Author: kannadanewsnow09

ಕೆಎನ್ಎನ್ ಡಿಜಿಟಲ್ ಡೆಸ್ಕ್: ಹೆಚ್ಚಾಗಿ ಎಲ್ಲರೂ ಬಿಸಿ ನೀರಿನಲ್ಲಿ ಸ್ನಾನ ಮಾಡಲು ಬಯಸುತ್ತಾರೆ.ಆದರೆ ಬಿಸಿನೀರಿನಿಂದ ಸ್ನಾನ ಮಾಡುವಾಗ ಕೆಲವೊಂದು ಅಂಶಗಳ ಬಗ್ಗೆ ಕಾಳಜಿ ವಹಿಸಬೇಕು. ಇದರಿಂದ ಚರ್ಮಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆ ಇರುವುದಿಲ್ಲ. ಚರ್ಮದ ಶುಷ್ಕತೆಯ ಸಮಸ್ಯೆ ತಪ್ಪಿಸಲು ಬಿಸಿನೀರಿನ ಸ್ನಾನವನ್ನು ಹೇಗೆ ಮಾಡಬೇಕೆಂದು ತಿಳಿದುಕೊಳ್ಳಿ. ಬಿಸಿನೀರಿನ ಸ್ನಾನದ ಸರಿಯಾದ ಮಾರ್ಗ ತಿಳಿಯಿರಿ ಚಳಿಗಾಲದಲ್ಲಿ ಬಿಸಿ ನೀರಿನಿಂದ ಸ್ನಾನ ಮಾಡಿದಾಗ ಚರ್ಮ ಒಣಗಲು ಶುರುವಾಗುತ್ತದೆ. ಏಕೆಂದರೆ ಬಿಸಿನೀರು ಅದರಲ್ಲಿರುವ ನೈಸರ್ಗಿಕ ತೈಲಗಳನ್ನು ಚರ್ಮದಿಂದ ತೆಗೆದುಹಾಕುತ್ತದೆ. ಈ ಕಾರಣದಿಂದಾಗಿ, ಒಣ ಚರ್ಮದಲ್ಲಿ ತುರಿಕೆ ಸಮಸ್ಯೆಯು ಪ್ರಾರಂಭವಾಗುತ್ತದೆ. ಚರ್ಮದ ಮೇಲೆ ತುರಿಕೆ ಸಮಸ್ಯೆಯನ್ನು ತಪ್ಪಿಸಲು, ಸ್ನಾನ ಮಾಡುವ ಮೊದಲು ನೀವು ದೇಹಕ್ಕೆ ಎಣ್ಣೆಯನ್ನು ಅನ್ವಯಿಸಬಹುದು. ನೀವು ಸ್ನಾನಕ್ಕೆ ಹೋದಾಗಲೆಲ್ಲಾ ಸಾಸಿವೆ ಅಥವಾ ತೆಂಗಿನೆಣ್ಣೆಯಿಂದ ಇಡೀ ದೇಹವನ್ನು ಮಸಾಜ್ ಮಾಡಿ ,ಎಣ್ಣೆಯನ್ನು ಹಚ್ಚಿದ 10 ನಿಮಿಷಗಳ ನಂತರವೇ ಸ್ನಾನ ಮಾಡಿ. ಇದರಿಂದ ತ್ವಚೆಯ ಶುಷ್ಕತೆಯ ಸಮಸ್ಯೆ ಉಂಟಾಗುವುದಿಲ್ಲ. ಚಳಿಗಾಲದಲ್ಲಿ ಚರ್ಮವು ತುಂಬಾ ಒಣಗಿರುತ್ತದೆ. ಆದ್ದರಿಂದ, ಸ್ನಾನದ…

Read More

ಕೆೆೆನ್ಎನ್ ಡಿಜಿಟಲ್ ಡೆಸ್ಕ್ :  ಹಾಲು ಕುಡಿಯುವುದರಿಂದ ಶಕ್ತಿ ಬರುತ್ತದೆ. ಇದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ, ದಿನನಿತ್ಯ ಹಾಲು ಕುಡಿಯಬೇಕು. ಇದನ್ನು ನಾವೆಲ್ಲರೂ ಬಾಲ್ಯದಿಂದಲೂ ಕೇಳುತ್ತಲೇ ಇದ್ದೇವೆ. ದೇಹದಲ್ಲಿನ ಕ್ಯಾಲ್ಸಿಯಂ ಕೊರತೆಯನ್ನು ಹಾಲು ಪೂರೈಸುವ ಮೂಲಕ ಹಲವು ಪ್ರಯೋಜನಗಳಿವೆ. ಮಾರುಕಟ್ಟೆಯಲ್ಲಿ ಹಲವು ರೀತಿಯ ಪ್ಯಾಕ್ ಮಾಡಿದ ಹಾಲು ಲಭ್ಯವಿದ್ದು, ಪ್ರತಿ ಹಾಲಿನಲ್ಲಿ ವಿವಿಧ ರೀತಿಯ ಪೌಷ್ಟಿಕಾಂಶ ಮತ್ತು ಖನಿಜಾಂಶಗಳು ಕಂಡುಬರುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ಯಾವ ಹಾಲಿನಲ್ಲಿ ಏನು ಕಂಡುಬರುತ್ತದೆ ಮತ್ತು ಯಾವ ಹಾಲು ನಿಮಗೆ ಕುಡಿಯಲು ಸೂಕ್ತವಾಗಿದೆ ಎಂಬುದನ್ನು ನೀವು ತಿಳಿದುಕೊಳ್ಳುವುದು ಬಹಳ ಮುಖ್ಯ. ಪೂರ್ಣ ಕೆನೆಯುಕ್ತ ಹಾಲು ಹಾಲು ದಪ್ಪ ಕೆನೆ ಹೊಂದಿದೆ. ಈ ಹಾಲಿನಲ್ಲಿ ಎಲ್ಲಾ ಕೊಬ್ಬು ಇರುತ್ತದೆ. ಹಾನಿಕಾರಕ ಬ್ಯಾಕ್ಟೀರಿಯಾವನ್ನು ಕೊಲ್ಲಲು, ಈ ಹಾಲನ್ನು ಮೊದಲು ಪಾಶ್ಚರೀಕರಿಸಲಾಗುತ್ತದೆ. ಇದಕ್ಕಾಗಿ ವಿವಿಧ ತಂತ್ರಗಳನ್ನು ಬಳಸಲಾಗುತ್ತದೆ. ಫುಲ್ ಕ್ರೀಮ್ ಹಾಲು ಮಕ್ಕಳು, ಯುವಕರು ಮತ್ತು ಬಾಡಿ ಬಿಲ್ಡರ್‌ಗಳಿಗೆ ವಿಶೇಷವಾಗಿ ಪ್ರಯೋಜನಕಾರಿಯಾಗಿದೆ. ಅವರು ಈ ಹಾಲನ್ನು ಕುಡಿಯಬೇಕು. ಒಂದು ಲೋಟ ಪೂರ್ಣ…

Read More

ಬೆಂಗಳೂರು: ನಮ್ಮ ಬೇಡಿಕೆ ಈಡೇರಿಸೋವರೆಗೂ ಅನಿರ್ಧಿಷ್ಟಾವಧಿಯ ಮುಷ್ಕರ ಮುಂದುವರೆಯಲಿದೆ. ನಮ್ಮ ಮುಷ್ಕರ ಅಂತ್ಯಗೊಂಡಿಲ್ಲ. ಹಿಂಪಡೆದೂ ಇಲ್ಲ ಎಂಬುದಾಗಿ ಕರ್ನಾಟಕ ರಾಜ್ಯ ಪಿಡಿಓ ಅಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಹಾಗೂ ಹೋರಾಟ ಸಮಿತಿಯ ಅಧ್ಯಕ್ಷರಾದಂತ ರಾಜು ವಾರದ್ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಕನ್ನಡ ನ್ಯೂಸ್ ಜೊತೆಗೆ ಮಾತನಾಡಿದಂತ ಅವರು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ಧಿಷ್ಟಾವಧಿಯ ಮುಷ್ಕರವನ್ನು ಕರ್ನಾಟಕ ರಾಜ್ಯ ಪಿಡಿಓ ಅಧಿಕಾರಿಗಳ ಸಂಘದಿಂದ ಗ್ರಾಮ ಪಂಚಾಯ್ತಿ ಅಧಿಕಾರಿ, ನೌಕರರು ನಡೆಸಲಾಗುತ್ತಿತ್ತು. ಮುಷ್ಕರಕ್ಕೆ ಫ್ರೀಡಂ ಪಾರ್ಕ್ ನಲ್ಲಿ ಅನುಮತಿ ನಿರಾಕರಿಸಿದ ಕಾರಣ, ಜಿಲ್ಲಾ ಕೇಂದ್ರಗಳಲ್ಲಿ ಮುಷ್ಕರ ಮುಂದುವರೆಸಲಾಗುತ್ತಿದೆ ಎಂದರು. ಅಕ್ಟೋಬರ್.7, 2024ರಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆಯಲಿದೆ. ಜಿಲ್ಲೆಯ ಜಿಲ್ಲಾ ಪಂಚಾಯ್ತಿ ಕಚೇರಿಯ ಮುಂದೆ ಗ್ರಾಮ ಪಂಚಾಯ್ತಿ ಪಿಡಿಓ ಸೇರಿದಂತೆ ಎಲ್ಲಾ ನೌಕರರು ಬೇಡಿಕೆ ಈಡೇರಿಸುವಂತೆ ಅನಿರ್ಧಿಷ್ಟಾವಧಿಯ ಮುಷ್ಕರವನ್ನು ಮುಂದುವರೆಸಲಿದ್ದೇವೆ. ಅಕ್ಟೋಬರ್.10ರಂದು ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಸಭೆ ನಿಗದಿಯಾಗಿದೆ. ಆ ಸಭೆಯಲ್ಲಿ ನಮ್ಮ ಬೇಡಿಕೆ ಈಡೇರಿಸೋ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ರೇ, ಮುಷ್ಕರ…

Read More

ಶಿವಮೊಗ್ಗ: ಬಿಗ್ ಬಾಸ್ ಕನ್ನಡ 11ರ ಕಾರ್ಯಕ್ರಮ ಆರಂಭಗೊಂಡಿದೆ. ದೊಡ್ಮನೆಯಲ್ಲಿ ಸ್ಪರ್ಧಿಗಳ ಆಟಾಟೋಪ ಹೆಚ್ಚಾಗಿದೆ. ಲಾಯರ್ ಅಂತೂ ಬಹಿರಂಗವಾಗೇ ಸ್ಟೇಟ್ಮೆಂಟ್ ಕೊಟ್ಟು ಗಮನ ಸೆಳೆಯುತ್ತಿದ್ದಾರೆ. ಆದರೇ ಬಿಗ್ ಬಾಸ್ ಕನ್ನಡ 11ರ ಸ್ಪರ್ಧೆಗೆ ಸಂಕಷ್ಟ ಎದುರಾಗಿದೆ. ಸಾಗರದ ವಕೀಲರೊಬ್ಬರು ಸ್ಪರ್ಧಿ ಚೈತ್ರಾ ಕುಂದಾಪುರ ಮನೆಯಿಂದ ಹೊರ ಹಾಕುವಂತೆ ಲೀಗಲ್ ನೋಟಿಸ್ ಕಳುಹಿಸಿ ಎಚ್ಚರಿಕೆ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದ ವಕೀಲ ಭೋಜರಾಜ್ ಎಂಬುವರು ಕಲರ್ಸ್ ಕನ್ನಡ ವಾಹಿನಿಯ ಪ್ರೊಡ್ಯೂಸರ್, ಎಡಿಟರ್ ಅವರಿಗೆ ಇ-ಮೇಲ್ ಮೂಲಕ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಅದರಲ್ಲಿ ಚೈತ್ರಾ ಕುಂದಾಪುರ ಅವರ ವಿರುದ್ಧ ಗಲಾಟೆ, ದೊಂಬಿ, ಜೀವ ಬೆದರಿಕೆ ಹಾಗೂ ವಂಚನೆ ಮೊದಲಾದ ಪ್ರಕರಣಗಳು ದಾಖಲಾಗಿದ್ದಾವೆ. ಅವರು ಅಪರಾಧ ಹಿನ್ನಲೆಯುಳ್ಳ ವ್ಯಕ್ತಿಯಾಗಿದ್ದಾರೆ. ಇಂತಹವರನ್ನು ಬಿಗ್ ಬಾಸ್ ಕನ್ನಡ 11ರ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕೊಟ್ಟಿರುವುದು ಸರಿಯಲ್ಲ ಎಂಬುದಾಗಿ ತಿಳಿಸಿದ್ದಾರೆ. ಲೀಗಲ್ ನೋಟಿಸ್ ನಲ್ಲಿ ಏನಿದೆ.? ಕಲರ್ಸ್ ಕನ್ನಡ ವಾಹಿನಿಯಲ್ಲಿ 29-ಸೆಪ್ಟೆಂಬರ್-2024 ರಂದು ಪ್ರಸಾರವಾಗಬೇಕಿದ್ದ ಬಿಗ್ ಬಾಸ್ ಸೀಸನ್ 11…

Read More

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯ್ತಿ ನೌಕರರು ಅನಿರ್ಧಿಷ್ಟಾವಧಿಯ ಮುಷ್ಕರ ನಡೆಸುತ್ತಿದ್ದರು. ಇವರೊಂದಿಗೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಸಭೆ ನಡೆಸಿ, ಬೇಡಿಕೆ ಈಡೇರಿಕೆಯ ಬಗ್ಗೆ ಸಕಾರಾತ್ಮಕವಾಗಿಯೇ ಸ್ಪಂದಿಸಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯದ ಗ್ರಾಮ ಪಂಚಾಯ್ತಿ ನೌಕರರ ಮುಷ್ಕರ ವಾಪಾಸ್ ಪಡೆಯಲಾಗಿದ್ದು, ನಾಳೆಯಿಂದ ಕೆಲಸಕ್ಕೆ ಹಾಜರಾಗಲಿದ್ದಾರೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್ ಅವರು ಮಾಹಿತಿ ನೀಡಿದ್ದು, ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರ ವೃಂದದ ಸಂಘಗಳ ಎಲ್ಲ ಪ್ರತಿಭಟನಾ ನಿರತರು ತಮ್ಮ ತಮ್ಮ ಜಿಲ್ಲೆಗಳಿಗೆ ಹಿಂದಿರುಗಿದ್ದು ಸಾರ್ವಜನಿಕರಿಗೆ ತೊಂದರೆಯಾಗದಂತೆ ನಾಳೆಯಿಂದ ತಮ್ಮ ಕರ್ತವ್ಯಗಳ ಮೇಲೆ ಹಾಜರಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಈ ಸಂಬಂಧ ಈ ತಿಂಗಳ ಆಗಸ್ಟ್.10ರಂದು ಬೆಳಿಗ್ಗೆ 11 ಗಂಟೆಗೆ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ…

Read More

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ನಿಯಂತ್ರಿಸಲು ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿ ರಾಜ್ಯದ ಮತ್ತೊಂದು ಆನೆ ಸಂರಕ್ಷಣೆ, ಆರೈಕೆ ಮತ್ತು ಪುನರ್ವಸತಿ ಶಿಬಿರ ಆರಂಭಿಸಲಾಗುವುದು ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಭಾಗದ ಕಾಡಾನೆ ಹಾವಳಿ ನಿಯಂತ್ರಿಸಲು ಭದ್ರಾ ಅಭಯಾರಣ್ಯದಲ್ಲಿ ಒಂದು ಆನೆ ಶಿಬಿರ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಸಭಾಂಗಣದಲ್ಲಿಂದು ನಡೆದ ಭದ್ರಾ ಹುಲಿ ಸಂರಕ್ಷಿತ ಪ್ರದೇಶ ರಜತ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ವನ್ಯಜೀವಿ ಮತ್ತು ಮಾನವ ಸಂಘರ್ಷ ಹೆಚ್ಚಾಗುತ್ತಿದ್ದು, ಆನೆಗಳಿಂದ ಹೆಚ್ಚಿನ ಜೀವಹಾನಿ ಮತ್ತು ಬೆಳೆ ಹಾನಿ ಸಂಭವಿಸುತ್ತಿದೆ. ಇದನ್ನು ನಿಯಂತ್ರಿಸಲು 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆ ವಿಹಾರ ಧಾಮ ಅಂದರೆ ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್ ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸುವಂತೆ ವನ್ಯಜೀವಿ ಪರಿಪಾಲಕರಿಗೆ ಸೂಚನೆ ನೀಡಿರುವುದಾಗಿ ಹೇಳಿದರು. ಈ ಆನೆ ವಿಹಾರ ಧಾಮದ ಸುಮಾರು 5 ಸಾವಿರ ಎಕರೆ ಪ್ರದೇಶದಲ್ಲಿ ಆನೆಗಳಿಗೆ…

Read More

ಬೆಂಗಳೂರು: ಆನೆಗಳ ಹಾವಳಿ ನಿಯಂತ್ರಣಕ್ಕೆ ಕಾಡಿನ ಅಂಚಿನಲ್ಲಿ 700 ರಿಂದ 800 ಕಿ.ಮೀ. ರೈಲು ಕಂಬಿ ಬ್ಯಾರಿಕೇಡ್‌ ನಿರ್ಮಿಸಬೇಕೆಂಬ ಬೇಡಿಕೆ ಇದೆ. ಈವರೆಗೆ 300 ಕಿ.ಮೀ. ಬ್ಯಾರಿಕೇಡ್‌ ನಿರ್ಮಿಸಲಾಗಿದೆ. ಈ ಬಾರಿ 110 ಕಿ.ಮೀ. ಬ್ಯಾರಿಕೇಡ್‌ ನಿರ್ಮಾಣಕ್ಕೆ ಚಾಲನೆ ನೀಡಿದ್ದೇವೆ. ಬರುವ ಎರಡು ವರ್ಷದಲ್ಲಿ ಇನ್ನೂ 200 ರಿಂದ 300 ಕಿ.ಮೀ. ಬ್ಯಾರಿಕೇಡ್‌ ನಿರ್ಮಿಸಲಾಗುವುದು ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದ್ದಾರೆ. ರಾಜ್ಯದಲ್ಲಿ ವನ್ಯಜೀವಿ ಮತ್ತು ಮಾನವ ಸಂಘರ್ಷ ಹೆಚ್ಚಾಗುತ್ತಿದ್ದು, ಆನೆಗಳಿಂದ ಹೆಚ್ಚಿನ ಜೀವಹಾನಿ ಮತ್ತು ಬೆಳೆ ಹಾನಿ ಸಂಭವಿಸುತ್ತಿದೆ. ಇದನ್ನು ನಿಯಂತ್ರಿಸಲು 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆ ವಿಹಾರ ಧಾಮ ಅಂದರೆ ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್ ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸುವಂತೆ ವನ್ಯಜೀವಿ ಪರಿಪಾಲಕರಿಗೆ ಸೂಚನೆ ನೀಡಿರುವುದಾಗಿ ಹೇಳಿದರು. ಈ ಆನೆ ವಿಹಾರ ಧಾಮದ ಸುಮಾರು 5 ಸಾವಿರ ಎಕರೆ ಪ್ರದೇಶದಲ್ಲಿ ಆನೆಗಳಿಗೆ ಇಷ್ಟವಾದ ಬಿದಿರು, ಹಲಸು, ಹುಲ್ಲು ಇತ್ಯಾದಿ ಬೆಳೆಸಲಾಗುವುದು ಮತ್ತು ಸುತ್ತಲೂ ಬ್ಯಾರಿಕೇಡ್ ಅಳವಡಿಸಿ…

Read More

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಜುಲೈ ಮತ್ತು ಆಗಸ್ಟ್‌ ತಿಂಗಳ ಹಣವನ್ನು ಎರಡು ಕಂತಿನಲ್ಲಿ ಬಿಡುಗಡೆ ಮಾಡಲಾಗಿದ್ದು, ಅಕ್ಟೋಬರ್‌ 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಹಣ ಜಮೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ. ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇದೇ 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಹೇಳಿದ್ದಾರೆ. ಈ ಲಕ್ಷ್ಮೀ ಹೆಬ್ಬಾಳಕರ್ ಹಿಡಿದ ಕೆಲಸವನ್ನು ಮಾಡದೇ ಬಿಡುವುದಿಲ್ಲ ಎಂದು ಮೊನ್ನೆ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಮಾರಂಭದಲ್ಲಿ ಸ್ವತಃ ಮುಖ್ಯಮಂತ್ರಿಗಳೇ ನನ್ನ ಬಗ್ಗೆ ಹೇಳಿದ್ದಾರೆ. ಈ ಹೆಣ್ ಮಗಳು ತುಂಬಾ ಕಿಲಾಡಿ, ಹಠ ಮಾಡಿ‌ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ‌ ತಂದಿದ್ದೇ ಲಕ್ಷ್ಮೀ ಹೆಬ್ಬಾಳಕರ್ ಅಂತ ಸಿಎಂ ಸಿದ್ದರಾಮಯ್ಯ ನನ್ನ ಬಗ್ಗೆ ಹೇಳಿದ್ದಾರೆ. ಹೀಗಾಗಿ ಗೃಹಲಕ್ಷ್ಮಿ ಯೋಜನೆ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಪಟ್ಟು ಹಿಡಿದು…

Read More

ಬೆಂಗಳೂರು: ಹಳದಿ ಹಾಗೂ ಹಸಿರು ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಆರಂಭಿಸಲಾಗಿದೆ. ಬೆಂಗಳೂರಿನ ಜನತೆಗೆ ಉತ್ತಮ ಸೇವೆಯನ್ನು ನಮ್ಮ ಮೆಟ್ರೋ ನೀಡುತ್ತಿದೆ. ಈ ಬೆನ್ನಲ್ಲೇ ಶೀಘ್ರದಲ್ಲೇ ಬೆಂಗಳೂರಿಗರಿಗೆ ಗುಡ್ ನ್ಯೂಸ್ ಎನ್ನುವಂತೆ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ರೈಲು ಸಂಚಾರ ಆರಂಭಗೊಳ್ಳಲಿದೆ. ಹಳದಿ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಆರಂಭದ ಬಗ್ಗೆ ಬಿಎಂಆಆರ್ ಸಿಎಲ್ ಬಿಗ್ ಅಪ್ ಡೇಟ್ ನೀಡಿದ್ದು, ನಮ್ಮ ಮೆಟ್ರೋ ರೀಚ್-5 (ಹಳದಿ ಮಾರ್ಗ) ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರದವರೆಗಿನ ಪಗತಿಯ ಸ್ಥಿತಿ ಸಿವಿಲ್ / ಸಿಸ್ಟಂ ಕಾಮಗಾರಿಗಳು ಗಣನೀಯವಾಗಿ ಪೂರ್ಣಗೊಂಡಿವೆ ಎಂದಿದೆ. ಪ್ರಗತಿಯ ಯೋಜನೆ • ಪ್ರೋಟೋ-ಟೈಪ್ ರೈಲಿನ ಪರೀಕ್ಷೆ ಪ್ರಗತಿಯಲ್ಲಿದೆ. • ರೈಲ್ವೆ ಮಂಡಳಿಯು ಟ್ರಾಕ್ಷನ್‌ಗೆ ಸಂಬಂಧಿಸಿದಂತೆ ತಾಂತ್ರಿಕ ಮಂಜೂರಾತಿ ನೀಡಿದೆ. • ಸಿಗ್ನಲಿಂಗ್ ಸಿಸ್ಮಮ್ ಮತ್ತು ರೋಲಿಂಗ್ ಸ್ಟಾಕ್ ಪೂರ್ವಭಾವಿ ಹಂತದಲ್ಲಿದೆ. ರೋಲಿಂಗ್ ಸ್ಕ್ಯಾಕ್ ಲಭ್ಯತೆ • ನವೆಂಬರ್-ಡಿಸೆಂಬರ್ 2024ರ ವೇಳೆಗೆ 3 ರೈಲು ಸೆಟ್‌ಗಳು ಲಭ್ಯವಿರಲಿದೆ • ಜನವರಿ 2025 ರ ವೇಳೆಗೆ ಈ ಮಾರ್ಗದಲ್ಲಿ…

Read More

ಬೆಂಗಳೂರು: ವೈದ್ಯಕೀಯ ವ್ಯಾಸಂಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಎನ್ನುವಂತೆ, ಪಿಜಿನೀಟ್-2024ರ ವೈದ್ಯಕೀಯ ನೋಂದಣಿ ದಿನಾಂಕ ವಿಸ್ತರಣೆಯನ್ನು ಮಾಡಿ, ಕೆಇಎ ಆದೇಶಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಕರ್ನಾಟಕದಲ್ಲಿನ ಸಿಜಿ ವೈದ್ಯಕೀಯ, ಶೋರ್ಸುಗಳ ಪ್ರವೇಶಕ್ಕಾಗಿ ಪಿಜಿನೀಟ್-2014 1 ಪ್ರಾಧಿಕಾರದಲ್ಲಿ ಆನ್‌ಲೈನ್ ಮೂಲಕ ನೋಂದಣಿ ಮಾಡಲು ದಿನಾಂಕವನ್ನು 07-10-2024 ರ ಮಧ್ಯಾಹ್ನ 2.00 ರ ವರೆಗೆ ವಿಸ್ತರಣೆ ಮಾಡಲಾಗಿದ್ದು, ನೋಂದಣಿ ಮಾಡದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸುವ ಶಕ್ತಿಯೆಯನ್ನು ಪೂರ್ಣಗೊಳಿಸಬಹುದಾಗಿದೆ. ಶುಲ್ಕ ಪಾವತಿಸದಿರುವ ಅಭ್ಯರ್ಥಿಗಳೂ ಸಹ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದಾಗಿದೆ ಎಂದಿದೆ. ನೋಂದಣಿ ಮಾಡಲು ಅಥವಾ ಶುಲ್ಕ ಪಾವತಿಸಲು ಮತ್ತೊಮ್ಮೆ ದಿನಾಂಶವನ್ನು ವಿಸ್ತರಿಸುವುದಿಲ್ಲ ಎಂಬುದಾಗಿ ತಿಳಿಸಿದೆ. ಸೂಚನೆ: ಎನ್‌ಎಮ್‌ಸಿ ಅವರ ಸೂಚನೆ ದಿನಾಂಕ 24-07-2023 ರ ಅನ್ವಯ ಸ್ಟೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಸೇರಿದಂತೆ ಎಲ್ಲಾ ಸುತ್ತಿನ ಸೀಟು ಹಂಚಿಕೆಯನ್ನು ಆನ್‌ಲೈನ್ ಮೂಲಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ…

Read More