Author: kannadanewsnow09

ಮೈಸೂರು : ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಗ್ಯಾರಂಟಿಗಳನ್ನು ಮರುಪರಿಶೀಲಿಸಲಾಗುವುದೇ ಎಂಬ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುವುದಿಲ್ಲ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂದು ನ್ಯಾಯಾಲಯದ ಆದೇಶದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ನ್ಯಾಯಾಲಯದ ಆದೇಶದ ಮೇಲೆ ನಾನು ಪ್ರತಿಕ್ರಿಯೆ ಎಂದರು. ಬಿಜೆಪಿ ಹಾಗೂ ಜೆಡಿಎಸ್ ಈ ಪ್ರಕರಣದಲ್ಲಿ ಕಾಂಗ್ರೆಸ್‍ನದ್ದು ರಾಜಕೀಯ ಷಡ್ಯಂತರ ಎಂದು ಆರೋಪಿಸಿರುವ ಬಗ್ಗೆ ಮಾತನಾಡಿ ದೂರು ನೀಡಿರುವವರು ಯಾರು? ಸರ್ಕಾರವೇ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷ ಧ್ವೇಷದ ರಾಜಕಾರಣ ಮಾಡುವುದಿಲ್ಲ. ಕಾನೂನು ರೀತಿ ಕೆಲಸ ಮಾಡುವ ಪೋಲೀಸರ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಒಪ್ಪಿ ಅದರಂತೆ ನಡೆದುಕೊಳ್ಳಬೇಕಾಗುತ್ತದೆ ಎಂದರು. ನೆಲದ ಕಾನೂನನ್ನು ನಾವು ಗೌರವಿಸುತ್ತೇವೆ ದೇವೇಗೌಡರ ಕುಟುಂಬವನ್ನು ನಾಶ…

Read More

ಉತ್ತರ ಪ್ರದೇಶ:  ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಭವ್ಯವಾದ ರಾಮ ಮಂದಿರವು ಜೈಶ್-ಎ-ಮೊಹಮ್ಮದ್ (ಜೆಎಂ) ಅನ್ನು ಸ್ಪೋಟಿಸುವುದಾಗಿ ಬೆದರಿಕೆ ಹಾಕಿರೋದಾಗಿ ತಿಳಿದು ಬಂದಿದೆ. ಈ ಬಗ್ಗೆ ಆಡಿಯೋ ಕ್ಲಿಪ್ ವೈರಲ್ ಆಗಿದ್ದು, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯು ಅಯೋಧ್ಯೆ ದೇವಾಲಯವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದೆ ಎಂದು ದೈನಿಕ್ ಜಾಗರಣ್ ಮೂಲ ಆಧಾರಿತ ವರದಿಯಲ್ಲಿ ತಿಳಿಸಿದೆ. ಆದಾಗ್ಯೂ, ಆಡಿಯೊ ಕ್ಲಿಪ್ನ ಸತ್ಯಾಸತ್ಯತೆಯನ್ನು ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗಲಿಲ್ಲ. ವೈರಲ್ ಆಗಿರುವ ಆಡಿಯೊ ಕ್ಲಿಪ್ನಲ್ಲಿ ಜೆಇಎಂ ಕಾರ್ಯಕರ್ತನೊಬ್ಬ ದೇವಾಲಯದ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದಾನೆ. ದೇವಾಲಯವನ್ನು ನೆಲಸಮಗೊಳಿಸಬೇಕಾಗಿದೆ ಎಂದು ಹೇಳುವ ಮೊದಲು ಅವರು ಮೂವರು ಸಹ ಭಯೋತ್ಪಾದಕರ ಹತ್ಯೆಯನ್ನು ಉಲ್ಲೇಖಿಸುವುದನ್ನು ಕೇಳಬಹುದು. ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಬಿಗಿ ಭದ್ರತೆ ಆಡಿಯೊ ಕ್ಲಿಪ್ ಹೊರಬಂದ ನಂತರ, ಭದ್ರತಾ ಮತ್ತು ಗುಪ್ತಚರ ಸಂಸ್ಥೆಗಳು ಜಾಗರೂಕತೆಯನ್ನು ಹೆಚ್ಚಿಸಿವೆ ಎಂದು ದೈನಿಕ್ ಜಾಗರಣ್ ತನ್ನ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ಭವ್ಯವಾದ ರಾಮ ಮಂದಿರ ಮತ್ತು ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ಭದ್ರತೆಯನ್ನು…

Read More

ಮಂಡ್ಯ: ಜೂನ್.16ರಂದು ಮಂಡ್ಯದಲ್ಲಿ ಕೃತಜ್ಞತಾ ಸಮಾವೇಶದ ಮೂಲಕ ಕೇಂದ್ರ ಸಚಿವರಾದಂತ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಕೃತಜ್ಞತೆ ಸಲ್ಲಿಸಲು ನಿಗದಿಯಾಗಿದ್ದ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ. ಮಾಜಿ ಸಿಎಂ ಯಡಿಯೂರಪ್ಪಗೆ ಕಾನೂನು ಸಂಕಷ್ಟ ಹಿನ್ನಲೆಯಲ್ಲಿ ಹೆಚ್ಡಿಕೆ ಕೃತಜ್ಞತಾ ಸಮಾವೇಶ ಮುಂದೂಡಲಾಗಿದೆ. ಭಾನುವಾರ ಮಂಡ್ಯದಲ್ಲಿ ನಡೆಯಬೇಕಿದ್ದ ಹೆಚ್ಡಿಕೆ ಕೃತಜ್ಞತಾ ಸಮಾವೇಶ ನಡೆಸಲು ನಿಗದಿಯಾಗಿತ್ತು. ಜೂನ್ 16ರ ಸಂಜೆ 5 ಗಂಟೆಗೆ ಮಂಡ್ಯದ ಸ್ಟೇಡಿಯಂನಲ್ಲಿ ಏರ್ಪಡಿಸಿದ್ದ ಬೃಹತ್ ಅಭಿನಂದನಾ ಸಮಾರಂಭ. ನೆನ್ನೆಯಷ್ಟೆ ಕಾರ್ಯಕ್ರಮದ ಬಗ್ಗೆ ಮಂಡ್ಯದಲ್ಲಿ ಜೆಡಿಎಸ್ ನಾಯಕರ ಸುದ್ದಿಗೋಷ್ಠಿ ನಡೆಸಿದ್ದರು. ಇದೀಗ ಮಾಜಿ ಸಿಎಂ ಯಡಿಯೂರಪ್ಪಗೆ ಕಾನೂನು ಸಂಕಷ್ಟ ಹಿನ್ನಲೆ ಕಾರ್ಯಕ್ರಮ ಮುಂದೂಡಿಕೆ ಮಾಡಲಾಗಿದೆ. ಹೆಚ್ಡಿಕೆ ಕೃತಜ್ಞತಾ ಸಮಾವೇಶಕ್ಕೆ ಯಡಿಯೂರಪ್ಪರನ್ನ ಆಹ್ವಾನವನ್ನು ದಳಪತಿಗಳಿಗೆ ನೀಡಲಾಗಿತ್ತು. ಬೃಹತ್ ಕೃತಜ್ಞತಾ ಸಮಾವೇಶ ಮುಂದೂಡಿ ಸರಳವಾಗಿ ಕಾರ್ಯಕ್ರಮ ಆಯೋಜನೆಯಾಗಿದೆ. ನಾಳೆ ಮಂಡ್ಯಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆಗಮಿಸಲಿದ್ದಾರೆ. ನಾಳೆ ನೂತನ ಸಂಸದರ ಕಚೇರಿ ಉದ್ಘಾಟನೆ ಕೂಡ ಮಾಡಲಿದ್ದಾರೆ. ಮಂಡ್ಯದ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಸಂಸದರ ಕಚೇರಿಯಾಗಿದೆ. ನಾಳೆ ಮಂಡ್ಯಕ್ಕೆ ಕೇಂದ್ರ…

Read More

ಬೆಂಗಳೂರು: ಕೆಲವು ನಾಯಕರು ನನ್ನ ಮುಗಿಸುವ ಪ್ರಯತ್ನ ಮಾಡುತ್ತಲೇ ಇದ್ದಾರೆ. ಅವರ ಪ್ರಯತ್ನ ಅವರು ಮಾಡಲಿ. ನನ್ನ ಮೇಲೆ ಯಾವುದಾದರೂ ಕೇಸ್ ಇದೆಯಾ ಎಂದು ಹುಡುಕುತ್ತಿದ್ದಾರೆ. ಕುಮಾರಸ್ವಾಮಿಯನ್ನು ಜೈಲಿಗೆ ಹಾಕಬೇಕು ಪ್ರಯತ್ನ ನಡೆಯುತ್ತಿದೆ. ಯಾವುದೋ ಹಳೇ ಕೇಸ್ ಹುಡುಕುತ್ತಿದ್ದಾರೆ. ಅವರಿಗೆ ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತನೆ ಇಲ್ಲ. ಕುಮಾರಸ್ವಾಮಿಯನ್ನು ಹೇಗೆ ಮುಗಿಸಿಬೇಕು ಎಂಬುದು ಪ್ಲಾನ್ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು, ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯಪಾಲರನ್ನು ಭೇಟಿಯಾದ ರಾಜಭವನದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ದೇವೆಗೌಡರ ಕುಟುಂಬದ ವರ್ಚಸ್ಸು ಹಾಳು ಮಾಡಿದ್ದು ಆಯಿತು. ಈಗ ಯಡಿಯೂರಪ್ಪ ಅವರನ್ನು ಮುಗಿಸಲು ಹೊರಟಿದ್ದಾರೆ. ಅದಾದ ಮೇಲೆ ನನ್ನನ್ನು ಗುರಿ ಮಾಡಿದ್ದಾರೆ ಎಂದು ದೂರಿದರು. ಯಡಿಯೂರಪ್ಪ ಅವರ ವಿಚಾರದಲ್ಲಿ ರಾಜ್ಯ ಸರ್ಕಾರ ಬಹಳ ಸಂಶಯಾಸ್ಪದವಾಗಿ ನಡೆದುಕೊಳ್ಳುತ್ತಿದೆ. ನನಗೆ ಈ ಸರ್ಕಾರದ ನಾಲ್ಕು ತಿಂಗಳ ನಡುವಳಿಕೆ ಮೇಲೆ ರಾಜ್ಯವೇ ಅನುಮಾನ ಪಡುವಂತೆ ಕಾಣುತ್ತಿದೆ. ಈ ಸರ್ಕಾರದಲ್ಲಿ ಕಾನೂನು ಪಂಡಿತರು ಬಹಳ ಜನ…

Read More

ಬೆಂಗಳೂರು: ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿಕೊಂಡು, ಜನಪರ ಕೆಲಸದಲ್ಲಿ ತೊಡಗಿರುವಂತ ಹೆಚ್.ಡಿ ಕುಮಾರಸ್ವಾಮಿ ಅವರು, ನಾಳೆ ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಗೆದ್ದು ಈಗ ಹೆಚ್.ಡಿ ಕುಮಾರಸ್ವಾಮಿ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿದ್ದಾರೆ. ಈ ಹಿನ್ನಲೆಯಲ್ಲಿ ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಕಡ್ಡಾಯವಾಗಿದೆ. ಈ ಹಿನ್ನಲೆಯಲ್ಲಿ ನಾಳೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ಕೇಂದ್ರ ಸಚಿವರಾದ ಮೇಲೆ ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡಿರುವ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ವಿಮಾನ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತಿಸಿದರು. ಬಳಿಕ ಸಾದಹಳ್ಳಿ ಗೇಟ್ ಟೋಲ್ ಬಳಿಗೆ ಆಗಮಿಸಿದ ಕೇಂದ್ರ ಸಚಿವರನ್ನು ಬೃಹತ್ ಸೇಬಿನ ಹಾರ, ಹೂವಿನ ಹಾರ ಹಾಕಿ ಸ್ವಾಗತ ಮಾಡಿದರು ಕಾರ್ಯಕರ್ತರು. ಪಕ್ಷದ ಕಚೇರಿಯಲ್ಲಿ ನಡೆದ ಅಭಿನಂದನಾ ಸಭೆಯಲ್ಲಿ ಜೆಡಿಎಸ್ ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್ ಗೌಡ…

Read More

ಬೆಂಗಳೂರು: ನಾನು ಕೇಂದ್ರ ಸಚಿವನಾಗಿದ್ದು ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರಕ್ಕೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅದಕ್ಕೆ ನನ್ನ ವಿರುದ್ಧ ಒಳಸಂಚು ನಡೆಸುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ರಾಜ್ಯಪಾಲರನ್ನು ಭೇಟಿಯಾದ ರಾಜಭವನದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ದೇವೆಗೌಡರ ಕುಟುಂಬದ ವರ್ಚಸ್ಸು ಹಾಳು ಮಾಡಿದ್ದು ಆಯಿತು. ಈಗ ಯಡಿಯೂರಪ್ಪ ಅವರನ್ನು ಮುಗಿಸಲು ಹೊರಟಿದ್ದಾರೆ. ಅದಾದ ಮೇಲೆ ನನ್ನನ್ನು ಗುರಿ ಮಾಡಿದ್ದಾರೆ ಎಂದು ದೂರಿದರು. ಯಡಿಯೂರಪ್ಪ ಅವರ ವಿಚಾರದಲ್ಲಿ ರಾಜ್ಯ ಸರ್ಕಾರ ಬಹಳ ಸಂಶಯಾಸ್ಪದವಾಗಿ ನಡೆದುಕೊಳ್ಳುತ್ತಿದೆ. ನನಗೆ ಈ ಸರ್ಕಾರದ ನಾಲ್ಕು ತಿಂಗಳ ನಡುವಳಿಕೆ ಮೇಲೆ ರಾಜ್ಯವೇ ಅನುಮಾನ ಪಡುವಂತೆ ಕಾಣುತ್ತಿದೆ. ಈ ಸರ್ಕಾರದಲ್ಲಿ ಕಾನೂನು ಪಂಡಿತರು ಬಹಳ ಜನ ಇದ್ದಾರೆ. ಅವರಿಗೆ ಹೇಳಿ, ಕುಮಾರಸ್ವಾಮಿಯದ್ದು ಏನಾದರೂ ಸಿಗುತ್ತದೆಯಾ ನೋಡಿ ಎಂದು ಕೆದಕಲು ಹೇಳಿದ್ದಾರೆ. ಅಂತಹ ಸಿಎಂ ಸಿದ್ದರಾಮಯ್ಯ ಅವರು ಈಗ ನಾಲ್ಕು ತಿಂಗಳ ನಂತರ ಯಡಿಯೂರಪ್ಪ ಅವರ ಕೇಸ್ ಕೆದಕ್ಕಿದ್ದಾರೆ. ನನ್ನ ಮುಗಿಸಲು ಪ್ರಯತ್ನ ಮಾಡ್ತಿದ್ದಾರೆ…

Read More

ಶಿವಮೊಗ್ಗ: ವನ್ಯಜೀವಿಗಳು ಮತ್ತು ಪ್ರಾಣಿಸಂಕುಲದ ಬಗ್ಗೆ ಅರಿವು ಮೂಡಿಸಲು ಪರಿಸರ ಪ್ರವಾಸೋದ್ಯಮವು ಅತ್ಯವಶ್ಯವಾಗಿದೆ. ಇದನ್ನು ಉತ್ತೇಜಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕರ್ನಾಟಕ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಹೆಚ್ಚುವರಿ ಮುಖ್ಯ ಸಂರಕ್ಷಣಾಧಿಕಾರಿ ಹಾಗು ಕರ್ನಾಟಕ ಪರಿಸರ ಪ್ರವಾಸೋದ್ಯಮ ಮಂಡಳಿ ಕಾರ್ಯನಿರ್ವಾಹಕ ಅಧಿಕಾರಿ ಕುಮಾರ್ ಪುಷ್ಕರ್ ಅಭಿಪ್ರಾಯಪಟ್ಟರು. ಭದ್ರಾ ಹುಲಿ ಸಂರಕ್ಷಿತ ಅರಣ್ಯ 25ನೇ ವರ್ಷದ ವಿಶೇಷ ಸಂದರ್ಭದಲ್ಲಿ ಕರ್ನಾಟಕ ಅರಣ್ಯ ಇಲಾಖೆ, ಕರ್ನಾಟಕ ಪರಿಸರ ಪ್ರವಾಸೋದ್ಯಮ ಮಂಡಳಿ, ಭದ್ರಾ ಹುಲಿ ಸಂರಕ್ಷಿತ ಅರಣ್ಯ ಮಂಡಳಿ ಹಾಗು ಕುವೆಂಪು ವಿ ವಿ ಸಂಸ್ಥೆಗಳು ಜಂಟಿಯಾಗಿ 11ನೇ ಹಕ್ಕಿ ಹಬ್ಬವನ್ನು ಭದ್ರಾ ಹುಲಿ ಸಂರಕ್ಷಿತ ಅರಣ್ಯ ಚಿಕ್ಕಮಗಳೂರಿನಲ್ಲಿ ಜೂ. 14-16 ರ ವರೆಗೆ 3 ದಿನಗಳ ಕಾರ್ಯಕ್ರಮ ಹಮ್ಮಿಕೊಂಡಿದ್ದು, ವಿವಿಯ ಬಸವ ಸಭಾ ಭವನದಲ್ಲಿ ಶುಕ್ರವಾರ ಹಕ್ಕಿ ಹಬ್ಬ ಉದ್ಘಾಟಿಸಿ ಅವರು ಮಾತನಾಡಿದರು. ಪರಿಸರ ಪ್ರವಾಸೋದ್ಯಮ ನೀತಿಯನ್ನು ರೂಪಿಸಿದ್ದು ಸದ್ಯದಲ್ಲೇ ಅನುಮೋದನೆ ಪಡೆಯಲಾಗುವುದು ಜೊತೆಗೆ ಪರಿಸರ ಪ್ರವಾಸೋದ್ಯಮದ ಕುರಿತು ಸಂಶೋಧನೆಗಳನ್ನು ನಡೆಸಲಾಗುತ್ತಿದೆ.…

Read More

ಬೆಂಗಳೂರು: “ಪಕ್ಷದ ಮೂಲ ಸಿದ್ಧಾಂತವನ್ನು ಯಾವ ಕಾರಣಕ್ಕೂ ಕೈ ಬಿಡಬಾರದು ಎಂದು ಹಿರಿಯ ನಾಯಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೆಪಿಸಿಸಿ ಕಚೇರಿಯ ಇಂದಿರಾ ಗಾಂಧಿ ಭವನದಲ್ಲಿ ಪಕ್ಷದ ಹಿರಿಯ ನಾಯಕರ ಸಭೆ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಶಿವಕುಮಾರ್ ಅವರು ಹೇಳಿದ್ಧಿಷ್ಟು; “ಕಾಂಗ್ರೆಸ್ ಅನ್ನು ಕಾರ್ಯಕರ್ತರ ಪಕ್ಷವಾಗಿ ಮಾಡಲು ಹಾಗೂ ತಳಮಟ್ಟದಿಂದ ಪಕ್ಷ ಬಲಪಡಿಸುವ ಬಗ್ಗೆ ನಮ್ಮ ನಾಯಕರು ಸಲಹೆ ನೀಡಿದ್ದಾರೆ. ಪಕ್ಷ ಸಂಘಟನೆ ಬಗ್ಗೆಯೂ ಮಾರ್ಗದರ್ಶನಗಳನ್ನು ನೀಡಿದ್ದಾರೆ. ಕೆಲವೊಬ್ಬರು ಟ್ರ್ಯಾಪ್ ಮಾಡಲು ಪ್ರಯತ್ನ ಪಡುತ್ತಾರೆ ನಿಗಮ ಮಂಡಳಿಗಳ ಅಧ್ಯಕ್ಷರುಗಳ ಸಭೆ ಕರೆದಿದ್ದು. ಜನರ ಭಾವನೆ ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು. ಜನರ ಬಳಿ ವರ್ತನೆ ಹೇಗಿರಬೇಕು, ಕೆಲಸಗಳನ್ನು ಹೇಗೆ ಮುನ್ನಡೆಸಿಕೊಂಡು ಹೋಗಬೇಕು ಎಂದು ಸಲಹೆ ನೀಡಲಾಗುವುದು. ಕೆಲವೊಂದಷ್ಟು ಜನ ಟ್ರ್ಯಾಪ್ ಮಾಡಲು ಪ್ರಯತ್ನ ಮಾಡುತ್ತಿರುತ್ತಾರೆ. ಬಹಳ ಬುದ್ದಿವಂತಿಕೆಯಿಂದ ಕೆಲಸ ಮಾಡಬೇಕು ಎಂದು ಸಲಹೆ ನೀಡಲಾಗುವುದು” ಎಂದರು. ಯಡಿಯೂರಪ್ಪ ಅವರ ವಿರುದ್ಧ ದ್ವೇಷ ರಾಜಕಾರಣ ಮಾಡಲಾಗುತ್ತಿದೆ…

Read More

ಬೆಂಗಳೂರು: “ಜಾಹೀರಾತು ವಿಚಾರದಲ್ಲಿ ರಾಹುಲ್ ಗಾಂಧಿ ಅವರ ವಿರುದ್ಧ ಸುಳ್ಳು ಕೇಸು ದಾಖಲಿಸಿರುವುದು ಯಾವ ರಾಜಕಾರಣ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಕಬ್ಬನ್ ಪಾರ್ಕಿನ ಬಾಲಭವನ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ಯಡಿಯೂರಪ್ಪ ಅವರ ವಿರುದ್ಧ ಕಾನೂನು ಪ್ರಕ್ರಿಯೆ ದ್ವೇಷದ ರಾಜಕಾರಣ, ರಾಹುಲ್ ಗಾಂಧಿ ಅವರು ಬಂದ ನಂತರ ಈ ಬೆಳವಣಿಗೆ ನಡೆಯುತ್ತಿದೆ ಎಂಬ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, ಅವರು ಉತ್ತರಿಸಿದ್ದು ಹೀಗೆ; “ನಾನು ಆ ಪ್ರಕರಣದ ಬಗ್ಗೆ ಹೆಚ್ಚು ಮಾಹಿತಿ ಪಡೆದಿಲ್ಲ. ಕಾಂಗ್ರೆಸ್ ಪಕ್ಷ ಯಾರ ಮೇಲೂ ದ್ವೇಷ ಮಾಡುವುದಿಲ್ಲ. ದ್ವೇಷ ರಾಜಕಾರಣದ ಬಗ್ಗೆ ನಾನು ಮಾತನಾಡಿದರೆ ವಿಚಾರ ಎಲ್ಲೆಲ್ಲೋ ಹೋಗುತ್ತದೆ. ಈ ವಿಚಾರದಲ್ಲಿ ನನಗೂ ಅಯ್ಯೋ ಎನಿಸುತ್ತದೆ. ಇಂತಹ ಕಠಿಣ ಪರಿಸ್ಥಿತಿಯನ್ನು ನಾವು ಅನುಭವಿಸಿದ್ದೇವೆ. ರಾಹುಲ್ ಗಾಂಧಿ ಅವರು ಬೆಂಗಳೂರಿಗೆ ಬಂದು ನ್ಯಾಯಾಲಯದ ಮುಂದೆ ಹಾಜರಾದರು. ಅವರ ವಿರುದ್ಧ ಕೇಸು ಹಾಕಿರುವುದು ಯಾವ ರಾಜಕಾರಣ? ಬಿಜೆಪಿಯ ವಿರುದ್ಧದ ಜಾಹೀರಾತಿಗೂ ರಾಹುಲ್…

Read More

ಬೆಂಗಳೂರು: 82 ವರ್ಷದ ಯಡಿಯೂರಪ್ಪ ಅವರ ಮೇಲೆ ಕಾಂಗ್ರೆಸ್‌ ಸೇಡಿನ ರಾಜಕಾರಣ ಮಾಡುತ್ತಿದೆ. ರಾಜ್ಯದ ರೈತ ನಾಯಕ ಯಡಿಯೂರಪ್ಪ ಅವರ ಮೇಲೆ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ. ಅವರನ್ನು ಜೈಲಿಗೆ ಕಳಿಸಲೇಬೇಕು ಎಂಬಂತೆ ಕಾಂಗ್ರೆಸ್‌ ಕೆಲಸ ಮಾಡುತ್ತಿದೆ. ಯಡಿಯೂರಪ್ಪ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿ ಯುವ ಕೆಲಸ ಮಾಡಲಾಗುತ್ತಿದೆ. ಅವರ ಪ್ರಯತ್ನ ಫಲಪ್ರದ ಆಗುವುದಿಲ್ಲ ಎಂದು ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು. ಕೇಂದ್ರ ಸಚಿವರಾದ ಮೇಲೆ ರಾಜ್ಯಕ್ಕೆ ಮೊದಲ ಭೇಟಿ ಕೊಟ್ಟ ವೇಳೆ ಜಾತ್ಯತೀತ ಜನತಾದಳ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಬೇಕು ಎನ್ನುವ ಷಡ್ಯಂತ್ರ ಆಯಿತು ಈಗ ಯಡಿಯೂರಪ್ಪ ಅವರ ಕುಟುಂಬವನ್ನು ರಾಜಕೀಯವಾಗಿ ಮುಗಿಸುವ ಕುತಂತ್ರ ಆರಂಭವಾಗಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು. ನಾಲ್ಕು ತಿಂಗಳ ಹಿಂದಿನ ಪ್ರಕರಣ ಇದು. ಇವತ್ತು ಯಡಿಯೂರಪ್ಪ ಅವರ ಮೇಲೆ ಜಾಮೀನು ರಹಿತ ಕೇಸ್ ಹಾಕಲು ಹೊರಟಿದ್ದಾರೆ.…

Read More