Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಯಾವುದೇ ಸ್ಪರ್ಧೆಯಿಲ್ಲದೆ ಸೂರತ್ ಸ್ಥಾನವನ್ನು ಗೆದ್ದ ನಂತರ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ತನ್ನ ಮೊದಲ ಗೆಲುವನ್ನು ದಾಖಲಿಸಿದೆ. ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡ ನಂತರ ಮುಖೇಶ್ ದಲಾಲ್ ಅವಿರೋಧವಾಗಿ ಗೆದ್ದರು ಮತ್ತು ಇತರ ಎಲ್ಲಾ ಅಭ್ಯರ್ಥಿಗಳು ಸಹ ಚುನಾವಣೆಯಿಂದ ಹಿಂದೆ ಸರಿದರು. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮೊದಲ ಖಾತೆ ತೆರೆದಂತೆ ಆಗಿದೆ. ಎರಡನೇ ಹಂತದ ಲೋಕಸಭಾ ಚುನಾವಣೆ ಏಪ್ರಿಲ್ 26 ರಂದು 13 ರಾಜ್ಯಗಳ 89 ಲೋಕಸಭಾ ಕ್ಷೇತ್ರಗಳಲ್ಲಿ ನಡೆಯಲಿದೆ. ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕಾಗಿ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರವನ್ನು ತೀವ್ರಗೊಳಿಸಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರ ಸಂಪತ್ತನ್ನು ಮುಸ್ಲಿಮರಿಗೆ ಮರುಹಂಚಿಕೆ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಲಹೆ ನೀಡಿದ ನಂತರ ವಿವಾದ ಭುಗಿಲೆದ್ದಿದೆ. ರಾಜಸ್ಥಾನದ ಬನ್ಸ್ವಾರಾದಲ್ಲಿ ನಡೆದ ಲೋಕಸಭಾ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್, ಪ್ರಧಾನಿ ಹಿಂದೂಗಳು ಮತ್ತು ಮುಸ್ಲಿಮರ ನಡುವೆ ವಿಭಜನೆಯನ್ನು ಸೃಷ್ಟಿಸುತ್ತಿದ್ದಾರೆ ಎಂದು…
ಬೆಂಗಳೂರು: ರಾಮೇಶ್ವರಂ ಕೆಫೆ ಹೋಟೆಲ್ ನಲ್ಲಿ ಬಾಂಬ್ ಸ್ಪೋಟ ಪ್ರಕರಣದ ತನಿಖೆ ನಡೆಯುತ್ತಿದೆ. ಈ ಬೆನ್ನಲ್ಲೇ ನಗರದ ಮತ್ತೊಂದು ಹೋಟೆಲ್ ಗೆ ಬಾಂಬ್ ಬೆದರಿಕೆ ಕರೆ ಮಾಡಲಾಗಿದೆ. ಹೀಗಾಗಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಹೆಚ್ ಎಂ ಟಿ ಗ್ರೌಂಡ್ ಬಳಿಯಿರುವಂತ ಕದಂಬ ಹೋಟೆಲ್ ಗೆ ಬಾಂಬ್ ಇಟ್ಟಿರೋದಾಗಿ ಜಾಲಹಳ್ಳಿ ಪೊಲೀಸ್ ಠಾಣೆಗೆ ಅನಾಮಧೇಯ ಪತ್ರ ಬಂದಿದೆ. ಈ ಕೂಡಲೇ ಅಲರ್ಟ್ ಆದಂತ ಪೊಲೀಸರು, ಸ್ಥಳಕ್ಕೆ ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ. ಜಾಲಹಳ್ಳಿ ಪೊಲೀಸರು, ಬಾಂಬ್ ಸ್ಕ್ವಾಡ್, ಶ್ವಾನದಳದಿಂದ ಕದಂಬ ಹೋಟೆಲ್ ಅನ್ನು ಪರಿಶೀಲನೆ ನಡೆಸಲಾಗಿದೆ. ಸುಮಾರು ಅರ್ಧಗಂಟೆ ಸ್ಥಳದಲ್ಲಿ ಬಾಂಬ್ ಗಾಗಿ ಹುಡುಕಾಡಿದ್ರೂ ಎಲ್ಲಿಯೂ ಪತ್ತೆಯಾಗಿಲ್ಲ. ಆ ಬಳಿಕ ಇದು ಹುಸಿ ಬೆದರಿಕೆ ಪತ್ರ ಎಂಬುದಾಗಿ ಪೊಲೀಸರು ನಿರ್ಧಾರಕ್ಕೆ ಬಂದಿದ್ದಾರೆ. ಈಗ ಬಾಂಬ್ ಬೆದರಿಕೆ ಪತ್ರ ಬರೆದ ಆರೋಪಿಗಾಗಿ ತನಿಖೆ ಕೈಗೊಂಡಿದ್ದಾರೆ. https://kannadanewsnow.com/kannada/bjp-opens-account-ahead-of-lok-sabha-election-results-candidate-elected-unopposed-in-surat/ https://kannadanewsnow.com/kannada/computer-literacy-test-important-information-for-state-government-employees/
ನವದೆಹಲಿ: ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಗೆದ್ದ ನಂತರ ಭಾರತೀಯ ಜನತಾ ಪಕ್ಷ (ಬಿಜೆಪಿ) 2024 ರ ಲೋಕಸಭಾ ಚುನಾವಣೆಯಲ್ಲಿ ಮತ ಎಣಿಕೆಗೆ ಮುಂಚಿತವಾಗಿ ತನ್ನ ಖಾತೆಯನ್ನು ತೆರೆದಿದೆ. ಈ ಹಿಂದೆ ಕಾಂಗ್ರೆಸ್ ಅಭ್ಯರ್ಥಿ ನಿಲೇಶ್ ಕುಂಭಾನಿ ಅವರ ನಾಮಪತ್ರಕ್ಕೆ ಸಹಿ ಹಾಕಿಲ್ಲ ಎಂದು ಅವರ ಪ್ರಸ್ತಾಪಕರು ಹೇಳಿದ ನಂತರ ಚುನಾವಣಾ ಆಯೋಗ ಅವರ ನಾಮಪತ್ರವನ್ನು ತಿರಸ್ಕರಿಸಿತ್ತು. ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಿಲೇಶ್ ಕುಂಭಾನಿ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸುರೇಶ್ ಪಡ್ಸಾಲ ಅವರಿಗೂ ಇದೇ ಗತಿಯಾಗಿದ್ದು, ಈ ಪ್ರಮುಖ ನಗರದಲ್ಲಿ ಕಾಂಗ್ರೆಸ್ ಪಕ್ಷವನ್ನು ಚುನಾವಣಾ ಸ್ಪರ್ಧೆಯಿಂದ ಪರಿಣಾಮಕಾರಿಯಾಗಿ ತೆಗೆದುಹಾಕಲಾಗಿದೆ. ಜಿಲ್ಲಾ ಚುನಾವಣಾಧಿಕಾರಿ ಸೌರಭ್ ಪಾರ್ಧಿ ಈ ನಿರ್ಧಾರವನ್ನು ಪ್ರಕಟಿಸಿದ್ದು, ನಾಮಪತ್ರಗಳಲ್ಲಿನ ಸಹಿಗಳು ಹೆಚ್ಚು ನೈಜವಾಗಿರಬೇಕು ಎಂದು ಹೇಳಿದ್ದಾರೆ. ಪ್ರಸ್ತಾವನೆದಾರರು ಸ್ವತಃ ನಮೂನೆಗಳಿಗೆ ಸಹಿ ಹಾಕಿರುವುದನ್ನು ನಿರಾಕರಿಸಿದರು. ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವರ ಚುನಾವಣಾ ಏಜೆಂಟ್ ದಿನೇಶ್ ಜೋಧಾನಿ…
ತೈವಾನ್: ತೈವಾನ್ ರಾಜಧಾನಿ ಸೋಮವಾರ ಸಂಜೆ ಪ್ರಬಲ ಭೂಕಂಪದಿಂದ ನಡುಗಿದೆ ಎಂದು ಎಎಫ್ಪಿ ಸಿಬ್ಬಂದಿ ವರದಿ ಮಾಡಿದ್ದಾರೆ. ಇದು ಪೂರ್ವ ಹುವಾಲಿಯನ್ನಲ್ಲಿ 5.5 ತೀವ್ರತೆಯ ಭೂಕಂಪನವಾಗಿದೆ ಎಂದು ಕೇಂದ್ರ ಹವಾಮಾನ ಆಡಳಿತ ತಿಳಿಸಿದೆ. 5.5 ತೀವ್ರತೆಯಲ್ಲಿ ಭೂಕಂಪನ ಉಂಟಾಗಿದ್ದರಿಂದ ತೈವಾನ್ ಜನತೆ ಮನೆಯಿಂದ ಓಡಿ ಬಂದು ಕೆಲ ಕಾಲ ಬೀದಿಯಲ್ಲಿ ಆತಂಕದಿಂದ ಕಳೆಯುವಂತೆ ಆಯ್ತು ಎಂಬುದಾಗಿ ವರದಿಯಿಂದ ತಿಳಿದು ಬಂದಿದೆ. https://kannadanewsnow.com/kannada/computer-literacy-test-important-information-for-state-government-employees/ https://kannadanewsnow.com/kannada/lok-sabha-elections-how-to-download-voter-slip-on-mobile-heres-the-information/
ಯಾದಗಿರಿ: ದಲಿತ ಯುವಕನೊಬ್ಬನ ಮರ್ಮಾಂಗಕ್ಕೆ ಮುಸ್ಲೀಂ ಯುವಕನೊಬ್ಬ ಒದ್ದ ಪರಿಣಾಮ, ಸ್ಥಳದಲ್ಲೇ ದಲಿತ ಯುವಕ ಸಾವನ್ನಪ್ಪಿರುವಂತ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿ ನಗರದ ಶಗಾಪುರಪೇಟೆ ಬಡಾವಣೆಯಲ್ಲಿದ್ದಂತ ರೊಟ್ಟಿ ಕೇಂದ್ರಕ್ಕೆ ನಿನ್ನೆ ರಾತ್ರಿ ದಲಿತ ಯುವಕ ರಾಕೇಶ್ ಎಂಬಾತ ರೊಟ್ಟಿ ತೆಗೆದುಕೊಂಡು ಬರೋದಕ್ಕೆ ತೆರಳಿದ್ದಾನೆ. ರೊಟ್ಟಿ ಖರೀದಿಯ ವೇಳೆಯಲ್ಲಿ ವಾಗ್ವಾದ ನಡೆದು, ಮುಸ್ಲೀಂ ಯುವಕ ಫಯಾಜ್ ಹಾಗೂ ರಾಕೇಶ್ ನಡುವೆ ಗಲಾಟೆಯಾಗಿದೆ. ಈ ಗಲಾಟೆಯ ಬಳಿಕ ಮನೆಗೆ ರಾಕೇಶ್ ತೆರಳಿದ್ದಾನೆ. ನಂತ್ರ ಮನೆಗೆ ರಾಕೇಶ್ ಮರಳಿದ ನಂತ್ರ ಫಯಾಜ್ ಹಾಗೂ ರಾಕೇಶ್ ನಡುವೆ ಜಗಳವಾಗಿದೆ. ಈ ಗಲಾಟೆಯ ವೇಳೆಯಲ್ಲಿ ಫಯಾಜ್ ಎಂಬಾತ ರಾಕೇಶ್ ಮರ್ಮಾಂಗಕ್ಕೆ ಒದ್ದ ಪರಿಣಾಮ, ಸ್ಥಳದಲ್ಲೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಈ ಘಟನೆಯ ನಂತ್ರ ಆರೋಪಿ, ಕೊಲೆಯಾದ ಯುವಕನ ಕುಟುಂಬದ ನಡುವೆ ಸಂಧಾನದ ಮಾತುಕತೆ ನಿನ್ನೆ ರಾತ್ರಿ 11 ಗಂಟೆಯ ಹಾಗೆ ನಡೆದಿದೆ. ಇದಾದ ನಂತ್ರ ಬಿಜೆಪಿ ಮುಖಂಡರು ಮಧ್ಯ ಪ್ರವೇಶಿಸಿ ಕೊಲೆಯಾದ ರಾಕೇಶ್ ತಾಯಿಯಿಂದ ಪೊಲೀಸರಿಗೆ ದೂರು ಕೊಡಿಸಿದ್ದಾರೆ.…
ಬೆಂಗಳೂರು: ಮಾಜಿ ಸ್ಪೀಕರ್ ರಮೇಶ್‍ಕುಮಾರ್ ಅವರ ಹೇಳಿಕೆ ಖಂಡನೀಯ. ಬಿಜೆಪಿ ಇದನ್ನು ಖಂಡಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಮೇಶ್ ಕುಮಾರ್ ಅವರ ಯೋಗ್ಯತೆ ಅವರ ಕ್ಷೇತ್ರದ ಜನತೆಗೆ ಗೊತ್ತಿದೆ. ಹಾಗಾಗಿಯೇ ಅವರನ್ನು ಜನರು ಸೋಲಿಸಿದ್ದಾರೆ. ಆಚಾರವಿಲ್ಲದ ನಾಲಿಗೆ ಎಂಬಂತೆ ಅವರ ನಾಲಿಗೆ ಅವರ ಸಂಸ್ಕøತಿಯನ್ನು ತೋರಿಸುತ್ತದೆ ಎಂದು ಟೀಕಿಸಿದರು. ಮುಖ್ಯಮಂತ್ರಿಗಳ ಸ್ಥಾನದಲ್ಲಿರುವ ಸಿದ್ದರಾಮಯ್ಯನವರು ಆರೂವರೆ ಕೋಟಿ ಜನರಿಗೆ ಮುಖ್ಯಮಂತ್ರಿ ಎಂಬುದನ್ನು ಮರೆತು ಈ ದೇಶದ ಗೌರವಾನ್ವಿತ ಪ್ರಧಾನಮಂತ್ರಿಗಳ ಕುರಿತು ಅವರು ನೀಡಿದ ‘ಒಬ್ಬ ನಾಲಾಯಕ್ ಪ್ರಧಾನಮಂತ್ರಿ’ ಎಂಬ ಉದ್ಧಟತನದ ಹೇಳಿಕೆ ನೀಡಿದ್ದು ಖಂಡನೀಯ ಎಂದರು. ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ಈ ದರಿದ್ರ ಕಾಂಗ್ರೆಸ್ ಸರಕಾರಕ್ಕೆ ಗ್ಯಾರಂಟಿ ಬಿಡಿ; ನಾಡಿನ ಮಹಿಳೆಯರಿಗೆ ರಕ್ಷಣೆ ಕೊಡಲಾಗದೆ ನಾಲಾಯಕ್‍ತನ ಪ್ರದರ್ಶನ ಮಾಡುತ್ತಿದೆ ಎಂದು ಆಕ್ಷೇಪಿಸಿದರು. ಇಂಥ ನಾಲಾಯಕ್ ಸರಕಾರಕ್ಕೆ ರಾಜ್ಯದ ಜನತೆ ಮುಂದಿನ ದಿನಗಳಲ್ಲಿ ಸರಿಯಾದ ಉತ್ತರ ಕೊಡುತ್ತಾರೆ ಎಂದು ವಿಶ್ವಾಸ ಸೂಚಿಸಿದರು.…
ಯಾದಗಿರಿ: ಜಿಲ್ಲೆಯಲ್ಲಿ ರಾಜ್ಯದ ಜನರೇ ಬೆಚ್ಚಿ ಬೀಳಿಸುವಂತ ಘಟನೆಯೊಂದು ನಡೆದಿದೆ. ಮುಸ್ಲೀಂ ಯುವಕರಿಂದ ದಲಿತ ಯುವಕನೊಬ್ಬನನ್ನು ಹತ್ಯೆ ಮಾಡಿರೋ ಘಟನೆ ನಡೆದಿದೆ. ಹುಬ್ಬಳ್ಳಿಯ ನೇಹಾ ಹಿರೇಮಠ್ ಕೊಲೆ ಪ್ರಕರಣ ಹಸಿಯಾಗಿರೋ ಮುನ್ನವೇ, ಯಾದಗಿರಿಯಲ್ಲಿ ಮುಸ್ಲೀಂ ಯುವಕರಿಂದ ದಲಿತ ಯುಕನೊಬ್ಬನನ್ನು ಹತ್ಯೆ ಮಾಡಿರುವಂತ ಘಟನೆ ನಡೆದಿದೆ. ಯಾದಗಿರಿ ನಗರದ ಶಗಾಪುರಪೇಟೆಯ ಬಡಾವಣೆಯಲ್ಲಿ ಇಂತದ್ದೊಂದು ಘಟನೆ ನಡೆದಿದೆ. ರೊಟ್ಟಿ ಕೇಂದ್ರದ ಸದಸ್ಯ ಫಯಾಜ್ ಸೇರಿದಂತೆ ನಾಲ್ವರು ದಲಿತ ಯುವಕನೊಬ್ಬನನ್ನು ಹತ್ಯೆ ಮಾಡಿರೋದಾಗಿ ತಿಳಿದು ಬಂದಿದೆ. ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿರುವಂತ ಪೊಲೀಸರು, ಸ್ಥಳ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/neha-murder-case-cm-siddaramaiah-announces-setting-up-of-special-court-for-speedy-trial/ https://kannadanewsnow.com/kannada/computer-literacy-test-important-information-for-state-government-employees/
ಶಿವಮೊಗ್ಗ: ಹುಬ್ಬಳ್ಳಿ ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ಸಿ.ಒ.ಡಿ ತನಿಖೆಗೆ ವಹಿಸಲಾಗುವುದು. ವಿಶೇಷ ನ್ಯಾಯಾಲಯ ಸ್ಥಾಪಿಸಿ ಕಾಲಮಿತಿಯಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶಿವಮೊಗ್ಗ ವಿಮಾನನಿಲ್ದಾಣದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿಗಳು ಹುಬ್ಬಳ್ಳಿಯಲ್ಲಿ ನೇಹಾ ಮನೆಗೆ ಭೇಟಿ ನೀಡಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ನಮ್ಮ ಸಚಿವರು, ಕಾರ್ಯಕರ್ತರು ಹಾಗೂ ಸಚಿವ ಹೆಚ್. ಕೆ.ಪಾಟೀಲ್ ಭೇಟಿ ನೀಡಿದ್ದಾರೆ. ಧಾರವಾಡಕ್ಕೆ ತೆರಳಿದ ಸಂದರ್ಭದಲ್ಲಿ ಭೇಟಿ ನೀಡುವುದಾಗಿ ಹೇಳಿದರು. ದಿಂಗಾಲೇಶ್ವರ ಸ್ವಾಮಿಗಳ ಉಮೇದುವಾರಿಕೆ ಹಿಂಪಡೆದು ಕಾಂಗ್ರೆಸ್ ಬೆಂಬಲಿಸಲು ಮನವಿ ಜಾತ್ಯಾತೀತ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಅವರ ಉಮೇದುವಾರಿಕೆಯನ್ನು ಹಿಂಪಡೆದು ಜಾತ್ಯಾತೀತ ಪಕ್ಷ ಕಾಂಗ್ರೆಸ್ ನ್ನು ಬೆಂಬಲಿಸಬೇಕೆಂದು ಅವರಲ್ಲಿ ಮನವಿ ಮಾಡಿದ್ದೇನೆ. ಅವರ ಮಠ ಜಾತ್ಯಾತೀತವಾಗಿದ್ದು ಅವರ ಬೆಂಬಲ ಅಗತ್ಯವಿದೆ ಎಂದರು. ಕುಡಿಯುವ ನೀರು ಹಾಗೂ ಮೇವಿಗೆ ತೊಂದರೆಯಾಗದಂತೆ ಕ್ರಮ ಬರ ಪರಿಹಾರ ನೀಡಿಲ್ಲದ್ದರ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಸರ್ವೋಚ್ಚ ನ್ಯಾಯಾಲಯದ…
ಬೆಂಗಳೂರು : ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಪೊಲೀಸ್ ಅಧಿಕಾರಿ ಅಣ್ಣಾಮಲೈ ಅವರು ಸೋಮವಾರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವೀ ಸೂರ್ಯ ಪರ ಜಯನಗರ, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಅಬ್ಬರದ ರೋಡ್ ಶೋ ನಡೆಸಿ ಮತ ಯಾಚಿಸಿದರು. ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ತೇಜಸ್ವೀ ಸೂರ್ಯ, “ನವಭಾರತದ ನಿರ್ಮಾಣದಲ್ಲಿ ಯುವಶಕ್ತಿಯ ಪಾತ್ರ ಬಹುದೊಡ್ಡದಿದ್ದು ಅದರಂತೆ ಪ್ರಧಾನಿ ನರೇಂದ್ರಮೋದಿಯವರು ಯುವ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಿ ಅನೇಕ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದಾರೆ. ರಕ್ಷಣಾ ಪಡೆಗಳಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಎರಡು ಪಟ್ಟು ಹೆಚ್ಚಿದೆ. ಸರ್ಕಾರದ ಪ್ರೋತ್ಸಾಹದಿಂದ ಯುವಜನರಲ್ಲಿ ಕ್ರೀಡಾಸಕ್ತಿ ಹೆಚ್ಚುತ್ತಿದ್ದು, ವಿವಿಧ ವಲಯಗಳಲ್ಲಿ ತಮ್ಮ ಪ್ರತಿಭೆ, ಸಾಮರ್ಥ್ಯ ತೋರಲು ಸಾಧ್ಯವಾಗಿದೆ. ಖೇಲೋ ಇಂಡಿಯಾ ಕಾರ್ಯಕ್ರಮ ಕ್ರೀಡಾ ವಲಯದಲ್ಲಿ ಬಹು ದೊಡ್ಡ ಬದಲಾವಣೆಯನ್ನು ತಂದಿದ್ದು, ಅಪಾರ ಕ್ರೀಡಾ ಪ್ರತಿಭೆಗಳು ಬೆಳಕಿಗೆ ಬರಲು ಕಾರಣವಾಗಿದೆ. ಒಲಿಂಪಿಕ್ಸ್, ಏಷ್ಯನ್ ಕ್ರೀಡಾಕೂಟ ಸೇರಿದಂತೆ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಕೂಟಗಳಲ್ಲಿ ಭಾರತೀಯ ಕ್ರೀಡಾಪಟುಗಳು…
ಹಾವೇರಿ: ಹುಬ್ಬಳ್ಳಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಯ ಹಿಂದೆ ದೊಡ್ಡ ಷಡ್ಯಂತ್ರ ಇದ್ದು, ಇದು ವಯಕ್ತಿಕ ವಿಚಾರವಲ್ಲ. ಇದರ ಹಿಂದೆ ದೇಶದ ಸಾಮಾಜಿಕ ವಿಚಾರ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಹಾವೇರಿಯಲ್ಲಿ ನೇಹಾ ಹತ್ಯೆ ಖಂಡಿಸಿ ಅಖಿಲ ಭಾರತಿಯ ವಿದ್ಯಾರ್ಥಿ ಪರಿಷತ್ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು. ನಾವು ಅತ್ಯಂತ ದುಖ ಆಘಾತದ ಸಂದರ್ಭದಲ್ಲಿ ಸೇರಿದ್ದೇವೆ. ಹೆಣ್ಸು ಮಕ್ಕಳು ಮಾತನಾಡಿದ್ದು ಕರಳು ಕಿತ್ತು ಬರುವಂತಿದೆ. ಅವನು ಹಾಡಹಗಲೆ ಭಯಂಕರ ಕೊಲೆ ಮಾಡಿದ್ದಾನೆ ಎಂದರೆ ಅವನು ಒಬ್ಬನೇ ಇಲ್ಲ. ಇದು ಕೇವಲ ವಯಕ್ತಿಕ ವಿಚಾರ ಅಲ್ಲ. ಇದರ ಹಿಂದೆ ದೇಶದ ಸಾಮಾಜಿಕ ವಿಚಾರ ಇದೆ ಎಂದು ಹೇಳಿದರು. ನಾವು ಅಧಿಕಾರದಲ್ಲಿ ಇದ್ದಾಗ ಚಿಕ್ಕಮಗಳೂರಿನಲ್ಲಿ ಅಮಾಯಕ ಮಹಿಳೆಯ ಮೇಲೆ ಅತ್ಯಾಚಾರ ನಡೆದಾಗ ಅವನನ್ನು ಗಲ್ಲಿಗೇರಿಸುವಂತೆ ಕ್ರಮ ಕೈಗೊಂಡಿದ್ದೇವು. ನೇಹಾ ತಂದೆ ರಾಜ್ಯದ ಪೊಲಿಸರ ಮೇಲೆ…