Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಹಾವೇರಿ ಜಿಲ್ಲೆಗೆ ಅವಶ್ಯವಿರುವ ಗೊಬ್ಬರವನ್ನು ಪೂರೈಸಲು ಅಗತ್ಯ ಕ್ರಮ ವಹಿಸುವಂತೆ ಕೃಷಿ ಇಲಾಖೆಯ ಆಯುಕ್ತರಿಗೆ ಸೂಚನೆಗಳನ್ನು ನೀಡಿರುವುದಾಗಿ ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ ಅವರು ಮಾಜಿ ಸಿಎಂ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ತಿಳಿಸಿದ್ದಾರೆ. ಇತ್ತೀಚೆಗೆ ಬೀಳುತ್ತಿರುವ ಮುಂಗಾರು ಮಳೆಯಿಂದ ರೈತರು ಉತ್ಸುಕರಾಗಿ ಬಿತ್ತನೆ ಮಾಡಲು ಸಿದ್ದರಾಗಿದ್ದು, ಅದಕ್ಕಾಗಿ ಗೊಬ್ಬರ ಪಡೆದುಕೊಳ್ಳಲು ಮುಂದೆ ಬಂದ ಸಂದರ್ಭದಲ್ಲಿ ಹಾವೇರಿ ಜಿಲ್ಲೆಯಲ್ಲಿ ಗೊಬ್ಬರ ಕಡಿಮೆ ಇದ್ದು, ನೂಕು-ನುಗ್ಗಲು ಪರಿಸ್ಥಿತಿ ಉಂಟಾಗಿರುವುದಾಗಿ, ಹಾವೇರಿ ಜಿಲ್ಲೆಗೆ ಸುಮಾರು 35,000 ಮೆಟ್ರಿಕ್ ಟನ್ ಮುಂಗಾರು ಹಂಗಾಮಿನಲ್ಲಿ ಡಿ.ಎ.ಪಿ.ಗೊಬ್ಬರ ಅವಶ್ಯಕತೆ ಇದ್ದು, ಕೇವಲ 6.500 ಮೆಟ್ರಿಕ್ ಟನ್ ಮಾತ್ರ ಸರಬರಾಜಾಗಿರುವುದರಿಂದ ಬಾಕಿ ಇರುವ 29,000 ಮೆಟ್ರಿಕ್ ಟನ್ ಗೊಬ್ಬರವನ್ನು ಹಾವೇರಿ ಜಿಲ್ಲೆಗೆ ಸರಬರಾಜು ಮಾಡುವಂತೆ ಹಾಗೂ ಇದೇ ರೀತಿ ಯೂರಿಯಾ 65000 ಮೆಟ್ರಿಕ್ ಟನ್ ಮತ್ತು ಕಾಂಪ್ಲೆಕ್ಸ್ 38000 ಮೆಟ್ರಿಕ್ ಟನ್ ಸಹ ಸರಬರಾಜು ಮಾಡಲು ಕ್ರಮ ಜರುಗಿಸುವಂತೆ ಜುಲೈ 22 ರಂದು ಮಾಜಿ…
ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಎಸ್ಐಟಿ ವಶದಲ್ಲಿ ತನಿಖೆಗೆ ಒಳಗಾಗುತ್ತಿರುವಂತ ಪ್ರಜ್ವಲ್ ರೇವಣ್ಣ ಅವರನ್ನು, ಜೂನ್.10ರವರೆಗೆ ಮತ್ತಷ್ಟು ತನಿಖೆಗಾಗಿ ಎಸ್ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಮಾಜಿ ಸಂಸದ ಪ್ರಜಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣ ಬೆಳಕಿಗೆ ಬಂದ ನಂತ್ರ, ವಿದೇಶಕ್ಕೆ ಹಾರಿ ತಲೆ ಮರೆಸಿಕೊಂಡಿದ್ದರು. ಕೆಲ ದಿನಗಳ ಹಿಂದೆ ಜರ್ಮನಿಯ ಮ್ಯೂನಿಚ್ ನಿಂದ ಬೆಂಗಳೂರಿಗೆ ಆಗಮಿಸಿದ್ದಂತ ಅವರನ್ನು ಪ್ರಕರಣದ ತನಿಖೆ ನಡೆಸುತ್ತಿದ್ದಂತ ಎಸ್ಐಟಿ ಏರ್ ಪೋರ್ಟ್ ನಲ್ಲೇ ತಡರಾತ್ರಿ ಬಂಧಿಸಿತ್ತು. ಬಂಧನಕ್ಕೆ ಒಳಗಾಗಿದ್ದಂತ ಪ್ರಜ್ವಲ್ ರೇವಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಹೆಚ್ಚಿನ ವಿಚಾರಣೆಗಾಗಿ ಎಸ್ಐಟಿ ವಶಕ್ಕೆ ನೀಡಿತ್ತು. ಇಂದಿಗೆ ಅವರ ಎಸ್ಐಟಿ ಕಸ್ಟಡಿ ಅವಧಿ ಮುಕ್ತಾಯಗೊಂಡಿತ್ತು. ಈ ಹಿನ್ನಲೆಯಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಕೋರಿದ್ದರು. ಈ ಹಿನ್ನಲೆಯಲ್ಲಿ ಜೂನ್.10ರವರೆಗೆ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಕಸ್ಟಡಿಗೆ…
ಬೆಂಗಳೂರು: ನಾನು ಸಚಿವ ಸ್ಥಾನಕ್ಕೆ ಇನ್ನೂ ರಾಜೀನಾಮೆ ನೀಡಿಲ್ಲ ಎಂಬುದಾಗಿ ಸಚಿವ ಬಿ.ನಾಗೇಂದ್ರ ಅವರೇ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ನಾನು ರಾಜೀನಾಮೆ ನೀಡಿಲ್ಲ ಎಂಬುದಾಗಿ ಯುವತನ ಸೇವೆ, ಕ್ರೀಡೆ ಮತ್ತು ಪರಿಶಿಷ್ಟ ಕಲ್ಯಾಣಗಳ ಸಚಿವ ಬಿ.ನಾಗೇಂದ್ರ ಅವರು ಸ್ಪಷ್ಟ ಪಡಿಸಿದ್ದಾರೆ. ಇದೇ ಸಂದರ್ಭದಲ್ಲಿ ನಾನು ಸಂಜೆ 4.30ಕ್ಕೆ ಪತ್ರಿಕಾ ಘೋಷ್ಠಿಯನ್ನು ನಡೆಸಲಿದ್ದೇನೆ. ಅಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ ಸಂಬಂಧ ಮಾಹಿತಿ ಬಿಚ್ಚಿಡಲಿದ್ದೇನೆ ಎಂಬುದಾಗಿ ತಿಳಿಸಿರೋದಾಗಿ ತಿಳಿದು ಬಂದಿದೆ. ಅಂದಹಾಗೇ ಇಂದು ಸಿಎಂ ಸಿದ್ಧರಾಮಯ್ಯ ಅವರ ಗೃಹ ಕಚೇರಿಗೆ ಕೃಷ್ಣಾಗೆ ತೆರಳಿದ್ದರು. ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿತ್ತು. ಇದನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ ಎಂಬುದಾಗಿ ತಿಳಿಸಿದ್ದರು. ಈ ಬೆನ್ನಲ್ಲೇ ಇನ್ನೂ ನಾನು ರಾಜೀನಾಮೆ ನೀಡಿಲ್ಲ ಅಂತ ಬಿ.ನಾಗೇಂದ್ರ ಸ್ಪಷ್ಟ ಪಡಿಸಿದ್ದಾರೆ. https://kannadanewsnow.com/kannada/good-news-for-mobile-users-the-phone-will-be-charged-in-just-60-seconds/ https://kannadanewsnow.com/kannada/readers-should-note-this-is-the-last-day-to-update-your-aadhaar-card-for-free/
ನವದೆಹಲಿ: ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಎನ್ ಚಂದ್ರಬಾಬು ನಾಯ್ಡು ಅವರ ಪ್ರಮಾಣವಚನವನ್ನು ಜೂನ್ 12 ಕ್ಕೆ ಮುಂದೂಡಲಾಗಿದೆ ಎಂದು ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಮೂಲಗಳು ತಿಳಿಸಿವೆ. ಜೂನ್ 8 ರಂದು ನಿಗದಿಯಾಗಿರುವ ಪ್ರಧಾನಿ ಮೋದಿ ಮತ್ತು ಎನ್ಡಿಎ ಕ್ಯಾಬಿನೆಟ್ ಪ್ರಮಾಣವಚನ ಸಮಾರಂಭದಿಂದಾಗಿ ನಾಯ್ಡು ಅವರ ಸಮಾರಂಭವನ್ನು ಮುಂದೂಡಲಾಗಿದೆ ಎಂದು ವರದಿಗಳು ತಿಳಿಸಿವೆ. ಪ್ರಧಾನಿ ಮತ್ತು ಇತರ ಹಿರಿಯ ಎನ್ಡಿಎ ನಾಯಕರು ಮೆಗಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆಯಿದೆ. ಜೂನ್ 6 ರ ಗುರುವಾರ, ನಾಯ್ಡು ವಿಜಯವಾಡದಲ್ಲಿ ಎಲ್ಲಾ ಸಂಸದರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಮತ್ತು ಪ್ರಮುಖ ಖಾತೆಗಳ ಬಗ್ಗೆ ಚರ್ಚಿಸಲಿದ್ದಾರೆ. ನಾಯ್ಡು ಅವರು ಬುಧವಾರ ಎನ್ಡಿಎ ಮತ್ತು ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲವನ್ನು ತೋರಿಸಿದ ಒಂದು ದಿನದ ನಂತರ ಮತ್ತು ಬುಧವಾರ ದೆಹಲಿಯಲ್ಲಿ ಅವರನ್ನು ಭೇಟಿಯಾದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. “ನಮ್ಮ ದೇಶದ ಜನರು ನೀಡಿದ ಆದೇಶವನ್ನು ಗೌರವಿಸಿ, ಇಂದು ದೆಹಲಿಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಎನ್ಡಿಎ ಪಾಲುದಾರರು ನರೇಂದ್ರ…
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಪಕ್ಷಕ್ಕೆ ಮುಜುಗರವಾಗಬಾರದೆಂದು ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಿದ್ದಾರೆ ಎಂಬುದಾಗಿ ತಿಳಿಸಿದರು. ಸಿಎಂ ಸಿದ್ಧರಾಮಯ್ಯ ಭೇಟಿಯಾಗಿ ರಾಜೀನಾಮೆ ನೀಡಿದ್ದಾರೆ. ಅವರು ಈಗಾಗಲೇ ನಾನು ಅಕ್ರಮದಲ್ಲಿ ಭಾಗಿಯಾಗಿಲ್ಲ ಅಂತ ಸ್ಪಷ್ಟ ಪಡಿಸಿದ್ದರು. ಇದರ ನಡುವೆ ಪಕ್ಷಕ್ಕೆ ಮುಜುಗರ ಆಗಬಾರದು, ಧಕ್ಕೆಯಾಗಬಾರದು ಎನ್ನುವ ಕಾರಣಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ ಎಂದರು. https://kannadanewsnow.com/kannada/b-nagendra-resigns-as-minister/ https://kannadanewsnow.com/kannada/good-news-for-mobile-users-the-phone-will-be-charged-in-just-60-seconds/
ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಒಂದು ಒಂದು ವರ್ಷ ಕಳೆದಿದೆ. ಇದೇ ಹೊತ್ತಿನಲ್ಲೇ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನಗೊಂಡಿದೆ. ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಗೆ ಆಗಮಿಸಿದಂತ ಸಚಿವ ಬಿ.ನಾಗೇಂದ್ರ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ನೀಡಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಹಗರಣದ ಬಗ್ಗೆ ಕೆಲಕಾಲ ಸಿಎಂ ಜೊತೆಗೆ ಚರ್ಚೆ ನಡೆಸಿದರು. ಆ ಬಳಿಕ ಈ ಪ್ರಕರಣದ ಹೊಣೆ ಹೊತ್ತಂತ ಬಿ.ನಾಗೇಂದ್ರ ಅವರು ಯುವ ಸಬಲೀಕರಣ, ಕ್ರೀಡೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅಂದಹಾಗೇ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿದೆ. ತನಿಖೆ ನಡೆಸುತ್ತಿರುವಂತ ಎಸ್ಐಟಿ ಅಧಿಕಾರಿಗಳು ಎಂಡಿ ಸೇರಿದಂತೆ ಹಲವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಏನಿದು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ? ಬೆಂಗಳೂರಿನ ವಸಂತ ನಗರದಲ್ಲಿರುವ ಮಹರ್ಷಿ…
ಬೆಂಗಳೂರು: ಆಮ್ ಆದ್ಮಿ ಪಾರ್ಟಿ ಕರ್ನಾಟಕದ ಉಸ್ತುವಾರಿ ದಿಲೀಪ್ ಪಾಂಡೆ, ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಹಾಗೂ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಅವರೊಂದಿಗೆ ಜೂನ್ 8 ರಂದು ಶನಿವಾರ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸಹಾನಿ ತಿಳಿಸಿದ್ದಾರೆ. ನಗರದ ಅಲುಮ್ನಿ ಅಸೋಸಿಯೇಷನ್ ಯುವಿಸಿಇ ಇಲ್ಲಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಪ್ರಸ್ತುತ ರಾಜಕೀಯ ಬೆಳವಣಿಗೆ ಹಾಗೂ ಕರ್ನಾಟಕದಲ್ಲಿ ಪಕ್ಷದ ಮುಂದಿನ ರೂಪು ರೇಷೆ ಕುರಿತಾಗಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಆಮ್ ಆದ್ಮಿ ಪಾರ್ಟಿ ರಾಜ್ಯ ಕಾರ್ಯಕಾರಿಣಿ ಸದಸ್ಯರು, ರಾಜ್ಯ ಸಮಿತಿಯ ಎಲ್ಲ ಪದಾಧಿಕಾರಿಗಳು, ಎಲ್ಲ ಘಟಕದ ರಾಜ್ಯಾಧ್ಯಕ್ಷರು, ಎಲ್ಲಾ ಜಿಲ್ಲೆಯ ಜಿಲ್ಲಾಧ್ಯಕ್ಷರು ಭಾಗವಹಿಸಲಿದ್ದು, ಪಕ್ಷದ ಬಲವರ್ಧನೆ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹೇಳಿದರು. https://kannadanewsnow.com/kannada/7-year-old-boy-dies-in-bengaluru-after-doctors-fail-to-do-so/ https://kannadanewsnow.com/kannada/good-news-for-mobile-users-the-phone-will-be-charged-in-just-60-seconds/
ಬೆಂಗಳೂರು: ಸಂಪಂಗಿ ರಾಮನಗರದಲ್ಲಿ ವೈದ್ಯರೊಬ್ಬರು ಮಾಡಿದಂತ ಎಡವಟ್ಟಿಗೆ 7 ವರ್ಷದ ಬಾಲಕನೊಬ್ಬ ಧಾರುಣವಾಗಿ ಸಾವನ್ನಪ್ಪಿದ್ದಂತ ಘಟನೆ ನಡೆದಿದೆ. ಬೆಂಗಳೂರಿನ ಸಂಪಂಗಿ ರಾಮನಗರದ 7 ವರ್ಷದ ಬಾಲಕ ಆಡನ್ ಮೈಕಲ್ ಎಂಬಾತನಿಗೆ ಊಟ ಮಾಡುವಂತ ಸಂದರ್ಭದಲ್ಲಿ ಗಂಟಲು ನೋವು ಕಾಣಿಸಿಕೊಂಡಿತ್ತು. ಈ ಹಿನ್ನಲೆಯಲ್ಲಿ ಸಿಂಧ್ಯಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆಡನ್ ಮೈಕಲ್ ಪರೀಕ್ಷೆ ಮಾಡಿದಂತ ವೈದ್ಯರು, ಆಪರೇಷನ್ ಮಾಡಬೇಕು ಅಂತ ಹೇಳಿದ್ದಾರೆ. ಅದಕ್ಕೆ ಕುಟುಂಬಸ್ಥರು ಒಪ್ಪಿಗೆ ಸೂಚಿಸಿದ್ದಾರೆ. ಸಿಂಧ್ಯಾ ಆಸ್ಪತ್ರೆಯ ಡಾ.ಶ್ವೇತಾ ಪೈ ಎಂಬುವರು ಬಾಲಕ ಆಡನ್ ಮೈಕಲ್ ಗೆ ಅನೆಸ್ತೇಷಿಯಾ ನೀಡಿದ್ದಾರೆ. ಹೀಗೆ ನೀಡಿದಂತ ಕೆಲವೇ ನಿಮಿಷದಲ್ಲಿ ಬಾಲಕ ಸಾವನ್ನಪ್ಪಿದ್ದಾನೆ. ಇದನ್ನು ಮುಚ್ಚಿಕೊಳ್ಳೋದಕ್ಕೆ ಬಾಲಕನಿಗೆ ಹೃದಯ ಸಂಬಂಧಿ ಸಮಸ್ಯೆ ಇದೆ. ಅದು ಇದು ಅಂತ ಕಥೆ ಹೊಡೆದಿದ್ದಾರೆ. ಅನುಮಾನಗೊಂಡ ಪೋಷಕರು, ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲಿಸಿದಾಗ ಬಾಲಕ ಅನೆಸ್ತೇಷಿಯಾ ಓವರ್ ಡೋಸ್ ಆಗಿ ಸಾವನ್ನಪ್ಪಿದ್ದಾನೆ ಎನ್ನಲಾಗುತ್ತಿದೆ. ಸದ್ಯ ವಿಕ್ಟೋರಿಯಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಬಾಲಕನ ಮೃತದೇಹ ಕಳುಹಿಸಿಕೊಡಲಾಗಿದೆ.…
ಬೆಂಗಳೂರು: ಲೋಕಸಭಾ ಚುನಾವಣೆಯ ಬಳಿಕ ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ನಿಲ್ಲಿಸಲಿದೆ ಎನ್ನಲಾಗುತ್ತಿತ್ತು. ಒಂದು ವೇಳೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿದ್ದೇ ಆದ್ರೇ, ಕರ್ನಾಟಕದಲ್ಲಿ ಮುಂದಾಗುವ ಅನಾಹುತಗಳಿಗೇ ರಾಜ್ಯ ಸರ್ಕಾರವೇ ಹೊಣೆ ಎಂಬುದಾಗಿ ಕರ್ನಾಟಕ ಬಿಜೆಪಿ ಎಚ್ಚರಿಕೆ ನೀಡಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅದು, ಬಣ್ಣ ಬದಲಿಸುವಲ್ಲಿ ಕಾಂಗ್ರೆಸ್ ಪಕ್ಷದವರು ಊಸರವಳ್ಳಿಯನ್ನು ಸಹ ಮೀರಿಸುತ್ತಾರೆ ಎಂಬುದಾಗಿ ಕಿಡಿಕಾರಿದೆ. ಗ್ಯಾರಂಟಿಗಳೇ ನಮ್ಮ ಸರ್ಕಾರಕ್ಕೆ ಶ್ರೀರಕ್ಷೆ ಎಂದು ಬಡಾಯಿ ಕೊಚ್ಚಿಕೊಂಡಿದ್ದ ಶಾಸಕರೆಲ್ಲರೂ ಈಗ ಗ್ಯಾರಂಟಿಯಿಂದಲೇ ನಮ್ಮ ಸರ್ಕಾರಕ್ಕೆ ಹಿನ್ನಡೆ ಎನ್ನುತ್ತಿರುವುದು ಹತಾಶೆಯ ಪರಮಾವಧಿ ಅಂತ ಗುಡುಗಿದೆ. ಲೋಕಸಭಾ ಚುನಾವಣೆಯಲ್ಲಿ ಸೋತ ಕಾರಣಕ್ಕೆ ಗ್ಯಾರಂಟಿಗಳನ್ನು ನಿಲ್ಲಿಸಿದರೆ, ಕರ್ನಾಟಕದಲ್ಲಿ ಮುಂದಾಗುವ ಅನಾಹುತಗಳಿಗೆ ಕಾಂಗ್ರೆಸ್ ಸರ್ಕಾರವೇ ನೇರ ಕಾರಣವಾಗುತ್ತದೆ ಎಂಬುದಾಗಿ ಎಚ್ಚರಿಕೆ ನೀಡಿದೆ. https://twitter.com/BJP4Karnataka/status/1798634856597053547 https://kannadanewsnow.com/kannada/bitcoin-case-sit-files-chargesheet-against-6-accused-including-sriki/ https://kannadanewsnow.com/kannada/good-news-for-mobile-users-the-phone-will-be-charged-in-just-60-seconds/
ಬೆಂಗಳೂರು: ಬಿಟ್ ಕಾಯಿನ್ ಹಗರಣದ ತನಿಖೆಯನ್ನು ನಡೆಸುತ್ತಿರುವಂತ ಎಸ್ಐಟಿ ಅಧಿಕಾರಿಗಳು, ಇಂದು ನ್ಯಾಯಾಲಯಕ್ಕೆ ಶ್ರೀಕಿ ಸೇರಿದಂತೆ 6 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಇಂದು ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಗೆ ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸುತ್ತಿರುವಂತ ಎಸ್ಐಟಿ ಪೊಲೀಸರು, ಮೊದಲ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಆರೋಪಿಗಳಾದಂತ ಶ್ರೀಕಿ ಆಲಿಯಾಸ್ ಶ್ರೀಕೃಷ್ಣ, ರಾಬಿನ್ ಖಂಡೇವಾಲ, ಸುನೀಶ್ ಹೆಗ್ಡೆ ಸೇರಿದಂತೆ 6 ಆರೋಪಿಗಳ ವಿರುದ್ಧ ಇಂದು ಕೋರ್ಟ್ ಗೆ ದೋಷಾರೋಪ ಪಟ್ಟಿಯನ್ನು ಎಸ್ಐಟಿ ಪೊಲೀಸರು ಸಲ್ಲಿಸಿದ್ದಾರೆ. ಅಂದಹಾಗೇ ಡ್ರಗ್ ಕೇಸ್ ಪ್ರಕರಣ ಸಂಬಂಧ ಮೂರು ಎಫ್ಐಆರ್ ಗಳು ದಾಖಲಾಗಿದ್ದವು. ಇವುಗಳನ್ನು ತನಿಖೆ ಮಾಡುತ್ತಿದ್ದಂತ ವೇಳೆಯಲ್ಲಿ ಬಿಟ್ ಕಾಯಿನ್ ಪ್ರಕರಣ ಬೆಳಕಿಗೆ ಬಂದಿತ್ತು. ಈ ಕೇಸರನ್ನು ರಾಜ್ಯ ಸರ್ಕಾರ ಎಸ್ಐಟಿ ಪೊಲೀಸರ ಮೂಲಕ ತನಿಖೆಗೆ ಆದೇಶಿಸಿತ್ತು. ಈಗ ತನಿಖೆ ನಡೆಸಿರುವಂತ ಎಸ್ಐಟಿ ಪೊಲೀಸರು, ನ್ಯಾಯಾಲಯಕ್ಕೆ 6 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. https://kannadanewsnow.com/kannada/uttarakhand-avalanche-employee-of-bengalurus-famous-multinational-company-dies/ https://kannadanewsnow.com/kannada/good-news-for-mobile-users-the-phone-will-be-charged-in-just-60-seconds/