Subscribe to Updates
Get the latest creative news from FooBar about art, design and business.
Author: kannadanewsnow09
ಕೇರಳ: ಇಲ್ಲಿನ ವಯನಾಡಿನಲ್ಲಿ ಉಂಟಾಗಿರುವಂತ ಭೂ ಕುಸಿತದಲ್ಲಿ ಆರಂಭದಲ್ಲಿ ಐವರು ಮಕ್ಕಳು ಸೇರಿದಂತೆ 19 ಮಂದಿ ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿತ್ತು. ಆದರೇ ಈ ಸಾವಿನ ಸಂಖ್ಯೆ 54ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಕೇರಳ ಸಚಿವ ಎ.ಕೆ ಶಶಿಂದ್ರನ್ ಮಾಹಿತಿ ನೀಡಿದ್ದು, ವಯನಾಡಿನಲ್ಲಿ ಉಂಟಾಗಿರುವಂತ ಭೂ ಕುಸಿತದಲ್ಲಿ ಈವರೆಗೆ 54 ಜನರ ಮೃತದೇಹಗಳು ಪತ್ತೆಯಾಗಿವೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದಿದ್ದಾರೆ. ಒಟ್ಟಾರೆಯಾಗಿ ವಯನಾಡ್ ಭೂಕುಸಿತ ಘಯನೆಯಲ್ಲಿ ಸಾವಿನ ಸಂಖ್ಯೆ 54ಕ್ಕೆ ಏರಿಕೆಯಾಗಿದೆ. https://twitter.com/ANI/status/1818187764481065378 https://kannadanewsnow.com/kannada/hd-kumaraswamy-got-muda-site-40-years-ago-siddaramaiah/
ಪ್ಯಾರೀಸ್: ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾರತದ ಮನು ಭಾಕರ್, ಸರಬ್ ಜಿತ್ ಸಿಂಗ್ ಕಂಚಿನ ಪದಕ ಗೆಲ್ಲುವ ಗುರಿ ಖಚಿತಗೊಂಡಿದೆ. 10 ಮೀಟರ್ ಏರ್ ಪಿಸ್ತೂಲ್ ಫೈನಲ್ ಪ್ರವೇಶಿಸಿರುವಂತ ಈ ಜೋಡಿಗೆ ಕಂಚಿನ ಪದಕ ಗೆಲುವು ಖಚಿತವಾಗಿದೆ. ಹೌದು ಪ್ಯಾರಿಸ್ ಒಲಂಪಿಕ್ಸ್ 2024ರ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಮನು ಭಾಕರ್-ಸರಬ್ಜೋತ್ ಸಿಂಗ್ ಕಂಚಿನ ಪದಕ ಗೆಲ್ಲುವ ಗುರಿ ಹೊಂದಿದ್ದಾರೆ. ಶೂಟಿಂಗ್ ನ ಮಿಶ್ರ ತಂಡ 10 ಮೀ ಏರ್ ಪಿಸ್ತೂಲ್ ಫೈನಲ್ ಪ್ರವೇಶಿಸಿದ್ದಾರೆ. ಭಾರತ ಇಲ್ಲಿ ರೋಲ್ ನಲ್ಲಿದೆ. ಗೆಲುವು ಸಾಧಿಸಲು 8 ಅಂಕಗಳು ಉಳಿದಿವೆ. ಸ್ಕೋರ್: ಭಾರತ 8-2 ದಕ್ಷಿಣ ಕೊರಿಯಾ. https://twitter.com/sportwalkmedia/status/1818190171596349622 ಈ ಪಂದ್ಯದಲ್ಲಿ ಎರಡೂ ತಂಡಗಳ ಶೂಟರ್ಗಳು ಅನೇಕ ಸುತ್ತುಗಳಲ್ಲಿ ಪರಸ್ಪರ ಸ್ಪರ್ಧಿಸಲಿದ್ದಾರೆ. ಪ್ರತಿ ಸುತ್ತು ಪ್ರತಿ ಶೂಟರ್ ನಿಂದ ಒಂದು ಶಾಟ್ ಅನ್ನು ಒಳಗೊಂಡಿರುತ್ತದೆ. – ಪ್ರತಿ ಸುತ್ತು ಪೂರ್ಣಗೊಂಡ ನಂತರ, ಹೆಚ್ಚಿನ ಸ್ಕೋರ್ ಹೊಂದಿರುವ ತಂಡವು ಅಂಕಗಳನ್ನು ಪಡೆಯುತ್ತದೆ. ಟೈ…
ಬೆಂಗಳೂರು: ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಲೋಕಸಭಾ ಸಚೇತಕರಾಗಿ ಆಯ್ಕೆ ಮಾಡಿ ನೇಮಕಾತಿ ಆದೇಶವನ್ನು ಬಿಜೆಪಿ ಹೊರಡಿಸಿದೆ. ಈ ಕುರಿತಂತೆ ಬಿಜೆಪಿಯ ಪಾರ್ಲಿಮೆಂಟರಿ ಆಫೀಸ್ ಸೆಕ್ರೇಟರಿ ಡಾ. ಶಿವ್ ಶಕ್ತಿ ನಾಥ್ ಭಕ್ಷಿ ಅವರು ಲೋಕಸಭಾ ಸ್ಪೀಕರ್ ಅವರಿಗೆ ಪತ್ರದಲ್ಲಿ ಹೆಸರನ್ನು ಆಯ್ಕೆ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಲೋಕಸಭೆಯ ಮುಖ್ಯ ಸಚೇತಕರಾಗಿ ಡಾ.ಸಂಜಯ್ ಜೈಸ್ವಾಲ್ ಅವರನ್ನು ನೇಮಕ ಮಾಡಲಾಗಿದೆ. ಸಚೇತಕರಾಗಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಸೇರಿದಂತೆ 16 ಮಂದಿಯನ್ನು ಆಯ್ಕೆ ಮಾಡಿರುವುದಾಗಿ ತಿಳಿಸಿದ್ದಾರೆ. https://twitter.com/BJP4Karnataka/status/1817942805119127832 https://kannadanewsnow.com/kannada/breaking-four-killed-in-blast-in-jammu-and-kashmir-blast-at-jks-baramulla/ https://kannadanewsnow.com/kannada/shivamogga-mescom-engineer-shantakumar-arrested-in-ganja-case/ https://kannadanewsnow.com/kannada/false-allegations-levelled-against-cm-in-muda-scam-minister-k-j-george/
ಆದಿ ದುರ್ಗೆಯ ಆರಾಧನೆ ಇಂದಿನ ಪರಿಸ್ಥಿತಿಯಲ್ಲಿ ಪ್ರತಿ ಮನೆಯಲ್ಲೂ ಕಲ್ಯಾಣ ನಿಷೇದದಿಂದ ಮನೆಯಲ್ಲಿ ವಾಸವಾಗಿರುವ ಜನರಿಗೆ ಹೆಚ್ಚಿನ ಒತ್ತಡ ಉಂಟಾಗಿದೆ. ತಮ್ಮ ಮಗುವಿಗೆ ಮದುವೆ ಆಗದೇ ಇದ್ದಾಗ ಹೆಣ್ಣು ಮಗುವಾಗಲಿ ಗಂಡು ಮಗುವಾಗಲಿ ಮದುವೆಗೆ ನಿಷೇಧ ಹೇರಿದಾಗ ಪೋಷಕರ ಮನಸ್ಸು ತಲ್ಲಣಗೊಳ್ಳುತ್ತದೆ. ದೀರ್ಘ ದಾಂಪತ್ಯದ ನಂತರ ಮಗು ಭಾಗ್ಯ ದೊರೆಯದಿದ್ದರೂ ಎದೆಗುಂದುವುದು ಖಂಡಿತ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ,…
ಶಿವಮೊಗ್ಗ: ಮದುವೆ ವೈಷ್ಯಮ್ಯದ ಹಿನ್ನಲೆಯಲ್ಲಿ ಮನೆಯೊಂದರ ಕಾಂಪೌಂಡ್ ಒಳಗಡೆ ಗಾಂಜಾ ಎಸೆದು, ಹುಡುಗಿಯ ತಂದೆಯನ್ನು ಗಾಂಜಾ ಕೇಸಲ್ಲಿ ಸಿಕ್ಕಿ ಹಾಕಿಸಲು ಮಾಡಿದಂತ ಪ್ಲಾನ್ ಉಲ್ಟಾ ಆಗಿದೆ. ಈಗ ಯುವತಿಯ ಮನೆಯವರನ್ನು ಗಾಂಜಾ ಕೇಸಲ್ಲಿ ಸಿಕ್ಕಿ ಹಾಕಿಸಲು ಹೋಗಿ, ಮೆಸ್ಕಾಂ ಇಂಜಿನಿಯರ್ ತಾನೇ ಬಂಧನಕ್ಕೆ ಒಳಗಾಗಿ ಜೈಲುಪಾಲಾಗಿರುವಂತ ಘಟನೆ ಸಾಗರದಲ್ಲಿ ನಡೆದಿದೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಹುಲ್ಲತ್ತಿ ಗ್ರಾಮದ ಜತೇಂದ್ರ ರವರ ಮನೆಯ ಕಾಂಪೌಂಡ್ ಒಳಭಾಗದಲ್ಲಿ ದಿ:13-07-2024 ರಂದು ರಾತ್ರಿ ಸಮಯದಲ್ಲಿ ಯಾರೋ ಒಬ್ಬ ಅಸಾಮಿಯು ಗಾಂಜಾ ಪ್ಯಾಕೇಟ್ ಗಳನ್ನು ಹಾಕಿದ್ದು, ಈ ಕೃತ್ಯವನ್ನು ಶಾಂತಕುಮಾರ್ ಸ್ವಾಮಿ ಅವರು ಮಾಡಿರಬಹುದೆಂಬ ಅನುಮಾನ ಇರುವುದಾಗಿ ದೂರು ನೀಡಿರುತ್ತಾರೆ ಎಂದಿದೆ. ಈ ದೂರಿನ ಮೇರೆಗೆ ದಿ: 16-07-2024 ರಂದು ಸಾಗರ ಗ್ರಾಮಾಂತರ ಠಾಣೆಯಲ್ಲಿ ಅಪರಾಧ ಸಂಖ್ಯೆ 103/2024 ಕಲಂ 20(ಬಿ) (ii)(ಎ),8(ಸಿ) ರೀತ್ಯಾ ಪ್ರಕರಣ ದಾಖಲಾಗಿದ್ದು, ಆರೋಪಿತರ ಪತ್ತೆ…
ನವದೆಹಲಿ: ದೆಹಲಿಯ ಹಳೆಯ ರಾಜೇಂದ್ರ ನಗರದ ಕೋಚಿಂಗ್ ಸೆಂಟರ್ ನ ನೆಲಮಾಳಿಗೆಯಲ್ಲಿ ಪ್ರವಾಹದಿಂದಾಗಿ ಮೂವರು ಯುಪಿಎಸ್ಸಿ ಆಕಾಂಕ್ಷಿಗಳು ಸಾವನ್ನಪ್ಪಿದ ದುರಂತ ಸಾವಿನ ಬಗ್ಗೆ ತನಿಖೆ ನಡೆಸಲು ಗೃಹ ಸಚಿವಾಲಯ (ಎಂಎಚ್ಎ) ಸೋಮವಾರ ಸಮಿತಿಯನ್ನು ರಚಿಸಿದೆ. ಸಮಿತಿಯು ತನಿಖೆ ನಡೆಸುತ್ತದೆ ಮತ್ತು ಜವಾಬ್ದಾರಿಯನ್ನು ನಿಗದಿಪಡಿಸುತ್ತದೆ ಮತ್ತು ಈ ಸಂಬಂಧ ಕ್ರಮಗಳು ಮತ್ತು ನೀತಿ ಬದಲಾವಣೆಗಳನ್ನು ಸೂಚಿಸುತ್ತದೆ. 30 ದಿನಗಳಲ್ಲಿ ವರದಿ ಸಲ್ಲಿಸಲಾಗುವುದು. ಈ ಸಮಿತಿಯಲ್ಲಿ ಎಂಒಯುಎಚ್ಎ ಹೆಚ್ಚುವರಿ ಕಾರ್ಯದರ್ಶಿ, ದೆಹಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ (ಗೃಹ), ವಿಶೇಷ ಸಿಪಿ, ದೆಹಲಿ ಪೊಲೀಸ್, ಅಗ್ನಿಶಾಮಕ ಸಲಹೆಗಾರ ಮತ್ತು ಗೃಹ ಸಚಿವಾಲಯದ ಜೆಎಸ್ ಸಂಚಾಲಕರಾಗಿರುತ್ತಾರೆ. https://kannadanewsnow.com/kannada/delhi-coaching-centre-tragedy-l-g-announces-rs-10-lakh-compensation-for-kin-of-victims/ https://kannadanewsnow.com/kannada/false-allegations-levelled-against-cm-in-muda-scam-minister-k-j-george/
ನವದೆಹಲಿ: ರಾಷ್ಟ್ರ ರಾಜಧಾನಿಯ ಕೋಚಿಂಗ್ ಸೆಂಟರ್ ಪ್ರವಾಹ ಘಟನೆಯಲ್ಲಿ ಸಾವನ್ನಪ್ಪಿದ ಮೂವರು ಐಎಎಸ್ ಆಕಾಂಕ್ಷಿಗಳ ಕುಟುಂಬಗಳಿಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಸೋಮವಾರ 10 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ. ದೆಹಲಿ ಅಗ್ನಿಶಾಮಕ ಸೇವೆಗಳು, ಪೊಲೀಸ್ ಮತ್ತು ಎಂಸಿಡಿಯ ಜವಾಬ್ದಾರಿಯುತ ಅಧಿಕಾರಿಗಳ ವಿರುದ್ಧ 24 ಗಂಟೆಗಳಲ್ಲಿ ಕ್ರಮ ಕೈಗೊಳ್ಳುವುದಾಗಿ ಲೆಫ್ಟಿನೆಂಟ್ ಗವರ್ನರ್ ಭರವಸೆ ನೀಡಿದ್ದಾರೆ ಎಂದು ಅವರ ಕಚೇರಿಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಏತನ್ಮಧ್ಯೆ, ಕೋಚಿಂಗ್ ಸೆಂಟರ್ ದುರಂತವನ್ನು ಪರಿಶೀಲಿಸಲು ಗೃಹ ಸಚಿವಾಲಯವು ಸಮಿತಿಯನ್ನು ರಚಿಸಿದೆ ಮತ್ತು ಸಮಿತಿಯು 30 ದಿನಗಳಲ್ಲಿ ವರದಿಯನ್ನು ಸಲ್ಲಿಸಲಿದೆ. https://twitter.com/PIBHomeAffairs/status/1817934253478334941 https://kannadanewsnow.com/kannada/chief-minister-what-a-disservice-this-is-offer-badoota-jds-question/ https://kannadanewsnow.com/kannada/cm-siddaramaiah-demands-removal-of-nirmala-sitharaman-from-cabinet/ https://kannadanewsnow.com/kannada/false-allegations-levelled-against-cm-in-muda-scam-minister-k-j-george/
ಬೆಂಗಳೂರು: ಆಯವ್ಯಯದ ಲೆಕ್ಕಾಚಾರದ ಮೂಲಪಾಠವೇ ಗೊತ್ತಿಲ್ಲದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ. ಇಂಥವರ ಕೈಯಲ್ಲಿ ಹಣಕಾಸು ಖಾತೆ ನೀಡಿರುವುದು ಅತ್ಯಂತ ಅಪಾಯಕಾರಿ ನಿರ್ಧಾರ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವಂತ ಅವರು, ಭಾನುವಾರದ ಪತ್ರಿಕಾಗೋಷ್ಠಿಯಲ್ಲಿ ನರೇಂದ್ರ ಮೋದಿ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ಮರೆಮಾಚುವ ಹತಾಶ ಪ್ರಯತ್ನ ಮಾಡಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಾವೇ ಹೆಣೆದ ಬಲೆಯಲ್ಲಿ ಸಿಕ್ಕಿ ಹಾಕಿಕೊಡಿರುವುದು ದುರಂತ. ಸಚಿವರ ಗೊಂದಲಮಯ ಹೇಳಿಕೆಗಳ ಸಿಕ್ಕುಗಳನ್ನೆಲ್ಲ ಬಿಡಿಸುತ್ತಾ ಹೋದರೆ ಕೊನೆಗೂ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೀಡಿರುವುದು ಚೊಂಬು ಮಾತ್ರ ಎನ್ನುವುದು ಸಾಬೀತಾಗುತ್ತದೆ. ನಿರ್ಮಲಾ ಸೀತಾರಾಮನ್ ಅವರ ಪ್ರಕಾರ ಹಿಂದಿನ ಯುಪಿಎ ಸರ್ಕಾರ (2004-2014) ಹತ್ತು ವರ್ಷಗಳ ಅವಧಿಯಲ್ಲಿ ಕರ್ನಾಟಕಕ್ಕೆ ನೀಡಿರುವ ಅನುದಾನ ರೂ.60,779 ಕೋಟಿ. ಎನ್‌ಡಿಎ ಸರ್ಕಾರ (2014-2024) ಹತ್ತು ವರ್ಷಗಳ ಅವಧಿಯಲ್ಲಿ…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ಇದೆಂಥಾ ಅಪಚಾರ..!? ಬಾಗಿನ ಅರ್ಪಿಸಿ ಕಾಂಗ್ರೆಸ್ ಬಾಡೂಟ..! ತುತ್ತು ಅನ್ನಕ್ಕೂ ಸಂತ್ರಸ್ತರ ಪರದಾಟದ ಈ ಪರಿಸ್ಥಿತಿಯಲ್ಲಿ ಏನಿದು ಅಂತ ಜೆಡಿಎಸ್ ಪ್ರಶ್ನೆ ಮಾಡಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ರಾಜ್ಯದಲ್ಲಿ ನೆರೆಯಿಂದ ಹಲವು ಜಿಲ್ಲೆಗಳಲ್ಲಿ ಜನರು ಒಂದು ತುತ್ತು ಅನ್ನಕ್ಕೂ ಪರಿತಪಿಸುತ್ತಿದ್ರೆ, ಇತ್ತ ಮಜಾವಾದಿ ಸಿದ್ಧರಾಮಯ್ಯ ಸರ್ಕಾರ, ಮತ್ತವರ ಅಧಿಕಾರಿಗಳು ಭರ್ಜರಿ ಬಾಡೂಟ ತಿಂದು ಪಾರ್ಟಿ ಮಾಡಿದ್ದಾರೆ ಎಂಬುದಾಗಿ ಕಿಡಿಕಾರಿದೆ. ಮಂಡ್ಯದಲ್ಲಿ ಕಾವೇರಿಗೆ ಬಾಗಿನ ಅರ್ಪಿಸಿದ ಬಳಿಕ ಬಾಡೂಟ ಆಯೋಜಿಸಿ ಸಂಪ್ರದಾಯಕ್ಕೆ ಎಳ್ಳುನೀರು ಬಿಟ್ಟು, ಅಪಚಾರ ಎಸಗಿ ಕಾಂಗ್ರೆಸ್ ಸರ್ಕಾರ ಜನರ ಆಕ್ರೋಶಕ್ಕೆ ಗುರಿಯಾಗಿದೆ… ಜನಸಾಮಾನ್ಯರ ಭಾವನೆಗಳಿಗೆ ಬೆಲೆ ಕೊಡದ ಕಾಂಗ್ರೆಸ್ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುವುದು ಗ್ಯಾರಂಟಿ ಅಂತ ತಿಳಿಸಿದೆ. https://kannadanewsnow.com/kannada/bjp-jds-leaders-padayatra-to-be-inaugurated-at-8-30-am-on-august-3-workers-from-all-224-constituencies-to-participate/ https://kannadanewsnow.com/kannada/breaking-hc-asks-baba-ramdev-to-withdraw-cure-statement-of-coronil-for-covid-19/ https://kannadanewsnow.com/kannada/breaking-four-killed-in-blast-in-jammu-and-kashmir-blast-at-jks-baramulla/
ಬೆಂಗಳೂರು: ಹಗರಣ ನಡೆದಿರುವುದನ್ನು ಕಾಂಗ್ರೆಸ್ ಸರಕಾರ ಒಪ್ಪಿಕೊಂಡಿದೆ. ಆದರೆ, ಮುಡಾ ಹಗರಣದ ಕುರಿತು ಚರ್ಚಿಸಲು ಧೈರ್ಯ ತೋರದ ಕಾಂಗ್ರೆಸ್ ಸರಕಾರ ಮತ್ತು ಮುಖ್ಯಮಂತ್ರಿಗಳು ಸದನವನ್ನು ಮೊಟಕುಗೊಳಿಸಿ ಪಲಾಯನವಾದ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು. ನಗರದಲ್ಲಿ ಇಂದು ನಡೆದ ಮೈಸೂರು ಪಾದಯಾತ್ರೆಯ ಪೂರ್ವ ತಯಾರಿ ಸಭೆಯ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ- ಜೆಡಿಎಸ್ ಪಕ್ಷಗಳು ಮೈಸೂರಿಗೆ ಪಾದಯಾತ್ರೆ ನಡೆಸಲಿವೆ. ಇದಕ್ಕೆ ಪೂರ್ವಭಾವಿಯಾಗಿ ಇವತ್ತು ಪ್ರಮುಖರ ಸಭೆ ನಡೆಸಿದ್ದೇವೆ. ಭ್ರಷ್ಟ ಕಾಂಗ್ರೆಸ್ ಸರಕಾರದ ಹಗರಣಗಳ ವಿರುದ್ಧ ನಡೆಸುವ ಪಾದಯಾತ್ರೆ, ಹೋರಾಟದ ಕುರಿತು ಚರ್ಚಿಸಲಾಗಿದೆ ಎಂದರು. ಕಾರ್ಯಕರ್ತರಲ್ಲಿ ರಣೋತ್ಸಾಹ ಮೂಡಿದೆ. ಆ.3ರಂದು ಬೆಳಿಗ್ಗೆ 8.30ಕ್ಕೆ ಪಾದಯಾತ್ರೆಯ ಉದ್ಘಾಟನೆ ನೆರವೇರಲಿದೆ. ರಾಜ್ಯದ ಹಿರಿಯ ನಾಯಕರಾದ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಜೆಡಿಎಸ್ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಎರಡೂ ಪಕ್ಷಗಳ ಹಿರಿಯ ಮುಖಂಡರು ಭಾಗವಹಿಸುತ್ತಾರೆ ಎಂದು ತಿಳಿಸಿದರು. ಕೆಂಗೇರಿ ಕೆಂಪಮ್ಮ ದೇವಸ್ಥಾನ, ಗಣಪತಿ ದೇವಸ್ಥಾನದಲ್ಲಿ…