Author: kannadanewsnow09

ನವದೆಹಲಿ: ನೀಟ್-ಯುಜಿ 2024 ಪರೀಕ್ಷೆಯ ( NEET-UG 2024 Exam ) ಜುಲೈ 6 ರಿಂದ ಪ್ರಾರಂಭವಾಗಲಿರುವ ಕೌನ್ಸೆಲಿಂಗ್ ದಿನಾಂಕವನ್ನು ಮುಂದೂಡಲು ಸುಪ್ರೀಂ ಕೋರ್ಟ್ ಶುಕ್ರವಾರ ತನ್ನ ಆದೇಶದಲ್ಲಿ ನಿರಾಕರಿಸಿದೆ. ಮೇ 5 ರಂದು ಪರೀಕ್ಷೆಯನ್ನು ನಡೆಸುವಲ್ಲಿನ ಅಕ್ರಮಗಳ ಬಗ್ಗೆ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯ ನಂತರ ಸುಪ್ರೀಂ ಕೋರ್ಟ್ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency -NTA), ಕೇಂದ್ರ ಮತ್ತು ಇತರರಿಗೆ ನೋಟಿಸ್ ಜಾರಿಗೊಳಿಸಿದೆ ಮತ್ತು ಆಯಾ ಉತ್ತರಗಳನ್ನು ಕೋರಿದೆ. ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ನ್ಯಾಯಮೂರ್ತಿ ಎಸ್ವಿಎನ್ ಭಟ್ಟಿ ನೇತೃತ್ವದ ಸುಪ್ರೀಂ ಕೋರ್ಟ್ನ ಇಬ್ಬರು ನ್ಯಾಯಾಧೀಶರ ರಜಾಕಾಲದ ಪೀಠವು ನೀಟ್ ಯುಜಿ ಪರೀಕ್ಷೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಮೂರು ಅರ್ಜಿಗಳನ್ನು ಶುಕ್ರವಾರ ವಿಚಾರಣೆ ನಡೆಸಿತು. ಪ್ರಶ್ನೆ ಪತ್ರಿಕೆ ಸೋರಿಕೆ, ನೀಟ್-ಯುಜಿ 2024 ಪರೀಕ್ಷೆ ರದ್ದತಿ ಮತ್ತು ಕೌನ್ಸೆಲಿಂಗ್ ಮತ್ತು ಇದೇ ರೀತಿಯ ಇತರ ಪ್ರಾರ್ಥನೆಗಳ ಬಗ್ಗೆ ಸಿಬಿಐ (ಸಿಬಿಐ) ತನಿಖೆ ನಡೆಸಬೇಕೆಂದು ಕೋರಿ ಹಿತೇನ್ ಸಿಂಗ್…

Read More

ಹಾಸನ: ಮಾಜಿ ಸಚಿವ ಹೆಚ್.ಡಿ ರೇವಣ್ಣ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೇಸ್ ಬೆನ್ನಲ್ಲೇ, ಈಗ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಕುಟುಂಬಕ್ಕೆ ಮತ್ತೊಂದು ಶಾಕ್ ನೀಡಲಾಗಿದೆ. ಅದೇ ವಿಧಾನ ಪರಿಷತ್ ಸದಸ್ಯ ಡಾ.ಸೂರತ್ ರೇವಣ್ಣ ವಿರುದ್ಧ ಜೆಡಿಎಸ್ ಕಾರ್ಯಕರ್ತನೊಬ್ಬ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ. ಈ ಕುರಿತಂತೆ ಸಂತ್ರಸ್ತರೊಬ್ಬರು ಸಿಎಂ ಸಿದ್ಧರಾಮಯ್ಯ, ಗೃಹ ಸಚಿವ ಡಾ.ಜಿ ಪರಮೇಶ್ವರ್, ಡಿಜಿ ಮತ್ತು ಐಜಿಪಿ ಹಾಗೂ ಹಾಸನ ಎಸ್ಪಿಗೆ ದೂರು ನೀಡಿದ್ದಾರೆ. ಅದರಲ್ಲಿ ಜೂನ್.16ರಂದು ಸೂರಜ್ ರೇವಣ್ಣ ಅವರು ತಮ್ಮ ಪಕ್ಷದ ಕಾರ್ಯಕರ್ತನನ್ನು ಸಹಾಯ ಮಾಡುವುದಾಗಿ ಚನ್ನಪಟ್ಟಣ ತಾಲೂಕಿನ ಗನ್ನಿಕಡದ ತೋಟದ ಮನೆಗೆ ಕರೆಯಿಸಿಕೊಂಡು, ಬಲವಂತವಾಗಿ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬುದಾಗಿ ಹೇಳಿದ್ದಾರೆ. ಜೆಡಿಎಸ್ ಕಾರ್ಯಕರ್ತರೊಬ್ಬರು ಸಲ್ಲಿಸಿದಂತ ದೂರಿನ ಹಿನ್ನಲೆಯಲ್ಲಿ ಎಂಎಲ್ಸಿ ಸೂರಜ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದೆ ಎನ್ನಲಾಗುತ್ತಿದೆ. ಹೀಗಾಗಿ ಹೆಚ್.ಡಿ ರೇವಣ್ಣ, ಪ್ರಜ್ವಲ್ ರೇವಣ್ಣ ನಂತ್ರ ಈಗ ಸೂರಜ್ ರೇವಣ್ಣ ಅವರಿಗೆ ಸಂಕಷ್ಟ ಎದುರಾಗಿದೆ. https://kannadanewsnow.com/kannada/98-indians-not-68-died-during-haj-pilgrimage-mea/…

Read More

ಬೆಂಗಳೂರು : “ಮುಂದಿನ ಒಂದು ವಾರದೊಳಗೆ ಜಾಹೀರಾತು ನೀತಿಯ ಕರಡು ಪ್ರತಿಯನ್ನು ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಬಿಬಿಎಂಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆ ಬಳಿಕ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು “ಕರಡು ಪ್ರತಿಯ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗುವುದು. ಅನೇಕ ವರ್ಷಗಳಿಂದ ನ್ಯಾಯಾಲಯದಲ್ಲಿ ಪ್ರಕರಣಗಳು ಇದ್ದ ಕಾರಣಕ್ಕೆ ಕಳೆದ ಒಂದು ವರ್ಷದಿಂದ ಜಾಹೀರಾತು ನೀತಿ ಬಾಕಿ ಉಳಿದಿತ್ತು. ಪ್ರಸ್ತುತ ಸಂಘ, ಸಂಸ್ಥೆಗಳ ಜೊತೆ ಚರ್ಚೆ ನಡೆಸಲಾಗಿದೆ ಎಂದರು. 60 ಅಡಿಗಿಂತ ಹೆಚ್ಚು ಅಗಲ ಇರುವ ರಸ್ತೆಗಳಲ್ಲಿ ‘ಗ್ರೂಪ್ ಪ್ಯಾಕೇಜ್’ ತಯಾರಿಸಿ ಅವಕಾಶ ನೀಡಲಾಗುವುದು. ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳ ಮೇಲೆ ಜಾಹಿರಾತು ನೀಡಲು ಅವಕಾಶ ನೀಡಲಾಗುವುದು. ಬಿಬಿಎಂಪಿಗೆ ತೆರಿಗೆ ನೀಡಿ ಖಾಸಗಿ ಕಟ್ಟಡಗಳು ಬಾಡಿಗೆ ನೀಡಬಹುದು. ಕಟ್ಟಡಗಳ ವಿಸ್ತೀರ್ಣ, ಎತ್ತರಕ್ಕೆ ತಕ್ಕಂತೆ ಯೂನಿಫಾರ್ಮಿಟಿ ತರಲಾಗುವುದು. ಮನಬಂದಂತೆ ಹಾಕಲು ಅವಕಾಶವಿಲ್ಲ. ಫಲಕಗಳನ್ನು ಮಾಡಲು ಯಾವ ಗುಣಮಟ್ಟದ ವಸ್ತು ಬಳಸಬೇಕು ಎಂದು…

Read More

ಬೆಂಗಳೂರು: ಇಂಟರ್‌ನ್ಯಾಷನಲ್‌ ಬ್ಯಾಟರಿ ಕಂಪನಿ ಇಂಡಿಯಾ, ರಿವರ್‌ ಮೊಬಿಲಿಟಿ, ವೆಗಾ ಆಟೊ ಆ್ಯಕ್ಸೆಸರೀಸ್‌, ಮಿರ್ರಾ ಆ್ಯಂಡ್‌ ಮಿರ್ರಾ ಇಂಡಸ್ಟ್ರೀಸ್‌, ಸೇರಿದಂತೆ ಒಟ್ಟಾರೆ 64 ಯೋಜನೆಗಳ ₹3,587 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ ಶುಕ್ರವಾರ ನಡೆದ 146 ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಅನುಮೋದನೆ ಪಡೆದ ಯೋಜನೆಗಳಲ್ಲಿ ವಿದ್ಯುತ್‌ಚಾಲಿತ ದ್ವಿಚಕ್ರ ವಾಹನ ತಯಾರಿಕಾ ಘಟಕ, ಸಂಶೋಧನೆ ಹಾಗೂ ಅಭಿವೃದ್ಧಿ ಕೇಂದ್ರ, ವಿದ್ಯುತ್‌ ಉತ್ಪಾದನಾ ಕೇಂದ್ರ ಹಾಗೂ ಹಾಲು ಉತ್ಪಾದನಾ ಘಟಕಗಳು ಸೇರಿವೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೀಡಿರುವ ಅನುಮೋದನೆಗಳಿಂದ ರಾಜ್ಯದಲ್ಲಿ 13,896 ಜನರಿಗೆ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ. ಸಭೆಯಲ್ಲಿ ಕೈಗೊಂಡ ನಿರ್ಧಾರಗಳಿಂದ ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಬೆಳಗಾವಿ, ತುಮಕೂರು, ಯಾದಗಿರಿ, ಹಾವೇರಿ, ಗದಗ, ಮೈಸೂರು ಜಿಲ್ಲೆಗಳಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಇನ್ನಷ್ಟು ಉತ್ತೇಜನ ದೊರೆಯಲಿರುವುದರ ಜೊತೆಗೆ ಹೊಸ…

Read More

ಹುಣ್ಣಿಮೆ ವಿಶೇಷ ಮತ್ತು ಶುಕ್ರವಾರದ ಹುಣ್ಣಿಮೆ ತುಂಬಾ ವಿಶೇಷವಾಗಿದೆ. ಸಕಲ ದೇವತೆಗಳ ಕೃಪೆಗೆ ಪಾತ್ರರಾಗಲು ಹುಣ್ಣಿಮೆಯಂದು ದೇವತಾರಾಧನೆ ಬಹಳ ಮುಖ್ಯ. ದೇವಸ್ಥಾನಕ್ಕೆ ಹೋಗಿ ಮನೆಯಲ್ಲಿ ಪೂಜೆ ಮಾಡಲು ಸಾಧ್ಯವಾಗದವರು ದೀಪವನ್ನು ಹಚ್ಚಿ ಮಹಾಲಕ್ಷ್ಮಿಯ ಹಾಡುಗಳು ಮತ್ತು ಮಂತ್ರಗಳನ್ನು ಪಠಿಸಿ ಉತ್ತಮ ಫಲಿತಾಂಶವನ್ನು ಪಡೆಯುತ್ತಾರೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ…

Read More

ಬೆಂಗಳೂರು: ರಾಜ್ಯದ ದಲಿತ ಉದ್ಯಮಿಗಳು ಎದುರಿಸುತ್ತಿರುವ ನಾನಾ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು ಎಂದು ಭಾರೀ ಮತ್ತು ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದರು. ಖನಿಜ ಭವನದಲ್ಲಿ ಶುಕ್ರವಾರ ನಡೆದ ರಾಜ್ಯಸಭೆ ಮಾಜಿ ಸದಸ್ಯ ಎಲ್.ಹನುಮಂತಯ್ಯ ಅಧ್ಯಕ್ಷತೆಯ ಕರ್ನಾಟಕ ದಲಿತ ಉದ್ದಿಮೆದಾರರ ಸಂಘದ ಸದಸ್ಯರ ಜತೆ ನಡೆದ ಸಭೆಯಲ್ಲಿ ಸಚಿವರು ಈ ಘೋಷಣೆ ಮಾಡಿದರು. ದಲಿತ ಉದ್ದಿಮೆದಾರರು ಎದುರಿಸುತ್ತಿರುವ ನಾನಾ ಸಮಸ್ಯೆಗಳನ್ನು ಆಲಿಸುವುದು ಮತ್ತು ಅದಕ್ಕೆ ಪರಿಹಾರ ಕಂಡುಹಿಡಿಯುವ ಕೆಲಸವನ್ನು ಈ ಸಮಿತಿ ಮಾಡಲಿದೆ ಎಂದು ಅವರು ಹೇಳಿದರು. ನಿಯಮಗಳ ಪ್ರಕಾರ ರಾಜ್ಯದ ಕೈಗಾರಿಕಾ ಪ್ರದೇಶಗಳಲ್ಲಿ ದಲಿತ ಉದ್ದಿಮೆದಾರರಿಗೆ ಶೇಕಡ 24.10ರಷ್ಟು ಕೈಗಾರಿಕಾ ನಿವೇಶನ ಗಳನ್ನು ಹಂಚಲು ಸರಕಾರ ಬದ್ಧವಾಗಿದೆ. ಇದರಂತೆ, ವಿವಿಧ ಕೈಗಾರಿಕಾ ಪ್ರದೇಶಗಳಲ್ಲಿ ಇನ್ನೂ 391 ಎಕರೆಯಷ್ಟು ಜಾಗವನ್ನು ಪರಿಶಿಷ್ಟರಿಗೆ ಹಂಚುವುದು ಬಾಕಿ ಇದನ್ನು ಆದಷ್ಟು ಬೇಗ ಹಂಚಿಕೆ ಮಾಡಲಾಗುವುದು ಎಂದು ಅವರು ಹೇಳಿದರು.…

Read More

ಬೆಂಗಳೂರು: 2023-243 ಸಾಲಿಗೆ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು KPSC ಹೊರಡಿಸಿರುವ ಅಧಿಸೂಚನೆಯಲ್ಲಿ 2017-183e ಸಾಲಿನ ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್) ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಸೀಮಿತಗೊಳಿಸಿ (One time measure) ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡುವ ಕುರಿತು ಆದೇಶವನ್ನು ಹೊರಡಿಸಿದೆ. ಆದೇಶಲ್ಲಿ ಲವು ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆ ಆಕಾಂಕ್ಷಿಗಳು ಸರ್ಕಾರಕ್ಕೆ ಮನವಿಗಳನ್ನು ಸಲ್ಲಿಸಿ, ರಾಜ್ಯ ಸರ್ಕಾರವು 2023-24ನೇ ಸಾಲಿಗೆ ಈಗಾಗಲೇ ಮೇಲೆ ಓದಲಾದ ಆದೇಶದಲ್ಲಿ ಕೆಎಎಸ್ ಪರೀಕ್ಷೆ ಬರೆಯಲು ಒಂದು ಬಾರಿ ಎಂಬಂತೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ನೀಡಿದ್ದು, ಇದರಿಂದ ಕೆಲವು ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ದೊರೆಯಲಿದ್ದು ಉಳಿದ ಅಭ್ಯರ್ಥಿಗಳು ಅವಕಾಶ ವಂಚಿತರಾಗುತ್ತಿರುವ ಹಿನ್ನಲೆಯಲ್ಲಿ, 2017-18 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ 2023-24 ನೇ ಸಾಲಿನ ಅಧಿಸೂಚನೆಯಲ್ಲಿ ಪರೀಕ್ಷೆ ಬರೆಯಲು ವಯಸ್ಸಿನ ನಿರ್ಬಂಧವಿಲ್ಲದ ಹೆಚ್ಚುವರಿ ವಿಶೇಷ ಅವಕಾಶ ನೀಡುವಂತೆ ಕೋರಿರುತ್ತಾರೆ.…

Read More

ಬೆಂಗಳೂರು: “ಸುಗಮ ಸಂಚಾರ ಹಾಗೂ ಸಂಚಾರಿ ದಟ್ಟಣೆ ನಿಯಂತ್ರಣಕ್ಕೆ ಗಾಂಧಿನಗರದ 1 ಕಿ.ಮೀ ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬ್ರಾಂಡ್ ಬೆಂಗಳೂರು ಪರಿಕಲ್ಪನೆಯಡಿಯಲ್ಲಿ ಫ್ರೀಡಂ ಪಾರ್ಕ್ ಸಮೀಪ ಬಹುಮಹಡಿ ವಾಹನ ನಿಲುಗಡೆ ಸಂಕೀರ್ಣದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಶುಕ್ರವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು; “ಬೆಂಗಳೂರು ಡಿಸಿ ಹಾಗೂ ಪೊಲೀಸ್ ಆಯುಕ್ತರು ಸೇರಿ ಗಾಂಧಿನಗರದ ಪ್ರಮುಖ ರಸ್ತೆಗಳಲ್ಲಿ ಸುಮಾರು 1 ಕಿ.ಮೀ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ನಿರ್ಬಂಧ ಮಾಡಿದ್ದಾರೆ. ಇಲ್ಲಿನ ರಸ್ತೆ ವಿಶಾಲವಾಗಿರಬೇಕು. ಎಲ್ಲಾ ವ್ಯಾಪಾರಿಗಳಿಗೆ ಲಾಭವಾಗಬೇಕು ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಹುಮಹಡಿ ವಾಹನ ನಿಲುಗಡೆ ಸಂಕೀರ್ಣದ ಮೂಲಕ ಬೆಂಗಳೂರು ನಗರ ಇಂದು ಹೊಸ ಇತಿಹಾಸ ಪುಟಕ್ಕೆ ಸೇರಿದೆ. ಅಲ್ಲದೆ ಇಡೀ ರಾಜ್ಯಕ್ಕೆ ಸಂದೇಶ ರವಾನೆಯಾಗಿದೆ. ಇಲ್ಲಿ ಪ್ರತಿ ಗಂಟೆಗೆ ವಾಹನ ನಿಲುಗಡೆಗೆ 20-30 ರೂ. ನಿಗದಿ ಮಾಡಿದ್ದು, ಎರಡು ಮೂರು ಕಾರು ಹೊಂದಿರುವವರು ಕೂಡ ಇಲ್ಲಿ ವಾಹನ ನಿಲುಗಡೆ…

Read More

ಶಿವಮೊಗ್ಗ: ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವಂತ ರೈತರಿಗೆ ಸರ್ಕಾರದಿಂದ ಸಾಗುವಳಿ ಪತ್ರವನ್ನು ನೀಡೋ ಕೆಲಸ ಮಾಡುತ್ತಿದೆ. ಇದರ ಜೊತೆ ಜೊತೆಗೆ ಇದೇ ಭೂಮಿಯ ಅರ್ಧ ಎಕರೆಯಲ್ಲಿ ಕಾಡು ಬೆಳೆಸೋದಕ್ಕೆ ಮೀಸಲಿಡುವಂತ ನಿಯಮವನ್ನು ಜಾರಿಗೊಳಿಸಬೇಕು ಅಂತ ಶಾಸಕ ಬೇಳೂರು ಗೋಪಾಲಕೃಷ್ಣ ಅಭಿಪ್ರಾಯ ಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬಾಳೆಹಳ್ಳಿಯಲ್ಲಿ ಸಾಗರ ಅರಣ್ಯಾಧಿಕಾರಿಗಳ ಸಹಕಾರದಿಂದ ವನ ಮಹೋತ್ಸವದಲ್ಲಿ ಗಿಡ ನೆಟ್ಟ ಬಳಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ನನಗೆ ಬಹಳ ಖುಷಿ ಆಯ್ತು ಇವತ್ತಿನ ಕಾರ್ಯಕ್ರಮ. ಮಲೆನಾಡು ಅಂದರೆ ನಮಗೆ ಜೀವ ರಕ್ಷಣೆ ಇರೋದೆ ಕಾಡಿನಲ್ಲಿ. ಕಳೆದ ವರ್ಷ ಮಳೆಯ ಅಭಾವ ಎಷ್ಟು ಆಗಿತ್ತು ಅಂತ ಗೊತ್ತಿದೆ ಎಂದರು. ಕಾಡು ಸಂರಕ್ಷಣೆ ಮಾಡುವ ಕೆಲಸ ಮಾಡಬೇಕು. ನಾವು ಜಾಗೃತರಾಗಬೇಕು. ಆ ಕೆಲಸ ಮಾಡಲಿಲ್ಲ ಅಂದರೆ ತಾಪಮಾನದಲ್ಲಿ ವ್ಯತ್ಯಾಸ ಆಗಲಿದೆ ಎಂದರು. ಒಂದು ಗಿಡ ಕಡಿದರೆ ಮತ್ತೊಂದು ಗಿಡ ನೆಡಬೇಕು. ಆ ಕೆಲಸವನ್ನು ವಿದ್ಯಾರ್ಥಿಗಳು ಮಾಡಬೇಕು. ಕಾಡು ಪ್ರಾಣಿಗಳು ನಾಡಿಗೆ ಬರುತ್ತಿವೆ. ಅದಕ್ಕೆ ಕಾಡು…

Read More

ಬೆಂಗಳೂರು : ಸರ್ಕಾರಿ ಉದ್ಯೋಗಕ್ಕೆ ಸೇರುವ ಅಧಿಕಾರಿಗಳು ತಮ್ಮ ಕುಟುಂಬಕ್ಕೆ ಒಳ್ಳೆಯ ಹೆಸರನ್ನು ತರುವದರೊಂದಿಗೆ ಯಾವುದೇ ಹಗರಣಗಳನ್ನು ಮಾಡದೆ ಸರ್ಕಾರಕ್ಕೆ ಹಾಗೂ ಸಮಾಜಕ್ಕೆ ಉತ್ತಮ ಸೇವೆಯನ್ನು ಸಲ್ಲಿಸುವಂತಾಗಬೇಕು ಎಂದು ಗ್ರಾಮೀಣಾಭಿವೃದ್ಧಿಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ಒಂದೇ ಬಾರಿಗೆ ಲೋಕಸೇವಾ ಆಯೋಗದ ಮೂಲಕ ನೇಮಕಗೊಂಡ 347 ಎಂಜನಿಯರುಗಳಿಗೆ ಇಂದು ಬೆಂಗಳೂರಿನ ಅಂಬೇಡ್ಕರ್‌ ಭವನದಲ್ಲಿ ನಡೆದ ಸಮಾರಂಭದಲ್ಲಿ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಿದ ಸಚಿವರು ಸೇವಾ ಮನೋಭಾವದಿಂದ ಉದ್ಯೋಗ ಮಾಡುವವರು ರಾಜಕೀಯದಿಂದ ದೂರ ಇರಬೇಕಾದುದು ಅತಿ ಮುಖ್ಯ ಎಂದು ಹೇಳಿದರಲ್ಲದೆ, ಇಷ್ಟೂ ಅಭ್ಯರ್ಥಿಗಳನ್ನು ಕೌನ್ಸೆಲಿಂಗ್‌ ಮೂಲಕ ಅನುಕೂಲವಾಗುವಂತಹ ಸ್ಥಳಗಳಿಗೆ ನೇಮಕ ಮಾಡಲಾಗಿದೆ ಎಂದು ತಿಳಿಸಿದರು. ʼಉದ್ಯೋಗ ಕೇಳ್ತಾರ, ಉದ್ಯೋಗ ಕೊಟ್ಟರೆ ಮನೆ ಬಗಲಿಗೆ ಬೇಕು ಅಂತಾರ, ಅದೂ ಮಾಡಿದ್ರೆ ಪಗಾರ ಸಾಲದು ಅಂತಾರʼ ಎಂದು ಸಚಿವರು ಹಾಸ್ಯ ಚಟಾಕಿ ಹಾರಿಸಿದರು. ಸಚಿವರ ಬದ್ಧತೆಯಿಂದ ತ್ವರಿತ ಗತಿಯಲ್ಲಿ ನೇಮಕ…

Read More