Author: kannadanewsnow09

ಚಾಮರಾಜನಗರ: “ಸಂಕಷ್ಟ ಕಾಲದಲ್ಲಿ ನಮ್ಮನ್ನು ಕಾಪಾಡಿದ ಕಪಿಲಾ ನದಿಗೆ ನಮ್ಮೆಲ್ಲರ ನಮನಗಳು. ಈ ನದಿ ನಮ್ಮ ಗೌರವ ಉಳಿಸಿದೆ” ಎಂದು ಹೇಳಿದರು. ಕಬಿನಿ ಅಣೆಕಟ್ಟಿಗೆ ಬಾಗಿನ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು “ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿಲ್ಲದೆ ಇದ್ದಾಗ, ಕಾವೇರಿ ನೀರು ಹರಿಸಬೇಕು ಎನ್ನುವ ತೀರ್ಪು ಬಂದಾಗ, ಎಲ್ಲ ಸಂಕಷ್ಟ ಕಾಲದಲ್ಲೂ ಕಪಿಲಾ ನದಿಯಿಂದ ನೀರು ಹರಿಸಲಾಗಿದೆ” ಎಂದರು. ಕಳೆದ ವರ್ಷ ಕಬಿನಿಯಲ್ಲಿ ನೀರಿರಲಿಲ್ಲ. ಈ ಬಾರಿ ಮೈತುಂಬಿ ಹರಿಯುತ್ತಿದೆ. ಕಪಿಲಾ ನದಿಗೆ ನಮ್ಮಿಂದ ಹಾಗೂ ಸರ್ಕಾರದಿಂದ ಕೋಟಿ ಕೋಟಿ ನಮನಗಳು” ಎಂದು ಸಂತಸ ವ್ಯಕ್ತಪಡಿಸಿದರು. https://kannadanewsnow.com/kannada/e-property-software-to-be-shut-down-tomorrow-service-not-available/ https://kannadanewsnow.com/kannada/breaking-hc-asks-baba-ramdev-to-withdraw-cure-statement-of-coronil-for-covid-19/

Read More

ಬೆಂಗಳೂರು: ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಪರಿಚಯಿಸುತ್ತಿರುವ ಪ್ರಕ್ರಿಯೆ ಮುಂದುವರೆದಿದ್ದು, ಮತ್ತೆ ಒಂದು  ದಿನ 30.07.2024 ಇ-ಸ್ವತ್ತು ತಂತ್ರಾಂಶವು ಕಾರ್ಯನಿರ್ವಹಿಸುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸಾರ್ವಜನಿಕರ ಸಹಕಾರ ಕೋರಿರುವ ಸಚಿವರು ಸಾರ್ವಜನಿಕರ ಅನಾನುಕೂಲತೆಯನ್ನು ಕಡಿಮೆ ಮಾಡಲು ತಂತ್ರಾಂಶ ಕಾರ್ಯಾರಂಭಿಸಿದ ನಂತರ ಇ-ಸ್ವತ್ತು ತಂತ್ರಾಂಶದ ಕಾರ್ಯಾವಧಿಯನ್ನು 2024ರ  ಆಗಸ್ಟ್ 2ರವರೆಗೆ ಪ್ರತಿ ನಿತ್ಯ ಸಂಜೆ 8 ಗಂಟೆಯವರೆಗೂ ಸೇವೆ ಸಲ್ಲಿಸಲು ಕಾಲಾವಧಿ ವಿಸ್ತರಿಸಲಾಗುವುದು ಎಂದೂ ಹೇಳಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಅಭಿವೃದ್ದಿಪಡಿಸಲಾಗುತ್ತಿದ್ದು ಈ ತಂತ್ರಾಂಶದ ಹೊಸ ಅವತರಣಿಕೆಯನ್ನು ಸಾರ್ವಜನಿಕರ ಸೇವೆಗೆ ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿಸಿರು ಸಚಿವರು. ಇ-ಸ್ವತ್ತು ತಂತ್ರಾಂಶದ ಬಳಕೆದಾರರಿಗೆ ಅನುಕೂಲವಾಗುವಂತೆ ಸಮಗ್ರ ಆವೃತ್ತಿಯೊಂದಿಗೆ ಸಜ್ಜುಗೊಳಿಸಲಾಗಿರುವ ಈ ತಂತ್ರಾಂಶದ ಮೂಲಕ ಸಾರ್ವಜನಿಕರ ಆಸ್ತಿಯನ್ನು ಗ್ರಾಮಠಾಣದ ಒಳಗೆ ಆಥವಾ ಹೊರಗೆ ಬರುವ ಬಗ್ಗೆ ಅಳತೆ ಮಾಡಿಸುವ ಪ್ರಕ್ರಿಯೆಯನ್ನು ಗ್ರಾಮ ಪಂಚಾಯತಿಯ ಹಂತದಲ್ಲಿ…

Read More

ಪ್ಯಾರಿಸ್ : ಪ್ಯಾರಿಸ್ ಒಲಿಂಪಿಕ್ಸ್ 2024ರ ಫೈನಲ್ ಪಂದ್ಯದಲ್ಲಿ ಸರ್ಬಿಯಾದ ಟೆನಿಸ್ ತಾರೆ ನೊವಾಕ್ ಜೊಕೊವಿಕ್ ಅವರು ರಾಫೆಲ್ ನಡಾಲ್ ಅವರನ್ನು ಮಣಿಸಿದ್ದಾರೆ. ಹೀಗಾಗಿ ಪ್ಯಾರೀಸ್ ಒಲಂಪಿಕ್ಸ್ 2024ರ ಪಂದ್ಯಾವಳಿಯಿಂದ 2ನೇ ಸುತ್ತಿನಲ್ಲಿ ಸೋಲು ಕಂಡು, ರಾಫೆಲ್ ನಾಡಲ್ ಪಂದ್ಯಾವಳಿಯಿಂದ ಹೊರ ಬಿದ್ದಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ನ ಎರಡನೇ ದಿನದಂದು ಇತಿಹಾಸ ಬರೆದ ನಂತರ, ಭಾರತೀಯ ತಂಡವು ಜುಲೈ.29 ರ ಸೋಮವಾರ ದೇಶದ ಪದಕಗಳ ಪಟ್ಟಿಗೆ ಹೆಚ್ಚಿನ ಪದಕಗಳನ್ನು ಸೇರಿಸಲು ಎದುರು ನೋಡುತ್ತಿದೆ. ಮಹಿಳೆಯರ 10 ಮೀಟರ್ ಏರ್ ರೈಫಲ್ ವಿಭಾಗದಲ್ಲಿ ಪದಕ ಸ್ಪರ್ಧೆಯಲ್ಲಿ ಸ್ಥಾನ ಪಡೆದಿರುವ ರಮಿತಾ ಜಿಂದಾಲ್ ಅವರಿಂದ ಭಾರತ ಹೆಚ್ಚಿನ ಭರವಸೆ ಹೊಂದಿದೆ. ಅರ್ಜುನ್ ಬಬುಟಾ ಕೂಡ ಪದಕ ಗೆಲ್ಲುವ ಅವಕಾಶವನ್ನು ಹೊಂದಿದ್ದರೂ, ಅಂತಿಮವಾಗಿ ಸೋಲು ಕಂಡು, ಪದಕದ ಭರವಸೆ ಸುಳ್ಳಾಗಿತ್ತು. ಭಾರತದ ಪುರುಷರ ಬಿಲ್ಲುಗಾರಿಕೆ ತಂಡ ಇಂದು ಕಣಕ್ಕಿಳಿಯಲಿದೆ. ಬಿಲ್ಲುಗಾರರು ಕ್ವಾರ್ಟರ್ ಫೈನಲ್ ನಲ್ಲಿ ಸ್ಪರ್ಧಿಸಲಿದ್ದಾರೆ. ಎಲ್ಲಾ ಹಾದಿಯಲ್ಲಿ ಸಾಗುವ ಭರವಸೆ ಹೊಂದಿದ್ದಾರೆ. ಭಾರತ ಪುರುಷರ ಹಾಕಿ…

Read More

ಮಂಡ್ಯ : ಕಾವೇರಿಗೆ ವಿವಾದ ನಾಲ್ಕು ರಾಜ್ಯಗಳಿಗೆ ಅಂದರೆ ತಮಿಳುನಾಡು, ಕರ್ನಾಟಕ, ಕೇರಳ, ಪಾಂಡಿಚೆರಿ ರಾಜ್ಯಗಳಿಗೆ ಸಂಬಂಧಿಸಿದೆ ತಮಿಳುನಾಡಿನವರು ರಾಜಕೀಯ ಲಾಭಕ್ಕಾಗಿ ಕ್ಯಾತೆ ಮೇಕೆದಾಟು ಯೋಜನೆಯ ಕುರಿತು ತೆಗೆಯುತ್ತಲೇ ಇರುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾವೇರಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ವಿವಾದ ಸರ್ವೋಚ್ಛ ನ್ಯಾಯಾಲಯದಲ್ಲಿ ತೀರ್ಮಾನವಾಗಿದ್ದು ಸಾಧಾರಣ ವರ್ಷದಲ್ಲಿ ಜಲಾಶಯಗಳು ತುಂಬಿದ ಸಂದರ್ಭದಲ್ಲಿ 177.25 ಟಿಎಂಸಿ ನೀರನ್ನು ಕೊಡಬೇಕೆಂದಿದೆ. 2022-2023ರಲ್ಲಿ ಸುಮಾರು 665 ಟಿಎಂಸಿ ನೀರು ಹರಿದಿದೆ. ಈ ವರ್ಷವೂ ಕೂಡ ಹೆಚ್ಚು ಹೋಗುವ ಸಾಧ್ಯತೆಯಿದೆ. ಈಗಾಗಲೇ 83. ಟಿಎಂಸಿ ಗೂ ಹೆಚ್ಚು ನೀರು ತಮಿಳುನಾಡಿಗೆ ಹರಿದು ಹೋಗಿದೆ. ಸಂಕಷ್ಟದ ವರ್ಷದಲ್ಲಿ ಅಷ್ಟು ನೀರನ್ನು ಕೊಡಲು ಸಾಧ್ಯವಿಲ್ಲ. ಈ ವರ್ಷ ಹೆಚ್ಚು ನೀರನ್ನು ಕೊಡಲಾಗುವುದು. ಸಮುದ್ರಕ್ಕೆ ಸೇರುವ ಹೆಚ್ಚುವರಿ ನೀರನ್ನು ತಡೆಹಿಡಿಯಲು ಬ್ಯಾಲೆಂನ್ಸಿಂಗ್ ರಿಸರ್ವಾಯರ್ ಕಟ್ಟಿದರೆ ನಮಗಿಂತ ಜಾಸ್ತಿ ತಮಿಳುನಾಡಿಗೆ ಅನುಕೂಲವಾಗುತ್ತದೆ ಎಂದರು. ಕೇಂದ್ರದಿಂದ ಮಂಜೂರಾತಿ ಕೊಡಿಸಲು ಒತ್ತಾಯಿಸಬೇಕು…

Read More

ಬೆಂಗಳೂರು: ರಾಜ್ಯದಲ್ಲಿ ರಸ್ತೆ ಅಪಘಾತಗಳನ್ನು ತಪ್ಪಿಸೋ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮಹತ್ವದ ಕ್ರಮವಹಿಸಿದೆ. ಇದಕ್ಕಾಗಿ ವಾಹನಗಳ ವೇಗಕ್ಕೆ ಮಿತಿ ನಿಗದಿ ಪಡಿಸಲಾಗಿದೆ. ಒಂದು ವೇಳೆ ಈ ಮಿತಿ ಮೀರಿದರೇ ಅಂತಹ ವಾಹನ ಸವಾರರ ವಿರುದ್ಧ ಎಫ್ಐಆರ್ ಹಾಗೂ ದಂಡ ಹಾಕಲಾಗುತ್ತದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಅವರು, ವೇಗದ ಸಂಚಾರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಆಗಸ್ಟ್‌ 1 ರಿಂದ 130 ಕಿ.ಮೀ. ಗಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗುವುದು. ರಾಜ್ಯಾದ್ಯಂತ ಈ ಕ್ರಮ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ. ಸ್ಪಾಟ್‌ ಸ್ಪೀಡ್‌ ಮತ್ತು ಸೆಕ್ಷನಲ್‌ ಸ್ಪೀಡ್‌ ಆಧಾರದಲ್ಲಿ ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗುವುದು. ಈ ರೀತಿಯ ಪ್ರಕರಣಗಳಲ್ಲಿ ರೂ. 2 ಸಾವಿರದವರೆಗೆ ದಂಡ ಮತ್ತು 6 ತಿಂಗಳು ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.…

Read More

ಬೆಂಗಳೂರು: ರಾಜ್ಯದಲ್ಲಿ ನೆರೆ ಪರಿಹಾರ ಹಾಗೂ ಇತರೆ ಕಾರ್ಯಕ್ರಮಗಳಿಗೆ ಒಟ್ಟು 777 ಕೋಟಿ ಬಿಡುಗಡೆ ಮಾಡಲಾಗಿದೆ. ಹಾಸನ ಜಿಲ್ಲೆಗೆ 23 ಕೋಟಿ ನೀಡಲಾಗಿದೆ ಅಂತ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸುರಿದಂತ ಭಾರೀ ಮಳೆಯಿಂದಾಗಿ ಹಲವೆಡೆ ಮನೆಗಳು ಬಿದ್ದು ಹೋಗಿದ್ದಾವೆ. ನೀರು ಬೆಳೆಯ ಮೇಲೆ ನುಗ್ಗಿದ ಪರಿಣಾಮ, ಬೆಳೆಹಾನಿ ಕೂಡ ಆಗಿದೆ. ಈ ರೈತರಿಗೆ ನೆರವಾಗುವ ಸಲುವಾಗಿ ನೆರೆ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 777 ಕೋಟಿಯನ್ನು ಬಿಡುಗಡೆ ಮಾಡಲಾಗಿದೆ. ನದಿಯ ಬದಿಗಳಲ್ಲಿ ಹಾಗೂ ಜಲಾಶಯದ ಹಿನ್ನೀರು ಬದಿಯಲ್ಲಿ ನೆರೆ ಇಲ್ಲದ ಸಂದರ್ಭದಲ್ಲಿ ರೈತರು ಬೆಳೆಯನ್ನು ಬೆಳೆಯುವುದು ಹಾಗೂ ನೆರೆ ಬಂದ ಸಂದರ್ಭದಲ್ಲಿ ಹಿಂದಕ್ಕೆ ಸರಿಯುವುದು ವಾಡಿಕೆಯಾಗಿದೆ.ಇದು ಕಾನೂನಾತ್ಮಕ ವಾಗಿ ತಪ್ಪು ನೆರೆ ಬಂದ ಸಂದರ್ಭದಲ್ಲಿ ಪ್ರಾಣ ಹಾನಿಯಾಗಬಹುದು ಹಾಗೂ ಇಲ್ಲಿ ಬೆಳೆಯುವ ಬೆಳೆಗಳಿಗೆ ಬೆಳೆ ಹಾನಿ ಪರಿಹಾರ ಒದಗಿಸುವುದು ಸಾಧ್ಯವಿಲ್ಲ ಎಂದರು. ವಿಪತ್ತು ನಿರ್ವಹಣೆಗಾಗಿ ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಖಾತೆಗೆ ಒಟ್ಟು 770…

Read More

ಚಿತ್ರದುರ್ಗ: ಶಸ್ತ್ರ ಚಿಕಿತ್ಸೆಗಾಗಿ ಚಿತ್ರದುರ್ಗದ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಂತ ರೋಗಿಯೊಬ್ಬರಿಗೆ ಜನರಲ್ ಸರ್ಜನ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿತ್ತು. ಈ ಹಿನ್ನಲೆಯಲ್ಲಿ ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಜನರಲ್ ಸರ್ಜನ್ ಡಾ.ಸಾಲಿ ಮಂಜಪ್ಪ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ  ಚಂದ್ರಶೇಖರ್ ಬಿನ್ ಕೃಷ್ಣಪ್ಪ ರವರು ಜಿಲ್ಲಾ ಆಸ್ಪತ್ರೆ, ಚಿತ್ರದುರ್ಗ ಇಲ್ಲಿಗೆ ಚಿಕಿತ್ಸೆಯ ಸಲುವಾಗಿ ದಿನಾಂಕ 05-07-2024ರಂದು ಹೋದ ಸಂದರ್ಭದಲ್ಲಿ ಆಸ್ಪತ್ರೆಯ ಕರ್ತವ್ಯದ ಮೇಲಿದ್ದ ವೈದ್ಯರಾದ ಡಾ|| ಸಾಲಿ ಮಂಜಪ್ಪ, ಜನರಲ್ ಸರ್ಜನ್, ಜಿಲ್ಲಾ ಆಸ್ಪತ್ರೆ, ಚಿತ್ರದುರ್ಗ ಜಿಲ್ಲೆ ಇವರು ಸದರಿಯವರನ್ನು ಹೊರರೋಗಿಯಾಗಿ ಪರೀಕ್ಷಿಸಿದ ನಂತರ ಶಸ್ತ್ರಚಿಕಿತ್ಸೆಯ ಸಲುವಾಗಿ ಒಳರೋಗಿಯಾಗಿ ದಾಖಲು ಮಾಡಿಕೊಂಡು ದಿನಾಂಕ 06-07-2024ರಂದು ಸದರಿ ರೋಗಿಗೆ ಶಸ್ತ್ರಚಿಕಿತ್ಸೆಗೆ ನಿಗದಿಪಡಿಸಿ ಶಸ್ತ್ರ ಚಿಕಿತ್ಸೆ ಕೊಠಡಿಗೆ ರೋಗಿಯು ಹೋದಾಗ ರೋಗಿಯ ಸಂಬಂಧಿಕರ ಜೊತೆಗೆ ವೈದ್ಯರು ಸಂಭಾಷಣೆ ನಡೆಸಿ ಹಣ ಕೇಳಿ ಪಡೆದಿರುವುದು…

Read More

ಮೈಸೂರು: ಜಿಲ್ಲೆಯ ಜೀವನಾಡಿ ಕಾವೇರಿಯ ಕೆಆರ್ ಎಸ್ ಅಣೆಕಟ್ಟೆಗೆ ಬಾಗಿನ ಅರ್ಪಿಸಿದ ಬಳಿಕ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕಬಿನಿ ಜಲಾಶಯಕ್ಕೆ ಬಾಗಿನವನ್ನು ಅರ್ಪಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಬಾಗಿನ ಅರ್ಪಿಸಿದರು. ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಎನ್. ಚೆಲುವರಾಯಸ್ವಾಮಿ, ವೆಂಕಟೇಶ್, ಮೈಸೂರು ಹಾಗೂ ಮಂಡ್ಯ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಬಳಿಕ ಮೈಸೂರಿನ ಕಬಿನಿ ಜಲಾಶಯಕ್ಕೆ ತೆರಳಿದಂತ ಅವರು, ಪೂಜೆ ನೆರವೇರಿಸಿ, ಕಬಿನಿ ಜಲಾಶಯಕ್ಕೆ ಬಾಗಿನವನ್ನು ಅರ್ಪಿಸಿದರು. ಮುಂದಿನ 10 ವರ್ಷವೂ ಬಾಗಿನ ಅರ್ಪಿಸುವ ಶಕ್ತಿ ಕಾವೇರಿ ತಾಯಿ ನೀಡುತ್ತಾಳೆ: ಡಿಸಿಎಂ ಡಿ.ಕೆ.ಶಿವಕುಮಾರ್ ಮಂಡ್ಯ : “ಈ ಬಾರಿ ಉತ್ತಮ ಮಳೆಯಾಗಿರುವ ಪರಿಣಾಮ ಈಗಾಗಲೇ ತಮಿಳುನಾಡಿಗೆ 84 ಟಿಎಂಸಿಯಷ್ಟು ನೀರು ತಲುಪಿದೆ. ಮುಂದಿನ 10 ವರ್ಷವೂ ಬಾಗಿನ ಅರ್ಪಿಸುವಂತಹ ಆಶೀರ್ವಾದವನ್ನು ಕಾವೇರಿ ತಾಯಿ ನಮ್ಮ ಸರ್ಕಾರಕ್ಕೆ ಮಾಡುತ್ತಾಳೆ” ಎಂದು…

Read More

ಬಳ್ಳಾರಿ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ವಿದೇಶಿ ವ್ಯಾಸಂಗಕ್ಕಾಗಿ ವಿದೇಶಿ ಸಾಲ ಯೋಜನೆಯಡಿ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಮತ್ತು ಆಂಗ್ಲೋ ಇಂಡಿಯನ್ ಜನಾಂಗದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲ ಪಡೆಯಲು http://kmdconline.karnataka.gov.in/ ವೆಬ್‌ಸೈಟ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದು. ಅರ್ಹತೆ: ವಿದ್ಯಾರ್ಥಿಗಳು ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಭೌದ್ದರು, ಸಿಖ್ಖರು, ಪಾರ್ಸಿಗಳು ಜನಾಂಗದವರಾಗಿರಬೇಕು. ಕೋರ್ಸ್- ಪೂರ್ಣಕಾಲಿಕ ಪದವಿ ಮತ್ತು ಸ್ನಾತಕೋತ್ತರ ಪದವಿ. ವಯಸ್ಸು ಗರಿಷ್ಠ 38 ವರ್ಷ ಮೀರಿರಬಾರದು. ಕುಟುಂಬದ ವಾರ್ಷಿಕ ಆದಾಯ ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ ರೂ.8 ಲಕ್ಷ ಮೀರಬಾರದು. ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಕನಿಷ್ಠ ಶೇ.60 ಅಂಕ ಪಡೆದಿರಬೇಕು. ನಿಗಮಕ್ಕೆ ಆಸ್ತಿಯ (ಕಟ್ಟಡ, ಜಮೀನು) ಅಡಮಾನದ ಮೇಲೆ ಮಾತ್ರ ಸಾಲ ಒದಗಿಸಲಾಗುವುದು. ಆಸ್ತಿಯ ಮೌಲ್ಯವು ಸಾಲದ ಮೊತ್ತಕ್ಕಿಂತ ಕಡಿಮೆ ಇರಬಾರದು. ಅರ್ಜಿಯ ಪ್ರತಿ…

Read More

ಶಿವಮೊಗ್ಗ : ಕೃಷಿ ಇಲಾಖೆಯು ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಬಾಡಿಗೆ ಆಧಾರದಲ್ಲಿ ಒದಗಿಸುವಂತೆ ಸ್ಥಾಪಿಸಲಾಗಿರುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಲು ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಹಂತಹಂತವಾಗಿ ಅನುಷ್ಟಾನ ಮಾಡಲು ಉದ್ದೇಶಿಸಲಾಗಿದ್ದು, ಈ ಕಾರ್ಯಕ್ರಮವನ್ನು ಕೃಷಿ ಯಂತ್ರಧಾರೆ ಕೇಂದ್ರಗಳೊಂದಿಗೆ ಇತರೆ ಸಂಘ-ಸಂಸ್ಥೆಗಳು ಹಾಗೂ ವೈಯುಕ್ತಿಕ ಫಲಾನುಭವಿಗಳಿಗೂ ಸಹ ಹೈಟೆಕ್ ಹಾರ್ವೇಸ್ಟರ್ ಹಬ್ ಸ್ಥಾಪಿಸಲು ಅವಕಾಶ ನೀಡಲು ಪ್ರತಿ ಘಟಕಕ್ಕೆ ಒದಗಿಸುವ ಅನುದಾನದಲ್ಲಿ ಶೇ.40 ರಿಂದ ಶೆ.70 ರಷ್ಟು ಸಹಾಯಧನ ಒದಗಿಸಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.  ಆಸಕ್ತರು ಅರ್ಜಿಯನ್ನು ಕೃಷಿ ಇಲಾಖೆ/ ಉಪ ಕೃಷಿ ನಿರ್ದೇಶಕರ ಕಚೇರಿ/ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಆ.14ರೊಳಗಾಗಿ ಸಲ್ಲಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಕೃಷಿ ಇಲಾಖೆ/ ಉಪ ಕೃಷಿ ನಿರ್ದೇಶಕರಕಚೇರಿ/ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸುವುದು. https://kannadanewsnow.com/kannada/direct-interview-for-the-vacant-posts-under-national-health-mission/ https://kannadanewsnow.com/kannada/breaking-hc-asks-baba-ramdev-to-withdraw-cure-statement-of-coronil-for-covid-19/

Read More