Author: kannadanewsnow09

ಬೆಂಗಳೂರು :  2024-25 ನೇ ಸಾಲಿಗೆ ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ (ಪ್ರವರ್ಗ-110) ಅಭಿವೃದ್ಧಿಗಾಗಿ ಶೈಕ್ಷಣಿಕ ಸಾಲ ಯೋಜನೆ (ಬಸದಬೆಳಗು ಮತ್ತು ವಿದೇಶ ವಿದ್ಯಾವಿಕಾಸ), ಜೀವಜಲ (ಗಂಗಾಕಲ್ಯಾಣ), ಸ್ವಯಂ ಉದ್ಯೋಗ ಯೋಜನೆಗಳು (ಕಾಯಕಕಿರಣ, ಸ್ವಾವಲಂಭ ಸಾರಥಿ, ವಿಭೂತಿ ನಿರ್ಮಾಣ ಘಟಕ, ಭೋಜನಾಲಯ ಕೇಂದ್ರ ಮತ್ತು ಸ್ವಯಂ ಉದ್ಯೋಗ ಬ್ಯಾಂಕ್ ಸಹಯೋಗದೊಂದಿಗೆ ) ಗಳಿಗೆ ಸೇವಾಸಿಂಧು ತಂತ್ರಾಂಶದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್/ ಬೆಂಗಳೂರು ಬನ್/ ಕರ್ನಾಟಕ ಒನ್ ನಾಗರೀಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟ‌ಲ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. 2023-24 ನೇ ಸಾಲಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಆದೇ ಯೋಜನೆಗೆ ಈ ವರ್ಷ ಮರುಅರ್ಜಿ ಸಲ್ಲಿಸುವ ಅಗತ್ಯತೆ ಇರುವುದಿಲ್ಲ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯಡಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ತರಬೇತಿಯನ್ನು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾದ ITIs, GTTC KGTTL ATDC, VTU ಮೂಲಕ ತರಬೇತಿಯನ್ನು ಪಡೆಯಲು ಅರ್ಜಿದಾರರು https://www.kaushalkar.com/…

Read More

ಬೆಂಗಳೂರು: ನಗರದ ಹೊರ ವಲಯದಲ್ಲಿರುವಂತ ನೈಸ್ ರಸ್ತೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೈಕ್ ಸಂಚಾರವನ್ನು ರಾತ್ರಿಯ ವೇಳೆಯಲ್ಲಿ ನಿಷೇಧಿಸಲಾಗಿದೆ. ಈ ಬಗ್ಗೆ ಬೆಂಗಳೂರು ನಗರ ಸಂಚಾರ ಪೊಲೀಸರಿಂದ ಮಾಹಿತಿ ನೀಡಲಾಗಿದ್ದು, ನೈಸ್ ರಸ್ತೆಯಲ್ಲಿ ದಿನದಿಂದ ದಿನಕ್ಕೆ ವಾಹನಗಳ ಅಪಘಾತ ಹೆಚ್ಚಾಗುತ್ತಿವೆ. ಅದರಲ್ಲೂ ದ್ವಿಚಕ್ರ ವಾಹನಗಳ ಸವಾರರು ಅಪಘಾತಕ್ಕೆ ಈಡಾಗುತ್ತಿರುವುದಾಗಿ ಕಳವಳ ವ್ಯಕ್ತ ಪಡಿಸಿದೆ. ಈ ಹಿನ್ನಲೆಯಲ್ಲಿ ಅಪಘಾತಗಳನ್ನು ನಿಯಂತ್ರಿಸುವ ದೃಷ್ಟಿಯಿಂದ ರಾತ್ರಿ 10 ರಿಂದ ಬೆಳಿಗ್ಗೆ 5ರ ವರೆಗೆ ದ್ವಿಚಕ್ರ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಹೀಗಾಗಿ ದ್ವಿಚಕ್ರ ವಾಹನ ಸವಾರರು ಸಹಕರಿಸುವಂತೆ ಕೋರಿದೆ. https://twitter.com/KarnatakaVarthe/status/1819691918621544919 https://kannadanewsnow.com/kannada/leopard-with-different-coloured-eyes-caught-on-camera-in-bandipur-tiger-reserve/ https://kannadanewsnow.com/kannada/siddaramaiah-has-trouble-if-he-wears-a-blanket-all-his-difficulties-will-be-solved-cms-fan/

Read More

ಬೆಂಗಳೂರು: ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರೂ ಆದ ವನ್ಯಜೀವಿ ಛಾಯಾಗ್ರಹಕ ಧ್ರುವ್ ಪಾಟೀಲ ಅವರು ಬೇರೆ ಬೇರೆ ಬಣ್ಣಗಳ ಕಣ್ಣುಗಳಿರುವ ಅಪರೂಪದ ಚಿರತೆಯನ್ನು ತಮ್ಮ ಕ್ಯಾಮೆರಾದಲ್ಲಿ ಬಂಡೀಪುರ ಹುಲಿ ಅಭಯಾರಣ್ಯ ಪ್ರದೇಶದಲ್ಲಿ ಸೆರೆಹಿಡಿದಿದ್ದಾರೆ. ಬಹಳ ಅಪರೂಪ ಎನ್ನಬಹುದಾದ ವಿಭಿನ್ನ ಬಣ್ಣಗಳ ಕಣ್ಣುಗಳು ಚಿರತೆಯಲ್ಲಿ ಕಂಡುಬರುವುದಕ್ಕೆ ವಂಶವಾಹಿನಿ ರೂಪಾಂತರಗಳು ಕಾರಣವಾಗುತ್ತವೆ. ಇದನ್ನು ವೈಜ್ಞಾನಿಕ ಪರಿಭಾಷೆಯಲ್ಲಿ ‘ಹೆಟೆರೋಕ್ರೋಮಿಯಾ ಇರಿಡಂ’ ಎನ್ನಲಾಗುತ್ತದೆ. ಇದನ್ನು ಧ್ರುವ್ ಅವರು ಕ್ಯಾಮೆರಾದಲ್ಲಿ ಸೆರೆ ಹಿಡಿದಿರುವುದು ಚಿರತೆಗಳಿಗೆ ಸಂಬಂಧಿಸಿದ ದಾಖಲೀಕರಣಕ್ಕೆ ಒಂದು ಉತ್ತಮ ಕೊಡುಗೆಯಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರ ಮಗನಾದ 21 ವರ್ಷದ ಧ್ರುವ್ ಹಲವು ವರ್ಷಗಳಿಂದಲೂ ಹೆಚ್ಚಿನ ಸಮಯವನ್ನು ಬಂಡೀಪುರ, ಕಬಿನಿ, ದಾಂಡೇಲಿ ಸರಹದ್ದಿನ ಕಾಡುಗಳಲ್ಲಿ ಕಳೆಯುತ್ತಾರೆ. ವನ್ಯಜೀವಿ ಛಾಯಾಗ್ರಹಣದ ಜೊತೆಗೆ ಜೀವ ವೈವಿಧ್ಯ ಅವಲೋಕನದಲ್ಲಿ ಆಸಕ್ತರಾಗಿರುವ ಅವರು ಆಗಾಗ ಕಾಡಿನಲ್ಲಿ ಸಫಾರಿ ಮಾಡುವುದನ್ನು ರೂಡಿಸಿಕೊಂಡಿದ್ದು, ಈ ಮುಂಚೆ ಕಬಿನಿ ಅಣೆಕಟ್ಟು ಸಮೀಪದ ಅರಣ್ಯದಲ್ಲಿ ಕಪ್ಪು ಚಿರತೆಯೊಂದನ್ನು…

Read More

ಶಿರಾಡಿ ಘಾಟ್ ಆ 3: ಶಿರಾಡ್ ಘಾಟ್ ಗುಡ್ಡ ಕುಸಿತದ ಭೀಕರತೆಗೆ ಶಾಕ್ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಲಾಸ್ ಅವರಿಗೆ ಸಾಲು ಸಾಲು ಪ್ರಶ್ನೆಗಳ ಸುರಿಮಳೆಗೈದರು. ಗುಡ್ಡ ಕುಸಿತದ ಸ್ಥಳ ಪರಿಶೀಲನೆಗೆ ಅಧಿಕಾರಿಗಳ ತಂಡದೊಂದಿಗೆ ರಸ್ತೆ ಮಾರ್ಗವಾಗಿ ಘಟನಾ ಸ್ಥಳಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ರಸ್ತೆ ನಿರ್ಮಾಣಕ್ಕಾಗಿ ಗುಡ್ಡಗಳನ್ನು 90 ಡಿಗ್ರಿಯಲ್ಲಿ ನೇರವಾಗಿ ಸೀಳಿರುವುದಕ್ಕೆ ಅಸಮಾಧಾನಗೊಂಡು ಗುಡ್ಡ ಕುಸಿತಕ್ಕೆ ಇದೂ ಕೂಡ ಪ್ರಮುಖ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಸ್ತೆ ಕಾಮಗಾರಿ ಕುರಿತಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಿಎಂ ಗೆ ವಿವರಿಸುತ್ತಾ, “ಒಟ್ಟು 45 km ನಲ್ಲಿ 35 km ಹೈವೇ ಕಾಮಗಾರಿ ಮುಗಿದಿದೆ. 10 km ಬಾಕಿ ಇದೆ. ಆದರೆ ಇಲ್ಲಿಯವರೆಗೂ ಎಲ್ಲೂ ತಡೆಗೋಡೆಗಳನ್ಜು ನಿರ್ಮಿಸಿಲ್ಲ, ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿ ಅದರ ಆಧಾರದಲ್ಲಿ ಸುರಕ್ಷತಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಂತೆ ಇಲ್ಲ” ಎಂದು ವಿವರಿಸಿದರು. ಮೊಣಕಾಲುದ್ದುದ ಕೆಸರಲ್ಲೇ ಗುಡ್ಡ…

Read More

ಸೊಮಾಲಿ: ಸೊಮಾಲಿ ರಾಜಧಾನಿಯ ಜನಪ್ರಿಯ ಕಡಲತೀರದ ಸ್ಥಳವನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬರ್ ಮತ್ತು ಬಂದೂಕುಧಾರಿಗಳು ಶನಿವಾರ ನಡೆಸಿದ ದಾಳಿಯಲ್ಲಿ ಕನಿಷ್ಠ 32 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ಸುಮಾರು 63 ಜನರು ಗಾಯಗೊಂಡಿದ್ದಾರೆ, ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಅಬ್ದಿಫತಾ ಅದಾನ್ ಹಸನ್ ಹೇಳಿದ್ದಾರೆ. ಮೊಗಾದಿಶುವಿನ ಅಬ್ದಿಯಾಜಿಜ್ ಜಿಲ್ಲೆಯಲ್ಲಿ ಹಲವಾರು ಶವಗಳು ಮತ್ತು ಗಾಯಗೊಂಡ ಜನರನ್ನು ವೀಡಿಯೊ ತುಣುಕುಗಳು ತೋರಿಸಿವೆ. ದಕ್ಷಿಣ ಮತ್ತು ಮಧ್ಯ ಸೊಮಾಲಿಯದ ಹೆಚ್ಚಿನ ಭಾಗಗಳನ್ನು ನಿಯಂತ್ರಿಸುವ ಅಲ್-ಶಬಾಬ್ ಉಗ್ರರು ಈ ದಾಳಿ ನಡೆಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ. ಈ ಗುಂಪು ಅಲ್-ಖೈದಾದೊಂದಿಗೆ ಸಂಯೋಜಿತವಾಗಿದೆ ಮತ್ತು ಸೊಮಾಲಿಯಾದಲ್ಲಿ ಯುಎನ್ ಬೆಂಬಲಿತ ಸರ್ಕಾರದ ವಿರುದ್ಧ ಸುಮಾರು 20 ವರ್ಷಗಳಿಂದ ಕ್ರೂರ ಬಂಡಾಯವನ್ನು ನಡೆಸುತ್ತಿದೆ. ಸ್ಫೋಟದ ನಂತರ ಗುಂಡಿನ ದಾಳಿ ಪ್ರಾರಂಭವಾದ ಕಾರಣ ಏನಾಗುತ್ತಿದೆ ಎಂದು ತಿಳಿಯುವುದು ಕಷ್ಟವಾದ್ದರಿಂದ ಜನರು ಭಯಭೀತರಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಎಎಫ್ಪಿ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಕೆಲವರು…

Read More

ಶಿರಾಡ್ ಘಾಟ್ : ಪ್ರವಾಹ ಪೀಡಿತ ವಯನಾಡ್ ಗೆ ರಾಜ್ಯದ ನೆರವನ್ನು ಇನ್ನಷ್ಟು ವಿಸ್ತರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂರು ಮನೆಗಳನ್ನು ನಿರ್ಮಿಸಿಕೊಡುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಶಿರಾಡಿ ಘಾಟಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಜೊತೆ ಧೂರವಾಣಿ ಮೂಲಕ ಮಾತನಾಡಿದ್ದೇನೆ. ಅಗತ್ಯ ಇರುವ ನೆರವನ್ನು ವಿಸ್ತರಿಸುವುದಾಗಿ ಹೇಳಿದರು. ಘಟನೆಯಲ್ಲಿ ನಾಪತ್ತೆಯಾಗಿರುವ ಒಟ್ಟು ಕನ್ನಡಿಗರ ಲೆಕ್ಕ ಸಿಗಲು ಇನ್ನಷ್ಟು ಸಮಯ ಬೇಕು. ರಕ್ಷಣಾ ಕಾರ್ಯಾಚರಣೆ ಪೂರ್ತಿ ಮುಗಿದ ಬಳಿಕ ತಿಳಿಯಲಿದೆ ಎಂದರು. ವಯನಾಡಿನಲ್ಲಿ 100 ಸುಸಜ್ಜಿತ ಮನೆಗಳನ್ನು ನಿರ್ಮಿಸಲು ತೀರ್ಮಾನಿಸಿದ್ದೇವೆ. ಯಾವ ಸ್ಥಳದಲ್ಲಿ ನಿರ್ಮಿಸಬೇಕು, ಯಾವ ವೆಚ್ಚದಲ್ಲಿ ನಿರ್ಮಿಸಬೇಕು ಎನ್ನುವುದನ್ನು ನಂತರ ತೀರ್ಮಾನಿಸಲಾಗುವುದು ಎಂದರು. https://kannadanewsnow.com/kannada/big-shock-to-unauthorized-homestay-resort-owners-in-the-state/ https://kannadanewsnow.com/kannada/breaking-yadgir-psi-death-case-complaint-lodged-against-mla-chenna-reddy-son/

Read More

ಬೆಂಗಳೂರು: ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ 2015ರಿಂದೀಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿರುವ ಸಚಿವರು, ಪಶ್ಚಿಮ ಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್ ಗಳ ವಿರುದ್ಧ ಕ್ರಮ ಕೈಗೊಳ್ಳಲು, ಮತ್ತು ಅರಣ್ಯ ಒತ್ತುವರಿಯನ್ನು ತಕ್ಷಣದಿಂದಲೇ ತೆರವುಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮತ್ತು 1 ತಿಂಗಳೊಳಗೆ ಕೈಗೊಂಡ ಕ್ರಮದ ವಿವರದೊಂದಿಗೆ ಕಡತದಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ರಾಜ್ಯದ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 11 ಅಮೂಲ್ಯ ಜೀವಗಳು ಬಲಿಯಾಗಿದ್ದರೆ, ನೆರೆ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದಲ್ಲಿ 250…

Read More

ಬೆಂಗಳೂರು: ಯಾದಗಿರಿಯ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಪಿಎಸ್ಐ ಪರಶುರಾಮ್ ಅವರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಇದು ಕಾಂಗ್ರೆಸ್ ಸರ್ಕಾರದ ಭ್ರಷ್ಟಚಾರಕ್ಕೆ ಮತ್ತೊಬ್ಬ ದಲಿತ ಅಧಿಕಾರಿ ಬಲಿಯಾಗಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಇಂದು ಪೋಸ್ಟ್ ಮಾಡಿರುವಂತ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದಲ್ಲಿ ಪ್ರಾಮಾಣಿಕ ದಲಿತ ಅಧಿಕಾರಿ ಚಂದ್ರಶೇಖರನ್ ಅವರನ್ನು ಬಲಿ ಪಡೆದ ಕಾಂಗ್ರೆಸ್ ಸರ್ಕಾರ, ಈಗ ವರ್ಗಾವಣೆಗಾಗಿ ಲಂಚದ ಬೇಡಿಕೆ ಇಟ್ಟು ಮತ್ತೊಬ್ಬ ದಲಿತ ಅಧಿಕಾರಿ ಯಾದಗಿರಿಯ ಪಿಎಸ್ಐ ಪರಶುರಾಮ್ ಅವರನ್ನ ಬಲಿ ಪಡೆದುಕೊಂಡಿದೆ ಅಂತ ಹೇಳಿದ್ದಾರೆ. ಸಿಎಂ ಸಿದ್ಧರಾಮಯ್ಯನವರೇ, ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ ಎಂಬಂತೆ, ಮುಖ್ಯಮಂತ್ರಿಗಳು, ಸಚಿವರು ಭ್ರಷ್ಟಾಚಾರಕ್ಕೆ ಇಳಿದಿರುವಾಗ ಇನ್ನು ಶಾಸಕರು ಸುಮ್ಮನಿರುತ್ತಾರೆಯೇ? ಎಂದು ಪ್ರಶ್ನಿಸಿದ್ದಾರೆ. ಒತ್ತಡ, ಮಾನಸಿಕ ಕಿರುಕುಳದಿಂದ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವ ಯಾದಗಿರಿ ಪಿಎಸ್ ಐ ಪರಶುರಾಮ್ ಅವರ ಸಾವಿಗೆ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ಮತ್ತು ಅವರ ಪುತ್ರ ಸನ್ನಿಗೌಡ ಕಾರಣ…

Read More

ರಾಮನಗರ: ಬಿಜೆಪಿ-ಜೆಡಿಎಸ್ ಪಕ್ಷದ ನಾಯಕರು ಮೈಸೂರು ಚಲೋ ಪಾದಯಾತ್ರೆಯನ್ನು ನಮ್ಮನ್ನು ಪಲ್ಟಿ ಮಾಡುತ್ತೇವೆ ಅನ್ನೋ ಭ್ರಮೆಯಲ್ಲಿ ಮಾಡುತ್ತಿರಬಹುದು. ಆದರೇ ನಮ್ಮನ್ನು ಪಲ್ಟಿ ಮಾಡೋಕೆ ಯಾರಿಂದಲೂ ಸಾಧ್ಯವಿಲ್ಲ. ಅದು ನಿಮ್ಮ ಭ್ರಮೆ ಕೂಡ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಾಗ್ಧಾಳಿ ನಡೆಸಿದ್ದಾರೆ. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಮ್ಮನ್ನು ಪಲ್ಟಿ ಮಾಡುತ್ತೇವೆ ಎಂಬುದು ಸುಳ್ಳು. ಅದು ಯಾರಿಂದಲೂ ಸಾಧ್ಯವಿಲ್ಲ. ವಿಪಕ್ಷಗಳ ಹೇಳಿಕೆಗೆ ಹೊಡೆಯೋದಕ್ಕೆ ನಮ್ಮದೇನು ಮಡಿಕೆನಾ ಅಂತ ಪ್ರಶ್ನಿಸಿದರು. ನಮ್ಮನ್ನು ಪಲ್ಟಿ ಮಾಡುತ್ತೇವೆ ಎಂಬುದು ನಿಮ್ಮ ಭ್ರಮೆ. ತಿರುಕನ ಕನಸು ಕೂಡ. ಕಾಂಗ್ರೆಸ್ ಸರ್ಕಾರವನ್ನು ಯಾರಿಂದಲೂ ಬೀಳಿಸಲು ಸಾಧ್ಯವಿಲ್ಲ ಎಂಬುದಾಗಿ ಹೇಳಿದರು. https://kannadanewsnow.com/kannada/drone-sends-biryani-to-starving-dogs-stranded-in-cauvery-river/ https://kannadanewsnow.com/kannada/breaking-yadgir-psi-death-case-complaint-lodged-against-mla-chenna-reddy-son/

Read More

ಸೇಲಂ: ಮೆಟ್ಟೂರು ಅಣೆಕಟ್ಟಿನ ಬಳಿ ಕಾವೇರಿ ನದಿಯ ಮಧ್ಯದಲ್ಲಿ ಮೂರು ದಿನಗಳಿಂದ ಆಹಾರವಿಲ್ಲದೆ ಸಿಲುಕಿದ್ದ ಏಳು ನಾಯಿಗಳ ಗುಂಪಿಗೆ ಅಗ್ನಿಶಾಮಕ ಮತ್ತು ಪಾರುಗಾಣಿಕಾ ಸೇವೆಗಳ ಸಿಬ್ಬಂದಿ ಶುಕ್ರವಾರ ಡ್ರೋನ್ ಬಳಸಿ ಬಿರಿಯಾನಿ ನೀಡಿ, ಮಾನವೀಯತೆಯನ್ನು ಮರೆದಿದ್ದಾರೆ. ಹೌದು ಕಾವೇರಿ ನದಿ ನೀರಿನ ಮಧ್ಯದಲ್ಲಿ ಪ್ರವಾಹದಿಂದಾಗಿ 7 ನಾಯಿಗಳು ಸಿಲುಕಿಕೊಂಡು, ಹಸಿವಿನಿಂದ ಊಳಿಡುತ್ತಿದ್ದವು. ಈ ವಿಷಯ ತಿಳಿದಂತ ಅಗ್ನಿಶಾಮಕ ಸಿಬ್ಬಂದಿಗಳು, ಡ್ರೋನ್ ಬಳಸಿ ಅವುಗಳಿಗೆ ಮೊದಲು ಹಸಿವಿನ ಧಾಹವನ್ನು ನೀಗಿಸಲು ಬಿರಿಯಾನಿ ನೀಡಿದ್ದಾರೆ. https://twitter.com/Vimalanathan_96/status/1819061423789821980 ಹಸಿವಿನ ಧಾಹದ ಬಳಿಕ ಸಾವರಿಸಿಕೊಂಡ 7 ನಾಯಿಗಳನ್ನು ಅಗ್ನಿಶಾಮಕ ಸಿಬ್ಬಂದಿಗಳು ಭಾನುವಾರ ರಕ್ಷಣೆಗೆ ಮುಂದಾಗಿದ್ದಾರೆ. ಅಲ್ಲದೇ ನಾಯಿಗಳನ್ನು ನದಿ ಮಧ್ಯದ ಪ್ರವಾಹದಿಂದ ದಂಡೆಗೆ ಕರೆತರಲು 30 ಕೆಜಿ ಸಾಗಿಸುವ ಸಾಮರ್ಥ್ಯದ ಡ್ರೋನ್ ಬಳಸಲಿದ್ದಾರೆ ಎನ್ನಲಾಗುತ್ತಿದೆ. ಅದು ಆಗಮಿಸುತ್ತಿದ್ದು, ಭಾನುವಾರದ ನಾಳೆ ನಾಯಿಗಳನ್ನು ರಕ್ಷಣೆ ಮಾಡುವ ಸಾಧ್ಯತೆ ಇದೆ. ಅಗ್ನಿಶಾಮಕ ಸೇವೆಗಳ ಸಿಬ್ಬಂದಿ ಡ್ರೋನ್ ಸೇವೆಗಳಲ್ಲಿ ಪರಿಣತಿ ಹೊಂದಿರುವ ಜಿಯೋಟೆಕ್ನೋವಾಲಿ ಎಂಬ ಕಂಪನಿಯನ್ನು ಕಾರ್ಯಾಚರಣೆಗಾಗಿ ಬಳಸಿಕೊಂಡಿದ್ದಾರೆ. “ನಾವು ಶನಿವಾರ…

Read More