Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳ ಓಡಿಸಲಿದೆ. ರೈಲು ಸಂಖ್ಯೆ 06231/06232 ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಕಲಬುರಗಿ-ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ (ಒಂದು ಟ್ರಿಪ್) ರೈಲು ಸಂಖ್ಯೆ 06231 ಅಕ್ಟೋಬರ್ 29 ರಂದು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಂದ ಮಧ್ಯಾಹ್ನ 12 ಗಂಟೆಗೆ ಹೊರಟು, ಅದೇ ದಿನ ಕಲಬುರಗಿ ನಿಲ್ದಾಣ ರಾತ್ರಿ 10:15 ಗಂಟೆಗೆ ತಲುಪಲಿದೆ. ರೈಲು ಸಂಖ್ಯೆ 06232 ಅಕ್ಟೋಬರ್ 29 ರಂದು ಕಲಬುರಗಿಯಿಂದ ರಾತ್ರಿ 11:30 ಗಂಟೆಗೆ ಹೊರಟು, ಮರುದಿನ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣಕ್ಕೆ ಬೆಳಿಗ್ಗೆ 11:15 ಗಂಟೆಗೆ ತಲುಪಲಿದೆ. ನಿಲುಗಡೆಗಳು: ಈ ರೈಲು ಎರಡೂ ದಿಕ್ಕುಗಳಲ್ಲಿ ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು,…
ಬೆಂಗಳೂರ : ಭಾರತೀಯ ಜನತಾ ಪಕ್ಷದಿಂದ ನಡೆದ ಸದಸ್ಯತ್ವ ಅಭಿಯಾನದಲ್ಲಿ ಔರಾದ(ಬಿ) ಮಂಡಲವು ರಾಜ್ಯದಲ್ಲಿ ಐದನೇ ಸ್ಥಾನ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಮೊದಲ ಸ್ಥಾನ ಪಡೆದಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು.ಬಿ ಚವ್ಹಾಣ ಅವರನ್ನು ಸೋಮವಾರ ಬೆಂಗಳೂರಿನ ಜಗನ್ನಾಥ ಭವನದಲ್ಲಿ ಗೌರವಿಸಿದರು. ಬಳಿಕ ಮಾತನಾಡಿದ ಶಾಸಕ ಪ್ರಭು ಚವ್ಹಾಣ ಅವರು, ಔರಾದ(ಬಿ) ಮಂಡಲದಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದ ಕಾರ್ಯಕರ್ತರು ಪ್ರತಿ ಬೂತ್ಗಳಲ್ಲಿ ಓಡಾಡಿ ನಿರಂತರ ಶ್ರಮ ವಹಿಸಿದ್ದಾರೆ. ಅವರ ಪರಿಶ್ರಮದಿಂದಾಗಿ ಅಭಿಯಾನ ಯಶಸ್ವಿಯಾಗಿ ನಡೆಯಲು ಸಾಧ್ಯವಾಗಿದೆ. ಈ ಸನ್ಮಾನವನ್ನು ಮಂಡಲದ ಎಲ್ಲ ಕಾರ್ಯಕರ್ತರಿಗೆ ಅರ್ಪಿಸುತ್ತೇನೆ ಎಂದು ಹೇಳಿದರು. ಅಭಿಯಾನ ಆರಂಭವಾದ ನಂತರ ತಾಲ್ಲೂಕು ಮಟ್ಟದಲ್ಲಿ ಕಾರ್ಯಾಗಾರವನ್ನು ಆಯೋಜಿಸಿ ಕಾರ್ಯಕರ್ತರು ಅಭಿಯಾನದಲ್ಲಿ ಹೇಗೆ ಕೆಲಸ ಮಾಡಬೇಕೆಂದು ತಿಳುವಳಿಕೆ ಮೂಡಿಸುವ ಕೆಲಸ ಮಾಡಲಾಗಿತ್ತು. ಮಹಾಶಕ್ತಿ ಕೇಂದ್ರ, ಶಕ್ತಿ ಕೆಂದ್ರ ಹಾಗೂ ಎಲ್ಲ ಬೂತ್ಗಳಲ್ಲಿ ಸಭೆಗಳನ್ನು ನಡೆಸಲಾಗಿದೆ. ಜಿಲ್ಲಾಧ್ಯಕ್ಷರಾದ ಸೋಮನಾಥ ಪಾಟೀಲ ಹಾಗೂ…
ಚನ್ನಪಟ್ಟಣ/ರಾಮನಗರ: ಕಾಂಗ್ರೆಸ್ ನಾಯಕರು ನನ್ನನ್ನು ನಿಂದನೆ ಮಾಡಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ನಾನು ಅಭಿವೃದ್ದಿ ವಿಚಾರ ಇಟ್ಟುಕೊಂಡು ಪ್ರಚಾರ ಮಾಡುತ್ತಿದ್ದೇನೆ. ಅವರಿಗೂ ನನಗೂ ಇರುವ ವ್ಯತ್ಯಾಸ ಇಷ್ಟೇ ಎಂದು ಕೇಂದ್ರ ಸಚಿವರಾದ HD ಕುಮಾರಸ್ವಾಮಿ ಅವರು ಹೇಳಿದರು. ಸ್ಥಳೀಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಚನ್ನಪಟ್ಟಣ – ರಾಮನಗರ ನಡುವೆ ಬೃಹತ್ ಕೈಗಾರಿಕೆ ಒಂದನ್ನು ಸ್ಥಾಪನೆ ಮಾಡುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅವರು ಭರವಸೆ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಮೇಲೆ ನಂಬಿಕೆ ಇರಿಸಿ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆಗಳನ್ನು ನೀಡಿದ್ದಾರೆ. ಎರಡೂ ಮಹತ್ವದ ಖಾತೆಗಳಾಗಿದ್ದು, ದೇವರ ಅನುಗ್ರಹ ಜನರ ಆಶೀರ್ವಾದದಿಂದ ಸಿಕ್ಕಿರುವ ಈ ಅವಕಾಶದಿಂದ ರಾಮನಗರ ಜಿಲ್ಲೆಯ ಜನರಿಗೆ ಏನಾದರೂ ಒಳ್ಳೆಯದು ಮಾಡುತ್ತೇನೆ ಎಂದು ಅವರು ಒತ್ತಿ ಹೇಳಿದರು. ನಾವು ಟಿಕೆಟ್ ಕೊಡುತ್ತೇವೆ ಎಂದೆವು. ಬಿಜೆಪಿ ಕೂಡ ಟಿಕೆಟ್ ಕೊಡಲು ಮುಂದಾಗಿತ್ತು. ಬಿಜೆಪಿ ವರಿಷ್ಠ ನಾಯಕರ ಮಾತಿಗೆ ತಲೆಬಾಗಿ ನಾವು ಚನ್ನಪಟ್ಟಣ ಕ್ಷೇತ್ರವನ್ನು ಬಿಟ್ಟುಕೊಡಲು ನಿರ್ಧಾರ ಮಾಡಿದ್ದೆವು.…
ಚನ್ನಪಟ್ಟಣ: ಮೈಸೂರು ರಾಜ ಮನೆತನದ ಬಗ್ಗೆ ಈ ಸರ್ಕಾರ ದ್ವೇಷ ಸಾಧನೆ ಮಾಡುತ್ತಿದೆ. ರಾಜ್ಯದ ರಾಜ್ಯದ ಅಭಿವೃದ್ಧಿಗೆ ಮಹೋನ್ನತ ಕೊಡುಗೆ ನೀಡಿರುವ ಆ ಕುಟುಂಬಕ್ಕೆ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಕೂಡ್ಲೂರು ಗ್ರಾಮದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದರು. ಚಾಮುಂಡೇಶ್ವರಿ ತಾಯಿ ಅರಸು ಮನೆತನದ ದೇವತೆ. ಅವರ ಕುಟುಂಬದ ಆರಾಧ್ಯದೈವ. ಅವರ ಮನೆತನದಿಂದ ದೇವರನ್ನು ದೂರ ಮಾಡುವ ಕೇಡಿನ ಕೆಲಸ ಮಾಡುತ್ತಿದೆ ಈ ಸರ್ಕಾರ ಎಂದು ಬೇಸರ ವ್ಯಕ್ತಪಡಿಸಿದರು ಸಚಿವರು. ಚಾಮುಂಡೇಶ್ವರಿ ಪುಣ್ಯಕ್ಷೇತ್ರ ಅರಸರ ಉಸ್ತುವಾರಿತಲ್ಲಿಯೇ ಇತ್ತು. ಆ ಕ್ಷೇತ್ರದ ಅಭಿವೃದ್ಧಿಗೆ ಒಡೆಯರ್ ಸಾಕಷ್ಟು ಕೆಲಸ ಮಾಡಿದೆ. ರಾಜ್ಯದ ಅಭಿವೃದ್ಧಿಗೆ, ನೀರಾವರಿ, ಶಿಕ್ಷಣ, ಕೈಗಾರಿಕಾಭಿವೃದ್ಧಿಗೆ ಮಹಾರಾಜರು ಅನನ್ಯ ಕೊಡುಗೆ ನೀಡಿದ್ದಾರೆ. ಅಂತಹ ಕುಟುಂಬಕ್ಕೆ ಸಿದ್ದರಾಮಯ್ಯ ಇನ್ನಿಲ್ಲದ ಕಿರುಕುಳ ಕೊಡುತ್ತಿದೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು. ಚಾಮುಂಡೇಶ್ವರಿ ಕ್ಷೇತ್ರದ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಇಂದು ಮತದಾನ ನಡೆಯಿತು. ಮತದಾನದ ಬಳಿಕ ಮತಏಣಿಕೆ ಕೂಡ ನಡೆದು, ಈಗ ಫಲಿತಾಂಶ ಹೊರ ಬಿದ್ದಿದೆ. ಸಾಗರ ತಾಲ್ಲೂಕು ಅರಣ್ಯ ಇಲಾಖೆ ಚುನಾವಣೆಯಲ್ಲಿ ಸಂತೋಷ್ ಕುಮಾರ್.ಎನ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಇಂದು ಮತದಾನ ನಡೆಯಿತು. ಇಂದು ಸಾಗರ ತಾಲ್ಲೂಕು ಅರಣ್ಯ ಇಲಾಖೆ ನೌಕರರ ಚುನಾವಣೆಯಲ್ಲಿ ಸಂತೋಷ್ ಕುಮಾರ್ ಎನ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ತಾಳಗುಪ್ಪ ವಲಯ ಉಪ ಅರಣ್ಯಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವಂತ ಸಂತೋಷ್ ಕುಮಾರ್ ಅವರು ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅರಣ್ಯ ಇಲಾಖೆಯಿಂದ ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಇಂದು ಮತದಾನ ನಡೆದು, ಮತಏಣಿಕೆ ಕೂಡ ಮುಕ್ತಾಯಗೊಂಡಿದೆ. ಸಂತೋಷ್ ಕುಮಾರ್ ಎನ್ ಅವರು 63 ಮತಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಂತೋಷ್ ಕುಮಾರ್.ಎನ್ 63 ಮತಗಳನ್ನು ಪಡೆದ್ರೇ, ನಾಗಭೂಷಣ್ 43 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಈ…
ಬೆಂಗಳೂರು: ವಕ್ಫ್ ಬೋರ್ಡ್ ನಿಂದ ಯಾವುದೇ ರೈತರಿಗೂ ನೋಟಿಸ್ ನೀಡಿಲ್ಲ ಎಂಬುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ಸ್ಪಷ್ಟ ಪಡಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ವಕ್ಫ್ ಬೋರ್ಡ್ ನಿಂದ ಯಾರಿಗೂ ನೋಟಿಸ್ ನೀಡಿಲ್ಲ. ರೈತರಿಗೆ ಮಂಜೂರಾದ ಜಮೀನಿಗೆ ನೋಟಿಸ್ ನೀಡಿಲ್ಲ. 121 ರೈತರಿಗೆ ನೋಟಿಸ್ ನೀಡಲಾಗಿದೆ. ಈ ನೋಟಿಸ್ ವಾಪಾಸ್ಸು ನಾವು ಪಡೆಯುತ್ತೇವೆ ಎಂದರು. ವಕ್ಫ್ ಬೋರ್ಡ್ ನಿಂದ ರೈತರಿಗೆ ನೋಟಿಸ್ ನೀಡಿದ್ದಾರೆ ಎಂಬುದಾಗಿ ಬಿಜೆಪಿಯವರು ಉದ್ದೇಶಪೂರ್ವಕವಾಗಿ ಗಲಭೆ ಏಳಿಸುತ್ತಿದ್ದಾರೆ ಎಂಬುದಾಗಿ ವಾಗ್ಧಾಳಿ ನಡೆಸಿದರು. https://kannadanewsnow.com/kannada/ed-raids-cm-siddaramaiahs-close-aide-rakesh-papannas-residence/ https://kannadanewsnow.com/kannada/breaking-muda-scam-another-complaint-filed-with-ed-against-builder-manjunath/
ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪರಮಾಪ್ತ ರಾಕೇಶ್ ಪಾಪಣ್ಣ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ಮುಡಾ ಹಗರಣ ಸಂಬಂಧ ದಾಳಿ ನಡೆಸಿರುವುದಾಗಿ ತಿಳಿದು ಬಂದಿದೆ. ಮೈಸೂರಿನ ಹಿನಕಲ್ ಗ್ರಾಮದಲ್ಲಿರುವಂತ ಸಿಎಂ ಸಿದ್ಧರಾಮಯ್ಯ ಪರಮಾಪ್ತ, ಕೈ ಮುಖಂಡ ರಾಕೇಶ್ ಪಾಪಣ್ಣ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಡಾ ಹಗರಣದಲ್ಲಿ ರಾಕೇಶ್ ಪಾಪಣ್ಣ ಅವರ ಹೆಸರು ಕೂಡ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಇಡಿ ಅಧಿಕಾರಿಗಳಿಂದ ದಾಳಿಯನ್ನು ನಡೆಸಲಾಗಿದೆ. ರಾಕೇಶ್ ಪಾಪಣ್ಣ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. https://kannadanewsnow.com/kannada/ed-raids-houses-of-former-muda-commissioner-natesh-builder-manjunath-in-connection-with-muda-scam/ https://kannadanewsnow.com/kannada/breaking-muda-scam-another-complaint-filed-with-ed-against-builder-manjunath/
ಬೆಂಗಳೂರು: ಮುಡಾ ಹಗರಣ ಸಂಬಂಧ ಮುಡಾ ಮಾಜಿ ಆಯುಕ್ತ ನಟೇಶ್, ದಿನೇಶ್ ಕುಮಾರ್ ಹಾಗೂ ಬಿಲ್ಡರ್ ಮಂಜುನಾಥ್ ಮನೆಯ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ಮಹತ್ವದ ದಾಖಲೆಗಳನ್ನು ಪತ್ತೆ ಹಚ್ಚಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಬೆಂಗಳೂರಿನ ಮಲ್ಲೇಶ್ವರಂ 10ನೇ ಕ್ರಾಸ್ ನಲ್ಲಿರುವಂತ ಮುಡಾ ಮಾಜಿ ಆಯುಕ್ತ ನಟೇಶ್ ನಿವಾಸ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐವರು ಇಡಿ ಅಧಿಕಾರಿಗಳ ತಂಡವು ದಾಳಿ ನಡೆಸಿದ್ದು, ಅವರ ನಿವಾಸದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಇದಲ್ಲದೇ ಬಿಲ್ಡರ್ ಮಂಜುನಾಥ್ ಅವರ ಬೆಂಗಳೂರಿನ ಜೆಪಿ ನಗರದಲ್ಲಿರುವಂತ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಡಾ ಹಗರಣ ಸಂಬಂಧ ಇಬ್ಬರ ನಿವಾಸದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ಬೆಂಗಳೂರಿನ ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ನಿವಾಸದ ಮೇಲೂ ಇಡಿ ದಾಳಿ ನಡೆಸಿದೆ. ಬೆಂಗಳೂರಿನ ಹೆಬ್ಬಾಳದ ಬಾಣಸವಾಡಿ ರಸ್ತೆಯ ದೀಪಿಕಾ ರಾಯಲ್ ಅಪಾರ್ಮೆಂಟ್ ನಿವಾಸದ ಮೇಲೆ…
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ನಟ ದರ್ಶನ್ ಬಳ್ಳಾರಿ ಜೈಲುಪಾಲಾಗಿದ್ದಾರೆ. ಅವರು ಜಾಮೀನಿಗಾಗಿ ಸಲ್ಲಿಸಿದ್ದಂತ ಅರ್ಜಿಯನ್ನು ಸಿಸಿಹೆಚ್ ನ್ಯಾಯಾಲಯವು ವಜಾಗೊಳಿಸಿತ್ತು. ಈ ಹಿನ್ನಲೆಯಲ್ಲಿ ಹೈಕೋರ್ಟ್ ಮೊರೆ ಹೋಗಿದ್ದರು. ಇಂದು ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು, ಜಾಮೀನು ಅರ್ಜಿಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ. ಈ ಮೂಲಕ ನಟ ದರ್ಶನ್ ಗೆ ಇಂದು ಕೂಡ ರಿಲೀಫ್ ಸಿಗದಂತೆ ಆಗಿದೆ. ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ ನ್ಯಾಯಮೂರ್ತಿ ಎಸ್ ವಿಶ್ವಚಿತ್ ಅವರನ್ನೊಳಗೊಂಡಂತ ನ್ಯಾಯಪೀಠವು ನಡೆಸಿತು. ಪ್ರಕರಣ ಸಂಬಂಧ ವರದಿಯನ್ನು ನೀಡಲು ನಿರ್ದೇಶಿಸಿದ್ದರಿಂದಾಗಿ ಜೈಲು ಅಧಿಕಾರಿಗಳು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ನಟ ದರ್ಶನ್ ಪ್ರಕರಣದ ವರದಿಯನ್ನು ಸಲ್ಲಿಸಿತು. ಈ ಬಳಿಕ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ ಮುಂದೂಡಿಕೆ ಮಾಡಿದೆ. https://kannadanewsnow.com/kannada/another-inhuman-incident-in-the-state-dalit-huts-set-on-fire-in-belagavi-for-grazing-land/ https://kannadanewsnow.com/kannada/breaking-muda-scam-another-complaint-filed-with-ed-against-builder-manjunath/
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಮಿತಿ ರಚನೆ, ನೂತನ ಪ್ರವಾಸೋದ್ಯಮ ನೀತಿ ಜಾರಿ ಸೇರಿದಂತೆ ವಿವಿಧ ಮಹತ್ವದ ನಿರ್ಧಾರಗಳಿಗೆ ಅನುಮೋದನೆ ನೀಡಲಾಗಿದೆ. ಇಂದಿನ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಸಚಿವ ಹೆಚ್.ಕೆ ಪಾಟೀಲ್ ಅವರು, ಕೃಷಿ ಅಭಿವೃದ್ಧಿ ಏಜೆನ್ಸಿ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ. ಬೀಜೋತ್ಪಾದನಾ ಕೇಂದ್ರಗಳು,ರೈತ ಸಂಪರ್ಕ ಕೇಂದ್ರ, ಕೃಷಿ ಯಂತ್ರ ಕೇಂದ್ರ,ಜೈವಿಕ ನಿಯಂತ್ರಣ ಪ್ರಯೋಗಾಲಯ, ಇದೆಲ್ಲವುಗಳನ್ನೂ ಒಂದೇ ಕಡೆ ತರುವ ನಿರ್ಧಾರ ಕೈಗೊಳ್ಳಲಾಗಿದೆ. ಹಾಗಾಗಿ ಕೃಷಿ ಅಭಿವೃದ್ಧಿ ಏಜೆನ್ಸಿ ಸ್ಥಾಪನೆ ಮಾಡಲಾಗುತ್ತಿದೆ ಎಂದರು. ಮೂರು ಕ್ಷೇತ್ರಗಳಿಗೆ ಉಪಚುನಾವಣೆ, ಮಾದರಿ ನೀತಿ ಸಂಹಿತೆಯನ್ನಗಮಿಸಿದ್ದೇವೆ. ಗುತ್ತಿಗೆ ಆದಾರದ ಮೇಲೆ 12 ಮಂದಿ ನೇಮಕಕ್ಕೆ ನಿರ್ಧರಿಸಲಾಗಿದೆ. ಮಾರುತಿ ಪ್ರಸನ್ನ ಮೇಲಿನ ತನಿಖೆ ಶಿಫಾರಸು ವಾಪಸ್, ಲೋಕಾಯುಕ್ತ ತನಿಖೆ ಶಿಫಾರಸು ವಾಪಸ್ ಗೆ ನಿರ್ಧರಿಸಲಾಗಿದೆ ಎಂದರು. ಕರ್ನಾಟಕ ಸರುಕು, ತೆರಿಗೆ ತಿದ್ದುಪಡಿ ವಿಧೇಯಕಕ್ಕೆ ಒಪ್ಪಿಗೆ ನೀಡಲಾಗಿದೆ. ವಿವಾದಿತ…













