Author: kannadanewsnow09

ಬೆಂಗಳೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ ಹೊತ್ತಲ್ಲೇ ಡೆಂಗ್ಯೂ ಕೇಸ್ ಆರ್ಭಟ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ ರಾಜ್ಯಾಧ್ಯಂತ 169 ಡೆಂಗ್ಯೂ ಕೇಸ್ ಪತ್ತೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ 82, ಬೆಂಗಳೂರು ನಗರ, ಗ್ರಾಮಾಂತರ ಪ್ರದೇಶಗಳಲ್ಲಿ ತಲಾ ಮೂರು, ಕೋಲಾರ, ಶಿವಮೊಗ್ಗ, ವಿಜಯನಗರ ಹಾಗೂ ಕೊಡಗು ಜಿಲ್ಲೆಯಲ್ಲಿ ತಲಾ 2 ಕೇಸ್ ಪತ್ತೆಯಾಗಿರುವುದಾಗಿ ಹೇಳಿದೆ. ಚಿಕ್ಕಬಳ್ಳಾಪುರ 3, ತುಮಕೂರು 8, ಚಿತ್ರದುರ್ಗ, ದಾವಣಗೆರೆ, ಧಾರವಾಡ ಜಿಲ್ಲೆಯಲ್ಲಿ ತಲಾ 4 ಕೇಸ್ ಪತ್ತೆಯಾದರೇ, ವಿಜಯಪುರ 1, ಗದಗ 5, ಕಲಬುರ್ಗಿ 12, ಮೈಸೂರು 7 ಸೇರಿ ಇತರೆ ಜಿಲ್ಲೆಗಳು ಸೇರಿದಂತೆ 169 ಕೇಸ್ ದೃಢಪಟ್ಟಿದೆ. ಹೀಗಾಗಿ 26,114 ಡೆಂಗ್ಯೂ ಕೇಸ್ ದಾಖಲಾದಂತೆ ಆಗಿದೆ. ಇದುವರೆಗೆ 12 ಮಂದಿ ಡೆಂಗ್ಯೂವಿನಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. https://kannadanewsnow.com/kannada/12-killed-in-mini-truck-bus-collision-in-uttar-pradesh/ https://kannadanewsnow.com/kannada/bbmp-to-set-up-462-temporary-mobile-tanks-for-ganesh-idol-immersion-in-bengaluru/ https://kannadanewsnow.com/kannada/good-news-good-news-for-motorists-petrol-diesel-prices-to-be-reduced-soon-report/

Read More

ನವದೆಹಲಿ: ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಶುಕ್ರವಾರ ರಸ್ತೆ ಸಾರಿಗೆ ಬಸ್ ಮಿನಿ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. ಇದಲ್ಲದೆ, ಅಪಘಾತದಲ್ಲಿ ಒಂದು ಡಜನ್ ಗೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಆಗ್ರಾ-ಅಲಿಗಢ ಬೈಪಾಸ್ನಲ್ಲಿ ಈ ಘಟನೆ ನಡೆದಿದೆ. ಮಿನಿ ಟ್ರಕ್ ನಲ್ಲಿದ್ದವರು ಊಟ ಮಾಡಿದ ನಂತರ ಸೆವಾಲಾ ಗ್ರಾಮಕ್ಕೆ ಮರಳುತ್ತಿದ್ದರು. ಅಪಘಾತದ ನಂತರ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದರು. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಅಪಘಾತದ ಬಗ್ಗೆ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/important-information-for-ganesha-idol-installation-organisers-legal-action-will-be-taken-if-this-mistake-is-done/ https://kannadanewsnow.com/kannada/good-news-good-news-for-motorists-petrol-diesel-prices-to-be-reduced-soon-report/

Read More

ಬಳ್ಳಾರಿ : ಜೆಸ್ಕಾಂ ನಗರ ವ್ಯಾಪ್ತಿಗೆ ಬರುವ ವಿದ್ಯುತ್ ಗ್ರಾಹಕರು ಗಣೇಶ ಹಬ್ಬದ ಪ್ರಯುಕ್ತ, ಗಣೇಶ್ ವಿಗ್ರಹ ಕೂಡಿಸುವುದಕ್ಕೆ ಅನಧಿಕೃತವಾಗಿ ವಿದ್ಯುತ್ ಬಳಸದೆ, ಇಲಾಖೆಯ ನಿಯಮಾನುಸಾರ ಅನುಮೋದನೆ ಪಡೆದು ಅಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದುಕೊಳ್ಳಬೇಕು ಜೆಸ್ಕಾಂನ ನಗರ ಉಪವಿಭಾಗದ 1 ಮತ್ತು 2 ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಸೂಚನೆ ನೀಡಿದ್ದಾರೆ. ನಿಭಂದನೆಗಳು: ಸಾರ್ವಜನಿಕರು ಯಾವುದೇ ಹೆಚ್.ಟಿ ಅಥವಾ ಎಲ್.ಟಿ ವಿದ್ಯುತ್ ಜಾಲಗಳ ಅಡಿಯಲ್ಲಿ ಗಣೇಶ್ ಚತುರ್ಥಿಯ ಪೆಂಡಾಲ್ ನಿರ್ಮಿಸಬಾರದು. ವಿದ್ಯುತ್ ಕಂಬಗಳಿಗೆ ಅಥವಾ ಪರಿವರ್ತಕ ಕೇಂದ್ರದ ಕಂಬಗಳಿಗೆ ಶಾಮಿಯಾನ ಕಟ್ಟುವುದಾಗಲೀ ಅಥವಾ ಬ್ಯಾನರ್‌ಗಳನ್ನು ಕಟ್ಟಬಾರದು. ನಿಯಮಗಳ ಉಲ್ಲಂಘಂನೆಯ ವಿದ್ಯುತ್‌ನಿಂದ ಆಗುವ ಅನಾಹುತಗಳಿಗೆ ಸಂಘಟನೆಯ ಮುಖ್ಯಸ್ತರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಜೆಸ್ಕಾಂ ಇಲಾಖೆ ಪ್ರಕಟಣೆ ತಿಳಿಸಿದೆ. https://kannadanewsnow.com/kannada/delay-in-allotment-of-e-assets-minister-priyank-kharge-suggests-simplification/ https://kannadanewsnow.com/kannada/bbmp-to-set-up-462-temporary-mobile-tanks-for-ganesh-idol-immersion-in-bengaluru/ https://kannadanewsnow.com/kannada/good-news-good-news-for-motorists-petrol-diesel-prices-to-be-reduced-soon-report/

Read More

ಬೆಂಗಳೂರು: ಗ್ರಾಮೀಣ ಪ್ರದೇಶಗಳ ಆಸ್ತಿಗಳಿಗೆ ಸಂಬಂಧಿಸಿದದಂತೆ ಗ್ರಾಮ ಪಂಚಾಯತಿಗಳು ವಿತರಿಸುತ್ತಿರುವ ಇ-ಸ್ವತ್ತು ದಾಖಲೆ ಪಡೆಯುವಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿದ್ದು, ಸಂಬಂಧಿಸಿದ ತಂತ್ರಜ್ಞಾನವನ್ನು ಅಳವಡಿಸಿರುವ ಕೇಂದ್ರ ಸರ್ಕಾರದ ಎನ್.ಐ.ಸಿ ಸೇವೆಯನ್ನು ರದ್ದು ಮಾಡಲು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು. ಗ್ರಾಮೀಣ ರೈತರ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕಿದ್ದ ಇ-ಸ್ವತ್ತು ಕಾರ್ಯಕ್ರಮ ಕಳೆದ ಎಂಟು ತಿಂಗಳಿಂದ ಒಂದಲ್ಲ ಒಂದು ಕಾರಣಕ್ಕೆ ಸಮರ್ಪಕವಾಗಿ ಕಾರ್ಯನಿರ್ವಹಿಸದಿದ್ದರೂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿರುವುದನ್ನು ಸಚಿವರು ಆಕ್ಷೇಪಿಸಿದರಲ್ಲದೆ ತಕ್ಷಣವೇ ಪರ್ಯಾಯ ಕ್ರಮಗಳನ್ನು ತೆಗೆದುಕೊಂಡು ವಿಳಂಬವಿಲ್ಲದೆ ಹಾಗೂ ಭ್ರಷ್ಟಾಚಾರರಹಿತವಾಗಿ ಇ-ಸ್ವತ್ತು ದಾಖಲೆಗಳನ್ನು ನೀಡುವಂತೆ ಮಾರ್ಪಾಡುಗಳನ್ನು ತರಬೇಕೆಂದು ಸಚಿವರು ಸೂಚಿಸಿದರು. ಕಾರ್ಯಕ್ರಮವನ್ನು ಸಬಲೀಕರಣಗೊಳಿಸುವದರೊಂದಿಗೆ ಸರಳೀಕರಣಗೊಳಿಸಲು ಸೂಚಿಸಿದ ಸಚಿವರು ಭ್ರಷ್ಟಾಚಾರರಹಿತವಾಗಿ ಜನರು ಇ-ಸ್ವತ್ತುದಾಖಲೆಗಳನ್ನು ಶೀಘ್ರಗತಿಯಲ್ಲಿ ಪಡೆದುಕೊಳ್ಳುವಂತೆ ವ್ಯವಸ್ಥೆಗೆ ಕಾಯಕಲ್ಪ ನೀಡಲು ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಹೇಳಿದರು. ತಂತ್ರಜ್ಞಾನ ಕೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದ್ದರೂ, ಕೇಂದ್ರ ಸರ್ಕಾರದ ಎನ್.ಐ.ಸಿ ಸಂಸ್ಥೆ ತಂತ್ರಜ್ಞಾನ ಅಳವಡಿಕೆಯಲ್ಲಿ ಇನ್ನೂ ಬಹಳಷ್ಟು ಹಿಂದೆ ಇರುವುದರಿಂದ…

Read More

ಬೆಂಗಳೂರು: ಗಣೇಶ ಮೂರ್ತಿ ವಿಸರ್ಜನೆಗೆ ಬಿಬಿಎಂಪಿಯು ಸಕಲ ತಯಾರಿ ಮಾಡಿಕೊಂಡಿದೆ. 41 ಕೆರೆ ಅಂಗಳದಲ್ಲಿ ಶಾಶ್ವತ / ತಾತ್ಕಾಲಿಕ ಕಲ್ಯಾಣಿಗಳು, 462 ತಾತ್ಕಾಲಿಕ ಮೊಬೈಲ್‌ ಟ್ಯಾಂಕ್‌ ವ್ಯವಸ್ಥೆ ಮಾಡಲಾಗಿದೆ. ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಪಡೆಯಲು 63 ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಅನುಮತಿ ಪಡೆಯಲು 63 ಏಕಗವಾಕ್ಷಿ ಕೇಂದ್ರಗನ್ನು ತೆರೆಯಲಾಗಿದೆ. ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 41 ಕೆರೆ ಅಂಗಳದ ಶಾಶ್ವತ/ತಾತ್ಕಾಲಿಕ ಕಲ್ಯಾಣಿಗಳು, 462 ತಾತ್ಕಾಲಿಕ ಮೊಬೈಲ್ ಟ್ಯಾಂಕ್ ಗಳ ವ್ಯವಸ್ಥೆಯನ್ನು ಪಾಲಿಕೆಯ ಎಲ್ಲಾ ವಾರ್ಡ್ ಗಳಲ್ಲಿ ಮಾಡಲಾಗಿರುತ್ತದೆ. ಮುಂದುವರಿದು, ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅದರ ಸಂಪೂರ್ಣ ವಿವರಗಳಿಗಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ಪಾಲಿಕೆ ವೆಬ್ ಸೈಟ್ ಲಿಂಕ್ https://apps.bbmpgov.in/ganesh2024/ ಗೆ ಭೇಟಿ ನೀಡಿ ಮಾಹಿತಿ…

Read More

ಬೆಂಗಳೂರು: ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್‌ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ಸೆ. 8 ಮತ್ತು 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್‌ ಕೌಂಟರ್‌ಗಳು ತೆರೆದಿರಲಿವೆ ಎಂದು ಬೆಸ್ಕಾಂ ತಿಳಿಸಿದೆ. ಈ ಕುರಿತು ಶುಕ್ರವಾರ ಪತ್ರಿಕಾ ಪ್ರಕಟಣೆ ಹೊರಡಿಸಿ, ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್‌ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗಬಾರದು ಎಂಬ ಉದ್ದೇಶದಿಂದ ಬೆಸ್ಕಾಂ ವಲಯದ ಎಲ್ಲ ಉಪ ವಿಭಾಗಗಳ ಕ್ಯಾಶ್‌ ಕೌಂಟರ್‌ ಗಳನ್ನು ಈ ತಿಂಗಳ 8 ಮತ್ತು 15ರ ಭಾನುವಾರವೂ ತೆರೆಯಲು ನಿರ್ಧರಿಸಲಾಗಿದೆ. ಆನ್‌ಲೈನ್‌ ಪೇಮೆಂಟ್‌ ಬಳಸದವರ ಅನಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಬಿಲ್‌ ಬಂದ 30 ದಿನದೊಳಗೆ ವಿದ್ಯುತ್‌ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್‌ 1ರಿಂದಲೇ ಈ ನಿಯಮ ಜಾರಿಯಾಗಿದೆ ಎಂದು ಹೇಳಿದೆ. ಗೃಹ ಮತ್ತು ವಾಣಿಜ್ಯ ಬಳಕೆದಾರರು,…

Read More

ಸಕಲೇಶಪುರ : ಎತ್ತಿನಹೊಳೆ ಬಯಲು ಸೀಮೆಯ ಜನರ ಬದುಕಿನ ಜೇನಿನ ಹೊಳೆ, ಬಯಲು ಸೀಮೆ ಬರ ನೀಗಿಸುವ ಜೀವದ ಹೊಳೆ. ಗೌರಿ ಹಬ್ಬದಂದು ಗಂಗೆಗೆ ಬಾಗಿನ ಅರ್ಪಿಸಿ, 10 ವರ್ಷಗಳ ಭಗೀರಥ ಪ್ರಯತ್ನ ನಡೆಸಿ, ಎತ್ತಿನಹೊಳೆ ಏತ ನೀರಾವರಿ ಯೋಜನೆಯನ್ನು ನಮ್ಮ ಕಾಂಗ್ರೆಸ್ ಸರ್ಕಾರ ಸಾಕಾರಗೊಳಿಸಿದೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ಹೆಬ್ಬನಹಳ್ಳಿಯ ವಿತರಣಾ ತೊಟ್ಟಿ- 4 ರ ಬಳಿ ಸಿಎಂ ಸಿದ್ದರಾಮಯ್ಯ ಅವರು ಹಾಗೂ ಸಂಪುಟ ಸಹೋದ್ಯೋಗಿಗಳು, ಶಾಸಕ ಮಿತ್ರರ ಜೊತೆ ಬಾಗಿನ ಅರ್ಪಿಸಿ ನಂತರ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು “ಕರ್ನಾಟಕದ ನೀರಾವರಿ ಇತಿಹಾಸದಲ್ಲೇ ಇದೊಂದು ಮಹತ್ವದ ದಿನ. ನೂರಾರು ಟೀಕೆಗಳನ್ನು ಎದುರಿಸಿದ್ದಕ್ಕೆ ಸಕಲೇಶ್ವರನ ಪುಣ್ಯ ಕ್ಷೇತ್ರದಿಂದ ವಾಣಿವಿಲಾಸದ ತಾಯಿ ಕಣಿವೆ ಮಾರಮ್ಮನ ಸನ್ನಿಧಿಗೆ ನೀರು ಹರಿಯುತ್ತಿದೆ. ನನ್ನ ಬದುಕಿನಲ್ಲೇ ಎಂದೆಂದಿಗೂ ಮರೆಯಲಾಗದ ಚರಿತ್ರೆಯ ದಿನ. ಗಂಗಾ ಮಾತೆ ಗೌರಿ ಹಬ್ಬದಂದು ಘಟ್ಟ ಹತ್ತಿ ಇಳಿಯುತ್ತಿದ್ದಾಳೆ” ಎಂದು ಹೇಳಿದರು. “ಈ ಹಿಂದೆ ಮುಖ್ಯಮಂತ್ರಿಗಳು ಇಂಧನ…

Read More

ಬೆಂಗಳೂರು: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಅಧೀನಕ್ಕೆ ಒಳಪಡುವ ಎಲ್ಲಾ ಸಮುದಾಯದ ನಿಗಮದ ವತಿಯಿಂದ ಪ್ರಸಕ್ತ ಸಾಲಿನ ವಿವಿಧ ಯೋಜನೆಗಳ ಸಾಲ ಸೌಲಭ್ಯಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆ.15ರ ವರೆಗೆ ವಿಸ್ತರಿಸಲಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ಧಿ ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ. ವಿವಿಧ ನಿಗಮಗಳ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವ್ಯಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ), ಹೊಲಿಗೆ ಯಂತ್ರ ವಿತರಣೆ ಯೋಜನೆ (ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮಕ್ಕೆ ಮಾತ್ರ), ಸ್ವಾತಂತ್ರö್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಜಿದಾರರು ಕರ್ನಾಟಕ-ಒನ್, ಅಟಲ್-ಜಿ, ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‌ನ ಯಡಿ ಅರ್ಜಿ ಸಲ್ಲಿಸಬಹುದು…

Read More

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ನಗರ ಶಿಶು ಅಭಿವೃದ್ದಿ ಯೋಜನೆಯಡಿ ಉದ್ಯೋಗಿನಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಸೆ.20ರೊಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ. ಮಹಿಳೆಯರಿಗೆ ವ್ಯಾಪಾರ, ಸೇವಾ ಹಾಗೂ ಗುಡಿ ಕೈಗಾರಿಕ ಚಟುವಟಿಕೆಗಳಿಗೆ ಆರ್ಥಿಕ ನೀಡಲು ಉದ್ದೇಶಿಸಲಾಗಿದ್ದು, ಮಹಿಳಾ ಫಲಾನುಭವಿಗಳು ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಬೇಕಾದ ದಾಖಲೆ: ನಿಗದಿತ ಅರ್ಜಿ ನಮೂನೆ ಭರ್ತಿ ಮಾಡಿದ ಮೂರು ಪ್ರತಿಗಳಲ್ಲಿ ಜೆರಾಕ್ಸ್, ಜಾತಿ ಪ್ರಮಾಣ ಮತ್ತು ಕುಟುಂಬದ ವಾರ್ಷಿಕ ಆದಾಯ ಪತ್ರ, ಪ್ರಸಕ್ತ ಸಾಲಿನ ಕುಟುಂಬ ಆದಾಯ ಪ್ರಮಾಣ ಪತ್ರ (ತಹಶೀಲ್ದಾರರು ಬಳ್ಳಾರಿ ಇವರು ನೀಡಿರುವ ಆದಾಯ ಪ್ರಮಾಣ ಪತ್ರ) ವಾರ್ಷಿಕ ಆದಾಯ ರೂ.40 ಸಾವಿರ ಒಳಗಡೆ ಇರಬೇಕು. ವಾಸಸ್ಥಳ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ ಸಲ್ಲಿಸಿರಬೇಕು. ಅರ್ಜಿ ಸಲ್ಲಿಸುವ ಮಹಿಳೆಯ ಬ್ಯಾಂಕ್…

Read More

ಶಿವಮೊಗ್ಗ: ಜಿಲ್ಲೆಯ ಸಾಗರ, ಹೊಸನಗರ, ಸೊರಬ ತಾಲ್ಲೂಕಿನಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆಯಲು ಆಯಾ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಮೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರಾದಂತ ವೆಂಕಟೇಶ ತಿಳಿಸಿದ್ದಾರೆ. ಈ ಸಂಬಂಧ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ವಿಳಂಬವಿಲ್ಲದೇ, ನಿಯಮಾವಳಿಗಳ ಅನ್ವಯ ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವಂತೆ ಉಪವಿಭಾಗೀಯ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ. ಹಬ್ಬದ ಸಂಭ್ರಮದ ಜತೆಗೆ ಸುರಕ್ಷತೆ ಬಗ್ಗೆಯೂ ಸಾವರ್ಜನಿಕರು ಕಾಳಜಿ ವಹಿಸಬೇಕು. ಗಣೇಶೋತ್ಸವಕ್ಕೆ ಬೆಳಕಿನ ವ್ಯವಸ್ಥೆ, ದೀಪಾಲಂಕಾರಕ್ಕೆ ಮೆಸ್ಕಾಂ ವತಿಯಿಂದ ಸಹಕಾರ ನೀಡಲಾಗುವುದು. ಸಾರ್ವಜನಿಕ ಗಣೇಶೋತ್ಸವದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ವೇಳೆ ಕೈಗೊಳ್ಳ ಬೇಕಾದ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ವಿದ್ಯುತ್‌ ಅವಘಡಗಳಾಗದಂತೆ ಎಚ್ಚರವಹಿಸಿ ಎಂದು ಸಾಗರ, ಸೊರಬ ಹಾಗೂ ಹೊಸನಗರ ತಾಲ್ಲೂಕು ಮೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರಾದಂತ ವೆಂಕಟೇಶ ಮನವಿ ಮಾಡಿದ್ದಾರೆ. ಈ ಸುರಕ್ಷತಾ ಕ್ರಮಗಳ ಪಾಲನೆ ಕಡ್ಡಾಯ * ಗಣೇಶ ಹಬ್ಬಕ್ಕೆ ತೋರಣ, ಪೆಂಡಾಲ್‌, ಸೀರಿಯಲ್ ಲೈಟ್‌ಗಳನ್ನು ಹಾಕುವ…

Read More