Author: kannadanewsnow09

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಮೂಗಿನಲ್ಲಿ ರಕ್ತಸ್ರಾವ ವಿಚಾರದವನ್ನು ತಿಳಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಶೀಘ್ರವೇ ಅವರು ಚೇತರಿಸಿಕೊಂಡು ಕರ್ತವ್ಯಕ್ಕೆ ಮರಳುವಂತೆ ಆಗಲಿ ಅಂತ ಆಶಿಸಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾದ ಸುದ್ದಿ ಮಾಧ್ಯಮಗಳಲ್ಲಿ ನೋಡಿದೆ ಅಂತ ತಿಳಿಸಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಕುಮಾರಸ್ವಾಮಿ ಅವರು ಶೀಘ್ರ ಚೇತರಿಸಿಕೊಂಡು ಮತ್ತೆ ತಮ್ಮ ಕರ್ತವ್ಯದಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ. https://twitter.com/siddaramaiah/status/1817588615398281500 https://kannadanewsnow.com/kannada/hd-kumaraswamy-discharged-from-hospital-after-suffering-nose-bleeds/ https://kannadanewsnow.com/kannada/pm-modi-calls-manu-bhaker-to-congratulate-him-on-winning-bronze-medal-at-paris-olympics/

Read More

ನವದೆಹಲಿ: ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾರತದ ಮನು ಬಾಕರ್ ಅವರು ಇಂದು ಮೊದಲ ಪದಕವನ್ನು ತಂದುಕೊಡುವ ಮೂಲಕ, ಭಾರತದ ಪದಕದ ಭೇಟೆಗೆ ಮುನ್ನುಡಿ ಬರೆದಿದ್ದರು. ಇಂತಹ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಕರೆ ಮಾಡಿ, ಅಭಿನಂದನೆಯನ್ನು ತಿಳಿಸಿದ್ದಾರೆ. ಪ್ಯಾರೀಸ್ ಒಲಂಪಿಕ್ಸ್ 2024ರ ಇಂದಿನ ಪಂದ್ಯಾವಳಿಯ ವೇಳೆಯಲ್ಲಿ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ನಲ್ಲಿ ಭಾರತದ ಮನು ಬಾಕರ್ ಅವರು ಕಂಚಿನ ಪದಕವನ್ನು ಗೆದ್ದಿದ್ದರು. ಇದು ಭಾರತದ ಮೊದಲ ಪದಕವಾಗಿದೆ. ಇಂದು ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದಿದ್ದಂತ ಮನು ಬಾಕರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಕೂಡಲೇ ಅಭಿನಂದನೆಯನ್ನು ತಿಳಿಸಿದ್ದರು. https://twitter.com/narendramodi/status/1817511901355721186 ಈ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಮನು ಬಾಕರ್ ಅವರಿಗೆ ದೂರವಾಣಿ ಕರೆ ಮಾಡಿ, ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ನಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ.…

Read More

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಇಂದು ಸುದ್ದಿಗೋಷ್ಠಿಯಲ್ಲೇ ಮೂಗಿನಲ್ಲಿ ರಕ್ತಸ್ರಾವ ಉಂಟಾಗಿತ್ತು. ಹೀಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂತಹ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಂದ ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧ ಧ್ವನಿ ಎತ್ತೋ ಸಲುವಾಗಿ ಪಾದಯಾತ್ರೆ ನಡೆಸುವ ಸಂಬಂಧ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕೂಡ ಹಾಜರಾಗಿದ್ದರು. ಈ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದಂತ ವೇಳೆಯಲ್ಲೇ ಹೆಚ್.ಡಿ ಕುಮಾರಸ್ವಾಮಿಗೆ ಮೂಗಿನಲ್ಲಿ ರಕ್ತಸ್ರಾವ ಉಂಟಾಗಿತ್ತು. ಕರ್ಚಿಪ್ ನಲ್ಲಿ ಒರೆಸಿಕೊಳ್ಳುತ್ತಲೇ ಮಾತನಾಡಿ, ಅಲ್ಲಿಂದ ತುರ್ತಾಗೆ ಅರ್ಧಕ್ಕೆ ಸುದ್ದಿಗೋಷ್ಠಿ ಮೊಟಕುಗೊಳಿಸಿ ಹೊರಟಿದ್ದರು. ಬೆಂಗಳೂರಿನ ಜಯನಗರದಲ್ಲಿರುವಂತ ಅಪೋಲೋ ಆಸ್ಪತ್ರೆಗೆ ಹೆಚ್.ಡಿ ಕುಮಾರಸ್ವಾಮಿ ದಾಖಲಾಗಿದ್ದರು. ಅವರನ್ನು ಪರೀಕ್ಷಿಸಿದಂತ ವೈದ್ಯರು ಚಿಕಿತ್ಸೆ ನೀಡಿದ್ದರು. ಇದೀಗ ಹೆಚ್.ಡಿ ಕುಮಾರಸ್ವಾಮಿ ಚಿಕಿತ್ಸೆ ಪಡೆದ ಬಳಿಕ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಬಳಿಕ ಆಸ್ಪತ್ರೆಯ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೆಲಸದ ಒತ್ತಡದಿಂದ ಒಮ್ಮೊಮ್ಮೆ…

Read More

ಗದಗ : ಕೇಂದ್ರ ಸರ್ಕಾರದ ಯೋಜನೆಗಳು ಜನರಿಗೆ ಮುಟ್ಟಿಸಲು ರಾಜ್ಯ ಸರ್ಕಾರದ ಸಹಕಾರ ಮುಖ್ಯವಾಗಿರುತ್ತದೆ. ಆದರೆ, ರಾಜ್ಯ ಸರ್ಕಾರ ಅಭಿವೃದ್ಧಿ ಕೆಲಸಗಳನ್ನು ಮಾಡದೇ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಅವರು ಭಾನುವಾರ ಮಾಜಿ ಸಚಿವ ಕಳಕಪ್ಪ ಬಂಡಿ ಅವರ ಗೃಹ ಕಚೇರಿಯ ಆವರಣದಲ್ಲಿ ನಡೆದ ರೋಣ ವಿಧಾನಸಭಾಕ್ಷೇತ್ರದ ಕಾರ್ಯಕರ್ತರು ಹಾಗೂ ಮತದಾರರಿಗೆ ಏರ್ಪಡಿಸಿದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಗದಗ ನಗರದಲ್ಲಿ ಕಳೆದ 7 ವರ್ಷದ ಹಿಂದೆ ಕೇಂದ್ರೀಯ ವಿದ್ಯಾಲಯವನ್ನು ಕೇಂದ್ರ ಸರ್ಕಾರ ಮಂಜೂರು ಮಾಡಿತ್ತು. ಆದರೆ, ಅಲ್ಲಿನ ರಾಜಕೀಯ ನಾಯಕರ ನಿರಾಸಕ್ತಿಯಿಂದ ಸ್ಥಳದ ಸಮಸ್ಯೆಯಾಗಿ ವಿದ್ಯಾಲಯ ಸ್ಥಾಪನೆಯಾಗಲಿಲ್ಲ. ರಾಜ್ಯ ಸರ್ಕಾರಕ್ಕೆ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಒಂದು ಕೆಲಸವಾಗಿದೆ. ತಮ್ಮ ವೈಫಲ್ಯ ಮುಚ್ಚಿಕೊಂಡು ಬರಪರಿಹಾರ, ಯಾವುದೇ ಟೆಂಡರಗಳನ್ನು ಕರಿಯದೇ ಅಭಿವೃದ್ಧಿ ಕೆಲಸಗಳನ್ನು ಮಾಡದೇ ಕೇಂದ್ರ ಸರ್ಕಾರದತ್ತ ಕೈ ತೋರಿಸುತ್ತಿದೆ. ಕೇಂದ್ರ ಸರ್ಕಾರದ ಬಗ್ಗೆ ಅಪಪ್ರಚಾರ ಮಾಡುತ್ತಿದೆ.…

Read More

ಶಿವಮೊಗ್ಗ 2024 ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರವಾಹ ಪರಿಸ್ಥಿತಿಯ ತುರ್ತು ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಕೈಗೊಳ್ಳಲಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಮಾಧ್ಯಮದ ಪ್ರತಿನಿಧಿಗಳಿಗೆ ವಿಸ್ತೃತ ಮಾಹಿತಿ ನೀಡಿದರು. ಶಿವಮೊಗ್ಗ ಜಿಲ್ಲೆಯಲ್ಲಿ ಜುಲೈ ಮಾಹೆಯಲ್ಲಿ ಭಾರಿ ಮಳೆಯಾಗಿದ್ದರಿಂದ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುತ್ತದೆ. ಜುಲೈ ಮಾಹೆಯಲ್ಲಿ (27-07-2022ರವರೆಗೆ) ನರಾಸರಿ 668.0 ಮೀ.ಮೀ ವಾಡಿಕೆ ಮಳೆ ಇದ್ದು 1109 ಮೀ.ಮೀ. ಮಳೆಯಾಗಿರುತ್ತದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಪ್ರತಿಶತ 66″, ರಷ್ಟು ಹೆಚ್ಚು ಮಳೆಯಾಗಿರುತ್ತದೆ. ಜಿಲ್ಲೆಯಲ್ಲಿ ನೆರೆಹಾವಳಿಯಿಂದಾಗಿ ಜೂನ್ ಮಾಹೆಯಿಂದ’ ಒಟ್ಟು 4 ಮಾನವ ಹಾನಿಯಾಗಿದ್ದು, ಈಗಾಗಲೆ 2 ಪ್ರಕರಣಗಳಿಗೆ ರೂ.5.00 ಲಕ್ಷದಂತೆ ಮಾರ್ಗಸೂಚಿಯಂತೆ ಪರಿಹಾರ ವಿತರಿಸಲಾಗಿದೆ ಉಳಿದ 2 ಪ್ರಕರಣಕ್ಕೆ ಶೀಘ್ರವಾಗಿ ಪರಿಹಾರ ಧನ ವಿತರಿಸಲಾಗುವುದು. ಜಿಲ್ಲೆಯಲ್ಲಿ ನೆರೆಹಾವಳಿಯಿಂದಾಗಿ ಒಟ್ಟು 10 ಜಾನುವಾರು ಮೃತಪಟ್ಟಿರುತ್ತವೆ 8 ಪ್ರಕರಣಗಳ ವಾರಸುದಾರರಿಗೆ ಮಾರ್ಗಸೂಚಿಯಂತೆ 0.375 ಲಕ್ಷದಂತೆ ಪರಿಹಾರ ಧನ ವಿತರಿಸಲಾಗಿದೆ ಅತಿ ಹೆಚ್ಚು ಮಳೆಯಿಂದ ಜೂನ್ ಮಾಹೆಯಿಂದ ಸುಮಾರು 18…

Read More

ಶಿವಮೊಗ್ಗ: ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ನಗರದಲ್ಲಿ ಆರೋಗ್ಯದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದು ಬಂದಿದೆ. ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗೆ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಅವರು ಅನಾರೋಗ್ಯದ ಕಾರಣ, ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ವಿಷಯ ತಿಳಿದಂತ ಶಾಲಾ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ, ಕಾಗೋಡು ತಿಮ್ಮಪ್ಪ ಅವರ ಆರೋಗ್ಯವನ್ನು ವಿಚಾರಿಸಿದರು. ಇನ್ನೂ ಮಾಜಿ ಸಚಿವ ಹರತಾಳು ಹಾಲಪ್ಪ ಹಾಗೂ ಸಾಗರ ತಾಲ್ಲೂಕು ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಸೂಚನೆ ಮೇರೆಗೆ ಕರ್ತವ್ಯಾಧಿಕಾರಿ ಟಿ.ಪಿ ರಮೇಶ್ ಅವರು ಕೂಡ ಕಾಗೋಡು ತಿಮ್ಮಪ್ಪ ಅವರು ಚಿಕಿತ್ಸೆ ಪಡೆಯುತ್ತಿದ್ದಂತ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಅಲ್ಲದೇ ಅವರಿಗೆ ಧೈರ್ಯ ತುಂಬಿದರು. https://kannadanewsnow.com/kannada/passengers-note-these-trains-will-be-cancelled-from-tomorrow-july-29-to-july-4/ https://kannadanewsnow.com/kannada/passengers-note-these-trains-will-be-cancelled-from-tomorrow-july-29-to-july-4/

Read More

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆರೋಗ್ಯವಾಗಿದ್ದಾರೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಶೀಘ್ರವೇ ಗುಣಮುಖರಾಗಿ ಮನೆಗೆ ಮರಳಲಿದ್ದಾರೆ ಅಂತ ಪುತ್ರ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ಇಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಸುದ್ದಿಗೋಷ್ಠಿಯ ಸಂದರ್ಭದಲ್ಲೇ ಮೂಗಿನಲ್ಲಿ ರಕ್ತಸ್ತ್ರಾವ ಆಗಿತ್ತು. ರಕ್ತ ಸೋರುತ್ತಿದ್ದರೂ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಲ್ಲಿಂದ ಮರಳಿದ್ದರು. ಅವರನ್ನು ಜಯನಗರದ ಅಪೊಲೋ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಬಗ್ಗೆ ಆಸ್ಪತ್ರೆಯ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು, ಕೆಲಸದ ಒತ್ತಡದಿಂದ ವಿಶ್ರಾಂತಿ ಇಲ್ಲದೇ ಹೀಗೆ ಆಗಿದೆ. ವಿಶ್ರಾಂತಿ ಪಡೆದುಕೊಳ್ಳದ ಕಾರಣ, ರಕ್ತಸ್ತ್ರಾವ ಆಗಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ ಎಂದರು. ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಆತಂಕ ಪಡುವಂತ ಏನು ಆಗಿಲ್ಲ. ಅವರು ಆರೋಗ್ಯವಾಗಿದ್ದಾರೆ. ಕುಮಾರಣ್ಣನ ಮೇಲೆ ತಂದೆ ತಾಯಿ ಆಶೀರ್ವಾದ, ಈ ನಾಡಿನ ಜನತೆಯ ಆಶೀರ್ವಾದವಿದೆ. ಏನೂ ಆಗಿಲ್ಲ. ಆರೋಗ್ಯವಾಗಿದ್ದಾರೆ. ಹೆಚ್.ಡಿ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಆಂತಕ ಪಡುವ…

Read More

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣ, ದಲಿತರ ಹಣವನ್ನು ಬೇರೆ ಉದ್ದೇಶಕ್ಕೆ ವರ್ಗಾವಣೆ ಮಾಡಿದ್ದನ್ನು ಖಂಡಿಸಿ ಆಗಸ್ಟ್ 3ರಿಂದ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ- ಜೆಡಿಎಸ್ ಪಕ್ಷಗಳ ಪಾದಯಾತ್ರೆ ನಡೆಸಲಾಗುವುದು ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಇಂದು ನಗರದಲ್ಲಿ ನಡೆದ ಬಿಜೆಪಿ- ಜೆಡಿಎಸ್ ಪಕ್ಷಗಳ ಮುಖಂಡರ ಸಭೆಯಲ್ಲಿ ಈ ಕುರಿತು ಚರ್ಚಿಸಿ ನಿರ್ಧರಿಸಲಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆಯಲ್ಲಿ ತೆರಳಲು 7 ದಿನ ಬೇಕಾಗಲಿದೆ. ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ, ಮಾನ್ಯ ಎಚ್.ಡಿ.ಕುಮಾರಸ್ವಾಮಿ ಅವರು ಕೂಡ ಪಾದಯಾತ್ರೆಯಲ್ಲಿ ಭಾಗವಹಿಸುತ್ತಾರೆ. ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ ಎಂದರು. 10ರಂದು ಶನಿವಾರ ಸಮಾರೋಪ ನಡೆಯಲಿದೆ; ಅವತ್ತು ನಮ್ಮ ಕೇಂದ್ರದ ನಾಯಕರೂ ಬರಲಿದ್ದಾರೆ ಎಂದು ತಿಳಿಸಿದರು. ಇಂದಿನ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಜೆಡಿಎಸ್ ಮುಖಂಡ ಮತ್ತು ಕೇಂದ್ರದ ಸಚಿವ ಕುಮಾರಸ್ವಾಮಿ, ಎರಡೂ ಪಕ್ಷಗಳ ಮುಖಂಡರು ಭಾಗವಹಿಸಿ ಹಗರಣಗಳ ಕುರಿತು ಚರ್ಚಿಸಲಾಗಿದೆ. ಬಳಿಕ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾಗಿ ವಿವರ ನೀಡಿದರು. ವಾಲ್ಮೀಕಿ ನಿಗಮದ ಹಗರಣದಲ್ಲಿ 187 ಕೋಟಿ…

Read More

ನವದೆಹಲಿ: ಕೇಂದ್ರ ಸರ್ಕಾರವು ( Central government ) ಪ್ರಸ್ತುತ ವಿಧಾನವನ್ನು ಬದಲಿಸಿ ಹೊಸ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ( Satellite-Based Toll Collection System ) ಪರಿಚಯಿಸಲು ಸಜ್ಜಾಗಿದೆ. ಈ ಹೊಸ ವ್ಯವಸ್ಥೆಯು ಭಾರತದ ರಾಷ್ಟ್ರೀಯ ಹೆದ್ದಾರಿಗಳನ್ನು ಯುನೈಟೆಡ್ ಸ್ಟೇಟ್ಸ್ನಂತೆಯೇ ಮಾಡುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದರು. ಹೊಸ ವ್ಯವಸ್ಥೆಯು ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಮ್ (Global Navigation Satellite System -GNSS) ಅನ್ನು ಬಳಸುತ್ತದೆ ಮತ್ತು ಆರಂಭದಲ್ಲಿ ಆಯ್ದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ( National Highways ) ಜಾರಿಗೆ ತರಲಾಗುವುದು. ಈ ವ್ಯವಸ್ಥೆಯಡಿ, ಪ್ರಯಾಣಿಸಿದ ದೂರವನ್ನು ಆಧರಿಸಿ ಟೋಲ್ ಶುಲ್ಕವನ್ನು ನೇರವಾಗಿ ಚಾಲಕನ ಬ್ಯಾಂಕ್ ಖಾತೆಯಿಂದ ಕಡಿತಗೊಳಿಸಲಾಗುತ್ತದೆ. ಈ ವಿಧಾನವು ವೆಚ್ಚ-ಪರಿಣಾಮಕಾರಿ ಮತ್ತು ಪರಿಣಾಮಕಾರಿಯಾಗಿರುತ್ತದೆ, ಪ್ರಯಾಣಿಕರಿಗೆ ಸಮಯ ಮತ್ತು ಇಂಧನವನ್ನು ಉಳಿಸುತ್ತದೆ ಎಂದು ಗಡ್ಕರಿ ಒತ್ತಿ ಹೇಳಿದರು. ವಿಂಡ್ಶೀಲ್ಡ್ನಲ್ಲಿ ಸ್ಟಿಕ್ಕರ್ ಓದಲು ಆರ್ಎಫ್ಐಡಿ ಸ್ಕ್ಯಾನರ್ಗಳಿಗಾಗಿ ವಾಹನಗಳು ಟೋಲ್…

Read More

ಚಿಕ್ಕಮಗಳೂರು: ಡೀಮ್ಡ್ ಅರಣ್ಯ ಸೇರಿದಂತೆ ಸರ್ಕಾರಿ ಜಮೀನಿನಲ್ಲಿ ನಿರ್ಮಿಸಿದ್ದ ಮನೆಗಳು ಮಳೆಯಿಂದ ಕುಸಿದು ಬಿದ್ದರೂ 1 ಲಕ್ಷ ರು. ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದ್ದು, ಇನ್ನೆರಡು ದಿನಗಳಲ್ಲಿ ಆದೇಶ ಹೊರಡಿಸಲಾಗುತ್ತದೆ ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯನ್ನೂ ಹೊಂದಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಡೀಮ್ಡ್ ಅರಣ್ಯ ಸೇರಿದಂತೆ ಸರ್ಕಾರಿ ಜಮೀನಿನಲ್ಲಿ ನಿರ್ಮಿಸಿದ್ದ ಮನೆಗಳು ಮಳೆಯಿಂದ ಕುಸಿದು ಬಿದ್ದರೂ 1 ಲಕ್ಷ ರು. ಪರಿಹಾರ ನೀಡುವ ಬಗ್ಗೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಅದರಂತೆ ಪರಿಹಾರ ವಿತರಿಸಲಾಗುವುದು,” ಎಂದರು. “ಪ್ರಸ್ತುತ ಮಳೆಯಿಂದ ಕುಸಿದ ಮನೆಗಳಿಗೆ ತಕ್ಷಣದ ಪರಿಹಾರವಾಗಿ 1.20 ಲಕ್ಷ ರು. ನೀಡಲಾಗುತ್ತಿದೆ. ಇದರ ಜತೆಗೆ ಇನ್ನೂ 3.80 ಲಕ್ಷ ರೂ. ಪರಿಹಾರ ಒದಗಿಸಿ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಡಲಾಗುವುದು,” ಎಂದು ತಿಳಿಸಿದರು. ಮಲೆನಾಡು, ಕರಾವಳಿಗೆ ಹೆಚ್ಚಿನ ಗ್ಯಾಂಗ್…

Read More