Author: kannadanewsnow09

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬ್ಯಾಡರಹಳ್ಳಿಯಲ್ಲಿ ಭಾರೀ ಮಳೆಯಿಂದಾಗಿ ಗೋಡೆ ಕುಸಿದು ವೃದ್ಧೆಯೊಬ್ಬರು ಗಾಯಗೊಂಡಿದ್ದರು. ಇಂದು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ವೃದ್ಧೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಯ ಬ್ಯಾಡರಹಳ್ಳಿಯ ಮೀನಾಕ್ಷಮ್ಮ(63) ಎಂಬುವರು ಭಾರೀ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಗಾಯಗೊಂಡಿದ್ದರು. ಅವರನ್ನು ಹಿರಿಯೂರು ತಾಲ್ಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಹಿರಿಯೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ವೃದ್ಧೆ ಮೀನಾಕ್ಷಮ್ಮ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಸಂಬಂಧ ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು https://kannadanewsnow.com/kannada/good-news-for-farmers-children-applications-invited-for-beekeeping-training/ https://kannadanewsnow.com/kannada/rajyotsava-award-for-the-year-2024-will-be-conferred-on-this-famous-dollu-artiste/

Read More

ಮಡಿಕೇರಿ : ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಜಾತಿ ಅರ್ಹ ಅಭ್ಯರ್ಥಿಗಳಿಂದ 2025 ರ ಜನವರಿ ಯಿಂದ ಡಿಸೆಂಬರ್ 31 ರ ವರೆಗೆ (12 ತಿಂಗಳು) ವಿಶೇಷ ಘಟಕ ಯೋಜನೆಯಡಿ ಒಂದು ವರ್ಷದ ಅವಧಿಯ ಅಪ್ರೆಂಟಿಷ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪಡೆದಿರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅಪ್ರೆಂಟಿಷ್ ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ ಸ್ನಾತಕೋತ್ತರ ಪದವಿಯಲ್ಲಿ ಹೆಚ್ಚು ಅಂಕ ಪಡೆದ ಇಬ್ಬರು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ನವೆಂಬರ್, 04 ಕಡೆಯ ದಿನವಾಗಿದೆ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸ್ಟೀವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. https://kannadanewsnow.com/kannada/good-news-for-farmers-children-applications-invited-for-beekeeping-training/ https://kannadanewsnow.com/kannada/rajyotsava-award-for-the-year-2024-will-be-conferred-on-this-famous-dollu-artiste/

Read More

ಮಡಿಕೇರಿ : ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ 2024-25ನೇ ಸಾಲಿನಲ್ಲಿ ರೈತರ ಮಕ್ಕಳಿಗೆ 3 ತಿಂಗಳ ಜೇನುಗಾರಿಕೆ ತರಬೇತಿ ಕಾರ್ಯಕ್ರಮವನ್ನು 2024ರ ನವೆಂಬರ್, 05 ರಿಂದ 2025 ರ ಫೆಬ್ರವರಿ, 04 ರವರೆಗೆ (ಪುರುಷ ಅಭ್ಯರ್ಥಿಗಳು ಮಾತ್ರ) ಹಮ್ಮಿಕೊಳ್ಳಲಾಗುವುದು. ಈ ಸಂಬಂಧ ಕೊಡಗು ಜಿಲ್ಲೆಯಿಂದ 18 ರಿಂದ 35 ವರ್ಷ ವಯಸ್ಸಿನೊಳಗಿನ ಒಂದು ಅಭ್ಯರ್ಥಿಯನ್ನು ಆಯ್ಕೆ ಮಾಡಲು ಅವಕಾಶವಿದ್ದು (ಇತರೆ-1) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಅಕ್ಟೋಬರ್.25ರವರೆಗೆ ಕಚೇರಿಯಲ್ಲಿ/ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ (ರಾಜ್ಯ ವಲಯ), ಮಡಿಕೇರಿ/ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರ/ಇಲಾಖಾ ವೆಚ್‍ಸೈಟ್: https://horticulturedir.karnataka.gov.in ನಲ್ಲಿ ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಅಕ್ಟೋಬರ್, 28 ಕೊನೆಯ ದಿನವಾಗಿದೆ. ಮೂಲ ಅಗತ್ಯ ದಾಖಲಾತಿಗಳೊಡನೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ತಂದೆ, ತಾಯಿ, ಪೋಷಕರ ಹೆಸರಿನಲ್ಲಿರುವ ಜಮೀನಿನ ಆರ್‍ಟಿಸಿ, ತಂದೆ/ತಾಯಿಯವರ ಒಪ್ಪಿಗೆ ಪತ್ರ. ಅರ್ಹ ಅಭ್ಯರ್ಥಿಗಳು ನಿಗಧಿತ ಸಮಯದೊಳಗೆ ಅರ್ಜಿಯನ್ನು ತೋಟಗಾರಿಕೆ ಉಪ ನಿರ್ದೇಶಕರ ಕಚೇರಿ/ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ…

Read More

ಚಿತ್ರದುರ್ಗ : ಕರ್ನಾಟಕ ಲೋಕಾಯುಕ್ತ, ಚಿತ್ರದುರ್ಗ ವಿಭಾಗದ ಅಧಿಕಾರಿಗಳು ವಿವಿಧ ತಾಲ್ಲೂಕುಗಳಿಗೆ ಭೇಟಿ ನೀಡಿ, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಅ. 22 ರಂದು ಲೋಕಾಯುಕ್ತ ಪೊಲೀಸ್ ನಿರೀಕ್ಷಕರು, ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 01.30 ರವರೆಗೆ ಹೊಸದುರ್ಗ ತಾಲ್ಲೂಕು ಕಚೇರಿಯಲ್ಲಿ. ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಹೊಳಲ್ಕೆರೆ ತಾಲ್ಲೂಕು ಕಚೇರಿಯಲ್ಲಿ ಉಪಸ್ಥಿತರಿದ್ದು, ಅಹವಾಲುಗಳನ್ನು ಸ್ವೀಕರಿಸುವರು. ಅ. 23 ರಂದು ಪೊಲೀಸ್ ನಿರೀಕ್ಷಕರು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 01.30 ರವರೆಗೆ ಹಿರಿಯೂರು ತಾಲ್ಲೂಕು ಕಚೇರಿಯಲ್ಲಿ. ಪೊಲೀಸ್ ಉಪಾಧೀಕ್ಷಕರು ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಚಿತ್ರದುರ್ಗ ತಾಲ್ಲೂಕು ಕಚೇರಿಯಲ್ಲಿ ಉಪಸ್ಥಿತರಿದ್ದು, ಅಹವಾಲುಗಳನ್ನು ಸ್ವೀಕರಿಸುವರು. ಅ. 24 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 01.30 ರವರೆಗೆ ಮೊಳಕಾಲ್ಮೂರು ತಾಲ್ಲೂಕು ಕಚೇರಿಯಲ್ಲಿ. ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಚಳ್ಳಕೆರೆ ತಾಲ್ಲೂಕು ಕಚೇರಿಯಲ್ಲಿ ಉಪಸ್ಥಿತರಿದ್ದು, ಅಹವಾಲುಗಳನ್ನು ಸ್ವೀಕರಿಸುವರು. ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳನ್ನು ಮಾಡಿಕೊಡಲು ಅಧಿಕಾರಿ, ಸಿಬ್ಬಂದಿ ಲಂಚದ ಹಣಕ್ಕಾಗಿ…

Read More

ಚಿತ್ರದುರ್ಗ : ಭಾನುವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 14.3 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 7.5 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 18.5 ಹಿರಿಯೂರು ತಾಲ್ಲೂಕು 25.1 ಮಿ.ಮೀ, ಹೊಳಲ್ಕೆರೆ ತಾಲ್ಲೂಕು 13.9 ಮಿ.ಮೀ, ಹೊಸದುರ್ಗ ತಾಲ್ಲೂಕಿನಲ್ಲಿ 25.1 ಮಿ.ಮೀ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 4.2 ಮಿ.ಮೀ ಮಳೆಯಾಗಿದೆ. ಹೋಬಳಿವಾರು ಮಳೆ ವಿವರ: ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 2 ಮಿ.ಮೀ, ನಾಯಕನಹಟ್ಟಿ 22.3 ಮಿ.ಮೀ, ಪರಶುರಾಂಪುರ 1.3 ಮಿ.ಮೀ, ತಳಕು 7.4 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 11.5 ಮಿ.ಮೀ, ಭರಮಸಾಗರ 33.9 ಮಿ.ಮೀ, ಹಿರೇಗುಂಟನೂರು 15.5 ಮಿ.ಮೀ, ತುರುವನೂರು 16.4 ಮಿ.ಮೀ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರು 22.5 ಮಿ.ಮೀ, ಐಮಂಗಲ 8.3 ಮಿ.ಮೀ, ಧರ್ಮಪುರ 3.3 ಮಿ.ಮೀ, ಜವನಗೊಂಡನಹಳ್ಳಿ 3.6 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 31.1 ಮಿ.ಮೀ, ಬಿ.ದುರ್ಗ 32.6 ಮಿ.ಮೀ, ರಾಮಗಿರಿ 31.3 ಮಿ.ಮೀ, ತಾಳ್ಯ 10.8 ಮಿ.ಮೀ ಮಳೆಯಾಗಿದೆ.…

Read More

ಧಾರವಾಡ : ಕರ್ನಾಟಕ ಸರ್ಕಾರದಿಂದ 2024-25 ರ ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ (ವಿಮಾ) ಯೋಜನೆಯನ್ನು ಜಿಲ್ಲೆಯ ಎಂಟು ತಾಲ್ಲೂಕಿನ 14 ಹೋಬಳಿಗಳಲ್ಲಿ ಅನುಷ್ಟಾನಗೊಳಿಸಲು ಮಂಜೂರಾತಿ ನೀಡಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ಜಿಲ್ಲೆಯಲ್ಲಿ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರುವ ಹೋಬಳಿ ಮಟ್ಟದ 11 ಬೆಳೆಗಳಾದ ಹುರುಳಿ, ಕುಸುಮೆ, ಹೆಸರು ಬೆಳೆಗಳು ಮಳೆ ಆಶ್ರಿತ ಬೆಳೆಗಳಾಗಿವೆ. ಜೋಳ ಮತ್ತು ಮುಸಿಕಿನ ಜೋಳ ಬೆಳೆಗಳು ನೀರಾವರಿ ಆಶ್ರಿತ ಬೆಳೆಗಳಾಗಿವೆ. ಗೋಧಿ, ಸೂರ್ಯಕಾಂತಿ ಹಾಗೂ ಕಡಲೆ ಬೆಳೆಗಳು ನೀರಾವರಿ ಮತ್ತು ಮಳೆ ಆಶ್ರಿತ ಬೆಳೆಗಳಾಗಿವೆ. ಗ್ರಾಮ ಪಂಚಾಯತಿ ಮಟ್ಟದ ಬೆಳೆಗಳಾದ ಧಾರವಾಡ, ಹುಬ್ಬಳ್ಳಿ, ಹುಬ್ಬಳ್ಳಿ ನಗರ, ಕುಂದೋಳ, ನವಲಗುಂದ, ಅಣ್ಣಿಗೇರಿ ತಾಲ್ಲೂಕಿನಲ್ಲಿ ಜೋಳ ಮತ್ತು ಕಡಲೆ ಮಳೆ ಆಶ್ರಿತ ಬೆಳೆಗಳಾಗಿವೆ. ಕಲಘಟಗಿ ತಾಲ್ಲೂಕಿನಲ್ಲಿ ಜೋಳ ಮಳೆ ಆಶ್ರಿತ ಬೆಳೆಯಾಗಿದೆ.…

Read More

ಧಾರವಾಡ: 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಮೆಟ್ರಿಕ-ನಂತರದ ಹಾಗೂ ಸ್ನಾತಕೋತ್ತರ ಪದವಿ, ವೃತ್ತಿ ಪರ ಪದವಿ ಹಾಗೂ ವೃತ್ತಿ ಪರ ಸ್ನಾತಕೋತ್ತರ ಪದವಿಗಳ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಮೆಟ್ರಿಕ-ನಂತರದ ವಿದ್ಯಾರ್ಥಿವೇತನ ಶುಲ್ಕ ಮರುಪಾವತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಅಕ್ಟೋಬರ್ 15, 2024 ಕ್ಕೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಅಕ್ಟೋಬರ್ 31, 2024 ರವರೆಗೆ ವಿಸ್ತರಿಸಲಾಗಿದೆ. ಸ್ನಾತಕೋತ್ತರ ಪದವಿ, ವೃತ್ತಿ ಪರ ಪದವಿ ಹಾಗೂ ವೃತ್ತಿ ಪರ ಸ್ನಾತಕೋತ್ತರ ಪದವಿಗಳ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ನವೆಂಬರ್ 30,…

Read More

ಧಾರವಾಡ : 2025-26 ನೆಯ ಸಾಲಿಗೆ ಜವಾಹರ ನವೋದಯ ವಿದ್ಯಾಲಯದಲ್ಲಿ 9 ನೇ ಮತ್ತು 11ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳಿಗೆ ಪ್ರವೇಶಾವಕಾಶವಿದ್ದು, ಪ್ರಸಕ್ತ ವರ್ಷ (2024-25) 8 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಮತ್ತು 10ನೆ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಅಕ್ಟೋಬರ್ 30, 2024 ರೊಳಗಾಗಿ www.navodaya.gov.in ಹಾಗೂ https://cbseitms.nic.in/2024/nvsix…, https://cbseitms.nic.in/2024/nvsxi_11… ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/ballari-power-outage-in-siruguppa-limits-on-oct-23/ https://kannadanewsnow.com/kannada/rajyotsava-award-for-the-year-2024-will-be-conferred-on-this-famous-dollu-artiste/

Read More

ಬಳ್ಳಾರಿ : ಸಿರುಗುಪ್ಪ ಜೆಸ್ಕಾಂ ವ್ಯಾಪ್ತಿಯ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳುತ್ತಿರುವುದರಿಂದ ಅ.23 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 06 ಗಂಟೆಯವರೆಗೆ ಸಿರುಗುಪ್ಪ ನಗರದ ಆದೋನಿ ರಸ್ತೆಗೆ ಹೊಂದಿಕೊಂಡಿರುವ ಕೈಗಾರಿಕಾ ಪ್ರದೇಶ ವ್ಯಾಪ್ತಿಯ ಎಫ್-12 ಆದೋನಿ ರಸ್ತೆ ಮತ್ತು ಎಫ್-13 ಅರಳಿಗನೂರು ಕೈಗಾರಿಕಾ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯವಾಗಲಿದೆ. ತುರ್ತು ನಿರ್ವಹಣೆ ಕಾರ್ಯ ಮುಗಿಯುವವರೆಗೂ ಅಥವಾ ಮುಗಿದ ತಕ್ಷಣ ಯಾವುದೇ ಸಂದರ್ಭದಲ್ಲಿ ವಿದ್ಯುತ್ ಸಂಪರ್ಕ ಚಾಲನೆ ಮಾಡುವ ಸಾಧ್ಯತೆ ಇರುತ್ತದೆ, ಹಾಗಾಗಿ ಗ್ರಾಹಕರು ವಿದ್ಯುತ್ ಮಾರ್ಗಗಳ ಹತ್ತಿರ ಯಾವುದೇ ತರಹದ ಕೆಲಸಗಳನ್ನು ಮಾಡಬಾರದು ಎಂದು ಸಿರುಗುಪ್ಪ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/nandini-to-be-inaugurated-in-delhi-on-october-27-28/ https://kannadanewsnow.com/kannada/rajyotsava-award-for-the-year-2024-will-be-conferred-on-this-famous-dollu-artiste/

Read More

ಬೆಂಗಳೂರು: ಕರ್ನಾಟಕದ ಹೆಮ್ಮೆಯ ನಂದಿನಿ ತುಪ್ಪು ಈಗಾಗಲೇ ತಿರುಪತಿ ತಿರುಮಲ ಪ್ರಸಾದವಾಗಿರುವಂತ ಲಡ್ಡು ಪ್ರಸಾದ ತಯಾರಿಕೆಗೆ ಸರಬರಾಜು ಆಗುತ್ತಿದೆ. ಈಗ ದೆಹಲಿಗೂ ಕರುನಾಡಿನ ಹೆಮ್ಮೆಯ ನಂದಿನಿ ಕಾಲಿಡುತ್ತಿದೆ. ಇದೇ ಅಕ್ಟೋಬರ್.27, 28ರಂದು ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಉದ್ಘಾಟನೆಗೊಳ್ಳಲಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಕೃಷಿ ಸಚಿವ ಚಲುವರಾಯಸ್ವಾಮಿ ಅವರು, ಇದೇ ಅಕ್ಟೋಬರ್‌ 27 ಹಾಗೂ 28 ರಂದು ನಂದಿನಿಯ ಮಾರಾಟ ಮಳಿಗೆ ದೆಹಲಿಯಲ್ಲಿ ಉದ್ಘಾಟನೆಯಾಗಲಿದೆ. ಅಲ್ಲಿಗೆ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಿಂದ (ಮನ್‌ಮುಲ್‌) ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಸರಬರಾಜು ಮಾಡಲಾಗುವುದು ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1848363513477308826 ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳನ್ನು ಈಗಾಗಲೇ ವಿವಿಧ ರಾಜ್ಯಗಳಲ್ಲಿ ಮಾರಾಟವಾಗುತ್ತಿವೆ. ಕರ್ನಾಟಕದ ಜಿಲ್ಲೆ, ತಾಲ್ಲೂಕು ವಿಭಾಗದಲ್ಲೂ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆಗಳಿದ್ದಾವೆ. ಈಗ ದೆಹಲಿಯಲ್ಲೂ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಓಪನ್ ಆಗಲಿದೆ. ಈ ಮೂಲಕ ದೆಹಲಿಯಲ್ಲೂ ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳು ಲಭ್ಯವಾಗುವಂತೆ ಆಗಲಿದೆ. https://kannadanewsnow.com/kannada/103-acres-of-forest-encroachments-to-be-removed-in-1-year-in-bengaluru-city-limits-minister-ishwar-khandre/ https://kannadanewsnow.com/kannada/rajyotsava-award-for-the-year-2024-will-be-conferred-on-this-famous-dollu-artiste/

Read More