Author: kannadanewsnow09

ಶಿವಮೊಗ್ಗ: ನಾನು ಹಾಗೂ ಸಿದ್ದರಾಮಯ್ಯ ಅವರು ರಾಜ್ಯದ ಜನರಿಗೆ ಐದು ಗ್ಯಾರಂಟಿ ಯೋಜನೆಗಳ ಭರವಸೆ ನೀಡಿದ್ದೆವು. ಇಂದು ಆ ಐದು ಗ್ಯಾರಂಟಿಗಳನ್ನೂ ಸಮರ್ಪಿಸಿ ನಿಮ್ಮ ಮುಂದೆ ನಿಂತಿದ್ದೇವೆ. ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯಾ, ಪದುಮನಾಭನ ಪಾದ ಭಜನೆ ಪರಮಸುಖವಯ್ಯಾ ಎಂಬ ಪುರಂದರ ದಾಸರ ಕೀರ್ತನೆಯಂತೆ ಕುವೆಂಪು ಅವರ ಈ ಪವಿತ್ರವಾದ ಭೂಮಿಯಲ್ಲಿ ಕೊಟ್ಟ ಮಾತನ್ನು ಉಳಿಸಿಕೊಂಡಿರುವುದು ನಮ್ಮ ಭಾಗ್ಯ. ನಮ್ಮ ಸರ್ಕಾರ ನುಡಿದಂತೆ ನಡೆದು ಇಡೀ ದೇಶಕ್ಕೆ ಮಾದರಿಯಾಗಿದೆ ಎಂಬುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಇಂದು ಯುವನಿಧಿ ಯೋಜನೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಈ ಯೋಜನೆಗಳನ್ನು ನಿಮ್ಮ ಜೇಬು ತುಂಬಿಸಲು ಮಾತ್ರವಲ್ಲ ನಿಮಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಿ, ಕುಟುಂಬದ ಆತ್ಮವಿಶ್ವಾಸ ಹೆಚ್ಚಿಸಲು, ಮಾನಸಿಕವಾಗಿ ಧೈರ್ಯ ತುಂಬಿ ನಿಮ್ಮ ಬದುಕಿನಲ್ಲಿ ಬದಲಾವಣೆ ತರಲು ಜಾರಿಗೆ ತಂದಿದ್ದೇವೆ ಎಂದರು. ದೇವರು ವರ ಹಾಗೂ ಶಾಪ ನೀಡುವುದಿಲ್ಲ. ಕೇವಲ ಅವಕಾಶ ಮಾತ್ರ ನೀಡುತ್ತಾನೆ. ಆತ ಕೊಟ್ಟಿರುವ ಅವಕಾಶದಲ್ಲಿ…

Read More

ಬೆಂಗಳೂರು: ಹಾವೇರಿ ನೈತಿಕ ಪೊಲಿಸ್ ಗಿರಿ ಬಗ್ಗೆ ಈ ಸರ್ಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕರಾವಳಿ ಭಾಗದಲ್ಲಿ ನೈತಿಕ ಪೊಲಿಸ್ ಗಿರಿ ನಡೆದಾಗ ಜೋರಾಗಿ ಮಾತನಾಡುತ್ತಿದ್ದರು. ಈಗ ಹಾವೇರಿ ಪ್ರಕರಣದ ಕುರಿತು ಸಿಎಂ ಯಾವುದೇ ಮಾತನಾಡುತ್ತಿಲ್ಲ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದವಳು ಅಲ್ಪ ಸಂಖ್ಯಾತ ಮಹಿಳೆ ಅವಳಿಗೂ ರಕ್ಷಣೆ ನೀಡದೆ ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯುವತಿ ಮೇಲೆ ಗ್ಯಾಂಗ್ ರೇಪ್ ಆಗಿದೆ. ಆರಂಭದಲ್ಲಿ ಪೊಲಿಸರು ಅದನ್ನು ತಳ್ಳಿ ಹಾಕುವ ಪ್ರಯತ್ನ ‌ನಡೆಸಿದರು. ಆರೋಪಿಗಳಿಗೆ ಜಾಮೀನು ಸಿಗುವಂತ ಪ್ರಕರಣ ದಾಖಲಿಸಿದರು. ಯುವತಿ ದೈರ್ಯವಾಗಿ ತನ್ನ ಮೇಲೆ ಅತ್ಯಾಚಾರವಾಗಿದೆ ಎಂದು ಹೇಳಿದ್ದಾಳೆ. ಇದರಿಂದ ಪ್ರಕರಣ ಗಂಭೀರವಾಗಿದೆ. ಮತ್ತೊಂದು ಬಾರಿ ಯುವತಿಯ ಮೆಡಿಕೆಲ್ ಟೆಸ್ಟ್ ಆಗಬೇಕು. ಸಿಎಂ ಸಿದ್ದರಾಮಯ್ಯ ಅಲ್ಪ ಸಂಖ್ಯಾತರ ಚಾಂಪಿಯನ್. ಇಲ್ಲಿ ಅಲ್ಪ ಸಂಖ್ಯಾತ ಯುವತಿಯ ಮೇಲೆ ಅತ್ಯಾಚಾರವಾಗಿದೆ. ಆ ಯುವತಿಯ ರಕ್ಷಣೆಗೂ ಮುಂದಾಗುತ್ತಿಲ್ಲ ಎಂದು ಆರೋಪಿಸಿದರು. ರಾಜ್ಯದಲ್ಲಿ…

Read More

ಶಿವಮೊಗ್ಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಗ್ಯಾರಂಟಿ ಯೋಜನೆ ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಜಾರಿಯಾಗುತ್ತಿರುವುದು ಐತಿಹಾಸಿಕ ಮತ್ತು ಹೆಮ್ಮೆಯ ಸಂಗತಿ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ಹೇಳಿದರು. ಅವರು ಇಂದು ಕೌಶಲ್ಯಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಶಿವಮೊಗ್ಗದ ಫ್ರೀಡಂ ಪಾರ್ಕ್ ಆವರಣದಲ್ಲಿ ಆಯೋಜಿಸಲಾಗಿದ್ದ ಯುವ ನಿಧಿ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜ್ಯದ ಯುವ ಸಮುದಾಯಕ್ಕೆ ಬೆನ್ನಲುಬಾಗಿ ನಿಂತು ಅವರ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಸದಾ ಬದ್ಧವಾಗಿದೆ. ಅದರಲ್ಲೂ ಈ ಯುವನಿಧಿ ಯೋಜನೆಯೂ ಹೋರಾಟದ ನೆಲ, ಸರ್ವಜನಾಂಗದ ಶಾಂತಿಯ ತೋಟ ಎಂದು ವಿಶ್ವಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು ಅವರ ಜಿಲ್ಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನದಂದು ಮಲೆನಾಡಿನಿಂದ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಜಾರಿಯಾಗುತ್ತಿದೆ. ಇದು ರಾಜ್ಯದ ಜನತೆಗೆ ಐತಿಹಾಸಿಕ ಮತ್ತು ಹೆಮ್ಮೆಯ ಸಂಗತಿಯಾಗಿದೆ. ಇದರ ಉಪಯೋಗವನ್ನು ರಾಜ್ಯದ ಯುವ ಸಮುದಾಯ…

Read More

ಶಿವಮೊಗ್ಗ : ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು. ಇವರ ಜನ್ಮ ದಿನದಂದೇ ನನ್ನ ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಯುವನಿಧಿ ಜಾರಿ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಶಿವಮೊಗ್ಗದಲ್ಲಿ ಲಕ್ಷಾಂತರ ಯುವಸಮೂಹದ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಗ್ಯಾರಂಟಿ “ಯುವನಿಧಿ” ಯೋಜನೆಯನ್ನು ಉದ್ಘಾಟಿಸಿ ಮಾತನಾಡಿ, ನಾನು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸುರ್ಜೇವಾಲ ಅವರು ಚುನಾವಣಾ ಪೂರ್ಣ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ನಿರುದ್ಯೋಗ ಸಮಸ್ಯೆ, ರೈತರ ಸಮಸ್ಯೆ ಹೆಚ್ಚಾಗಿ, ಆಹಾರ ಪದಾರ್ಥಗಳ ಬೆಲೆ ಗಗನಕ್ಕೆ ಏರಿರುವ ಸಂದರ್ಭದಲ್ಲಿ ಸಮಾಜದ ಎಲ್ಲಾ ವರ್ಗಗಳ ಸಮಸ್ಯೆಗೆ ಪರಿಹಾರವಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆವು. ಪ್ರಣಾಳಿಕೆಯಲ್ಲಿ ಘೋಷಿಸಿದೆವು. ಘೋಷಿಸಿದಂತೆ ಜಾರಿ ಮಾಡಿದ್ದೇವೆ. ಮೊದಲ ಗ್ಯಾರಂಟಿ ಯೋಜನೆಯಿಂದಾಗಿ 130 ಕೋಟಿ 28 ಲಕ್ಷ ಮಹಿಳೆಯರು, ಯುವತಿಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. 1…

Read More

ದೊಡ್ಡಬಳ್ಳಾಪುರ: ರೈತರು ಬ್ಯಾಂಕ್ ನಲ್ಲಿ ಇರಿಸಲಾಗಿದ್ದಂತ ಹಣವನ್ನು ಏಕಾಏಕಿ ಕಡಿತಗೊಂಡಿದ್ದರಿಂದ ಅಚ್ಚರಿಯಿಂದ ಬ್ಯಾಂಕ್ ಮುಂದೆ ಜಮಾಯಿಸಿದಂತ ಘಟನೆ ದೊಡ್ಡಬಳ್ಳಾಪುರದ ತೂಬಗೆರೆಯ ಯೂನಿಯನ್ ಬ್ಯಾಂಕ್ ನಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯಲ್ಲಿರುವಂತ ಯೂನಿಯನ್ ಬ್ಯಾಂಕ್ ನಲ್ಲಿ ರೈತರು ಹಣವನ್ನು ಇರಿಸಿದ್ದರು. ಈ ಹಣವನ್ನು ಏಕಾಏಕಿ ಕಡಿತಗೊಳಿಸಿರೋ ಬಗ್ಗೆ ಸಂದೇಶ ಬಂದಿತ್ತು. ಸಂದೇಶ ನೋಡಿದಂತ ರೈತರು ಎದ್ದನೋ ಬಿದ್ದನೋ ಅಂತ ಯೂನಿಯನ್ ಬ್ಯಾಂಕ್ ಬಳಿಗೆ ಓಡೋಡಿ ಹೋಗಿ, ಹಣ ಕಡಿತವಾದಂತ ಬಗ್ಗೆ ಬ್ಯಾಂಕ್ ಸಿಬ್ಬಂದಿಯನ್ನು ವಿಚಾರಿಸಿದಾಗ ಸರಿಯಾದ ಉತ್ತರ ನೀಡಲಿಲ್ಲ. ಸಿಬ್ಬಂದಿ ಸರಿಯಾಗಿ ಉತ್ತರಿಸಿದ ಕಾರಣ ರೈತರು ಯೂನಿಯನ್ ಬ್ಯಾಂಕ್ ಮುಂದೆ ಜಮಾಯಿಸಿ ಸಾವಿರಾರೂ ರೂಪಾಯಿ ಹಣ ಕಡಿತ ಯಾಕೆ ಆಗಿದೆ ಅಂತ ಮಾಹಿತಿ ನೀಡುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ. https://kannadanewsnow.com/kannada/debris-of-iafs-an-32-aircraft-that-mysteriously-went-missing-in-2016-found-after-8-years/ https://kannadanewsnow.com/kannada/pm-modi-inaugurate-mumbai-trans-harbour-link/

Read More

ಬೆಂಗಳೂರು: ಜೆಟ್ ಲ್ಯಾಬ್ ಎನ್ನುವಂತ ಪಬ್ ಒಂದರಲ್ಲಿ ನಿಯಮ ಮೀರಿ ತಡರಾತ್ರಿ ಕಾಟೇರ ಸಿನಿಮಾ ಸಕ್ಸಸ್ ಪಾರ್ಟಿ ಮಾಡಿದಂತ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿತ್ತು. ನಿಯಮ ಮೀರಿ ಪಾರ್ಟಿ ಮಾಡಿದಂತ ಚಿತ್ರ ತಂಡದ ನಟ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಹಲವು ಸ್ಯಾಂಡಲ್ ವುಡ್ ಸೆಲೆಬ್ರೆಟಿಗಳಿಗೆ ಸುಬ್ರಹ್ಮಣ್ಯ ನಗರ ಠಾಣೆಯ ಪೊಲೀಸರು ನೋಟಿಸ್ ನೀಡಿದ್ದರು. ಈ ನೋಟಿಸ್ ಹಿನ್ನಲೆಯಲ್ಲಿ ಇದೀಗ ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರಿನ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ಪಬ್ ಒಂದರಲ್ಲಿ ಕಾಟೇರ ಸಿನಿಮಾ ಸಕ್ಸಸ್ ಪಾರ್ಟಿಯನ್ನು ನಡೆಸಲಾಗಿತ್ತು. ಮಧ್ಯರಾತ್ರಿ 1.30ರವರೆಗೆ ಪಾರ್ಟಿಯನ್ನು ನಡೆಸುತ್ತಿದ್ದಾಗ ಸ್ಥಳೀಯರು ಪೊಲೀಸರಿಗೆ ಅತಿಯಾದ ಸೌಂಡ್ ಕಾರಣ ದೂರು ನೀಡಿದ್ದರು. ಸ್ಥಳಕ್ಕೆ ತೆರಳಿದ್ದಂತ ಪೊಲೀಸರು ಪರಿಶೀಲನೆ ನಡೆಸಿದಾಗ ನಿಯಮ ಮೀರಿ, ತಡರಾತ್ರಿ ಪಾರ್ಟಿ ಮಾಡುತ್ತಿರೋದು ಕಂಡು ಬಂದಿತ್ತು. ಈ ಸಂಬಂಧ ನಟ ದರ್ಶನ್, ರಾಕ್ ಲೈನ್ ವೆಂಕಟೇಶ್, ಡಾಲಿ ಧನಂಜಯ್, ಸಂಗೀತ ನಿರ್ದೇಶ ವಿ.ಹರಿಕೃಷ್ಣ, ತರುಣ್ ಸುಧೀರ್, ಅಭಿಷೇಕ್ ಅಂಬರೀಶ್, ಚಿಕ್ಕಣ್ಣ ಸೇರಿದಂತೆ…

Read More

ಬೆಂಗಳೂರು: ನಿಯಮ ಮೀರಿ ತಡರಾತ್ರಿ ಪಬ್ ನಲ್ಲಿ ಪಾರ್ಟಿ ಮಾಡಿದಂತ ನಟ ದರ್ಶನ್ ( Actor Darshan ) ಸೇರಿದಂತೆ ಹಲವು ಸೆಲೆಬ್ರೆಟಿಗಳಿಗೆ ನೋಟಿಸ್ ನೀಡಿ, ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈ ಹಿನ್ನಲೆಯಲ್ಲಿ ಇದೀಗ ನಟ ದರ್ಶನ್ ಅವರು ಬೆಂಗಳೂರಿನ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯ ವಿಚಾರಣಾಧಿಕಾರಿಗಳ ಮುಂದೆ ವಿಚಾರಣೆ ಹಾಜರಾಗಿದ್ದಾರೆ. ಜೆಟ್ ಲ್ಯಾಬ್ ನಲ್ಲಿ ತಡರಾತ್ರಿ ಪಾರ್ತಿ ಮಾಡಿದಂತ ಪ್ರಕರಣ ಸಂಬಂಧ ಸುಬ್ರಹ್ಮಣ್ಯ ನಗರ ಠಾಣೆಯ ಪೊಲೀಸರು ನಟ ದರ್ಶನ್, ನಿನಾನಸಂ ಸತೀಶ್ ಸೇರಿದಂತೆ ವಿವಿಧ ಸ್ಯಾಂಡಲ್ ವುಡ್ ನಟರಿಗೆ ನೋಟಿಸ್ ನೀಡಿದ್ದರು. ಈ ನೋಟಿಸ್ ಗೆ ಈಗಾಗಲೇ ಹಲವು ಸೆಲೆಬ್ರೆಟಿಗಳು ಪೊಲೀಸರ ಮುಂದೆ ವಿಚಾರಣೆ ಹಾಜರಾಗಿ ತಮ್ಮ ಹೇಳಿಕೆ ನೀಡಿದ್ದರು. ದುಬೈ ಪ್ರವಾಸದಲ್ಲಿದ್ದಂತ ನಟ ದರ್ಶನ್ ಮಾತ್ರ ಹಾಜರಾಗಿರಲಿಲ್ಲ. ಇದೀಗ ದುಬೈನಿಂದ ವಾಪಾಸ್ ಆಗಿರುವ ಹಿನ್ನಲೆಯಲ್ಲಿ ಅವರು ಕೂಡ ಸುಬ್ರಹ್ಮಣ್ಯ ನಗರ ಠಾಣೆಯ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರಿನ ಆರ್ ಆರ್ ನಗರದ ತಮ್ಮ ನಿವಾಸದಿಂದ ತೆರಳಿದಂತ…

Read More

ಬೆಂಗಳೂರು: ನಮ್ಮ ಮೆಟ್ರೋ ಎಂಡಿಯಾಗಿದ್ದಂತ ಅಂಜುಂ ಪರ್ವೇಜ್ ಅವರನ್ನು ವರ್ಗಾವಣೆ ಮಾಡಿ, ರಾಜ್ಯ ಸರ್ಕಾರ ನೂತನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಎಂ.ಮಹೇಶ್ವರ ರಾವ್ ಅವರನ್ನು ನೇಮಿಸಿತ್ತು. ಇಂತಹ ಅವರು ಇಂದು ಬಿಎಂಆರ್ ಸಿಎಲ್ ನೂತನ ಎಂ.ಡಿಯಾಗಿ ಅಧಿಕಾರವನ್ನು ಸ್ವೀಕರಿಸಿದ್ದಾರೆ. ಎಂ. ಮಹೇಶ್ವರ ರಾವ್, ಭಾ.ಆ.ಸೇ ಅವರು ಇಂದು ದಿನಾಂಕ 12.01.2024 ರಂದು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡರು. ಇದಕ್ಕೂ ಮೊದಲು ಅವರು ಬೆಂಗಳೂರಿನ ಬಾಹ್ಯಾಕಾಶ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಮತ್ತು ಹಣಕಾಸು ಸಲಹೆಗಾರ ಹುದ್ದೆಯನ್ನು ಹೊಂದಿದ್ದರು. ಎಂ. ಮಹೇಶ್ವರ ರಾವ್, ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ನಿಜಾಮ್ ಕಾಲೇಜಿನಲ್ಲಿ ಗಣಿತ, ಅರ್ಥಶಾಸ್ತ್ರ ಮತ್ತು ಅಂಕಿಅಂಶಗಳಲ್ಲಿ ಬಿಎ, ಹೈದರಾಬಾದ್ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ NUS ಮತ್ತು ಹಾರ್ವಡ್ ವಿಶ್ವವಿದ್ಯಾಲಯದಿಂದ ಸಾರ್ವಜನಿಕ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕರ್ನಾಟಕ ಸರ್ಕಾರದಲ್ಲಿ ಹಲವಾರು ಹುದ್ದೆಗಳನ್ನು ಅಲಂಕರಿಸಿದ್ದರು. ಅವರು ಮಂಡ್ಯ, ಮಂಗಳೂರು, ಬೆಳಗಾವಿ ಮತ್ತು ಹಾಸನ ಜಿಲ್ಲಾಧಿಕಾರಿಯಾಗಿ ಸೇವೆ…

Read More

ಮುಂಬೈ: ನಗರ ಸಾರಿಗೆ ಮೂಲಸೌಕರ್ಯ ಮತ್ತು ಸಂಪರ್ಕವನ್ನು ಬಲಪಡಿಸುವ ಮೂಲಕ ಜನರ ಚಲನಶೀಲತೆಯನ್ನು ಹೆಚ್ಚಿಸುವ ದೃಷ್ಟಿಕೋನಕ್ಕೆ ಅನುಗುಣವಾಗಿ, ಪ್ರಧಾನಿ ನರೇಂದ್ರ ಮೋದಿ ( Prime Minister Narendra Modi ) ಅವರು ದೇಶಳದ ಅತಿ ಉದ್ದದ ಸಮುದ್ರ ಸೇತುವೆಯಾಗಿರುವಂತ ಮುಂಬೈ ಟ್ರಾನ್ಸ್-ಹಾರ್ಬರ್ ಲಿಂಕ್ ( Mumbai Trans-harbour link -MTHL) ಅನ್ನು ಉದ್ಘಾಟಿಸಿದರು. ಈಗ ‘ಅಟಲ್ ಬಿಹಾರಿ ವಾಜಪೇಯಿ ಸೇವಾರಿ-ನವಾ ಶೇವಾ ಅಟಲ್ ಸೇತು’ ( Atal Bihari Vajpayee Sewari-Nhava Sheva Atal Setu ) ಎಂದು ಹೆಸರಿಸಲಾಗಿರುವ ಈ ಸೇತುವೆಯನ್ನು 17,840 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. 2016ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಸಮುದ್ರದ ಮೇಲೆ 16.5 ಕಿ.ಮೀ ಉದ್ದ ಮತ್ತು ಭೂಮಿಯಲ್ಲಿ ಸುಮಾರು 5.5 ಕಿ.ಮೀ ಉದ್ದವನ್ನು ಹೊಂದಿರುವ ಇದು ಭಾರತದ ಅತಿ ಉದ್ದದ ಸೇತುವೆ ಮಾತ್ರವಲ್ಲದೆ ದೇಶದ ಅತಿ ಉದ್ದದ ಸಮುದ್ರ ಸೇತುವೆಯಾಗಿದೆ. ಈ ಸೇತುವೆಯು…

Read More

ಶಿವಮೊಗ್ಗ: ನಗರದಲ್ಲಿನ ಫ್ರೀಡಂ ಪಾರ್ಕ್ ಗೆ ಈವರೆಗೆ ಯಾವುದೇ ಹೆಸರಿಟ್ಟಿರಲಿಲ್ಲ. ಇಂತಹ ಪಾರ್ಕಿಗೆ ಅಲ್ಲಮ ಪ್ರಭು ಅವರ ಹೆಸರಿಡೋದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಇಂದು ಯುವನಿಧಿ ಯೋಜನೆಗೆ ಚಾಲನೆ ನೀಡಿದ ಬಳಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಅಲ್ಲಮಪ್ರಭು ಅವರಿಂದಲೇ ಇಲ್ಲಿ ಪ್ರಜಾಪ್ರಭುತ್ವ ಸ್ಥಾಪನೆ ಆಯಿತು: ಫ್ರೀಡಂಪಾರ್ಕಿಗೆ ಅಲ್ಲಮ ಪ್ರಭು ಹೆಸರು ಇಡೋದಾಗಿ ಸಿ.ಎಂ.ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು. ಅನುಭವ ಮಂಟಪದ ಅಧ್ಯಕ್ಷರಾಗಿ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಮೊದಲಿಗೆ ಈ ನೆಲದಲ್ಲಿ ಸ್ಥಾಪಿಸಿದ ಅಲ್ಲಮಪ್ರಭುವಿನ ಹೆಸರನ್ನು ಶಿವಮೊಗ್ಗದ ಫ್ರೀಡಂಪಾರ್ಕಿಗೆ ಇಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಶಿವಮೊಗ್ಗ ಜಿಲ್ಲೆಯವರೇ ಆದ ಬಸವಾದಿ ಶರಣ ಅಲ್ಲಮ ಪ್ರಭುವಿಗೆ ನಮ್ಮ ಕಾಂಗ್ರೆಸ್ ಸರ್ಕಾರ ಕೊಡುವ ಗೌರವ ಎಂದು ಬಣ್ಣಿಸಿದರು. ಮುಖ್ಯಮಂತ್ರಿಗಳು ಅಲ್ಲಮ ಪ್ರಭುವಿನ ಹೆಸರನ್ನು ಘೋಷಿಸುತ್ತಿದ್ದಂತೆ ನೆರೆದಿದ್ದ ಲಕ್ಷಾಂತರ ಮಂದಿ ಕುಳಿತಿದ್ದ ಕುರ್ಚಿಗಳಿಂದ ಮೇಲೆದ್ದು ಚಪ್ಪಾಳೆ ತಟ್ಟಿ ಕುಣಿದು, ಕೂಗಿ ಸಂಭ್ರಮದಿಂದ ಸ್ವಾಗತಿಸಿದರು. https://kannadanewsnow.com/kannada/ksrtc-bus-bike-collision-in-kalaburagi-two-riders-killed-on-the-spot/ https://kannadanewsnow.com/kannada/pm-modi-cleans-kalaram-temple-premises-in-nashik/

Read More