಾರೆ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ಧಾಳಿ ನಡೆಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಗೋಸುಂಬೆ ಗುಣದ ಬಿಜೆಪಿಯವರ ಡಬಲ್ ಸ್ಟ್ಯಾಂಡರ್ಡ್ ಬುದ್ದಿ ಹಲವು ಬಾರಿ ಸಾಬೀತಾಗಿದೆ. ಈಗ ಮತ್ತೊಂದು ನಿದರ್ಶನ ಸಿಕ್ಕಿದೆ. ಗ್ಯಾರಂಟಿ ಯೋಜನೆಗಳನ್ನು “ದಿವಾಳಿಯ ರೇವಡಿ“ ಎಂದು ಲೇವಡಿ ಮಾಡಿದ್ದರು. ನಂತರ ತಾವೇ ”ಮೋದಿ ಕಿ ಗ್ಯಾರಂಟಿ“ ಎನ್ನುತ್ತಾ ಗ್ಯಾರಂಟಿ ಪದವನ್ನು ಕದ್ದರು. ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಬೊಬ್ಬೆ ಹೊಡೆದರು, ಝಾರ್ಖಂಡ್ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಕರ್ನಾಟಕ ಮಾದರಿಯನ್ನು ಅನುಸರಿಸಿದ್ದಾರೆ ಎಂದಿದ್ದಾರೆ. ಕೆಲವೇ ಗಂಟೆಗಳ ಹಿಂದೆ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದ ಪ್ರಧಾನಿ ಮೋದಿಯವರು ಈಗ ಅದೇ ಗ್ಯಾರಂಟಿ…

Read More

ಬೆಂಗಳೂರು : “ಚದುರಂಗ ಆಡಿದವರೆಲ್ಲಾ ಮುಳುಗಿ ಹೋಗಿದ್ದಾರೆ. ಜನರಿಗೆ ಏನು ಲಾಭವಾಗಿದೆ, ಯಾರ್ಯಾರು ಏನೇನು ಕೆಲಸ ಮಾಡಿದ್ದಾರೆ ಎನ್ನುವುದರ ಆಧಾರದ ಮೇಲೆ ಜನ ಈ ಬಾರಿಯ ಚುನಾವಣೆ ತೀರ್ಮಾನ ಮಾಡಲಿದ್ದಾರೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ಚನ್ನಪಟ್ಟಣ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಉತ್ತರಿಸಿದರು. ಚನ್ನಪಟ್ಟಣ ಉಪಚುನಾವಣೆ ಬಗ್ಗೆ ಕೇಳಿದಾಗ “ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್, ಸಿ.ಪಿ. ಯೋಗೇಶ್ವರ್ ಹಾಗೂ ಕುಮಾರಸ್ವಾಮಿ ಏನು ಕೊಡುಗೆ ಕೊಟ್ಟಿದ್ದಾರೆ ಎನ್ನುವುದನ್ನು ಜನರು ಪಟ್ಟಿ ಮಾಡುತ್ತಾರೆ. ಅದಕ್ಕೆ ಅವರೇ ಅಂಕ ನೀಡುತ್ತಾರೆ. ಇದರ ಹೊರತಾಗಿ ಯಾವ ರಣರಂಗವೂ ಇಲ್ಲ, ಯಾವುದೂ ಇಲ್ಲ” ಎಂದರು. “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಯಕನಾದವನು ತನ್ನ ಜನರಿಗೆ ಯಾವ ರೀತಿ ಸಹಾಯ ಮಾಡುತ್ತಾನೆ. ಏನು ಅನುಕೂಲ ಕಲ್ಪಿಸಿ ಕೊಡುತ್ತಾನೆ. ಅವರ ಬದುಕನ್ನು ಯಾವ ರೀತಿ ಬದಲಾವಣೆ ಮಾಡುತ್ತಾನೆ ಎನ್ನುವುದು ಮುಖ್ಯ” ಎಂದು ಹೇಳಿದರು. ಜಯನಗರ ಕ್ಷೇತ್ರ ಅಭಿವೃದ್ಧಿಗೆ ಅನುದಾನ ನೀಡಿ…

Read More

ಬೆಂಗಳೂರು: ವಕ್ಫ್‌ ಮಂಡಳಿ ಭೂಮಿ ಕಬಳಿಸುತ್ತಿರುವುದು ರೈತರ ಪಾಲಿಗೆ ಮರಣಶಾಸನವಾಗಿದೆ. ಆದರೆ ಭೂ ಕಬಳಿಕೆಯ ಈ ಆಟ ನಡೆಯಲು ಹಿಂದೂಗಳು ಬಿಡುವುದಿಲ್ಲ. ಕೂಡಲೇ ಕಾಂಗ್ರೆಸ್‌ ಸರ್ಕಾರ ವಕ್ಫ್‌ ಕಾಯ್ದೆಯಲ್ಲಿ ಬದಲಾವಣೆ ತರಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ವಕ್ಫ್‌ ಮಂಡಳಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕೆ.ಆರ್‌.ಪುರದಲ್ಲಿ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಜಮೀನು ಕಬಳಿಸುವ ಮೂಲಕ ಅನ್ನದಾತರ ಕಣ್ಣಲ್ಲಿ ನೀರು ಬರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಇವೆಲ್ಲಕ್ಕೂ ಸಚಿವ ಜಮೀರ್‌ ಅಹ್ಮದ್‌ ಕಾರಣ. ಹಿಂದೆ ಕೇಂದ್ರದ ಕಾಂಗ್ರೆಸ್‌ ಸರ್ಕಾರ ಮುಸ್ಲಿಮರನ್ನು ಓಲೈಸಲು ವಕ್ಫ್‌ ಬೋರ್ಡ್‌ಗೆ ಹೆಚ್ಚು ಅಧಿಕಾರ ನೀಡಿತು. ಸಿಎಂ ಸಿದ್ದರಾಮಯ್ಯ ಅವರೇ ಭೂಮಿ ಪಡೆಯಿರಿ ಎಂದು ಹೇಳಿದ್ದು, ಈಗ ಇದು ಬಿಜೆಪಿ ಮಾಡುವ ರಾಜಕೀಯ ಎಂದು ಹೇಳಿದ್ದಾರೆ. ಸಿದ್ದರಾಮಯ್ಯನವರು ಈಗ ಟೋಪಿ ತೆಗೆದಿದ್ದಾರೆ. ಬಳಿಕ ಅವರೇ ರೈತರ ತಲೆ ಮೇಲೆ ಟೋಪಿ ಹಾಕುತ್ತಾರೆ. ಮುಸ್ಲಿಮರಿಗೆ 10 ಸಾವಿರ ಕೋಟಿ ರೂ. ನೀಡುತ್ತೇನೆಂದು ಹೇಳಿ ದಲಿತರ…

Read More