Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: “ಆಸ್ತಿ ತೆರಿಗೆ ಪಾವತಿ ಮಾಡದವರಿಗೆ ಬೆಂಗಳೂರು ಮಹಾನಗರ ಪಾಲಿಕೆಯಿಂದ ನೀಡಲಾಗಿರುವ ಒನ್ ಟೈಮ್ ಸೆಟ್ಲಮೆಂಟ್ (ಓಟಿಎಸ್) ಅವಕಾಶ ಜುಲೈ 31ರವರೆಗೆ ಮಾತ್ರ ಇರಲಿದೆ. ಹೀಗಾಗಿ ತೆರಿಗೆ ಬಾಕಿ ಉಳಿಸಿಕೊಂಡಿರುವವರು ಕೊನೆಯ ದಿನಾಂಕದ ಒಳಗಾಗಿ ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಶಿವಕುಮಾರ್ ಅವರು ಹೇಳಿದ್ದಿಷ್ಟು: “ಚುನಾವಣೆಗಳು ನಡೆಯುತ್ತಿದ್ದ ಕಾರಣ ತೆರಿಗೆ ಪಾವತಿ ವಿಚಾರದಲ್ಲಿ ಪಾಲಿಕೆ ಒತ್ತಡ ಹಾಕಿರಲಿಲ್ಲ. ಆಸ್ತಿ ತೆರಿಗೆ ಕಟ್ಟದವರಿಗೆ ತೆರಿಗೆ ವ್ಯಾಪ್ತಿಯಲ್ಲಿ ಬರಲು ಪಾಲಿಕೆ ವತಿಯಿಂದ ನೀಡಿರುವ ಒನ್ ಟೈಮ್ ಸೆಟ್ಲಮೆಂಟ್ ಅವಕಾಶವನ್ನು ಜುಲೈ 31ಕ್ಕೆ ಅಂತಿಮಗೊಳಿಸಲಾಗುವುದು. ಈ ಅವಕಾಶವನ್ನು ಯಾವುದೇ ಕಾರಣಕ್ಕೂ ವಿಸ್ತರಣೆ ಮಾಡುವುದಿಲ್ಲ. ಈ ಅವಕಾಶದಲ್ಲಿ ದಂಡದ ಮೇಲೆ ಶೇ.50 ರಷ್ಟು ವಿನಾಯಿತಿ ನೀಡಿದ್ದು, 100%ರಷ್ಟು ಬಡ್ಡಿ ಮನ್ನಾ ಕೂಡ ಮಾಡಲಾಗಿದೆ. ಬಿಜೆಪಿ ಸರ್ಕಾರ ತರಾತುರಿಯಲ್ಲಿ ಜಾರಿಗೆ ತಂದ ಕಾಯ್ದೆ. ನಮ್ಮ ಸರ್ಕಾರ ಇದನ್ನು ಸರಿಪಡಿಸಲು ಮುಂದಾಗಿದೆ.…
ಬೆಂಗಳೂರು: ನಗರದ ಜನತೆ ಬೆಳಿಗ್ಗೆ ವಾಕ್ ಮಾಡೋದಕ್ಕಾಗಿ, ಸಂಜೆ ವಾಕಿಂಗ್ ಮಾಡೋದಕ್ಕಾಗಿ ಉಪಯೋಗವಾಗೋ ನಿಟ್ಟಿನಲ್ಲಿ, ಇನ್ಮುಂದೆ ಬೆಂಗಳೂರಿನ ಪಾರ್ಕ್ ಗಳು ಬೆಳಿಗ್ಗೆ 5 ರಿಂದ ರಾತ್ರಿ 10ರವರೆಗೆ ಓಪನ್ ಮಾಡೋದಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಸೂಚಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಂತ ಅವರು, ಇನ್ನು ನಗರದಲ್ಲಿನ ಪಾಲಿಕೆ ವ್ಯಾಪ್ತಿಯ ಉದ್ಯಾನವನಗಳನ್ನು ನಿರ್ದಿಷ್ಟ ಸಮಯದಲ್ಲಿ ಮಾತ್ರ ತೆರೆಯಲಾಗುತ್ತಿದೆ. ಸಾರ್ವಜನಿಕರು ಮಧ್ಯಾಹ್ನದ ವೇಳೆಯೂ ಉದ್ಯಾನಗಳನ್ನು ತೆರೆಯ ಬೇಕು ಎಂದು ಮನವಿ ನೀಡಿದ್ದು, ಹೀಗಾಗಿ ನಗರದ ಎಲ್ಲಾ ಉದ್ಯಾನಗಳನ್ನು ಬೆಳಗ್ಗೆ 5 ಗಂಟೆಯಿಂದ ರಾತ್ರಿ 10 ರವರೆಗೆ ತೆರೆಯಲು ನಿರ್ಧರಿಸಲಾಗಿದೆ ಎಂದರು. ಕಬ್ಬನ್ ಪಾರ್ಕ್ ತೋಟಗಾರಿಕಾ ಇಲಾಖೆ ವ್ಯಾಪ್ತಿಯಲ್ಲಿದ್ದು ಈ ಸಮಯ ಇಲ್ಲಿಗೆ ಅನ್ವಯವಾಗುವುದಿಲ್ಲ. ಉದ್ಯಾನವನಗಳಲ್ಲಿ ಕಾನೂನುಬಾಹಿರ ಚಟುವಟಿಕೆ ನಿಯಂತ್ರಿಸಲು ಪೊಲೀಸರ ಗಸ್ತು, ಮಾರ್ಷಲ್ ಗಳನ್ನು ನಿಯೋಜಿಸಲಾಗುವುದು. ಇದರ ಜತೆಗೆ 22660000, 22221188 ಪಾಲಿಕೆಯ ದೂರವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಬಹುದು. 9480685700 ಗೆ ವಾಟ್ಸಪ್ ಮೂಲಕ ಮಾಹಿತಿ ನೀಡಬಹುದು ಎಂದು ತಿಳಿಸಿದರು. ಅನಧಿಕೃತ ಫ್ಲೆಕ್ಸ್;…
BIG NEWS: ಬೆಂಗಳೂರಲ್ಲಿ ‘ಆಸ್ತಿ ತೆರಿಗೆ’ ಪಾವತಿಗೆ ಜು.31 ಕೊನೇ ದಿನ, ಮತ್ತೆ ಅವದಿ ವಿಸ್ತರಣೆಯಿಲ್ಲ: ಡಿಸಿಎಂ ಡಿಕೆಶಿ
ಬೆಂಗಳೂರು: ಯಾವುದೇ ಕಾರಣಕ್ಕೂ ಬೆಂಗಳೂರಲ್ಲಿ ಆಸ್ತಿ ತೆರಿಗೆ ಪಾವತಿಗೆ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡುವುದಿಲ್ಲ. ಜುಲೈ.31 ಕೊನೆಯ ದಿನವಾಗಿದೆ. ಅದರೊಳೆಗೆ ಆಸ್ತಿ ತೆರಿಗೆ ಪಾವತಿ ಮಾಡುವಂತೆ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಬೆಂಗಳೂರಿನ ಜನರ ಸೇವೆಗೆ ಸಂಪೂರ್ಣವಾಗಿ ಸಮರ್ಪಿಸಿಕೊಂಡಿದೆ. ನಗರ ಪಾಲಿಕೆಯು ರಸ್ತೆಗಳು, ಉದ್ಯಾನವನಗಳು ಮತ್ತು ಇತರ ಸಾರ್ವಜನಿಕ ಉಪಯುಕ್ತತೆಗಳ ನಿರ್ವಹಣೆ, ಆಸ್ತಿ ಮತ್ತು ಖಾತಾ ಸಂಬಂಧಿತ ಸೇವೆಗಳು, ಘನತ್ಯಾಜ್ಯ ನಿರ್ವಹಣೆ ಮುಂತಾದ ಸೇವೆಗಳ ಸಮರ್ಥ ವಿತರಣೆಯು ಬೆಂಗಳೂರಿಗರಿಗೆ ಪರಿಣಾಮಕಾರಿಯಾಗಿ ಸೇವೆ ಸಲ್ಲಿಸಲು ನಿರ್ಣಾಯಕವಾಗಿದೆ ಎಂದು ಅರ್ಥಮಾಡಿ ಕೊಂಡಿದೆ ಎಂದಿದ್ದಾರೆ. ಆಸ್ತಿ ತೆರಿಗೆಯು ಬಿಬಿಎಂಪಿಯ ಆದಾಯದ ಪ್ರಾಥಮಿಕ ಮೂಲವಾಗಿದೆ. ಇದು ನಮ್ಮ ನಗರದ ಕಾರ್ಯಾಚರಣೆಯನ್ನು ನೇರವಾಗಿ ಸಮರ್ಥಿಸುತ್ತದೆ. ಸುಮಾರು 4 ಲಕ್ಷ ನಾಗರಿಕರಿಂದ ಸುಮಾರು ರೂ. 1000 ಕೋಟಿಗಳಷ್ಟು ತಮ್ಮ ಆಸ್ತಿತೆರಿಗೆಯನ್ನು ಪಾವತಿಸಿರುವುದಿಲ್ಲ ಎಂದು ತಿಳಿಸಿದ್ದಾರೆ. ಕರ್ನಾಟಕ ಸರ್ಕಾರದ ಐತಿಹಾಸಿಕ ನಿರ್ಣಯದಿಂದ, ಒಂದು ಭಾರಿ…
ಮೈಸೂರು: ಕೆಲ ತಿಂಗಳ ಹಿಂದಷ್ಟೇ ಕಾಡಾನೆ ಸೆರೆ ಕಾರ್ಯಾಚರಣೆಯ ವೇಳೆಯಲ್ಲಿ ಮೈಸೂರು ದಸರಾ ಆನೆ ಅರ್ಜುನ ಕಾಳಗದಲ್ಲಿ ನಿಧನವಾಗಿತ್ತು. ಈ ಬೆನ್ನಲ್ಲೇ ಮೈಸೂರು ದಸರಾ ಮಹೋತ್ಸವದಲ್ಲಿ ಎರಡು ಬಾರಿ ಪಾಲ್ಗೊಂಡಿದ್ದಂತ ಅಶ್ವತ್ಥಾಮ ಎನ್ನುವಂತ ಆನೆ, ಮೃತಪಟ್ಟಿರೋದಾಗಿ ತಿಳಿದು ಬಂದಿದೆ. ಈ ಕುರಿತಂತೆ ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ಹಂಚಿಕೊಂಡಿದ್ದು, ಮೈಸೂರು ದಸರಾದಲ್ಲಿ ಎರಡು ಬಾರಿ ಪಾಲ್ಗೊಂಡು ಅಂಬಾರಿ ಹೊತ್ತ ಆನೆಗೆ ಸಾಥ್ ನೀಡಿದ್ದಂತ ಅಶ್ವತ್ಥಾಮ ಆನೆಯನ್ನು ಹುಣಸೂರು-ಪಿರಿಯಾಪಟ್ಟಣ ತಾಲೂಕಿನ ಗಡಿ ಭಾಗದ ನಾಗರಹೊಳೆಯ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಇರಿಸಲಾಗಿತ್ತು ಎಂದಿದ್ದಾರೆ. ಭೀಮನಕಟ್ಟೆಯ ಆನೆ ಶಿಬಿರದಲ್ಲಿದ್ದಂತ ಮೈಸೂರು ದಸರಾ ಆನೆ ಅಶ್ವತ್ಥಾಮ, ಆಹಾರ ಅರಸಿ ಕಾಡಿಗೆ ತೆರಳಿತ್ತು. ಈ ವೇಳೆಯಲ್ಲಿ ಸೋಲಾರ್ ಬೇಲಿಯಿಂದ ವಿದ್ಯುತ್ ಸ್ಪರ್ಶಿಸಿ, ವಿದ್ಯುತ್ ಆಘಾತದಲ್ಲಿ ಅಶ್ವತ್ಥಾಮ ಆನೆ ಮೃತಪಟ್ಟಿರೋದಾಗಿ ತಿಳಿದು ಬಂದಿದೆ. ವಿದ್ಯುತ್ ಶಾಕ್ ನಿಂದ ಸಾವನ್ನಪ್ಪಿರುವಂತ ಅಶ್ವತ್ಥಾಮ ಆನೆಯು, ಎರಡು ಬಾರಿ ದಸರಾ ಮಹೋತ್ಸವಲ್ಲಿ ಪಾಲ್ಗೊಂಡಿದ್ದಂತ ಆನೆಯಾಗಿದೆ. ಅದಕ್ಕೆ 38…
ಬೆಂಗಳೂರು: ಮೋರಿಯಲ್ಲಿ ಸಿಕ್ಕಂತ ರೇಣುಕಾಸ್ವಾಮಿ ಅವರ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ಪರೀಕ್ಷೆಯಲ್ಲಿ ರೇಣುಕಾಸ್ವಾಮಿ ದೇಹದ 15 ಭಾಗಗಳ್ಲಲಿ ಹಲ್ಲೆ ಆಗಿರೋದಾಗಿ ತಿಳಿದು ಬಂದಿದೆ. ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಕಾರಣಕ್ಕೆ ನಟ ದರ್ಶನ್ ಅಂಡ್ ಟೀಂ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನನ್ನ ಕಿಡ್ನ್ಯಾಪ್ ಮಾಡಿ, ಹಲ್ಲೆ ನಡೆಸಿ, ಭೀಕರವಾಗಿ ಹತ್ಯೆ ಮಾಡಿ, ಮೋರಿಗೆ ಶವವನ್ನು ಬೀಸಾಕಲಾಗಿತ್ತು. ಈಗ ಪ್ರಕರಣ ಬೆಳಕಿಗೆ ಬಂದ ನಂತ್ರ ನಟ ದರ್ಶನ್ ಸೇರಿದಂತೆ 13 ಮಂದಿಯನ್ನು ಪೊಲೀಸರು ಬಂಧಿಸಲಾಗಿದೆ. ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಕೆಲವೇ ಕ್ಷಣಗಳಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಈ ಬೆನ್ನಲ್ಲೇ ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆಯ ವರದಿಯ ಬಗ್ಗೆ ವೈದ್ಯರು ಮಾಹಿತಿ ನೀಡಿರೋದಾಗಿ ತಿಳಿದು ಬಂದಿದೆ. ರೇಣುಕಾಸ್ವಾಮಿ ದೇಹದ ಮೇಲೆ 15 ಕಡೆಗಳಲ್ಲಿ ಗಾಯದ ಗುರುತು ಪತ್ತೆಯಾಗಿರೋದಾಗಿ ಮರಣೋತ್ತರ ಪರೀಕ್ಷೆ ನಡೆಸಿದಂತ ವೈದ್ಯರು ಮಾಹಿತಿ ನೀಡಿದ್ದಾರೆ. ರೇಣುಕಾಸ್ವಾಮಿ ಅವರ ಮೂಗು, ಕಾಲು, ತಲೆ, ಬೆನ್ನು, ದವಡೆ ಸೇರಿದಂತೆ…
ಬೆಂಗಳೂರು : ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಸನ್ನದುದಾರರಿಗೆ ಕಿರುಕುಳ ನೀಡಬಾರದು. ನೆರೆ ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಕಳ್ಳಸಾಗಾಣಿಕೆ ಮೂಲಕ ನುಸುಳುವ ಮದ್ಯವನ್ನು ಕಡ್ಡಾಯ ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಬಕಾರಿ ಇಲಾಖಾ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಇಂದು ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಈ ಸೂಚನೆ ನೀಡಿದರು. ಇಲಾಖೆಯ ತೆರಿಗೆ ಸಂಗ್ರಹ ಸಾಮರ್ಥ್ಯವನ್ನು ಆಧರಿಸಿಯೇ ನಿಗದಿ ಪಡಿಸುವ ಗುರಿ ತಲುಪಲು ಅಧಿಕಾರಿಗಳು ಗರಿಷ್ಠ ಪ್ರಯತ್ನ ಮಾಡಬೇಕು ಎಂದು ಸೂಚಿಸಿದರು. ಚುನಾವಣಾ ನೀತಿ ಸಂಹಿತೆ ಕಾರಣದಿಂದ ತೆರಿಗೆ ಸಂಗ್ರಹ ಬೆಳವಣಿಗೆ ದರ ನಿರೀಕ್ಷಿತ ಮಟ್ಟ ತಲುಪಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಮುಂದಿನ ದಿನಗಳಲ್ಲಿ ಇದನ್ನು ಭರ್ತಿ ಮಾಡುವಂತೆ ಸಿಎಂ ಸೂಚಿಸಿದರು. ಇಲಾಖೆಯಲ್ಲಿ ಕಾನ್ಸ್‌ಟೇಬಲ್, ಸಬ್ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಹಾಗೂ ವಾಹನಗಳ ಅಗತ್ಯತೆ ಕುರಿತಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಕರ ಸಮಾಧಾನ ಯೋಜನೆಯಡಿ 5.10 ಕೋಟಿ ರೂ. ವಸೂಲಾಗಿದ್ದು, ಯೋಜನೆಯನ್ನು ಇನ್ನಷ್ಟು ಕಾಲ ವಿಸ್ತರಿಸುವಂತೆ…
ನವದೆಹಲಿ: ನಿನ್ನೆ ಕೇಂದ್ರ ಸಚಿವ ಸಂಪುಟ ಸಭೆಯ ಬಳಿಕ, ತನ್ನ ಸಂಪುಟದ ಸಚಿವರಿಗೆ ಮೋದಿ ಖಾತೆ ಹಂಚಿಕೆ ಮಾಡಿದ್ದರು. ಕರ್ನಾಟಕದ ವಿ.ಸೋಮಣ್ಣ ಅವರಿಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವಸ್ಥಾನ ನೀಡಲಾಗಿತ್ತು. ಇಂತಹ ಖಾತೆಯ ಅಧಿಕಾರವನ್ನು ಇಂದು ವಹಿಸಿಕೊಂಡರು. ಮೋದಿ 3.0 ಸಚಿವ ಸಂಪುಟ ಸೇರಿದಂತೆ ಕರ್ನಾಟಕದ ಐವರಿಗೆ ಖಾತೆ ಹಂಚಿಕೆ ಮಾಡಲಾಗಿತ್ತು. ಹೆಚ್.ಡಿ ಕುಮಾರಸ್ವಾಮಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ನೀಡಿದ್ದರೇ, ನಿರ್ಮಲಾ ಸೀತಾರಾಮನ್ ಗೆ ಹಣಕಾಸು ಖಾತೆ, ಶೋಭಾ ಕರಂದ್ಲಾಜೆಗೆ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ರಾಜ್ಯ ಖಾತೆ ಮತ್ತು ಕಾರ್ಮಿಕ ಇಲಾಖೆ ರಾಜ್ಯಖಾತೆ ನೀಡಲಾಗಿತ್ತು. ವಿ.ಸೋಮಣ್ಣ ಅವರಿಗೆ ಜಲಶಕ್ತಿ ರಾಜ್ಯಖಾತೆ ಹಾಗೂ ರೈಲ್ವೆ ಸಚಿವ ರಾಜ್ಯಖಾತೆಯನ್ನು ಹಂಚಿಕೆ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಅವರು ನವದೆಹಲಿಯ ಕಚೇರಿಗೆ ತೆರಳಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ವಿ.ಸೋಮಣ್ಣ ಅಧಿಕಾರ ವಹಿಸಿಕೊಂಡರು. https://kannadanewsnow.com/kannada/breaking-actor-darshan-pavithra-gowda-and-13-others-appeared-before-the-court-soon/ https://kannadanewsnow.com/kannada/police-under-pressure-not-to-arrest-darshan-pressure-from-politicians-sandalwood-seniors/
ಶಿವಮೊಗ್ಗ: ಇಂದು ಶಿವಮೊಗ್ಗ ಲೋಕಾಯುಕ್ತ ಇಲಾಖೆಯ ಅಧಿಕಾರಿಗಳು ನಗರದ ಬುದ್ದನಗರ, ಆರ್.ಎಂ.ಎಲ್ ನಗರ, ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ, ಹರಕೆರೆ, ನ್ಯೂ ಮಂಡ್ಲಿ, ಊರುಗಡೂರು. ಮದಾರಿ ಪಾಳ್ಯ ವಿದ್ಯಾನಗರ, ರಾಜೀವ್ ಗಾಂಧಿ ಬಡಾವಣೆ, ಟ್ಯಾಂಕ್ ಮೊಹಲ್ಲಾ, ಶಾಂತಿನಗರ, ರಾಗಿಗುಡ್ಡ, ಶಾಂತಿನಗರ-ನವುಲೆ ಮುಖ್ಯ ರಸ್ತೆ ಚಾನೆಲ್ ಬಳಿ, ಮ್ಯಾಕ್ಸ್ ಆಸ್ಪತ್ರೆ ಪಕ್ಕದಲ್ಲಿರುವ ಕನ್ನರ್‍ವೆನ್ಸಿ ರಸ್ತೆ ಹಾಗೂ ಇತರೆ ಪ್ರದೇಶಗಳಲ್ಲಿ ಸಂಚರಿಸಿದ್ದು, ನಂತರ ಸಾಗರ ರಸ್ತೆ ಬಿ.ಎಸ್.ಎನ್.ಎಲ್ ಕಛೇರಿ ಬಳಿ ಇರುವ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಕಸ ವಿಲೇವಾರಿ ಮತ್ತು ನಗರ ಸ್ವಚ್ಚತೆ ಬಗ್ಗೆ ಪರಿಶೀಲನೆಯನ್ನು ನಡೆಸಿದರು. ಶಿವಮೊಗ್ಗ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಮಂಜುನಾಥ್ ಚೌದರಿ ಎಂ.ಹೆಚ್. ರವರು ಲೋಕಾಯುಕ್ತ ಠಾಣೆಯ ಅಧಿಕಾರಿಗಳಾದ ಉಮೇಶ್ ಈಶ್ವರ ನಾಯ್ಕ, ಡಿ.ಎಸ್.ಪಿ ಮತ್ತು ಪೋಲೀಸ್ ನಿರೀಕ್ಷಕರುಗಳಾದ ಸುರೇಶ್ ಹೆಚ್.ಎಸ್, ಪ್ರಕಾಶ್, ವೀರಬಸಪ್ಪ ಎಲ್ ಕುಸಲಾಪುರ ಮತ್ತು ಸಿಬ್ಬಂದಿಗಳೊಂದಿಗೆ ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರಾದ ಮಾಯಣ್ಣಗೌಡ ಮತ್ತು ಅವರ ಅಧಿಕಾರಿ ಸಿಬ್ಬಂದಿಗಳು, ಇಂಜಿನಿಯರ್‍ಗಳು ಮತ್ತು ಸದರಿ…
ನವದೆಹಲಿ: ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರನ್ನು ಆಂಧ್ರಪ್ರದೇಶದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ನಾಯ್ಡು ಅವರು ಜೂನ್ 12 ರ ಬುಧವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ನಿರೀಕ್ಷೆಯಿದೆ. “ಬಿಜೆಪಿ, ಜನಸೇನಾ ಮತ್ತು ಟಿಡಿಪಿಯ ಎಲ್ಲಾ ಶಾಸಕರು ಆಂಧ್ರಪ್ರದೇಶದ ಮುಂಬರುವ ಎನ್ಡಿಎ ಸರ್ಕಾರದ ಮುಖ್ಯಮಂತ್ರಿಯಾಗಲು ಒಪ್ಪಿಗೆ ನೀಡಿದ್ದಾರೆ” ಎಂದು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಹೇಳಿದರು. https://twitter.com/ANI/status/1800418415988908148 ಮಂಗಳಗಿರಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಿತ್ರಪಕ್ಷ ಜನಸೇನಾ ಶಾಸಕಾಂಗ ಪಕ್ಷದ ನಾಯಕರಾಗಿ ಪವನ್ ಕಲ್ಯಾಣ್ ಅವರನ್ನು ಆಯ್ಕೆ ಮಾಡಲಾಗಿದೆ. ಎನ್ಡಿಎ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಚಂದ್ರಬಾಬು ನಾಯ್ಡು ಅವರ ಉಮೇದುವಾರಿಕೆಯನ್ನು ಪವನ್ ಕಲ್ಯಾಣ್ ಪ್ರಸ್ತಾಪಿಸಿದರು ಮತ್ತು ಬೆಂಬಲಿಸಿದರು. ಸಭೆಯಲ್ಲಿ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು, ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್, ರಾಜ್ಯ ಬಿಜೆಪಿ ಮುಖ್ಯಸ್ಥ ದಗ್ಗುಬಾಟಿ ಪುರಂದೇಶ್ವರಿ ಮತ್ತು ಇತರ ಶಾಸಕರು ಭಾಗವಹಿಸಿದ್ದರು.…
ನವದೆಹಲಿ: ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಒಂದು ದಿನ ಮೊದಲು, ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಮಂಗಳವಾರ ಅಮರಾವತಿ ರಾಜ್ಯದ ರಾಜಧಾನಿಯಾಗಲಿದೆ ಎಂದು ಘೋಷಿಸಿದ್ದಾರೆ. ವಿಜಯವಾಡದಲ್ಲಿ ನಡೆದ ಎನ್ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರು ಈ ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಅವರನ್ನು ಮೈತ್ರಿಕೂಟದ ಸದನದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಜನಸೇನಾ ಪಕ್ಷದ ಮುಖ್ಯಸ್ಥ ಕೆ.ಪವನ್ ಕಲ್ಯಾಣ್ ಅವರ ಹೆಸರನ್ನು ಪ್ರಸ್ತಾಪಿಸಿದರು ಮತ್ತು ಇದನ್ನು ಬಿಜೆಪಿ ರಾಜ್ಯ ಅಧ್ಯಕ್ಷ ಮತ್ತು ಹೊಸದಾಗಿ ಆಯ್ಕೆಯಾದ ಸಂಸದೆ ಡಿ.ಪುರಂದೇಶ್ವರಿ ಬೆಂಬಲಿಸಿದರು. “ಅಮರಾವತಿ ನಮ್ಮ ರಾಜ್ಯದ ರಾಜಧಾನಿಯಾಗಲಿದೆ. ನಾವು ಕೇವಲ ಕೆಲವು ಸ್ಥಳಗಳನ್ನು ಮಾತ್ರವಲ್ಲ, ಇಡೀ ರಾಜ್ಯವನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಿದ್ದೇವೆ” ಎಂದು ನಾಯ್ಡು ಹೇಳಿದರು. ಆಂಧ್ರಪ್ರದೇಶದಲ್ಲಿ ಟಿಡಿಪಿ, ಜೆಎಸ್ಪಿ ಮತ್ತು ಬಿಜೆಪಿಯನ್ನು ಒಳಗೊಂಡ ಎನ್ಡಿಎ, ಏಕಕಾಲದಲ್ಲಿ ನಡೆದ ರಾಜ್ಯ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ವೈಎಸ್ಆರ್ಸಿಪಿಯನ್ನು ಸಮಗ್ರವಾಗಿ ಸೋಲಿಸಿತು. ವಿಶಾಖಪಟ್ಟಣಂ ಅನ್ನು ಆಡಳಿತಾತ್ಮಕ ರಾಜಧಾನಿಯಾಗಿ ಅಭಿವೃದ್ಧಿಪಡಿಸುವುದಾಗಿ…