Author: kannadanewsnow09

ಬೆಂಗಳೂರು: ಶಿರಸಿಯ ಪ್ರಸಿದ್ಧ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು, ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ತಾಳಗುಪ್ಪ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 06587 ಯಶವಂತಪುರ–ತಾಳಗುಪ್ಪ ವಿಶೇಷ ಎಕ್ಸ್ ಪ್ರೆಸ್ ರೈಲು ಫೆಬ್ರವರಿ 27 (ಶುಕ್ರವಾರ) ರಂದು ರಾತ್ರಿ 10:45ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಶನಿವಾರ (ಫೆ. 28) ಬೆಳಿಗ್ಗೆ 5:05ಕ್ಕೆ ತಾಳಗುಪ್ಪ ತಲುಪಲಿದೆ. ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 06588 ತಾಳಗುಪ್ಪ–ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ಫೆಬ್ರವರಿ 28 (ಶನಿವಾರ) ರಂದು ಬೆಳಿಗ್ಗೆ 9:30ಕ್ಕೆ ತಾಳಗುಪ್ಪದಿಂದ ಹೊರಟು, ಅದೇ ದಿನ ಸಂಜೆ 5:15ಕ್ಕೆ ಯಶವಂತಪುರ ಸೇರಲಿದೆ. ಈ ವಿಶೇಷ ರೈಲು ಎರಡು ಮಾರ್ಗಗಳಲ್ಲಿ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು ಜಂಕ್ಷನ್, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಕೊನಗವಳ್ಳಿ ಹಾಲ್ಟ್, ಹಾರನಹಳ್ಳಿ ಹಾಲ್ಟ್, ಕುಂಸಿ, ಅರಸಾಳು ಹಾಲ್ಟ್, ಕೆಂಚನಾಳು ಹಾಲ್ಟ್, ಆನಂದಪುರಂ, ಅಡ್ಡೇರಿ ಹಾಲ್ಟ್ ಮತ್ತು ಸಾಗರ…

Read More

ಕೂದಲು ಉದುರುವ ಸಮಸ್ಯೆ ಇಂದಿನ ದಿನಗಳಲ್ಲಿ ಸಾಮಾನ್ಯವಾಗಿದೆ. ಏಕೆಂದರೆ ಇಂದಿನ ಪರಿಸ್ಥಿತಿ ಹೀಗಿದೆ. ಎಲ್ಲೆಂದರಲ್ಲಿ ಧೂಳು, ಕೊಳಕು ಇದೆ. ಕೂದಲು ಉದುರುವಿಕೆಗೆ ಪ್ರಮುಖ ಕಾರಣವೆಂದರೆ ಕೂದಲಿನಲ್ಲಿರುವ ಹೆಚ್ಚುವರಿ ಕೊಳೆ. ಅದೂ ಅಲ್ಲದೆ ಸರಿಯಾದ ಆಹಾರ ಪದ್ಧತಿ ಇಲ್ಲದಿರುವುದು, ದೇಹದಲ್ಲಿನ ಹಾರ್ಮೋನ್ ಬದಲಾವಣೆಯೂ ಇದಕ್ಕೆ ಕಾರಣ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ಕೂದಲು ಉದುರುವಿಕೆಗೆ ಕಾರಣ ಏನೇ…

Read More

ತುಮಕೂರು: ಜಿಲ್ಲೆಯಲ್ಲಿ ಸಿನಿಮಾ ಮಾದರಿಯಲ್ಲಿ ದರೋಡೆ ಕೃತ್ಯ ಎಸಗಲಾಗಿದೆ. ಈ ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಹೊರ ರಾಜ್ಯದಿಂದ ಬಂದು ಸಿನಿಮಾ ಮಾದರಿಯಲ್ಲಿ ದರೋಡೆಯನ್ನು ಖದೀಮರು ನಡೆಸಿದ್ದರು. ಇಂತಹ ದರೋಡೆ ಕೋರರನ್ನು ಕೃತ್ಯ ಎಸಗಿದ ಕೆಲವೇ ಗಂಟೆಯಲ್ಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದರೋಡೆ ಕೋರರು ಮಾಲು ಸಹಿತ ಪೊಲೀಸರು ಬಂಧಿಸಿದ್ದಾರೆ. ದರೋಡೆ ಕೋರನ ಬಳಿ ಇದ್ದಂತ ಚಿನ್ನಾಭರಣವನ್ನು ಜಪ್ತಿ ಮಾಡಿದ್ದಾರೆ. ಅರವಿಂದ್, ದುಂಗರ್ ಸಿಂಗ್, ಮಹೇಂದ್ರ, ಮಧುಸಿಂಗ್ ಸೇರಿದಂತೆ ರಾಜಸ್ಥಾನ ಮೂಲದ ನಾಲ್ವರು ದರೋಡೆಕೋರನನ್ನು ಪೊಲೀಸರು ಬಂಧಿಸಿದ್ದಾರೆ. https://kannadanewsnow.com/kannada/shivamogga-accidental-fire-at-mescom-transformer-repair-center-in-sagar-loss-of-lakhs-of-rupees/

Read More

ಶಿವಮೊಗ್ಗ : ಸಾಗರದ ಮೆಸ್ಕಾಂ ಕಚೇರಿ ಹಿಂಭಾಗದಲ್ಲಿರುವ ಟ್ರಾನ್ಸ್ಫರ‍್ಮರ್ ರಿಪೇರಿ ಕೇಂದ್ರದಲ್ಲಿ ಸೋಮವಾರ ಬೆಳಿಗ್ಗೆ 4ಕ್ಕೆ ಶಾರ್ಟ್ಸರ್ಕ್ಯೂಟ್‌ನಿಂದ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಜೋಗ ರಸ್ತೆಯ ಮೆಸ್ಕಾಂ ಕಚೇರಿ ಹಿಂಭಾಗದ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪ ಇರುವ ಟಿ.ಸಿ. ರಿಪೇರಿ ಕೇಂದ್ರದಕ್ಕ ಬೆಳಗಿನ ಜಾವ 4 ಗಂಟೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿದೆ. ವ್ಯಾಪಕವಾಗಿ ಆವರಿಸಿದ ಬೆಂಕಿ ಕೆನ್ನಾಲಿಗೆಗೆ ರಿಪೇರಿಗೆ ಬಂದಿದ್ದ 15ಕ್ಕೂ ಹೆಚ್ಚು ಟಿ.ಸಿ.ಗಳು ಸುಟ್ಟು ಭಸ್ಮವಾಗಿದೆ. ಇದರ ಜೊತೆಗೆ ತಾಲ್ಲೂಕಿನ ಬೇರೆಬೇರೆ ಭಾಗಗಳಲ್ಲಿ ಅಳವಡಿಸಲು ತಂದಿದ್ದ ಐದಾರು ಹೊಸ ಟಿ.ಸಿ.ಗಳು ಸಹ ಸುಟ್ಟು ಹೋಗಿದೆ ಎಂದು ಹೇಳಲಾಗುತ್ತಿದೆ. ವಿದ್ಯುತ್ ಸಂಪರ್ಕ ಕಲ್ಪಿಸಲು ಎಳೆಯುವ ವೈಂಡಿ ವೈರ್‌ಗಳು ಗೋದಾಮಿನಲ್ಲಿ ದೊಡ್ಡ ಪ್ರಮಾಣದಲ್ಲಿ ಸಂಗ್ರಹವಾಗಿತ್ತು. ಬೆಂಕಿಯ ಕೆನ್ನಾಲಿಗೆ ಹಳೆಯ ಮತ್ತು ಹೊಸ ವಿದ್ಯುತ್ ತಂತಿಗಳು ಸಂಪೂರ್ಣ ಸುಟ್ಟು ಹೋಗಿದ್ದು, ಸುಮಾರು ೨೦ಲಕ್ಷ ರೂಪಾಯಿಗೂ ಅಧಿಕ ನಷ್ಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಇದರ ಜೊತೆಗೆ ರಿಪೇರಿ ಕೇಂದ್ರದ ಮೇಲ್ಚಾವಣಿ…

Read More

ಮೈಸೂರು: ಮಾರಿಕಾಂಬಾ ದೇವಿ ಜಾತ್ರೆ ಮಹೋತ್ಸವದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು, ನೈಋತ್ಯ ರೈಲ್ವೆಯು ಯಶವಂತಪುರ–ಶಿವಮೊಗ್ಗ ಟೌನ್ ನಡುವೆ ಸಂಚರಿಸುವ ಟ್ರೈ-ವೀಕ್ಲಿ ಎಕ್ಸ್ ಪ್ರೆಸ್ ರೈಲನ್ನು (16581/16582) ತಾತ್ಕಾಲಿಕವಾಗಿ ತಾಳಗುಪ್ಪದವರೆಗೆ ವಿಸ್ತರಿಸಲು ನಿರ್ಧರಿಸಿದೆ. ಅದರಂತೆ, ಮಾರ್ಚ್ 1ರಂದು (ಭಾನುವಾರ) ಯಶವಂತಪುರದಿಂದ ಹೊರಡುವ ರೈಲು ಸಂಖ್ಯೆ 16581 ಶಿವಮೊಗ್ಗದ ಬದಲಾಗಿ ತಾಳಗುಪ್ಪದವರೆಗೆ ಸಂಚರಿಸಲಿದೆ. ಮರಳಿ, ರೈಲು ಸಂಖ್ಯೆ 16582 ಶಿವಮೊಗ್ಗಕ್ಕೆ ಬದಲಾಗಿ ತಾಳಗುಪ್ಪದಿಂದಲೇ ತನ್ನ ಪ್ರಯಾಣವನ್ನು ಆರಂಭಿಸಲಿದೆ. ಈ ವಿಸ್ತರಣೆಯು ಕೇವಲ ಒಂದು ಟ್ರಿಪ್ ಗೆ ಮಾತ್ರ ಅನ್ವಯಿಸಲಿದೆ. ರೈಲು ಸಂಖ್ಯೆ 16581 ಯಶವಂತಪುರದಿಂದ ಮಧ್ಯರಾತ್ರಿ 12:15ಕ್ಕೆ ಹೊರಟು, ಅಂದು ಬೆಳಿಗ್ಗೆ 09:00 ಗಂಟೆಗೆ ತಾಳಗುಪ್ಪ ತಲುಪಲಿದೆ. ಅಂದೇ ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 16582 ತಾಳಗುಪ್ಪದಿಂದ ರಾತ್ರಿ 10:00 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 04:45ಕ್ಕೆ ಯಶವಂತಪುರ ತಲುಪಲಿದೆ. ಶಿವಮೊಗ್ಗ ಟೌನ್ ನಿಂದ ಮುಂದಕ್ಕೆ ಈ ರೈಲು ಕೊನಗವಳ್ಳಿ ಹಾಲ್ಟ್, ಹಾರನಹಳ್ಳಿ ಹಾಲ್ಟ್, ಕುಂಸಿ, ಅರಸಾಳು ಹಾಲ್ಟ್, ಕೆಂಚನಾಳು ಹಾಲ್ಟ್, ಆನಂದಪುರಂ,…

Read More

ಬೆಂಗಳೂರು: ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ ಮತ್ತು ಕಾರ್ಮಿಕ ಸಂಘಟನೆಗಳಿಗೆ, ಸ್ಥಳೀಯ ಮುಖಂಡರಿಗೆ ಮಾಹಿತಿ ರವಾನಿಸಲು ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಚಿಕ್ಕಮಗಳೂರು ತಾಲೂಕು ಹುಣಸೆಹಳ್ಳಿ ಬಳಿಯ ತೋಟದಲ್ಲಿ ಕಳೆದ 7 ದಿನಗಳ ಅಂತರದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಉನ್ನತಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ತುರ್ತು ಸಭೆ ನಡೆಸಿದ ಸಚಿವರು ವನ್ಯಜೀವಿ -ಮಾನವ ಸಂಘರ್ಷ ಇರುವ ಪ್ರದೇಶಗಳ ಸ್ಥಳೀಯ ಮುಖಂಡರ, ಗ್ರಾಮಗಳ ಜಮೀನು ಮಾಲೀಕರ ವಾಟ್ಸ್ ಅಪ್ ಗ್ರೂಪ್ ಮಾಡಿ ಮಾಹಿತಿ ಪ್ರಸಾರ ಮಾಡುವಂತೆ ಸೂಚಿಸಿದರು. ಮಾನವ ಜೀವ ಅತ್ಯಮೂಲ್ಯವಾದ್ದು, ಒಂದು ಜೀವಹಾನಿ ಆದ ಬಳಿಕ ಮತ್ತೊಂದು ಜೀವ ಹಾನಿ ಆಗಿರುವುದು ಅತ್ಯಂತ ನೋವಿನ ಸಂಗತಿ. ಅಧಿಕಾರಿಗಳು ಮತ್ತು ಸಿಬ್ಬಂದಿ ಇಂತಹ ಘಟನೆ ಮರುಕಳಿಸದಂತೆ 24×7 ನಿಗಾ ಇಡಬೇಕು. ಕಡ್ಡಾಯವಾಗಿ ಸೆಕ್ಷನ್ 144 ಜಾರಿ ಮಾಡಿ…

Read More

ಬೆಂಗಳೂರು : “ದೀಪ ಆರುವಾಗ ಜೋರಾಗಿ ಉರಿಯುತ್ತದೆಯಂತೆ. ಅದೇ ರೀತಿ ಬಿಜೆಪಿಯ ಅಂತಿಮ ದಿನಗಳು ಸಮೀಪಿಸಿರುವ ಕಾರಣ, ಮಹಾತ್ಮಾ ಗಾಂಧಿ ಅವರ ಹೆಸರು ಬದಲಿಸುವ ಕೆಲಸಕ್ಕೆ ಮುಂದಾಗಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು. ಚಿಕ್ಕಬಳ್ಳಾಪುರದಲ್ಲಿ ಸೋಮವಾರ ನಡೆದ ಮನರೇಗಾ ಬಚಾವೋ ಸಂಗ್ರಾಮ ಪ್ರತಿಭಟನಾ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ಈ ದೇಶ ಉಳಿಸಲು ಇಂದು ನಾವು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಕಾಂಗ್ರೆಸ್ ಪಕ್ಷ ಸದಾ ಎಲ್ಲಾ ವರ್ಗದ ಜನರಿಗೆ ಕಾರ್ಯಕ್ರಮ ನೀಡುತ್ತಾ ಬದುಕಿನಲ್ಲಿ ಬದಲಾವಣೆ ತರುವ ಕೆಲಸ ಮಾಡಿಕೊಂಡು ಬರುತ್ತಿದೆ. ಮಹಾತ್ಮ ಗಾಂಧಿ ಅವರ ಹೆಸರಿನಲ್ಲಿ 20 ವರ್ಷಗಳ ಹಿಂದೆ ಕಾಂಗ್ರೆಸ್ ಸರ್ಕಾರವು ಬಡವರಿಗಾಗಿ ಉದ್ಯೋಗ ಖಾತರಿ ಕಾರ್ಯಕ್ರಮ ನೀಡಿತ್ತು. ಇದು ದೇಶದ ಪಾಲಿಗೆ ಕ್ರಾಂತಿಕಾರಿ ಕಾರ್ಯಕ್ರಮ” ಎಂದು ತಿಳಿಸಿದರು. ಮನರೇಗಾ ಉಳಿಸಿ, ಹಳ್ಳಿಗಳು, ಕಾರ್ಮಿಕರು, ಪಂಚಾಯಿತಿಗಳು ಹಾಗೂ ಮಹಾತ್ಮಾ ಗಾಂಧಿ ಹೆಸರು ರಕ್ಷಿಸಬೇಕು…

Read More

ಬೆಂಗಳೂರು: ಸಮಗ್ರ ಶಿಕ್ಷಣ ಕರ್ನಾಟಕ (SSK) ಹಾಗೂ ಡಬ್ಲ್ಯೂ.ಡಬ್ಲ್ಯೂ.ಎಫ್ (WWF) ಇಂಡಿಯಾ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಮಿಷನ್ ಪ್ರಕೃತಿ: ತರಗತಿಯಿಂದ ಸಂರಕ್ಷಣೆಯತ್ತ’ (Mission Prakriti: From Classrooms to Conservation – Leading The Change) ಕಾರ್ಯಕ್ರಮದಲ್ಲಿ ರಾಜ್ಯದ ಹತ್ತು ಅತ್ಯುತ್ತಮ ಶಾಲೆಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಮಧು ಬಂಗಾರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಬೆಂಗಳೂರಿನಲ್ಲಿ ವಿಕಾಸ ಸೌಧದಲ್ಲಿ ನಡೆದ ಈ ಸಮಾರಂಭದಲ್ಲಿ ಇಲಾಖೆಯ ಆಯುಕ್ತರಾದ ವಿಕಾಸ್ ಕಿಶೋರ್ ಸುರಳ್ಕರ್, WWF ಇಂಡಿಯಾದ ಸಿಇಒ ಕರಣ್ ಭಲ್ಲಾ ಹಾಗೂ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. “ವಿದ್ಯಾರ್ಥಿಗಳು ಕೇವಲ ಅಂಕಗಳಿಗಾಗಿ ಓದಬಾರದು. ವಿಷಯವನ್ನು ಆಳವಾಗಿ ಅರ್ಥೈಸಿಕೊಳ್ಳುವುದರ ಕಡೆಗೆ ಗಮನ ಹರಿಸಬೇಕು. ಅರಿವು ಮೂಡಿದರೆ ಫಲಿತಾಂಶ ತಾನಾಗಿಯೇ ಉತ್ತಮವಾಗುತ್ತದೆ,” ಎಂದು ಸಚಿವರು ಕಿವಿಮಾತು ಹೇಳಿದರು. ತ್ಯಾಜ್ಯ ನಿರ್ವಹಣೆ ಕುರಿತು ಜಪಾನ್‌ನ ಉದಾಹರಣೆ ನೀಡುತ್ತಾ, “ಅಲ್ಲಿ ಕಸದ ಬುಟ್ಟಿಗಳು ಕಡಿಮೆ ಇದ್ದರೂ ಜನರು ತಮ್ಮ ಕಸವನ್ನು ತಾವೇ ಮನೆಗೆ ತೆಗೆದುಕೊಂಡು…

Read More

ಬೆಂಗಳೂರು: ಕಾಂಗ್ರೆಸ್ಸಿನವರು ಹೆಚ್ಚು ಬಟ್ಟೆ ಬಿಚ್ಚಿಕೊಂಡರೂ ವಿಬಿ ಜಿ ರಾಮ್ ಜಿ ಯೇ ಊರ್ಜಿತವಾಗಲಿದೆ; ಆದ್ದರಿಂದ ವ್ಯರ್ಥ ಪ್ರಯತ್ನ ಮಾಡಬೇಡಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಲಹೆ ನೀಡಿದ್ದಾರೆ. ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿ ಪ್ರಶ್ನೆಗೆ ಉತ್ತರಿಸಿದರು. ವಿಬಿ ಜಿ ರಾಮ್ ಜಿ ಜಾಗೃತಿಗಾಗಿ ಎಲ್ಲ ಕಡೆ ಕಾರ್ಯಕ್ರಮಗಳನ್ನು ನಡೆಸಿದ್ದೇವೆ. ಇಡೀ ದೇಶವ್ಯಾಪಿ ಬೆಂಬಲವೂ ಅದಕ್ಕೆ ವ್ಯಕ್ತವಾಗಿದೆ. ಅದನ್ನು ವಾಪಸ್ ಪಡೆಯುವ ಸಂದರ್ಭ ಒದಗಿಬರಲಾರದು ಎಂದು ತಿಳಿಸಿದರು. ಕಾಂಗ್ರೆಸ್ಸಿನವರು ದೇಶವಿರೋಧಿ ಚಟುವಟಿಕೆ ಮಾಡುತ್ತಾರೆ. ದೇಶಕ್ಕೇ ಅಪಮಾನ ಮಾಡುತ್ತಾರೆ ಎಂದು ಟೀಕಿಸಿದರು. ಹೆಣ್ಮಕ್ಕಳನ್ನು ಸಂಸತ್ತಿನಲ್ಲಿ ಎತ್ತಿಕಟ್ಟಿ ಪ್ರಧಾನಿಯವರ ಸ್ಥಾನಕ್ಕೂ ಅಪಚಾರ ಮಾಡಿದ್ದ ರಾಹುಲ್ ಗಾಂಧಿಯವರ ಬಗ್ಗೆ ಪ್ರಧಾನಮಂತ್ರಿಯವರು ಹೇಳಿದ್ದಾರೆ. ಎಐ ಸಮ್ಮಿಟ್ ಸಂದರ್ಭದಲ್ಲಿ ಬಟ್ಟೆ ಬಿಚ್ಚಿ ಓಡಾಡಿದವರ ಬಗ್ಗೆಯೂ ಮಾತನಾಡಿದ್ದಾರೆ. ಅವರಿಗೆ ಜನರು ಬೂಟ್, ಚಪ್ಪಲಿಯಲ್ಲಿ ಉತ್ತರ ಕೊಟ್ಟಿದ್ದಾರೆ ಎಂದು ನುಡಿದರು. ಇದಕ್ಕಿಂತ ದೊಡ್ಡ ಗೌರವ ಕಾಂಗ್ರೆಸ್ಸಿಗೆ ಎಲ್ಲಿಂದ ಬರಲು ಸಾಧ್ಯ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದರು. ಇವತ್ತು…

Read More

ಚಿಕ್ಕಬಳ್ಳಾಪುರ :ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಚಿಕ್ಕಬಳ್ಳಾಪುರದಲ್ಲಿ ನಡೆದ ನರೇಗಾ ಬಚಾವ್ ಆಂದೋಲನದಲ್ಲಿ ಭಾಗವಹಿಸಿ ಮಾತನಾಡಿದರು. ಇಂದು ದೇಶಾದ್ಯಂತ ‘ಮನರೇಗಾ ವನ್ನು ಉಳಿ’ ಅಭಿಯಾನ ಪ್ರಾರಂಭಿಸಲಾಗಿದೆ. ಚಳಿಗಾಲದ ಅಧಿವೇಶನ್ಲದಲಿ ಕೇಂದ್ರ ಭಾಜಪ ಸರ್ಕಾರ ಮನರೆಗಾ ವನ್ನು ರದ್ದುಪಡಿಸಿ, ವಿಬಿಜಿರಾಮ್ ಜಿ ಕಾಯ್ದೆಯನ್ನು ಜಾರಿ ಮಾಡಿದೆ. ಮನರೇಗಾದ ರದ್ದು ಅಗತ್ಯವಿರಲಿಲ್ಲ. ಕೂಲಿಕಾರರು, ಆದಿವಾಸಿಗಳು, ಸಣ್ಣರೈತರಿಗೆ, ಮಹಿಳೆಯರಿಗೆ ಉದ್ಯೋಗದ ಅನುಕೂಲ ಕಲ್ಪಿಸುವ ದಿಸೆಯಲ್ಲಿ 2005 ರಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ, ನಾಯಕಿ ಸೋನಿಯಾ ಗಾಂಧಿಅವರ ನೇತೃತ್ವದಲ್ಲಿ ಈ ಕಾಯ್ದೆ ಜಾರಿಯಾಯಿತು. ಇದೇ ಕಾಯ್ದೆಯಲ್ಲದೇ, ಶಿಕ್ಷಣ, ಆಹಾರ, ಮಾಹಿತಿ ಹಕ್ಕು ಸೇರಿದಂತೆ ಹಲವು ಜನಪರ ಕಾಯ್ದೆಗಳನ್ನು ಜಾರಿಗೆ ತಂದಿದ್ದರು.ಆದರೆ ಈ ಎಲ್ಲ ಜನಪರ ಕಾಯ್ದೆಗಳನ್ನು ದುರ್ಬಲಗೊಳಿಸುವ ಕೆಲಸವನ್ನು ಮೋದಿಯವರ ನೇತೃತ್ವದ ಸರ್ಕಾರ ಮಾಡುತ್ತಿದೆ ಎಂದರು. ಮನರೇಗಾ…

Read More