Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು, ಮುಖ್ಯ ಶಿಕ್ಷಕರು ಸೇರಿದಂತೆ ತತ್ಸಮಾನ ವೃಂದದ ನೇಮಕಾತಿಗಾಗಿ ಲಿಖಿತ ಪರೀಕ್ಷೆ ನಡೆಸಲಾಗಿತ್ತು. ಈ ಬಳಿಕ ಸ್ಥಳ ನಿಯುಕ್ತಿಗಾಗಿ ಕೌನ್ಸಿಲಿಂಗ್ ಗೆ ವೇಳಾಪಟ್ಟಿಯನ್ನು ಪ್ರಕಟಿಸಿ, ಆದೇಶಿಸಲಾಗಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದಂತ ಬಿ.ಬಿ ಕಾವೇರಿ ಅವರು ಅಧಿಕೃತ ಜ್ಞಾಪನ ಹೊರಡಿಸಿದ್ದು, 2023-24ನೇ ಸಾಲಿನ ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಭರ್ತಿ ಮಾಡವು ಬಗ್ಗೆ ಪರೀಕ್ಷೆ ನಡೆಸಲು ಅಧಿಸೂಚನೆಯನ್ನು ಹೊರಡಿಸಲಾಗಿತ್ತು ಎಂದಿದ್ದಾರೆ. ಲೋಕಸಭಾ ಚುನಾವಣಾ ಮಾದರಿ ನೀತಿ ಸಂಹಿತೆ ಇದ್ದ ಪ್ರಯುಕ್ತ ಕೌನ್ಸಿಲಿಂಗ್ ದಿನಾಂಕವನ್ನು ಪ್ರಕಟಿಸಿರಲಿಲ್ಲ. ಆದ್ದರಿಂದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ನಡೆಸುವ ಕುರಿತಂತೆ ಪ್ರಸ್ತುತ ವೇಳಾಪಟ್ಟಿಯನ್ನು ಈ ಕೆಳಕಂಡಂತೆ ಪರಿಷ್ಕರಿಸಿ ಆದೇಶಿಸಿದ್ದಾರೆ. ಹೀಗಿದೆ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು, ಪ್ರೌಢಶಾಲಾ ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ಹುದ್ದೆಗಳಿಗೆ ಆಯ್ಕೆದಾ ಅಭ್ಯರ್ಥಿಗಳಿಗೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಅವರು ಟ್ವಿಟ್ ನಲ್ಲಿ ರಿಯಾಕ್ಟ್ ಮಾಡಿದ್ದು, ದರ್ಶನ್ ಅವರಿಗೆ ಮರಣದಂಡನೆಯೋ ಅಥವಾ ಜೀವಾವಧಿ ಶಿಕ್ಷೆಯೋ ಅಂತ ಪ್ರತಿಕ್ರಿಯಿಸಿದ್ದಾರೆ. ಈ ಸಂಬಂಧ ಇಂದು ನಟಿ ರಮ್ಯಾ ಅವರು ಕರ್ನಾಟಕ ಬಾಕ್ಸ್ ಆಫೀಸ್ ಎನ್ನುವಂತವರು ಎಕ್ಸ್ ಪೋಸ್ಟ್ ಅನ್ನು ರೀಪೋಸ್ಟ್ ಮಾಡಿದ್ದಾರೆ. ಆ ಪೋಸ್ಟ್ ನಲ್ಲಿ ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ನಟ ದರ್ಶನ್ ವಿರುದ್ಧ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೇಸ್ ದಾಖಲಾಗಿದೆ. ಈ ಸೆಕ್ಷನ್ ಅಡಿಯಲ್ಲಿ ನಟ ದರ್ಶನ್ ಗೆ ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆ ವಿಧಿಸಬಹುದೇನೋ ಅಂತ ತಿಳಿಸಿದ್ದಾರೆ. ಬೇರೆ ಯಾವುದೇ ಫಲಿತಾಂಶವು ಹಣದ ಪ್ರಭಾವ ಮತ್ತು ಭಾರತೀಯ ಕಾನೂನು ವ್ಯವಸ್ಥೆಯನ್ನು ಅಣಕಿಸುವ ಪ್ರಕರಣವಾಗಿರುತ್ತದೆ. ಬಲಿಪಶುವಿಗೆ ಅರ್ಹವಾದ ನ್ಯಾಯ ಸಿಗುತ್ತದೆ ಎಂದು ಭಾವಿಸುತ್ತೇನೆ ಎಂಬುದಾಗಿ ಹೇಳಲಾದಂತ ಪೋಸ್ಟ್ ನಟಿ ರಮ್ಯಾ ರೀ ಪೋಸ್ಟ್ ಮಾಡಿದ್ದಾರೆ. https://twitter.com/Karnatakaa_BO/status/1800410187347738894 https://kannadanewsnow.com/kannada/sc-issues-notice-to-nta-over-alleged-irregularities-in-neet-2024/…
ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ನೀಟ್-ಯುಜಿ 2024 ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯಿಂದ (ಎನ್ಟಿಎ) ಪ್ರತಿಕ್ರಿಯೆಯನ್ನು ಕೋರಿದೆ. ಹೆಚ್ಚುವರಿಯಾಗಿ, ನೀಟ್-ಯುಜಿ 2024 ಪರೀಕ್ಷೆಗೆ ಸಂಬಂಧಿಸಿದ ಇದೇ ರೀತಿಯ ಮತ್ತೊಂದು ಅರ್ಜಿಯೊಂದಿಗೆ ನ್ಯಾಯಾಲಯವು ವಿಚಾರಣೆಯನ್ನು ಜುಲೈ 8 ಕ್ಕೆ ನಿಗದಿಪಡಿಸಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ – ಪದವಿಪೂರ್ವ (ನೀಟ್-ಯುಜಿ) 2024 ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (ಎನ್ಟಿಎ) ನೋಟಿಸ್ ನೀಡಿದೆ ಮತ್ತು ಪ್ರತಿಕ್ರಿಯೆ ಕೋರಿದೆ. ಆದಾಗ್ಯೂ, ನಡೆಯುತ್ತಿರುವ ಕಾನೂನು ಪ್ರಕ್ರಿಯೆಗಳ ಹೊರತಾಗಿಯೂ, ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ನಿಲ್ಲಿಸಲು ನ್ಯಾಯಾಲಯ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ರಜಾಕಾಲದ ಪೀಠದ ಮುಂದೆ ಅರ್ಜಿಯನ್ನು ತರಲಾಯಿತು. ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ…
ಬೆಂಗಳೂರು: ನಟ ದರ್ಶನ್ ಸೇರಿದಂತೆ 10 ಮಂದಿಯನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿತ್ತು. ನಟ ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ಬೆನ್ನಲ್ಲೇ ಶೆಡ್ ಬಳಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದಂತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ನಟ ದರ್ಶನ್ ಸ್ನೇಹಿತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದಂತ ಕಾರಣಕ್ಕಾಗೇ ಚಿತ್ರದುರ್ಗಿ ಮೂಲದ ರೇಣುಕಾಸ್ವಾಮಿ ಎಂಬಾತನನ್ನು ವಿನಯ್ ಎನ್ನುವವರಿಗೆ ಸೇರಿದ ಶೆಡ್ ಗೆ ಕರೆದೊಯ್ಯಲಾಗಿತ್ತು. ಕಿಡ್ನ್ಯಾಪ್ ಮಾಡಿ, ಅಲ್ಲಿ ಹಲ್ಲೆ ಕೂಡ ಮಾಡಲಾಗಿತ್ತು. ಈ ಹಲ್ಲೆಯ ವೇಳೆಯಲ್ಲಿ ಬಲವಾದ ರಾಡ್ ನಿಂದ ಹೊಡೆದ ಕಾರಣ, ರೇಣುಕಾಸ್ವಾಮಿ ಸಾವನ್ನಪ್ಪಿದ್ದರು. ಈ ಇಡೀ ಘಟನೆ ಬಂಧಿತ ಆರೋಪಿ ವಿನಯ್ ಎಂಬುವರಿಗೆ ಸೇರಿದಂತ ಶೆಡ್ ನಲ್ಲಿ ನಡೆದಿತ್ತು. ಈ ಹಿನ್ನಲೆಯಲ್ಲಿ ಶೆಡ್ ಬಳಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದಂತ ವ್ಯಕ್ತಿಯೊಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆಯ ಬಳಿಕ ಕಾಮಾಕ್ಷಿ ಪೊಲೀಸ್ ಠಾಣೆಗೆ ಕರೆದೊಯ್ಯೋ ಸಾಧ್ಯತೆ ಇದೆ. https://kannadanewsnow.com/kannada/shivamogga-power-outages-in-these-areas-of-the-district-on-june-13/…
ಶಿವಮೊಗ್ಗ: ಶಿವಮೊಗ್ಗ ನ.ಉ.ವಿ-2ರ ಮಂಡ್ಲಿ ವಿ.ವಿ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಜೂನ್ 13 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00ರವರೆಗೆ ಪೇಪರ್ ಪ್ಯಾಕೇಜ್, ಹರಕೆರೆ, ನ್ಯೂಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‍ಮಿಲ್, ಬೆನಕೇಶ್ವರ ರೈಸ್‍ಮಿಲ್, ಸವಾಯಿಪಾಳ್ಯ, ಕುರುಬರಪಾಳ್ಯ, ಇಲಿಯಾಜ್‍ನಗರ 1 ರಿಂದ 4ನೇ ಕ್ರಾಸ್, 100 ಅಡಿರಸ್ತೆ, ಎಫ್-05 ಗಾಜನೂರು ಗ್ರಾಮಾಂತರ ಪ್ರದೇಶ, ಎಫ್-8, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಎಫ್-18 ಹೊಸಳ್ಳಿ, ಎಫ್-6 ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಎಫ್-17 ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಆನುಪಿಕಟ್ಟೆ, ಪುರದಾಳು, ರಾಮಿಕೊಪ್ಪ, ಮೈಲಾರಪ್ಪಪನ ಕ್ಯಾಂಪ್, ಹನುಮಂತಾಪುರ, ಶರಾವತಿನಗರ, ಶಾರದ ಕಾಲೋನಿ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್‍ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ ಶಿವಮೊಗ್ಗ : ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 75.60 ಮಿಮಿ ಮಳೆಯಾಗಿದ್ದು,…
ಶಿವಮೊಗ್ಗ: 2023-24 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ-2 ಜೂನ್ 14 ರಿಂದ 22 ರವೆಗೆ ಜಿಲ್ಲೆಯಲ್ಲಿ ನಡೆಯಲಿದ್ದು ಪರೀಕ್ಷೆಗಳು ಶಾಂತಿಯುತ ಹಾಗೂ ಸುಸೂತ್ರವಾಗಿ ನಡೆಯಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜೂ.11 ರಂದು ಏರ್ಪಡಿಸಲಾಗಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆ-2 ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಭದ್ರಾವತಿ 02, ಹೊಸನಗರ 01, ಸಾಗರ 01, ಶಿಕಾರಿಪುರ 01, ಶಿವಮೊಗ್ಗ 03, ಸೊರಬ 01 ತೀರ್ಥಹಳ್ಳಿ 01 ಸೇರಿ ಜಿಲ್ಲೆಯ ಒಟ್ಟು 10 ಪರೀಕ್ಷಾ ಕೇಂದ್ರಗಳಲ್ಲಿ ಜೂನ್ 14 ರಿಂದ 22 ರವರೆಗೆ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗೆ ಪುನರಾವರ್ತಿತ ವಿದ್ಯಾರ್ಥಿಗಳು 2091, ಖಾಸಗಿ ಪುನರಾವರ್ತಿತ 171 ಮತ್ತು ಫಲಿತಾಂಶ ಸುಧಾರಣೆಗಾಗಿ 249 ಸೇರಿ ಒಟ್ಟು 2511 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಪ್ರಥಮ ಭಾಷೆಗೆ 1215, ದ್ವಿತೀಯ ಭಾಷೆಗೆ 1549, ತೃತೀಯ ಭಾಷೆಗೆ 1409, ಗಣಿತ 1785, ವಿಜ್ಞಾನ 2035 ಮತ್ತು…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ಸಿಎಂ ಸಿದ್ಧರಾಮಯ್ಯ ಖಡಕ್ ನಿರ್ಧಾರ ಕೈಗೊಂಡಿದ್ದಾರೆ. ಅದೇ ನೌಕರರ ವರ್ಗಾವಣೆ ನಾನು ಬೇರೆ ಯಾವುದಕ್ಕೂ ಮಣೆ ಹಾಕೋದಿಲಲ್. ಆ ಮಾನದಂತ ಪೂರೈಸಿದ್ರೆ ಮಾತ್ರವೇ ವರ್ಗಾವಣೆ ಅನುಮತಿಸೋದಾಗಿ ಎಚ್ಚರಿಸಿದ್ದಾರೆ. ಇಂದು ಸಿಎಂ ಸಿದ್ಧರಾಮಯ್ಯ ಅವರು ವಾಣಿಜ್ಯ ತೆರಿಗೆ ಇಲಾಖೆ ಮತ್ತು ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಭೆಯಲ್ಲಿ ವರ್ಗಾವಣೆ ವೇಳೆ ತೆರಿಗೆ ಸಂಗ್ರಹದಲ್ಲಿ ನಿಮ್ಮ ಕಾರ್ಯಕ್ಷಮತೆಯನ್ನು ಮಾನದಂಡವಾಗಿ ನಾನು ಪರಿಗಣಿಸುತ್ತೇನೆ. ಬೇರೆ ಯಾವ ಪ್ರಭಾವಕ್ಕೂ ನಾನು ಮಣೆ ಹಾಕಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ. ವರ್ಗಾವಣೆ ವೇಳೆ ನಿಮ್ಮ ಕಾರ್ಯಕ್ಷಮತೆಯೇ ಮಾನದಂಡ. ಬೇರೆ ಯಾವ ಪ್ರಭಾವಕ್ಕೂ ನಾನು ಮಣೆ ಹಾಕಲ್ಲ. ಅಂದಾಜು, ಜಾರಿ, ಮೇಲ್ಮನವಿ ತಂಡಗಳು ನಿರಂತರ ಸಹಕಾರದಿಂದ ಕೆಲಸ ಮಾಡಿ ಎಂದು ಸೂಚನೆ ನೀಡಿದರು. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ…
ಚಿತ್ರದುರ್ಗ: ಸ್ಯಾಂಡಲ್ ವುಡ್ ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದಾರೆ. ಹಾಗಾದ್ರೇ ಕೊಲೆಯಾದ ರೇಣುಕಾಸ್ವಾಮಿ ಯಾರು? ಹತ್ಯೆಗೆ ಕಾರಣವೇನು? ಅನ್ನೋ ಬಗ್ಗೆ ಮುಂದೆ ಓದಿ. ಪವಿತ್ರ ಗೌಡಗೆ ಅಶ್ಲೀಲ ಪೋಟೋ ಹಾಗೂ ಮೆಸೇಜ್ ಮಾಡಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ ಅವರನ್ನು ಅರೆಸ್ಟ್ ಮಾಡಲಾಗಿದೆ. ಚಿತ್ರದುರ್ಗ ನಗರದ ತುರುವನೂರು ರಸ್ತೆಯ ಮೊದನೇ ಕ್ರಾಸ್ ನ ನಿವಾಸಿಯಾಗಿರುವ ರೇಣುಕಸ್ವಾಮಿ ಅವರು ಮೆಡಿಕಲ್ ನಲ್ಲಿ ಕೆಲಸ ಮಾಡಿಕೊಂಡಿದ್ದನು. ರಾಷ್ಟ್ರೀಯ ಹೆದ್ದಾರಿ ಪಕ್ಕದ ಪ್ರಗತಿ ಗ್ರಾಮೀಣ ಬ್ಯಾಂಕ್ ಗಳಿರುವ ಮೆಡಿಕಲ್ ನಲ್ಲಿ ಮೃತ ರೇಣುಕಾ ಸ್ವಾಮಿ ಕೆಲಸ ಮಾಡಿಕೊಂಡಿದ್ದನು. ಕಳೆದ ಮೂರು ದಿನಗಳ ಹಿಂದೆ ದರ್ಶನ್ ಅವರನ್ನು ಬೆಂಗಳೂರಿಗೆ ಕರೆಸಿಕೊಂಡು ಕೊಲೆ ಮಾಡಲಾಗಿದೆ. ತುರುವನೂರು ರಸ್ತೆಯಲ್ಲಿರುವ ಮೃತನ ಮನೆಗೆ ಸ್ಥಳೀಯ ಚಿತ್ರದುರ್ಗ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆಯಲ್ಲಿ ಯಾರು ಇಲ್ಲದಿರುವುದು ತಿಳಿದು ಬಂದಿದೆ. ಮನೆಯ ಸದಸ್ಯರು ಎಲ್ಲರೂ ಬೆಂಗಳೂರಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ. ಮೃತನ ರೇಣುಕಾಸ್ವಾಮಿ…
ಬೆಂಗಳೂರು: ನಟ ದರ್ಶನ್ ಇಂದು ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದಾರೆ. ನಟ ದರ್ಶನ್ ವಿರುದ್ಧ ಒಂದಲ್ಲ, ಎರಡಲ್ಲ ಬರೋಬ್ಬರಿ ಮೂರು ಕೇಸ್ ಗಳಿದ್ದಾವೆ. ಅವು ಯಾವುವು? ಆರೋಪ ಸಾಬೀತಾದ್ರೆ ಶಿಕ್ಷೆ ಏನು ಅಂತ ಮುಂದೆ ಓದಿ. ಚಾಲೆಂಜಿಗ್ ಸ್ಟಾರ್ ನಟ ದರ್ಶನ್ ನಟನೆಯ ಜೊತೆಗೆ ವಿವಾದಗಳಿಂದಲೂ ಸುದ್ದಿಯಾಗಿದ್ದಾರೆ. ಸ್ಯಾಂಡಲ್ ವುಡ್ ನಟ ದರ್ಶನ್, ಇಂದು ಮಾತ್ರ ಗಂಭೀರ ಪ್ರಕರಣದಲ್ಲಿ ಸಿಲುಕಿ, ಪೊಲೀಸರಿಂದ ಬಂಧಿಸಲ್ಪಟ್ಟಿದ್ದಾರೆ. ತನ್ನ ಗೆಳತಿ ಪವಿತ್ರಾ ಗೌಡಗೆ ಅಶ್ಲೀವಾಗಿ ಸಂದೇಶ ಕಳುಹಿಸಿದ್ದಂತ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನನ್ನು ಮರ್ಡರ್ ಮಾಡಿದ ಆರೋಪ ನಟ ದರ್ಶನ್ ಮೇಲಿದೆ. ನಟ ದರ್ಶನ್ ಸೇರಿದಂತೆ 10 ಮಂದಿಯನ್ನು ಈ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದ ಮೂಲಕ ನಟ ದರ್ಶನ್ ಒಂದಲ್ಲ ಎರಡಲ್ಲ ಮೂರು ಪ್ರಕರಣದಲ್ಲಿ ಸಿಲುಕಿಕೊಂಡಂತೆ ಆಗಿದೆ. ರೇಣುಕಾಸ್ವಾಮಿ ಮರ್ಡರ್ ಕೇಸಲ್ಲಿ ಪೊಲೀಸರು ಐಪಿಸಿ ಸೆಕ್ಷನ್ 364ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ. ಅಂದಹಾಗೇ ನಟ ದರ್ಶನ್ ವಿರುದ್ಧ ಕೊಲೆ,…
ಮಲವಿ: ಮಿಲಿಟರಿ ವಿಮಾನದಲ್ಲಿದ್ದ ತನ್ನ ಉಪಾಧ್ಯಕ್ಷ ಸೌಲೋಸ್ ಚಿಲಿಮಾ ಮತ್ತು ಇತರ ಒಂಬತ್ತು ಮಂದಿ ವಿಮಾನ ಅಪಘಾತಕ್ಕೀಡಾದ ನಂತರ ಸಾವನ್ನಪ್ಪಿದ್ದಾರೆ ಎಂದು ಮಲವಿ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ. ಈ ಹಿಂದೆ ವಿಮಾನ ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ಆರಂಭಿಸಲಾಗಿತ್ತು. ಆದಾಗ್ಯೂ, ಶೋಧವು ದುರಂತವಾಗಿ ಕೊನೆಗೊಂಡಿತು ಮತ್ತು ವಿಮಾನದಲ್ಲಿದ್ದ ಎಲ್ಲಾ ಹತ್ತು ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಯಿತು. 2024 ರ ಜೂನ್ 10 ರ ಸೋಮವಾರ ಕಾಣೆಯಾದ ಮಲವಿ ರಕ್ಷಣಾ ಪಡೆ ವಿಮಾನದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ದುರಂತದಲ್ಲಿ ಕೊನೆಗೊಂಡಿದೆ ಎಂದು ರಾಷ್ಟ್ರಪತಿ ಮತ್ತು ಕ್ಯಾಬಿನೆಟ್ ಕಚೇರಿ ಸಾರ್ವಜನಿಕರಿಗೆ ತಿಳಿಸಲು ಬಯಸುತ್ತದೆ. ಉಪರಾಷ್ಟ್ರಪತಿ, ಗೌರವಾನ್ವಿತ ಡಾ.ಸೌಲೋಸ್ ಕ್ಲಾಸ್ ಚಿಲಿಮಾ ಮತ್ತು ಇತರ ಒಂಬತ್ತು ಮಂದಿಯನ್ನು ಹೊತ್ತ ವಿಮಾನವು ಇಂದು ಬೆಳಿಗ್ಗೆ ಚಿಕಾಂಗಾವಾ ಫೋರ್ಸ್ನಲ್ಲಿ ಪತ್ತೆಯಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. https://twitter.com/AZ_Intel_/status/1800408153357443540 “ದುರದೃಷ್ಟವಶಾತ್, ವಿಮಾನದಲ್ಲಿದ್ದ ಎಲ್ಲರೂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ವಿಮಾನವು ರಾಡಾರ್ನಿಂದ ಹೊರಬಂದ ಕೂಡಲೇ ಪ್ರಾರಂಭಿಸಲಾದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಮಲವಿ…