Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಅಂದ್ರೆ ಟಿಇಟಿ ಪರೀಕ್ಷೆ ತೇರ್ಗಡೆ ಹೊಂದಿರುವುದು ಕಡ್ಡಾಯವಾಗಿದೆ. ಈ ಟಿಇಟಿ ಪರೀಕ್ಷೆಯನ್ನು ಜೂನ್.30ರಂದು ನಿಗಿದಿ ಪಡಿಸಲಾಗಿದೆ. ಇಂತಹ TET ಪರೀಕ್ಷೆಗೆ ( TET Exam-2024) ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದೆ. ಅದನ್ನು ಡೌನ್ ಲೋಡ್ ಹೇಗೆ ಮಾಡಿಕೊಳ್ಳಬೇಕು ಅನ್ನೋ ಬಗ್ಗೆ ಮುಂದೆ ಓದಿ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2024) ದಿನಾಂಕ:30/06/2024ರ ಭಾನುವಾರದಂದು ರಾಜ್ಯಾದ್ಯಂತ ಎರಡು ಅಧಿವೇಶನಗಳಲ್ಲಿ (ಪ್ರತ್ರಿಕೆ-1 ಮೊದಲ ಅಧಿವೇಶನ ಮತ್ತು ಪತ್ರಿಕೆ-2 ಮಧ್ಯಾಹ್ನದ ಅಧಿವೇಶನ) ನಡೆಯಲಿದೆ ಅಂತ ತಿಳಿಸಿದೆ. ಟಿಇಟಿ ಪರೀಕ್ಷೆಗೆ ಪ್ರವೇಶ ಪತ್ರ ಈ ರೀತಿ ಡೌನ್ ಲೋಡ್ ಮಾಡಿಕೊಳ್ಳಿ ಈ ಪರೀಕ್ಷೆಗೆ ನಿಗದಿತ ಶುಲ್ಕ ಪಾವತಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಎಲ್ಲಾ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ದಿನಾಂಕ:20/06/2024 ರಿಂದ ಇಲಾಖಾ ವೆಬ್ಸೈಟ್ https://schooleducation.karnataka.gov.in ನಲ್ಲಿ ಲಭ್ಯವಿರಿಸಿದೆ. ಅಭ್ಯರ್ಥಿಗಳು ತಮ್ಮ User…
ಬೆಂಗಳೂರು: ರಾಜ್ಯದ ಮುಂಬರುವಂತ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ರಣತಂತ್ರ ರೂಪಿಸಿದೆ. ಇದಕ್ಕಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಉಪ ಸಮಿತಿಯನ್ನು ರಚಿಸಿ ಆದೇಶಿಸಿದ್ದಾರೆ. ಇಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಾಗೂ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಮಿತಿಯನ್ನು ರಚಿಸಿ ಆದೇಶಿಸಿದ್ದಾರೆ. ಇದಲ್ಲದೇ ಮಂಗಳೂರು-ಉಡುಪಿ ಕ್ಷೇತ್ರದ ಎಂಎಲ್ಸಿ ಕ್ಷೇತ್ರದ ಉಪ ಚುನಾವಣೆಗೂ ಕೆಪಿಸಿಸಿ ಕಮಿಟಿಯನ್ನು ರಚಿಸಿ ಆದೇಶಿಸಿದ್ದಾರೆ. ಅಂದಹಾಗೇ ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಚಿವ ಜಮೀರ್ ಅಹ್ಮದ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದು, ಸದಸ್ಯರನ್ನಾಗಿ ನಾಸೀರ್ ಹುಸೇನ್, ಇ.ತುಕಾರಾಂ, ಬಿ.ನಾಗೇಂದ್ರ, ಡಾ.ಎನ್ ಟಿ ಶ್ರೀನಿವಾಸ್, ಪಿಟಿ ಪರಮೇಶ್ವರ ನಾಯಕ್ ಹಾಗೂ ಬಳ್ಳಾರಿಯ ಡಿಸಿಸಿ ಅಧ್ಯಕ್ಷ ಶಿವಯೋಗಿ ಅವರನ್ನು ನೇಮಿಸಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಚಿವ ಚಲುವರಾಯ ಸ್ವಾಮಿ ಅವರನ್ನು…
ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಕಣ್ಣು ಕುಕ್ಕುವ ಹೆಡ್ ಲೈಟ್ ಅಳವಡಿಕೆಗೆ ಪೊಲೀಸ್ ಇಲಾಖೆ ಬ್ರೇಕ್ ಹಾಕಿದೆ. ಇನ್ಮುಂದೆ ಕಣ್ಣು ಕುಕ್ಕುವಂತ ಪ್ರಖರ ದೀಪ ಅಳವಡಿಸದಂತೆ ಎಚ್ಚರಿಸಿದೆ. ಒಂದು ವೇಳೆ ವಾಹನಗಳಿಗೆ ಈ ರೀತಿಯ ಹೆಡ್ ಲೈನ್ ಅಳವಡಿಸಿದ್ರೇ, ಕೇಸ್ ಹಾಕೋದಾಗಿ ಪೊಲೀಸ್ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ. ಈ ಕುರಿತಂತೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ) ಅಲೋಕ್ ಕುಮಾರ್ ಮಾಹಿತಿ ಹಂಚಿಕೊಂಡಿದ್ದು, ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್ಇಡಿ ದೀಪಗಳನ್ನು ವಾಹನಗಳಿಗೆ ಅಳವಡಿಸುತ್ತಿದ್ದು, ಇದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ ಎಂದು ಹೇಳಿದ್ದಾರೆ. ಕೇಂದ್ರ ಮೋಟಾರು ಕಾಯ್ದೆ (ಸಿಎಂವಿ) ಯಲ್ಲಿ ನಮೂದಿಸಿರುವ ಮಾನದಂಡದಂತೆ ವಾಹನ ಸವಾರರು ಹೆಡ್ಲೈಟ್ ಅಳವಡಿಕೆ ಮಾಡಿಕೊಳ್ಳಬೇಕು. ಕಾಯ್ದೆ ಉಲ್ಲಂಘಿಸಿದರೆ ಅಂತಹ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. https://twitter.com/KarnatakaVarthe/status/1803364322308944020 https://kannadanewsnow.com/kannada/will-farmers-get-relief-if-electricity-poles-and-transformers-are-installed-in-their-fields-heres-the-real-truth/ https://kannadanewsnow.com/kannada/icse-isc-improvement-exam-2024-schedule-out/
ಬೆಂಗಳೂರು: ರಾಜ್ಯಾಧ್ಯಂತ ಕನ್ನಡ ನಾಮಫಲಕವನ್ನು ಅಂಗಡಿ-ಮುಂಗಟ್ಟುಗಳಿಗೆ ಅಳವಡಿಸುವುದು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ಹಾಕದೇ ಇದ್ರೆ ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ, ದೂರು ನೀಡಬಹುದಾಗಿದೆ. ರಾಜ್ಯ ಸರ್ಕಾರದಿಂದ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ರಾಜ್ಯಾದ್ಯಂತ ಕನ್ನಡ ನಾಮಫಲಕ ಅಳವಡಿಸುವುದು ಕಡ್ಡಾಯವಾಗಿದೆ. ತಪ್ಪಿಲ್ಲದೆ ಸರಿಯಾದ ಕನ್ನಡದಲ್ಲಿ ನಾಮಫಲಕ ಅಳವಡಿಸಲು ಸಲಹೆ, ಮಾರ್ಗದರ್ಶನದ ಅಗತ್ಯವಿದ್ದರೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಹಾಯವಾಣಿ 080-22286773 ಅಥವಾ 080-22256365 ಗೆ ಕರೆ ಮಾಡಬಹುದು. ಇನ್ನೂ ನೀವು ಕನ್ನಡ ನಾಮಫಲಕ ಅಳವಡಿಸದ ಬಗ್ಗೆ ಇ-ಮೇಲ್ ಮೂಲಕವೂ ದೂರು ನೀಡಬಹುದಾಗಿದೆ. chairman.kanpra@gmail.com ಅಥವಾ secretary.kanpra@gmail.com ಗೆ ದೂರು ಸಲ್ಲಿಸಬಹುದಾಗಿದೆ. https://twitter.com/KarnatakaVarthe/status/1803414089395327316 https://kannadanewsnow.com/kannada/will-farmers-get-relief-if-electricity-poles-and-transformers-are-installed-in-their-fields-heres-the-real-truth/ https://kannadanewsnow.com/kannada/the-government-has-instructed-the-state-government-employees-to-do-this-without-fail/
ಬೆಂಗಳೂರು: ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ನಾಳೆ (ಜೂನ್ 20) ಜಗನ್ನಾಥ ಭವನದಿಂದ ವಿಧಾನಸೌಧಕ್ಕೆ ಸೈಕಲ್ ಜಾಥಾ ನಡೆಸಲಾಗುವುದು ಎಂದು ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಹರೀಶ್ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬೆಂಗಳೂರು ಬಿಜೆಪಿಯ 3 ಜಿಲ್ಲೆಗಳೂ ಸೇರಿ ಈ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದೇವೆ ಎಂದು ವಿವರಿಸಿದರು. ಜಾಥಾದ ಬಳಿಕ ಮಹಾತ್ಮ ಗಾಂಧಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು ಎಂದು ತಿಳಿಸಿದರು. ಬೆಳಿಗ್ಗೆ 9.00 ಗಂಟೆಗೆ ಜಗನ್ನಾಥ ಭವನದಿಂದ ಜಾಥಾ ಆರಂಭವಾಗಲಿದ್ದು, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ್, ವಿಧಾನಪರಿಷತ್ ನೂತನ ಸದಸ್ಯ ಸಿ.ಟಿ.ರವಿ ಅವರು ನೇತೃತ್ವ ವಹಿಸಲಿದ್ದಾರೆ. ಸುಮಾರು 250-300 ಸೈಕಲ್ಗಳ ಜಾಥಾ ನಡೆಯಲಿದೆ ಎಂದು ಮಾಹಿತಿ ನೀಡಿದರು. ಬೆಂಗಳೂರಿನ ಮಾಜಿ ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಬಿಬಿಎಂಪಿ ಮಾಜಿ ಸದಸ್ಯರು, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್,…
ಬೆಂಗಳೂರು : ಜಮೀನಿನಲ್ಲಿರುವ ವಿದ್ಯುತ್ ಕಂಬ ಅಥವಾ ಟ್ರಾನ್ಸ್ಫಾರ್ಮರ್ಗೆ ಸರ್ಕಾರದಿಂದ ರೈತರಿಗೆ ಪರಿಹಾರ ನೀಡಲಾಗುತ್ತದೆ ಎಂಬ ಸುಳ್ಳು ಮಾಹಿತಿ ಇರುವ ವೀಡೀಯೋವನ್ನು ಸಾಮಾಜಿಕ ಜಾಲ ತಾಣದಲ್ಲಿ ಹರಿಬಿಟ್ಟವರ ವಿರುದ್ಧ ಬೆಸ್ಕಾಂ ದೂರು ಸಲ್ಲಿಸಿದೆ. ರೈತರು ತಮ್ಮ ಜಮೀನಿನಲ್ಲಿ ವಿದ್ಯುತ್ ಕಂಬ ಅಥವಾ ಟ್ರಾನ್ಸ್ಫಾರ್ಮರ್ ಅಳವಡಿಸಿಕೊಂಡಿದ್ದರೆ ಸರ್ಕಾರ ದಿನಕ್ಕೆ 50 ರೂ. ಪರಿಹಾರ ನೀಡಲಿದೆ. ಗೃಹಬಳಕೆದಾರರು ಪ್ರತಿನಿತ್ಯ 2000 ರಿಂದ 5000 ಯೂನಿಟ್ ವಿದ್ಯುತ್ ಬಳಸಿಕೊಳ್ಳಬಹುದು. ಅದಕ್ಕೆ ಸರ್ಕಾರ 5000 ರೂ. ಪರಿಹಾರ ಧನ ನೀಡಲಿದೆ ಎಂಬ ಸಂದೇಶ ನೀಡುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದು ಸತ್ಯಕ್ಕೆ ದೂರವಾದುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಶೋಭಾ ಪ್ರಭಾಕರ್ ಎಂಬುವವರು ‘ಶೋಭಾ ಪ್ರೈಮ್ ಟ್ಯೂಬ್ @ ಪ್ರೈಮ್ ಟ್ಯೂಬ್-ಶೋಭಾ’ ಎಂಬ ಚಾನಲ್ನಲ್ಲಿ, ಇಂಧನ ಇಲಾಖೆಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿಗಳನ್ನೊಳಗೊಂಡ 5 ನಿಮಿಷ ಅವಧಿಯ ಒಂದು ವಿಡಿಯೋ ತುಣುಕನ್ನು ಹರಿಬಿಟ್ಟಿದ್ದಾರೆ. ಇದರ ವಿರುದ್ಧ ವಿಧಾನಸೌಧ ಠಾಣೆ ಪೊಲೀಸರಿಗೆ ದೂರು ನೀಡಲಾಗಿದೆ. ವೀಡಿಯೋದಲ್ಲಿರುವ ಸುಳ್ಳು ಮಾಹಿತಿ:…
ಶಿವಮೊಗ್ಗ: ಇಂದು ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ಅವರು ನಾಮಪತ್ರ ಸಲ್ಲಿಸುವ ಮೂಲಕ ಅಧಿಕೃತವಾಗಿ ಅಖಾಡಕ್ಕೆ ಇಳಿದಿದ್ದಾರೆ. ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ನ ನಿರ್ದೇಶಕರ ಆಯ್ಕೆ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಜೂನ್ 28ರಂದು ಶಿವಮೊಗ್ಗದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಮತದಾನಕ್ಕೆ ದಿನಾಂಕ ನಿಗದಿ ಪಡಿಸಲಾಗಿದೆ. ವಿವಿಧ ಕ್ಷೇತ್ರದಿಂದ 13 ನಿರ್ದೇಶಕರ ಆಯ್ಕೆ ಶಿವಮೊಗ್ಗ ಡಿಸಿಸಿ ಬ್ಯಾಂಕ್ಗೆ ವಿವಿಧ ಕ್ಷೇತ್ರಗಳಿಂದ ಒಟ್ಟು 13 ನಿರ್ದೇಶಕರ ಆಯ್ಕೆ ನಡೆಯಲಿದೆ. ಪ್ರತಿ ತಾಲ್ಲೂಕಿಗೆ ಒಬ್ಬರಂತೆ ವಿವಿಧ ಸಹಕಾರ ಸಂಘಗಳಿಂದ ಚುನಾಯಿಸಲ್ಪಡುವ ಪ್ರತಿನಿಧಿಗಳು, ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಗಳು, ಸಂಸ್ಕರಣ ಸಂಘಗಳ ವತಿಯಿಂದ ಇಬ್ಬರು ಸದಸ್ಯರು, ಪಟ್ಟಣ ಸಹಕಾರ ಸಂಘಗಳು ಮತ್ತು ವ್ಯವಸಾಯೇತರ ಸಹಕಾರ ಸಂಘಗಳ ವತಿಯಿಂದ ಇಬ್ಬರು, ಇನ್ನಿತರೆ ಸಹಕಾರ ಸಂಘಗಳಿಂದ ಇಬ್ಬರು ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಜೂನ್.24ರಂದು ಮತದಾನ ಡಿಸಿಸಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧಿಸುವ…
ಬೆಂಗಳೂರು : ಸಮಸ್ಯೆಗಳ ಆಗರವಾಗಿದ್ದ ನಗರದ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಮತ್ತುಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ಬುಧವಾರ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಅನಿರೀಕ್ಷಿತ ಭೇಟಿ ನೀಡಿ ವೈದ್ಯರ ಕಾರ್ಯವೈಖರಿಗೆ ಕೆಂಡಮಂಡಲರಾದರು. ಮೊದಲು ಕಿದ್ವಾಯಿ ಆಸ್ಪತ್ರೆಗೆ ಭೇಟಿ ಕೊಟ್ಟ ಅವರು ಫಾಸ್ಟ ಟ್ರಾಕ್ (fast track) ವಾರ್ಡ್ನಲ್ಲಿ ಪರಿಶೀಲನೆ ನಡೆಸಿ ರೋಗಿಗಳ ಯೋಗಕ್ಷೇಮ ವಿಚಾರಿಸಿದರು. ವಸತಿ ಸೌಲಭ್ಯ ಹೇಗಿದೆ? ಯಾವೆಲ್ಲ ಅವಕಾಶಗಳನ್ನು ಬಳಸಿಕೊಳ್ಳುತ್ತಿದ್ದೀರಿ? ಎಷ್ಟು ರೋಗಿಗಳು ಇಲ್ಲಿ ದಾಖಲಾಗುತ್ತಿವೆ ಎಂದು ಕಿದ್ವಾಯಿ ಆಸ್ಪತ್ರೆಯ ಆಡಳಿತಾಧಿಕಾರಿ ಮಂಜುಶ್ರೀ ಹಾಗೂ ನಿರ್ದೇಶಕರಾದ ಡಾ. ಲೋಕೇಶ್ ಅವರನ್ನು ಪ್ರಶ್ನೆ ಮಾಡಿದರು. ರೋಗಿಗಳಿಗೆ ಚಿಕಿತ್ಸೆ ಕೊಡಲು ಎಷ್ಟು ದಿನ ಬೇಕು? ಕ್ಯಾನ್ಸರ್ ಪತ್ತೆಗೆ ಎಷ್ಟು ದಿನ ತೆಗೆದುಕೊಳ್ಳುತ್ತದೆ? ಚಿಕಿತ್ಸೆ, ಅಂತಿಮ ಚಿಕಿತ್ಸೆ ನೀಡಲು ಎಷ್ಟು ದಿನ ತೆಗೆದುಕೊಳ್ಳುತ್ತೀದ್ದೀರಿ? ಕ್ಯಾನ್ಸರ್ ಪತ್ತೆ ಬಳಿಕಯಾದ ಬಳಿಕ ರೋಗಿಯನ್ನು ಎಷ್ಟು ದಿನದ ನಂತರ ದಾಖಲು ಮಾಡಿಕೊಳ್ಳುತ್ತಿದ್ದೀರಿ? ಯಾವ ಸಮಯದಲ್ಲಿ ಗರಿಷ್ಠ ರೋಗಿಗಳು ಆಸ್ಪತ್ರೆಗೆ ಬರುತ್ತಾರೆ ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದರು.…
ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣವರದಲ್ಲಿರುವ ಕೇಂದ್ರ ಮತ್ತು ರಾಜ್ಯ ಪುರಸ್ಕೃತ ಮಹಿಳೆಯರ ಮತ್ತು ಮಕ್ಕಳ ಪೌಷ್ಟಿಕ ಆಹಾರ ತಯಾರಿಕೆ ಮತ್ತು ತರಬೇತಿ ಕೇಂದ್ರ (ಎಂಎಸ್ ಪಿಸಿ) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ದಿಢೀರ್ ಭೇಟಿ ನೀಡಿ, ಅಂಗನವಾಡಿ ಕೇಂದ್ರಗಳಿಗೆ ಸರಬರಾಜಾಗುವ ಆಹಾರ ಗುಣಮಟ್ಟವನ್ನು ಪರಿಶೀಲಿಸಿದರು. ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ನೀಡಲಾಗುವ ಆಹಾರ ಪದಾರ್ಥಗಳ ತಯಾರಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಯಾವುದೇ ಲೋಪದೋಷ ಆಗದಂತೆ, ಎಚ್ಚರ ವಹಿಸಿ ಆಹಾರ ಪದಾರ್ಥಗಳನ್ನು ಪೂರೈಸಲು ಸೂಚನೆ ನೀಡಿದರು. ಜೊತೆಗೆ ಪ್ರತಿಯೊಂದು ಆಹಾರ ಪದಾರ್ಥಗಳನ್ನು ಪರಿಶೀಲಿಸಿ, ಮಾಹಿತಿ ನೀಡಿದರು. ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ಹಿರಿಯ ನಾಗರೀಕರ, ವಿಶೇಷ ಚೇತನರ ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ್, ವಿಶೇಷಾಧಿಕಾರಿ ಎನ್. ಎಚ್. ನಿಶ್ಚಲ್, ಬೆಂಗಳೂರು ನಗರ ಜಿಲ್ಲೆಯ ಉಪ ನಿರ್ದೇಶಕ ಸಿದ್ದ ರಾಮಪ್ಪ ಉಪಸ್ಥಿತರಿದ್ದರು. https://kannadanewsnow.com/kannada/state-government-launches-project-chandana-scheme-for-sickle-cell-anaemia-patients/ https://kannadanewsnow.com/kannada/will-farmers-get-relief-if-electricity-poles-and-transformers-are-installed-in-their-fields-heres-the-real-truth/
ಮೈಸೂರು: ಸಿಕಲ್ ಸಿಲ್ ಅನೀಮಿಯಾ ಹರಡದಂತೆ ತಡಗಟ್ಟುವ ನಿಟ್ಟಿನಲ್ಲಿ ‘ಪ್ರಾಜೆಕ್ಟ್ ಚಂದನ’ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮೈಸೂರಿನಲ್ಲಿ ಇಂದು ಚಾಲನೆ ನೀಡಿದರು. ಈ ಬಳಿಕ ಮಾತನಾಡಿದ ಸಚಿವರು, ಈಗಾಗಲೇ ಆರೋಗ್ಯ ಇಲಾಖೆ ಸಿಕಲ್ ಸೆಲ್ ಗೆ ತುತ್ತಾಗಿರುವವರಿಗೆ ಉಚಿತ ಚಿಕಿತ್ಸೆ, ಉತ್ತಮ ಆರೈಕೆ ಒದಗಿಸಲಾಗುತ್ತಿದ್ದು, ರೋಗ ಹರಡದಂತೆ ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ. ಇದೀಗ ‘ಪ್ರಾಜೆಕ್ಟ್ ಚಂದನ’ದ’ ಮೂಲಕ ಮುಂದಿನ ಎರಡು ವರ್ಷಗಳಲ್ಲಿ ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ 256000 ಲಕ್ಷ ಬಡಕಟ್ಟು ಜನರ ತಪಾಸಣೆ ನಡೆಸುವುದರ ಜೊತೆಗೆ ಅಗತ್ಯ ಚಿಕಿತ್ಸೆ ಕಲ್ಪಿಸಲಾಗುವುದು ಎಂದರು. ಈ ರೋಗದ ವಿರುದ್ಧ ಹೋರಾಡಲು ಅನೇಕ ಎನ್ಜಿಒಗಳು ಸಕ್ರಿಯವಾಗಿ ತೊಡಗಿಸಿಕೊಂಡಿವೆ. ವಿಶೇಷವಾಗಿ ಭಾರತೀಯ ವಿಜ್ಞಾನ ಸಂಸ್ಥೆಯು 2 ವರ್ಷಗಳ ಅವಧಿಗೆ ಸಂಪೂರ್ಣ ತಪಾಸಣೆ, ತರಬೇತಿ, ಜಾಗೃತಿ, ಮಾದರಿ ಸಾರಿಗೆ ಮತ್ತು ಸಂಪರ್ಕ ಸೇವೆಗಳಿಗಾಗಿ ಮೈಸೂರು, ಚಾಮರಾಜನಗರ ಮತ್ತು ಕೊಡಗಿನ 3 ಜಿಲ್ಲೆಗಳನ್ನು ದತ್ತು ತೆಗೆದುಕೊಳ್ಳುವ ಪ್ರಸ್ತಾವನೆಯೊಂದಿಗೆ GoK ಅನ್ನು ಸಂಪರ್ಕಿಸಿದೆ. IISc ಪ್ರೊಫೆಸರ್ ಸಾಯಿ ಅವರು ಸಂಶೋಧಿಸಿರುವ…