Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಕಾಂಗ್ರೆಸ್ ಪಕ್ಷದವರ ಮೇಲೆ, ವಿಪಕ್ಷಗಳ ನಾಯಕರ ಮೇಲೆ ಆದಾಯ ತೆರಿಗೆ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡ್ತಿದ್ದಾರೆ. ಆದ್ರೇ ಬಿಜೆಪಿಯವರ ಮೇಲೆ ರೈಡ್ ಯಾಕೆ ಆಗ್ತಿಲ್ಲ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. ನಗರದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಇದ್ದರೆ, ಭ್ರಷ್ಟಾಚಾರ ಹೆಚ್ಚಾಗಲಿದೆ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕಾನೂನು ಪ್ರಕಾರ ರೇಡ್ ಮಾಡುವುದನ್ನು ನಾವು ಎಂದೂ ವಿರೋಧಿಸುವುದಿಲ್ಲ. ಆದರೆ ಬಿಜೆಪಿಯಲ್ಲಿ ಶ್ರೀಮಂತರಿಲ್ಲವೇ, ಯಡಿಯೂರಪ್ಪ , ವಿಜಯೇಂದ್ರ ಭ್ರಷ್ಟಾಚಾರ ಮಾಡಿಲ್ಲವೇ ? ಶೋಭಾ ಕರಂದ್ಲಾಜೆ, ಅಶೋಕ್, ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿಯವರ ಮೇಲೆ, ಅವರ ಮೇಲೆ ರೇಡ್ ಗಳು ಏಕೆ ಆಗುತ್ತಿಲ್ಲ. ಆದಾಯ ತೆರಿಗೆಯನ್ನು ಸರಿಯಾಗಿ ಕಟ್ಟದವರ ಮೇಲೆ ಕ್ರಮವಾಗಲಿ, ಆದರೆ ಒಬ್ಬರ ಮೇಲೆ ರೇಡ್ ಮಾಡಿ ಮತ್ತೊಬ್ಬರನ್ನು ಬಿಡುವ ಬದಲು, ಆದಾಯಮೀರಿ ಆಸ್ತಿ ಸಂಪಾದಿಸಿದ ಎಲ್ಲರ ಮೇಲೆ ಕಾನೂನು ಕ್ರಮವಾಗಬೇಕು ಎಂದರು. ಕಾಂಗ್ರೆಸ್ ತನ್ನ ಶಕ್ತಿಯನ್ನು ನಂಬಿದೆ ರಾಜ್ಯದಲ್ಲಿ…
ಧಾರವಾಡ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಸೋಲಿಸಲೇಬೇಕು. ಅವರು ಸಮುದಾಯಕ್ಕಾಗಲೀ, ತಮ್ಮ ಲೋಕಸಭಾ ಕ್ಷೇತ್ರಕ್ಕೆ ಆಗಲೀ ಯಾವುದೇ ಕೊಡುಗೆ ನೀಡಿಲ್ಲ ಎಂಬುದಾಗಿ ವಾಗ್ಧಾಳಿ ನಡೆಸಿದ್ದಂತ ದಿಂಗಾಲೇಶ್ವರ ಶ್ರೀಗಳು, ಲೋಕಸಭಾ ಚುನಾವಣಾ ಆಖಾಡಕ್ಕೆ ಇಳಿದಿದ್ದರು. ನಾಮಪತ್ರ ಕೂಡ ಸಲ್ಲಿಸಿ, ಚುನಾವಣಾ ಪ್ರಚಾರದಲ್ಲೂ ತೊಡಗಿದ್ದರು. ಆದ್ರೇ ದಿಢೀರ್ ಬೆಳವಣಿಗೆಯಲ್ಲಿ ಇಂದು ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ. ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಹಾಗೂ ಬಿಜೆಪಿ ಅಭ್ಯರ್ಥಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯನ್ನು ಸೋಲಿಸಲೇಬೇಕು ಅಂತ ಕಣಕ್ಕೆಶಿರಹಟ್ಟಿಯ ಬಾಳೆಹೊಸೂರು ಫಕೀರೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಇಳಿದಿದ್ದರು. ಇದಷ್ಟೇ ಅಲ್ಲದೇ ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ, ಲೋಕಸಭಾ ಚುನಾವಣೆಯ ಮತಬೇಟೆಯಲ್ಲೂ ತೊಡಗಿದ್ದರು. ಇಂತಹ ಅವರು ಇಂದು ನಾಮಪತ್ರವನ್ನು ಹಿಂಪಡೆಯುವ ಮೂಲಕ, ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಅಂದಹಾಗೇ, ದಿಂಗಾಲೇಶ್ವರ ಶ್ರೀಗಳು ನಾಪಮಪತ್ರವನ್ನು ತಮ್ಮ ಸೂಚಕಾರದ ಸಚ್ಚಿನ್ ಪಾಟೀಲ್ ಮತ್ತು ಅಮೃತ ಬಳ್ಳೊಳ್ಳಿ ಮೂಲಕ ಹಿಂಪಡೆದು, ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಕಾಂಗ್ರೆಸ್ ಹಾಗೂ…
ಶಿವಮೊಗ್ಗ : ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಸುಗಮ ಮತ್ತು ಶಾಂತಿಯುತ ಮತದಾನ ನಡೆಯಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕಟ್ಟುನಿಟ್ಟಾಗಿ ಚುನಾವಣಾಧಿಕಾರಿಗಳು ಕೈಗೊಳ್ಳಬೇಕೆಂದು 14-ಶಿವಮೊಗ್ಗ ಲೋಕಸಭಾ ಕ್ಷೇತ್ರದ ವೀಕ್ಷಕರಾದ ಪೂನಂ ಅವರು ತಿಳಿಸಿದರು. ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏ.22 ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಮತಕ್ಷೇತ್ರಗಳ ಎಆರ್‍ಓ ಮತ್ತು ಇತರೆ ಚುನಾವಣಾ ನಿಯೋಜಿತ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 14-ಲೋಕಸಭಾ ಕ್ಷೇತ್ರ ಕ್ಕೆ ಸಂಬಂಧಿಸಿದಂತೆ 111-ಶಿವಮೊಗ್ಗ ಗ್ರಾಮಾಂತರ, 112-ಭದ್ರಾವತಿ, 113-ಶಿವಮೊಗ್ಗ, 114-ತೀರ್ಥಹಳ್ಳಿ, 115-ಶಿಕಾರಿಪುರ, 116ಸೊರಬ, 117-ಸಾಗರ ಮತ್ತು 118 ಬೈಂದೂರು ಮತಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳು, ಅಬಕಾರಿ ಮತ್ತು ಆದಾಯ ತೆರಿಗೆ ಅಧಿಕಾರಿಗಳು ಹಾಗೂ ಚುನಾವಣೆಗೆ ಸಂಬಂಧಿಸಿದ ವಿವಿಧ ಸಮಿತಿ, ತಂಡಗಳ ನೋಡಲ್ ಅಧಿಕಾರಿಗಳಿಂದ ಅವರ ಕಾರ್ಯಕ್ಷೇತ್ರದ ಕುರಿತು ಸಭೆಯಲ್ಲಿ ಮಾಹಿತಿ ಪಡೆದುಕೊಂಡ ಅವರು ಎಲ್ಲ ಸಹಾಯಕ ಚುನಾವಣಾಧಿಕಾರಿಗಳು ಮತ್ತು ಇತರೆ ತಂಡಗಳ ನೋಡಲ್ ಅಧಿಕಾರಿಗಳು ಸುಗಮವಾಗಿ ಮತದಾನ ಆಗುವ ನಿಟ್ಟಿನಲ್ಲಿ…
ಬೆಂಗಳೂರು: ನಿನ್ನೆ ಬೆಂಗಳೂರಿನ ಬಿನ್ನಿಮಿಲ್ ಬಳಿಯಲ್ಲಿ 2 ಕೋಟಿ ಹಣವನ್ನು ಚುನಾವಣಾಧಿಕಾರಿಗಳು ಸೀಜ್ ಮಾಡಿದ್ದರು. ಅಲ್ಲದೇ ಐಟಿ ಇಲಾಖೆಗೂ ಮಾಹಿತಿ ನೀಡಲಾಗಿತ್ತು. ಇದು ತಮ್ಮ ಹಣವೆಂದು ಹೇಳಿಕೊಂಡಿದ್ದಂತ ಬಿಜೆಪಿಯೂ, ಅದಕ್ಕೆ ಪೂರಕ ದಾಖಲೆ ಒದಗಿಸಿದ ಕಾರಣ, ಕ್ಲೀನ್ ಚಿಟ್ ನೀಡಲಾಗಿದೆ. ಆದ್ರೇ ಕಾಂಗ್ರೆಸ್ ಮಾತ್ರ ಇದು ಪ್ರಜಾಪ್ರಭುತ್ವದ ಮೇಲಿನ ಸರ್ಜಿಕಲ್ ಸ್ಟ್ರೈಕ್ ಎಂಬುದಾಗಿ ವಾಗ್ಧಾಳಿ ನಡೆಸಿದೆ. ಬೆಂಗಳೂರಿನ ಬಿನ್ನಿಮಿಲ್ ಬಳಿಯಲ್ಲಿ ಏಪ್ರಿಲ್.20ರ ಶನಿವಾರದ ನಿನ್ನೆಯ ದಿವಸ ಚುನಾವಣಾಧಿಕಾರಿಗಳಿಂದ 2 ಕೋಟಿ ಹಣವನ್ನು ಜಪ್ತಿ ಮಾಡಲಾಗಿತ್ತು. ಈ ಹಣ ತಮಗೆ ಸೇರಿದ್ದು ಎಂಬುದಾಗಿ ಬಿಜೆಪಿ ತಿಳಿಸಿತ್ತು. ಇದಷ್ಟೇ ಅಲ್ಲದೇ ಮಾರ್ಚ್.27ರಂದು ಕೆನರಾ ಬ್ಯಾಂಕ್ ನಿಂದ ಡ್ರಾ ಮಾಡಿ, ಕಚೇರಿಯಲ್ಲಿ ಇರಿಸಲಾಗಿತ್ತು. ಈ ಹಣವನ್ನು ಬೆಂಗಳೂರಿನ ನಾಲ್ಕು ಲೋಕಸಭಾ ಕ್ಷೇತ್ರಗಳ ಚುನಾವಣಾ ಕಾರ್ಯಕ್ಕೆ ಹಂಚಲು ತೆಗೆದುಕೊಂಡು ಹೋಗುತ್ತಿದ್ದಾಗ ಚುನಾವಣಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ ಎಂಬುದಾಗಿ ಸ್ಪಷ್ಟ ಪಡಿಸಿತ್ತು. ಬಿಜೆಪಿಯ ಈ ಮಾಹಿತಿಯನ್ನು ಚುನಾವಣಾ ಆಯೋಗ ಪರಿಶೀಲಿಸಿ, ಆದಾಯ ತೆರಿಗೆ ಇಲಾಖೆಗೂ ಮಾಹಿತಿ ನೀಡಲಾಗಿತ್ತು. ಬಿಜೆಪಿ…
ಬೆಂಗಳೂರು: ಸಿದ್ದರಾಮಯ್ಯನವರ ಸರಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಹಿಂದೂಗಳನ್ನು ದ್ವಿತೀಯ ದರ್ಜೆಯಲ್ಲ; ತೃತೀಯ ದರ್ಜೆಯ ನಾಗರಿಕರನ್ನಾಗಿ ನೋಡುವ ಕೆಟ್ಟ ವಾತಾವರಣ ನಿರ್ಮಾಣ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಆರೋಪಿಸಿದರು. ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್‍ನ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುಸ್ಲಿಂ ಭಯೋತ್ಪಾದಕರಿಗೆ, ಮತಾಂಧರಿಗೆ ಎಲ್ಲ ರೀತಿಯ ರಕ್ಷಣೆ ಕೊಡುತ್ತಿದ್ದಾರೆ. ಚುನಾವಣೆಗೆ ಮುಸ್ಲಿಂ ಭಯೋತ್ಪಾದಕರನ್ನು ಅವರ ಒಂದು ಕಾರ್ಯತಂತ್ರವಾಗಿ ರೂಪೀಕರಣ ಮಾಡುತ್ತಿದ್ದಾರೆ. ಕುಕ್ಕರ್ ಬಾಂಬ್ ಸ್ಫೋಟದಿಂದ ಆರಂಭಿಸಿ ಬಾಂಬ್ ಬ್ಲಾಸ್ಟ್ ಪ್ರಕರಣದ ವರೆಗೆ ಬರಿಯ ಮುಸಲ್ಮಾನ ಭಯೋತ್ಪಾದಕರೇ, ಮುಸಲ್ಮಾನ ಗೂಂಡಾಗಳೇ ಕಾಂಗ್ರೆಸ್ ಪರವಾಗಿ ನಿಂತಿದ್ದಾರೆ. ಅವರ ಪರವಾಗಿ ಕಾಂಗ್ರೆಸ್ಸಿನ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ನಿಲ್ಲುತ್ತಿದ್ದು, ಇದೆಂಥ ವಿಪರ್ಯಾಸ ಎಂದು ಪ್ರಶ್ನಿಸಿದರು. ಕರ್ನಾಟಕ ರಾಜ್ಯವು ಒಂದು ಕಾಲಘಟ್ಟದಲ್ಲಿ ಎಲ್ಲರನ್ನೂ ಸಮಾನತೆಯಿಂದ ನೋಡಿದೆ. ಆ ವಿಶ್ವಮಾನವನ ಸಂದೇಶವನ್ನು ನೀಡಿದ ನಾಡು ಕರ್ನಾಟಕ. ಈ ಚುನಾವಣೆ ನಡೆಸುವುದೇ ಗೂಂಡಾಗಳ ಮುಖಾಂತರ ಎಂಬಂತೆ ಕರ್ನಾಟಕವನ್ನು…
ಬೆಂಗಳೂರು: ಸಿದ್ದರಾಮಯ್ಯನವರ ಸರಕಾರದಲ್ಲಿ ಕನ್ನಡಿಗರು ಬದುಕಿನ ಗ್ಯಾರಂಟಿ ಕಳೆದುಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಆತಂಕ ವ್ಯಕ್ತಪಡಿಸಿದರು. ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್‍ನ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಹತ್ಯೆಯಾಗಿದೆ. ತನ್ನದೇ ಪಕ್ಷದ ಚುನಾಯಿತ ಪ್ರತಿನಿಧಿಯ ಮಗಳ ಹತ್ಯೆಗೆ ನ್ಯಾಯ ಒದಗಿಸುವುದನ್ನು ಬಿಟ್ಟು ಆರೋಪಿ ಮನೆಗೆ ರಕ್ಷಣೆ ಭಾಗ್ಯ ಕೊಡುತ್ತಿರುವ ಸರಕಾರಕ್ಕೆ ಏನು ಹೇಳಬೇಕೋ ಗೊತ್ತಾಗುತ್ತಿಲ್ಲ ಎಂದು ನೋವಿನಿಂದ ನುಡಿದರು. ಭಾರತದ ಭವಿಷ್ಯಕ್ಕಾಗಿ ಮತ ಕೇಳುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಕಾರು ಹರಿಸಿದ ಮತಾಂಧರನ್ನು ಹಿಡಿಯದೆ ಹಾಗೇ ಬಿಟ್ಟಿದ್ದಾರೆ. ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ರಾಮನವಮಿ ಹಬ್ಬದ ದಿನ ರಾಮಭಕ್ತರ ಮೇಲೆ ಹಲ್ಲೆ ಮಾಡಿದ್ದಾರೆ. ಕಲಾವಿದರಾದ ಹರ್ಷಿಕಾ ಪೂಣಚ್ಚ ಹಾಗೂ ಅವರ ಪತಿಯ ಮೇಲೆ ಹಲ್ಲೆ ಮಾಡಿ ದರೋಡೆ ಮಾಡಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ, ಬೆಳಗಾವಿಯಲ್ಲಿ…
ಬೆಂಗಳೂರು: 10 ವರ್ಷಗಳಲ್ಲಿ ಅಚ್ಚೇ ದಿನಗಳನ್ನ ತರದೇ ಈಗ 2047 ರ ವರೆಗೆ ಸಮಯ ಕೇಳುತ್ತಿರುವ ಮೋದಿಯವರಿಗೆ ಯಾವ ನೈತಿಕತೆ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಮೋದಿಯವರು ಮೊದಲು 5 ವರ್ಷ ಕೇಳಿದ್ದರು. ಆದರೆ ಅವರು ಅಧಿಕಾರಕ್ಕೇರಿ 10 ವರ್ಷಗಳೇ ಕಳೆದಿವೆ. ಈಗ ಮತ್ತೆ 23 ವರ್ಷ ಸಮಯ ಕೇಳ್ತಿದ್ದಾರೆ. ಅಂದರೆ 10 ವರ್ಷಗಳಲ್ಲಿ ಜನರ ಬದುಕಿನಲ್ಲಿ ಅಚ್ಚೇ ದಿನಗಳು ಬರಲಿಲ್ಲ ಎಂಬುದನ್ನ ಮೋದಿಯವರೇ ಒಪ್ಪಿಕೊಂಡಂತಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಮೊದಲು 10 ವರ್ಷಗಳಲ್ಲಿ ಮಾಡಿದ್ದೇನು ಎಂಬುದನ್ನ ಜನರ ಮುಂದಿಟ್ಟು ಮೋದಿಯವರು ಮತ ಕೇಳಲಿ. ದೇಶದ ಬಡವರಿಗೆ ಇವರು ಒಂದು ರೂಪಾಯಿ ಕೂಡ ಹೆಚ್ಚಿಗೆ ಕೊಟ್ಟಿಲ್ಲ. ಕರ್ನಾಟಕ ರಾಜ್ಯವನ್ನಂತೂ ಸಂಪೂರ್ಣ ಕಡೆಗಣಿಸಿದ್ದಾರೆ. ರಾಜ್ಯಕ್ಕೆ ಕೇಂದ್ರ ಬಿಜೆಪಿ ಸರ್ಕಾರ ಮಾಡಿರುವ ಅನ್ಯಾಯಗಳ ನೈಜ ಪ್ರಶ್ನೆಗಳಿಗೆ ಒಂದಕ್ಕೂ ಮೋದಿಯವರು ಉತ್ತರ ಕೊಟ್ಟಿಲ್ಲ. ನಾಳೆ ಅಮಿತ್ ಶಾ ಅವರು ರಾಜ್ಯಕ್ಕೆ ಬರ್ತಿದ್ದಾರೆ. ಅಮಿತ್…
ಬೆಂಗಳೂರು: “ಬೆಲೆ ಏರಿಕೆ, ಜಿಎಸ್ಟಿ ಹೊರೆ, ನಿರುದ್ಯೋಗ ಕೇಂದ್ರ ಬಿಜೆಪಿ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಿಜವಾದ ಗ್ಯಾರಂಟಿ” ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ವಾಗ್ದಾಳಿ ನಡೆಸಿದರು. ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಬೆಂಗಳೂರು ದಕ್ಷಿಣದ ವಿವಿಧೆಡೆ ಭಾನುವಾರ ಪ್ರಚಾರ ನಡೆಸಿದ ಮಾತನಾಡಿದಂತ ಅವರು, “ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನಿಮ್ಮೆಲ್ಲರ ಆಶೀರ್ವಾದ ಕೇಳಲು ನಾನು ಬಂದಿದ್ದೇನೆ. ಈ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 10 ವರ್ಷವಾಗಿದೆ. ರಾಜ್ಯದ ಜನರ ಆಶೀರ್ವಾದದಿಂದ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದು 10 ತಿಂಗಳಾಗಿವೆ. ಕಾಂಗ್ರೆಸ್ ಸರ್ಕಾರದ ಈ ಹತ್ತು ತಿಂಗಳ ಸಾಧನೆ ಏನು, ಕೇಂದ್ರ ಬಿಜೆಪಿ ಸರ್ಕಾರ 10 ವರ್ಷಗಳ ಸಾಧನೆ ಏನು ಎಂಬುದನ್ನು ಈ ಚುನಾವಣೆಯಲ್ಲಿ ಚರ್ಚೆ ಮಾಡಬೇಕು ಎಂದರು. ನೀವೆಲ್ಲರೂ ಟಿವಿಗಳಲ್ಲಿ ಕಾಂಗ್ರೆಸ್ ನ ಐದು ಗ್ಯಾರಂಟಿ ಹಾಗೂ ಮೋದಿ ಗ್ಯಾರಂಟಿ ಬಗ್ಗೆ ಜಾಹೀರಾತು ನೋಡುತ್ತಿದ್ದೀರಿ. ಇಲ್ಲಿರುವ ಜನರ ಪೈಕಿ ಮೋದಿ ಗ್ಯಾರಂಟಿ ಎಷ್ಟು…
ಬೆಂಗಳೂರು: ಇಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಮತದಾರರ ಜಾಗೃತಿ ಕಾರ್ ಹಾಗೂ ಬೈಕ್ ಗಳ ರ್‍ಯಾಲಿಗೆ ಭಾನುವಾರ ಚಾಲನೆ ನೀಡಿದರು. ನಂತರ ಮಾತನಾಡಿದ ರಾಜ್ಯಪಾಲರು, ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂದು ನಮಗೆಲ್ಲರಿಗೂ ತಿಳಿದಿದೆ. ಜನರ ಸರ್ಕಾರ, ಜನರಿಂದ, ಜನರಿಗಾಗಿ ಎಂಬುದು ನಮ್ಮ ಪ್ರಜಾಪ್ರಭುತ್ವದ ವಿಶೇಷತೆ. ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ಮತದಾರರು ಮತ್ತು ಗಣ್ಯರು ಈ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಪ್ರಮುಖ ಕೊಡುಗೆಯನ್ನು ಹೊಂದಿದ್ದಾರೆ ಎಂದು ಹೇಳಿದರು. ಮತದಾನ ಪ್ರಜಾಪ್ರಭುತ್ವದ ಶಕ್ತಿ ಮತ್ತು ಪ್ರಜಾಪ್ರಭುತ್ವದ ನಂಬಿಕೆಯನ್ನು ರಕ್ಷಿಸುತ್ತದೆ. ಮತದಾನವು ದೇಶವನ್ನು ಬಲಪಡಿಸುತ್ತದೆ ಮತ್ತು ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. “ಮತದಾನ ನಮ್ಮ ಹಕ್ಕು ಮತ್ತು ಕರ್ತವ್ಯ.” ಭಾರತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಮತದಾನದ ಹಕ್ಕನ್ನು ನೀಡಲಾಗಿದೆ. ನಾವು ಈ ಹಕ್ಕನ್ನು 100% ಬಳಸಿಕೊಳ್ಳಬೇಕು ಎಂದು ತಿಳಿಸಿದರು. ಚುನಾವಣೆಯಲ್ಲಿ ಮತದಾನ ಮಾಡುವುದು ಎಂದರೆ ಗಣರಾಜ್ಯವನ್ನು ಬಲಪಡಿಸುವುದು. ನಾವು ವೋಟ್ ಹಾಕದಿದ್ದರೆ ಏನಾಗುತ್ತದೆ ಎಂಬ ಕಲ್ಪನೆ ಕೆಲವರಿಗೆ ಇದೆ. ವಾಸ್ತವವಾಗಿ, ಹಲವು…
ಬೆಂಗಳೂರು : ಪ್ರಸ್ತುತ ಲೋಕಸಭಾ ಚುನಾವಣೆ ರಾಜ್ಯದಲ್ಲಿ ಒಟ್ಟು ಎರಡು ಹಂತದಲ್ಲಿ ನಡೆಯಲಿದ್ದು, ಏಪ್ರಿಲ್ 26 ರಂದು ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳು ಹಾಗೂ ಮೇ 7 ರಂದು ಎರಡನೇ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ರಾಜ್ಯದಲ್ಲಿ ಒಟ್ಟು 5.47 ಕೋಟಿ ಮತದಾರರು ಹಾಗೂ ಅವರಿಗಾಗಿ ಒಟ್ಟು 58,834 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಅದರಲ್ಲಿ 1832 ವಿಶೇಷ ಮತಗಟ್ಟೆಗಳನ್ನು ವಿವಿಧ ವಿಷಯವಾರು ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ತಿಳಿಸಿದ್ದಾರೆ. ಪ್ರತಿ ಚುನಾವಣೆಯಲ್ಲಿ ಸಹ ಭಾರತ ಚುನಾವಣಾ ಆಯೋಗ ವಿಶೇಷ ಘೋಷ ವಾಕ್ಯ ಹಾಗೂ ಲೋಗೋವನ್ನು ಘೋಷಣೆ ಮಾಡುತ್ತದೆ. ಅದೇ ರೀತಿ ಈ ಚುನಾವಣೆಗಾಗಿ “ಚುನಾವಣಾ ಪರ್ವ – ದೇಶದ ಗರ್ವ” ಎನ್ನುವ ಘೋಷ ವಾಕ್ಯವನ್ನು ಅಳವಡಿಸಕೊಳ್ಳಲಾಗಿದ್ದು, ಪ್ರಜಾಪ್ರಭುತ್ವದಲ್ಲಿ ಚುನಾವಣೆಗಳು ಎಲ್ಲರನ್ನೂ ಒಳಗೊಳ್ಳುವ, ಸುಗಮ, ನೈತಿಕ, ಭಾಗವಹಿಸುವಿಕೆಯ ಜೊತೆಗೆ ಮಾಹಿತಿಯುಕ್ತ ಚುನಾವಣೆಯನ್ನು ರಾಜ್ಯದಾದಂತ್ಯ ಪ್ರಜಾಪ್ರಭುತ್ವದ ಹಬ್ಬದ ರೀತಿ ಆಚರಿಸಲಾಗುವುದು ಎಂದು ಹೇಳಿದರು. SVEEP…