Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕನ್ನಡ ನಾಮಫಲಕ ಹಾಕೋ ಸಂಬಂಧ ವಾಣಿಜ್ಯ ಮಳಿಗೆಗಳ ಮುಂದಿದ್ದಂತ ಬೋರ್ಡ್ ಹೊಡೆದು ಹಾಕಿದ ಪ್ರಕರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರನ್ನು ಬಂಧಿಸಿ ಜೈಲಿಗಟ್ಟಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ನೀಡಿದ ಬಳಿಕ ಬಿಡುಗಡೆಯಾಗಿದ್ರು. ಆದ್ರೇ ಇದೀಗ ಬಿಡುಗಡೆಯಾದ ಕೆಲವೇ ಕ್ಷಣದಲ್ಲಿ ಮತ್ತೆ ಕರವೇ ಅಧ್ಯಕ್ಷ ಜೈಲುಪಾಲಾಗಿದ್ದಾರೆ. 2017ರಲ್ಲಿ ನಡೆದಂತ ಪ್ರಕರಣ ಸಂಬಂಧ ಕರವೇ ಅಧ್ಯಕ್ಷ ನಾರಾಯಣಗೌಡ ಅವರನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣ ಸಂಬಂಧ ಸಲ್ಲಿಸಲಾಗಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ನಾಳೆಗೆ ತೀರ್ಪು ಕಾಯ್ದಿರಿಸಿದೆ. ಈ ಹಿನ್ನಲೆಯಲ್ಲಿ ಆದೇಶ ನಾಳೆಗೆ ಕಾಯ್ದಿರಿಸಿದ ಕಾರಣ ಮತ್ತೆ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಅಂದಹಾಗೇ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರನ್ನು 2017ರ ಕೇಸ್ ನಲ್ಲಿ ಬಂಧಿಸಲಾಗಿತ್ತು. ಬಂಧನದ ಬಳಿಕ ಅವರು ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನೆಡೆಸಿದ್ದಂತ ಕೋರ್ಟ್ ನಾಳೆಗೆ ತೀರ್ಪು ಕಾಯ್ದಿರಿಸಿದೆ. ಹೀಗಾಗಿ ಮತ್ತೆ ಪರಪ್ಪನಹ ಅಗ್ರಹಾರ ಜೈಲಿಗೆ ಕರವೇ ಅಧ್ಯಕ್ಷ ನಾರಾಯಣಗೌಡ ಶಿಫ್ಟ್ ಆಗಿದ್ದಾರೆ. ಈ ಮೂಲಕ…
ಬೆಂಗಳೂರು: ವಿವಿಧ ಕಾರಣಗಳಿಂದಾಗಿ ಈಗಾಗಲೇ ಬೆಂಗಳೂರಿನ ಪೀಣ್ಯ ಪ್ಲೈ ಓವರ್ ಕ್ಲೋಸ್ ಮಾಡಲಾಗಿತ್ತು. ಈಗ ಮತ್ತೆ ನಾಲ್ಕು ದಿನ ಜನವರಿ.16ರಿಂದ ಕ್ಲೋಸ್ ಆಗಲಿದೆ. ಈ ಮೂಲಕ ಬಂದ್ ಮಾಡಲಾಗುತ್ತಿದೆ. ಈ ಕುರಿತಂತೆ ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದು ಜನವರಿ 16ರಿಂದ 19ರವರೆಗೆ ಪೀಣ್ಯ ಮೇಲ್ ಸೇತುವೆಯನ್ನು ಕ್ಲೋಸ್ ಮಾಡಲಾಗುತ್ತಿದೆ. ವಾಹನ ಸವಾರರು ಸರ್ವೀಸ್ ರಸ್ತೆಯನ್ನು ಬಳಸುವಂತೆ ಮನವಿ ಮಾಡಿದೆ. ಜನವರಿ 16ರ ರಾತ್ರಿ 11 ಗಂಟೆಯಿಂದ ಜನವರಿ 19ರ ಬೆಳಗ್ಗೆ 11 ಗಂಟೆಯವರೆಗೆ ಬಂದ್ ಆಗಲಿದೆ. ಲೋಡ್ ಟೆಸ್ಟಿಂಗ್ ಹಿನ್ನಲೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶವಿಲ್ಲ. ಹೀಗಾಗಿ ವಾಹನ ಸವಾರರು ಸಹಕರಿಸುವಂತೆ ಮನವಿ ಮಾಡಿದೆ. https://kannadanewsnow.com/kannada/manual-scavenging-high-court/ https://kannadanewsnow.com/kannada/breaking-break-6-0-magnitude-earthquake-hits-japan-raises-concerns/
ಬೆಂಗಳೂರು : ಅಲ್ಪಸಂಖ್ಯಾತರ ಸಮುದಾಯದ 2.50 ಲಕ್ಷ ವಿದ್ಯಾರ್ಥಿಗಳಿಗೆ 2023-24 ಸಾಲಿನ 170.7 ಕೋಟಿ ರೂ. ವಿದ್ಯಾರ್ಥಿ ವೇತನ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಬಿಡುಗಡೆ ಮಾಡಿದರು. ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ, ಪದವಿ ಹಾಗೂ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ವಿದ್ಯಾಸಿರಿ ಯೋಜನೆಯಡಿಯಲ್ಲಿ ಹಾಸ್ಟೆಲ್ ಸೌಲಭ್ಯದ ಆರ್ಥಿಕ ನೆರವು ಬಿಡುಗಡೆಗೆ ಚಾಲನೆ ನೀಡಿ , ಇದೇ ಸಂದರ್ಭದಲ್ಲಿ ಇಲಾಖೆಯ ನೂತನ ಡೈರಿ, ಕ್ಯಾಲೆಂಡರ್ ಬಿಡುಗಡೆ ಮಾಡಿದರು. 1 ರಿಂದ 8 ನೇ ತರಗತಿ ವರೆಗಿನ 2, 35, 661 ವಿದ್ಯಾರ್ಥಿಗಳಿಗೆ 1 ಸಾವಿರ ರೂ. ನಿಂದ 3,500 ರೂ. ವರೆಗೆ 90.30 ಕೋಟಿ ರೂ., ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡುವ 280 ವಿದ್ಯಾರ್ಥಿಗಳಿಗೆ ತಲಾ 20 ಲಕ್ಷ ರೂ. ನಂತೆ 25.27 ಕೋಟಿ ರೂ., ಪಿಎಚ್ ಡಿ, ಎಂ ಫಿಲ್ ವ್ಯಾಸಂಗ ಮಾಡುವ 308 ವಿದ್ಯಾರ್ಥಿಗಳಿಗೆ ಮಾಸಿಕ 10…
ಗದಗ: ಜಿಲ್ಲೆಯ ಲಕ್ಷ್ಮೇಶ್ವರದ ಸೊರಣಗಿ ಗ್ರಾಮದಲ್ಲಿ ಯಶ್ ಹುಟ್ಟುಹಬ್ಬ ಹಿನ್ನಲೆಯಲ್ಲಿ ಬೃಹತ್ ಗ್ರಾತ್ರದ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶಿಸಿ ಮೂವರು ಸಾವನ್ನಪ್ಪಿದ್ದರು. ಇಂತಹ ಮೃತರಿಗೆ ರಾಜ್ಯ ಸರ್ಕಾರದಿಂದ 2 ಲಕ್ಷ ಪರಿಹಾರವನ್ನು ಘೋಷಣೆ ಮಾಡಲಾಗಿತ್ತು. ಆದ್ರೇ ಪರಿಹಾರ ಕೊಡೋದಲ್ಲ ಜೊತೆಗೆ 2 ಎಕರೆ ಜಮೀನು ಕೊಟ್ಟು ಮೃತರ ಪುತ್ಥಳಿಯನ್ನು ನಿರ್ಮಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಹೌದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಸೊರಣಗಿ ಗ್ರಾಮಸ್ಥರು ಮೃತ ಯಶ್ ಅಭಿಮಾನಿಗಳಿಗೆ 2 ಲಕ್ಷ ಪರಿಹಾರವನ್ನು ಕೊಟ್ಟರೆ ಮಾತ್ರ ಸಾಲದು, ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ 2 ಎಕರೆ ಜಮೀನು ನೀಡಬೇಕು. ಘಟನಾ ಸ್ಥಳದಲ್ಲಿ ಮೃತರ ಪುತ್ಥಳಿ ನಿರ್ಮಿಸಬೇಕು ಎಂಬುದಾಗಿ ಆಗ್ರಹಿಸಿದ್ದಾರೆ. ಅಂದಹಾಗೇ ನಿನ್ನೆ ಲಕ್ಷ್ಮೇಶ್ವರದ ಸೊರಣಗಿ ಗ್ರಾಮದಲ್ಲಿ ಯಶ್ ಹುಟ್ಟುಹಬ್ಬ ಹಿನ್ನಲೆಯಲ್ ಬೃಹತ್ ಗಾತ್ರದ ಕಟೌಟ್ ಕಟ್ಟಲು ಹೋಗಿ, ವಿದ್ಯುತ್ ಸ್ಪರ್ಶದಿಂದ ಹನುಮಂತ ಹರಿಜನ್(24), ಮುರಳಿ ನಡುವಿನಮನಿ(20) ಹಾಗೂ ನವೀನ್ ಗಾಜಿ (20) ಎಂಬುವರು ಸಾವನ್ನಪ್ಪಿದ್ದರು. ಇದಲ್ಲದೇ ಪ್ರಕಾಶ್, ಮಂಜುನಾಥ್ ಹಾಗೂ ಹನುಮಂತ ಗಂಭೀರವಾಗಿ ಗಾಯಗೊಂಡಿದ್ದರು.…
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಕೆಲವೆಡೆ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ದಾಖಲೆ, ಹಣ ಜಪ್ತಿ ಮಾಡಿದ್ರೇ, ಮತ್ತೆ ಕೆಲವೆಡೆ ಒಡವೆ ವಸ್ತುಗಳನ್ನು ಸೀಜ್ ಮಾಡಿದ್ದಾರೆ. ಇದರ ನಡುವೆ ಗ್ರಾಮ ಪಂಚಾಯ್ತಿ ಸದಸ್ಯನ ಮನೆಯಲ್ಲಿ ಫಾರಿನ್ ಬ್ರ್ಯಾಂಡ್ ಎಣ್ಣೆ ಕಂಡು ಲೋಕಾಯುಕ್ತ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ಚನ್ನೇನಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯ ಸಿ.ಹೆಚ್ ಸುರೇಶ್ ಮೇಲೆ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಇಂದು ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ರಾಮನಗರ ಲೋಕಾಯುಕ್ತ ಡಿವೈಎಸ್ಪಿ ಗೌತಮ್ ನೇತೃತ್ವದಲ್ಲಿ ಸೀಗೇನಹಳ್ಳಿ ಮನೆಯ ಮೇಲೆ ದಾಳಿ ನಡೆಸಲಾಯಿತು. ಈ ದಾಳಿಯ ವೇಳೆಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯ ಸಿ.ಹೆಚ್ ಸುರೇಶ್ ನಿವಾಸದಲ್ಲಿ 500 ರೂ ಕಂತೆ ಕಂತೆ ನೋಟುಗಳು ಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಇನ್ನೂ ಇದಷ್ಟೇ ಅಲ್ಲದೇ ಬೆಂಗಳೂರು ದಕ್ಷಿಣ ತಾಲೂಕು ಚನ್ನೇನಹಳ್ಳಿ ಗ್ರಾಮ ಪಂಚಾಯ್ತಿ…
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಜರ್ಮನ್ ಫುಟ್ಬಾಲ್ ದಂತಕಥೆ, ಸಾರ್ವಕಾಲಿಕ ಶ್ರೇಷ್ಠ ಆಟಗಾರರಲ್ಲಿ ಒಬ್ಬರಾದ ಫ್ರಾಂಜ್ ಬೆಕೆನ್ಬೌರ್ ತಮ್ಮ 78 ನೇ ವಯಸ್ಸಿನಲ್ಲಿ ನಿಧನರಾದರು. ‘ಡೆರ್ ಕೈಸರ್’ ಎಂಬ ಅಡ್ಡಹೆಸರಿನಿಂದ ಕರೆಯಲ್ಪಡುವ ಬೆಕೆನ್ಬೌರ್, 1974 ರಲ್ಲಿ ಆಟಗಾರನಾಗಿ ಮತ್ತು 1990 ರಲ್ಲಿ ವ್ಯವಸ್ಥಾಪಕರಾಗಿ ಪಶ್ಚಿಮ ಜರ್ಮನಿಯೊಂದಿಗೆ ವಿಶ್ವಕಪ್ ಗೆದ್ದರು. ಕ್ಲಬ್ ಮಟ್ಟದಲ್ಲಿ, ಮಾಜಿ ಡಿಫೆಂಡರ್ ಅನ್ನು ಬೇಯರ್ನ್ ಮ್ಯೂನಿಚ್ ದಂತಕಥೆ ಎಂದು ಪರಿಗಣಿಸಲಾಗುತ್ತದೆ. ಅವರು 1974-76 ರಲ್ಲಿ ಜರ್ಮನ್ ದೈತ್ಯರೊಂದಿಗೆ ಸತತ ಮೂರು ಯುರೋಪಿಯನ್ ಕಪ್ಗಳನ್ನು ಗೆದ್ದಿದ್ದಾರೆ ಮತ್ತು ನಾಲ್ಕು ಬುಂಡೆಸ್ಲಿಗಾ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಇಂತಹ ಅವರು ಇದೀಗ ನಿಧನರಾಗುವ ಮೂಲಕ ಇನ್ನಿಲ್ಲವಾಗಿದ್ದಾರೆ.
ನವದೆಹಲಿ: ಟಾಟಾ ಗ್ರೂಪ್ನ ಆತಿಥ್ಯ ವಿಭಾಗದ ಭಾಗವಾಗಿರುವ ಇಂಡಿಯನ್ ಹೋಟೆಲ್ಸ್ ಕಂಪನಿ (ಐಎಚ್ಸಿಎಲ್) ಇತ್ತೀಚೆಗೆ ಭಾರತದ ಅತ್ಯಂತ ಚಿಕ್ಕ ಕೇಂದ್ರಾಡಳಿತ ಪ್ರದೇಶವಾದ ಲಕ್ಷದ್ವೀಪದ ಸುಹೇಲಿ ಮತ್ತು ಕಡ್ಮತ್ ದ್ವೀಪಗಳಲ್ಲಿ ಎರಡು ತಾಜ್-ಬ್ರಾಂಡ್ ರೆಸಾರ್ಟ್ಗಳಿಗಾಗಿ ಒಪ್ಪಂದಗಳಿಗೆ ಸಹಿ ಹಾಕಿದೆ. 2026 ರಲ್ಲಿ ತೆರೆಯಲು ಸಜ್ಜಾಗಿರುವ ಈ ರೆಸಾರ್ಟ್ಗಳು ಸುಸ್ಥಿರತೆ ಮತ್ತು ಸೂಕ್ಷ್ಮ ದ್ವೀಪ ಪರಿಸರ ವ್ಯವಸ್ಥೆಯ ಸಂರಕ್ಷಣೆಗೆ ಬದ್ಧತೆಯನ್ನು ಒತ್ತಿಹೇಳುತ್ತವೆ. ಭಾರತದ ಅತಿದೊಡ್ಡ ಆತಿಥ್ಯ ಕಂಪನಿಯಾಗಿ, ಐಎಚ್ಸಿಎಲ್ ಈ ಸಹಿಗಳನ್ನು ತನ್ನ ನವೀನ ಮತ್ತು ಪ್ರವರ್ತಕ ಮನೋಭಾವಕ್ಕೆ ಸಾಕ್ಷಿಯಾಗಿ ನೋಡುತ್ತದೆ. ರಾಜಸ್ಥಾನ, ಕೇರಳ, ಗೋವಾ ಮತ್ತು ಅಂಡಮಾನ್ ನಂತಹ ತಾಣಗಳ ಜಾಗತಿಕ ಜನಪ್ರಿಯತೆಗೆ ಯಶಸ್ವಿಯಾಗಿ ಕೊಡುಗೆ ನೀಡಿದ ನಂತರ, ಕಂಪನಿಯು ಈಗ ಪ್ರಯಾಣಿಕರಿಗೆ ವಿಶಿಷ್ಟ ಮತ್ತು ಪರಿಸರ ಪ್ರಜ್ಞೆಯ ಅನುಭವವನ್ನು ನೀಡುವ ಗುರಿಯನ್ನು ಹೊಂದಿದೆ. ರಾಜತಾಂತ್ರಿಕ ಉದ್ವಿಗ್ನತೆಯ ನಡುವೆ ಕಾರ್ಯತಂತ್ರದ ನಡೆ ಈ ಕಾರ್ಯತಂತ್ರದ ಕ್ರಮವು ಲಕ್ಷದ್ವೀಪವನ್ನು ಭಾರತೀಯ ಪ್ರವಾಸಿಗರಿಗೆ ಪ್ರಮುಖ ರಜಾ ತಾಣವಾಗಿ ಉತ್ತೇಜಿಸಲು, ವಿಶೇಷವಾಗಿ ಭಾರತ ಮತ್ತು ಮಾಲ್ಡೀವ್ಸ್ ನಡುವಿನ…
ಬಾಂಗ್ಲಾದೇಶ: ರಾಜ್ಯದ ಪ್ರಧಾನ ಮಂತ್ರಿ ಆಯ್ಕೆಗಾಗಿ ನಡೆದಂತ ಚುನಾವಣೆಯಲ್ಲಿ ಪ್ರಧಾನಿ ಶೇಖ್ ಹಸೀನಾ ಅವರು ಸಂಸತ್ತಿನಲ್ಲಿ ಕನಿಷ್ಠ 60 ಪ್ರತಿಶತದಷ್ಟು ಸ್ಥಾನಗಳನ್ನು ಗೆಲ್ಲುವ ಮೂಲಕ ಐದನೇ ಅವಧಿಗೆ ಅವಿರೋಧವಾಗಿ ಮುನ್ನಡೆ ಸಾಧಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಒಟ್ಟು 300 ಸ್ಥಾನಗಳಲ್ಲಿ 225 ಸ್ಥಾನಗಳನ್ನು ಘೋಷಿಸಿದ ಮುಕ್ಕಾಲು ಭಾಗ ಫಲಿತಾಂಶಗಳಲ್ಲಿ, ಹಸೀನಾ ಅವರ ಅವಾಮಿ ಲೀಗ್ 172 ಮತ್ತು ಅವರ ಮಿತ್ರ ಪಕ್ಷ ಜತಿಯಾ ಪಕ್ಷ ಇನ್ನೂ ಎಂಟು ಸ್ಥಾನಗಳನ್ನು ಗೆದ್ದಿದೆ ಎಂದು ದೇಶದ ಅತಿದೊಡ್ಡ ಖಾಸಗಿ ಸುದ್ದಿ ಪ್ರಸಾರಕ ಸೊಮೊಯ್ ಟಿವಿ ಸಂಗ್ರಹಿಸಿದ ಫಲಿತಾಂಶಗಳು ತಿಳಿಸಿವೆ. ಮತ ಎಣಿಕೆ ಮುಂದುವರೆದಿದೆ.
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಅಜಿತ್ ಅಗರ್ಕರ್ ನೇತೃತ್ವದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆಯ್ಕೆ ಸಮಿತಿಯು ಭಾನುವಾರ (ಜನವರಿ 7) ಮುಂಬರುವ ಭಾರತ ಮತ್ತು ಎಎಫ್ಜಿ ಟಿ 20 ಐ ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದೆ. ಒಂದು ವರ್ಷಕ್ಕೂ ಹೆಚ್ಚು ಸಮಯದ ಅನುಪಸ್ಥಿತಿಯ ನಂತರ, ಅನುಭವಿ ಜೋಡಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಟಿ 20 ಗೆ ಮರಳಿದ್ದಾರೆ. ಕೊಹ್ಲಿ ಮತ್ತು ರೋಹಿತ್ ಕೊನೆಯ ಬಾರಿಗೆ ಟಿ 20 ಐ ಪಂದ್ಯದಲ್ಲಿ ಭಾರತಕ್ಕಾಗಿ ಕಾಣಿಸಿಕೊಂಡರು, ನಂತರ ಅವರು ಟೆಸ್ಟ್ ಮತ್ತು ಏಕದಿನ ಪಂದ್ಯಗಳಲ್ಲಿ ಮಾತ್ರ ಭಾಗವಹಿಸಿದ್ದಾರೆ. ವಿರಾಟ್ ಮತ್ತು ರೋಹಿತ್ ಅವರ ಹಿರಿಯ ಬ್ಯಾಟಿಂಗ್ ಜೋಡಿಗೆ ವಿಶ್ರಾಂತಿ ನೀಡಿದ್ದರಿಂದ ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್ ಮತ್ತು ಇನ್ನೂ ಅನೇಕ ಉದಯೋನ್ಮುಖ ಪ್ರತಿಭೆಗಳನ್ನು ಕಂಡುಹಿಡಿಯಲು ಭಾರತೀಯ ತಂಡದ ಆಯ್ಕೆ ಸಮಿತಿಗೆ ಸಹಾಯ ಮಾಡಿತು. ಮೂರು ಪಂದ್ಯಗಳ ಭಾರತ ಮತ್ತು ಎಎಫ್ಜಿ ಟಿ 20 ಐ ಸರಣಿಯ ಮೊದಲ ಪಂದ್ಯವು ಜನವರಿ…
ಬೆಂಗಳೂರು: ಮಹತ್ವಾಕಾಂಕ್ಷಿ ಬೆಂಗಳೂರು ಸಬರ್ಬನ್ ರೈಲು ಯೋಜನೆಯ ಕಾರಿಡಾರ್-2ರಲ್ಲಿ ಅಳವಡಿಸಲಿರುವ, ದಾಖಲೆಯ 31 ಮೀ. ಉದ್ದದ ಯು-ಗರ್ಡರ್ ಅನ್ನು ದೇವನಹಳ್ಳಿಯಲ್ಲಿರುವ ಕಾಮಗಾರಿ ಸ್ಥಾವರದಲ್ಲಿ (ಕಾಸ್ಟಿಂಗ್ ಯಾರ್ಡ್) ಶನಿವಾರ ರಾತ್ರಿ ಸಿದ್ಧಪಡಿಸಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ. ಈ ಬಗ್ಗೆ ಭಾನುವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ದೇಶದ ಉಳಿದ ಮೆಟ್ರೋಗಳಲ್ಲಿ 28 ಮೀ. ಉದ್ದದ ಗರ್ಡರ್ (ಸಿಮೆಂಟ್ ಮತ್ತು ಕಬ್ಬಿಣದ ತೊಲೆ) ತಯಾರಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಬೆಂಗಳೂರು ಸಬರ್ಬನ್ ರೈಲು ಯೋಜನೆಯಲ್ಲಿ ಈ ದಾಖಲೆಯನ್ನು ಮುರಿಯಲಾಗಿದೆ. ‘ಯು’ ಆಕಾರದಲ್ಲಿರುವ ಇಂತಹ 450 ‘ಯು-ಗರ್ಡರ್’ಗಳು ಕಾರಿಡಾರ್-2ರಲ್ಲಿ (ಮಲ್ಲಿಗೆ ಲೈನ್) ಅಗತ್ಯವಾಗಿವೆ. ಇದನ್ನು ಯಶವಂತಪುರ-ಹೆಬ್ಬಾಳ ನಡುವಿನ 8 ಕಿ.ಮೀ. ಮಾರ್ಗದಲ್ಲಿ ಸದ್ಯದಲ್ಲೇ ಅಳವಡಿಸಲಾಗುವುದು’ ಎಂದಿದ್ದಾರೆ. ಇಂತಹ ಪ್ರತೀ ಒಂದು ಗರ್ಡರ್ ತಯಾರಿಕೆಗೂ ಎಂ60 ಗುಣಮಟ್ಟದ 69.5 ಕ್ಯೂಬಿಕ್ ಮೀಟರ್ ಕಾಂಕ್ರೀಟ್ ಬೇಕಾಗುತ್ತದೆ. ಇಂತಹ ತೊಲೆಗಳು ತಲಾ 178 ಟನ್ ಭಾರವಿರುತ್ತವೆ. ಇವುಗಳಿಂದ ಕಾಮಗಾರಿಗೆ ತಗುಲುವ ಸಮಯ ಸಾಕಷ್ಟು ಉಳಿಯಲಿದೆ.…