Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಸೈಬರ್ ಅಪರಾಧಿಗಳು ಮತ್ತು ಅಪರಾಧ ಹಾಟ್ಸ್ಪಾಟ್ಗಳಿಗೆ ಕಠಿಣ ಹೊಡೆತ ನೀಡುವ ಉದ್ದೇಶದಿಂದ, ಗೃಹ ಸಚಿವಾಲಯದ (ಎಂಎಚ್ಎ) ಸೈಬರ್ ಅಪರಾಧ ಸಮನ್ವಯ ಕೇಂದ್ರ (ಐ 4 ಸಿ) ರಾಜ್ಯ ಪೊಲೀಸ್ ಪಡೆಗಳು ಸೇರಿದಂತೆ ಜಾರಿ ಸಂಸ್ಥೆಗಳಿಗೆ ಸಹಾಯ ಮಾಡಲು ‘ಪ್ರತಿಬಿಂಬ್’ ಎಂಬ ಸಾಫ್ಟ್ವೇರ್ ಅನ್ನು ಅಭಿವೃದ್ಧಿಪಡಿಸಿದೆ ಮತ್ತು ಪ್ರಾರಂಭಿಸಿದೆ. ಸೈಬರ್ ಅಪರಾಧಿಗಳನ್ನು ನೈಜ ಸಮಯದಲ್ಲಿ ಮ್ಯಾಪಿಂಗ್ ಮಾಡಲು ಮತ್ತು ಅವರ ನೆಟ್ವರ್ಕ್ ಅನ್ನು ನಾಶಪಡಿಸಲು ಇದು ಉಪಯುಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇಶಾದ್ಯಂತ ಸೈಬರ್ ಅಪರಾಧಗಳಲ್ಲಿ ಬಳಸಲಾಗುವ ಮೊಬೈಲ್ ಸಂಖ್ಯೆಗಳನ್ನು ಭೌಗೋಳಿಕ ಮಾಹಿತಿ ವ್ಯವಸ್ಥೆ (ಜಿಐಎಸ್) ನಕ್ಷೆಯಲ್ಲಿ ಪ್ರದರ್ಶಿಸುವ ವಿಶಿಷ್ಟ ಪ್ರಯೋಜನವನ್ನು ‘ಪ್ರತಿಮಾ’ ನೀಡುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪರಾಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ ಮೊಬೈಲ್ ಸಂಖ್ಯೆಗಳ ನಿಜವಾದ ಸ್ಥಳಗಳನ್ನು ಕಂಡುಹಿಡಿಯಲು ಕಾನೂನು ಜಾರಿ ಸಂಸ್ಥೆಗಳ ಸಿಬ್ಬಂದಿ ಮತ್ತು ಸೇವಾ ಪೂರೈಕೆದಾರರಿಗೆ ಸಾಫ್ಟ್ವೇರ್ ನಕ್ಷೆ ನೋಟವನ್ನು ಸಹ ಒದಗಿಸುತ್ತದೆ. ‘ಪ್ರತಿಬಿಂಬ್’ ಅನ್ನು ಪ್ರಾರಂಭಿಸುವುದರೊಂದಿಗೆ, ಗುರುತಿಸಲಾದ 12 ಸೈಬರ್ ಕ್ರಿಮಿನಲ್ ಹಾಟ್ಸ್ಪಾಟ್ಗಳ ವಿರುದ್ಧ ಕ್ರಮ…
ನವದೆಹಲಿ: ಭಾರತದ 17 ನೇ ಲೋಕಸಭೆಯ ಅವಧಿ 2024 ರ ಜೂನ್ನಲ್ಲಿ ಕೊನೆಗೊಳ್ಳುತ್ತಿದ್ದಂತೆ, ಭಾರತದ ಚುನಾವಣಾ ಆಯೋಗ (ಇಸಿಐ) ಮಾರ್ಚ್ 16 ರಂದು ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಅನಾವರಣಗೊಳಿಸಿದೆ. ಈ ಚುನಾವಣೆಗಳು ಏಳು ಹಂತಗಳಲ್ಲಿ ನಡೆಯಲಿದ್ದು, ಏಪ್ರಿಲ್ 19 ರಿಂದ ಜೂನ್ 1 ರವರೆಗೆ ನಡೆಯಲಿದ್ದು, ಜೂನ್ 4 ರಂದು ಫಲಿತಾಂಶಗಳನ್ನು ಘೋಷಿಸಲಾಗುವುದು. ನೀವು ಬೇರೆ ನಗರದಲ್ಲಿ ವಾಸಿಸುತ್ತಿದ್ದರೆ ನಿಮ್ಮ ಮತವನ್ನು ಹೇಗೆ ಚಲಾಯಿಸಬೇಕು ಎಂಬುದರ ಕುರಿತ ಮಾಹಿತಿ ಇಲ್ಲಿದೆ. ಆರಂಭಿಕ ಹಂತವೆಂದರೆ ನಿಮ್ಮ ಮತದಾರರ ನೋಂದಣಿ ಸ್ಥಿತಿಯನ್ನು ಪರಿಶೀಲಿಸುವುದು, ಇದನ್ನು ಭಾರತದ ಚುನಾವಣಾ ಆಯೋಗದ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅಥವಾ ನಿಮ್ಮ ಸ್ಥಳೀಯ ಚುನಾವಣಾ ನೋಂದಣಿ ಅಧಿಕಾರಿಯನ್ನು ಸಂಪರ್ಕಿಸುವ ಮೂಲಕ ಸಾಧಿಸಬಹುದು. ನೀವು ಸ್ಥಳಾಂತರಗೊಂಡಿದ್ದರೆ ಆದರೆ ನಿಮ್ಮ ಮೂಲ ಕ್ಷೇತ್ರದಲ್ಲಿ ನಿಮ್ಮ ಮತದಾನದ ಹಕ್ಕನ್ನು ಕಾಪಾಡಿಕೊಳ್ಳಲು ಬಯಸಿದರೆ, ನಿಮ್ಮ ಮತದಾರರ ಗುರುತಿನ ಚೀಟಿಯ ವರ್ಗಾವಣೆಗೆ ನೀವು ಅರ್ಜಿ ಸಲ್ಲಿಸಬೇಕು. ಹಾಗೆ ಮಾಡಲು, ನಿಮ್ಮ ಮತದಾರರ ನೋಂದಣಿಯನ್ನು ಒಂದು ಕ್ಷೇತ್ರದಿಂದ…
ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅನಾರೋಗ್ಯದ ಕಾರಣ ಇಂದು ಮಧ್ಯಪ್ರದೇಶ ಮತ್ತು ಜಾರ್ಖಂಡ್ನಲ್ಲಿ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡುವುದಿಲ್ಲ ಎಂದು ಪಕ್ಷದ ಹಿರಿಯ ಮುಖಂಡ ಜೈರಾಮ್ ರಮೇಶ್ ಹೇಳಿದ್ದಾರೆ. ರಾಹುಲ್ ಗಾಂಧಿ ಇಂದು ಮಧ್ಯಪ್ರದೇಶದ ಸತ್ನಾ ಮತ್ತು ಜಾರ್ಖಂಡ್ನ ರಾಂಚಿಯಲ್ಲಿ ಪ್ರಚಾರ ನಡೆಸಬೇಕಿತ್ತು. “ರಾಹುಲ್ ಗಾಂಧಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಅವರು ಪ್ರಸ್ತುತ ದೆಹಲಿಯನ್ನು ಬಿಡಲು ಸಾಧ್ಯವಾಗುವುದಿಲ್ಲ. ಸತ್ನಾದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಂಚಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ” ಎಂದು ರಮೇಶ್ ಹೇಳಿದ್ದಾರೆ. https://twitter.com/Jairam_Ramesh/status/1781956869978030101 ಸೋನಿಯಾ ಗಾಂಧಿ, ಪಕ್ಷದ ಸಂಸದ ರಾಹುಲ್ ಗಾಂಧಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಅವರ ಪತ್ನಿ ಕಲ್ಪನಾ ಸೊರೆನ್ ಸೇರಿದಂತೆ ಬಿಜೆಪಿ ನಾಯಕರ ಪೋಸ್ಟರ್ಗಳನ್ನು ರಾಂಚಿಯಲ್ಲಿ ಹಾಕಲಾಗಿದೆ. ಖರ್ಗೆ ಅವರಲ್ಲದೆ, ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್, ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್,…
ಕೋಲಾರ: ಮೋದಿಯವರು ಪ್ರಧಾನಿಯಾಗಿ ನಾಲಾಯಕ್ ಅಂತ ವಿದ್ಯಾವಂತ ಯುವ ಸಮೂಹ ತೀರ್ಮಾನಿಸಿದೆ. ಇಂಥಾ ನಾಲಾಯಕ್ ಗೆ ಮತ ಹಾಕ್ತೀರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಕೋಲಾರ (ಶಿಡ್ಳಘಟ್ಟ)ದ ರೋಡ್ ಶೋನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವಿನ ಜನ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತಯಾಚಿಸಿ ಈ ರೀತಿ ಪ್ರಶ್ನಿಸಿದರು. ನಿರುದ್ಯೋಗಿ ಯುವಕ/ಯುವತಿಯರಿಗೆ ಪಕೋಡ ಮಾರಿ ಅನ್ನೋಕೆ ಮೋದಿ ಪ್ರಧಾನಿಯೇ ಆಗಬೇಕಿತ್ತಾ. ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂತ ಇಡೀ ದೇಶದ ಯುವಕ, ಯುವತಿಯರಿಗೆ ನಂಬಿಸಿದರು. ಮೋದಿ ಮಾತನ್ನು ನಂಬಿ ಯುವ ಸಮೂಹ ಮೋದಿಯವರಿಗೆ ಮತ ಹಾಕಿದ್ರು. ಹೀಗೆ ಮತ ಹಾಕಿದವರೆಲ್ಲಾ ಡಿಗ್ರಿ ಮುಗಿಸಿದ ಮೇಲೆ ಕೆಲ್ಸ ಕೊಡಿ ಎಂದು ಕೇಳಿದರೆ, “ಹೋಗಿ ಪಕೋಡ ಮಾರಾಟ ಮಾಡಿ” ಅಂದ್ರು. ಇದು ದೇಶದ ಯುವ ಸಮೂಹಕ್ಕೆ ಮಾಡಿದ ಮಹಾದ್ರೋಹ ಅಲ್ಲವೇ? ಮಹಾನ್ ನಂಬಿಕೆ ದ್ರೋಹ ಅಲ್ಲವೇ? ಪಕೋಡ ಮಾರೋದನ್ನು ಹೇಳಿಕೊಡೋಕೆ ಇವರು ಪ್ರಧಾನಿ ಆಗಬೇಕಿತ್ತಾ? ಎಂದು ಪ್ರಶ್ನಿಸಿದರು. ಮೋದಿಯವರು ಪ್ರಧಾನಿಯಾಗಿ ನಾಲಾಯಕ್ ಅಂತ ವಿದ್ಯಾವಂತ…
ಬೆಂಗಳೂರು: ಏಪ್ರಿಲ್.23, 2024ರಂದು ಐತಿಹಾಸಿಕ ಕರಗ ಮಹೋತ್ಸವ ಬೆಂಗಳೂರಲ್ಲಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ. ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ಏಪ್ರಿಲ್.23ರಂದು ಬೆಂಗಳೂರು ಕರಗ ಉತ್ಸವ ನಡೆಯಲಿದೆ. ಅಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆಯಿಂದ ಕಟ್ಟೆಚ್ಚರ ವಹಿಸಲಾಗಿದೆ ಎಂದರು. ಕರಗ ಮಹೋತ್ಸವದ ವೇಳೆಯಲ್ಲಿ ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಕಾನೂನು ಬಾಹಿರ ಕೃತ್ಯ ಎಸಗೋ ಸಾಧ್ಯತೆ ಇದೆ. ಹೀಗಾಗಿ ನಗರದ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗುತ್ತಿದೆ. ಕಾನೂನು ಸುವ್ಯವಸ್ಥೆ ದೃಷ್ಠಿಯಿಂದ ಈ ಆದೇಶ ಮಾಡಿರೋದಾಗಿ ಹೇಳಿದ್ದಾರೆ. ಅಂದಹಾಗೇ ವಿಲ್ಸನ್ ಗಾರ್ಡನ್, ಎಸ್ ಜೆ ಪಾರ್ಕ್, ಹಲಸೂರು ಗೇಟ್ ಪೊಲೀಸ್ ಠಾಣೆ ಹಾಗೂ ಎಸ್ ಆರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐತಿಹಾಸಿಕ ಕರಗ ಮಹೋತ್ಸವದಂದು ಮದ್ಯ ಮಾರಾಟ ನಿಷೇಧ ಮಾಡಿ ಆದೇಶಿಸಿದ್ದಾರೆ. https://kannadanewsnow.com/kannada/sp-ashok-k-venkat-orders-deportation-of-31-notorious-rowdies-from-tumakuru-district/ https://kannadanewsnow.com/kannada/pm-modi-has-given-a-befitting-reply-to-karnataka-siddaramaiah-on-centre/
ತುಮಕೂರು: ಜಿಲ್ಲೆಯಲ್ಲಿ ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ತುಮಕೂರು ಜಿಲ್ಲೆಯಿಂದ 31 ಕುಖ್ಯಾತ ರೌಡಿಗಳನ್ನು ಗಡಿಪಾರು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ ವೆಂಕಟ್ ಆದೇಶಿಸಿದ್ದಾರೆ. ಈ ಕುರಿತಂತೆ ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಅವರು, ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಇದರ ಭಾಗವಾಗಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವಂತ 31 ರೌಡಿ ಶೀಟರ್ ಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ ಎಂದರು. ಇತ್ತೀಚೆಗೆ ಬೆಂಗಳೂರು ಜೈಲಿನಿಂದ ಬಿಡುಗಡೆಯಾಗಿದ್ದಂತ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಮೋದೂರು ಗ್ರಾಮದ ಕುಣಿಗಲ್ ಗಿರಿ ಸೇರಿದಂತೆ 31 ರೌಡಿ ಶೀಟರ್ ಗಳನ್ನು ಗಡಿಪಾರು ಮಾಡಲಾಗಿದೆ ಎಂದು ಹೇಳಿದರು. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ತುಮಕೂರಲ್ಲಿ ಬಿಗಿ ಬಂಧೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕ ವಲಯದಲ್ಲಿ ಅಶಾಂತಿ ಮೂಡಿಸುವಂತ 1200 ಮಂದಿಯ ಮೇಲೆ ಜಿಲ್ಲೆಯಲ್ಲಿ ವಿಶೇಷ ನಿಗಾ ವಹಿಸಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಬ್ಬ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಪೂರ್ವ ಸಿದ್ದತೆ ಇಲ್ಲದ ಗ್ಯಾರೆಂಟಿ ಹೆಸರಿನಲ್ಲಿ ರಾಜ್ಯವನ್ನು ದಿವಾಳಿ ಮಾಡಿದ್ದು, ಆರ್ಥಿಕ ವಿಚಾರದಲ್ಲಿ ಹತಾಶರಾಗಿ ತೀರ ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹತ್ತು ವರ್ಷದ ಎನ್ ಡಿ ಎ ಆಡಳಿತದಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ವಿಪತ್ತು ನಿರ್ವಹಣಾ ಮಾನದಂಡ ಬದಲಾಗಿದೆ. ಕೇಂದ್ರದಿಂದ ರಾಜ್ಯಕ್ಕೆ ಬರುವ ತೆರಿಗೆ ಪಾಲಿನ ಹಣ ಹೆಚ್ಚಿಗೆ ಬಂದಿದೆ. ಇದೆಲ್ಲವನ್ನೂ ರಾಜ್ಯ ಸರ್ಕಾರ ಮರೆಮಾಚಿದೆ. ತನ್ನ ತಪ್ಪು ಮುಚ್ಚಿಕೊಳ್ಳಲು ತೀರ ತಳಮಟ್ಟಕ್ಕೆ ಹೋಗಿ ಕಾಂಗ್ರೆಸ್ ನಡೆದುಕೊಳ್ಳುತ್ತಿದೆ. ಹಣಕಾಸು ವಿಚಾರದಲ್ಲಿ ಹತಾಶರಾಗಿ ಕಾಂಗ್ರೆಸ್ ನಾಯಕರಿ ತೀರ ಕೆಳಮಟ್ಟದ ಭಾಷೆ ಬಳಸುತ್ತಿದ್ದಾರೆ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಿಂದ ಕೇಂದ್ರಕ್ಕೆ ನಾಲ್ಕು ಲಕ್ಷಕೋಟಿ ತೆರಿಗೆ ಕೊಡುತ್ತೇವೆ ಎನ್ನುತ್ತಾರೆ. ಆದರೆ, ಕೇಂದ್ರದ ನೇರ ತೆರಿಗೆ, ರಾಜ್ಯಕ್ಕೆ ನೀಡುವ ತೆರಿಗೆ ಪಾಲಿಮ ಹಂಚಿಕೆ ಪಾಲಿನಲ್ಲಿ…
ಹುಬ್ಬಳ್ಳಿ: ಜಿಲ್ಲೆಯ ಜನರು ಬೆಚ್ಚಿ ಬೀಳುವಂತೆ ಮಾಡಿದ್ದಂತ ನೇಹಾ ಕೊಲೆ ಹತ್ಯೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಇಂತಹ ಪೊಲೀಸರಿಗೆ ಇಲಾಖೆಯಿಂದ ಕಾಪ್ ಆಫ್ ದಿ ಮಂತ್ ಅವಾರ್ಡ್ ನೀಡಿ ಗೌರವಿಸಲಾಗಿದೆ. ಹುಬ್ಬಳ್ಳಿಯ ಕಾರ್ಪೋರೇಟರ್ ಪುತ್ರಿ ನೇಹಾ ಕೊಲೆ ಪ್ರಕರಣ ಆರೋಪಿ ಪತ್ತೆಗಾಗಿ ಹುಬ್ಬಳ್ಳಿಯ ಉತ್ತರ ಉಪ ವಿಭಾಗದ ಎಸಿಪಿ ಶಿವಪ್ರಕಾಶ ನಾಯಕ್, ವಿದ್ಯಾನಗರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಡಿ.ಕೆ ಪಾಟೀಲ್ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಈ ವಿಶೇಷ ತಂಡವು ವಿವಿಧ ಹಂತಗಳಲ್ಲಿ ತನಿಖೆ ನಡೆಸಿ, ನೇಹಾಳನ್ನು ಕಾಲೇಜಿನಲ್ಲೇ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಂತ ಫಯಾಜ್ ಬಾಬು ಸಾಹೇಬ ಖೊಂದು ನಾಯಕ(23) ಎಂಬಾದನನ್ನು ಬೆನ್ನತ್ತಿ ಹಿಡಿದಿತ್ತು. ನೇಹಾಳನ್ನು ಹತ್ಯೆ ಮಾಡಿದ ಕೇವಲ ಒಂದೇ ಗಂಟೆಯಲ್ಲೇ ಆರೋಪಿಯನ್ನು ಹಿಡಿದು ಯಶಸ್ವಿಯಾಗಿದ್ದರು. ಬಂಧಿತ ಆರೋಪಿ ಫಯಾಜ್ ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ಯಶಸ್ಸು ಸಾಧಿಸಿದ್ದಂತ ಪೊಲೀಸ್ ತಂಡಕ್ಕೆ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರು ಪ್ರಶಂಸಿಸಿ, ಉತ್ತರ ಉಪ ವಿಭಾಗದ ಎಸಿಪಿ ಹಾಗೂ…
ಬೆಂಗಳೂರು : ಮೊನ್ನೆ ಹುಬ್ಬಳ್ಳಿಯಲ್ಲಿ ಹತ್ಯೆಯಾದ ನೇಹಾ ಹಿರೇಮಠ ಅವರ ತಂದೆ ನಿರಂಜನ ಹಿರೇಮಠ ಅವರಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭಾನುವಾರ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದರು. ಈ ದುರಂತದಿಂದ ನಮಗೂ ಆಘಾತವಾಗಿದೆ. ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ಆಗಿರುವ ದುಃಖದಲ್ಲಿ ನಾವೂ ಭಾಗಿ. ಸರಕಾರ ನಿಮ್ಮ ಜತೆಗಿದೆ. ತಪ್ಪಿತಸ್ಥರಿಗೆ ಶಿಕ್ಷೆ ಖಂಡಿತ. ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಸಹೋದರ ಡಿ ಕೆ ಸುರೇಶ್ ಅವರ ಪರ ಆನೇಕಲ್ ನಲ್ಲಿ ಭಾನುವಾರ ಮಧ್ಯಾಹ್ನ ಪ್ರಚಾರ ರಾಲಿ ಕೈಗೊಂಡಿದ್ದ ಸಂದರ್ಭದಲ್ಲಿ ಅವರು ನಿರಂಜನ ಹಿರೇಮಠ ಅವರಿಗೆ ದೂರವಾಣಿ ಕರೆ ಮಾಡಿದರು. ಪೂರ್ವನಿಗದಿತ ಚುನಾವಣೆ ಪ್ರಚಾರ ಕಾರ್ಯದಲ್ಲಿ ನಿರತನಾಗಿದ್ದ ಕಾರಣ ಹುಬ್ಬಳ್ಳಿಗೆ ಖುದ್ದು ಬರಲು ಆಗಲಿಲ್ಲ. ಚುನಾವಣೆ ಮುಗಿದ ನಂತರ ಖಂಡಿತವಾಗಿಯೂ ಬರುತ್ತೇನೆ. ಮಗಳ ಅಗಲಿಕೆಯಿಂದ ನಿಮಗೆ ಆಗಿರುವ ನೋವು ಎಂತಹದು ಎಂಬುದು ನನಗೆ ಅರ್ಥವಾಗುತ್ತದೆ. ನೋವು ಭರಿಸುವ…
ಬೆಂಗಳೂರು: ನಿನ್ನೆ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿಗೆ ಬಂದಿದ್ದ ಬಂದಿದ್ದ ಪ್ರಧಾನಿ ನರೇಂದ್ರ ಮೋದಿಯವರು ಮತ್ತು ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡರು ಪೈಪೋಟಿಗೆ ಬಿದ್ದವರಂತೆ ಸುಳ್ಳು ಹೇಳಿದ್ದಾರೆ. ಇವರಿಬ್ಬರ ಸುಳ್ಳುಗಳನ್ನು ಕೇಳುವ ಕರ್ಮ ಕರ್ನಾಟಕದ ಜನರಿಗೆ ಬಂದಿದೆ. ಮಾಧ್ಯಮಗಳೂ ಕೂಡ ಇವರು ಹೇಳಿದ್ದು ಸರಿಯೊ ತಪ್ಪೊ ಎಂದು ಪರಿಶೀಲನೆ ಮಾಡುವುದಿಲ್ಲ. ಈ ಇಬ್ಬರೂ ಎರಡೂ ಕಡೆ ಏನು ಹೇಳಿದ್ದಾರೆಂದರೆ, 1. ಮೋದಿ ಹೇಳಿದ ಒಂದನೇ ಸುಳ್ಳು 2014 ಕ್ಕೂ ಮೊದಲು ವಿವಿಧ ಮೂಲಗಳಿಂದ ತೆರಿಗೆ ಸಂಗ್ರಹ ಮಾಡುತ್ತಿದ್ದರು. ವಿಪರೀತ ಪರೋಕ್ಷ ತೆರಿಗೆಗಳನ್ನು ನಿಮ್ಮಿಂದ ವಸೂಲಿ ಮಾಡಲಾಗುತ್ತಿತ್ತು. ಇದೀಗ ಜಿಎಸ್‌ಟಿ ಬಂದ ಬಳಿಕ ನಿಮ್ಮ[ ಜನರ] ಮೇಲಿದ್ದ ತೆರಿಗೆ ಹೊರೆ ಕಡಿಮೆಯಾಗಿದೆ. ಸತ್ಯ ಏನು? ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ 100 ರೂಪಾಯಿ ತೆರಿಗೆ ಸಂಗ್ರಹಿಸಿದರೆ, 45.94 ರೂಪಾಯಿಗಳನ್ನು ಜನರಿಂದ ಹಾಗೂ 54.6 ರೂಪಾಯಿ ಶ್ರೀಮಂತರಿAದ ಸಂಗ್ರಹಿಸುತ್ತಿದ್ದರು [2012-13 ರ ದಾಖಲೆ ಪ್ರಕಾರ] ಜಿಎಸ್‌ಟಿ ಬಂದ ಮೇಲೆ 2020-21 ರ ದಾಖಲೆಗಳ ಪ್ರಕಾರ…