Author: kannadanewsnow09

ರಾಮನಗರ: ಭ್ರೂಣ ಹತ್ಯೆ ಮಾಡಿಸಿ ಪರಾರಿಯಾಗಿರುವಂತ ಪ್ರಿಯಕರನ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಂತ ಪೊಲೀಸರ ವಿರುದ್ಧವೇ ಸಂತ್ರಸ್ತೆಯೊಬ್ಬರು ಸಿಡಿದೆದ್ದಿದ್ದಾರೆ. ಅಲ್ಲದೇ ರಾಮನಗರ ಪೊಲೀಸರ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ. ರಾಮನಗರ ಜಿಲ್ಲೆಯ ಮಾಗಡಿ ಮೂಲದ ಮಹಿಳೆಯೊಬ್ಬರು ಭ್ರೂಣ ಹತ್ಯೆ ಮಾಡಿಸಿದಂತ ಪ್ರಿಯಕರನ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ. ತಮಗೆ ನ್ಯಾಯ ಕೊಡಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಅಲ್ಲದೇ ನ್ಯಾಯ ಸಿಗದೇ ಹೋದ್ರೆ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದುರೇ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಎಚ್ಚರಿಕೆ ನೀಡಿದ್ದಾರೆ. ಪ್ರಿಯಕರ ದಯಾನಂದ್ (24) ವಿರುದ್ಧ ರಾಮನಗರದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದೂ ತೆಗೆದುಕೊಳ್ಳುತ್ತಿಲ್ಲ. ದಯಾನಂದ ಗೆಳೆಯ ದೂರು ಕೊಡಿಸುವುದಾಗಿ ನನ್ನಿಂದ 1.40 ಲಕ್ಷ ಹಣ ಲಂಚವನ್ನು ಪಡೆದಿದ್ದಾನೆ. ಆದರೂ ಸಿಪಿಐ ಕ್ರಮ ಕೈಗೊಳ್ಳುತ್ತಿಲ್ಲ. ಕಳೆದ ನಾಲ್ಕು ತಿಂಗಳಿನಿಂದ ಪೊಲೀಸ್ ಠಾಣೆಗೆ ಅಲೆದು, ಅಲೆದು ಸಾಕಾಗಿದೆ ಅಂತ ಅಳಲು ತೋಡಿಕೊಂಡಿದ್ದಾರೆ. ಅಂದಹಾಗೇ 5 ವರ್ಷಗಳ ಹಿಂದೆ…

Read More

ಪ್ಯಾರಿಸ್: ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಅವರು ಸುನ್ನಿವಾ ಹಾಪ್ ಸ್ಟಾಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದ್ದಾರೆ. ಈ ಮೂಲಕ ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕದ ಭರವಸೆಯನ್ನು ಮೂಡಿಸಿದ್ದಾರೆ. ಲೊವ್ಲಿನಾ ಬೊರ್ಗೊಹೈನ್ ಅವರು ಸುನ್ನಿವಾ ಹಾಫ್ ಸ್ಟಾಡ್ ವಿರುದ್ಧ ರೌಂಡ್ 2 ಕೂಡ ಮುಗಿಸಿದ ಬಳಿಕ, ರೌಂಡ್ 3 ನೊಂದಿಗೆ ಪಂದ್ಯಾವಳಿಯಲ್ಲಿ ಗೆಲ್ಲುವ ಮೂಲಕ ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ. ಸರ್ವಾನುಮತದ ನಿರ್ಧಾರದಿಂದ (5-0) ಲೊವ್ಲಿನಾ ಪಂದ್ಯವನ್ನು ಗೆದ್ದರು. ಈ ಮೂಲಕ ಕ್ವಾಟರ್ ಫೈನಲ್ ಗೆ ಪ್ರವೇಶ ಮಾಡಿದ್ದಾರೆ. https://kannadanewsnow.com/kannada/is-it-possible-to-share-dais-with-the-person-who-poisoned-deve-gowdas-family/ https://kannadanewsnow.com/kannada/paris-olympics-after-sindhu-lakshya-sen-enters-round-of-16-paris-olympic-2024/

Read More

ನವದೆಹಲಿ: ಹಾಸನದ ಮಾಜಿ ಶಾಸಕ ಪ್ರೀತಂಗೌಡರನ್ನು ಪಾದಯಾತ್ರೆ ಸಭೆಗೆ ಕರೆಸಿದ್ದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವರು, ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು, ದೇವೆಗೌಡರ ಕುಟುಂಬಕ್ಕೆ ವಿಷ ಇಟ್ಟವನೊಂದಿಗೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ. ನವದೆಹಲಿಯಲ್ಲಿ ಇಂದು ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡುತ್ತಾ, ಪಾದಯಾತ್ರೆಯಲ್ಲಿ ಭಾಗಿಯಾಗಬಾರದು ಎಂದು ಜೆ‌.ಟಿ.ದೇವೇಗೌಡರ ಅಧ್ಯಕ್ಷತೆಯ ಕೋರ್ ಕಮಿಟಿ ಬೆಂಗಳೂರಿನಲ್ಲಿ ಮಂಗಳವಾರ ತೀರ್ಮಾನ ಮಾಡಿದೆ. ಬಿಜೆಪಿ ನಾಯಕರು ಪಾದಯಾತ್ರೆ ಮಾಡಬೇಕು ಎಂದು ನಿರ್ಧಾರ ಕೈಗೊಂಡು ಸಿದ್ಧತೆ ಮಾಡುತ್ತಿದ್ದಾರೆ. ಆದರೆ, ಪಾದಯಾತ್ರೆಗೆ ಇದು ಸೂಕ್ತ ಸಂದರ್ಭವಲ್ಲ ಎನ್ನುವ ಕಾರಣಕ್ಕೆ ನಾವು ಈ ಪದಯತ್ರೆಯಿಂದ ಹಿಂದೆ ಸರಿದಿದ್ದೇವೆ ಎಂದು ಕುಮಾರಸ್ವಾಮಿ ಅವರು ಹೇಳಿದರು. ಕೋರ್ ಕಮಿಟಿ ಸಭೆಯಲ್ಲಿ ಪಾದಯಾತ್ರೆ ಬಗ್ಗೆ ನಮ್ಮ ನಾಯಕರು ವಿಸ್ತೃತವಾಗಿ ಚರ್ಚೆ ನಡೆಸಿದ್ದಾರೆ. ಎಲ್ಲರ ಅಭಿಪ್ರಾಯವೂ ಪಾದಯಾತ್ರೆ ಸದ್ಯಕ್ಕೆ ಬೇಡ, ಸ್ವಲ್ಪ ದಿನದ ನಂತರ ಮಾಡೋಣ ಎನ್ನುವುದೇ ಆಗಿದೆ. ಕೊಡಗು ಜಿಲ್ಲೆಯ ಪಕ್ಕದಲ್ಲಿಯೇ ಇರುವ ಕೇರಳದ ವೈನಾಡಿನಲ್ಲಿ ಭಾರೀ ಭೂ ಕುಸಿತ ಉಂಟಾಗಿ…

Read More

ನವದೆಹಲಿ: ಮುಡಾ ಅಕ್ರಮ ಸೇರಿದಂತೆ ವಿವಿಧ ರಾಜ್ಯ ಸರ್ಕಾರದ ಹಗರಣ ಖಂಡಿಸಿ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸುವುದಾಗಿ ಬಿಜೆಪಿ ಘೋಷಿಸಿದೆ. ಈ ಬೆನ್ನಲ್ಲೇ ಜೆಡಿಎಸ್ ಯೂ ಟರ್ನ್ ಹೊಡೆದಿದ್ದು, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಅತೃಪ್ತಿಯನ್ನು ಹೊರಹಾಕಿದ್ದಾರೆ. ನವದೆಹಲಿಯಲ್ಲಿ ಇಂದು ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡುತ್ತಾ, ಖಾರವಾಗಿ ಪ್ರತಿಕ್ರಿಯಿಸಿದ ಅವರು; ದೇವೇಗೌಡರ ಕುಟುಂಬವನ್ನು ನಾಶ ಮಾಡಲು ಹೊರಟ ಪ್ರೀತಂಗೌಡನನ್ನು ಸಭೆಯಲ್ಲಿ ಕೂರಿಸಿಕೊಂಡು, ನನ್ನನ್ನ ಸಭೆಗೆ ಕರೆಯುತ್ತೀರಾ? ಪೆನ್ ಡ್ರೈವ್ ಗಳನ್ನು ಹಂಚಿವರು ಯಾರು ಎಂದು ಗೊತ್ತಿಲ್ಲವೇ? ಚುನಾವಣಾ ಮೈತ್ರಿಯೇ ಬೇರೆ. ರಾಜಕೀಯವೇ ಬೇರೆ ಎಂದು ಕಿಡಿಕಾರಿದರು. ಇಡೀ ಮಳೆ, ನೆರೆ, ಭೂ ಕುಸಿತ, ಬೆಳೆನಾಶದಿಂದ ತತ್ತರಿಸಿದೆ. ಇಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ಪಾದಯಾತ್ರೆ ಮಾಡಿದರೆ ಜನರಿಂದ ಟೀಕೆಗಳು ಬರುವ ಸಾಧ್ಯತೆ ಇದೆ. ಇದೇ ಕಾರಣದಿಂದ ನಾವು ಪಾದಯಾತ್ರೆಯಿಂದ ಹಿಂದೆ ಸರಿದಿದ್ದೇವೆ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು. ಈ ಪಾದಯಾತ್ರೆಯಿಂದ ರಾಜ್ಯದ ಜನರಿಗೆ ಆಗುವ ಲಾಭವಾದರೂ ಏನು? ಇಲ್ಲಿ ಕಾನೂನು ಹೋರಾಟ…

Read More

ಬೆಂಗಳೂರು : ಕರ್ನಾಟಕದ ಜೈವಿಕ ಆರ್ಥಿಕತೆಯು 2020-22ರಲ್ಲಿ 28 ಬಿಲಿಯನ್ ಡಾಲರ್‌ ಇದ್ದುದು 2023ರಲ್ಲಿ 31 ಬಿಲಿಯನ್‌ ಡಾಲರ್‌ ತಲುಪಿದ್ದು ಸುಮಾರು ಶೇ. 10.7ರಷ್ಟು ಹೆಚ್ಚಳವಾಗಿದೆ, ಭಾರತದ ಪ್ರಮುಖ ಜೈವಿಕ ತಂತ್ರಜ್ಞಾನ ರಾಜ್ಯಗಳಲ್ಲಿ ಒಂದಾದ ಕರ್ನಾಟಕ 2023ರಲ್ಲಿ ರಾಷ್ಟ್ರೀಯ ಜೈವಿಕ ತಂತ್ರಜ್ಞಾನ ಹೂಡಿಕೆಗಳಲ್ಲಿ ಶೇ.30 ಕ್ಕಿಂತ ಹೆಚ್ಚು ಆಕರ್ಷಿಸಿದ್ದು, ಇದು ಭಾರತದ ಜೈವಿಕ ಆರ್ಥಿಕತೆಗೆ ಶೇ.21ರಷ್ಟು ಕೊಡುಗೆ ನೀಡುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ (ಕಿಟ್ಸ್)̧, ಕರ್ನಾಟಕ ಸರ್ಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಅಸೋಸಿಯೇಷನ್ ಆಫ್ ಬಯೋಟೆಕ್ನಾಲಜಿ ಲೆಡ್ ಎಂಟರ್ಪ್ರೈಸಸ್ (ABLE) ಸಂಸ್ಥೆಯ ಸಹಯೋಗದೊಂದಿಗೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ʼಕರ್ನಾಟಕ ಜೈವಿಕ ಆರ್ಥಿಕ ವರದಿ-2024ʼ ಬಿಡುಗಡೆ ಮಾಡಿ ಸಚಿವರು ಮಾತನಾಡುತ್ತಿದ್ದರು. 2030 ರ ವೇಳೆಗೆ ಜೈವಿಕ ಆರ್ಥಿಕತೆಯನ್ನು ಮೂರು ಪಟ್ಟು ಹೆಚ್ಚಿಸುವ ಗುರಿಯೊಂದಿಗೆ ಜೈವಿಕ…

Read More

ಇಸ್ಲಮಾಬಾದ್: ಹಮಾಸ್ ರಾಜಕೀಯ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಅವರ ಹತ್ಯೆಯನ್ನು ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಖಂಡಿಸಿದೆ. ಅವರ ಕುಟುಂಬ ಮತ್ತು ಪ್ಯಾಲೆಸ್ಟೈನ್ ಜನರಿಗೆ ರಾಷ್ಟ್ರದ ಪರವಾಗಿ ಸಂತಾಪ ಸೂಚಿಸಿದೆ. ಇರಾನ್ನಲ್ಲಿ ನಡೆದ ಇಸ್ರೇಲಿ ದಾಳಿಯಲ್ಲಿ ತನ್ನ ರಾಜಕೀಯ ನಾಯಕ ಇಸ್ಮಾಯಿಲ್ ಹನಿಯೆಹ್ ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಬುಧವಾರ ಹೇಳಿದೆ. ಈ ಕೃತ್ಯವು “ಉತ್ತರಿಸದೆ ಹೋಗುವುದಿಲ್ಲ” ಎಂದು ಪ್ರತಿಜ್ಞೆ ಮಾಡಿದೆ. “ಟೆಹ್ರಾನ್ನಲ್ಲಿ ಇಂದು ಹಮಾಸ್ ರಾಜಕೀಯ ಬ್ಯೂರೋದ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಅವರ ಹತ್ಯೆಯನ್ನು ಪಾಕಿಸ್ತಾನ ಖಂಡಿಸುತ್ತದೆ. ಅವರ ಕುಟುಂಬ ಮತ್ತು ಪ್ಯಾಲೆಸ್ಟೈನ್ ಜನರಿಗೆ ನಮ್ಮ ಸಂತಾಪವನ್ನು ವ್ಯಕ್ತಪಡಿಸುತ್ತೇವೆ” ಎಂದು ಪಾಕಿಸ್ತಾನ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ. ಇಸ್ರೇಲ್ ಈ ಕೃತ್ಯವನ್ನು ಆರೋಪಿಸಿದೆ ಮತ್ತು ಅದು ಅಜಾಗರೂಕತೆಯಿಂದ ವರ್ತಿಸುತ್ತಿದೆ. ಅದರ ಕ್ರಮಗಳು ಈ ಪ್ರದೇಶದಲ್ಲಿ ಶಾಂತಿ ಪ್ರಯತ್ನಗಳಿಗೆ ಹಾನಿ ಮಾಡುತ್ತಿವೆ ಎಂದು ಅದು ಹೇಳಿದೆ. ಇರಾನ್ ನೆಲದಲ್ಲಿ ಇಸ್ರೇಲ್ ಭಯೋತ್ಪಾದನೆ ನಡೆಸುತ್ತಿದೆ ಎಂದು ಆರೋಪಿಸಿದ ಅದು ‘ಭಯೋತ್ಪಾದನೆಯನ್ನು ಖಂಡಿಸುತ್ತದೆ’ ಎಂದು ಹೇಳಿದೆ. “ಪಾಕಿಸ್ತಾನದ ಉಪ…

Read More

ಪ್ಯಾರಿಸ್: ಇದು ನನ್ನ ಕೊನೆಯ ಒಲಂಪಿಕ್ಸ್ ಆಗಿದೆ ಎಂಬುದಾಗಿ ಭಾವುಕ ಪೋಸ್ಟ್ ಮಾಡುವ ಮೂಲಕ ಹಿರಿಯ ಬ್ಯಾಡ್ಮಿಂಟನ್ ಆಟಗಾರ್ತಿ ಅಶ್ವಿನಿ ಪೊನ್ನಪ್ಪ ಅವರು ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ನ ಮಹಿಳಾ ಡಬಲ್ಸ್ ಫೈನಲ್ ಗ್ರೂಪ್ ಹಂತದ ಪಂದ್ಯದಲ್ಲಿ ಸೋತ ನಂತರ ಭಾರತದ ಏಸ್ ಶಟ್ಲರ್ ಅಶ್ವಿನಿ ಪೊನ್ನಪ್ಪ ಮಂಗಳವಾರ (ಜುಲೈ 30) ಬ್ಯಾಡ್ಮಿಂಟನ್ನಿಂದ ನಿವೃತ್ತಿ ಘೋಷಿಸಿದರು. ಸುಮಾರು ಎರಡು ದಶಕಗಳ ಕಾಲ ರಾಷ್ಟ್ರಕ್ಕೆ ಸೇವೆ ಸಲ್ಲಿಸಿರುವ ಭಾರತೀಯ ಬ್ಯಾಡ್ಮಿಂಟನ್ನ ಅನುಭವಿ ಪೊನ್ನಪ್ಪ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ವಿಜೇತರಾಗಿದ್ದರು ಮತ್ತು ಏಷ್ಯನ್ ಗೇಮ್ಸ್ ಸೇರಿದಂತೆ ಹಲವಾರು ಪದಕಗಳನ್ನು ಗೆದ್ದಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ತನಿಶಾ ಕ್ರಾಸ್ಟೊ ಅವರೊಂದಿಗೆ ಅಶ್ವಿನ್ ಪಾಲುದಾರರಾಗಿದ್ದರು. ಆದರೆ ಸಿ ಗುಂಪಿನ ಎಲ್ಲಾ ಮೂರು ಪಂದ್ಯಗಳನ್ನು ಸೋತಿದ್ದರಿಂದ ಕಳಪೆ ಅಭಿಯಾನವನ್ನು ಹೊಂದಿದ್ದರು. ನಿವೃತ್ತಿ ಘೋಷಿಸಿದ ಪೊನ್ನಪ್ಪ 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ನಲ್ಲಿ ಆಡಲು ಯೋಜಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ 34 ವರ್ಷದ ಅಶ್ವಿನಿ, “ಇದು ನನ್ನ ಕೊನೆಯ ಪಂದ್ಯವಾಗಲಿದೆ.…

Read More

ನವದೆಹಲಿ: ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾತ್ಕಾಲಿಕ ಉಮೇದುವಾರಿಕೆಯನ್ನು ಯುಪಿಎಸ್ಸಿ ರದ್ದುಗೊಳಿಸಿದೆ. ಅಲ್ಲದೇ ಭವಿಷ್ಯದ ಪರೀಕ್ಷೆಗಳು, ಆಯ್ಕೆಗಳಿಂದ ಅವರನ್ನು ನಿರ್ಬಂಧಿಸಲಾಗಿದೆ. ಐಎಎಸ್ ತರಬೇತುದಾರ ಪೂಜಾ ಖೇಡ್ಕರ್ ಅವರ ತಾತ್ಕಾಲಿಕ ಉಮೇದುವಾರಿಕೆಯನ್ನು ರದ್ದುಗೊಳಿಸುವುದಾಗಿ ಕೇಂದ್ರ ಲೋಕಸೇವಾ ಆಯೋಗ ಜುಲೈ 31 ರಂದು ಘೋಷಿಸಿದೆ. ಆಯೋಗವು ಭವಿಷ್ಯದ ಪರೀಕ್ಷೆಗಳು ಮತ್ತು ಆಯ್ಕೆಗಳಿಂದ ಅವರನ್ನು ನಿಷೇಧಿಸಿದೆ. ಕೇಂದ್ರ ಲೋಕಸೇವಾ ಆಯೋಗ (Union Public Service Commission -UPSC) ನಾಗರಿಕ ಸೇವೆಗಳ ಪರೀಕ್ಷೆ -2022 (Civil Services Examination-2022 -CSE-2022)ಗೆ ತಾತ್ಕಾಲಿಕವಾಗಿ ಶಿಫಾರಸು ಮಾಡಲಾದ ಅಭ್ಯರ್ಥಿ ಪೂಜಾ ಮನೋರಮಾ ದಿಲೀಪ್ ಖೇಡ್ಕರ್ ಅವರ ತಾತ್ಕಾಲಿಕ ಉಮೇದುವಾರಿಕೆಯನ್ನು ರದ್ದುಗೊಳಿಸಿದೆ ಮತ್ತು ಭವಿಷ್ಯದ ಎಲ್ಲಾ ಪರೀಕ್ಷೆಗಳು ಮತ್ತು ಆಯ್ಕೆಗಳಿಂದ ಶಾಶ್ವತವಾಗಿ ನಿಷೇಧಿಸಿದೆ. https://kannadanewsnow.com/kannada/wayanad-landslide-cm-siddaramaiah-announces-rs-5-lakh-ex-gratia-for-kin-of-kannadigas/ https://kannadanewsnow.com/kannada/foeticide-in-karnataka-woman-writes-to-pm-modi-against-boyfriend-for-aborting/

Read More

ಬೆಂಗಳೂರು: ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತ ಉಂಟಾಗಿ ಕನ್ನಡಿಗರು ಮೃತಪಟ್ಟಿದ್ದರು. ಇಂತಹ ಮೃತ ಕನ್ನಡಿಗರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ ಎಂದಿದ್ದಾರೆ. ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ. ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂದು ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವರಾದ ಸಂತೋಷ್ ಲಾಡ್ ಅವರನ್ನು ವಯನಾಡಿಗೆ ಕಳುಹಿಸಿಕೊಡಲಾಗುತ್ತಿದೆ ಎಂದು ಹೇಳಿದ್ದಾರೆ. ಸಂತ್ರಸ್ತರ ಪ್ರಾಣ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದ್ದು, ಸಂಕಷ್ಟದಲ್ಲಿರುವ ಕನ್ನಡಿಗರನ್ನು…

Read More

ನವದೆಹಲಿ : “ಗಿಫ್ಟ್ ಸಿಟಿ ಮಾದರಿಯಲ್ಲಿ ಬೆಂಗಳೂರನ್ನು ಪರಿಗಣಿಸಬೇಕು ಎಂದು ಮನವಿ ಮಾಡಲಾಗಿತ್ತು. ಇದು ಸಾಧ್ಯವಾಗದ ಕಾರಣಕ್ಕೆ ಸುರಂಗ ರಸ್ತೆ, ಸಿಗ್ನಲ್ ಮುಕ್ತ ರಸ್ತೆ, ಪ್ರಮುಖ ರಸ್ತೆಗಳು ಮತ್ತು ಮಳೆ ನೀರುಗಾಲುವೆಗಳ ಅಭಿವೃದ್ಧಿ ಹಾಗೂ ನೀರಾವರಿಗೆ ಹೆಚ್ಚಿನ ಅನುದಾನ ನೀಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಸಲ್ಲಿಸಲಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ದೆಹಲಿಯ ಕರ್ನಾಟಕ ಭವನದಲ್ಲಿ ಬುಧವಾರ ಮಾತನಾಡಿದ ಅವರು “ಬೆಂಗಳೂರು ಅತಿ ಹೆಚ್ಚು ತೆರಿಗೆ ನೀಡುವ ನಗರವಾಗಿದೆ. ಈ ನಗರಕ್ಕೆ ಬಜೆಟ್ ಅಲ್ಲಿ ಏನೋ ದೊರೆತಿಲ್ಲ. ಮಹಾರಾಷ್ಟ್ರದಂತೆ ನಮ್ಮನ್ನು ಪರಿಗಣಿಸಬೇಕು. ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಜೆಎನ್ ನರ್ಮ್ ಯೋಜನೆ ಅಡಿ ಎಲೆಕ್ಟ್ರಾನಿಕ್ಸ್ ಸಿಟಿ, ಹೆಬ್ಬಾಳ, ನೆಲಮಂಗಲ ಮೇಲ್ಸೇತುವೆ ನಿರ್ಮಾಣಕ್ಕೆ ಅನುದಾನ ನೀಡಲಾಗಿತ್ತು” ಎಂದರು ದೇಶಕ್ಕೆ ಒಂದೇ ಗಿಫ್ಟ್ ಸಿಟಿ ಮಾಡಲು ಸಾಧ್ಯ. ಎರಡು ಪ್ರದೇಶಗಳನ್ನು ಮಾಡಲು ಸಾಧ್ಯವಿಲ್ಲ ಎಂದು ಪ್ರಧಾನಿ ತಿಳಿದರು. ರಾಜ್ಯ ರಾಜಧಾನಿಯಲ್ಲಿ…

Read More