Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಜಿಲ್ಲೆಯ ಸಾಗರದ ಮರ್ಕಝ್ ಮ್ಯಾನೇಜರ್ ಶರೀಫ್ ಸಖಾಫಿ ಅವರು ಅನಾರೋಗ್ಯದಿಂದಾಗಿ ಇಂದು ನಿಧನರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮರ್ಕಝ್ ಮ್ಯಾನೇಜರ್ ಶರೀಫ್ ಸಖಾಫಿ ಅವರು ಶಿಕ್ಷಣ ಪ್ರೇಮಿಯೆಂದೇ ಗುರುತಿಸಿಕೊಂಡಿದ್ದಂತವರು. ಕಳೆದ 15 ವರ್ಷಗಳಿಂದ ಮರ್ಕಝ್ ಸಂಸ್ಥೆಯ ಜವಾಬ್ದಾರಿ ಹೊತ್ತು, ಶಿಕ್ಷಣ ಸೇವೆಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು. ಹಗಲು ರಾತ್ರಿಯೆನ್ನದೇ ಶಿಕ್ಷಣ ಸೇವೆಗೈಯ್ಯುತ್ತಿದ್ದಂತ ಶರೀಫ್ ಸಖಾಫಿ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ಶಿಕ್ಷಣ ಪ್ರೇಮಿಯೆಂದೇ ಪ್ರಸಿದ್ಧಿ. ಇವರ ಪರಿಶ್ರಮದಿಂದಾಗಿ ಮರ್ಕಝ್ ಮೈದಾನ ಎದ್ದು ಕಾಣುವಂತೆ ಆಗಿದೆ. ಮರ್ಕಝ್ ಸಂಸ್ಥೆಯಿಂದ ಎಲ್ ಕೆಜಿಯಿಂದ ಪಿಯು ಕಾಲೇಜುವರೆಗೆ ಶಿಕ್ಷಣವನ್ನು ಸಿಗುವಂತೆ ಮಾಡಿದ್ದರು. ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಮರ್ಕಝ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ವ್ಯಾಸಂಗ ಮಾಡಿ, ಶೇ.100ರಷ್ಟು ಫಲಿತಾಂಶ ಶಾಲಾ-ಕಾಲೇಜಿಗೆ ಬರುತ್ತಿದ್ದರ ಹಿಂದೆ ಶರೀಫ್ ಸಖಾಫಿ ಅವರ ಪಾತ್ರವಿತ್ತು. ಇಂತಹ ಶರೀಫ್ ಸಖಾಫಿ ಅವರು ಅನಾರೋಗ್ಯದ ಕಾರಣದಿಂದ ಕೆಲ ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೇ ಚಿಕಿತ್ಸೆ ಫಲಕಾರಿಯಾಗದೇ…
ಬೆಂಗಳೂರು: ರಾಜ್ಯದಲ್ಲಿ ಇಂದು 41 ಜನರಿಗೆ ಕೊರೋನಾ ಪಾಸಿಟಿವ್ ಅಂತ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 48 ಮಂದಿ ಗುಣಮುಖರಾಗಿದ್ದಾರೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ವರದಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ 576 ಮಂದಿಯನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 41 ಜನರಿಗೆ ಕೋವಿಡ್ ಪಾಸಿಟಿವ್ ಅಂತ ವರದಿಯಿಂದ ದೃಢಪಟ್ಟಿರುವುದಾಗಿ ತಿಳಿಸಿದೆ. ಇಂದು 41 ಸೇರಿದಂತೆ ಈವರೆಗೆ 837 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇವರಲ್ಲಿ 386 ಮಂದಿ ಸೋಂಕಿನಿಂದ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ರಾಜ್ಯದಲ್ಲಿ 444 ಸಕ್ರೀಯ ಸೋಂಕಿತರಿದ್ದಾರೆ. ಎಲ್ಲರೂ ಹೋಂ ಐಸೋಲೇಷನ್ ನಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವುದಾಗಿ ಹೇಳಿದೆ.
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯ ಕಾಲ್ತುಳಿತ ದುರಂತ ಸಂಬಂಧ ಕೆ ಎಸ್ ಸಿ ಎಯ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿತ್ತು. ಇದೀಗ ಬಂಧಿತ ಆರೋಪಿಗಳಿಗೆ ಜೂನ್.19ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಇದೇ ಪ್ರಕರಣದಲ್ಲಿ ಖ್ಯಾತ ಕ್ರಿಕೆಟಿಗ, ಆರ್ ಸಿ ಬಿ ತಂಡದ ಆಟಗಾರ ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲಾಗಿದೆ. ಇಂದು ಕಾಲ್ತುಳಿತ ಪ್ರಕರಣ ಸಂಬಂಧ ಬಂಧಿತ ನಾಲ್ವರು ಆರೋಪಿಗಳನ್ನು ಬೆಂಗಳೂರಿನ 41ನೇ ಎಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್ ಜೂನ್.19ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಹೀಗಾಗಿ ಕಾಲ್ತುಳಿತ ದುರಂತ ಪ್ರಕರಣದಲ್ಲಿ ಬಂಧಿತ ಆರೋಪಿಗಳಾದಂತ ಆರ್ ಸಿ ಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಿಲ್ ಸೋಸಲೆ, ಸುಮಂತ್, ಡಿಎನ್ಎ ಮ್ಯಾನೇಜರ್ ಕಿರಣ್, ಸಿಬ್ಬಂದಿ ಸುನೀಲ್ ಮ್ಯಾಥ್ಯೂ ಜೈಲುಪಾಲಾದಂತೆ ಆಗಿದೆ. ಇನ್ನೂ ಇದೇ ಪ್ರಕರಣಕ್ಕೆ ಸಂಬಂಧಿಸಿದಂತ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ವಿರುದ್ಧವೂ ದೂರು ದಾಖಲು ಮಾಡುವಂತೆ…
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯ ಕಾಲ್ತುಳಿತ ದುರಂತ ಸಂಬಂಧ ಕೆ ಎಸ್ ಸಿ ಎಯ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿತ್ತು. ಇದೀಗ ಬಂಧಿತ ಆರೋಪಿಗಳಿಗೆ ಜೂನ್.19ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಇಂದು ಕಾಲ್ತುಳಿತ ಪ್ರಕರಣ ಸಂಬಂಧ ಬಂಧಿತ ನಾಲ್ವರು ಆರೋಪಿಗಳನ್ನು ಬೆಂಗಳೂರಿನ 41ನೇ ಎಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್ ಜೂನ್.19ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಹೀಗಾಗಿ ಕಾಲ್ತುಳಿತ ದುರಂತ ಪ್ರಕರಣದಲ್ಲಿ ಬಂಧಿತ ಆರೋಪಿಗಳಾದಂತ ಆರ್ ಸಿ ಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಿಲ್ ಸೋಸಲೆ, ಸುಮಂತ್, ಡಿಎನ್ಎ ಮ್ಯಾನೇಜರ್ ಕಿರಣ್, ಸಿಬ್ಬಂದಿ ಸುನೀಲ್ ಮ್ಯಾಥ್ಯೂ ಜೈಲುಪಾಲಾದಂತೆ ಆಗಿದೆ.
ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಉಂಟಾದಂತ ಕಾಲ್ತುಳಿತ ದುರಂತದಲ್ಲಿ 11 ಮಂದಿ ಆರ್ ಸಿ ಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ದುರಂತಕ್ಕೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಗೃಹ ಸಚಿವ ಡಿ.ಕೆ ಶಿವಕುಮಾರ್ ಕಾರಣ ಎಂದು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಬಿಜೆಪಿ ದೂರು ನೀಡಿದೆ. ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ತೆರಳಿರುವಂತ ಬಿಜೆಪಿ ನಾಯಕರ ನಿಯೋಗವು, ಅಮಾಯಕರ ಸಾವಿಗೆ ಕಾರಣ, ಸಾರ್ವಜನಿಕ ಹಣ ದುರ್ಬಳಕೆ ಆರೋಪದಡಿ ಕ್ರಮ ಜರುಗಿಸುವಂತೆ ಸಿಎಂ, ಡಿಸಿಎಂ, ಗೃಹ ಸಚಿವರ ವಿರುದ್ಧ ದೂರು ಸಲ್ಲಿಕೆ ಮಾಡಲಾಗಿದೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರಿಂದ ದೂರು ಸಲ್ಲಿಕೆ ಮಾಡಲಾಗಿದೆ. ಈ ವೇಳೆ ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್ ರವಿಕುಮಾರ್ ಹಾಗೂ ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ ಉಪಸ್ಥಿತರಿದ್ದರು.
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ನಡೆದ ಕಾಲ್ತುಳಿತದ ಘಟನೆಯಲ್ಲಿ ಸರ್ಕಾರವೇ ಅಪರಾಧಿ. ಇದನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ನಾವು ಹೋರಾಟ ಮಾಡುತ್ತೇವೆ. ಈ ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಕಾನೂನನ್ನು ಕಗ್ಗತ್ತಲಿನಲ್ಲಿಟ್ಟಿದ್ದಾರೆ. ಗ್ರೇಟ್ ಸಮಾಜವಾದಿ, ಮಜಾವಾದಿ ಸಿದ್ದರಾಮಯ್ಯನವರಿಂದ ಹೀಗಾಗಿದೆ. ಆರ್ಸಿಬಿ ತಂಡ ಐಪಿಎಲ್ ಗೆದ್ದಿದ್ದರೆ, ಕೆಪಿಸಿಸಿ ತಂಡ ಫೋಟೋಗೆ ಫೋಸ್ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಬ್ಯಾಟ್ಸ್ಮನ್ ಹಾಗೂ ಡಿ.ಕೆ.ಶಿವಕುಮಾರ್ ಅವರೇ ಬೌಲರ್ ಆಗಿದ್ದಾರೆ. ಸಿದ್ದರಾಮಯ್ಯನವರನ್ನು ಬೋಲ್ಡ್ ಮಾಡಬೇಕೆಂದು ಡಿ.ಕೆ.ಶಿವಕುಮಾರ್ ಪ್ರಯತ್ನ ಮಾಡುತ್ತಿದ್ದರೆ, ಐದು ವರ್ಷ ಸೆಂಚುರಿ ಹೊಡೆಯಬೇಕೆಂದು ಸಿಎಂ ಸಿದ್ದರಾಮಯ್ಯ ಪ್ರಯತ್ನ ಮಾಡುತ್ತಿದ್ದಾರೆ. ಇವರಿಬ್ಬರ ನಡುವೆ ರಾಜ್ಯದ ಜನರು ಹಿಟ್ ವಿಕೆಟ್ ಆಗಿದ್ದಾರೆ. 11 ಪ್ರತಿಭಾವಂತ ಯುವಜನರು ಬಲಿಯಾಗಿದ್ದಾರೆ ಎಂದು ದೂರಿದರು. ವೇದಿಕೆಯಲ್ಲಿ ಕಾಂಗ್ರೆಸ್ ನಾಯಕರ ಕೈಯಲ್ಲೇ ಟ್ರೋಫಿ ಇತ್ತು. ವರ್ಷಾನುಗಟ್ಟಲೆ ಶ್ರಮವಹಿಸಿ ಆಟವಾಡಿದ ಆಟಗಾರರನ್ನು ಮೂಲೆಗೆ ತಳ್ಳಿದ್ದರು. ಈ ಸಂಭ್ರಮಾಚರಣೆ…
ಬೆಂಗಳೂರು: ಆರ್ ಸಿ ಬಿ ಮಾರ್ಕೆಟಿಂಗ್ ಮ್ಯಾನೇಜರ್ ನಿಖಿಲ್ ಸೋಸಲೆ ಪತ್ನಿ ಹೈಕೋರ್ಟ್ ಗೆ ತಮ್ಮ ಪತಿ ಬಂಧನ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿ ಬಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡ ಬಗ್ಗೆ ಪ್ರಸ್ತಾಪಿಸಿದ್ದರು. ಇದೀಗ ಅದರಲ್ಲಿ ತಪ್ಪೇನಿದೆ ಅಂತ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವಂತ ಅವರು ಬಿಜೆಪಿಯವರು ನನ್ನ ಕಡೆ ಬೊಟ್ಟು ಮಾಡುತ್ತಿದ್ದಾರೆ. ನಾನು ಏನು ಮಾಡಿದ್ದೇನೆ? ನಾನೇನಾದ್ರೂ ಕ್ರೈಂ ಮಾಡಿದ್ದೇನಾ? ಕೆಎಸಿಎ ಅವರು ನಮಗೆ ಮನವಿ ಮಾಡಿಕೊಂಡಿದ್ದರು. 10 ನಿಮಿಷದಲ್ಲಿ ಕ್ಲೋಸ್ ಮಾಡುತ್ತೇವೆ ಎಂದು ಹೇಳಿದ್ರು. ಕ್ರೀಡಾಂಗಣಕ್ಕೆ ಹೋಗಿದ್ದು ಏನ್ ತಪ್ಪಿದೆ. ಬೆಂಗಳೂರು ಮಿನಿಸ್ಟರ್ ಆಗಿಯೇ ನಾನು ಹೋಗಿದ್ದು ಎಂದರು. https://kannadanewsnow.com/kannada/as-per-the-cms-order-rcbs-nikhil-sosales-arrest-wife-malavika-nayak-approaches-the-high-court/ https://kannadanewsnow.com/kannada/bengaluru-land-corruption-disaster-case-cm-dc-demanded-resignation-from-union-minister-h-d-kumaraswamy/
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತಕ್ಕೆ ಸರಕಾರವೇ ನೇರ ಹೊಣೆ. ಕಾಂಗ್ರೆಸ್ ಹೈಕಮಾಂಡ್ ಗೆ ಮಾನ ಮರ್ಯಾದೆ, ಕನ್ನಡಿಗರ ಮೇಲೆ ಕಿಂಚಿತ್ತಾದರೂ ಗೌರವ ಇದ್ದರೆ ತಕ್ಷಣವೇ ಈ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯನ್ನು ಕಿತ್ತೆಸೆಯಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯಿಸಿದರು. ಬೆಂಗಳೂರಿನಲ್ಲಿ ಶುಕ್ರವಾರ ಎನ್ಡಿಎ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರೊಂದಿಗೆ ಮಾಧ್ಯಮಗಳ ಜತೆ ಮಾತನಾಡಿದರು. ದುರಂತಕ್ಕೆ ಮುಖ್ಯಮಂತ್ರಿ ಮತ್ತವರ ಕಚೇರಿ ನೇರ ಕಾರಣ. ಎರಡು ಮೂರು ಕಡೆ ವಿಜಯೋತ್ಸವ ಮಾಡಲು ಸಾಧ್ಯವಿಲ್ಲ. ಭದ್ರತೆ ಕೊಡುವುದು ಕಷ್ಟ ಆಗುತ್ತದೆ ಎಂದು ಪೊಲೀಸರು ಪರಿಪರಿಯಾಗಿ ಹೇಳಿದರೂ ಕೇಳದೇ ವಿಜಯೋತ್ಸವ ಆಗಲೇಬೇಕು ಎಂದು ಸಿಎಂ ಪಟ್ಟು ಹಿಡಿದರು. ಅಲ್ಲದೆ ಪೊಲೀಸರಿಗೆ ತಾಕೀತು ಮಾಡಿ ಧಮ್ಕಿಯನ್ನು ಹಾಕಿದ್ದರು ಎಂದು ಕೇಂದ್ರ ಸಚಿವರು ನೇರ ಆರೋಪ ಮಾಡಿದರು. ಏಕೆಂದರೆ, ವಿಜಯೋತ್ಸವ ಆಚರಣೆಗೆ ಇದಕ್ಕೆ ಮೊದಲೇ…
ಬೆಂಗಳೂರು: ಆರ್ ಸಿ ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ 11 ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ಘಟನೆಯನ್ನು ನಾಳೆ ಕರಾಳ ದಿನಾಚರಣೆ ಅಂತ ವಾಟಾಳ್ ನಾಗರಾಜ್ ಆಚರಣೆ ಮಾಡಲಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಮಾಹಿತಿ ನೀಡಿದ್ದು, ದಿನಾಂಕ 07-06-2025ರ ಶನಿವಾರದಂದು ಮಧ್ಯಾಹ್ನ 12.30ಕ್ಕೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕರಾಳ ದಿನಾಚರಣೆ ಮಾಡಲಾಗುತ್ತದೆ ಎಂದಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಅಮಾಯಕರ ಸಾವಾಗಿದೆ. ಈ ಸಾವಿಗೆ ಕಾರಣ ಯಾರು? ಈ ಸಾವು ನ್ಯಾಯವೇ ಅಂತ ಪ್ರಶ್ನಿಸಿದ್ದಾರೆ. ಇದನ್ನು ನಾವು ಬಹಳ ಗಂಭೀರವಾಗಿ ರಾಜಕೀಯ ರಹಿತವಾಗಿ ಚಿಂತನೆ ಮಾಡಬೇಕಾಗಿದೆ. ತಪ್ಪಿತಸ್ಥರು ಯಾರೇ ಇರಲಿ ಅದು ಅಪರಾಧಿ ಸ್ಥಾನದಲ್ಲಿ ನಿಲ್ಲಲೇಬೇಕು. ಬಹಳ ಮುಖ್ಯವಾಗಿ ಆರ್ ಸಿ ಬಿ ವಿಜಯೋತ್ಸವ ಮೆರವಣಿಗೆ ಸಮಾರಂಭ ನಡೆಸಲು ತೀರ್ಮಾನಿಸಿದವರು ಯಾರು? ಇದು ಬಹಣ ಮುಖ್ಯ. ನಮ್ಮ ರಾಜ್ಯದ ಗುಪ್ತಚರ ಹಾಗೂ ಪೊಲೀಸ್ ಇಲಾಖೆ ವಿಫಲವಾಗಿರುವುದು ಸತ್ಯ. ಈ ಸಮಾರಂಭ ವ್ಯವಸ್ಥೆಗೆ ಯಾರು ಅನುಮತಿ…
ಬೆಂಗಳೂರು : ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಾದ ಶೈಕ್ಷಣಿಕ ಸಾಲ ಯೋಜನೆ, ಜೀವಜಲ ಯೋಜನೆ, ಕಾಯಕಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಂಭಿ ಸಾರಥಿ ಯೋಜನೆ, ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಸ್ವ ಸಹಾಯ ಸಂಘಗಳ ಉತ್ತೇಜನ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳಿಗೆ ಸೇರಿದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಸವಿತಾ ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಸಮುದಾಯಗಳ ಆಸಕ್ತರಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಈ ಮೇಲಿನ ಯೋಜನೆಯ ಫಲಾನುಭವಿಗಳಾಗಲು ಅರ್ಜಿದಾರರು ತಮ್ಮ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿರಬೇಕು. ನಿಗಮವು ಅನುಷ್ಠಾನಗೊಳಿಸುವ ಈ ಮೇಲ್ಕಂಡ ಯೋಜನೆಗಳಲ್ಲಿ ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ಅಧ್ಯಕ್ಷರು ಅಥವಾ ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ…