Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಇಂದು ಮಧ್ಯರಾತ್ರಿ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ನಡೆಯಲಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ. ಅಲ್ಲದೇ ಪರ್ಯಾಯ ರಸ್ತೆಗಳಲ್ಲಿ ಸಾಗುವಂತೆ ಬೆಂಗಳೂರು ನಗರ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ: 23.04.2024 ರಿಂದ ದಿನಾಂಕ: 24.04.2024 ರ ಬೆಳಗ್ಗೆ 06:00 ಗಂಟೆಯವರೆಗೆ ಇತಿಹಾಸ ಪ್ರಸಿದ್ದ ಶ್ರೀ ಧರ್ಮರಾಯಸ್ವಾಮಿ ಬೆಂಗಳೂರು ಕರಗದ ಉತ್ಸವದ ನಡೆಯುತ್ತಿದ್ದು, ಈ ಬೆಂಗಳೂರು ಕರಗದ ಉತ್ಸವಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿರುವುದರಿಂದ ತಿಗಳರ ಪೇಟೆಯಲ್ಲಿರುವ ಧರ್ಮರಾಯಸ್ವಾಮಿ ದೇವಸ್ಥಾನದ ಸುತ್ತಮುತ್ತ ತಾತ್ಕಾಲಿಕವಾಗಿ ಸಂಚಾರ ನಿರ್ಬಂಧಿಸಲಾಗಿರುತ್ತದೆ ಎಂದು ತಿಳಿಸಿದೆ. ಮೆರವಣಿಗೆಯು ಸಾಗುವ ಮಾರ್ಗ ಮೆರವಣಿಗೆಯು ನಗರ್ತಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಪ್ರಾರಂಭಗೊಂಡು ಕಬ್ಬನ್‌ಪೇಟೆ, ಗಾಣಿಗರಪೇಟೆ, ಅವೆನ್ಯೂರಸ್ತೆ ಮೂಲಕ ಕೆ.ಆರ್ ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇವಾಲಯಕ್ಕೆ ಬಂದು ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ಮೂಲಕ ರಾಣಾಸಿಂಣ್ ಪೇಟೆ, ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ, ಮಸ್ತಾನ್ ಸಾಹೇಬ್ ದರ್ಗಾ,…
ಬೆಂಗಳೂರು: ಕಿಯೋನಿಕ್ಸ್, ಎಂ ಎಸ್ ಐ ಎಲ್ ಸೇರಿದಂತೆ ಆರು ನಿಗಮ-ಮಂಡಳಿಗಳ ವಿವಿಧ ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಕರೆಯಲಾಗಿತ್ತು. ಸ್ಪರ್ಧಾತ್ಮಕ ಪರೀಕ್ಷೆ ಕೂಡ ನಡೆಸಲಾಗಿತ್ತು. ಈ ಹುದ್ದೆಗಳಿಗೆ ಈಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹುದ್ದೆವಾರು ತಾತ್ಕಾಲಿಕ ಅಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕೆಇಎ, ನಿಗಮ ಮಂಡಳಿಯ ವಿವಿಧ ವೃಂದದ ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಸಲಾಗಿತ್ತು. ಅಭ್ಯರ್ಥಿಗಳು ಪಡೆದಿರುವ ಅಂಕಗಳ ಆಧಾರದಲ್ಲಿ 725 ಹುದ್ದೆವಾರು ತಾತ್ಕಾಲಿಕ ಪಟ್ಟಿಯನ್ನು ಬಿಡುಗಡೆ ಮಾಡಿರುವುದಾಗಿ ತಿಳಿಸಿದೆ. ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ 41 ಹುದ್ದೆ, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ 386 ಹುದ್ದೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ 186 ಹುದ್ದೆ, ಎಂಎಸ್ಐಎಲ್ 72 ಹುದ್ದೆ, ಕಿಯೋನಿಕ್ಸ್ 26 ಹುದ್ದೆ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ 14 ಹುದ್ದೆ ಸೇರಿದಂತೆ ವಿವಿಧ ವೃಂದದ ಒಟ್ಟು 725 ಹುದ್ದೆಗಳಿಗೆ ಪರೀಕ್ಷೆ…
ಬೆಂಗಳೂರು: ನಗರದ ಬಿನ್ನಿಮಿಲ್ ಸಮೀಪದ ಟ್ಯಾಂಕ್ ಬಂಡ್ ರಸ್ತೆಯಲ್ಲಿ ಕಾರೊಂದರಲ್ಲಿ ಸಾಗಿಸುತ್ತಿದ್ದ 2 ಕೋಟಿ ರೂ ನಗದು ಹಣ ಬಿಜೆಪಿಗೆ ಸೇರಿರುವುದು ಖಚಿತವಾಗಿದೆ. ಈ ಸಂಬಂಧ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಬಿಜೆಪಿ ರಾಜ್ಯ ಕಚೇರಿ ಕಾರ್ಯದರ್ಶಿ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಮೂಲಕ ಲೋಕಸಭಾ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಚುನಾವಣಾ ಆಯೋಗ ಬಿಗ್ ಶಾಕ್ ನೀಡಿದೆ. ಲೋಕಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಬಿನ್ನಿಮಿಲ್ ಸಮೀಪದ ಟ್ಯಾಂಕ್ ಬಂಡ್ ರಸ್ತೆಯಲ್ಲಿ ಚುನಾವಮಾ ಆಯೋಗವು ತಪಾಸಣಾ ಕೇಂದ್ರ ತೆರೆದಿತ್ತು. ಏಪ್ರಿಲ್.20ರಂದು ಸಂಜೆ ಸುಮಾರು 4 ಗಂಟೆಗೆ ಆ ಮಾರ್ಗದಲ್ಲಿ ಬರುತ್ತಿದ್ದ ಕಾರೊಂದನ್ನು ಸ್ಥಿರ ಕಣ್ಗಾವಲು ತಂಡ ಹಾಗೂ ಪೊಲೀಸರು ತಪಾಸಣೆ ನಡೆಸಿದಾಗ 2 ಕೋಟಿ ನಗದು ಹಣವಿದ್ದ ಎರಡು ಬ್ಯಾಗ್ ಗಳು ಪತ್ತೆಯಾಗಿದ್ದವು. ಕಾರಿನಲ್ಲಿ ಪತ್ತೆಯಾದಂತ ಹಣದ ಬ್ಯಾಗ್ ಬಗ್ಗೆ ಕಾರಿನ ಚಾಲಕನನ್ನು ವಿಚಾರಣೆ ಮಾಡಿದಾಗ, ಹಣವನ್ನು ಮೈಸೂರಿಗೆ ಸಾಗಿಸುತ್ತಿರುವುದಾಗಿ ಹೇಳಿ, ಬಿಜೆಪಿ ಪತ್ರವನ್ನು ಹಾಜರುಪಡಿಸಿದ್ದರು.…
ಬೆಂಗಳೂರು: ಇಂದು ಐತಿಹಾಸಿಕ ಬೆಂಗಳೂರು ದ್ರೌಪದಮ್ಮ ಕರಗ ಶಕ್ತ್ಯೋತ್ಸವ ಮಧ್ಯರಾತ್ರಿ ನಡೆಯಲಿದೆ. ಇದಕ್ಕಾಗಿ ತಿಗಳರಪೇಟೆ, ಚಿಕ್ಕಪೇಟೆ, ಕಾರ್ಪೋರೇಷನ್ ಸೇರಿದಂತೆ ಹಳಏ ಬೆಂಗಳೂರು ಪ್ರದೇಶವನ್ನು ಸಿಂಗಾರಗೊಳಿಸಲಾಗಿದೆ. ಪ್ರತಿ ವರ್ಷ ಚೈತ್ರ ಮಾಸದಂದು ನಡೆಯಲಿರುವಂ ಬೆಂಗಳೂರು ಕರಗ ಶಕ್ತ್ಯೋತ್ಸವವು ಮಂಗಳವಾರ ಮಧ್ಯರಾತ್ರಿ 12.30ರಿಂದ ಆರಂಭಗೊಳ್ಳಲಿದೆ. ತಿಗಳರ ಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಆರಂಭವಾಗುವ ಕರಗ ಮೆರವಣಿಗೆ, ನಗರದ ವಿವಿಧ ಬಡಾವಣೆಗಳಿಗೆ ತೆರಳಿ, ಬುಧವಾರ ಮುಂಜಾನೆ ವಾಪಾಸ್ಸು ಧರ್ಮರಾಯನ ಸ್ವಾಮಿ ದೇವಸ್ಥಾನಕ್ಕೆ ಬಂದು ಸೇರಲಿದೆ. ಕರಗೋತ್ಸವಕ್ಕಾಗಿ ಕರಗ ವ್ಯವಸ್ಥಾಪನಾ ಸಮಿತಿ, ಬಿಬಿಎಂಪಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ಬಾರಿಯ ಕರಗಕ್ಕೆ 8 ಲಕ್ಷಕ್ಕೂ ಹೆಚ್ಚಿನ ಭಕ್ತರು ಪಾಲ್ಗೊಳ್ಳೋ ನಿರೀಕ್ಷೆಯಿದೆ. ಹೀಗಿದೆ ಕರಗ ಸಾಗುವ ಮಾರ್ಗ ಮೊದಲಿಗೆ ಧರ್ಮರಾಯ ಸ್ವಾಮಿ ದೇವಸ್ಥಾನ ಪ್ರದಕ್ಷಿಣೆ ಹಾಕಿ, ದ್ರೌಪದಮ್ಮ ಕರಗ ಹೊರಡಲಿದೆ. ಅಲ್ಲಿಂದ ಕುಂಬಾರಪೇಟೆ ರಸ್ತೆ ಮೂಲಕ ಸಾಗಿ, ರಾಜ ಮಾರುಕಟ್ಟೆ ವೃತ್ತ, ಕೆ ಆರ್ ಮಾರುಕಟ್ಟೆ ವೃತ್ತದ ಮೂಲಕ ಸಾಗಲಿದೆ. ನಂತ್ರ ಕೋಟೆ ಆಂಜನೇಯ ಸ್ವಾಮಿ ದೇವಾಲಯಕ್ಕೆ ತೆರಳಿ, ಪೂಜೆ…
ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಚುನಾವಣೆ-2024ರ ಸಂಬಂಧ ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾದಿ ವ್ಯಾಪ್ತಿಯಲ್ಲಿ 3 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರಲಿದ್ದು, ಆಯಾ ಲೋಕಸಭಾ ಕ್ಷೇತ್ರಗಳಲ್ಲಿ ಬರುವ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಚುನಾವಣಾ ಕರ್ತವ್ಯದಲ್ಲಿ ನಿರತರಾದ ಮತದಾರರಿಗಾಗಿ(Voters on Election duty) ಮತದಾನ ಸೌಲಭ್ಯ ಕೇಂದ್ರ(Voter Facilitation Centre-VFC) ಸ್ಥಾಪಿಸಲಾಗಿದ್ದು, ದಿನಾಂಕ: 25-04-2024 ರವರೆಗೆ ಮತದಾನ ಮಾಡಲು ಅವಕಾಶ ನೀಡಲಾಗಿದೆ. ತರಬೇತಿಯ ವೇಳೆ ನಮೂನೆ 12ರ ಮೂಲಕ ಕೊರಿಕೆ ಸಲ್ಲಿಸಿದ್ದ ಹಾಗೂ ಎರಡನೇ ಹಂತದ ಮತದಾನವಿರುವ ಜಿಲ್ಲಾ ಚುನಾವಣಾಧಿಕಗಳು ಅನುಮೋದಿಸಿರುವ ಚುನಾವಣಾ ಕರ್ತವ್ಯದಲ್ಲಿ ನಿರತರಾದ ಮತದಾರರಿಗೆ ದಿನಾಂಕ: 22-04-2024 ರವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಇನ್ನೂ ಮೂರು ದಿನಗಳ ಕಾಲ ಮತದಾನ ಸೌಲಭ್ಯ ಕೇಂದ್ರಗಳಿಗೆ ತೆರಳಿ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ. ಮನೆಗೆ ಅಂಚೆ ಮೂಲಕ ಅಂಚೆ ಮತಪತ್ರಗಳನ್ನು ಕಳುಹಿಸುವುದಿಲ್ಲ, ಖುದ್ದಾಗಿ ಮತದಾನ ಸೇವಾ ಕೆಂದ್ರಗಳಿಗೆ ತೆರಳಿ ಮತ ಚಲಾಯಿಸಬೇಕು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅಂಚೆ ಮತ ಪತ್ರಗಳನ್ನು ಅಂಚೆ ಮೂಲಕ…
ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ನೀಡುವ ಗ್ಯಾರೆಂಟಿ ಕಾರ್ಡ್ ಗಳಿಗೆ ಯಾವುದೇ ಬೆಲೆ ಇಲ್ಲ. ಕಾಂಗ್ರೆಸ್ ನವರು ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ಚುನಾವಣೆ ಮುಗಿದ ಮೇಲ ಅವರು ಮನೆಗೆ ಹೋಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಹಾವೇರಿ ವಿಧಾನಸಭಾ ಕ್ಚೇತ್ರದ ಅಗಡಿ, ಕಾಟೇನಹಳ್ಳಿ, ಕಳ್ಳಿಹಾಳ, ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಹುಂಡೇನಹಳ್ಳಿ,ಮೋಟೆಬೆನ್ನೂರು ಗ್ರಾಮಗಳಲ್ಲಿ ಪ್ರಚಾರ ನಡೆಸಿ ಮಾತನಾಡಿದರು. ಮಲ್ಲಿಕಾರ್ಜುನ ಖರ್ಗೆಯವರು ಕೊಡುವ ಗ್ಯಾರೆಂಟಿಗೆ ಯಾವ ಕಿಮ್ಮತ್ತಿದೆ. ಅವರು ಯಾರು ಗ್ಯಾರೆಂಟಿ ಕೊಡಲಿಕ್ಕೆ? ಚುನಾವಣೆ ಆದ ಮೇಲೆ ಅವರು ಅಧಿಕಾರಕ್ಕೆ ಬರುವುದಿಲ್ಲ. ಅವರೂ ಮನೆಗೆ ಹೋಗುತ್ತಾರೆ. ಕಾಂಗ್ರೆಸ್ ನವರು ಸ್ಪರ್ಧೆ ಮಾಡಿರುವುದೇ 200 ಸ್ಥಾನಗಳಲ್ಲಿ ಲೋಕಸಭೆಯಲ್ಲಿ ಬಹುಮತಕ್ಕೆ 272 ಸ್ಥಾನಗಳು ಬೇಕು. ಹೀಗಾಗಿ ಕಾಂಗ್ರೆಸ್ ಕೊಡುವ ಗ್ಯಾರೆಂಟಿ ಕಾರ್ಡ್ ಗಳಿಗೆ ಕಿಮ್ಮತ್ತಿಲ್ಲ. ಅವುಗಳನ್ನು ಹರಿದು ಹಾಕಿ ಎಂದು ಹೇಳಿದರು. ಈ ಚುನಾವಣೆಯಲ್ಲಿ ಪಂಚಾಯತಿ ಮೇಂಬರ್, ಎಂಎಲ್ ಎ…
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವರಿಷ್ಠರ ಮನವೊಲಿಕೆಗೂ ಬಗ್ಗದೇ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಕಣಕ್ಕೆ ಇಳಿದಿದ್ದರು. ಇದೀಗ ಅವರಿಗೆ ಬಿಜೆಪಿ ಶಾಕ್ ನೀಡಿದೆ. ಅದೇ ಬಿಜೆಪಿ ಪಕ್ಷದಿಂದ 6 ವರ್ಷ ಉಚ್ಛಾಟನೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಇಂದು ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಅವರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣವಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ ಎಂಬುದಾಗಿ ಕೆ.ಎಸ್ ಈಶ್ವರಪ್ಪಗೆ ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಪಕ್ಷದಿದಂ ಉಚ್ಚಾಟಿಸಲಾಗಿದೆ ಎಂದಿದ್ದಾರೆ.
ಬೆಂಗಳೂರು: ಹುಬ್ಬಳ್ಳಿಯಲ್ಲಿ ಮುಸ್ಲೀಂ ಯುವಕನಿಂದ ನೇಹಾ ಹಿರೇಮಠ ಬರ್ಬರವಾಗಿ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸೋದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದರು. ಅಲ್ಲದೇ ವಿಶೇಷ ನ್ಯಾಯಾಲಯ ಸ್ಥಾಪಿಸಿ ವಿಚಾರಣೆ ನಡೆಸೋದಾಗಿ ತಿಳಿಸಿದ್ದರು. ಅದರಂತೆ ರಾಜ್ಯ ಸರ್ಕಾರ ನೇಹಾ ಹತ್ಯೆ ಪ್ರಕರಣದ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಿ ಆದೇಶಿಸಿದೆ. ಈ ಕುರಿತಂತೆ ಸಚಿವ ಹೆಚ್.ಕೆ ಪಾಟೀಲ್ ಅವರು ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಕುಮಾರಿ ನೇಹಾ ಹಿರೇಮಠ ಅವರ ಹೀನಾಯ ಹತ್ಯೆ ಪ್ರಕರಮದಲ್ಲಿ ಕರ್ನಾಟಕ ಸರ್ಕಾರವು ಪ್ರಕರಣದಲ್ಲಿ ದಾಖಲಾಗಿರುವ ಎಫ್ಐಆರ್ ವರದಿಯ ಆಧಾರದ ಮೇಲೆ ಒಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಜೊತೆಗೆ ಚರ್ಚಿಸಿದ್ದೇನೆ ಎಂದಿದ್ದಾರೆ. ಈ ಹಿನ್ನಲೆಯಲ್ಲಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲು ಸರ್ಕಾರವು ಉದ್ದೇಶಿಸಿದೆ. ಸರ್ವೋಚ್ಛ ನ್ಯಾಯಾಲಯವು ಮಹಿಳೆಯರ ವಿರುದ್ಧದ ಹೀನಾಯ ಅಪರಾಧ ಪ್ರಕರಣಗಳಲ್ಲಿ ನೀಡಿರುವ ಮಾರ್ಗದರ್ಶನಗಳನ್ನು ಕೂಲಕುಂಷವಾಗಿ…
ಕಲಬುರ್ಗಿ: ರಾಜ್ಯ ಸರ್ಕಾರ ಜನ ಪರ ಐದು ಗ್ಯಾರೆಂಟಿ ಯೋಜನೆಗಳು ಬಿಜೆಪಿಯವರಿಗೆ ಅಪಥ್ಯವಾಗಿವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅಪಾದಿಸಿದರು. ಕಲಬುರಗಿ ನಗರದ ಸುಂದರ ನಗರದಲ್ಲಿ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಪರವಾಗಿ ಮತಯಾಚನೆ ಮಾಡಿ ಅವರು ಮಾತನಾಡುತ್ತಿದ್ದರು. ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ, ಬಿಜೆಪಿ ಓ ಯೋಜನೆಗಳನ್ನು ಬಿಟ್ಟಿ ಭಾಗ್ಯ ಎಂದು ಮೂದಲಿಸುತ್ತಿದೆ. ಅವರಿಗೆ ಜನರು ಆರ್ಥಿಕ ಹಾಗೂ ಸಾಮಾಜಿಕವಾಗಿ ಅಭಿವೃದ್ದಿ ಹೊಂದುವುದು ಬೇಕಿಲ್ಲ. ಯಾವುದೇ ಅಭಿವೃದ್ದಿ ಮಾಡದ ಉಮೇಶ್ ಜಾಧವ್ ಅವರು ಈ ಸಲ ಚುನಾವಣೆ ನಿಂತಿದ್ದಾರೆ ಅವರ ವಿರುದ್ದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ನಿಂತಿದ್ದಾರೆ. ಕಲಬುರಗಿ ಸರ್ವಾಂಗೀಣ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿ ಗೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು. ರೈತರಿಗೆ ಬೆಂಬಲ ಬೆಲೆ, ಯುವಕರಿಗೆ ತರಬೇತಿ, ಕೇಂದ್ರದ ಮೂವತ್ತು ಲಕ್ಷ ಹುದ್ದೆ ಹಾಗೂ ರಾಜ್ಯದ ಎರಡುವರೆ ಲಕ್ಷ…
ಬೆಳಗಾವಿ: ದಿನೇ ದಿನೇ ಕೋಮುಸೌಹಾರ್ದತೆಯನ್ನು ಕೆಡಿಸುವಂತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಜಿಲ್ಲೆಯಲ್ಲಿ ಇಂದು ಮಹಿಳೆಯೊಬ್ಬರನ್ನು ಮುಸ್ಲೀಂ ಮತಾಂತರಕ್ಕೆ ಯತ್ನಿಸಿದಂತ ಘಟನೆ ನಡೆದಿದೆ. ಅಲ್ಲದೇ ಈ ಸಂಬಂಧ ದೂರು ದಾಖಲಾಗಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿಯಲ್ಲಿ ಮುಸ್ಲೀಂ ಮತಾಂತರಕ್ಕೆ ಮಹಿಳೆಯೊಬ್ಬರನ್ನು ಯತ್ನಿಸಿದಂತ ಘಟನೆ ನಡೆದಿದೆ. ವಿಷಯ ತಿಳಿದು ಮಹಿಳೆಯ ನಿವಾಸಕ್ಕೆ ಬಿಜೆಪಿ ಮುಖಂಡರು ಭೇಟಿ ನೀಡಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್, ಮಾಜಿ ಶಾಸಕ ಸಂಜಯ್ ಪಾಟೀಲ್, ವಿರೂಪಾಕ್ಷ ಮಾಮನಿ ಸೇರಿದಂತೆ ಸ್ಛಳೀಯ ನಾಯಕರು ಭೇಟಿ ನೀಡಿ, ಸಂತ್ರಸ್ತ ಮಹಿಳೆಗೆ ಧೈರ್ಯ ತುಂಬಿ, ಸಾಂತ್ವಾನ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಮಹಿಳೆಯ ಕುಟುಂಬಸ್ಥರು ತಮಗೆ ಜೀವ ಭಯವಿದೆ. ರಕ್ಷಣೆ ಕೊಡಿಸುವಂತೆ ಕೋರಿ ಕೊಂಡಿದೆ. ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ. https://kannadanewsnow.com/kannada/muslim-population-is-decreasing-in-islamic-countries-and-increasing-rapidly-in-india-bommai/ https://kannadanewsnow.com/kannada/lok-sabha-elections-how-to-download-voter-slip-on-mobile-heres-the-information/